Tag: ಕೋಲಾರ

  • Kolar| ಹಾಸ್ಟೆಲ್‌ನಲ್ಲಿ ದೆವ್ವ ಇದೆ ಎಂದು ಹೆದರಿಸುತ್ತಿದ್ದ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ವಾರ್ಡನ್

    Kolar| ಹಾಸ್ಟೆಲ್‌ನಲ್ಲಿ ದೆವ್ವ ಇದೆ ಎಂದು ಹೆದರಿಸುತ್ತಿದ್ದ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ವಾರ್ಡನ್

    ಕೋಲಾರ: ಸ್ನೇಹಿತರೊಂದಿಗೆ ತುಂಟಾಟ ಮಾಡುತ್ತಾ ವಿದ್ಯಾರ್ಥಿಯೊರ್ವ (Student) ವಸತಿ ಶಾಲೆಯಲ್ಲಿ ದೆವ್ವ ಇದೆ ಎಂದು ಹೆದರಿಸಿದ ಎಂಬ ಕಾರಣಕ್ಕೆ ವಾರ್ಡನ್ (Warden) ಮನಬಂದಂತೆ ಹೊಡೆದು ಗಾಯಗೊಳಿಸಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಮುಳಬಾಗಿಲು (Mulabagilu) ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಾರ್ಡನ್ ವಿದ್ಯಾರ್ಥಿಗಳಿಗೆ ಬಾಸುಂಡೆ ಬರುವಂತೆ ಹೊಡದಿದ್ದಾರೆ. ಈ ಹಿಂದೆ ಮುರಡೇಶ್ವರಕ್ಕೆ ಪ್ರವಾಸ ಹೋಗಿ 5 ಜನ ವಿದ್ಯಾರ್ಥಿಗಳು ಮೃತಪಟ್ಟು ಸುದ್ದಿಯಾಗಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ನಿಲಯ ಈಗ ವಾರ್ಡನ್ ತಮ್ಮ ಸೊಂಟದ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಹೊಡೆದು ಗಾಯಗೊಳಿಸಿದ್ದಾರೆ. ಇದನ್ನೂ ಓದಿ: ಏಕಕಾಲದಲ್ಲಿ 2 ಹೆಣ್ಣು, 1 ಗಂಡು ಸೇರಿ ತ್ರಿವಳಿ ಮಕ್ಕಳಿಗೆ ಜನ್ಮವಿತ್ತ ತಾಯಿ

    ಸೋಮವಾರ ಶಾಲೆಯಲ್ಲಿ ಪೋಷಕರ ಸಭೆ ಕರೆದಿದ್ದ ವೇಳೆ ನಾಲ್ಕು ಜನ ವಿದ್ಯಾರ್ಥಿಗಳಿಗೆ ಬಾಸುಂಡೆ ಬರುವಂತೆ ಹೊಡೆದಿರುವ ಘಟನೆ ಬೆಳಕಿಗೆ ಬಂದಿದೆ. ವಸತಿ ಶಾಲೆಯ ಎಸ್.ಅಂಜನ್ ಕುಮಾರ್ ಬಾಸುಂಡೆ ಬರುವಂತೆ ಏಟು ತಿಂದ ವಿದ್ಯಾರ್ಥಿಯಾಗಿದ್ದು, ಈತನ ಜೊತೆಗೆ ಇನ್ನೂ ಮೂರು ವಿದ್ಯಾರ್ಥಿಗಳಿಗೆ ಹೊಡೆದಿದ್ದಾರೆ ಎನ್ನಲಾಗಿದೆ. ಮುಳಬಾಗಿಲು ತಾಲೂಕಿನ ಅನಂತಪುರ ಗ್ರಾಮದ 6ನೇ ತರಗತಿ ವಿದ್ಯಾರ್ಥಿ ಅಂಜನ್ ಕುಮಾರ್‌ನನ್ನು ವಸತಿ ಶಾಲೆಯ ವಾರ್ಡನ್ ಮಹೇಶ್ ಬಾಸುಂಡೆ ಬರುವಂತೆ ಬಾರಿಸಿ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಇ-ಖಾತೆದಾರರಿಗೆ ಬಿಗ್ ಶಾಕ್ – ಬಿಬಿಎಂಪಿಯಿಂದ ಶೋಕಾಸ್ ನೋಟಿಸ್ ಜಾರಿ

    ಇತ್ತೀಚೆಗಷ್ಟೆ ತಂದೆಯನ್ನ ಕಳೆದುಕೊಂಡಿರುವ ಅಂಜನ್‌ನನ್ನು ತಾಯಿ ಕಷ್ಟಪಟ್ಟು ವಿದ್ಯಾಭ್ಯಾಸ ಕೊಡಿಸುತ್ತಿದ್ದಾಳೆ. ವಸತಿ ನಿಲಯದಲ್ಲಿ ದೆವ್ವ ಇದೆ ಎಂದು ಸಹಪಾಠಿಗಳನ್ನು ಅಂಜನ್ ಹೆದರಿಸುತ್ತಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳು ಈ ವಿಷಯವನ್ನು ತನ್ನ ಗಮನಕ್ಕೆ ತಂದಿದ್ದರು, ಹಾಗಾಗಿ ಹೊಡೆದಿರುವುದಾಗಿ ವಾರ್ಡನ್ ಮಹೇಶ್ ಹಾಗೂ ಪ್ರಾಂಶುಪಾಲರು ಕುಮಾರ್ ರಾಜ್ ಸಮರ್ಥನೆ ನೀಡಿದ್ದಾರೆ. ಇದನ್ನೂ ಓದಿ: ಮಿಗ್-21 ಯುದ್ಧ ವಿಮಾನದ 62 ವರ್ಷಗಳ ಸೇವೆಗೆ ವಿದಾಯ – ಸೆ. 19ರಂದು ಬೀಳ್ಕೊಡುಗೆ ಸಮಾರಂಭ

