ಈ ಹೆಜ್ಜೆಯು ಸಾಂಕ್ರಾಮಿಕ ರೋಗದ ವಿರುದ್ಧ ನಮ್ಮ ಸಾಮೂಹಿಕ ಹೋರಾಟವನ್ನು ಮತ್ತಷ್ಟು ಬಲಪಡಿಸುತ್ತದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ವಿಜ್ಞಾನ ಮತ್ತು ಮಾನವ ಸಂಪನ್ಮೂಲಗಳನ್ನು COVID-19 ವಿರುದ್ಧದ ಹೋರಾಟದಲ್ಲಿ ಬಳಸಿಕೊಂಡಿದೆ ಎಂದು ಮಾಂಡವಿಯಾ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಪಾಟ್ನಾ: ಕಳೆದ ಒಂದು ವರ್ಷದಲ್ಲಿ 11 ಬಾರಿ ಕೋವಿಡ್-19 ಲಸಿಕೆಯನ್ನು ಪಡೆದುಕೊಂಡ ವೃದ್ಧನ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.
ಬಿಹಾರದ ಮಾಧೇಪುರ ಜಿಲ್ಲೆಯ ನಿವಾಸಿ ಬ್ರಹ್ಮದೇವ್ ಮಂಡಲ್ ವಿರುದ್ಧ ಪುರೈನಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅಸಹಕಾರ), 419 (ವ್ಯಕ್ತಿತ್ವದಿಂದ ವಂಚನೆ), ಮತ್ತು 420 (ವಂಚನೆ) ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ವಾರದ ಆರಂಭದಲ್ಲಿ ಹನ್ನೆರಡನೇ ಬಾರಿಗೆ ಕೋವಿಡ್ ಲಸಿಕೆ ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಬ್ರಹ್ಮದೇವ್ ಮಂಡಲ್ ಅವರು ಆರೋಗ್ಯ ಕಾರ್ಯಕರ್ತರಿಗೆ ಸಿಕ್ಕಿ ಬಿದ್ದಿದ್ದಾರೆ. ನಂತರ ತನಿಖೆ ವೇಳೆ ತಮ್ಮ ತಪ್ಪನ್ನು ಒಪ್ಪಿಕೊಂಡ ಬ್ರಹ್ಮದೇವ್ ಮಂಡಲ್ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ ಬಳಸಿ 11 ಬಾರಿ ಲಸಿಕೆ ಪಡೆದುಕೊಂಡಿರುವ ವಿಚಾರ ಬಹಿರಂಗಪಡಿಸಿದ್ದಾರೆ. ಅಲ್ಲದೇ 11 ಬಾರಿ ಲಸಿಕೆ ಸ್ವೀಕರಿಸಿದ್ದರಿಂದ ತಾನು ಹೊಂದಿದ್ದ ಕಾಯಿಲೆಗಳಿಂದ ಗುಣಮುಖರಾಗಿರುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ನೀವು ಸರಿಯಾಗಿ ಮಾಸ್ಕ್ ಧರಿಸಿದ್ರೆ ಲಾಕ್‍ಡೌನ್ ಮಾಡಲ್ಲ: ಅರವಿಂದ್ ಕೇಜ್ರಿವಾಲ್
ಬ್ರಹ್ಮದೇವ್ ಮಂಡಲ್ ಅವರು ಅಂಚೆ ಇಲಾಖೆಯ ನಿವೃತ್ತ ಸರ್ಕಾರಿ ನೌಕರರಾಗಿದ್ದು, ಕಳೆದ ಒಂದು ವರ್ಷದಲ್ಲಿ 11 ಬಾರಿ ಕೋವಿಡ್ -19 ಲಸಿಕೆಯನ್ನು ತೆಗೆದುಕೊಂಡ ರೀತಿ ಮತ್ತು ಆರೋಗ್ಯ ಇಲಾಖೆಯ ನಿರ್ಲಕ್ಷ್ಯವನ್ನು ಬಹಿರಂಗಪಡಿಸಿದ್ದಾರೆ. ಇದೀಗ ಬ್ರಹ್ಮದೇವ್ ಅವರನ್ನು ಬಂಧಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಆದರೆ ವಯಸ್ಸಾಗಿರುವ ಕಾರಣ ಬ್ರಹ್ಮದೇವ್ ಜಾಮೀನು ಪಡೆದುಕೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ವಾಮಾಚಾರ ನಡೆಸಿ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿಗಾಗಿ ಶೋಧ – ಇಬ್ಬರ ಬಂಧನ
ಚೆನ್ನೈ: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಜನರಿಗೆ ಕೋವಿಡ್-19 ಲಸಿಕೆ ಪಡೆಯುವಂತೆ ಮತ್ತು ಕೊರೊನಾ ನಿಯಮಗಳನ್ನು ಪಾಲಿಸುವಂತೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಒತ್ತಾಯಿಸಿದ್ದಾರೆ.
