Tag: ಕೋಲಾರ

  • ಬೆಳೆ ಹಾಳು ಮಾಡಿದ್ದಕ್ಕೆ ದಾಯಾದಿಗಳ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    ಬೆಳೆ ಹಾಳು ಮಾಡಿದ್ದಕ್ಕೆ ದಾಯಾದಿಗಳ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    ಕೋಲಾರ: ಬೆಳೆ ಹಾಳು ಮಾಡಿದ ವಿಚಾರವಾಗಿ ದಾಯಾದಿಗಳ ನಡುವೆ ನಡೆದಿದ್ದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಮಾಲೂರು (Malur) ತಾಲೂಕಿನ ಪಡವನಹಳ್ಳಿಯಲ್ಲಿ ನಡೆದಿದೆ.

    ಮುನಿರಾಜು(35) ಕೊಲೆಯಾದ ವ್ಯಕ್ತಿ. ಬೋರ್‌ವೆಲ್ ಲಾರಿ ಮೆಣಸಿನ ಗಿಡ ಹಾಳು ಮಾಡಿದ ಹಿನ್ನೆಲೆ ಮಾ.19ರ ಮಧ್ಯರಾತ್ರಿ ಸುಮಾರಿಗೆ ದಾಯಾದಿಗಳ ಮಧ್ಯೆ ಗಲಾಟೆ ನಡೆದಿದೆ. ಈ ಗಲಾಟೆಯು ತಾರಕ್ಕೇರಿದ್ದು ಮುನಿರಾಜುವಿನ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಅಣ್ಣಯ್ಯಪ್ಪ, ವೀರಸ್ವಾಮಿ, ಸೋಮಶೇಖರ್, ಕಾಂತರಾಜು, ಭರತ್, ವೆಂಕಟೇಶ್ ಹಾಗೂ ಭಾಗ್ಯಮ್ಮ ವಿರುದ್ಧ ಕೊಲೆಯ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಎಣ್ಣೆ ಏಟಲ್ಲಿ ದೇವಸ್ಥಾನದ ಮೇಲೆ ಕಲ್ಲು – ಕಂಬಕ್ಕೆ ಕಟ್ಟಿಹಾಕಿದ ಜನ

    ಕೊಲೆಯ ನಾಲ್ವರು ಆರೋಪಿಗಳನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾರಿಯರ ಅಂದ ಹೆಚ್ಚಿಸುವ ಮಸಾಬ ಬ್ಲೌಸ್ ಡಿಸೈನ್

  • ಕೋಲಾರ| ಕುಡಿಯಲು ಹಣ ನೀಡದ ಚಿಕ್ಕಮ್ಮ – ಬಿಯರ್ ಬಾಟಲಿಯಿಂದ ತಿವಿದು ಕೊಲೆ ಯತ್ನ

    ಕೋಲಾರ: ಕುಡಿಯಲು (Drinks) ಹಣ ನೀಡದ ಹಿನ್ನೆಲೆ ಯುವಕ ತನ್ನ ಚಿಕ್ಕಮ್ಮನಿಗೆ (Aunt) ಬಿಯರ್ ಬಾಟಲಿಯಿಂದ ತಿವಿದು ಹತ್ಯೆ ಮಾಡಲು ಯತ್ನಿಸಿದ ಘಟನೆ ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ (Bangarpet) ತಾಲೂಕಿನ ದಾಸೇಗೌಡನೂರು ಬಳಿ ನಡೆದಿದೆ.

