Tag: ಕೋಲ್ಕತ್ತಾ ವೈದ್ಯೆ ಅತ್ಯಾಚಾರ

  • ಕೋಲ್ಕತ್ತಾ ವೈದ್ಯೆ ಅತ್ಯಾಚಾರಿ ಆರೋಪಿಗೆ ಜಾಮೀನು ನೀಡಬೇಕೆ? – ಸಿಬಿಐ ಪರ ವಕೀಲರ ವಿರುದ್ಧ ಕೋರ್ಟ್‌ ಗರಂ

    ಕೋಲ್ಕತ್ತಾ ವೈದ್ಯೆ ಅತ್ಯಾಚಾರಿ ಆರೋಪಿಗೆ ಜಾಮೀನು ನೀಡಬೇಕೆ? – ಸಿಬಿಐ ಪರ ವಕೀಲರ ವಿರುದ್ಧ ಕೋರ್ಟ್‌ ಗರಂ

    – ವಾದ ಮಂಡಿಸಲು ಕೋರ್ಟ್‌ಗೆ ತಡವಾಗಿ ಬಂದಿದ್ದಕ್ಕೆ ತರಾಟೆ

    ಕೋಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ಕೋರ್ಟ್‌ಗೆ ಸಕಾಲಕ್ಕೆ ಹಾಜರಾಗದಿದ್ದಕ್ಕೆ ಸಿಬಿಐ ತನಿಖಾಧಿಕಾರಿ ಹಾಗೂ ವಕೀಲರ ವಿರುದ್ಧ ಸೀಲ್ದಾ ಕೋರ್ಟ್‌ ಗರಂ ಆಗಿದೆ. ಅತ್ಯಾಚಾರ ಮತ್ತು ಕೊಲೆ ಆರೋಪಿಗೆ ಜಾಮೀನು ನೀಡಬೇಕಾ ಎಂದು ಕೋರ್ಟ್‌ ತರಾಟೆಗೆ ತೆಗೆದುಕೊಂಡಿತು.

    ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆಯಿತು. ಆದರೆ, ಸಿಬಿಐನ ತನಿಖಾಧಿಕಾರಿ ಕೋರ್ಟ್‌ನಲ್ಲಿ ಹಾಜರಿರಲಿಲ್ಲ. ಇತ್ತ ತನಿಖಾ ಸಂಸ್ಥೆಯ ವಕೀಲರು 40 ನಿಮಿಷ ತಡವಾಗಿ ಹಾಜರಾದರು. ಇದರಿಂದ ಕೋಪಗೊಂಡ ನ್ಯಾಯಾಲಯ, ಪ್ರಕರಣದ ಪ್ರಮುಖ ಆರೋಪಿಗೆ ಜಾಮೀನು ನೀಡಬೇಕೆ ಎಂದು ಗರಂ ಆಯಿತು. ತನಿಖಾ ಸಂಸ್ಥೆಯ ಈ ನಡೆ ಆಲಸ್ಯ ಮನೋಭಾವವನ್ನು ತೋರಿಸುತ್ತದೆ ಎಂದು ಚಾಟಿ ಬೀಸಿತು.

    ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಂದ ಪ್ರಕರಣದಲ್ಲಿ ಬಂಧಿತನಾಗಿರುವ ಸಂಜಯ್‌ ರಾಯ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು.

    ರಾಯ್ ಪರ ವಕೀಲರು ಜಾಮೀನಿಗಾಗಿ ವಾದ ಮಂಡಿಸುತ್ತಿದ್ದಂತೆ, ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಪಮೇಲಾ ಗುಪ್ತಾ ಅವರಿಗೆ ಪಬ್ಲಿಕ್ ಪ್ರಾಸಿಕ್ಯೂಟರ್ ತಡವಾಗಿ ಬರುತ್ತಾರೆ ಎಂದು ತಿಳಿಸಲಾಯಿತು. ಅದಕ್ಕೆ ಮ್ಯಾಜಿಸ್ಟ್ರೇಟ್, ನಾನು ಸಂಜಯ್ ರಾಯ್‌ಗೆ ಜಾಮೀನು ನೀಡಬೇಕೇ? ಇದು ಸಿಬಿಐನ ಆಲಸ್ಯ ಮನೋಭಾವ ತೋರಿಸುತ್ತದೆ. ಇದು ಅತ್ಯಂತ ದುರದೃಷ್ಟಕರ ಎಂದು ಗರಂ ಆದರು.

