Tag: ಕೋಲ್ಕತ್ತಾ ನೈಟ್‌ರೈಡರ್ಸ್‌

  • ಅಶ್ವನಿ ವೇಗಕ್ಕೆ ಕೊನೆಯ ಸ್ಥಾನಕ್ಕೆ ಜಾರಿದ ಕೋಲ್ಕತ್ತಾ – ಮುಂಬೈಗೆ ಭರ್ಜರಿ ಜಯ

    ಅಶ್ವನಿ ವೇಗಕ್ಕೆ ಕೊನೆಯ ಸ್ಥಾನಕ್ಕೆ ಜಾರಿದ ಕೋಲ್ಕತ್ತಾ – ಮುಂಬೈಗೆ ಭರ್ಜರಿ ಜಯ

    ಮುಂಬೈ: ಚೊಚ್ಚಲ ಪಂದ್ಯವಾಡಿದ ಅಶ್ವನಿ ಕುಮಾರ್‌ (Ashwani Kumar) ಅವರ ಮಾರಕ ಬೌಲಿಂಗ್‌ ನೆರವಿನಿಂದ ಮುಂಬೈ ಇಂಡಿಯನ್ಸ್‌ (Mumbai Indians) ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತಾ (Kolkata Knight Riders) 16.2 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್‌ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ಮುಂಬೈ 12.5 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 121 ರನ್‌ ಹೊಡೆದು ಟೂರ್ನಿಯಲ್ಲಿ ಮೊದಲ ಜಯ ಸಾಧಿಸಿತು. ಇದನ್ನೂ ಓದಿ: ಮುಂಬೈ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ರೋಹಿತ್‌ಗೆ ಇಲ್ಲ ಸ್ಥಾನ

    ಈ ಸೋಲಿನೊಂದಿಗೆ 6ನೇ ಸ್ಥಾನದಲ್ಲಿದ್ದ ಕೋಲ್ಕತ್ತಾ 10ನೇ ಸ್ಥಾನಕ್ಕೆ ಜಾರಿದರೆ, ಕೊನೆಯ ಸ್ಥಾನದಲ್ಲಿದ್ದ ಮುಂಬೈ ಉತ್ತಮ ನೆಟ್‌ ರನ್‌ ರೇಟ್‌ನಿಂದ 6ನೇ ಸ್ಥಾನಕ್ಕೆ ಜಿಗಿದಿದೆ.

    ಸುಲಭ ಸವಾಲನ್ನು ಬೆನ್ನಟ್ಟಿದ ಮುಂಬೈ 13 ರನ್‌ ಗಳಿಸಿದ ರೋಹಿತ್‌ ವಿಕೆಟ್‌ ಆರಂಭದಲ್ಲೇ ಕಳೆದುಕೊಂಡರೂ ರಯಾನ್ ರಿಕಲ್ಟನ್ ಔಟಾಗದೇ 62 ರನ್‌(41 ಎಸೆತ, 4 ಬೌಂಡರಿ, 5 ಸಿಕ್ಸ್‌), ವಿಲ್‌ ಜಾಕ್ಸ್‌ 16 ರನ್‌, ಕೊನೆಯಲ್ಲಿ ಸೂರ್ಯಕುಮಾರ್‌ ಯಾದವ್‌ 27 ರನ್‌(9 ಎಸೆತ, 3 ಬೌಂಡರಿ, 2 ಸಿಕ್ಸ್‌) ನೆರವಿನಿಂದ ಜಯಗಳಿಸಿತು. ಇದನ್ನೂ ಓದಿ: ಐಪಿಎಲ್‌ನಿಂದ ಬ್ಯಾನ್‌ ಮಾಡಿ – ರಿಯಾನ್‌ ಪರಾಗ್‌ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್‌


    ಕೋಲ್ಕತ್ತಾ ಆರಂಭದಲ್ಲೇ 2 ವಿಕೆಟ್‌ ಕಳೆದುಕೊಂಡಿತ್ತು. 74 ರನ್‌ಗಳಿಸುವಷ್ಟರಲ್ಲೇ 6 ಪ್ರಮುಖ ವಿಕೆಟ್‌ ಕಳೆದುಕೊಂಡಿತ್ತು. ಇಂಪ್ಯಾಕ್ಟ್‌ ಪ್ಲೇಯರ್‌ ರಘುವಂಶಿ 26 ರನ್‌, ರಮನ್‌ದೀಪ್‌ ಸಿಂಗ್‌ 22 ರನ್‌ ಹೊಡೆದು ಔಟಾದರು.

    ಐಪಿಎಲ್‌ ಪಾದಾರ್ಪಣೆ ಮಾಡಿದ ಅಶ್ವನಿ ಕುಮಾರ್‌ 3 ಓವರ್‌ ಎಸೆದು 4 ವಿಕೆಟ್‌ ಕಿತ್ತು ಕೋಲ್ಕತ್ತಕ್ಕೆ ದೊಡ್ಡ ಹೊಡೆತ ನೀಡಿದರು. ದೀಪಕ್‌ ಚಹರ್‌ 2 ವಿಕೆಟ್‌ ಕಿತ್ತರೆ ಬೌಲ್ಟ್‌, ದೀಪಕ್‌ ಚಹರ್‌, ಪಾಂಡ್ಯ, ವಿಘ್ನೇಶ್‌ ಪುತೂರ್‌, ಸ್ಯಾಂಟ್ನರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • ಪ್ರೀತಿ, ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ ಸುನಿಲ್‌ ನರೇನ್

    ಪ್ರೀತಿ, ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ ಸುನಿಲ್‌ ನರೇನ್

    ಚೆನ್ನೈ: ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) ತಂಡದ ಸ್ಪಿನ್ ಮಾಂತ್ರಿಕ ಸುನಿಲ್ ನರೇನ್ (Sunil Naraine) ಅವರು ಪ್ರೀತಿ ಹಾಗೂ ಬೆಂಬಲ ನೀಡಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

    ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕೆಕೆಆರ್ ಹಾಗೂ ಶಾರುಖ್‌ ಖಾನ್‌ ಸರ್ ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದೇ ವೇಳೆ ಸಿಎಸ್‌ಕೆ ಹಾಗೂ ಎಂಎಸ್‌ ಧೋನಿ ಅಭಿಮಾನಿಗಳಿಗೂ ವಿಶೇಷ ಕೃತಜ್ಞತೆಗಳನ್ನು ಸುನಿಲ್‌ ಅವರು ಸಲ್ಲಿಸಿದ್ದಾರೆ.

    https://twitter.com/Sunilnarine_74/status/1794954511976648726

    ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡಗಳ ನಡುವಿನ IPL 2024 ರ ಫೈನಲ್ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಕೆಕೆಆರ್ ತಂಡವು ಎಸ್‌ಆರ್‌ಹೆಚ್‌ ವಿರುದ್ಧ ಭರ್ಜರಿ ಜಯಗಳಿಸುವ ಮೂಲಕ 17ನೇ ಆವೃತ್ತಿಯ ಚಾಂಪಿಯನ್‌ ಆಗಿ ಹೊರಹೊಮ್ಮಿತು.

