Tag: ಕೋವಿಡ್19

  • ಕೇರಳದಿಂದ ಬಂದವರ ಮೇಲೆ ತೀವ್ರ ನಿಗಾ: ಮಾಧುಸ್ವಾಮಿ

    ಕೇರಳದಿಂದ ಬಂದವರ ಮೇಲೆ ತೀವ್ರ ನಿಗಾ: ಮಾಧುಸ್ವಾಮಿ

    ತುಮಕೂರು: ಓಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಜಿಲ್ಲೆಗೆ ಕೇರಳದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದಿಂದ ಬಂದವರನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ. ಹೆಚ್ಚು ಪ್ರಕರಣಗಳು ಕಂಡು ಬಂದರೆ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ತಾಲೂಕಾಸ್ಪತ್ರೆಯಲ್ಲೂ 500-600 ಆಕ್ಸಿಜನ್ ಸಾಂದ್ರಕಗಳಿವೆ. ಜೊತೆಗೆ ಪ್ರತಿ ತಾಲೂಕಿನಲ್ಲಿ 5-6 ಐಸಿಯು ಬೆಡ್ ಇದೆ ಎಂದರು.

    ಈ ಬಾರಿ ಮಕ್ಕಳ ಪ್ರಕರಣ ಹೆಚ್ಚು ಕಂಡುಬರುವ ಸಾಧ್ಯತೆ ಇದೆ. ಹಾಗಾಗಿ 200 ಮಕ್ಕಳ ವೈದ್ಯರನ್ನು ಕರೆಸಿ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ. ಐಸಿಯು ಬೆಡ್ ಸೇರಿದಂತೆ ಎಲ್ಲ ರೀತಿಯ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ಪ್ರಕರಣದಲ್ಲಿ ಡೆತ್ ರೇಟ್ ಕಡಿಮೆ ಇದೆ. ಹಾಗಾಗಿ ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಸೂಚಿಸಿದರು.

    ಈ ಬಗ್ಗೆ ಡಿ. 9 ರಂದು ಸಚಿವ ಸಂಪುಟ ತುರ್ತು ಸಭೆ ನಡೆಸಲಾಗುವುದು. ನೀತಿ ಸಂಹಿತೆ ಇರುವುದರಿಂದ ಜಿಲ್ಲೆಯಲ್ಲಿ ಸಚಿವರಿಂದ ಸಭೆ ನಡೆಸಲು ಆಗುತ್ತಿಲ್ಲ. ಹಾಗಾಗಿ ಕೋವಿಡ್ ಸಂಬಂಧಿಸಿದಂತೆ ಉಸ್ತುವಾರಿ ನೋಡಿಕೊಳ್ಳಲು ಕಷ್ಟವಾಗುತ್ತಿದೆ. ಇದರಿಂದಾಗಿ ಡಿ. 9ರಂದು ಸಚಿವ ಸಂಪುಟ ಸಭೆ ಕರೆದು ನಂತರ ನಾವು ಕಾರ್ಯೋನ್ಮುಖರಾಗುತ್ತೇವೆ ಎಂದರು.

    ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕಷ್ಟ. ಆದರೆ ಉಳಿದ ಜಿಲ್ಲೆಗಳಲ್ಲಿ ದೇವೇಗೌಡರಲ್ಲಿ ಸಹಕಾರಕ್ಕಾಗಿ ಮನವಿ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಫೋಟೋಶೂಟ್‌ಗಾಗಿ ಬಂದಿದ್ದ ಮಹಿಳೆ ಮೇಲೆ ಲಾಡ್ಜ್‌ನಲ್ಲಿ ಗ್ಯಾಂಗ್‌ರೇಪ್

    ತುಮಕೂರಿನಲ್ಲಿ ಮೈತ್ರಿ ಇಲ್ಲ. ಬಿಜೆಪಿ -ಜೆಡಿಎಸ್ ಎರಡೂ ಕಡೆಯ ಅಭ್ಯರ್ಥಿಗಳು ಆಳವಾಗಿ ಪ್ರಚಾರ ಮಾಡಿದ್ದಾರೆ. ಈ ಹಂತದಲ್ಲಿ ಯಾರೂ ಕಣದಿಂದ ನಿವೃತ್ತಿಯಾಗೋದು ಕಷ್ಟ. ಇದರಿಂದಾಗಿ ತುಮಕೂರು ಮೈತ್ರಿ ಚರ್ಚೆಯಾಗಿಲ್ಲ. ಆದರೂ ವರಿಷ್ಠರು ಚರ್ಚೆ ಮಾಡಿದರೆ ಅದು ಅವರಿಗೆ ಬಿಟ್ಟ ತೀರ್ಮಾನ. ಅದರ ಬಗ್ಗೆ ನಾನು ಮಾತನಾಡೋಕೆ ಹೋಗಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ತುಮಕೂರಿನಲ್ಲಿ ಮತ್ತೆ ಕೊರೊನಾ ಭೀತಿ – 42 ಪುಟ್ಟ ಮಕ್ಕಳಿಗೆ ವಕ್ಕರಿಸಿದ ಕೋವಿಡ್

  • ಪಾಸಿಟಿವ್ ಬಂದಿದ್ದ ವಿದ್ಯಾರ್ಥಿಗಳಿಗೆ ಎರಡೇ ದಿನದಲ್ಲಿ ನೆಗೆಟಿವ್ ರಿಪೋರ್ಟ್!

    ಪಾಸಿಟಿವ್ ಬಂದಿದ್ದ ವಿದ್ಯಾರ್ಥಿಗಳಿಗೆ ಎರಡೇ ದಿನದಲ್ಲಿ ನೆಗೆಟಿವ್ ರಿಪೋರ್ಟ್!

    ಹುಬ್ಬಳ್ಳಿ: ಪಾಸಿಟಿವ್ ಬಂದಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಎರಡೇ ದಿನದಲ್ಲಿ ನೆಗೆಟಿವ್ ಬಂದಿರುವುದರಿಂದ ಈಗ ಜನರಿಗೆ ಕೋವಿಡ್ ರಿಪೋರ್ಟ್ ಮೇಲೆ ಅನುಮಾನ ಶುರುವಾಗಿದೆ.

    ಅಯೋಧ್ಯೆಯಲ್ಲಿ ನಡೆದ ಸೆಮಿನಾರ್‌ನಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಡಿ.2ರಂದು ಹುಬ್ಬಳ್ಳಿಯ ಆಯುರ್ವೇದ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿತ್ತು. ಆದರೆ ಮತ್ತೆ ಶನಿವಾರ (ಡಿ.4) ಟೆಸ್ಟ್ ಮಾಡಿಸಿದಾಗ ನೆಗೆಟಿವ್ ರಿಪೋರ್ಟ್ ಬಂದಿದೆ.

    ಈ ರಿಪೋರ್ಟ್ ನೋಡಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಕ್ ಆಗಿದ್ದಾರೆ. ಎರಡೇ ದಿನದಲ್ಲಿ ಕೊರೊನಾ ಹೋಯ್ತಾ ಎನ್ನುವ ಪ್ರಶ್ನೆ ಪಾಲಕರಲ್ಲಿ ಕಾಡುತ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಟೆಸ್ಟ್ ಮಾಡಿಸಿದ್ದರು. ಎರಡು ಬಾರಿಯೂ ಅದೇ ಲ್ಯಾಬ್‌ನಲ್ಲಿ ಟೆಸ್ಟಿಂಗ್ ಮಾಡಿಸಿದ್ದಾರೆ. ಇದರಿಂದಾಗಿ ಕಿಮ್ಸ್ ಲ್ಯಾಬ್ ರಿಸಲ್ಟ್ ಮೇಲೆ ಈಗ ಅನುಮಾನ ಪ್ರಾರಂಭವಾಗಿದೆ. ಇದನ್ನೂ ಓದಿ: ಮಣ್ಣಿನ ಸವಕಳಿಯನ್ನು ತಡೆಗಟ್ಟಿ, ಉತ್ಪಾದಕತೆ ಹೆಚ್ಚಿಸಿ: ಬಿ.ಸಿ ಪಾಟೀಲ್

    ಎರಡೇ ದಿನದಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ನೆಗೆಟಿವ್ ಬಂದಿದ್ದರಿಂದ ಕಾಲೇಜು ಆಡಳಿತ ಮಂಡಳಿಯಿಂದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಒಂದೇ ದಿನ ಕೋಟಿ ಲಸಿಕೆ ನೀಡಿಕೆ-5ನೇ ಸಲ ದಾಖಲೆ

  • ಮತ್ತೆ ಕೇರಳದ ಐವರು ವಿದ್ಯಾರ್ಥಿಗಳಿಗೆ ಕೊರೊನಾ

    ಮತ್ತೆ ಕೇರಳದ ಐವರು ವಿದ್ಯಾರ್ಥಿಗಳಿಗೆ ಕೊರೊನಾ

    ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಮತ್ತೆ ಐವರು ಕೇರಳ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ.