    ಗರುಡ ಕೆಂಪನಹಳ್ಳಿ ಗ್ರಾಮದ ಅನಸೂಯ (35) ಹಲ್ಲೆಗೊಳಗಾದ ಮಹಿಳೆ. ಇದೆ ಗ್ರಾಮದ ಆನಂದ್ (26) ಕೊಲೆಗೆ ಯತ್ನಿಸಿದ ಯುವಕ. ಕೆಲಸಕ್ಕೆ ತೆರಳಿದ್ದ ವೇಳೆ ಕುಡಿತಕ್ಕೆ ಹಣ ನೀಡುವಂತೆ ಯುವಕ ಬೇಡಿಕೆ ಇಟ್ಟಿದ್ದಾನೆ. ಹಣ ಕೊಡದಿದ್ದಾಗ ಬಿಯರ್ ಬಾಟಲಿಯಿಂದ ಚುಚ್ವಿ ಕೊಲೆಗೆ ಯತ್ನಿಸಿದ್ದಾನೆ. ಇದನ್ನೂ ಓದಿ: ಮೈಸೂರಿನಲ್ಲಿ ಬಗರ್ ಹುಕುಂ ಸಾಗುವಳಿ ಚೀಟಿ ಖಾತೆ ಮಾಡಿಸಲು ಲಂಚ ಕೇಳ್ತಾರೆ – ಯತೀಂದ್ರ ಆರೋಪ

    ಗಾಯಾಳು ಮಹಿಳೆ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ಆನಂದನನ್ನು ಕಾಮಸಮುದ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿಎಂ ಅವರೇ ತುಘಲಕ್ ದರ್ಬಾರಿಗೆ ಇತಿಮಿತಿ ಇರಲಿ: ವಿಜಯೇಂದ್ರ

  • ಮಾರುಕಟ್ಟೆಯಲ್ಲಿ ನವಿಲುಕೋಸಿಗೆ ಸರಿಯಾದ ಬೆಲೆ ಸಿಗದೇ ಬೆಳೆ ನಾಶ ಮಾಡಿದ ರೈತ

    ಮಾರುಕಟ್ಟೆಯಲ್ಲಿ ನವಿಲುಕೋಸಿಗೆ ಸರಿಯಾದ ಬೆಲೆ ಸಿಗದೇ ಬೆಳೆ ನಾಶ ಮಾಡಿದ ರೈತ

    ಕೋಲಾರ: ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಈ ನಡುವೆ ನವಿಲುಕೋಸು ಬೆಳೆದ ರೈತರೊಬ್ಬರು ಸರಿಯಾದ ಬೆಲೆ ಸಿಗದ ಹಿನ್ನೆಲೆಯಲ್ಲಿ ತಾನು ಬೆಳೆದ ಬೆಳೆಯನ್ನು ತಾನೇ ಕೈಯಾರೇ ನಾಶ ಮಾಡಿರುವ ಘಟನೆ ಕೋಲಾರ (Kolar) ತಾಲೂಕಿನ ಕಳ್ಳಿಪುರ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ಅತ್ತೆ, ಮಾವನ ಕೊಂಕು ಮಾತಿನಿಂದ ಗಲಾಟೆ: ಡಾ.ಪ್ರಿಯದರ್ಶಿನಿ

    ಕಳ್ಳಿಪುರ ಗ್ರಾಮದ ಆನಂದ ಎಂಬ ರೈತ 2 ಎಕ್ರೆ ಬೆಳೆದಿದ್ದ ನವಿಲುಕೋಸು ಬೆಳೆಯನ್ನು ತಾನೇ ನಾಶ ಮಾಡಿದ್ದಾರೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಬೆಳೆ ಮೇಲೆ ಟ್ರ್ಯಾಕ್ಟರ್‌ ಹರಿಸಿ ನಾಶ ಮಾಡಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್ ಕಲಿಸೋ ಮದರಸಾಗಳಿಗೆ ಸಿದ್ದರಾಮಯ್ಯ ಸರ್ಕಾರ ಹಣ ಕೊಡ್ತಿದೆ: ಯತ್ನಾಳ್ ಕೆಂಡ