    ಐಪಿಎಲ್ 2024 ರ ಆವೃತ್ತಿಯ ಉದ್ದಕ್ಕೂ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ತಮ್ಮ ಅದ್ಭುತ ಪ್ರದರ್ಶನಗಳನ್ನು ಪ್ರದರ್ಶಿಸುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್‌ನ ಸುನಿಲ್ ನರೇನ್ ಅವರು ಅಭೂತಪೂರ್ವ ಮೂರನೇ ಬಾರಿಗೆ ಪ್ರತಿಷ್ಠಿತ ಮೋಸ್ಟ್ ವ್ಯಾಲ್ಯುವೆಬಲ್ ಪ್ಲೇಯರ್ (MVP) ಪ್ರಶಸ್ತಿಯನ್ನು‌ ಮುಡಿಗೇರಿಸಿಕೊಂಡರು. ಇದನ್ನೂ ಓದಿ: IPL 2024: ಚಾಂಪಿಯನ್‌ KKRಗೆ 20 ಕೋಟಿ ರೂ., ಆರೆಂಜ್‌, ಪರ್ಪಲ್‌ ಕ್ಯಾಪ್‌‌ ಗೆದ್ದವ್ರಿಗೆ ಸಿಕ್ಕಿದ್ದೆಷ್ಟು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್‌

    ಐಪಿಎಲ್ 2024 ರ ಅಂತಿಮ ದಿನವಾದ ನಿನ್ನೆ (ಮೇ 26 ರಂದು) ತನ್ನ ಜನ್ಮದಿನವನ್ನು ಆಚರಿಸಿಕೊಂಡ ನರೇನ್, 14 ಇನ್ನಿಂಗ್ಸ್‌ಗಳಲ್ಲಿ 179.85 ಸ್ಟ್ರೈಕ್ ರೇಟ್‌ನಲ್ಲಿ ಅದ್ಭುತ ಶತಕ ಮತ್ತು ಮೂರು ಅರ್ಧ ಶತಕಗಳನ್ನು ಒಳಗೊಂಡಂತೆ 488 ರನ್ ಗಳಿಸುವ ಮೂಲಕ ತಮ್ಮ ಬ್ಯಾಟಿಂಗ್ ಪರಾಕ್ರಮವನ್ನು ಪ್ರದರ್ಶಿಸಿದರು. ಸುನಿಲ್ ನರೈನ್ 33 ಸಿಕ್ಸರ್‌ಗಳು ಮತ್ತು 50 ಬೌಂಡರಿಗಳ ಮೂಲಕ 17ನೇ ಆವೃತ್ತಿ IPLನಲ್ಲಿ ಬ್ಯಾಟಿಂಗ್‌ನಲ್ಲಿ ಮಿಂಚುವ ಮೂಲಕ KKR ಚಾಂಪಿಯನ್ ಆಗಲು ಕಾರಣರಾದರು. ಸನ್‌ರೈಸರ್ಸ್ ಹೈದರಾಬಾದ್‌ನ ಟ್ರಾವಿಸ್ ಹೆಡ್, ಪ್ಯಾಟ್ ಕಮ್ಮಿನ್ಸ್ ಮತ್ತು ಅಭಿಷೇಕ್ ಶರ್ಮಾ ಅವರ ತೀವ್ರ ಪೈಪೋಟಿಯ ಹೊರತಾಗಿಯೂ , ನರೇನ್ ಲೀಡರ್‌ಬೋರ್ಡ್‌ನ ಅಗ್ರಸ್ಥಾನದಲ್ಲಿ ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡರು.

  • IPL 2024: ಕಳೆದ 6 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್!

    IPL 2024: ಕಳೆದ 6 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್!

    – ಸಾಧಕರ ಎಲೈಟ್‌ ಲಿಸ್ಟ್‌ ಸೇರಿದ ಕೆಕೆಆರ್‌
    – ಆರ್‌ಸಿಬಿ ಹೊಗಳಿದ ಆಂಡ್ರೆ ರಸ್ಸೆಲ್‌

    ಅಹಮದಾಬಾದ್‌: ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ 4ನೇ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿರುವ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆ ಎಂದು ಕ್ರಿಕೆಟ್‌ ತಜ್ಞರು ಭವಿಷ್ಯ ನುಡಿದಿದ್ದಾರೆ. ಏಕೆಂದರೆ ಕಳೆದ 6 ವರ್ಷಗಳಲ್ಲಿ ನಡೆದ ಐಪಿಎಲ್‌ ಆವೃತ್ತಿಗಳಲ್ಲಿ ಐಪಿಎಲ್‌ ಕ್ವಾಲಿಫೈರ್‌-1 ನಲ್ಲಿ ಗೆದ್ದ ತಂಡಗಳೇ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

    2018ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್‌, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್‌ ಟೈಟಾನ್ಸ್‌, 2023ರಲ್ಲಿ ಸಿಎಸ್‌ಕೆ ತಂಡಗಳು ಕ್ವಾಲಿಫೈಯರ್‌-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 17ನೇ ಆವೃತ್ತಿಯ ಕ್ವಾಲಿಫೈಯರ್‌-1 ನಲ್ಲಿ ಗೆದ್ದು ಫೈನಲ್‌ ಪ್ರವೇಶಿಸಿರುವ ಕೆಕೆಆರ್‌ ಚಾಂಪಿಯನ್‌ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ರಾಜಸ್ಥಾನ್‌ಗೆ ಇಂದು ರಾಯಲ್‌ ಚಾಲೆಂಜ್‌ – ಮೋದಿ ಅಂಗಳದಲ್ಲಿ ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಗೆಲುವು?