    ಕಳೆದ ಮಂಗಳವಾರ 15 ಮಂದಿಗೆ ಸೋಂಕು ದೃಢವಾಗಿತ್ತು. ಇದೀಗ ಸೋಂಕಿತ ಕೇರಳ ವಿದ್ಯಾರ್ಥಿಗಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ವರದರಾಜ್ ನರ್ಸಿಂಗ್ ಕಾಲೇಜ್‌ನಲ್ಲಿ ಮಂಗಳವಾರ 7 ಮಂದಿಗೆ ಸೋಂಕು ಪತ್ತೆಯಾಗಿತ್ತು. ಇದೀಗ ಮತ್ತೆ ಐವರು ಕೇರಳದ ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ.

    ವರದರಾಜ್ ನರ್ಸಿಂಗ್ ಕಾಲೇಜ್ ಸೋಂಕಿತ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿ ಐವರು ವಿದ್ಯಾರ್ಥಿಗಳಿದ್ದರು. ಈ ಹಿನ್ನೆಲೆಯಲ್ಲಿ ವರದರಾಜ್ ಕಾಲೇಜ್ ವಿದ್ಯಾರ್ಥಿಗಳಲ್ಲಿ 90 ಮಂದಿಗೆ ಪರೀಕ್ಷೆ ನಡೆಸಲಾಗಿತ್ತು. ಒಟ್ಟಾರೆ ಜಿಲ್ಲೆಯಲ್ಲಿ 20 ಮಂದಿ ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿದೆ.

    ಕಳೆದ ಮಂಗಳವಾರ ಸಿದ್ದಗಂಗಾ ನರ್ಸಿಂಗ್ ಕಾಲೇಜಿನಲ್ಲಿ 8 ವಿದ್ಯಾರ್ಥಿಗಳಿಗೆ ಹಾಗೂ ವರದರಾಜ್ ನರ್ಸಿಂಗ್ ಕಾಲೇಜಿನಲ್ಲಿ 7 ಜನರಿಗೆ ಸೋಂಕು ದೃಢವಾಗಿತ್ತು. ಈಗ ವರದರಾಜ್ ಕಾಲೇಜಿನಲ್ಲಿ ಮತ್ತೆ 5 ವಿದ್ಯಾರ್ಥಿಗಳಿಗೆ ಸೋಂಕು ತಗಲಿರುವುದು ವರದಿಯಾಗಿದೆ. ಇದನ್ನೂ ಓದಿ: ಕೇರಳದಿಂದ ಬಂದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ವಾರಂಟೈನ್

    ವರದರಾಜ್ ಕಾಲೇಜಿನಲ್ಲಿ ಒಟ್ಟು 12 ವಿದ್ಯಾರ್ಥಿಗಳಿಗೆ ಹಾಗೂ ಸಿದ್ದಗಂಗಾ ಕಾಲೇಜಿನಲ್ಲಿ 8 ಜನರಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಒಟ್ಟಾರೆಯಾಗಿ 20 ಜನ ಕೇರಳ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇದನ್ನೂ ಓದಿ: ಕರ್ತವ್ಯಲೋಪ – ಮೂವರು ಕಾನ್ಸ್ ಟೇಬಲ್‌ಗಳು ಅಮಾನತು

  • ವಿದ್ಯಾರ್ಥಿಗೆ ಸೋಂಕು – ಶಾಲೆಯ ಎಲ್ಲ ಮಕ್ಕಳಿಗೂ ಕೊರೊನಾ ಟೆಸ್ಟ್

    ವಿದ್ಯಾರ್ಥಿಗೆ ಸೋಂಕು – ಶಾಲೆಯ ಎಲ್ಲ ಮಕ್ಕಳಿಗೂ ಕೊರೊನಾ ಟೆಸ್ಟ್

    ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ 9ನೇ ತರಗತಿಯ ವಿದ್ಯಾರ್ಥಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲೆಯ ಎಲ್ಲ ಮಕ್ಕಳಿಗೂ ಕೊರೊನಾ ಟೆಸ್ಟ್ ಮಾಡಿಸಲು ಮನವಿ ಮಾಡಲಾಗಿದೆ.

    ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ಖಾಸಗಿ ಶಾಲೆಯ ವಿದ್ಯಾರ್ಥಿಯಲ್ಲಿ ಬುಧವಾರ ಸೋಂಕು ಪತ್ತೆಯಾಗಿದೆ. ಧಾರವಾಡದ ಎಸ್‍ಡಿಎಂ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಅಕ್ಕನಿಂದ ತಮ್ಮನಿಗೂ ಸೋಂಕು ವಕ್ಕರಿಸಿದೆ. ಇದರಿಂದಾಗಿ ವಿದ್ಯಾರ್ಥಿಯನ್ನು ಹೋಂಕ್ವಾರಂಟೈನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಟೆಸ್ಟ್ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

    ಓರ್ವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢ ಪಟ್ಟಿರುವುದರಿಂದ ಶಾಲೆಯ ಮಕ್ಕಳಿಗೆ ಹಾಗೂ ಪೋಷಕರಲ್ಲಿ ಭೀತಿ ಉಂಟಾಗಿದೆ. ಮತ್ತಷ್ಟು ಮಕ್ಕಳಿಗೆ, ಮಕ್ಕಳಿಂದ ಪೋಷಕರಿಗೆ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ತಹಶೀಲ್ದಾರ್ ಸಹ ಶಾಲೆಗೆ ಭೇಟಿ ಪರಿಶೀಲನೆ ನೆಡೆಸಿದರು. ಎಲ್ಲರಿಗೂ ಕೋವಿಡ್ ಟೆಸ್ಟ್ ಒಳಪಡಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ಕಾರು ಅಪಘಾತ – ಹಿರಿಯ ನಟ ಶಿವರಾಮ್ ತಲೆಗೆ ಗಂಭೀರ ಗಾಯ

    ಮುಂಜಾಗ್ರತಾ ಕ್ರಮವಾಗಿ ಸೋಮವಾರದವರೆಗೆ ಶಾಲೆಗೆ ರಜೆ ನೀಡಲಾಗಿದೆ. ಜೊತೆಗೆ ಶಾಲೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಇತ್ತೀಚೆಗಷ್ಟೇ ಧಾರವಾಡ ಎಸ್‍ಡಿಎಂ ಆಸ್ಪತ್ರೆಯಲ್ಲಿ ಕೊರೊನಾ ಸ್ಫೋಟಗೊಂಡಿತ್ತು. ಸುಮಾರು 281 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದನ್ನೂ ಓದಿ: 9ನೇ ತರಗತಿ ವಿದ್ಯಾರ್ಥಿಗೆ ಕೊರೊನಾ ದೃಢ – ಶಾಲೆಗೆ ರಜೆ

  • ಕೇರಳದಿಂದ ಬಂದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ವಾರಂಟೈನ್

    ಕೇರಳದಿಂದ ಬಂದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ವಾರಂಟೈನ್

    ತುಮಕೂರು: ಓಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಕೇರಳದಿಂದ ಬಂದ 15 ನರ್ಸಿಂಗ್ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಗಂಗಾ 7 ವಿದ್ಯಾರ್ಥಿಗಳಿಗೆ ಹಾಗೂ ವರದರಾಜ್ ನರ್ಸಿಂಗ್ ಕಾಲೇಜು 8 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ನಗರದಲ್ಲಿ ಒಟ್ಟು 15 ವಿದ್ಯಾರ್ಥಿಗಳಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇವರೆಲ್ಲರೂ ಕೇರಳದಿಂದ ಬಂದ ವಿದ್ಯಾರ್ಥಿಗಳಾಗಿದ್ದಾರೆ. ಆದ್ದರಿಂದ ಕೇರಳದ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದರು.