    ಸರ್ಕಾರ ರೈತರು ಬೆಳೆಯುವ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು ಜೊತೆಗೆ ಸರ್ಕಾರ ರೈತರ ನೆರವಿಗೆ ಬರಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಕಳೆದ 15 ದಿನಗಳಿಂದ ಗೆಡ್ಡೆ ಕೋಸು, ಹೂಕೋಸು ಸೇರಿದಂತೆ ಬ್ರಕ್ಲೋನ್‌ಗೆ ಬೆಲೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

  • Kolar| 2 ಖಾಸಗಿ ಬಸ್‌ಗಳ ನಡುವೆ ಅಪಘಾತ – ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

    Kolar| 2 ಖಾಸಗಿ ಬಸ್‌ಗಳ ನಡುವೆ ಅಪಘಾತ – ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

    ಕೋಲಾರ: ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಸ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆ ಶ್ರೀನಿವಾಸಪುರ (Srinivasapura) ತಾಲೂಕು ಗುಂಟಪಲ್ಲಿ ಕ್ರಾಸ್ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಆಂದ್ರಪ್ರದೇಶ ಮೂಲದ ಮದನಪಲ್ಲಿಯ ಗಂಗಾಧರ್ ಎಂಬ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ವೇಗವಾಗಿದ್ದ ಖಾಸಗಿ ಬಸ್ ಓವರ್ ಟೆಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ಬಸ್‌ನಲ್ಲಿದ್ದ ಪ್ರಯಾಣಿಕರು ತಿಳಿಸಿದ್ದಾರೆ. ಇದನ್ನೂ ಓದಿ: ತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಮಗನಿಗಿತ್ತು ಹೆಚ್‌ಐವಿ ಸೋಂಕು

    ಘಟನೆಯಲ್ಲಿ ಗಾಯಗೊಂಡವರನ್ನು ಆಂದ್ರಪ್ರದೇಶದ ಮದನಪಲ್ಲಿ ಹಾಗೂ ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಸ್ಟ್‌ ಆಕ್ಟಿಂಗ್‌ ಆಸ್ಕರ್‌ ಅವಾರ್ಡ್‌ ಯಾರಿಗೆ ಹೋಗುತ್ತೆ ಅಂದ್ರೆ.. – ದರ್ಶನ್ ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಪೋಸ್ಟ್

  • ಕಾಂಗ್ರೆಸ್‌ನಿಂದ SCSP, TSP ಹಣ ಗ್ಯಾರಂಟಿಗೆ ಬಳಕೆ – ಕೋಲಾರ ಬಿಜೆಪಿ ಮುಖಂಡರಿಂದ ಖಂಡನೆ

    ಕಾಂಗ್ರೆಸ್‌ನಿಂದ SCSP, TSP ಹಣ ಗ್ಯಾರಂಟಿಗೆ ಬಳಕೆ – ಕೋಲಾರ ಬಿಜೆಪಿ ಮುಖಂಡರಿಂದ ಖಂಡನೆ

    ಕೋಲಾರ: ಕಾಂಗ್ರೆಸ್ (Congress) ಸರ್ಕಾರ ಎಸ್‌ಸಿಎಸ್‌ಪಿ (SCSP) ಮತ್ತು ಟಿಎಸ್‌ಪಿ (TSP) ಹಣವನ್ನು ಗ್ಯಾರಂಟಿಗೆ ಬಳಸಲು ಮುಂದಾಗಿರುವುದನ್ನು ಕೋಲಾರ ಜಿಲ್ಲೆಯ ಮುಖಂಡರು ಖಂಡಿಸಿದ್ದಾರೆ.