    ದಿಗ್ಗಜ ತಂಡಗಳ ಎಲೈಟ್‌ ಪಟ್ಟಿ ಸೇರಿದ ಕೆಕೆಆರ್‌:
    17ನೇ ಆವೃತ್ತಿಯಲ್ಲಿ ನಾಲ್ಕನೇ ಬಾರಿಗೆ ಫೈನಲ್‌ ಪ್ರವೇಶಿಸಿರುವ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವು ಹೆಚ್ಚು ಬಾರಿ ಐಪಿಎಲ್‌ ಫೈನಲ್‌ ಪ್ರವೇಶಿಸಿದ ತಂಡಗಳ ಎಲೈಟ್‌ ಪಟ್ಟಿ ಸೇರಿದೆ. ಈ ಪಟ್ಟಿಯಲ್ಲಿ ಸಿಎಸ್‌ಕೆ ಅಗ್ರಸ್ಥಾನದಲ್ಲಿದೆ. ಸಿಎಸ್‌ಕೆ 10 ಬಾರಿ ಫೈನಲ್‌ ಪ್ರವೇಶಿಸಿದ್ದರೆ ಮುಂಬೈ 6 ಬಾರಿ, ಕೋಲ್ಕತ್ತಾ ನೈಟ್‌ರೈಡರ್ಸ್‌ 4 ಬಾರಿ ಹಾಗೂ ಆರ್‌ಸಿಬಿ 3 ಬಾರಿ ಫೈನಲ್‌ ಪ್ರವೇಶಿಸಿದ ತಂಡಗಳಾಗಿವೆ. ಇದನ್ನೂ ಓದಿ: ಆರ್‌ಸಿಬಿಗಾಗಿ ಬಿಡ್‌ ಮಾಡಿದಾಗ, ನನ್ನಿಂದ ಉತ್ತಮ ಆಯ್ಕೆ ಸಾಧ್ಯವಿಲ್ಲವೆಂದು ನನ್ನ ಆಂತರಿಕ ಪ್ರವೃತ್ತಿ ಹೇಳ್ತಿತ್ತು: ಮಲ್ಯ

    ಆರ್‌ಸಿಬಿ ಹೊಗಳಿದ ರಸ್ಸೆಲ್‌:
    ಇನ್ನೂ ಕೆಕೆಆರ್‌ ಗೆಲುವಿನ ನಂತರ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಆಲ್‌ರೌಂಡರ್‌ ಆಂಡ್ರೆ ರಸ್ಸೆಲ್‌, ಪ್ಲೇ ಆಫ್‌ ಪ್ರವೇಶಿಸಿರುವ ಆರ್‌ಸಿಬಿ ತಂಡವನ್ನ ಹೊಗಳಿದ್ದಾರೆ. ಆರ್‌ಸಿಬಿ ಉತ್ತಮ ಕ್ರಿಕೆಟ್‌ ಆಡುತ್ತಿದೆ. ಅವರ ಆಟದಲ್ಲಿ ವೇಗವನ್ನು ಕಂಡುಕೊಂಡಿದೆ. ನಾವು ಫೈನಲ್‌ನಲ್ಲಿ ಯಾವುದೇ ತಂಡವನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ನುಡಿದಿದ್ದಾರೆ.

    ಸೋಮವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ ರೈಸರ್ಸ್‌ ತಂಡವು 159 ರನ್‌ ಬಾರಿಸಿತ್ತು. ಗೆಲ್ಲಲು 160 ರನ್‌ಗಳ ಗುರಿ ಪಡೆದ ಕೋಲ್ಕತ್ತಾ ಇನ್ನೂ 38 ಎಸೆತ ಬಾಕಿ ಇರುವಂತೆಯೇ 2 ವಿಕೆಟ್‌ ನಷ್ಟಕ್ಕೆ 164 ರನ್‌ ಹೊಡೆಯುವ ಮೂಲಕ ಜಯಗಳಿಸಿತು.‌ ಇಲ್ಲಿಯವರೆಗೆ 2012, 2014, 2021ರಲ್ಲಿ ಕೋಲ್ಕತ್ತಾ ಫೈನಲ್‌ ಪ್ರವೇಶಿಸಿತ್ತು. 2012 ಮತ್ತು 2014ರಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

  • ರನ್‌ ಮಳೆಯಲ್ಲಿ ಪಂಜಾಬ್‌ಗೆ 8 ವಿಕೆಟ್‌ಗಳ ಜಯ – ಚೇಸಿಂಗ್‌ನಲ್ಲಿ ಆರ್‌ಸಿಬಿ ದಾಖಲೆ ಸರಿಗಟ್ಟಿದ ಕಿಂಗ್ಸ್‌

    ರನ್‌ ಮಳೆಯಲ್ಲಿ ಪಂಜಾಬ್‌ಗೆ 8 ವಿಕೆಟ್‌ಗಳ ಜಯ – ಚೇಸಿಂಗ್‌ನಲ್ಲಿ ಆರ್‌ಸಿಬಿ ದಾಖಲೆ ಸರಿಗಟ್ಟಿದ ಕಿಂಗ್ಸ್‌

    ಕೋಲ್ಕತ್ತಾ: ಜಾನಿ ಬೈರ್‌ಸ್ಟೋವ್‌ (Jonny Bairstow) ಭರ್ಜರಿ ಶತಕ ಹಾಗೂ ಶಶಾಂಕ್‌ ಸಿಂಗ್‌, ಪ್ರಭ್‌ ಸಿಮ್ರನ್‌ಸಿಂಗ್‌ ಸ್ಫೋಟಕ ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ ಪಂಜಾಬ್‌ ಕಿಂಗ್ಸ್‌ (Punjab Kings) ತಂಡವು ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಅಲ್ಲದೇ ಐಪಿಎಲ್‌ ಇತಿಹಾಸದಲ್ಲಿ ಚೇಸಿಂಗ್‌ನಲ್ಲಿ ತಂಡವೊಂದು ಗಳಿಸಿದ ಗರಿಷ್ಠ ರನ್‌ ಇದಾಗಿದೆ. ಇತ್ತೀಚೆಗೆ ಸನ್‌ ರೈರ್ಸ್‌ ಹೈದರಾಬಾದ್‌ (SRH) ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ (RCB) ಚೇಸಿಂಗ್‌ನಲ್ಲಿ 262 ರನ್‌ ಗಳಿಸಿತ್ತು. ಇದು ದಾಖಲೆಯಾಗಿತ್ತು. ಇದೀಗ ಪಂಜಾಬ್‌ ಕಿಂಗ್ಸ್‌ ಸಹ 262 ರನ್‌ ಗಳಿಸಿ ಆರ್‌ಸಿಬಿ ದಾಖಲೆ ಸರಿಗಟ್ಟಿದೆ.