ಲಸಿಕೆ ಪಡೆದವರಿಗಿಂತ ಲಸಿಕೆ ಪಡೆಯದೇ ಇರುವ ಜನರು ಹೆಚ್ಚಾಗಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಜನರು ಲಸಿಕೆ ಪಡೆಯಬೇಕು. ಅದರಲ್ಲಿಯೂ 60 ಚರ್ಷಕ್ಕಿಂತ ಮೇಲ್ಪಟ್ಟವರು ಶೀಘ್ರವೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ವೇಗವಾಗಿ ಹರಡುತ್ತಿದ್ದು, ವೈರಲ್ ಫೀವರ್ನಂತಿದೆ: ಯೋಗಿ ಆದಿತ್ಯನಾಥ್
ಡೆಲ್ಟಾ ವೈರಸ್‍ಗೆ ಹೋಲಿಸಿದರೆ ಓಮಿಕ್ರಾನ್ ವೈರಸ್ ಅತಿ ವೇಗವಾಗಿ ಹರಡುತ್ತಿದೆ. ಓಮಿಕ್ರಾನ್‍ನಿಂದ ಹೊಸ ಭೀತಿ ಎದುರಾಗುತ್ತಿದೆ. ಪ್ರತಿಯೊಬ್ಬರು ಕೊರೊನಾ ವೈರಸ್ ವಿರುದ್ಧ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ತಜ್ಞರು ಲಸಿಕೆ ಪಡೆದವರಲ್ಲಿ ಓಮಿಕ್ರಾನ್ ಸೋಂಕಿನ ಗುಣಲಕ್ಷಣಗಳು ಕಡಿಮೆ ಇದೆ ಎಂದು ಹೇಳುತ್ತಿದ್ದಾರೆ. ಹಾಗಾಗಿ ನಿಮ್ಮ ಮನೆಯಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿದ್ದರೆ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ನಾನು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸಂಸದ ರೇವಂತ್ ರೆಡ್ಡಿಗೆ ಕೊರೊನಾ ಪಾಸಿಟಿವ್
ಜನವರಿ 3 ರಿಂದ 15 ರಿಂದ 18 ವರ್ಷದೊಳಗಿನ 33 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಲ್ಲದೇ ಜನವರಿ 2 ರಂದು 50,000 ಶಿಬಿರಗಳ ಮೂಲಕ ಮೆಗಾ ಲಸಿಕಾ ಶಿಬಿರವನ್ನು ನಡೆಸಲಾಗುತ್ತಿದೆ. ಇದರಲ್ಲಿ 94 ಲಕ್ಷ ಜನರಿಗೆ ಎರಡನೇ ಡೋಸ್ ಲಸಿಕೆ ನೀಡುವ ಗುರಿಯನ್ನು ಸರ್ಕಾರಹೊಂದಿದೆ ಎಂದು ತಿಳಿಸಿದ್ದಾರೆ.