    ವಕೀಲರು ಅಂತಿಮವಾಗಿ ಸುಮಾರು 40 ನಿಮಿಷಗಳ ಕೋರ್ಟ್‌ಗೆ ಬಂದರು. ವಿಳಂಬಕ್ಕೆ ಕಾರಣ ತಿಳಿಸಿದರು. ನಂತರ ವಾದಗಳು ಮುಂದುವರೆದವು. ಎರಡೂ ಕಡೆಯವರ ವಾದ-ಪ್ರತಿವಾದ ಆಲಿಸಿದ ಕೋರ್ಟ್‌ ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತು.

  • ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ತ್ವರಿತ ತೀರ್ಪಿನ ಅಗತ್ಯವಿದೆ: ಮೋದಿ

    ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ತ್ವರಿತ ತೀರ್ಪಿನ ಅಗತ್ಯವಿದೆ: ಮೋದಿ

    ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಮಕ್ಕಳ ಸುರಕ್ಷತೆಯು ಸಮಾಜಕ್ಕೆ ಗಂಭೀರ ಕಾಳಜಿಯ ವಿಷಯವಾಗಿದ್ದು, ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ದೇಶಕ್ಕೆ ತ್ವರಿತ ತೀರ್ಪಿನ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.

    ಸುಪ್ರೀಂ ಕೋರ್ಟ್‌ಗೆ (Supreme Court) 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯಗಳು, ಮಕ್ಕಳ ಸುರಕ್ಷತೆ ಸಮಾಜದ ಗಂಭೀರ ವಿಷಯವಾಗಿದ್ದು ಅವರ ಸುರಕ್ಷತೆಗಾಗಿ ಹಲವು ಕಠಿಣ ಕಾನೂನುಗಳನ್ನು ಮಾಡಲಾಗಿದೆ. ಮಹಿಳೆಯರು ಕಾನೂನುಗಳ ಬಗ್ಗೆ ಅರಿಯುವ ಅಗತ್ಯವಿದೆ ಎಂದರು. ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ನರ್ಸ್‌ ಮೇಲೆ ಅತ್ಯಾಚಾರ – 59ರ ವ್ಯಕ್ತಿ ಬಂಧನ

    ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ 2019 ರಲ್ಲಿ ತ್ವರಿತ ನ್ಯಾಯಾಲಯಗಳ ಕಾನೂನನ್ನು ಅಂಗೀಕರಿಸಲಾಯಿತು. ಇಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಗಳು ಪ್ರಮುಖ ಪಾತ್ರವಹಿಸುತ್ತವೆ. ನಾವು ಈ ಸಮಿತಿಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

    ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಶೀಘ್ರ ತೀರ್ಪು ನೀಡಬೇಕು. ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಎಷ್ಟು ವೇಗವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಯೋ ಅದರಿಂದ ದೇಶದ ಅರ್ಧದಷ್ಟು ಜನಸಂಖ್ಯೆಗೆ ಸುರಕ್ಷತೆಯ ಹೆಚ್ಚಿನ ಭರವಸೆ ಸಿಗುತ್ತದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ಪ್ರಿಯಕರನೊಂದಿಗೆ ಪತ್ನಿಯ ಖಾಸಗಿ ಕ್ಷಣ ವೀಡಿಯೋ ಮಾಡಿ ಹಂಚಿಕೊಂಡ ಪತಿ!