    262 ರನ್‌ಗಳ ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಪಂಜಾಬ್‌ ಕಿಂಗ್ಸ್‌ ಆರಂಭದಿಂದಲೇ ಸ್ಫೋಟಕ ಇನ್ನಿಂಗ್ಸ್‌ ಶುರು ಮಾಡಿತ್ತು. ಮೊದಲ ವಿಕೆಟ್‌ಗೆ 6 ಓವರ್‌ಗಳಲ್ಲಿ ಬರೋಬ್ಬರಿ 93 ರನ್‌ ಚಚ್ಚಿತ್ತು. ಆರಂಭಿಕ ಪ್ರಭ್‌ ಸಿಮ್ರನ್‌ ಸಿಂಗ್‌ (Prabhsimran Singh) 20 ಎಸೆತಗಳಲ್ಲಿ 54 ರನ್‌ (5 ಸಿಕ್ಸರ್‌, 4 ಬೌಂಡರಿ) ರನ್‌ ಚಚ್ಚಿ ಔಟಾದರು. ಈ ಬೆನ್ನಲ್ಲೇ 26 ರನ್‌ ಗಳಿಸಿದ್ದ ರೀಲಿ ರೋಸೋ ಸಹ ಪೆವಿಲಿಯನ್‌ಗೆ ಮರಳಿದರು. ಬಳಿಕ ಜಾನಿ ಬೈರ್‌ಸ್ಟೋವ್‌ ಜೊತೆಗೂಡಿದ ಶಶಾಂಕ್‌ ಸಿಂಗ್‌ (Shashank Singh) ಕೆಕೆಆರ್‌ ಬೌಲರ್‌ಗಳ ವಿರುದ್ಧ ಬೆಂಕಿ-ಬಿರುಗಾಳಿಯಂತೆ ಬ್ಯಾಟಿಂಗ್‌ ನಡೆಸಿದರು. ಪರಿಣಾಮ ಪಂಬಾಜ್‌ 18.4 ಓವರ್‌ಗಳಲ್ಲೇ 262 ರನ್‌ ಚಚ್ಚಿ ವಿಜಯಮಾಲೆ ಹಾಕಿಕೊಂಡಿತು.

    ಪಂಜಾಬ್‌ ಪರ ಜಾನಿ ಬೈರ್‌ಸ್ಟೋವ್‌ 48 ಎಸೆತಗಳಲ್ಲಿ ಅಜೇಯ 108 ರನ್‌ (9 ಸಿಕ್ಸರ್‌, 8 ಬೌಂಡರಿ), ಶಶಾಂಕ್‌ ಸಿಂಗ್‌ 68 ರನ್‌ (8 ಸಿಕ್ಸರ್‌, 2 ಬೌಂಡರಿ) ಸಿಡಿಸಿ ತಂಡದ ಗೆಲುವಿಗೆ ನೆರವಾದರು.

    ರನ್‌ ಏರಿದ್ದು ಹೇಗೆ?
    21 ಎಸೆತ – 50 ರನ್‌
    44 ಎಸೆತ – 100 ರನ್‌
    66 ಎಸೆತ – 150 ರನ್‌
    90 ಎಸೆತ – 200 ರನ್‌
    112 ಎಸೆತ – 262 ರನ್‌

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಕೆಕೆಆರ್‌ ಬ್ಯಾಟರ್ಸ್‌ಗಳು ಪಂಬಾಜ್‌ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಚೆಂಡಾಡಿದರು. ಆರಂಭಿಕರಾಗಿ ಕಣಕ್ಕಿಳಿದ ಸುನೀಲ್‌ ನರೇನ್‌ ಮತ್ತು ಪಿಲ್‌ ಸಾಲ್ಟ್‌ (Phil Salt) ಜೋಡಿ ಸಿಕ್ಸರ್‌ ಬೌಂಡರಿಗಳ ಅಬ್ಬರ ಶುರು ಮಾಡಿತು. ಮೊದಲ ವಿಕೆಟ್‌ಗೆ ಈ ಜೋಡಿ 10.2 ಓವರ್‌ಗಳಲ್ಲಿ 138 ರನ್‌ ಸಿಡಿಸಿತ್ತು.

    ಸುನೀಲ್‌ ನರೇನ್‌ 32 ಎಸೆತಗಳಲ್ಲಿ ಸ್ಫೋಟಕ 71 ರನ್‌ (9 ಸಿಕ್ಸರ್‌, 4 ಬೌಂಡರಿ) ಚಚ್ಚಿದರೆ, ಪಿಲ್‌ ಸಾಲ್ಟ್‌ 37 ಎಸೆಗಳಲ್ಲಿ 75 ರನ್‌ ಬಾರಿಸಿ ಪೆವಿಲಿಯನ್‌ಗೆ ಮರಳಿದರು. ನಂತರ ಕಣಕ್ಕಿಳಿದ ವೆಂಕಟೇಶ್‌ ಅಯ್ಯರ್‌ 33 ರನ್‌, ಆಂಡ್ರೆ ರಸ್ಸೆಲ್‌ 24 ರನ್‌, ಶ್ರೇಯಸ್‌ ಅಯ್ಯರ್‌ ಸ್ಪೋಟಕ 28 ರನ್‌, ರಿಂಕು ಸಿಂಗ್‌ 5 ರನ್‌, ರಮಣದೀಪ್‌ ಸಿಂಗ್‌ 6 ರನ್‌ ಗಳ ಕೊಡುಗೆ ನೀಡಿದರು.

    ಕೆಕೆಆರ್‌ ಪರ ಅರ್ಷ್‌ದೀಪ್‌ ಸಿಂಗ್‌ 2 ವಿಕೆಟ್‌, ಸ್ಯಾಮ್‌ ಕರ್ರನ್‌, ಹರ್ಷಲ್‌ ಪಟೇಲ್‌ ಮತ್ತು ರಾಹುಲ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ರನ್‌ ಏರಿದ್ದು ಹೇಗೆ?
    23 ಎಸೆತ – 50 ರನ್‌
    48 ಎಸೆತ – 100 ರನ್‌
    71 ಎಸೆತ – 150 ರನ್‌
    93 ಎಸೆತ – 200 ರನ್‌
    120 ಎಸೆತ – 261 ರನ್‌

  • IPL 2024: ಆರ್‌ಸಿಬಿಗೆ ಕೂಡಿ ಬಾರದ ಗ್ರೀನ್ ಜೆರ್ಸಿ – ಗೆಲುವಿಗಿಂತ ಸೋಲೇ ಹೆಚ್ಚು; ಇಂದಿನ ಲಕ್‌ ಹೇಗಿದೆ?

