Tag: ಕೋಲಾರ

  • ನನಗೆ ಸಿಎಂ, ಡಿಸಿಎಂ ವಿರುದ್ಧ ಅಸಮಾಧಾನ ಇಲ್ಲ: ಕೆವೈ ನಂಜೇಗೌಡ

    ನನಗೆ ಸಿಎಂ, ಡಿಸಿಎಂ ವಿರುದ್ಧ ಅಸಮಾಧಾನ ಇಲ್ಲ: ಕೆವೈ ನಂಜೇಗೌಡ

    – ನನ್ನ ಅಸಮಾಧಾನ ಜಿಲ್ಲೆಯ ಕೆಲ ಶಾಸಕರ ವಿರುದ್ಧ ಎಂದ ಶಾಸಕ

    ಕೋಲಾರ: ನನಗೆ ಸರ್ಕಾರ, ಮಂತ್ರಿಗಳ ವಿರುದ್ಧ ಬೇಸರ ಇಲ್ಲ. ನನ್ನ ಅಸಮಾಧಾನ ಏನಿದ್ದರೂ ಜಿಲ್ಲೆಯ ಕೆಲ ಶಾಸಕರ ವಿರುದ್ಧ ಎಂದು ಮಾಲೂರು ಶಾಸಕ ಕೆವೈ ನಂಜೇಗೌಡ (KY Nanjegowda) ಹೇಳಿದ್ದಾರೆ.

    ಕೋಲಾರದಲ್ಲಿ (Kolar) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾದಿಯಾಗಿ ಡಿಸಿಎಂ, ಸಚಿವರು ನನಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಯಾವುದೇ ಮಂತ್ರಿಗಳು ಸಹ ನನಗೆ ಅನುದಾನ ನೀಡದೆ ಇಲ್ಲ. ಸರ್ಕಾರದಲ್ಲಿ ಮಂತ್ರಿ ಮಂಡಲದಲ್ಲಿ ಎಲ್ಲರೂ ನನಗೆ ಸಹಕಾರ ನೀಡಿದ್ದಾರೆ ಎಂದರು. ಇದನ್ನೂ ಓದಿ: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿದ್ದರಾಮಯ್ಯ

    ನಾಳೆ ಬೆಳಗ್ಗೆ ನನಗೆ ಸುರ್ಜೇವಾಲ ಅವರು ಬುಲಾವ್ ನೀಡಿದ್ದಾರೆ. ಪಕ್ಷಕ್ಕೆ ಡ್ಯಾಮೇಜ್ ಆಗುವ ಕೆಲ ಶಾಸಕರ ವರ್ತನೆ ಜೊತೆಗೆ ಪಕ್ಷಕ್ಕೆ ಡ್ಯಾಮೇಜ್ ಆಗುವ ಬೆಳವಣಿಗೆಗಳ ಕುರಿತು ತಿಳಿಸುವೆ. ಪಕ್ಷಕ್ಕಿಂತ ನಾವ್ಯಾರು ದೊಡ್ಡವರಲ್ಲ, ಪಕ್ಷಕ್ಕೆ ನಾವೆಲ್ಲರೂ ಬದ್ಧ. ಅಂತಹ ವಿಚಾರಗಳನ್ನು ನಾನು ಹೈಕಮಾಂಡ್ ಮುಂದೆ ಪ್ರಸ್ತಾಪ ಮಾಡುವೆ ಎಂದು ಹೇಳಿದರು. ಇದನ್ನೂ ಓದಿ: 60 ವರ್ಷದಿಂದ ಉಳುಮೆ ಮಾಡ್ತಿದ್ದ ರೈತನಿಗೆ ಶಾಕ್ – ತಹಶೀಲ್ದಾರ್ ಸಹಿ ನಕಲಿಸಿ, 8 ಎಕರೆ ಬೇರೆಯವ್ರ ಹೆಸರಿಗೆ ವರ್ಗ

    ಪಕ್ಷ ಇಂತಹ ದೊಡ್ಡ ಅವಕಾಶ ಮಾಡಿಕೊಟ್ಟಿರುವುದು ನನ್ನ ಪುಣ್ಯ. ಹಾಗಾಗಿ ನಾಳೆ ಸುರ್ಜೇವಾಲ ಅವರನ್ನ ಭೇಟಿಯಾಗಿ ಎಲ್ಲಾ ವಿಚಾರಗಳ ಕುರಿತು ಚರ್ಚಿಸುವೆ. ಅಲ್ಲದೇ ಡಿಸಿಸಿ ಬ್ಯಾಂಕ್ ಹಾಗೂ ಕೋಮುಲ್ ಬೆಳವಣಿಗೆಗಳ ಕುರಿತು ಮಾತನಾಡುವೆ ಎಂದು ತಿಳಿಸಿದರು. ಇದನ್ನೂ ಓದಿ: ಹೃದಯಾಘಾತವಲ್ಲ ಟ್ರ್ಯಾಕ್ಟರ್ ಅಪಘಾತದಲ್ಲಿ ಹಾಸನದ ಯೋಧ ಸಾವು