    ಇನ್ನೂ ಬೆಲ್ಟ್ ಹಾಗೂ ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸಿರುವ ಹಿನ್ನೆಲೆ ವಿದ್ಯಾರ್ಥಿ ತೊಡೆ ಮೇಲೆ ರಕ್ತ ಹೆಪ್ಪುಗಟ್ಟಿದ ಗಾಯಗಳಾಗಿವೆ. ಶಾಲೆಯಲ್ಲಿ ಪೋಷಕರ ಸಭೆಗೆ ಬಂದಾಗ ತನ್ನ ಮಗನ ಮೇಲೆ ಹಲ್ಲೆ ನಡೆದಿರುವ ಸಂಗತಿ ಬೆಳಕಿಗೆ ಬಂದಿದೆ ಎಂದು ತಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಅಹಮದಾಬಾದ್ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ – ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ

  • Kolar | ಕಲಬೆರೆಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ – ಹಾಲಿನಲ್ಲಿ ಕೆಮಿಕಲ್ ಅಂಶ ಪತ್ತೆ

    Kolar | ಕಲಬೆರೆಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ – ಹಾಲಿನಲ್ಲಿ ಕೆಮಿಕಲ್ ಅಂಶ ಪತ್ತೆ

    – ಕೋಲಾರ ಎಸ್ಪಿ ನಿಖಿಲ್ ಸ್ಪಷ್ಟನೆ

    ಕೋಲಾರ: ಕೋಲಾರದ ಗಡಿಯಲ್ಲಿ ಕಲಬೆರೆಕೆ ಹಾಲು (Adulterated Milk) ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಹಾಲಿನಲ್ಲಿ ಕೆಮಿಕಲ್ (Chemical) ಅಂಶ ಇರುವುದು ಪತ್ತೆಯಾಗಿದೆ.

    ಕೋಲಾರದಲ್ಲಿ (Kolar) ಆಹಾರ ಇಲಾಖೆ ಹಾಗು ಪೊಲೀಸರು ಹಾಲಿಗೆ ಪೌಡರ್ ಮಿಶ್ರಣ ಮಾಡುತ್ತಿದ್ದ ಘಟಕದ ಮೇಲೆ ದಾಳಿ ಮಾಡಿದ್ದ ಪ್ರಕರಣದಲ್ಲಿ ಕೆಮಿಕಲ್ ಇರುವುದು ಲ್ಯಾಬ್ ವರದಿಯಲ್ಲಿ ಪತ್ತೆಯಾಗಿದೆ. ಕೆಮಿಕಲ್ ಮಿಶ್ರಿತ ಹಾಲಿನಲ್ಲಿ ಅಸುರಕ್ಷಿತ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಇರುವ ಅಂಶ ಪತ್ತೆಯಾಗಿದೆ. ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ಮಾಡಿದ್ದ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳ (Food Department Officers) ತಂಡ ಕೆಮಿಕಲ್ ಮಿಶ್ರಿತ ಹಾಲು ಸಂಗ್ರಹ ಮಾಡಿ ಲ್ಯಾಬ್‌ಗೆ ಕಳುಹಿಸಿತ್ತು. ಇದನ್ನೂ ಓದಿ: ಮನೆಯಲ್ಲಿ ಕೂತಿರೋರಿಗೆಲ್ಲ ವೆಲ್‌ಕಮ್‌ ಮಾಡೋಕಾಗಲ್ಲ – ಡಿಕೆಶಿ ಹೆಸರನ್ನೇ ಹೇಳದ ಸಿಎಂ

    ಸದ್ಯ ವರದಿ ಪೊಲೀಸರ ಕೈ ಸೇರಿದ್ದು, ವರದಿಯಲ್ಲಿ ಕೆಮಿಕಲ್ ಅಂದ್ರೆ ಜನರು ಉಪಯೋಗಿಸಲು ಅಸುರಕ್ಷಿತ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದೆ ಎಂದು ಕೋಲಾರ ಎಸ್ಪಿ ನಿಖಿಲ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳ ಮಾದರಿಯಂತೆ ಕೊಪ್ಪಳದ ಶಾಲೆಯೊಂದರಲ್ಲಿ ಲಾಸ್ಟ್ ಬೆಂಚ್‌ಗೆ ಕೊಕ್

    ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ಸವಟೂರು ಗ್ರಾಮದಲ್ಲಿ ನರೇಶ್ ರೆಡ್ಡಿ ಎಂಬವರಿಗೆ ಸೇರಿದ ಹಾಲಿನ ಘಟಕದ ಮೇಲೆ ಕಳೆದ ಜೂನ್ 1ರಂದು ಆಹಾರ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿದ್ದರು. ಈ ವೇಳೆ ಕೆಮಿಕಲ್ ಹಾಲು ತಯಾರಿಕೆಗೆ ಬಳಸುತ್ತಿದ್ದ ಕೆಮಿಕಲ್ ಸೇರಿದಂತೆ ಉಪಕರಣಗಳನ್ನ ವಶಕ್ಕೆ ಪಡೆದಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ಗಡಿ ಭಾಗದಲ್ಲಿ ತಿರುಮಲ ಹಾಲಿನ ಡೈರಿಗೆ ಹಾಲು ಸರಬರಾಜು ಮಾಡುತ್ತಿದ್ದ ನರೇಶ್ ರೆಡ್ಡಿ ಎಂಬವರಿಗೆ ಸೇರಿದ ಘಟಕದಲ್ಲಿ ಕೆಮಿಕಲ್ ಹಾಲು ತಯಾರಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿತ್ತು. ಅದರಂತೆ ಮುಳಬಾಗಿಲು ಡಿವೈಎಸ್ಪಿ ನಂದಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿತ್ತು. ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸ್‌ ಇಲಾಖೆ ಒಳಗಿನ ರಾಜಕೀಯ ಕಾರಣ.. ಕೊಹ್ಲಿ ಬಲಿಪಶು ಆಗಿದ್ದಾರೆ: ಮಾಜಿ DySP ಅನುಪಮಾ ಶೆಣೈ

    ಅಲ್ಲದೇ ಕೆಮಿಕಲ್ ಹಾಲಿನ ಮಾದರಿಯನ್ನ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಲ್ಯಾಬ್ ವರದಿಯಲ್ಲಿ ಕೆಮಿಕಲ್ ಹಾಲಿನ ಮಾದರಿಯಲ್ಲಿ ಅಸುರಕ್ಷಿತ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದೆ. ಇನ್ನೂ ನಂಗಲಿ ಪೊಲೀಸ್ ಠಾಣೆಯಲ್ಲಿ ಆಹಾರ ಸುರಕ್ಷಿತ ಕಾಯ್ದೆ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ನರೇಶ್ ರೆಡ್ಡಿ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಮಳೆ ಅವಾಂತರ – ಫ್ಲೈಓವರ್, ರಸ್ತೆಗಳು ಮುಳುಗಡೆ

  • ಕೋಲಾರ | KSRTC ನೌಕರ ಹೃದಯಾಘಾತದಿಂದ ಸಾವು

    ಕೋಲಾರ | KSRTC ನೌಕರ ಹೃದಯಾಘಾತದಿಂದ ಸಾವು

    ಕೋಲಾರ: ಕೆಎಸ್‌ಆರ್‌ಟಿಸಿ (KSRTC) ನೌಕರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಬಾಬಾಜಾನ್ (53) ಮೃತ ನೌಕರ. ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ ಕೆಲಸಕ್ಕೆ ಸೇರಿದ್ದ ಬಾಬಾಜಾನ್ ಅಪಘಾತದಲ್ಲಿ ಕಾಲಿಗೆ ಪೆಟ್ಟಾದ ಕಾರಣ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್

    ಭಾನುವಾರ ಕೂಡ ಕರ್ತವ್ಯ ನಿಭಾಯಿಸಿ ಮನೆಗೆ ತೆರಳಿದ್ದರು. ಸೋಮವಾರ ರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ (Heart Attack) ಬಾಬಾಜಾನ್ ಮೃತಪಟ್ಟಿದ್ದಾರೆ. ಕಾರ್ಮಿಕ ಕಲ್ಯಾಣಾಧಿಕಾರಿ ನಾಗರಾಜ್, ಘಟಕ ವ್ಯವಸ್ಥಾಪಕ ವೆಂಕಟೇಶ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಕಾರ್ಮಿಕ ಕಲ್ಯಾಣ ನಿಧಿಯನ್ನು ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕಿಂತ ಕಡಿಮೆ – ಆಂಧ್ರದಲ್ಲಿ ಮದ್ಯದ ದರ ಭಾರೀ ಇಳಿಕೆ

  • ಆಷಾಢದ 3ನೇ ಶುಕ್ರವಾರ – ಕೋಲಾರಮ್ಮನಿಗೆ 1001 ಹಲಸಿನ ಹಣ್ಣಿನ ಅಲಂಕಾರ!

    ಆಷಾಢದ 3ನೇ ಶುಕ್ರವಾರ – ಕೋಲಾರಮ್ಮನಿಗೆ 1001 ಹಲಸಿನ ಹಣ್ಣಿನ ಅಲಂಕಾರ!