    ಕೋಲಾರದ (Kolar) ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖಂಡರು, ಬಜೆಟ್‌ನಲ್ಲಿ 13,340 ಕೋಟಿ ರೂ. ಮೀಸಲಿಟ್ಟಿದ್ದು, ಯಾವುದೇ ಕಾರಣಕ್ಕೂ ಇದನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಬಾರದು. ಈ ಬಗ್ಗೆ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕರು ಧ್ವನಿ ಎತ್ತಬೇಕು. 2024-24ರ ಬಜೆಟ್‌ನಲ್ಲಿಟ್ಟದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಗ್ಯಾರೆಂಟಿಗಳಿಗೆ ಬಳಕೆ ಮಾಡಲಾಗಿದೆ. ಈ ವರ್ಷ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿಗೆ ಬಳಸಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಬಜೆಟ್ ಮೇಲೆ ನಡೆಯುತ್ತಿರುವ ಚರ್ಚೆಯಲ್ಲಿ ಇದಕ್ಕೆ ಅವಕಾಶ ಕೊಡಬಾರದು. ಜನಸಂಖ್ಯೆ ಮೇಲೆ ಮತ್ತು ಆರ್ಥಿಕ ನೀತಿ ಸಮಿತಿಯ ಆಧಾರದ ಮೇಲೆ ಮೀಸಲಿಟ್ಟಿರುವ ಹಣ ಇದಾಗಿದ್ದು, ಅದೇ ಜನಾಂಗಕ್ಕೆ ವ್ಯಯ ಮಾಡುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಅನುದಾನ ಬಿಡುಗಡೆ – ಪ್ರಧಾನಿ ಮೋದಿ, ಕೇಂದ್ರ ಸಚಿವರಿಗೆ ಬೊಮ್ಮಾಯಿ ಕೃತಜ್ಞತೆ

    ಕಾಂಗ್ರೆಸ್ ಸರ್ಕಾರ ಬಂದಮೇಲೆ ಬಡವರ ಹಣವನ್ನು ಕಸಿಯುವ ಮೂಲಕ ವಂಚನೆ ಮಾಡುತ್ತಿದೆ. ಈಗಾಗಲೇ ಮಾ.6ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡಲಾಗಿದೆ. ಮುಂದೆ ಸಹ ಇದೇ ರೀತಿ ಮುಂದುವರಿದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಎಸ್.ಮುನಿಸ್ವಾಮಿ, ಮಾಜಿ ಶಾಸಕ ಸಂಪಂಗಿ, ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ, ಮಹೇಶ್ ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಳಗಾವಿ| ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

  • ಕೋಲಾರ ಜಿಲ್ಲೆಗೆ ಮೆಡಿಕಲ್ ಕಾಲೇಜು – `ಕೈ’ ಮುಖಂಡರ ಸಂಭ್ರಮಾಚರಣೆ

    ಕೋಲಾರ ಜಿಲ್ಲೆಗೆ ಮೆಡಿಕಲ್ ಕಾಲೇಜು – `ಕೈ’ ಮುಖಂಡರ ಸಂಭ್ರಮಾಚರಣೆ

    ಕೋಲಾರ: ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಜಿಲ್ಲೆಗೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ ಎಂದು ಕೋಲಾರದಲ್ಲಿ (Kolar) ಕಾಂಗ್ರೆಸ್ (Congress) ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

    ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು ಸಂಭ್ರಮಾಚರಣೆ ಮಾಡಿದರು. ಬಜೆಟ್‌ನಲ್ಲಿ ಕೋಲಾರಕ್ಕೆ ಮೆಡಿಕಲ್ ಕಾಲೇಜು, ಕೆಜಿಎಫ್‌ನಲ್ಲಿ ಹೈಟೆಕ್ ಕೃಷಿ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೇ ರಸ್ತೆ ಅಭಿವೃದ್ದಿಗೆ 300 ಕೋಟಿ ರೂ., ಎತ್ತಿನಹೊಳೆ ಯೋಜನೆಗೆ 556 ಕೋಟಿ ರೂ. ನೀಡಿರುವ ಸಿಎಂಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ‘ಭಗವಂತ ಕೇಸರಿ’ ನಿರ್ದೇಶಕನ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಗ್ರೀನ್ ಸಿಗ್ನಲ್