  • ಕೋಮುಲ್ ಚುನಾವಣೆಯಲ್ಲಿ ಹಣದ ಹೊಳೆ – ಒಂದೊಂದು ಮತಕ್ಕೆ 5 ರಿಂದ 7 ಲಕ್ಷ ಸಂದಾಯ

    ಕೋಮುಲ್ ಚುನಾವಣೆಯಲ್ಲಿ ಹಣದ ಹೊಳೆ – ಒಂದೊಂದು ಮತಕ್ಕೆ 5 ರಿಂದ 7 ಲಕ್ಷ ಸಂದಾಯ

    – ಮತದಾನ ಮಾಡಿದ ಬಳಿಕ ಮಿಕ್ಸಿ, ಗ್ರೈಂಡರ್ ಗಿಫ್ಟ್
    – ಮುಂಬೈ, ಗೋವಾ, ಹೈದರಾಬಾದ್ ಟೂರ್ ಆಫರ್

    ಕೋಲಾರ: ಕೋಲಾರ ಹಾಲು ಒಕ್ಕೂಟದ ಆಡಳಿತ ಮಂಡಳಿ (KOMUL) ಚುನಾವಣೆಯಲ್ಲಿ ರೈತರ ಬದಲಾಗಿ ಶ್ರೀಮಂತರು, ರಿಯಲ್ ಎಸ್ಟೇಟ್ ಉದ್ಯಮಿಗಳು, ರಾಜಕೀಯ ಪ್ರವೇಶ ಮಾಡಿರುವ ಪರಿಣಾಮ ಹಣದ ಹೊಳೆ ಹರಿದಿದೆ.

    ಮತದಾರರಿಗೆ ಹಣದ ಆಮಿಷ, ಚಿನ್ನ, ಬೆಳ್ಳಿ ಉಡುಗೊರೆಗಳ ಜೊತೆಗೆ ಮಿಕ್ಸಿ, ಗ್ರೈಂಡರ್, ಉಡುಗೊರೆ ನೀಡಲಾಗಿದೆ. 855 ಜನ ಮತದಾರರಿದ್ದು, 1 ಮತಕ್ಕೆ 15 ಗ್ರಾಂ ಚಿನ್ನದ ಉಂಗರ, 1 ಕೆಜಿ ಬೆಳ್ಳಿಯ ಆಭರಣ, 2 ಲಕ್ಷ ಹಣ ಸೇರಿ ಒಬ್ಬ ಮತದಾರರಿಗೆ ಸರಾಸರಿ 5 ಲಕ್ಷ ಕೊಟ್ಟಿದ್ದಾರೆ. ಜಿದ್ದಾಜಿದ್ದಿ ಇರುವ ಸ್ಥಳಗಳಲ್ಲಿ ಕೆಲವು ಮತದಾರರಿಗೆ 10 ಲಕ್ಷದವರೆಗೂ ಕೊಟ್ಟಿದ್ದಾರೆ. ಜೊತೆಗೆ ಮುಂಬೈ, ಗೋವಾ, ಹೈದರಾಬಾದ್ ಪ್ರವಾಸದ ಆಫರ್ ಕೊಟ್ಟಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಮೇಘಸ್ಫೋಟ; ರಣಪ್ರವಾಹಕ್ಕೆ ಇಬ್ಬರು ಬಲಿ, 15-20 ಕಾರ್ಮಿಕರು ಕೊಚ್ಚಿ ಹೋಗಿರುವ ಶಂಕೆ

    ಕೋಮುಲ್ ಆಡಳಿತ ಮಂಡಳಿಗೆ ಒಟ್ಟು 13 ನಿರ್ದೇಶಕರ ಆಯ್ಕೆಯಾಗಬೇಕು. ಈ ಪೈಕಿ ಈಗಾಗಲೇ ಮಾಲೂರು ಶಾಸಕ ನಂಜೇಗೌಡ ಅವರು ಅವಿರೋಧ ಆಯ್ಕೆಯಾಗಿರುವ ಹಿನ್ನೆಲೆ 12 ಸ್ಥಾನಗಳಿಗೆ ಚುನಾವಣೆ ನಡೆದು, ಒಟ್ಟು 29 ಅಭ್ಯರ್ಥಿಗಳು ಕಣದ್ದಲ್ಲಿದ್ದರು. 13 ನಿರ್ದೇಶಕರ ಸ್ಥಾನಗಳ ಪೈಕಿ 9ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. ಇದರಲ್ಲಿ ಬಂಗಾರಪೇಟೆ ಶಾಸಕ ಎಸ್‌ಎನ್ ನಾರಾಯಣಸ್ವಾಮಿ, ಮಾಲೂರು ಶಾಸಕ ಕೆವೈ ನಂಜೇಗೌಡ ಆಯ್ಕೆ ಆಗಿದ್ದಾರೆ. 4 ಸ್ಥಾನಗಳಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಜೊತೆ ಸಂಪರ್ಕದಲ್ಲಿದ್ದ 700ಕ್ಕೂ ಅಧಿಕ ಜನರನ್ನು ಬಂಧಿಸಿದ ಇರಾನ್