    ಕೋಲಾರ: ಆಷಾಢದ 3ನೇ ಶುಕ್ರವಾರದ ಹಿನ್ನೆಲೆ, ಕೋಲಾರದ (Kolar) ಅಧಿದೇವತೆ ಕೋಲಾರಮ್ಮನಿಗೆ (Kolaramma) 1001 ಹಲಸಿನ ಹಣ್ಣಿನಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

    ದೇವಾಲಯ ಹಾಗೂ ಉತ್ಸವ ಮೂರ್ತಿಗೆ ಹಲಸಿನ ಹಣ್ಣಿನ ಅಲಂಕಾರ ಮಾಡಲಾಗಿತ್ತು. ಆಷಾಢದ 3ನೇ ಶುಕ್ರವಾರದ ಹಿನ್ನೆಲೆ ದೇವಿಯ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು. ಇದನ್ನೂ ಓದಿ: 3ನೇ ಆಷಾಢ ಸಂಭ್ರಮ; ಗಜ ಲಕ್ಷ್ಮಿ, ನಾಗಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡಿ ತಾಯಿ

    ಮೈಸೂರು ಭಾಗಕ್ಕೆ ಹೇಗೆ ತಾಯಿ ಚಾಮುಂಡಿ ಶ್ರೀರಕ್ಷೆ ಇದೆಯೋ ಅದೆ ರೀತಿ ಕೋಲಾರಕ್ಕೆ ಕಾವಲಾಗಿ ನಿಂತಿದ್ದಾಳೆ. ಕೋಲಾರಮ್ಮ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನೆಲೆಸಿರುವ ಚಾಮುಂಡೇಶ್ವರಿಯ ಸಹೋದರಿ ಎನ್ನಲಾಗುತ್ತದೆ. ಇಲ್ಲಿ ದೇವಿಯ ಸುಮಾರು 4 ಅಡಿ ಎತ್ತರದ ಶಿಲೆಯಲ್ಲಿ ಅರಳಿದ ಮೂರ್ತಿ ಇದೆ. ಕೈಯಲ್ಲಿ ತ್ರಿಶೂಲ, ವಿಗ್ರಹದ ಅಡಿಯಲ್ಲಿ ರಾಕ್ಷಸನನ್ನು ಸಂಹಾರ ಮಾಡುತ್ತಿರುವ ಭಂಗಿ ಭಕ್ತರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಇದನ್ನೂ ಓದಿ: 2ನೇ ಆಷಾಢ ಶುಕ್ರವಾರ – ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡಿ ತಾಯಿ

  • ಎನ್‌ಐಎ ನೊಟೀಸ್ ನೀಡಿರುವುದು ನಿಜ, ವಿಚಾರಣೆಗೆ ಹಾಜರಾಗುತ್ತೇವೆ: ಸತೀಶ್ ಗೌಡ ಪತ್ನಿ

    ಎನ್‌ಐಎ ನೊಟೀಸ್ ನೀಡಿರುವುದು ನಿಜ, ವಿಚಾರಣೆಗೆ ಹಾಜರಾಗುತ್ತೇವೆ: ಸತೀಶ್ ಗೌಡ ಪತ್ನಿ

    ಕೋಲಾರ: ಎನ್‌ಐಎ (NIA) ನೊಟೀಸ್ ನೀಡಿರುವುದು ನಿಜ. ವಿಚಾರಣೆಗೆ ಹಾಜರಾಗುತ್ತೇವೆ ಎಂದು ಸತೀಶ್ ಗೌಡ ಅವರ ಪತ್ನಿ ಹೇಮಲತಾ ತಿಳಿಸಿದ್ದಾರೆ.

    ಕೋಲಾರದಲ್ಲಿ (Kolar) ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು. ಎನ್‌ಐಎಯಿಂದ ನೊಟೀಸ್ ಬಂದಿರುವುದು ನಿಜ. ಮೂರು ವರ್ಷದ ಹಿಂದೆ ನನ್ನ ಪತಿ ಏರ್‌ಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆಗ ಸಿಮ್ ಕಾರ್ಡ್ ನೀಡಿರುವ ಕಾರಣ ವಿಚಾರಣೆಗೆ ಕರೆದಿದ್ದಾರೆ. ಈ ಹಿಂದೆ 2023ರಲ್ಲಿ ವಿಚಾರಣೆಗೆ ಕರೆದಿದ್ದರು. ಆಗ ಆಂಟಿಸಿಪೇಟರಿ ಬೇಲ್ ಪಡೆಯಲಾಗಿತ್ತು. ಈಗ ಮತ್ತೆ ವಿಚಾರಣೆಗೆ ಕರೆದಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ, ಡಿಸಿಎಂ ಹೆಸ್ರಲ್ಲಿ ಕೋಟಿ ಕೋಟಿ ವಂಚನೆ – 20ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಹಾಕಿದ್ದ ಮಹಿಳೆ ಅರೆಸ್ಟ್‌

    10.30ಕ್ಕೆ ಬೆಂಗಳೂರಿನ ಕಚೇರಿಗೆ ವಿಚಾರಣೆಗೆ ಕರೆದಿದ್ದಾರೆ. ನಾನು, ನನ್ನ ಪತಿ ವಿಚಾರಣೆಗೆ ತೆರಳುತ್ತೇವೆ. ಅವರು ಕಳೆದ ಮೂರು ವರ್ಷಗಳಿಂದ ಕೆಲಸ ಇಲ್ಲದೆ ಮನೆಯಲ್ಲೇ ಇದ್ದಾರೆ. ಮಂಗಳವಾರ ಎನ್‌ಐಎ ಅಧಿಕಾರಿಗಳು, ಪೊಲೀಸರು ಮನೆಗೆ ಬಂದು ನೊಟೀಸ್ ನೀಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಹಳಸಿದ ದಾಲ್ ಬಡಿಸಿದ್ದಕ್ಕೆ ಕ್ಯಾಂಟೀನ್ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಶಾಸಕ

    ಪೊಲೀಸರ ಭೇಟಿ ಹಿನ್ನೆಲೆ ಮಂಗಳವಾರದಿಂದ ನಾಪತ್ತೆಯಾಗಿರುವ ಸತೀಶ್ ಗೌಡ ಬದಲಿಗೆ ಪತ್ನಿಗೆ ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ಎನ್‌ಐಎ ಅಧಿಕಾರಿಗಳು ತೆರಳಿದ್ದಾರೆ. ಇದೀಗ ಸತೀಶ್ ಗೌಡ ಅವರ ಪತ್ನಿ ಹೇಮಾವತಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಇದನ್ನೂ ಓದಿ: ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

    ಸತೀಶ್ ಗೌಡ ಅವರು ಮೂಲತಃ ಕೋಲಾರ ತಾಲೂಕಿನ ವಾನರಾಶಿ ಮೂಲದವರು. ಕಳೆದ ಹಲವು ವರ್ಷಗಳಿಂದ ಅಂದರೆ ಮದುವೆಗೂ ಮುನ್ನ ಬೆಂಗಳೂರಿನಲ್ಲೇ ವಾಸವಿದ್ದರು. ಮದುವೆ ಬಳಿಕ ಅತ್ತೆ ಮನೆ ಭಟ್ರಹಳ್ಳಿಯಲ್ಲಿ ವಾಸವಿದ್ದಾರೆ.

  • ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

    ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

    – ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದಲ್ಲೂ ನಾಸೀರ್‌ ಕೈವಾಡ
    – ಶಂಕಿತರಿಗೆ ಸಿಮ್‌ ಕಾರ್ಡ್‌ ನೀಡಿದ್ದ ಆರೋಪ; ಏರ್‌ಟೆಲ್‌ ಮಾಜಿ ಉದ್ಯೋಗಿಗೆ ನೋಟಿಸ್‌

    ಬೆಂಗಳೂರು: ಜೈಲಿನಿಂದಲೇ ಕರ್ನಾಟಕ ಸೇರಿ ದೇಶದ ವಿವಿಧೆಡೆ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು (Bengaluru) ಮತ್ತು ಕೋಲಾರದ (Kolara) 5 ಕಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ (NIA) ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಿಎಆರ್‌ ಪೊಲೀಸ್‌ ಅಧಿಕಾರಿ ಸೇರಿ ಮೂವರು ಶಂಕಿತ ಉಗ್ರರರನ್ನ ಬಂಧಿಸಿದೆ.

    ಶಂಕಿತ ಉಗ್ರರನ್ನು ಇಂದು ಕೋರ್ಟ್‌ಗೆ ಹಾಜರುಪಡಿಸಿರುವ ಎನ್‌ಐಎ ಅಧಿಕಾರಿಗಳ ತಂಡ, 14 ದಿನಗಳ ಕಾಲ ಕಸ್ಟಡಿಗೆ ಪಡೆಯಲು ಮುಂದಾಗಿದೆ. ಈ ಮಧ್ಯೆ ಉಗ್ರ ಟಿ.ನಾಸೀರ್ ಕುರಿತು ಹಲವು ಸ್ಫೋಟಕ ವಿಚಾರಗಳನ್ನು ಬಯಲಿಗೆಳೆದಿದೆ. ಇದನ್ನೂ ಓದಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ- ಬೆಂಗಳೂರಿನಿಂದ ಕಲಬುರಗಿಗೆ ಕರೆತಂದು ಪ್ರಾಣಸ್ನೇಹಿತನ ಹತ್ಯೆ

    ಜೈಲಿನಲ್ಲಿದ್ದುಕೊಂಡೇ ಉಗ್ರ ಕೃತ್ಯಕ್ಕೆ ಸಂಚು
    2023ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೇಡ್‌ಗಳು ಪತ್ತೆಯಾಗಿದ್ದವು. ಜೀವಂತ ಗ್ರೆನೇಡನ್ನು ತರಲು ಟಿ.ನಾಸೀರ್ ಸೂಚಿಸಿದ್ದ. ಜುನೈದ್ ಮೂಲಕ ಇದನ್ನು ತರಿಸಿದ್ದ. ಬಳಿಕ ನಾಸೀರ್‌ನನ್ನು ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸಿತ್ತು. ಈಗಾಗಲೇ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ನಾಸೀರ್‌ ಜೈಲಿನಲ್ಲಿದ್ದಾನೆ. ಭಯೋತ್ಪಾದನೆ ಬಗ್ಗೆ ಯುವಜನರ ಮೈಂಡ್‌ ವಾಶ್‌ ಮಾಡೋದ್ರಲ್ಲಿ ನಿಸ್ಸೀಮನಾಗಿದ್ದ ನಾಸೀರ್‌, ಹಲವು ಯುವಜನರನ್ನ ಉಗ್ರ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾನೆ ಎಂದೂ ಸಹ ಎನ್‌ಐಎ ತನಿಖೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ

    ಅಲ್ಲದೇ ಜೈಲಿನಲ್ಲಿದ್ದುಕೊಂಡೇ ಉಗ್ರ ಚಟುವಟಿಕೆಗಳ ಬಗ್ಗೆ ಪ್ಲ್ಯಾನ್‌ ಮಾಡಿದ್ದ. 2008ರ ಸರಣಿ ಬಾಂಬ್ ಸ್ಫೋಟ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ, ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ, ರಾಮೇಶ್ವರಂ ಕೆಫೆ ಬ್ಲಾಸ್ಟ್ ಸೇರಿ ಹಲವು ಪ್ರಕರಣಗಳಲ್ಲಿ ನಾಸೀರ್‌ ಕೈವಾಡ ಇದೆ. ಅಷ್ಟೇ ಅಲ್ಲ ಬೆಂಗಳೂರಿನಲ್ಲಿ ದೊಡ್ಡಮಟ್ಟದ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಅನ್ನೋದು ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ.