     

    ಕೇರಳದ ವಿದ್ಯಾರ್ಥಿಗಳು ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜಿನ ಎಲ್ಲಾ 180 ವಿದ್ಯಾರ್ಥಿಗಳಿಗೂ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಓಮಿಕ್ರಾನ್ ಪರೀಕ್ಷೆಗಾಗಿ ಲ್ಯಾಬ್‍ಗೆ ಸ್ವಾಬ್ ಮಾದರಿ ರವಾನೆ ಮಾಡಲಾಗಿದೆ.ಇದನ್ನೂ ಓದಿ: ನಾಳೆಯಿಂದ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಅನುಮತಿ- ವೀಕ್‍ಡೇಸ್‍ನಲ್ಲಿ ಅವಕಾಶ, ವೀಕೆಂಡ್‍ನಲ್ಲಿ ನಿರ್ಬಂಧ

    ಇದೇ ವೇಳೆ 15 ವಿದ್ಯಾರ್ಥಿಗಳ ಸ್ವಾಬ್‍ನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. 18 ವರ್ಷ ಮತ್ತು ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಕನಿಷ್ಟ ಒಂದು ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಮಾತ್ರ ತರಗತಿ ಅವಕಾಶ ನೀಡಲಾಗಿದೆ. ಲಸಿಕೆ ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ನಿರ್ಬಂಧ ಹೇರಲಾಗಿದೆ. ಈ ಕುರಿತು ಎಲ್ಲಾ ಕಾಲೇಜುಗಳಿಗೆ ಆದೇಶ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕೇಂದ್ರ ತೆಗೆದುಕೊಳ್ಳೋ ತೀರ್ಮಾನದ ಮೇಲೆ ಬೂಸ್ಟರ್ ಡೋಸ್ ನೀಡೋ ಬಗ್ಗೆ ತೀರ್ಮಾನ: ಸುಧಾಕರ್

  • ನಟ ಕಮಲ್ ಹಾಸನ್‍ಗೆ ಕೊರೊನಾ ಸೋಂಕು ದೃಢ

    ನಟ ಕಮಲ್ ಹಾಸನ್‍ಗೆ ಕೊರೊನಾ ಸೋಂಕು ದೃಢ

    ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟರಲ್ಲಿ ಒಬ್ಬರಾದ ಕಮಲ್ ಹಾಸನ್‍ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

    ಈ ಬಗ್ಗೆ ಸ್ವತಃ ನಟ ತಮ್ಮ ಟ್ಟಿಟ್ಟರ್ ಮೂಲಕ ತಿಳಿಸಿದ್ದಾರೆ. ಕೊರೊನಾ ಸೋಂಕು ಇರುವುದು ದೃಢಪಟ್ಟಿರುವುದಾಗಿ ಹೇಳಿರುವ ಅವರು ಜಾಗೃತರಾಗಿರುವಂತೆ ಕರೆ ನೀಡಿದ್ದಾರೆ.

    ಟ್ವಿಟ್ಟರ್‍ನಲ್ಲಿ ಏನಿದೆ?: ಅಮೆರಿಕ ಪ್ರವಾಸದಿಂದ ಹಿಂದಿರುಗಿದ ಬಳಿಕ ನನಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದು, ಟೆಸ್ಟ್ ಮಾಡಲಾಗಿತ್ತು. ಈ ವೇಳೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಕೊರೊನಾ ಸಾಂಕ್ರಾಮಿಕ ರೋಗ ಇನ್ನೂ ತೊಲಗಿಲ್ಲವೆಂದು ಎಲ್ಲರೂ ಅರ್ಥ ಮಾಡಿಕೊಳ್ಳೊಣ ಮತ್ತು ಜವಾಬ್ದಾರಿಯುತವಾಗಿ ವರ್ತಿಸೋಣ. ಎಲ್ಲರೂ ಸುರಕ್ಷಿತವಾಗಿರಿ ಎಂದು ಬರೆದುಕೊಂಡಿದ್ದಾರೆ.

    CORONA-VIRUS.