  • ಮಾವು ಬೆಳೆಗೆ ಬೆಂಬಲ ಬೆಲೆ ಇಂದು ಸಂಪುಟದಲ್ಲಿ ನಿರ್ಧಾರ: ಬೈರತಿ ಸುರೇಶ್

    ಮಾವು ಬೆಳೆಗೆ ಬೆಂಬಲ ಬೆಲೆ ಇಂದು ಸಂಪುಟದಲ್ಲಿ ನಿರ್ಧಾರ: ಬೈರತಿ ಸುರೇಶ್

    ಬೆಂಗಳೂರು: ಮಾವು ಬೆಳೆಗೆ (Mango Crop) ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ (Byrathi Suresh) ತಿಳಿಸಿದ್ದಾರೆ.

    ಕೋಲಾರ (Kolar) ಜಿಲ್ಲೆಯಲ್ಲಿ ಅತಿ ಹೆಚ್ಚು ಮಾವನ್ನು ಬೆಳೆಯುತ್ತಾರೆ. ಈ ಬಾರಿ ಮಾವು ಬೆಲೆ ತೀವ್ರ ಕುಸಿತ ಉಂಟಾಗಿರುವುದರಿಂದ ರೈತರು (Farmers) ಕಂಗಾಲಾಗಿದ್ದಾರೆ. ಈ ರೈತರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಬ್ರೇಕ್ – ಓಲಾ ಸೇರಿ ಅಗ್ರಿಗೇಟರ್‌ ಕಂಪನಿಗಳಿಂದ ಸುಲಿಗೆ

    ರಾಜ್ಯದಲ್ಲಿ ಅದರಲ್ಲೂ ಕೋಲಾರದಲ್ಲಿ ಬೆಳೆಯುತ್ತಿರುವ ತೋತಾಪುರಿ ಸೇರಿದಂತೆ ಇತರೆ ಮಾವು ಬೆಳೆ ಪ್ರವೇಶವನ್ನು ಆಂಧ್ರಪ್ರದೇಶ ಸರ್ಕಾರ ನಿರ್ಬಂಧಿಸಿರುವುದರಿಂದ ರೈತರು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ. ಈ ನಿರ್ಬಂಧವನ್ನು ತೆರವುಗೊಳಿಸುವಂತೆ ನಮ್ಮ ಮುಖ್ಯಮಂತ್ರಿಗಳು ಆಂಧ್ರಪ್ರದೇಶ ಮುಖ್ಯಮಂತ್ರಿಗಳಿಗೆ ಎರಡು ಬಾರಿ ಪತ್ರ ಬರೆದು ಮನವಿ ಮಾಡಿದ್ದರೂ ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: Bengaluru | ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಸ್ಕೂಲ್ ವ್ಯಾನ್ – ಸವಾರ ಬಚಾವ್

    ಆಂಧ್ರ ಪ್ರದೇಶ ಸರ್ಕಾರ ರಾಜ್ಯದ ಮಾವು ಬೆಳೆಗೆ ನಿರ್ಬಂಧ ಹೇರುವ ಮೂಲಕ ನಮ್ಮ ರೈತರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಇದು ಅಮಾನವೀಯ ಕ್ರಮವಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಕೊಡುಕೊಳ್ಳುವಿಕೆ ಇರಬೇಕು. ಆದರೆ, ಆಂಧ್ರ ಪ್ರದೇಶ ನಮ್ಮ ಬೆಳೆಗೆ ನಿರ್ಬಂಧ ಹೇರಿರುವುದರಿಂದ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯವೂ ಆ ರಾಜ್ಯದ ಬೆಳೆಗಳ ಪ್ರವೇಶಕ್ಕೆ ನಿರ್ಬಂಧಿಸುವ ಕುರಿತು ಗಂಭೀರ ಚಿಂತನೆ ನಡೆಸಬೇಕಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೊಡಗು | 7ನೇ ಹೊಸಕೋಟೆ ಗ್ರಾಪಂ ಸದಸ್ಯೆ ಪುತ್ರ ಬೆಂಗಳೂರಿನಲ್ಲಿ ಆತ್ಮಹತ್ಯೆ