    IPL 2024: ಆರ್‌ಸಿಬಿಗೆ ಕೂಡಿ ಬಾರದ ಗ್ರೀನ್ ಜೆರ್ಸಿ – ಗೆಲುವಿಗಿಂತ ಸೋಲೇ ಹೆಚ್ಚು; ಇಂದಿನ ಲಕ್‌ ಹೇಗಿದೆ?

    ಕೋಲ್ಕತ್ತಾ: ಫಾಫ್ ಡು ಪ್ಲೆಸಿಸ್ (Faf du Plessis) ನಾಯಕತ್ವದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಇಂದು (ಏ.21) ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಸೆಣಸಲಿದೆ.

    ಕೋಲ್ಕತ್ತಾದ ಈಡನ್‌ ಗಾರ್ಡನ್‌ (Eden Gardens) ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಮಧ್ಯಾಹ್ನ 3:30 ಗಂಟೆಗೆ ಆರಂಭವಾಗಲಿದೆ. ಆರ್​ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ನೀಲಿ ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ (Green Jersey) ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ರೋಹಿತ್‌ ವಿರೋಧ; ಬಿಸಿಸಿಐ ಹೇಳಿದ್ದೇನು? – ಏನಿದು ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌?

    2011ರ ಐಪಿಎಲ್​ನಿಂದಲೂ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ (Green Jersey) ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್​ಸಿಬಿ ಪ್ರತಿ ವರ್ಷ ಐಪಿಎಲ್‌ನಲ್ಲಿ (IPL 2023) ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. ನಮ್ಮ ಸುತ್ತಲಿನ ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿದೆ. ಇದನ್ನೂ ಓದಿ: ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

    ABD

    ಗೆಲುವಿಗಿಂತ ಸೋಲೇ ಹೆಚ್ಚು:
    2011ರಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. 2024ರ ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: IPL 2024: ರನ್ ಹೊಳೆ, ದಾಖಲೆಗಳ ಸುರಿಮಳೆ – ಐಪಿಎಲ್‌ನಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ಸನ್‌ ರೈಸರ್ಸ್‌

    ಪುಟಿದೇಳುತ್ತಾ ಆರ್‌ಸಿಬಿ?
    ಕಳೆದ 7 ಪಂದ್ಯಗಳಲ್ಲಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ ಕೊನೇ ಸ್ಥಾನಕ್ಕೆ ಕುಸಿದಿದೆ. ಇದರಿಂದ ಆರ್‌ಸಿಬಿ ಪ್ಲೇ ಆಫ್‌ ಹಾದಿ ಕಠಿಣವಾಗಿದೆ. ಇನ್ನುಳಿದ ಪಂದ್ಯಗಳಲ್ಲಿ ಆರ್‌ಸಿಬಿ ಉತ್ತಮ ರನ್‌ರೇಟ್‌ನೊಂದಿಗೆ ಗೆಲುವು ಸಾಧಿಸಿದರೆ, ಪ್ಲೇ ಆಫ್‌ ಹಾದಿ ತಲುಪುವ ಸಾಧ್ಯತೆಯಿದೆ. ಹಾಗಾಗಿ ಸತತ ಸೋಲಿನಿಂದ ಕಂಗೆಟ್ಟಿರುವ ಆರ್‌ಸಿಬಿ ಇಂದಾದರೂ ಪುಟಿದೇಳುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

  • RCBಗೆ ಇಂದು ಅಗ್ನಿಪರೀಕ್ಷೆ – ಗೆದ್ದರಷ್ಟೇ ಪ್ಲೆ-ಆಫ್ ಕನಸು ಜೀವಂತ

    RCBಗೆ ಇಂದು ಅಗ್ನಿಪರೀಕ್ಷೆ – ಗೆದ್ದರಷ್ಟೇ ಪ್ಲೆ-ಆಫ್ ಕನಸು ಜೀವಂತ

    ಮುಂಬೈ: ಐಪಿಎಲ್ ಟೂರ್ನಿಯ ಟಾಪ್ 4 ತಂಡಗಳಲ್ಲಿ ಕಾಣಿಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಇಂದು ನಿರ್ಣಾಯಕ ದಿನ.

    ಐಪಿಎಲ್‌ ಅಂಕಪಟ್ಟಿಯಲ್ಲಿ ಟಾಪ್- 1 ಆಗಿರೋ ಗುಜರಾತ್ ಟೈಟಾನ್ಸ್ ವಿರುದ್ಧ ಡು ಪ್ಲೆಸಿಸ್ ಪಡೆ ಶತಾಯಗತಾಯ ಗೆಲುವು ದಾಖಲಿಸಲೇಬೇಕಿದೆ. ಗೆಲುವಿನ ಹಿಂದೆ ನಾನಾ ಲೆಕ್ಕಾಚಾರಗಳೂ ಇವೆ. ಆರ್‌ಸಿಬಿ ಇಂದಿನ ಪಂದ್ಯ ಗೆದ್ದು, ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ವಿರುದ್ಧ ಸೋತರೆ ಮಾತ್ರವೇ ಆರ್‌ಸಿಬಿ ಪ್ಲೇ-ಆಫ್ ತಲುಪಲಿದೆ. ಇದನ್ನೂ ಓದಿ: ಸ್ಟೋಯಿನಿಸ್ ಸ್ಟನ್‌ ಬೌಲಿಂಗ್, ಡಿ ಕಾಕ್ ದರ್ಬಾರ್‌ – ಪ್ಲೇ ಆಫ್‍ಗೆ ಎರಡನೇ ತಂಡವಾಗಿ ಎಂಟ್ರಿಕೊಟ್ಟ ಲಕ್ನೋ

    IPL 2022 RCB VS SRH 5

    ಏಕೆಂದರೆ ಐಪಿಎಲ್ ಅಂಕಪಟ್ಟಿಯ ಮೊದಲ 4 ತಂಡಗಳಾಗಿ ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್‌ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮೊದಲ 4 ಸ್ಥಾನಗಳಲ್ಲಿವೆ. ಆರ್‌ಸಿಬಿ 5ನೇ ಸ್ಥಾನದಲ್ಲಿದೆ.