    ಕೋಲಾರಕ್ಕೆ ಯಾವುದೇ ಅನುದಾನ ನೀಡಿಲ್ಲ, ಯಾವುದೇ ಅಭಿವೃದ್ಧಿ ಮಾಡಿಲ್ಲ ಎನ್ನುವ ವಿರೋಧಿಗಳೇ ಇತ್ತ ನೋಡಿ ಎಂದು ವಿರೋಧ ಪಕ್ಷಗಳಿಗೆ ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ಮಾಡುವ ಮೂಲಕ ಟಾಂಗ್ ನೀಡಿದರು. ಸಿದ್ದರಾಮಯ್ಯ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿ, ಬಜೆಟ್‌ನಲ್ಲಿ ಹೆಚ್ಚು ಯೋಜನೆಗಳನ್ನ ತಂದುಕೊಟ್ಟ ಜಿಲ್ಲೆಯ ಸಚಿವರಿಗೆ, ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಏಪ್ರಿಲ್‌ನಲ್ಲಿ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿ ಸಾಧ್ಯತೆ

  • ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

    ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

    ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್‌ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಬೆಂಗಳೂರಿನ ಜಿಆರ್‌ಪಿಎ ಚೀಫ್‌ ಎಂಜಿನಿಯರ್ ನಂಜುಂಡಪ್ಪ ಮತ್ತು ಬಿಬಿಎಂಪಿ ಎಕ್ಸಿಕ್ಯೂಟಿವ್ ಎಂಜಿನಿಯರ್‌‌ ಹೆಚ್‌.ಪಿ ಕಲ್ಲೇಶಪ್ಪ ಅವರ ಮನೆಗಳ ಮೇಲೆ ದಾಳಿ ನಡೆದಿದೆ. ಕೋಲಾರದಲ್ಲಿ ಬೆಸ್ಕಾಂ AEE ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇವರು ಬೆಂಗಳೂರಿನ ರಾಜಾಜಿನಗರದಲ್ಲಿ ಹಾಲಿ AEE ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಸಂಬಂಧಿಕರೊಬ್ಬರ ಮನೆ ಮೇಲೂ ದಾಳಿ ನಡೆದಿದೆ. ದಾಳಿ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ನಾಗರಾಜ್ ಕೊಳ್ಳೇಗಾಲ ಬಳಿ 6 ಎಕರೆ ಜಮೀನು, ಬೆಂಗಳೂರಿನಲ್ಲಿ ಒಂದು ಮನೆ, ಎರಡು ನಿವೇಶನಗಳು ಇವೆ.

    ದಾವಣಗೆರೆಯಲ್ಲಿ ಫುಡ್‌ ಸೇಫ್ಟಿ & ಕ್ವಾಲಿಟಿ ಯುನಿಟ್ ಹೆಲ್ತ್ ಡಿಪಾರ್ಟ್ಮೆಂಟ್‌ನ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗರಾಜ್ ಮನೆ ಮೇಲೂ ದಾಳಿ ನಡೆದಿದೆ. ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ನಾಗರಾಜ್ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ. ತುಮಕೂರಿನ ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ಜಗದೀಶ್ ಮನೆ ಮೇಲೂ ‘ಲೋಕಾ’ ದಾಳಿ ನಡೆದಿದೆ.

    ಬಾಗಲಕೋಟೆಯ ಬೀಳಗಿ ಲೋಕೋಪಯೋಗಿ ಇಲಾಖೆ ಎಫ್‌ಡಿಸಿ ಮಲ್ಲೇಶ್‌ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಕಲಬುರಗಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಅರೋಪದ ಮೇಲೆ‌ ಲೋಕೋಪಯೋಗಿ ಚೀಫ್ ಇಂಜಿನಿಯರ್ ಮನೆ‌ ಮೇಲೆ ದಾಳಿ ನಡೆದಿದೆ. ಕಲಬುರಗಿಯ ಎನ್‌ಜಿಓ ಕಾಲೊನಿ ಮನೆ ಸೇರಿ ಒಟ್ಟು 6 ಕಡೆ ದಾಳಿಯಾಗಿದೆ.