    ಇಂದು ಬೆಂಬಲ ಬೆಲೆ ನಿರ್ಧಾರ:
    ಕೋಲಾರದ ಮಾವು ಬೆಳೆಗಾರರೊಂದಿಗೆ ಸಭೆ ನಡೆಸಿ ಅವರ ಸಂಕಷ್ಟಗಳನ್ನು ಆಲಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಬೆಳೆಗಾರರ ನೆರವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬೆಳೆಗಾರರನ್ನು ಬೆಲೆ ಕುಸಿತದಿಂದ ಪಾರು ಮಾಡುವ ಉದ್ದೇಶದಿಂದ ಅವರಿಗೆ ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ನಿರ್ಧರಿಸಲಾಗಿದೆ. ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಅಸ್ಸಾಂ | ಧುಬ್ರಿಯಲ್ಲಿ ಗೋವಿನ ತಲೆ ಪತ್ತೆ ಕೇಸ್ – 30ಕ್ಕೂ ಹೆಚ್ಚು ಜನ ಅರೆಸ್ಟ್‌

  • ಕೋಲಾರದಲ್ಲಿ ಎಟಿಎಂ ದರೋಡೆ – 27 ಲಕ್ಷ ದೋಚಿದ ಕಳ್ಳರು

    ಕೋಲಾರದಲ್ಲಿ ಎಟಿಎಂ ದರೋಡೆ – 27 ಲಕ್ಷ ದೋಚಿದ ಕಳ್ಳರು

    ಕೋಲಾರ: ಇಲ್ಲಿನ (Kolar) ಸಹಕಾರ ನಗರದ ಎಸ್‍ಬಿಐ (SBI) ಬ್ಯಾಂಕ್‍ನ ಎಟಿಎಂನಲ್ಲಿದ್ದ (ATM) ಸುಮಾರು 27 ಲಕ್ಷ ರೂ. ಹಣವನ್ನು (Money) ಕಳ್ಳರು ದೋಚಿದ್ದಾರೆ.

    ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆಯ ಸಮೀಪ ಈ ಘಟನೆ ನಡೆದಿದೆ. ಎಟಿಎಂನಲ್ಲಿ ಸುಮಾರು 27 ಲಕ್ಷ ರೂ. ಹಣ ಇತ್ತು. ಕಳ್ಳರು ಎಲ್ಲಾ ಹಣವನ್ನು ದೋಚಿದ್ದಾರೆ. ಇದನ್ನೂ ಓದಿ: ರ‍್ಯಾಪಿಡೊ ಚಾಲಕನಿಂದ ಹಲ್ಲೆ – ಒಂದೇ ಏಟಿಗೆ ಕೆಳಗೆ ಬಿದ್ದ ಯುವತಿ, ಸ್ಥಳೀಯರಿಂದ ರಕ್ಷಣೆ

    ಸ್ಥಳಕ್ಕೆ ಕೋಲಾರ ಎಸ್‍ಪಿ ನಿಖಿಲ್ ಸೇರಿದಂತೆ ಬೆರಳಚ್ವು ತಜ್ಞರು, ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದ ಇಂದ್ರಯಾಣಿ ನದಿ ಸೇತುವೆ ಕುಸಿತ – ಕರ್ನಾಟಕದ ಟೆಕ್ಕಿ ಸಾವು

  • Kolar | ಜಮೀನು ವಿವಾದ – ಅಣ್ಣಂದಿರಿಂದಲೇ ತಮ್ಮನ ಕೊಲೆ

    Kolar | ಜಮೀನು ವಿವಾದ – ಅಣ್ಣಂದಿರಿಂದಲೇ ತಮ್ಮನ ಕೊಲೆ

    ಕೋಲಾರ: ಜಮೀನು ವಿವಾದ (Land Dispute) ಹಿನ್ನೆಲೆ ಅಣ್ಣ ತಮ್ಮನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಕೆಜಿಎಫ್ (KGF) ತಾಲೂಕು ಎನ್‌ಜಿ ಹುಲ್ಕರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ಆಸ್ತಿಯಲ್ಲಿ ನಾಲ್ಕು ಗುಂಟೆ ಪಾಲು ಬೇಕೆಂದು ಮೂವರು ಅಣ್ಣ ತಮ್ಮಂದಿರು ನ್ಯಾಯಾಲಯದ ಮೊರೆ ಹೋಗಿದ್ದರು. ಜಮೀನು ವಿವಾದ ಸದ್ಯ ನ್ಯಾಯಾಲಯದಲ್ಲಿ ಬಾಕಿ ಇದ್ದು, ಸದರಿ ಜಮೀನಿನಲ್ಲಿ ತಮ್ಮ ರಮೇಶ್ ಶೆಡ್ ನಿರ್ಮಿಸಲು ತಯಾರಿ ನಡೆಸುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ | ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಹೊತ್ತೊಯ್ದ ಪೋಷಕರು