    ಇಂದು ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ ಆರ್‌ಸಿಬಿ ಗೆಲ್ಲಲೇಬೇಕಿದೆ. ಒಂದು ವೇಳೆ ರಿಷಭ್ ಪಂತ್ ಬಳಗಕ್ಕೆ, ರೋಹಿತ್ ಬಳಗ ಶರಣಾದರೆ ಆರ್‌ಸಿಬಿ ಪ್ಲೇ-ಆಫ್ ನಿಂದ ಹೊರಬೀಳಲಿದೆ. ಇದನ್ನೂ ಓದಿ: ಐರ್ಲೆಂಡ್ ಪ್ರವಾಸ – ಭಾರತ ತಂಡಕ್ಕೆ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್

    IPL

    ನಿನ್ನೆ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ ವಿರುದ್ಧ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ 2 ರನ್‌ಗಳ ರೋಚಕ ಜಯ ದಾಖಲಿಸಿದೆ. ಕ್ವಿಂಟನ್ ಡಿಕಾಕ್ 140, ರಾಹುಲ್ 68 ರನ್‌ಗಳ ಜೊತೆಯಾಟದಿಂದ ಸೂಪರ್ ಜೈಂಟ್ಸ್ ಬೃಹತ್ 210 ರನ್ ಗಳಿಸಿತ್ತು. ಇದಕ್ಕೆ ಕೋಲ್ಕತ್ತಾ ಕೂಡ ಭರ್ಜರಿ ಆಟವಾಡಿ 208 ರನ್‌ಗಳಿಸಿ, ಮಂಡಿಯೂರಿತು.

  • ಕೆಕೆಆರ್‌ಗೆ ಪಂಚ್‌ ಕೊಟ್ಟ ಪೋವೆಲ್‌- ಡೆಲ್ಲಿ ತಂಡಕ್ಕೆ 4 ವಿಕೆಟ್‌ಗಳ ಜಯ

    ಕೆಕೆಆರ್‌ಗೆ ಪಂಚ್‌ ಕೊಟ್ಟ ಪೋವೆಲ್‌- ಡೆಲ್ಲಿ ತಂಡಕ್ಕೆ 4 ವಿಕೆಟ್‌ಗಳ ಜಯ

    ಮುಂಬೈ: ಕೋಲ್ಕತ್ತಾ ನೈಟ್‌ರೈಡರ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ರೋವ್ಮನ್ ಪೋವೆಲ್ ಹಾಗೂ ಡೇವಿಡ್ ವಾರ್ನರ್ ಅವರ ಬ್ಯಾಟಿಂಗ್ ಅಬ್ಬರದಿಂದ ಡೆಲ್ಲಿ ತಂಡವು ಗೆದ್ದು ಬೀಗಿತು.

    IPL DC VS KKR

    ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 9 ವಿಕೆಟ್ ನಷ್ಟಕ್ಕೆ 146 ರನ್‌ ಗಳಿಸಿದ್ದು, ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 147 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತುವಲ್ಲಿ ಯಶಸ್ವಿಯಾಗಿರುವ ಡೆಲ್ಲಿ ಕ್ಯಾಪಿಟಲ್ಸ್ 19 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 150 ರನ್ ಕಲೆಹಾಕಿ 4 ವಿಕೆಟ್‍ಗಳ ಜಯವನ್ನು ಸಾಧಿಸಿದೆ.

    IPL DC VS KKR 7

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) 7.3 ಓವರ್‌ಗಳಲ್ಲಿ 35 ರನ್‌ಗಳಿಗೆ ತನ್ನ ಮೊದಲ 4 ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಆರನ್ ಫಿಂಚ್ 3 ರನ್, ವೆಂಕಟೇಶ್ ಐಯ್ಯರ್ 6 ರನ್, ಸುನೀಲ್ ನರೈನ್ ಗೋಲ್ಡನ್ ಡಕ್ ಔಟ್ ಮತ್ತು ಬಾಬಾ ಇಂದ್ರಜಿತ್ 6 ರನ್ ಗಳಿಸಿ ಔಟ್ ಆದರು.

    IPL DC VS KKR 9

    ಹೀಗೆ ಒಂದೆಡೆ ವಿಕೆಟ್‌ಗಳು ಉರುಳುತ್ತಿದ್ದರೆ, ಮತ್ತೊಂದೆಡೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ತಂಡದ ನಾಯಕ ಶ್ರೇಯಸ್ ಐಯ್ಯರ್ 37 ಎಸೆತಗಳಲ್ಲಿ 42 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಭರವಸೆಯ ಆಟಗಾರ ಆಂಡ್ರೆ ರಸೆಲ್ ಶೂನ್ಯಕ್ಕೆ ನಿರ್ಗಮಿಸಿದ್ದು, ತಂಡಕ್ಕೆ ಮತ್ತಷ್ಟು ಆಘಾತ ತಂದೊಡ್ಡಿತು. ಟಿಮ್ ಸೌಥಿ ಹಾಗೂ ಹರ್ಷಿತ್ ರಾಣಾ ಇಬ್ಬರೂ ಇದೇ ಸಮಯಕ್ಕೆ ಡಕ್ ಔಟ್ ಆದರು. 6 ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ ರಾಣಾ 34 ಎಸೆತಗಳಲ್ಲಿ 57 ರನ್ ಆಕರ್ಷಕ ಅರ್ಧಶತಕ ಗಳಿಸಿದರು. ನಿತೀಶ್ ರಾಣಾರ ಜವಾಬ್ದಾರಿಯುತ ಆಟವು ತಂಡದ ಮೊತ್ತವನ್ನು 140 ಗಡಿದಾಟಿಸುವಲ್ಲಿ ಯಶಸ್ವಿಯಾಯಿತು.

    IPL DC VS KKR 5

    ಆರಂಭದಲ್ಲೇ ಟಾಸ್ ಗೆದ್ದು ಫೀಲ್ಡಿಂಗ್‌ಗೆ ಇಳಿದ ಡೆಲ್ಲಿ ತಂಡವು ಭರ್ಜರಿ ಕೆಕೆಆರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ತಂಡದ ಬೌಲರ್‌ಗಳು 150 ರನ್ ಗಡಿಯೊಳಗೆ ಕೆಕೆಆರ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಬೌಲಿಂಗ್‌ನಲ್ಲಿ ಮುಸ್ತಾಫಿಜೋರ್ ರೆಹಮಾನ್ 3, ಚೇತನ್ ಸಕರ್ಯ, ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್‌ಗಳಿಸಿದರೆ, ಕುಲದೀಪ್ 3 ಓವರ್‌ನಲ್ಲಿ ನಾಲ್ಕು ವಿಕೆಟ್ ಕಬಳಿಸಿದರು.