  • ವೈದ್ಯೆ ಅತ್ಯಾಚಾರ-ಕೊಲೆ ಕೇಸ್; ಐಎಂಎ ಸದಸ್ಯತ್ವದಿಂದ ಆರ್‌ಜಿ ಕರ್‌ ಆಸ್ಪತ್ರೆ ಮಾಜಿ ವೈದ್ಯ ಡಾ. ಸಂದೀಪ್‌ ಅಮಾನತು‌

    ವೈದ್ಯೆ ಅತ್ಯಾಚಾರ-ಕೊಲೆ ಕೇಸ್; ಐಎಂಎ ಸದಸ್ಯತ್ವದಿಂದ ಆರ್‌ಜಿ ಕರ್‌ ಆಸ್ಪತ್ರೆ ಮಾಜಿ ವೈದ್ಯ ಡಾ. ಸಂದೀಪ್‌ ಅಮಾನತು‌

    ನವದೆಹಲಿ: ಕೋಲ್ಕತ್ತಾದ (Kolkata Doctor Rape-Murder) ಆರ್‌ಜಿ ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ. ಸಂದೀಪ್ ಘೋಷ್ (Sandip Ghosh) ಅವರ ಸದಸ್ಯತ್ವವನ್ನು ಭಾರತೀಯ ವೈದ್ಯಕೀಯ ಸಂಘ ಅಮಾನತುಗೊಳಿಸಿದೆ.

    ಸೋಮವಾರ ಸುಳ್ಳು ಪತ್ತೆ ಪರೀಕ್ಷೆಗೆ ಒಳಗಾದ ಡಾ. ಘೋಷ್, ಮಹಿಳೆಯ ಶವ ಪತ್ತೆಯಾದಾಗ ಪೊಲೀಸ್ ದೂರು ದಾಖಲಿಸಲು ವಿಫಲವಾದುದೂ ಸೇರಿದಂತೆ ನಿರ್ಲಕ್ಷ್ಯ ಧೋರಣೆ ತಳೆದ ಆರೋಪ ಹೊತ್ತಿದ್ದಾರೆ. ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಹತ್ಯೆಗೆ ಸಂಬಂಧಿಸಿದಂತೆ ಅವರು ಆರೋಪ ಎದುರಿಸುತ್ತಿಲ್ಲ. ಆದರೆ, ಜಾಮೀನು ರಹಿತ ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಪಾಕ್‌-ಚೀನಾ ಯುದ್ಧ, ನಕ್ಸಲರ ದಾಳಿ, ಕೋಮು ಗಲಭೆಗಳಿಗಿಂತ ರಸ್ತೆ ಅಪಘಾತಗಳಲ್ಲಿ ಸಾಯುವವರ ಸಂಖ್ಯೆಯೇ ಹೆಚ್ಚಿದೆ: ಗಡ್ಕರಿ

    ಆದಾಗ್ಯೂ, ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರದ ಆರೋಪಗಳಿವೆ. ಮಾಜಿ ಉದ್ಯೋಗಿಯೊಬ್ಬರು, ಡಾ. ಘೋಷ್ ಅವರು ಮೃತದೇಹಗಳು ಮತ್ತು ಬಯೋಮೆಡಿಕಲ್ ತ್ಯಾಜ್ಯಗಳ ಕಳ್ಳಸಾಗಣೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಸಿಬಿಐ, ಘೋಷ್‌ ಅವರ ಕೋಲ್ಕತ್ತಾದ ಮನೆಯಲ್ಲಿ 11 ಗಂಟೆಗಳ ಸಮಗ್ರ ಶೋಧವನ್ನು ನಡೆಸಿತು. ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ಇದುವರೆಗೆ ಸುಮಾರು 90 ಗಂಟೆಗಳ ಕಾಲ ಡಾ. ಘೋಷ್ ಅವರನ್ನು ಪ್ರಶ್ನೆಗೊಳಪಡಿಸಿದೆ. ಇದನ್ನೂ ಓದಿ: 12 ನೂತನ ಕೈಗಾರಿಕಾ ಸ್ಮಾರ್ಟ್ ಸಿಟಿ, 10 ಲಕ್ಷ ಹೊಸ ಉದ್ಯೋಗ ಸೃಷ್ಟಿ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