    ಈ ಬಗ್ಗೆ ವಿಚಾರ ತಿಳಿದ ಸೀನಪ್ಪ (ಶ್ರೀನಿವಾಸ್) ಮತ್ತು ಸಂಪಂಗಿ ಇಬ್ಬರೂ ರಮೇಶ್ ಬಳಿ ತಕರಾರು ತೆಗೆದಿದ್ದಾರೆ. ಸೀನಪ್ಪ ಮತ್ತು ರಮೇಶ್ ನಡುವೆ ಮಾತಿನ ಚಕಮಕಿ ನಡೆದು ಕೋಪಾವೇಶದಲ್ಲಿ ಸೀನಪ್ಪ ಪಕ್ಕದಲ್ಲಿದ್ದ ದೊಣ್ಣೆಯನ್ನು ತೆಗೆದು ರಮೇಶ್‌ಗೆ ಬಲವಾಗಿ ಹೊಡೆದ ಪರಿಣಾಮ ರಮೇಶ್ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಘಟನೆ ನಡೆಯುವಾಗ ಅಕ್ಕಪಕ್ಕದ ಜನರೂ ಗುಂಪುಗೂಡಿದ್ದು, ತಮ್ಮ ಮೃತನಾದ ಎಂದು ತಿಳಿಯುತ್ತಿದ್ದಂತೆ ಭಯದಿಂದ ಸೀನಪ್ಪ ಮತ್ತು ಸಂಪಂಗಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: Ahmedabad Tragedy | ಡಿಎನ್‌ಎ ಮ್ಯಾಚ್ – 3 ದಿನಗಳ ಬಳಿಕ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

    ವಿಷಯ ತಿಳಿದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿ ಸೀನಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂಪಂಗಿ ಪರಾರಿಯಾಗಿದ್ದು, ಬೇತಮಂಗಳ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬ್ರಿಟನ್‌ನ F-35 ಫೈಟರ್‌ ಜೆಟ್‌ ಕೇರಳದಲ್ಲಿ ತುರ್ತು ಭೂಸ್ಪರ್ಶ – ಕಾರಣ ಏನು?

  • ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

    ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

    ಬೆಂಗಳೂರು ಗ್ರಾಮಾಂತರ/ಕೋಲಾರ: ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.

    ತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. 16 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. 55 ವರ್ಷದ ಪುರುಷ, 18 ವರ್ಷದ ಹುಡುಗಿ ಮತ್ತು 5 ವರ್ಷದ ಮಗು ಮೃತಪಟ್ಟಿದ್ದಾರೆ.

    ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ AP 03 Z 0190 ಸಂಖ್ಯೆಯ ಆಂಧ್ರ ಸಾರಿಗೆ ಬಸ್ ಅಪಘಾತಕ್ಕೆ ಒಳಗಾಗಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ನಿದ್ದೆ ಮಂಪರಿನಲ್ಲಿ ಒವರ್‌ಟೇಕ್ ಮಾಡಲು ಹೋಗಿ ಲಾರಿಗೆ ಹಿಂದಿನಿಂದ ಬಸ್‌ ಡಿಕ್ಕಿ ಹೊಡೆದಿದೆ.

    ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಮತ್ತು ಒಂದು ಬದಿ ಸಂಪೂರ್ಣ ಜಖಂಗೊಂಡಿದೆ. ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • Kolar | ಮಾವಿನ ಹಣ್ಣಿಗೆ ಬೆಲೆ ಕುಸಿತ – ಇಂದು ಶ್ರೀನಿವಾಸಪುರ ತಾಲೂಕು ಬಂದ್

    Kolar | ಮಾವಿನ ಹಣ್ಣಿಗೆ ಬೆಲೆ ಕುಸಿತ – ಇಂದು ಶ್ರೀನಿವಾಸಪುರ ತಾಲೂಕು ಬಂದ್

    -ರಸ್ತೆಯಲ್ಲಿ ಮಾವು ಸುರಿದು ರೈತರ ಆಕ್ರೋಶ

    ಕೋಲಾರ: ಹಣ್ಣುಗಳ ರಾಜ ಮಾವಿನ ಹಣ್ಣಿಗೆ (Mango) ಬೆಲೆ ಕುಸಿದ ಹಿನ್ನೆಲೆ ಇಂದು ಕೋಲಾರದ (Kolar) ಶ್ರೀನೀವಾಸಪುರ (Srinivaspur) ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ.