  • ಕೋಲಾರ| ಇನ್ನೋವಾ ಕಾರ್‌ಗೆ ಬೈಕ್ ಡಿಕ್ಕಿ ಪ್ರಕರಣ – ಗಂಭೀರ ಗಾಯಗೊಂಡಿದ್ದ ಗರ್ಭಿಣಿ ಸಾವು

    ಕೋಲಾರ| ಇನ್ನೋವಾ ಕಾರ್‌ಗೆ ಬೈಕ್ ಡಿಕ್ಕಿ ಪ್ರಕರಣ – ಗಂಭೀರ ಗಾಯಗೊಂಡಿದ್ದ ಗರ್ಭಿಣಿ ಸಾವು

    – ಸಾವಿನ ಸಂಖ್ಯೆ 6ಕ್ಕೆ ಏರಿಕೆ

    ಕೋಲಾರ: ಇನ್ನೋವಾ ಕಾರ್‌ಗೆ ಬೈಕ್ ಡಿಕ್ಕಿಯಾಗಿ 5 ಜನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಗರ್ಭಿಣಿ ಮಂಗಳವಾರ ಮೃತಪಟ್ಟಿದ್ದಾರೆ.

    ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತುಂಬು ಗರ್ಭಿಣಿ ಸುಷ್ಮಿತಾರನ್ನು (32)  ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಸುಷ್ಮಿತಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ಕೆಜಿಎಫ್ (KGF) ತಾಲೂಕಿನ ಕಮ್ಮಸಂದ್ರದಲ್ಲಿ (Kammasandra) ಸುಷ್ಮಿತಾ ಅಂತ್ಯ ಸಂಸ್ಕಾರ ನೆರವೇರಿದೆ.

    ಕೋಲಾರದ ನೂತನ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್‌ವೇನಲ್ಲಿ (Bengaluru-Chennai Expressway) ಸೋಮವಾರ ಮಧ್ಯರಾತ್ರಿ ಘಟನೆ ನಡೆದಿದೆ. ಘಟನೆಯಲ್ಲಿ ಸುಷ್ಮಿತಾ ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಸೇರಿ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಸುಷ್ಮಿತಾ ಹೊರತುಪಡಿಸಿ ಇನ್ನೂ ಮೂರು ಜನ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಮೃತಪಟ್ಟವರು ಕೆಜಿಎಫ್ ತಾಲ್ಲೂಕು ಕಮ್ಮಸಂದ್ರ ಗ್ರಾಮದವರಾಗಿದ್ದು, ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಘಟನೆ ನಡೆದಿದೆ. ಘಟನೆ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.

  • ಕೋಲಾರ | ಇನ್ನೋವಾ ಕಾರಿಗೆ ಬೈಕ್‌ ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು

    ಕೋಲಾರ | ಇನ್ನೋವಾ ಕಾರಿಗೆ ಬೈಕ್‌ ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು

    ಕೋಲಾರ: ಇನ್ನೋವಾ ಕಾರು (Innova Car) ಹಾಗೂ ಬೈಕ್‌ ನಡುವೆ ಡಿಕ್ಕಿ  ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ (Bangarpet) ತಾಲೂಕಿನ ಕುಪ್ಪನಹಳ್ಳಿ ಬಳಿ ನಡೆದಿದೆ.