    ಇನ್ನೂ ಉಗ್ರ ಕೃತ್ಯಕ್ಕೆ ನಾಸೀರ್‌ ಜುನೈದ್, ಮೊಹಮ್ಮದ್ ಹರ್ಷದ್ ಖಾನ್, ಸುಹೈಲ್, ಫೈಜಲ್, ಜಾಹಿದ್ ತಬ್ರೇಜ್, ಮುದಾಸಿರ್ ಎಂಬ ಯುವಕರ ತಂಡವನ್ನೂ ರೆಡಿ ಮಾಡಿದ್ದ. ಆದ್ರೆ ಜೀವಂತ ಗ್ರೆನೇಡ್‌ಗಳು, ಪಿಸ್ತೂಲ್‌ಗಳು, ಸ್ಫೋಟಕ ವಸ್ತುಗಳ ಸಮೇತ ತಂಡ ಸಿಕ್ಕಿಬಿದ್ದಿತ್ತು. ಈ ಐವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಳಿಕ ಎನ್‌ಐಎ ಈ ಪ್ರಕರಣದ ಹೊಣೆ ವಹಿಸಿಕೊಂಡಿತು. ಸದ್ಯ ಮೂವರನ್ನು ಬಂಧಿಸಿರುವ ಎನ್‌ಐಎ, ಬಂಧಿತರಿಂದ ಒಂದಷ್ಟು ಹಣ, ಸಂವಹನಕ್ಕೆ ಬಳಸುತ್ತಿದ್ದ ವಾಕಿಟಾಕಿ ಸೇರಿ ಹಲವು ವಸ್ತುಗಳು ವಶಕ್ಕೆ ಪಡೆದುಕೊಂಡಿದೆ. ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ FIR – ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡ ಬಳಿಕ ಪೊಲೀಸರ ಕ್ರಮ

    ಏರ್‌ಟೆಲ್‌ ಮಾಜಿ ಉದ್ಯೋಗಿಗೆ ನೋಟಿಸ್‌
    ಇನ್ನೂ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ತಾಲ್ಲೂಕು ಭಟ್ರಹಳ್ಳಿ ಗ್ರಾಮದ ಸತೀಶ್ ಗೌಡ ಎಂಬಾತನಿಗೆ ಎನ್‌ಐಎ ನೋಟಿಸ್‌ ನೀಡಿದೆ. ಶಂಕಿತರಿಗೆ ಸಿಮ್‌ ಕಾರ್ಡ್‌ ನೀಡಿದ ಆರೋಪದ ಮೇಲೆ ಸತೀಶ್‌ ಗೌಡಗೆ ನೋಟಿಸ್‌ ನೀಡಲಾಗಿದೆ. ಸತೀಶ್‌ ಮನೆಯಲ್ಲಿ ಇಲ್ಲದ ಕಾರಣ ಕಾರಣ ಕುಟುಂಬಸ್ಥರಿಗೆ ನೋಟೀಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಅಧಿಕಾರಿಗಳು. ಮೂರು ವರ್ಷಗಳ ಹಿಂದೆ ಸತೀಶ್‌ಗೌಡ ಏರ್‌ಟೆಲ್‌ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಈ ಕೆಲಸ ಮಾಡಿರುವುದಾಗಿ ಸಂಶಯ ವ್ಯಕ್ತವಾಗಿದೆ.

  • ಪರಪ್ಪನ ಅಗ್ರಹಾರ ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರು ಶಂಕಿತ ಉಗ್ರರ ಬಂಧನ

    ಪರಪ್ಪನ ಅಗ್ರಹಾರ ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರು ಶಂಕಿತ ಉಗ್ರರ ಬಂಧನ

    * ಬೆಂಗಳೂರು, ಕೋಲಾರದಲ್ಲಿ ಎನ್‌ಐಎ ಬೇಟೆ
    * 2023ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೇಡ್‌ ಪತ್ತೆ ಪ್ರಕರಣದಲ್ಲಿ ನಡೆದಿತ್ತು ಶೋಧ

    ಬೆಂಗಳೂರು: ಎಲ್‌ಇಟಿ ಭಯೋತ್ಪಾದಕ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಕೋಲಾರದಲ್ಲಿ ಕಾರ್ಯಾಚರಣೆ ನಡೆಸಿದ ಎನ್‌ಐಎ, ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರನ್ನು ಬಂಧಿಸಿದೆ.