    ಮಾವು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬಂದ್‌ಗೆ ಕರೆ ನೀಡಿದ್ದು, ಮಾವು ಬೆಳೆಗಾರರರು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಸಾಥ್ ಕೊಟ್ಟಿವೆ. ಮಾವು ಬೆಳೆಗೆ ಬೆಲೆ ಕುಸಿತ ಹಿನ್ನೆಲೆ ಕಂಗಾಲಾಗಿರುವ ಮಾವು ಬೆಳೆಗಾರರು, ಆಂದ್ರಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಬಂದ್‌ಗೆ ಕರೆ ಕೊಡಲಾಗಿದೆ. ಮಾವು ಬೆಳೆಗಾರರ ಬಂದ್‌ಗೆ ಬಿಜೆಪಿ, ಜೆಡಿಎಸ್ ಸೇರಿ ಹಲವು ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಒಂದು ಟನ್ ಮಾವು 3 ರಿಂದ 4 ಸಾವಿರ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲಾಗಿದೆ. ಇದನ್ನೂ ಓದಿ: ತಾಂತ್ರಿಕ ದೋಷ – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ

    ಇನ್ನು ಶ್ರೀನಿವಾಸಪುರದಲ್ಲಿ ಮಾವು ರಸ್ತೆಯಲ್ಲಿ ಸುರಿದು ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸಪುರದ ಬಸ್ ನಿಲ್ದಾಣದಲ್ಲಿ ಮಾವು ರಸ್ತೆಯಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ

  • ನಮಗೆ ಪರಿಹಾರ ಬೇಡ, ಮಗಳನ್ನು ತಂದುಕೊಡಿ: ಚೆಕ್ ಕೊಡಲು ಬಂದ ಡಿಸಿ ಮುಂದೆ ಸಹನಾ ಪೋಷಕರ ಕಣ್ಣೀರು

    ನಮಗೆ ಪರಿಹಾರ ಬೇಡ, ಮಗಳನ್ನು ತಂದುಕೊಡಿ: ಚೆಕ್ ಕೊಡಲು ಬಂದ ಡಿಸಿ ಮುಂದೆ ಸಹನಾ ಪೋಷಕರ ಕಣ್ಣೀರು

    – ಸಮಾಧಾನಪಡಿಸಿ ಪರಿಹಾರದ ಚೆಕ್ ನೀಡಿದ ಕೋಲಾರ ಡಿಸಿ

    ಕೋಲಾರ: ನಮಗೆ ಚೆಕ್ ಬೇಡ, ಪರಿಹಾರವೂ ಬೇಡ ನಮಗೆ ನಮ್ಮ ಮಗಳು ಬೇಕು ಅವಳನ್ನು ತಂದು ಕೊಡಿ. ನಾವೇ ನಿಮಗೆ ಬೇಕಾದರೆ ಮನೆ, ಜಮೀನು, ಆಸ್ತಿ ಪಾಸ್ತಿ ಎಲ್ಲವನ್ನೂ ಮಾರಿ ನಿಮಗೆ ಹತ್ತರಷ್ಟು ಹಣ ಕೊಡ್ತೀವಿ ಎಂದು ಜಿಲ್ಲಾಡಳಿತದ ಎದುರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಸಹನಾ ತಂದೆ ಸುರೇಶ್ ಕಣ್ಣೀರಿಟ್ಟರು.

    ನಮಗೆ ಪರಿಹಾರ ಬೇಡ, ನಮಗೆ ನನ್ನ ಮಗಳು ಬೇಕು ಎಂದು ಸಹನಾ ತಂದೆ ಗೋಳಾಡಿದರು. ಆಗ ನೆರೆಹೊರೆಯವರು ಸಮಾಧಾನಪಡಿಸಿದರು. ನಂತರ ಕೋಲಾರ ಜಿಲ್ಲಾಧಿಕಾರಿ, ಮೃತರ ಕುಟುಂಬಸ್ಥರಿಗೆ ಪರಿಹಾರದ ಚೆಕ್ ನೀಡಿದರು.

    ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕೋಲಾರ ಮೂಲದ ಟೆಕ್ಕಿ ಸಹನಾ ಸಾವನ್ನಪ್ಪಿದ್ದರು. ಮೃತರ ಕುಟುಂಬಸ್ಥರಿಗೆ ಸರ್ಕಾರ 25 ಲಕ್ಷ ರೂ. ಪರಿಹಾರ ಘೋಷಿಸಿತ್ತು. ಪರಿಹಾರದ ಚೆಕ್ ವಿತರಿಸಲು ಜಿಲ್ಲಾಧಿಕಾರಿಗಳು, ಕೋಲಾರ ನಗರದ ಎಸ್.ಜಿ.ಲೇಔಟ್‌ಗೆ ತೆರಳಿದ್ದರು. ಈ ವೇಳೆ ಸಹನಾ ತಂದೆ, ಜಿಲ್ಲಾಧಿಕಾರಿಗಳ ಎದುರು ಕಣ್ಣೀರಿಟ್ಟರು. ‘ನಮಗೆ ಪರಿಹಾರದ ಚೆಕ್ ಬೇಡ, ನನಗೆ ನಮ್ಮ ಮಗಳು ಬೇಕು’ ಎಂದು ಗೋಳಾಡಿದರು.