    IMA ಕೂಡ ಬಂಗಾಳದ ವೈದ್ಯರ ಆರೋಪಗಳನ್ನು ಉಲ್ಲೇಖಿಸಿದೆ. ಡಾ. ಘೋಷ್ ಅವರು ತಮ್ಮ ಕಾರ್ಯಗಳಿಂದ ವೃತ್ತಿಗೆ ಅಪಖ್ಯಾತಿ ತಂದಿದ್ದಾರೆ. ಶಿಸ್ತು ಸಮಿತಿಯು ಅವರನ್ನು ಅಮಾನತುಗೊಳಿಸಲು ನಿರ್ಧರಿಸಿದೆ ಎಂದು ತಿಳಿಸಿದೆ.

  • ಶನಿವಾರ ರಾಜ್ಯಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಬಂದ್ – ದಿನೇಶ್ ಗುಂಡೂರಾವ್ ಪರೋಕ್ಷ ಬೆಂಬಲ

    ಶನಿವಾರ ರಾಜ್ಯಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಬಂದ್ – ದಿನೇಶ್ ಗುಂಡೂರಾವ್ ಪರೋಕ್ಷ ಬೆಂಬಲ

    ಬೆಂಗಳೂರು: ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ ಹಾಗೂ ಹತ್ಯೆ (Kolkata Doctor Rape and Murder) ಖಂಡಿಸಿ ಶನಿವಾರ (ಆ.17) ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು (OPD Service) ಸ್ಥಗಿತಗೊಳ್ಳಲಿದೆ.

    ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನಿಂದ (Indian Medical Association) ಬಂದ್‌ಗೆ ಕರೆ ನೀಡಲಾಗಿದ್ದು, ದೇಶಾದ್ಯಂತ ಪ್ರತಿಭಟನೆ ನಡೆಯಲಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ರಾಜ್ಯ ಘಟಕ ಬಂದ್‌ಗೆ ಬೆಂಬಲ ನೀಡಿದ್ದು, ಅಸೋಸಿಯೇಶನ್ ರಾಜ್ಯಾಧ್ಯಕ್ಷ ಶ್ರೀನಿವಾಸ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ

    ಈ ಕುರಿತು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಶ್ರೀನಿವಾಸ್ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ ಆರು ಗಂಟೆಯವರೆಗೂ ಓಪಿಡಿ ಸೇವೆ ಇರೋದಿಲ್ಲ. 24 ಗಂಟೆಗಳ ಕಾಲ ಹೊರ ರೋಗಿಗಳ ವಿಭಾಗ ಬಂದ್ ಆಗಲಿದೆ. ಎಮರ್ಜೆನ್ಸಿ ಪೇಷೆಂಟ್‌ಗಳಿಗೆ ಮಾತ್ರ ಟ್ರೀಟ್‌ಮೆಂಟ್ ಇರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶೀಘ್ರವೇ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಬಿಜೆಪಿ ಸೇರ್ಪಡೆ ಸಾಧ್ಯತೆ

    ಪ್ರತಿಭಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶನಿವಾರ ಬೆಳಗ್ಗೆ ಆರು ಗಂಟೆಯಿಂದ ಭಾನುವಾರ ಬೆಳಗ್ಗೆ ಆರು ಗಂಟೆಯವರೆಗೂ ಪ್ರತಿಭಟನೆ ಮಾಡುತ್ತಿದ್ದೇವೆ. ಎಮರ್ಜೆನ್ಸಿ ರೋಗಿಗಳಿಗೆ ಯಾವುದೇ ತೊಂದರೆ ಆಗಲ್ಲ. ಓಪಿಡಿ ಸೇವೆ ಮಾತ್ರ ಬಂದ್ ಮಾಡುತ್ತಿದ್ದೇವೆ. ಒಬ್ಬ ಹೆಣ್ಣು ಮಗಳ ಮೇಲೆ ಅತ್ಯಾಚಾರ ಆಗಿದೆ. ರಾತ್ರಿ ಡ್ಯುಟಿ ವೇಳೆ ಈ ಥರ ಆಗುತ್ತಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನಲ್ಲಿ 30 ಸಾವಿರ ಮಂದಿ ಇದ್ದಾರೆ. ಒಂದೂವರೆ ಲಕ್ಷ ವೈದ್ಯರು ಇದ್ದಾರೆ. ಎಲ್ಲರಿಗೂ ರಿಕ್ವೆಸ್ಟ್ ಮಾಡಿಕೊಂಡಿದ್ದೇವೆ. ಫನಾ, ಪೀಡಿಯಾಟ್ರಿಕ್ ಅಸೋಸಿಯೇಶನ್ ಕೂಡ ಸೇರುತ್ತಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕಚೇರಿ ಬಳಿ ಎಲ್ಲಾ ಸೇರಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ವಿ.ಸೋಮಣ್ಣಗೆ ಬಿಗ್ ಶಾಕ್ – ಸಂಸದರ ಕಚೇರಿ ವಾಪಸ್ ಪಡೆದ ಸರ್ಕಾರ