    ಬೆಂಗಳೂರಿನ ಪರಪ್ಪನ ಅಗ್ರಹಾರದ ಮನೋವೈದ್ಯ ಡಾ. ನಾಗರಾಜ್, ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಚಾನ್ ಪಾಷಾ ಮತ್ತು ತಲೆಮರೆಸಿಕೊಂಡಿರುವ ಆರೋಪಿಯ ತಾಯಿ ಅನೀಸ್ ಫಾತಿಮಾರನ್ನು ಬಂಧಿಸಲಾಗಿದೆ. ಶೋಧನಾ ಸಮಯದಲ್ಲಿ, ಬಂಧಿತ ಆರೋಪಿಗಳು ಮತ್ತು ಇತರ ಶಂಕಿತರ ಮನೆಗಳಿಂದ ವಿವಿಧ ಡಿಜಿಟಲ್ ಸಾಧನಗಳು, ನಗದು, ಚಿನ್ನ ಮತ್ತು ಅಪರಾಧ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

    2023 ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೈಡ್‌ಗಳು ಪತ್ತೆಯಾಗಿದ್ದವು. ಜೀವಂತ ಗ್ರೆನೇಡನ್ನು ತರಲು ಟಿ.ನಾಸೀರ್ ಸೂಚಿಸಿದ್ದ. ಜುನೈದ್ ಮೂಲಕ ಇದನ್ನು ತರಿಸಿದ್ದ. ಬಳಿಕ ನಾಸೀರ್‌ನನ್ನು ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸಿತ್ತು. ಈಗಾಗಲೇ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ನಾಸೀರ್‌ ಜೈಲಿನಲ್ಲಿದ್ದಾನೆ.

    ಕೋರ್ಟ್‌ಗಳಲ್ಲಿ ಹಣ ಎಕ್ಸ್‌ಚೇಂಜ್ ಮಾಡಲು‌ ಎಎಸ್‌ಐ ಚಾನ್‌ ಪಾಷಾ ಸಹಾಯ ಮಾಡಿದ್ದ. ನಾಸೀರ್ ವೈದ್ಯರಿಂದ ಮೊಬೈಲ್‌ ಪಡೆಯುತ್ತಿದ್ದ. ಜೀವಂತ ಗ್ರೆನೇಡ್‌ ಕೇಸ್‌ನಲ್ಲಿ ಜುನೈದ್‌ ಎಸ್ಕೇಪ್‌ ಆಗಿದ್ದಾನೆ.

  • ಶಾಲೆ ಬಳಿ ಇದ್ದ ನೇರಳೆ ತಿಂದು 7 ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

    ಶಾಲೆ ಬಳಿ ಇದ್ದ ನೇರಳೆ ತಿಂದು 7 ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

    ಕೋಲಾರ: ಶಾಲೆಯ ಆವರಣದ ಪಕ್ಕದಲ್ಲಿದ್ದ ನೇರಳೆ ಹಣ್ಣು (Jamun Fruit) ತಿಂದು 7 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪುತ್ರಸೊನ್ನೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಮಧ್ಯಾಹ್ನ ಊಟಕ್ಕೆ ಬಿಟ್ಟಿದ್ದ ವೇಳೆ ಊಟದ ಬಳಿಕ ಶಾಲೆಯ ಆವರಣದಲ್ಲಿದ್ದ ನೇರಳೆ ತಿನ್ನುತ್ತಿದ್ದಂತೆ 7 ಜನ ವಿದ್ಯಾರ್ಥಿಗಳಿಗೆ ವಾಂತಿ, ಭೇದಿಯಾಗಿದೆ. ಕೂಡಲೆ ಎಚ್ಚೆತ್ತ ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ಚಿಕಿತ್ಸೆ ಕೊಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಬೌಂಡರಿಯಿಂದಲೇ 196 ರನ್‌ – ವೇಗದ ತ್ರಿಶತಕ ಸಿಡಿಸಿ ದಾಖಲೆ ಬರೆದ ಮುಲ್ಡರ್

    ಅದರಂತೆ ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ 6 ಜನ ವಿದ್ಯಾರ್ಥಿಗಳನ್ನು ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಒರ್ವ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೈದ್ಯರು ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದು, ಮಕ್ಕಳನ್ನ ವೈದ್ಯರು ಪರಿವೀಕ್ಷಣೆಯಲ್ಲಿರಿಸಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬಿಇಓ ಗುರುಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ನೆಲಮಂಗಲ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ

    ಶಾಲೆಯ ಪಕ್ಕದಲ್ಲಿರುವ ರೈತರು ಅದನ್ನು ಕಡಿದು ಅಲ್ಲಿ ಹಾಕಿದ್ದಾರೆ. ಹಾಗಾಗಿ ಕೆಂಪಾಗಿದ್ದ ನೇರಳೆ ತಿಂದು ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಕ್ಕಳಿಗೆ ಯಾವುದೆ ತೊಂದರೆ ಇಲ್ಲ. ನಾಲ್ಕು ಗಂಟೆ ಮಕ್ಕಳ ಮೇಲೆ ನಿಗಾ ವಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.  ಇದನ್ನೂ ಓದಿ: ರಂಭಾಪುರಿ ಶ್ರೀಗಳು ಹೇಳಿದ ಮಾತು ನಿಜ ಆಗುತ್ತೆ, ಭಗವಂತನೇ ಶ್ರೀಗಳ ಬಾಯಲ್ಲಿ ಇದನ್ನು ಹೇಳಿಸಿರಬಹುದು: ಇಕ್ಬಾಲ್ ಹುಸೇನ್

