Tag: ಕೋವಿಡ್ ಪರೀಕ್ಷೆ

  • ಬೇಡ ಎಂದರೂ ಬಿಡ್ಲಿಲ್ಲ, ನೆಲಕ್ಕೆ ಕೆಡವಿ ಮಹಿಳೆಗೆ ಕೋವಿಡ್ ಪರೀಕ್ಷೆ – ವೀಡಿಯೋ ವೈರಲ್

    ಬೇಡ ಎಂದರೂ ಬಿಡ್ಲಿಲ್ಲ, ನೆಲಕ್ಕೆ ಕೆಡವಿ ಮಹಿಳೆಗೆ ಕೋವಿಡ್ ಪರೀಕ್ಷೆ – ವೀಡಿಯೋ ವೈರಲ್

    ಬೀಜಿಂಗ್: ಚೀನಾದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ಪರೀಕ್ಷೆಯನ್ನು ತೀವ್ರಗೊಳಿಸಲಾಗಿದೆ. ದೇಶದಲ್ಲಿ ಉಲ್ಬಣಿಸುತ್ತಿರುವ ಕೋವಿಡ್ ಹಾಗೂ ಲಾಕ್‌ಡೌನ್‌ನಿಂದ ಜನ ಆತಂಕಗೊಂಡಿದ್ದಾರೆ. ಸೋಂಕಿತರು ಕಠಿಣ ನಿಯಮಗಳನ್ನು ಪಾಲಿಸಬೇಕೆಂಬ ಭಯದಿಂದ ಅನೇಕರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲೂ ಹಿಂಜರಿಯುತ್ತಿದ್ದಾರೆ.

    ಚೀನಾದಲ್ಲಿ ಮಹಿಳೆಯೊಬ್ಬರಿಗೆ ಕೋವಿಡ್ ಪರೀಕ್ಷೆ ಮಾಡಲು ಆರೋಗ್ಯ ಸಿಬ್ಬಂದಿ ಹರಸಾಹಸಪಟ್ಟ ಘಟನೆ ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೊರೊನಾ ಪರೀಕ್ಷೆಗೆ ಒಳಗಾಗಲು ಮಹಿಳೆ ನಿರಾಕರಿಸುತ್ತಾಳೆ. ಈ ವೇಳೆ ಆಕೆಯನ್ನು ನೆಲಕ್ಕೆ ಕೆಡವಿ ಆರೋಗ್ಯ ಸಿಬ್ಬಂದಿ ಕೊರೊನಾ ಪರೀಕ್ಷೆ ನಡೆಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಆರ್ಭಟ – GRPA ಆ್ಯಕ್ಷನ್ ಪ್ಲಾನ್‌ನಂತೆ ರೆಡ್‌ಅಲರ್ಟ್ ಘೋಷಣೆ

    ಮತ್ತೊಂದು ವೀಡಿಯೋದಲ್ಲಿ ವೃದ್ಧೆಯೊಬ್ಬರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಾರೆ. ಆಗ ನಾಲ್ಕೈದು ಮಂದಿ ಆಕೆಯನ್ನು ಹಿಡಿದು, ಕೊರೊನಾ ಪರೀಕ್ಷೆ ಮಾಡುತ್ತಾರೆ. ಇದನ್ನೂ ಓದಿ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು 2 ವರ್ಷ ಸಹಿಸಿಕೊಳ್ಳಬೇಕು: ಹಣಕಾಸು ಸಚಿವ

    ಇನ್ನೊಂದು ವೀಡಿಯೋದಲ್ಲಿ ವ್ಯಕ್ತಿಯೊಬ್ಬನನ್ನು ನೆಲದ ಮೇಲೆ ಕೆಡವಿ ಬಲವಂತವಾಗಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಚೀನಾದಲ್ಲಿ ಜನರು ಕೋವಿಡ್ ಪರೀಕ್ಷೆಗೆ ಒಳಗಾಗಲು ಹಿಂಜರಿಯುತ್ತಿರುವ ಬಗ್ಗೆ ಅನೇಕ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

  • ಕಾವೇರಿ ತೀರ್ಥೋದ್ಭವಕ್ಕೆ ಆಗಮಿಸುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಬೋಪಯ್ಯ