ನವದೆಹಲಿ: ಶಿಕ್ಷಣ, ವ್ಯಾಪಾರ ಮತ್ತು ಪ್ರವಾಸೋದ್ಯಮ ಉದ್ದೇಶಗಳಿಗೆ ವಿದೇಶಕ್ಕೆ ಪ್ರಯಾಣಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಭಾರತದ ಕೋವಿಡ್-19 ಲಸಿಕಾ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆಗೆ 110 ದೇಶಗಳು ಒಪ್ಪಿಕೊಂಡಿದೆ ಎಂದು ಮೂಲಗಳಿಂದ ವರದಿಯಾಗಿದೆ. ಹಾಗಾಗಿ ಈ ದೇಶಗಳ ಪ್ರಯಾಣ ಸುಲಭವಾಗಲಿದೆ.
ವಿಶ್ವ ಆರೋಗ್ಯ ಸಂಸ್ಥೆ (WHO) ಕೋವಿಶೀಲ್ಡ್ ಲಸಿಕೆಗೆ ಮಾನ್ಯತೆ ನೀಡಿದ ಬಳಿಕ ಭಾರತ ಸಹಿತ ಹಲವು ದೇಶಗಳಲ್ಲಿ ಸಾವಿರಾರು ಕೋಟಿ ಜನ ಲಸಿಕೆ ಪಡೆದುಕೊಂಡಿದ್ದರು. ಜೊತೆಗೆ ವಿಶ್ವದ ಹಲವು ದೇಶಗಳೊಂದಿಗೆ ಕೇಂದ್ರ ಸರ್ಕಾರ ಉತ್ತಮ ಬಾಂಧವ್ಯ ಹೊಂದಿದೆ ಹಾಗಾಗಿ ನಮ್ಮ ದೇಶದಿಂದ ಆಸ್ಟ್ರೇಲಿಯಾ, ರಷ್ಯಾ, ಅಮೆರಿಕ, ಜರ್ಮನಿ ಸಹಿತ 110 ದೇಶಗಳಿಗೆ ಪ್ರಯಾಣಿಸಲು ಕೋವಿಡ್-19 ಲಸಿಕೆ ಪ್ರಮಾಣ ಪತ್ರ ಮಾನ್ಯತೆ ಪಡೆದುಕೊಂಡಿದೆ. ಇದರಿಂದಾಗಿ ಶಿಕ್ಷಣ, ವ್ಯಾಪಾರ ಮತ್ತು ಪ್ರವಾಸೋದ್ಯಮ ಉದ್ದೇಶಗಳ ಪ್ರಯಾಣ ಸುಲಭವಾಗಲಿದೆ. ಇದನ್ನೂ ಓದಿ: ನಾನು ಭಾರತದ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದಿದ್ದೇನೆ: ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಅಬ್ದುಲ್ಲಾ ಶಾಹಿದ್
WHO ಅನುಮೋದನೆ ನೀಡಿರುವ ಕೋವಿಡ್-19 ಲಸಿಕೆ ಪಡೆದ ಪ್ರಯಾಣಿಕರು ಪ್ರಯಾಣಿಸುವ ವೇಳೆ ಕೋವಿಡ್ ಲಸಿಕೆ ಪ್ರಮಾಣ ಪತ್ರ ಪಡೆದಿರುವುದು ಮುಖ್ಯ. ಇದೀಗ ಭಾರತದ ಕೋವಿಶೀಲ್ಡ್ ಪಡೆದ ಭಾರತೀಯ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳ ಮಾನ್ಯತೆಗೆ 110 ದೇಶಗಳು ಒಪ್ಪಿಕೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹಾಗಾಗಿ ಈ ದೇಶಗಳಿಗೆ ಪ್ರಯಾಣಿಸಲು ಯಾವುದೇ ನಿರ್ಬಂಧ ಇರುವುದಿಲ್ಲ. 110 ದೇಶಗಳು ಲಸಿಕೆ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆಗೆ ಒಪ್ಪಿಕೊಂಡಿವೆ ಮತ್ತು ರಾಷ್ಟ್ರೀಯವಾಗಿ ಅಥವಾ WHO ಮಾನ್ಯತೆ ಪಡೆದ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆ ಕುರಿತು ಭಾರತದೊಂದಿಗೆ ಒಪ್ಪಂದವನ್ನು ಹೊಂದಿರುವ ಅನೇಕ ದೇಶಗಳಿವೆ. ಅದೇ ರೀತಿಯಲ್ಲಿ ಭಾರತದೊಂದಿಗೆ ಅಂತಹ ಒಪ್ಪಂದ ಹೊಂದಿಲ್ಲದ ರಾಷ್ಟ್ರಗಳು ಕೂಡಾ ಇವೆ. ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ರಾಷ್ಟ್ರೀಯವಾಗಿ ಅಥವಾ WHO ಮಾನ್ಯತೆ ಪಡೆದ ಲಸಿಕೆ ಹಾಕಿಸಿಕೊಂಡ ಭಾರತೀಯ ನಾಗರಿಕರಿಗೆ ವಿನಾಯಿತಿ ಸಿಗುತ್ತಿದೆ. ಇದರಿಂದ ಭಾರತೀಯರ ಅಂತರಾಷ್ಟ್ರೀಯ ಪ್ರಯಾಣ ಸಲಿಸಾಗಿದೆ. ಇದನ್ನೂ ಓದಿ: ಲಸಿಕೆ ಪಡೆಯದಿದ್ದರೆ ರೇಷನ್, ಗ್ಯಾಸ್, ಪೆಟ್ರೋಲ್ ಇಲ್ಲ
ಭಾರತದ ವ್ಯಾಕ್ಸಿನ್ ಸಾಧನೆ
ಭಾರತ ಈವರೆಗೆ 100ಕ್ಕೂ ಹೆಚ್ಚು ದೇಶಗಳಿಗೆ 66 ಮಿಲಿಯನ್(6 ಕೋಟಿ)ಗೂ ಹೆಚ್ಚು, ವ್ಯಾಕ್ಸಿನ್ ಡೋಸ್‍ಗಳನ್ನು ರಫ್ತು ಮಾಡಿದೆ. ವಾಣಿಜ್ಯ ಸಾಗಣೆ ಹಾಗೂ ಕೋವ್ಯಾಕ್ಸ್ ಸೌಲಭ್ಯದ ಮೂಲಕ ರಫ್ತು ಮಾಡಿದೆ. ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯ ಅಧ್ಯಕ್ಷ ಅಬ್ದುಲ್ಲಾ ಶಾಹಿದ್ ಅವರ ತವರು ದೇಶ ಮಾಲ್ಡೀವ್ಸ್. ಭಾರತದ ಲಸಿಕೆಯನ್ನು ಪಡೆದ ಮೊದಲ ದೇಶಗಳಲ್ಲಿ ಮಾಲ್ಡೀವ್ಸ್ ಕೂಡ ಒಂದು. 1 ಲಕ್ಷ ಡೋಸ್‍ಗಳನ್ನು ಆರಂಭದಲ್ಲಿ ಕಳುಹಿಸಲಾಗಿತ್ತು.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಡ್ರೋನ್ ಮೂಲಕ ಕೋವಿಡ್ ಲಸಿಕೆಯನ್ನು ವಿತರಣೆ ಮಾಡುವ ಕಾರ್ಯ ನಡೆದಿದೆ.