    IPL DC VS KKR 8

    ಇನ್ನೂ ಬ್ಯಾಟಿಂಗ್‌ನಲ್ಲು ಅಬ್ಬರಿಸಿದ ಡೆಲ್ಲಿ ತಂಡ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಿದ್ದರೂ ರನ್‌ಗಳ ಕೊರತೆಯಾಗದಂತೆ ನೋಡಿಕೊಂಡಿತು.‌ ಪೃಥ್ವಿಶಾ ಔಟಾದ ಬಳಿಕವು ಕೆಕೆಆರ್ ಬೌಲರ್‌ಗಳನ್ನು ಬೆಂಡೆತ್ತಿದ ಡೇವಿಡ್ ವಾರ್ನರ್ 26 ಎಸೆತಗಳಲ್ಲಿ 42 ರನ್‌ಗಳಿಸಿದರು. ಮಿಚೇಲ್ ಮಾರ್ಶ್ 13 ರನ್, ಲಲಿತ್ ಯಾದವ್ 22 ರನ್‌ಗಳನ್ನು ಪೇರಿಸುವ ಮೂಲಕ ರನ್ ಸ್ಥಿರತೆ ಕಾಯ್ದುಕೊಂಡರು. ಈ ನಡುವೆ ನಾಯಕ ರಿಷಬ್ ಪಂತ್ 2ನೇ ರನ್ನಿಗೆ ಔಟಾಗಿದ್ದು, ತಂಡಕ್ಕೆ ಪೆಟ್ಟು ನೀಡಿದಂತಿತ್ತು. ಇನ್ನೇನು ಡೆಲ್ಲಿ ತಂಡವು ಸೋಲುವುದು ಖಚಿತ ಎಂದೇ ಭಾವಿಸಲಾಗಿತ್ತು.

    IPL DC VS KKR 4

    ಆದರೆ, ಡೆಲ್ಲಿ ತಂಡಕ್ಕೆ ಗೆಲುವಿನ ಕನಸು ಚಿಗುರಿಸಿದ ರೊವ್ಮನ್ ಪೋವೆಲ್ ತಮ್ಮ ಭರ್ಜರಿ ಬ್ಯಾಟಿಂಗ್‌ನಿಂದ ಡೆಲ್ಲಿ ತಂಡವನ್ನು ಗೆಲುವಿನ ಮೆಟ್ಟಿಲೇರಿಸಿದರು. 7ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಪೋವೆಲ್ ಕೇವಲ 16 ಎಸೆತಗಳಲ್ಲಿ 33 ರನ್‌ಗಳ (1 ಫೋರ್, 3 ಸಿಕ್ಸರ್) ಸಿಡಿಸುವ ಮೂಲಕ ತಮ್ಮ ಡೆಲ್ಲಿ ತಂಡದ ಗೆಲುವಿಗೆ ಕಾರಣರಾದು. ಇದಕ್ಕೆ ಬ್ಯಾಟಿಂಗ್ ಸಾಥ್ ನೀಡಿದ ಶಾರ್ದೂಲ್‌ ಠಾಕೂರ್ ಸಹ 17 ಎಸೆತಗಳಲ್ಲಿ 24 ರನ್ ಪೇರಿಸಿ ಜವಾಬ್ದಾರಿ ಮೆರೆದರು. ಇದೆಲ್ಲರ ಫಲವಾಗಿ 147 ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ತಂಡವು 19ನೇ ಓವರ್‌ಗೆ 150 ರನ್‌ಗಳಿಸುವ ಮೂಲಕ ತನ್ನ ಗೆಲುವು ದಾಖಲಿಸಿತು.

  • ಬಟ್ಲರ್ ಬೊಂಬಾಟ್ ಶತಕ – ರಾಜಸ್ಥಾನ್ ರಾಯಲ್ಸ್‌ಗೆ 7ರನ್‌ಗಳ ರೋಚಕ ಜಯ

    ಬಟ್ಲರ್ ಬೊಂಬಾಟ್ ಶತಕ – ರಾಜಸ್ಥಾನ್ ರಾಯಲ್ಸ್‌ಗೆ 7ರನ್‌ಗಳ ರೋಚಕ ಜಯ

    ಮುಂಬೈ: ಪ್ರಸಕ್ತ ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ಇಂಗ್ಲೆಂಡ್ ಆಟಗಾರ ಜಾಸ್ ಬಟ್ಲರ್ (103) ಸ್ಪೋಟಕ ಶತಕ, ಸಂಜೂ ಸ್ಯಾಮ್ಸನ್(38) ಜವಾಬ್ದಾರಿಯ ಬ್ಯಾಟಿಂಗ್ ನೆರವಿನಿಂದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ರೋಚಕ 7 ರನ್‌ಗಳ ಜಯ ಸಾಧಿಸಿತು.

    ಬ್ರಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. ತಂಡದ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಬಟ್ಲರ್ 103, ಸಂಜೂ ಸ್ಯಾಮನ್ಸ್ 38 ಹಾಗೂ ಹೆಟ್ಮಾಯೆರ್ ಅಜೇಯ 26 ಬ್ಯಾಟಿಂಗ್ ಪ್ರದರ್ಶಿಸಿದರು. ಇದರಿಂದಾಗಿ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 217 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಇದನ್ನೂ ಓದಿ: ಐಪಿಎಲ್ 2022: ದೆಹಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರ ಮಿಚೆಲ್ ಮಾರ್ಷ್‍ಗೆ ಕೋವಿಡ್ ದೃಢ

    RR

    ದಾಖಲೆ ಶತಕ: 15ನೇ ಆವೃತ್ತಿಯಲ್ಲಿ ಫಾರ್ಮ್ನಲ್ಲಿರುವ ಜಾಸ್ ಬಟ್ಲರ್ 103 ರನ್ (61 ಬಾಲ್, 9 ಬೌಂಡರಿ, 5 ಸಿಕ್ಸರ್) ಮತ್ತೊಮ್ಮೆ ಅಬ್ಬರಿಸಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ಬೌಲಿಂಗ್ ದಾಳಿಯನ್ನ ಧೂಳಿಪಟ ಮಾಡಿದ ಬಟ್ಲರ್, ಬೌಂಡರಿ, ಸಿಕ್ಸರ್‌ಗಳನ್ನು ಸಿಡಿಸಿದರು. ಬೌಲರ್‌ಗಳ ಮೇಲೆ ಸಂಪೂರ್ಣ ಪ್ರಾಬಲ್ಯ ಸಾಧಿಸಿದ ಬಟ್ಲರ್, ಐಪಿಎಲ್ ಆವೃತ್ತಿಯ 3ನೇ ಹಾಗೂ ಈ ಸೀಸನ್‌ನ 2ನೇ ಶತಕ ದಾಖಲಿಸಿ ಮಿಂಚಿದರು. ಇಡೀ ಐಪಿಎಲ್ ಆವೃತ್ತಿಯಲ್ಲಿ ಒಂದೇ ಐಪಿಎಲ್‌ನಲ್ಲಿ 2 ಬಾರಿ ಶತಕ ಸಿಡಿಸಿ ದಾಖಲೆಯನ್ನೂ ನಿರ್ಮಿಸಿದರು.  ಇದನ್ನೂ ಓದಿ: 2023ರಲ್ಲಿ ಆರಂಭಗೊಳ್ಳಲಿದೆ 6 ತಂಡಗಳ ನಡುವಿನ ಮಹಿಳಾ ಐಪಿಎಲ್