    ಇನ್ನು ನಾಳಿನ ವೈದ್ಯರ ಪ್ರತಿಭಟನೆಗೆ ಸಚಿವ ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ. ಪ್ರತಿಭಟನೆ ಉದ್ದೇಶ ಒಳ್ಳೆದಿದೆ. ಸಾರ್ವಜನಿಕರಿಗೆ ತೊಂದರೆ ಆಗದೇ ಇರೋಥರ ಮಾಡಲಿ ಎಂದು ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಶನಿವಾರ ಖಾಸಗಿ ಆಸ್ಪತ್ರೆಗಳ ಮುಷ್ಕರ ಹಿನ್ನೆಲೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಳೆ ಖಾಸಗಿ ಆಸ್ಪತ್ರೆಗಳು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮೊನ್ನೆ ಪ್ರಿನ್ಸಿಪಲ್ ಸೆಕ್ರೆಟರಿಯ ಬಳಿ ಮಾತನಾಡಿದ್ದೇನೆ. ಏನೆಲ್ಲಾ ಕ್ರಮ ಕೈಗೊಳ್ಳಲು ಸಾಧ್ಯವಿದೆ ಎಂದು ಚರ್ಚಿಸಲು ಹೇಳಿದ್ದೇನೆ. ಪ್ರತಿಭಟನೆ ಆಗಲಿ, ಅವರ ಅಭಿಪ್ರಾಯ ವ್ಯಕ್ತಪಡಿಸಲಿ. ಸಾರ್ವಜನಿಕರಿಗೆ ತೊಂದರೆಯಾಗಬಾರದು. ತೊಂದರೆಯಾಗದಂತೆ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಎಲ್ಲಾ ಅಸೋಸಿಯೇಶನ್ ಜೊತೆ ನಾನು ಸಭೆ ಕರೆದಿದ್ದೇನೆ. ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತವರು ಮನೆಗೆ ಹಣ ಕಳಿಸಿ ರಾಬರಿ ನಾಟಕವಾಡಿದ್ದ ಪಿಎಸ್‌ಐ ಪತ್ನಿಯ ಮೇಲೆ ಕೇಸ್

    ಪ್ರತಿಭಟನೆಗೆ ಯಾರೆಲ್ಲ ಬೆಂಬಲ?
    *ಫನಾ ಬೆಂಬಲ ಖಾಸಗಿ ಆಸ್ಪತ್ರೆಗಳ ಒಕ್ಕೂಟ
    *ಸರ್ಕಾರಿ ವೈದ್ಯಾಧಿಕಾರಿಗಳ ಅಸೋಸಿಯೇಶನ್
    *ಮಕ್ಕಳ ವೈದ್ಯರ ಅಸೋಸಿಯೇಶನ್
    *ಆರ್ಥೋಪಿಡಿಕ್ ಅಸೋಸಿಯೇಶನ್
    *ಮೆಡಿಕಲ್ ಕಾಲೇಜು ವೈದ್ಯರ ಅಸೋಸಿಯೇಶನ್