ಆನೇಕಲ್ ತಾಲೂಕಿನ ಚಂದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಾರಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೋವಿಡ್ ಲಸಿಕೆಯನ್ನು ಪ್ರಪ್ರಥಮ ಬಾರಿಗೆ ಡ್ರೋನ್ ಮೂಲಕ ವಿತರಣೆ ಮಾಡುವ ಕಾರ್ಯ ಯಶಸ್ವಿಯಾಗಿ ನಡೆಯಿತು. ಚಂದಾಪುರದ ಆರೋಗ್ಯ ಕೇಂದ್ರದಿಂದ ಹಾರಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 14 ಕಿಲೋಮೀಟರ್ ನಷ್ಟು ದೂರವಿದ್ದು ವಾಹನದಲ್ಲಿ ಸಂಚರಿಸಿದರೆ ಸುಮಾರು 40 ನಿಮಿಷಗಳ ಕಾಲ ತೆಗೆದುಕೊಳ್ಳುತ್ತದೆ. ಆದರೆ ಈ ಡ್ರೋನ್ ಮೂಲಕ ಮೇಲೆ ಹಾರಿದಾಗ ಕೇವಲ 7 ಕಿಲೋಮೀಟರ್ ನಷ್ಟು ಅಂತರವಿದ್ದು, 7 ನಿಮಿಷಗಳಲ್ಲಿ ತಲುಪಬಲ್ಲ ಸಾಮರ್ಥ್ಯ ಹಾಗೂ 15 ಕೆಜಿಯಷ್ಟು ತೂಕವನ್ನ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಇದನ್ನೂ ಓದಿ: ನನ್ನ ಕುಟುಂಬಕ್ಕೆ ಭದ್ರತೆ ಕೊಡಿ ಎಂದು ಮೋದಿಗೆ ಮನವಿ ಸಲ್ಲಿಸಿದ ಪಾಕ್ ಕ್ರಿಕೆಟಿಗನ ಪತ್ನಿ
ಇದನ್ನು ಕೌನ್ಸಿಲ್ ಆಫ್ ರಿಸರ್ಚ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ಹಾಗೂ ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿಸ್ (CSIR-NAL) ನಿಂದ ಈ ಪ್ರಯೋಗವು ನಡೆದಿದ್ದು, ನಾಗರಿಕ ವಿಮಾನಯಾನ ಸಚಿವಾಲಯವು ನಿಯಂತ್ರಕ ಅನುಸರಣೆಯೊಂದಿಗೆ ಡ್ರೋನ್ ಪ್ರಯೋಗಗಳನ್ನು ನಡೆಸಲು ಷರತ್ತುಬದ್ಧ ಅನುಮತಿಯನ್ನು ನೀಡಿದ್ದು, ಈ ಪ್ರಯೋಗವನ್ನ ವೈದ್ಯರು, ವಿಜ್ಞಾನಿಗಳು ಹಾಗೂ ಡ್ರೋನ್ ಆಪರೇಟರ್ ಗಳು ಯಶಸ್ವಿಯಾಗಿ ನಡೆಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಪೊಲ್ಯೂಷನ್ ಲಾಕ್‍ಡೌನ್ – 1 ವಾರ ಆನ್‌ಲೈನ್ ಕ್ಲಾಸ್, ವರ್ಕ್ ಫ್ರಂ ಹೋಂ
ಬೆಂಗಳೂರು: ಕೃಷಿ ಸಚಿವರಾದ ಬಿಸಿ ಪಾಟೀಲ್ ಮನೆಯಲ್ಲಿಯೇ ಕೊರೊನಾ ಲಸಿಕೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲೂಕು ಆರೋಗ್ಯ ಕಾರ್ಯಾಲಯವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಕಾರಣ ನೀಡಿದೆ.
ಪತ್ರದಲ್ಲಿ ಏನಿದೆ?