    ಕಾವೇರಿ ತೀರ್ಥೋದ್ಭವಕ್ಕೆ ಆಗಮಿಸುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಬೋಪಯ್ಯ

    – ಹೊರ ಜಿಲ್ಲೆ, ರಾಜ್ಯದವರಿಗೆ ಕೊರೊನಾ ಪರೀಕ್ಷೆ
    – ಸರ್ಟಿಫಿಕೇಟ್ ತಂದ್ರೆ ಮಾತ್ರ ಕ್ಷೇತ್ರಕ್ಕೆ ಬರಲು ಅವಕಾಶ

    ಮಡಿಕೇರಿ: ಇದೇ ಅಕ್ಟೋಬರ್ 17 ರಂದು ಪವಿತ್ರ ಕಾವೇರಿ ತೀರ್ಥೋದ್ಭವ ನಡೆಯಲಿದೆ. ಹೀಗಾಗಿ ಕಾವೇರಿ ಪವಿತ್ರ ತೀರ್ಥೊದ್ಬವ ವೀಕ್ಷಿಸಲು ಹೊರ ಜಿಲ್ಲೆ ಮತ್ತು ರಾಜ್ಯದಿಂದ ಬರುವ ಭಕ್ತದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದೆ. ಭಕ್ತರು ಕೋವಿಡ್ ಪರೀಕ್ಷೆ ಮಾಡಿಸಿ ಸರ್ಟಿಫಿಕೇಟ್ ತಂದರೆ ಮಾತ್ರ ಕ್ಷೇತ್ರಕ್ಕೆ ಬರಲು ಅವಕಾಶ ಎಂದು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ತಿಳಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, ಕಾವೇರಿ ತೀರ್ಥೋದ್ಭವಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಸ್ಥಳೀಯರು ತೀರ್ಥೋದ್ಭವ ಸಂದರ್ಭ ಆದಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಯಂನಿಯಂತ್ರಣ ಮಾಡಿಕೊಂಡು ಕಾವೇರಿ ದರ್ಶನ ಮಾಡಬೇಕು. ಅಷ್ಟೇ ಅಲ್ಲದೆ ಈ ಬಾರಿ ಹೆಚ್ಚು ಜನದಟ್ಟಣೆಗೆ ಅವಕಾಶವಿಲ್ಲದಂತೆ ತೀರ್ಥೋದ್ಭವಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.

    ಪೂಜಾ ವಿಧಿವಿಧಾನಗಳು, ಕಾವೇರಿ ಕ್ಷೇತ್ರದ ಸಂಪ್ರದಾಯಗಳಿಗೆ ಕಿಂಚಿತ್ತೂ ಚ್ಯುತಿಬಾರದಂತೆ ತೀರ್ಥೋದ್ಭವ ಸಂದರ್ಭದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಕೈಗೊಳ್ಳಲಾಗುತ್ತದೆ. ಕೋವಿಡ್ ಹಿನ್ನೆಲೆಯಲ್ಲಿ ಭಕ್ತಾಧಿಗಳ ಆರೋಗ್ಯ, ಹಿತರಕ್ಷಣೆಗೂ ಆದ್ಯತೆ ನೀಡಲಾಗುತ್ತದೆ ಎಂದರು.

    ಕಾವೇರಿ ಕ್ಷೇತ್ರಕ್ಕೆ ಬಂದವರಿಂದ ಕೊರೊನಾ ಸೋಂಕು ವ್ಯಾಪಿಸದಂತೆ ಹಾಗೂ ಯಾವುದೇ ಸಮಸ್ಯೆಗೆ ಕಾರಣವಾಗದಂತೆ ಕ್ಷೇತ್ರದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಈ ಬಾರಿ ಜಿಲ್ಲಾಡಳಿತ ಹಾಗೂ ದೇವಾಲಯ ಸಮಿತಿ ವತಿಯಿಂದ ಕೈಗೊಳ್ಳಲಿದೆ. ಜನರು ಕೂಡ ಸಹಕಾರ ನೀಡುವಂತೆ ಶಾಸಕ ಬೋಪಯ್ಯ ಮನವಿ ಮಾಡಿಕೊಂದರು.