    KKR VS RR IPL 2022.JPG 02

    ಜಾಸ್ ಬಟ್ಲರ್ ಅವರಿಗೆ ಉತ್ತಮ ಸಾಥ್ ನೀಡಿದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 24(18) ಮೊದಲ ವಿಕೆಟ್‌ಗೆ 97 ರನ್‌ಗಳಿಸಿ ಉತ್ತಮ ಆರಂಭ ಒದಗಿಸಿದರು. ನಂತರ ಬಂದ ನಾಯಕ ಸಂಜೂ ಸ್ಯಾಮ್ಸನ್ 38(19) ಬಿರುಸಿನ ಆಟದ ಮೂಲಕ ತಂಡದ ರನ್‌ವೇಗವನ್ನು ಹೆಚ್ಚಿಸಿದರು. ಅಲ್ಲದೆ ಬಟ್ಲರ್ ಹಾಗೂ ಸ್ಯಾಮ್ಸನ್ 2ನೇ ವಿಕೆಟ್‌ಗೆ 67 ರನ್‌ಗಳ ಜೊತೆಯಾಟವಾಡಿದರು. ಮಧ್ಯಮ ಕ್ರಮಾಂಕದಲ್ಲಿ ಬಂದ ಶಿಮ್ರಾನ್ ಹೆಟ್ಮಾಯೆರ್ 26*(13) ಉಪಯುಕ್ತ ಕಾಣಿಕೆ ನೀಡಿದರೆ. ರಿಯಾನ್ ಪರಾಗ್(5) ಹಾಗೂ ಕರುಣ್ ನಾಯರ್(3) ಬಹುಬೇಗನೆ ವಿಕೆಟ್ ಒಪ್ಪಿಸಿ ಹೊರನಡೆದರು. ಕೆಕೆಆರ್ ಪರ ಸುನೀಲ್ ನರೈನ್ 2/21, ಪ್ಯಾಟ್ ಕಮ್ಮಿನ್ಸ್ 1/50, ಶಿವಂ ಮಾವಿ 1/34 ಹಾಗೂ ಆಂಡ್ರೆ ರಸೆಲ್ 1/29 ವಿಕೆಟ್ ಪಡೆದರು.

    KKR VS RR IPL 2022

    ಐಯ್ಯರ್, ಫಿಂಚ್ ಮಿಂಚಿನಾಟ ವ್ಯರ್ಥ: ರಾಜಸ್ಥಾನ್ ನೀಡಿದ 217 ರನ್‌ಗಳ ಗುರಿ ಬೆನ್ನತ್ತಿದ್ದ ಕೆಕೆಆರ್ ತಂಡ ಆರಂಭದಲ್ಲೇ ಎಡವಿತು. ಮೊದಲ ಓವರ್ ಮೊದಲ ಬಾಲ್‌ನಲ್ಲೇ ಸಿಂಗಲ್ ತೆಗೆದುಕೊಳ್ಳುವ ಪ್ರಯತ್ನದಲ್ಲಿ ಸುನೀಲ್ ನರೇನ್ ರನ್‌ಔಟ್‌ಗೆ ಗುರಿಯಾದರು. ನಂತರ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಹಾಗೂ ಫಿಂಚ್ ಜೋಡಿ ಉತ್ತಮ ಪ್ರದರ್ಶನ ನೀಡಿತು. ಆರನ್ ಫಿಂಚ್ 28 ಎಸೆತಗಳಲ್ಲಿ 58 (9 ಬೌಂಡರಿ, 2 ಸಿಕ್ಸರ್) ಗಳಿಸಿ ನಿರ್ಗಮಿಸಿದರು. 2ನೇ ಬ್ಯಾಟಿಂಗ್‌ನಲ್ಲಿ ಕಣಕ್ಕಿಳಿದ ನಾಯಕ ಶ್ರೇಯಸ್ ಅಯ್ಯರ್ 85 ರನ್ (7 ಬೌಂಡರಿ, 4 ಸಿಕ್ಸರ್) ಗಳಿಸಿ ಆಡುತ್ತಿದ್ದಂತೆಯೇ ಯಜುವೇಂದ್ರ ಚಾಹಲ್‌ಗೆ ತಮ್ಮ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು. ಭರವಸೆಯ ಆಟಗಾರ ಮಧ್ಯಮಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಆಂಡ್ರೆರಸ್ಸಲ್ ಮೊದಲ ಎಸೆತದಲ್ಲೇ ರವಿಚಂದ್ರನ್ ಅಶ್ವಿನ್‌ಗೆ ತಮ್ಮ ವಿಕೆಟ್ ಒಪ್ಪಿಸಿದರು. ಇದು ತಂಡಕ್ಕೆ ಮತ್ತಷ್ಟು ಪೆಟ್ಟು ನೀಡಿತು.

    KKR

    ಕೊನೆಯಲ್ಲಿ ಬಂದ ಉಮೇಶ್ ಯಾದವ್ 9 ಬಾಲ್‌ಗೆ 21 ರನ್‌ಗಳಿಸಿ ಮತ್ತೆ ತಂಡದಲ್ಲಿ ಗೆಲುವಿನ ಕನಸು ಮೂಡಿಸಿದ್ದರು. ಈ ನಡುವೆ ಒಬೆಟ್ ಮಕಾಯ್‌ ಅವರಿಗೆ ವಿಕೆಟ್ ಒಪ್ಪಿಸಿದ್ದರಿಂದ ನಂತರದ ಆಟಗಾರರು ತಂಡವನ್ನು ಮುನ್ನಡೆಸುವಲ್ಲಿ ವಿಫಲಾದರು.

    ರನ್ ಏರಿದ್ದು ಹೇಗೆ?
    3ನೇ ಓವರ್ 25 ರನ್
    4ನೇ ಓವರ್ 40 ರನ್
    19ನೇ ಓವರ್ 199
    20ನೇ ಓವರ್ 217 ರನ್