  • ಬೆಳಿಗ್ಗೆ ಮದುವೆ, ರಾತ್ರಿ ನೇಣು ಬಿಗಿದು ಆತ್ಮಹತ್ಯೆ – ಡೇಟಾ ಆಪರೇಟರ್ ಸಾವಿನ ಸುತ್ತ ಅನುಮಾನದ ಹುತ್ತ

    ಬೆಳಿಗ್ಗೆ ಮದುವೆ, ರಾತ್ರಿ ನೇಣು ಬಿಗಿದು ಆತ್ಮಹತ್ಯೆ – ಡೇಟಾ ಆಪರೇಟರ್ ಸಾವಿನ ಸುತ್ತ ಅನುಮಾನದ ಹುತ್ತ

    ಕೋಲಾರ: ಬೆಳಿಗ್ಗೆ ಮದುವೆಯಾಗಿದ್ದ ವ್ಯಕ್ತಿ ಅದೇ ದಿನ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಬಂಗಾರಪೇಟೆ (Bangarpete) ತಾಲೂಕಿನ ನಾಯಕರಹಳ್ಳಿ ಮೂಲದ ಹರೀಶ್ ಬಾಬು (33) ನೇಣಿಗೆ ಶರಣಾಗಿದ್ದು, ಕಳೆದ 8 ವರ್ಷಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು.ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್

    ಕಳೆದ ಮೂರು ದಿನಗಳಿಂದ ರಜೆಯಲ್ಲಿದ್ದ ಹರೀಶ್ ಬಾಬು, ಬುಧವಾರ ಬೆಳಿಗ್ಗೆ ರಿಜಿಸ್ಟಾರ್ ಮ್ಯಾರೇಜ್ ಆಗಿದ್ದರು. ಆದರೆ ಅದೇ ದಿನ ರಾತ್ರಿ 11:30ರ ಸುಮಾರಿಗೆ ಆಸ್ಪತ್ರೆಯ ಇಎನ್‌ಟಿ ವಿಭಾಗದ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

    ಈ ಕುರಿತು ಮೃತ ಹರೀಶ್ ಬಾಬು ತಾಯಿ ಮಾತನಾಡಿ, ಒಂದು ತಿಂಗಳ ಹಿಂದೆ ಯುವತಿಯೊಬ್ಬಳು ನಮ್ಮ ಮನೆಗೆ ಬಂದು ನಾನು ಹಾಗೂ ಹರೀಶ್ ಮದುವೆಯಾಗುತ್ತೇವೆ ಎಂದಳು. ಅದಕ್ಕೆ ಕೆಲ ದಿನಗಳ ನಂತರ ನಾನೇ ಮಾಡುತ್ತೇನೆ ಎಂದು ಹೇಳಿದ್ದೆ. ಆದರೆ ಬುಧವಾರ ಬೆಳಿಗ್ಗೆ ಯುವತಿ ಕಡೆಯವರು ಬಂದು ನನ್ನ ಮಗನನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಮದುವೆ ಮಾಡಿಸಿದ್ದಾರೆ ಎಂದು ತಿಳಿಸಿದರು.

    ಮೃತ ಹರೀಶ್ ಬುಧವಾರ ರಾತ್ರಿ 11:15ರ ಸುಮಾರಿಗೆ ಆಸ್ಪತ್ರೆಯೊಳಗೆ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮದ್ಯ ಸೇವನೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಲ್ಯಾಂಬೋರ್ಗಿನಿ ಭೀಕರ ಅಪಘಾತ; ಫುಟ್ಬಾಲ್‌ ಆಟಗಾರ ಡಿಯೋಗೊ ದುರಂತ ಸಾವು

  • ಮರಕ್ಕೆ ಕಾರು ಡಿಕ್ಕಿ – ಗರ್ಭಿಣಿ ಸಾವು

    ಮರಕ್ಕೆ ಕಾರು ಡಿಕ್ಕಿ – ಗರ್ಭಿಣಿ ಸಾವು

    ಕೋಲಾರ: ಮರಕ್ಕೆ ಕಾರು ಡಿಕ್ಕಿ ಹೊಡೆದು ಗರ್ಭಿಣಿ (Pregnant) ಮೃತಪಟ್ಟ ಘಟನೆ ಮಾಲೂರು ತಾಲ್ಲೂಕು ಭಾವನಹಳ್ಳಿಯಲ್ಲಿ ನಡೆದಿದೆ.

    ಅರ್ಚನಾ (25) ಸಾವನ್ನಪ್ಪಿದ ಗರ್ಭಿಣಿ. ಕೊರಚೂರು ಮೂಲದ ಚಾಲಕ ಪತಿಗೆ ಗಾಯಗೊಂಡು ಆಸ್ಪತ್ರೆಗೆ(Hospital) ದಾಖಲಾಗಿದ್ದಾರೆ.  ಇದನ್ನೂ ಓದಿ: 30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ

    ರಸ್ತೆ ಬದಿಯಲ್ಲಿದ್ದ ಮಾವಿನ ಮರಕ್ಕೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ರಸ್ತೆ ಬದಿಯ ಬಳಿಮಾವಿನ ಮರ ಇದ್ದ ಕಾರಣ ಕಾರು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಮಾಲೂರು ಪೊಲೀಸರ ಭೇಟಿ ಪ್ರಕರ ದಾಖಲು.