    ಈ ವೇಳೆ ಜೊತೆಗಿದ್ದ ಸ್ನೇಹಿತರು ಹಾಗೂ ಕುಟುಂಬ ವರ್ಗದವರು ಸಮಾಧಾನ ಪಡಿಸಿದ ನಂತರ ತನ್ನ ಪತ್ನಿ ಹಾಗೂ ಮಗಳೊಂದಿಗೆ ಪರಿಹಾರದ ಚೆಕ್ ಪಡೆದುಕೊಂಡರು. ಈ ವೇಳೆ ಮಾತನಾಡಿದ ಸಹನಾ ತಂದೆ ಸುರೇಶ್ ಬಾಬು, ನಮ್ಮ ಮನೆ, ಆಸ್ತಿ, ಜಮೀನು ಎಲ್ಲವನ್ನು ಮಾರಿ ನಿಮಗೆ ಅದರ ಹತ್ತುಪಟ್ಟು ಬೇಕಾದ್ರೆ ಹಣ ಕೊಡುತ್ತೇವೆ. ನಮಗೆ ನಮ್ಮ ಮಗಳನ್ನು ತಂದು ಕೊಡಿ ಎಂದು ತಮ್ಮ ನೋವನ್ನು ಹೊರಹಾಕಿದರು.

    ಸರ್ಕಾರ ಮಾಡಿದ ಅದೊಂದು ಬೇಜವಾಬ್ದಾರಿ ವ್ಯವಸ್ಥೆಯಿಂದಾಗಿ ಇವತ್ತು ಅದೆಷ್ಟೋ ಜನರು ಮಕ್ಕಳನ್ನು ಕಳೆದುಕೊಂಡು ಕಣ್ಣೀರಾಕುವ ಸ್ಥಿತಿ ಎದುರಾಗಿದೆ. ಸರ್ಕಾರ ಇನ್ನಾದರು ಇಂಥ ಕಾರ್ಯಕ್ರಮಗಳನ್ನು ಮಾಡುವಾಗ ಜವಾಬ್ದಾರಿಯಿಂದ ಮಾಡಿ. ನಮ್ಮಂತೆ ಯಾವ ತಂದೆ-ತಾಯಿಯೂ ಕಣ್ಣೀರು ಹಾಕದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿಕೊಂಡರು.

  • ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

    ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

    – ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಸಹನಾ ಕಾಲ್ತುಳಿತಕ್ಕೆ ಬಲಿ

    ಕೋಲಾರ: ಮಗಳಿಗೆ ಮದುವೆ ಮಾಡಬೇಕು ಎಂದುಕೊಂಡಿದ್ದೆವು. ಈಗ ಅವಳೇ ಇಲ್ಲ. ನಮಗಾದ ಕಷ್ಟ ಯಾವ ತಂದೆ-ತಾಯಿಗೂ ಬರುವುದು ಬೇಡ ಎಂದು ಕಾಲ್ತುಳಿತಕ್ಕೆ ಮೃತಪಟ್ಟ ಟೆಕ್ಕಿ ಸಹನಾ ತಂದೆ ಕಣ್ಣೀರಿಟ್ಟಿದ್ದಾರೆ.

    ಕೋಲಾರದಲ್ಲಿ (Kolar) ‘ಪಬ್ಲಿಕ್ ಟಿವಿ’ ಜೊತೆ ಮಾತನಾಡುವಾಗ ಸಹನಾ ತಂದೆ ಸುರೇಶ್ ಬಾಬು ಕಣ್ಣೀರಾಕಿದ್ದಾರೆ. ಚೆನ್ನಾಗಿ ಓದಿ ಇಂಜಿನಿಯರಿಂಗ್ ಮಾಡಿ ಕೆಲಸ‌ ಮಾಡ್ತಾ ಇದ್ದಳು. ತಂದೆ-ತಾಯಿ ಮಾತು ಮೀರದೆ ಒಳ್ಳೆಯ ಮಗಳಾಗಿದ್ದಳು. ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಳು. ಮದುವೆ ಕೂಡ ಮಾಡಬೇಕು ಎಂದುಕೊಂಡಿದ್ದೆವು. ನಿನ್ನೆ ನಮಗೆ ತಿಳಿಸಿ ಆರ್‌ಸಿಬಿ ವಿಜಯೋತ್ಸವಕ್ಕೆ ತೆರಳಿದ್ದಳು. ಈ ಮೊದಲು ಆರ್‌ಸಿಬಿ ಮ್ಯಾಚ್ ನೋಡೋದಕ್ಕೆ ಹೋಗಿದ್ದಳು. ಆದರೆ, ಕಾಲ್ತುಳಿತದಲ್ಲಿ ಅಮಾಯಕರು ಬಲಿಯಾಗಿದ್ದಾರೆ ಎಂದು ನೊಂದು ನುಡಿದಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಟೀಶರ್ಟ್‌ನಿಂದ ಮೃತ ಪತ್ನಿಯ ಗುರುತು ಪತ್ತೆ ಮಾಡಿದ ಪತಿ

    RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿದ್ದು ಸರ್ಕಾರದ ನಿರ್ಲಕ್ಷ್ಯದಿಂದ ಎಂದು ರಾಜ್ಯ ಸರ್ಕಾರದ ವಿರುದ್ಧ ಸಹನಾ ಪೋಷಕರ ಮತ್ತು ಸ್ನೇಹಿತರು ಆಕ್ರೋಶ ಹೊರಹಾಕಿದ್ದಾರೆ. ಮೃತ ಸಹನಾ, ಶಿಕ್ಷಕ ದಂಪತಿಯಾದ ಸುರೇಶ್ ಬಾಬು ಹಾಗೂ ಮಂಜುಳಾ ಮೊದಲನೇ ಪುತ್ರಿಯಾಗಿದ್ದರು.

    ಒಂದೇ ಸಮಯದಲ್ಲಿ ಎರಡೂ ಕಡೆ ಸಂಭ್ರಮಾಚಾರಣೆ ಮಾಡಿದ್ದು ಸರಿ ಇಲ್ಲ. ಜನರು ಒಂದೇ ಸಮನೆ ನುಗ್ಗಿದ ಹಿನ್ನೆಲೆ ಅಮಾಯಕರು ಬಲಿಯಾಗಿದ್ದಾರೆ. ಸರ್ಕಾರ ಈ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಿತ್ತು. ಸರ್ಕಾರದ ನಿರ್ಲಕ್ಷ್ಯದಿಂದ ಮತ್ತು ಸರಿಯಾದ ಪ್ಲಾನ್‌ ಮಾಡಿಕೊಳ್ಳದ ಕಾರಣ 11 ಜನ ಅಮಾಯಕರು ಬಲಿಯಾದರು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

  • ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಆಂಧ್ರ ಮೂಲದ ವೈದ್ಯ ಸಾವು

    ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಆಂಧ್ರ ಮೂಲದ ವೈದ್ಯ ಸಾವು

    ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಕಾರಿಡಾರ್ ಹೈವೇಯಲ್ಲಿ (Chennai-Bengaluru Expressway) ಡಿವೈಡರ್‌ಗೆ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಆಂಧ್ರ ಮೂಲದ ವೈದ್ಯ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿ ಹಾದು ಹೋಗುವ ಚೆನ್ನೈ ಬೆಂಗಳೂರು ಎಕ್ಸ್‌ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಆಂಧ್ರ (Andhra Pradesh) ಮೂಲದ ವೈದ್ಯ (Doctor) ಕೃಷ್ಣ ಜಗನ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ – 75 ವರ್ಷದಲ್ಲಿ ಮೊದಲ ಬಾರಿಗೆ ಅವಧಿ ಪೂರ್ವ ಮುಂಗಾರು

    ಅನಂತಪುರದಿಂದ ಕುಪ್ಪಂ ಪಿಇಎಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಅಪಘಾತಕ್ಕೆ ಅತಿ ವೇಗದ ಚಾಲನೆಯೇ ಕಾರಣವೆಂದು ಮೇಲೋಟ್ನಕ್ಕೆ ಕಂಡು ಬಂದಿದೆ. ರಸ್ತೆ ಆರಂಭವಾಗುವ ಮುನ್ನವೇ ಬೆಂಗಳೂರು-ಚೆನ್ನೈ ಕಾರಿಡಾರ್ ರಸ್ತೆಯಲ್ಲಿ ಅಪಘಾತದ ಸಂಖ್ಯೆಗಳು ಹೆಚ್ಚಾಗಿ ಹಲವಾರು ಮಂದಿ ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಘಟನೆ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: 6 ಗನ್‌ಮ್ಯಾನ್‌ಗಳೊಂದಿಗೆ ಪಾಕ್ ಬೀದಿಯಲ್ಲಿ ಜ್ಯೋತಿ ಸುತ್ತಾಟ- ಸ್ಫೋಟಕ ವಿಡಿಯೋ ಔಟ್