ಮಾರ್ಚ್ 2ರಂದು ಮೂರನೇ ಹಂತದ ತಾಲೂಕಿನ ಸಾರ್ವಜನಿಕರಿಗೆ (60 ವರ್ಷ ಮೇಲ್ಪಟ್ಟ ನಾಗರಿಕರಿಗೆ) ಕೋವಿಡ್-19 ಲಸಿಕಾ ಕಾರ್ಯಕ್ರಮ ಚಾಲನೆಯಾಗಿದ್ದು, ಮಾನ್ಯ ಬಿ.ಸಿ ಪಾಟೀಲ್ ಕೃಷಿ ಸಚಿವರು ಕರ್ನಾಟಕ ಸರ್ಕಾರ ಇವರು ತಾಲೂಕಿನ ಪ್ರಥಮ ಪ್ರಜೆಯಾಗಿದ್ದು ಹಾಗೂ ಮಾನ್ಯ ಸಚಿವರಿಗೆ ಆರೋಗ್ಯದಲ್ಲಿ ಬೈಲ್ಯಾಟರಲ್ ನೀಆಸ್ಟಿಯೋ ಆರ್ಥರಿಟಿಸ್ ಹಾಗೂ ಕ್ರಾನಿಕ್ ಲೋಬ್ಯಾಕ್ ಎಖ್ ಆರೋಗ್ಯ ಸಮಸ್ಯೆ ಇರುವುದರಿಂದ ಮಾನ್ಯ ಸಚಿವರ ಕರೆಯ ಮೇರೆಗೆ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಅವಶ್ಯಕ ತುರ್ತು ಸೇವೆ ಅಂಬುಲೆನ್ಸ್ ಹಾಗೂ ಔಷಧಿಗಳೊಂದಿಗೆ ಸಚಿವರಿಗೆ ಕೋವಿಡ್-19 ಲಸಿಕೆಯನ್ನು ನೀಡಿ ನಂತರ 30 ನಿಮಿಷಗಳವರೆಗೆ ನಿಗಾವಹಿಸಲಾಗಿದೆ. ಇನ್ನು ಮುಂದೆ ಕೋವಿಡ್-19 ಮಾರ್ಗಸೂಚಿ ಪ್ರಕಾರ ಸಾರ್ವಜನಿಕರಿಗೆ ಲಸಿಕೆ ನೀಡುತ್ತೇವೆ.
ಬಿಸಿ ಪಾಟೀಲ್ ಲಿಸಿಕೆ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ರಾಜ್ಯ ಆರೋಗ್ಯ ಇಲಾಖೆಗೆ ಪ್ರಕರಣದ ವರದಿ ನೀಡುವಂತೆ ಸೂಚಿಸಿದ್ದರು.
ಬಿಸಿ ಪಾಟೀಲ್ ಮತ್ತು ಅವರ ಪತ್ನಿ ವನಜಾ ಹಿರೆಕೂರಿನ ತಮ್ಮ ಮನೆಯಲ್ಲಿಯೇ ವೈದ್ಯರನ್ನು ಕರೆಸಿ ಲಸಿಕೆ ಪಡೆದಿದ್ದರು. ಕೊರೊನಾ ಮಾರ್ಗಸೂಚಿಯ ಪ್ರಕಾರ ಮನೆಯಲ್ಲಿಯೇ ಲಸಿಕೆ ಹಾಕಿಸಿಕೊಳ್ಳಲು ಅವಕಾಶವಿಲ್ಲ. ಈ ಕಾರಣಕ್ಕೆ ಬಿಸಿ ಪಾಟೀಲ್ ವಿರುದ್ಧ ಹಲವು ಟೀಕೆಗಳು ಕೇಳಿಬಂದಿತ್ತು. ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಕೇಂದ್ರ ಆರೋಗ್ಯ ಇಲಾಖೆಯು ಪ್ರಕರಣ ಕುರಿತು ವರದಿ ನೀಡುವಂತೆ ರಾಜ್ಯಕ್ಕೆ ಸೂಚನೆ ನೀಡಿತ್ತು.
ರಾಜ್ಯ ಸರ್ಕಾರ ನಮ್ಮ ಗಮನಕ್ಕೆ ಈ ವಿಚಾರ ಬಂದಿರಲಿಲ್ಲ. ಇನ್ನು ಮುಂದೆ ಈ ರೀತಿ ಘಟನೆ ಮರುಕಳಿಸದಂತೆ ನೋಡಿಕೊಳ್ಳಲಾಗುವುದು ಎಂದು ಕೇಂದ್ರಕ್ಕೆ ಉತ್ತರ ನೀಡಿತ್ತು.