    ಕೋಲಾರದ ನೂತನ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Chennai expressway) ಘಟನೆ ನಡೆದಿದೆ. ಕಾರಿನಲ್ಲಿದ್ದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಬೈಕ್‌ ಸವಾರನ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ:  ಇಂದಿನಿಂದ ಅಧಿವೇಶನ – ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ ಮೈತ್ರಿ ಸಜ್ಜು

    ಉಳಿದಂತೆ ಸುಶ್ಮಿತಾ, ವಿರುತ, ಸುಜಾತ, ಸುನಿಲ್ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ನಾಲ್ವರನ್ನ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೃತಪಟ್ಟವರು ಕೆಜಿಎಫ್ ತಾಲ್ಲೂಕು ಕಮ್ಮಸಂದ್ರ ಗ್ರಾಮದವರಾಗಿದ್ದು, ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಘಟನೆ ನಡೆದಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ. ಇದನ್ನೂ ಓದಿ: ಷೇರುಪೇಟೆ ವಂಚನೆ: ಸೆಬಿ ಮಾಜಿ ಅಧ್ಯಕ್ಷೆ ಬುಚ್‌ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶ

  • ಅರಣ್ಯ ಇಲಾಖೆಯ ಮುನ್ನೆಚ್ಚರಿಕೆ ಪಾಲಿಸಲು ಸಚಿವರ ಮನವಿ; ಆನೆ ದಾಳಿಯಿಂದ ಸಾವು – ಈಶ್ವರ ಖಂಡ್ರೆ ಶೋಕ

    ಅರಣ್ಯ ಇಲಾಖೆಯ ಮುನ್ನೆಚ್ಚರಿಕೆ ಪಾಲಿಸಲು ಸಚಿವರ ಮನವಿ; ಆನೆ ದಾಳಿಯಿಂದ ಸಾವು – ಈಶ್ವರ ಖಂಡ್ರೆ ಶೋಕ

    ಬೆಂಗಳೂರು: ರಾಜ್ಯದಲ್ಲಿ ಕಾಡಾನೆ ದಾಳಿಗೆ ನಿನ್ನೆ ಮತ್ತು ಇಂದು ಇಬ್ಬರು ಸಾವಿಗೀಡಾಗಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಸಚಿವ ಈಶ್ವರ ಖಂಡ್ರೆ, ಸಾರ್ವಜನಿಕರು ಇಲಾಖೆಯ ಮುನ್ನೆಚ್ಚರಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.

    ನಿನ್ನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಒಬ್ಬ ಯುವಕ ಮತ್ತು ಇಂದು ಕೋಲಾರ ಜಿಲ್ಲೆ ಕಾನಸಮುದ್ರದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು ತೀವ್ರ ನೋವು ತಂದಿದೆ. ಮೃತರ ಕುಟುಂಬದೊಂದಿಗೆ ಸರ್ಕಾರ ಇದೆ. ಅವರ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ ಎಂದು ತಿಳಿಸಿದ್ದಾರೆ. ಮೃತರ ಹತ್ತಿರದ ಸಂಬಂಧಿಕರಿಗೆ ಕೂಡಲೇ ಪರಿಹಾರದ ಮೊತ್ತ ನೀಡಲು ಸೂಚಿಸಲಾಗಿದೆ. ಈ ಎಲ್ಲ ದುರ್ಘಟನೆಗಳು ಬೆಳಗಿನ ಹೊತ್ತು ಮತ್ತು ಸಂಜೆಯ ವೇಳೆ ಸಂಭವಿಸುತ್ತಿವೆ. ಕಾಡಿನಂಚಿನ ಜನರು ಅರಣ್ಯ ಇಲಾಖೆಯು ಆನೆಗಳ ಚಲನವಲನದ ಬಗ್ಗೆ ನೀಡುವ ಸಂದೇಶಕ್ಕೆ ಸ್ಪಂದಿಸಿ, ಜಾಗರೂಕರಾಗಿರಬೇಕು ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

    ಆನೆ-ಮಾನವ ಸಂಘರ್ಷ, ವನ್ಯಜೀವಿ ಮಾನವ ಸಂಘರ್ಷ ಇಂದು ನಿನ್ನೆಯ ಸಮಸ್ಯೆಯಲ್ಲ. ಸಾವಿರಾರು ವರ್ಷಗಳಿಂದಲೂ ಇದೆ. ಅರಣ್ಯ ಪ್ರದೇಶ ಕ್ಷೀಣಿಸುತ್ತಿದ್ದು, ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳ ಸಮಸ್ಯೆ ಉಲ್ಬಣವಾಗುವಂತೆ ಮಾಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ರಾಜ್ಯ ಸರ್ಕಾರ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ, ಆನೆ ಕಂದಕ ನಿರ್ಮಿಸಿ, ನಿರ್ವಹಿಸುತ್ತಿರುವುದರ ಜೊತೆಗೆ ರೈಲ್ವೆ ಬ್ಯಾರಿಕೇಡ್ ಸಹ ಹಾಕುತ್ತಿದೆ. 2024-25ನೇ ಸಾಲಿನಲ್ಲಿ 78.917 ಕಿ.ಮೀ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಂಡಿದ್ದು, 41.87 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೂ 103 ಕಿ.ಮೀ. ಗುರಿ ನಿಗದಿ ಮಾಡಲಾಗಿದ್ದು, ಮಾರ್ಚ್ 31ರೊಳಗೆ ಈ ಕಾಮಗಾರಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

    ದೇಶದಲ್ಲಿಯೇ ಅತಿ ಹೆಚ್ಚು 6395 ಆನೆಗಳು ರಾಜ್ಯದಲ್ಲಿವೆ. ಸರ್ಕಾರ ಪುಂಡಾನೆ ಹಾವಳಿ ತಡೆಗೆ ಮಾರ್ಗೋಪಾಯ ಕಂಡುಹಿಡಿಯಲು ನೆರೆ ರಾಜ್ಯಗಳ ಸಚಿವರೊಂದಿಗೆ ಸಭೆ ನಡಸಿದೆ. ಅಂತಾರಾಷ್ಟ್ರೀಯ ಸಮಾವೇಶ ನಡೆಸಿದೆ. ತಜ್ಞರ ಸಮಿತಿ ರಚಿಸಿ ಅಧ್ಯಯನ ನಡೆಸುತ್ತಿದೆ. ಆನೆ ಕಾರ್ಯಪಡೆಯನ್ನೂ ರಚಿಸಿದೆ. ಸಾರ್ವಜನಿಕರಿಗೆ ಸಕಾಲದಲ್ಲಿ ಆನೆಗಳ ಓಡಾಟದ ಬಗ್ಗೆ ಮಾಹಿತಿ ನೀಡುವ ಕಾರ್ಯ ಮಾಡುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

    ಕೊಡಗು, ಹಾಸನ, ಚಿಕ್ಕಮಗಳೂರು ಸುತ್ತಮುತ್ತ ಕಾಡಿನಿಂದ ಹೊರಬಂದು ಗುಂಪಾಗಿ ಸಂಚರಿಸುವ ಕೆಲವು ಆನೆಗಳಿಂದ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ, 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭದ್ರಾ ಅಭಯಾರಣ್ಯದಲ್ಲಿ ಆನೆ ಧಾಮ ನಿರ್ಮಿಸಲು ಯೋಜಿಸಲಾಗಿದೆ. ಇಲ್ಲಿ ಆನೆಗಳಿಗೆ ಅಗತ್ಯ ಆಹಾರ, ನೀರು ಲಭ್ಯವಾಗುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ಕಾಡಿನ ಹೊರಗೇ ಓಡಾಡುವ 150ಕ್ಕೂ ಹೆಚ್ಚು ಆನೆಗಳನ್ನು ಗುರುತಿಸಲಾಗಿದ್ದು, ಮಿನಿ ಖೆಡ್ಡಾ ಕಾರ್ಯಾಚರಣೆ ರೂಪದಲ್ಲಿ ಆನೆಗಳನ್ನು ಧಾಮಕ್ಕೆ ಕಳಿಸಬೇಕಾಗುತ್ತದೆ. ಆದರೆ ಇದಕ್ಕೆ ಕಾಲಾವಕಾಶ ಬೇಕಾಗುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.