    ತಮ್ಮ ಫ್ಯಾಷನ್ ಬ್ರ್ಯಾಂಡ್ ಹೌಸ್ ಆಫ್ ಖದ್ದರ್‍ನ್ನು ಪ್ರಾರಂಭಿಸಲು 67 ವರ್ಷದ ನಟ ಕಮಲ್ ಹಾಸನ್ ಯುಎಸ್‍ಗೆ ತೆರಳಿದ್ದರು. ಈ ಕಾರ್ಯಕ್ರಮ ಕಳೆದ ವಾರ ಚಿಕಾಗೋದಲ್ಲಿ ನಡೆದಿದೆ. ಭಾರತಕ್ಕೆ ಮರಳಿದ ನಂತರ ವಾರಂತ್ಯದ ಸಂಚಿಕೆಯನ್ನು ನಡೆಸಲು ತಮಿಳಿನ ಬಿಗ್‍ಬಾಸ್ ಸೆಟ್‍ಗೆ ಹೋಗಿದ್ದರು. ವಾರಾಂತ್ಯದ ಸಂಚಿಕೆಯಲ್ಲಿ, ಕಮಲ್ ಹಾಸನ್ ಮನೆಯಲ್ಲಿ ಸ್ಪರ್ಧಿಗಳೊಂದಿಗೆ ಹಾಗೂ ಸ್ಟುಡಿಯೋದಲ್ಲಿ ಪ್ರೇಕ್ಷಕರೊಂದಿಗೆ ಬಹಳ ಉತ್ಸಾಹದಿಂದ ತೊಡಗಿಕೊಂಡಿದ್ದರು. ಇದನ್ನೂ ಓದಿ: ಕೊಹ್ಲಿ ಪುತ್ರಿಯನ್ನು ರೇಪ್ ಮಾಡ್ತಿನಿ ಅಂದಿದ್ದ ಐಐಟಿ ಪದವೀಧರನಿಗೆ ಜಾಮೀನು

    ಕಮಲ್ ಅವರಿಗೆ ಇದೇ ಮೊದಲ ಬಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸದ್ಯ ನಟ ತಮ್ಮ ಮುಂಬರುವ ವಿಕ್ರಮ್ ಚಿತ್ರದಲ್ಲಿ ನಿರತರಾಗಿದ್ದಾರೆ. ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಚಿತ್ರದಲ್ಲಿ ಕಮಲ್ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಹಾಗೂ ಫಹಾದ್ ಫಾಸಿಲ್ ಕೂಡಾ ನಟಿಸಲಿದ್ದಾರೆ.

  • ಕೊರೊನಾ ಇಳಿಮುಖ: ಬೆಂಗಳೂರಿನಲ್ಲಿ 181 ಸೇರಿ 504 ಪ್ರಕರಣ ಪತ್ತೆ

    ಕೊರೊನಾ ಇಳಿಮುಖ: ಬೆಂಗಳೂರಿನಲ್ಲಿ 181 ಸೇರಿ 504 ಪ್ರಕರಣ ಪತ್ತೆ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 504 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,973,899ಕ್ಕೆ ಏರಿಕೆಯಾಗಿದೆ.

    ಮಹಾಮಾರಿಗೆ ಇಂದು 20 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,746ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 181 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,45,671ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ.

    ರಾಜ್ಯದಲ್ಲಿ ಇಂದು 893 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,23,320ಕ್ಕೆ ಏರಿಕೆಯಾಗಿದೆ. ಇನ್ನು 12,804 ಸಕ್ರಿಯ ಪ್ರಕರಣಗಳಿವೆ.

    ರಾಜ್ಯಾದ್ಯಂತ ಇಂದು 1,03,800 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 504 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.0.48ಕ್ಕೆ ಇಳಿದಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಮನಗರ, ವಿಜಯಪುರ ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿವೆ. ಬಳ್ಳಾರಿ 3, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 181, ಬೀದರ್ 1, ಚಾಮರಾಜನಗರ 4, ಚಿಕ್ಕಮಗಳೂರು 19, ಚಿತ್ರದುರ್ಗ 7, ದಕ್ಷಿಣ ಕನ್ನಡ 83, ದಾವಣಗೆರೆ 2, ಹಾಸನ 18, ಕಲಬುರಗಿ 1, ಕೊಡಗು 26, ಕೋಲಾರ 11, ಮೈಸೂರು 47, ಮಂಡ್ಯ 8, ರಾಯಚೂರು 1, ಶಿವಮೊಗ್ಗ 18, ತುಮಕೂರು 20, ಉಡುಪಿ 24, ಹಾಗೂ ಉತ್ತರಕನ್ನಡ 12, ಕೊರೊನಾ ಪ್ರಕರಣಗಳು ದಾಖಲಾಗಿದೆ.

  • ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ ತಲೈವಾ

    ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ ತಲೈವಾ

    ಚೆನ್ನೈ: ಕೋವಿಡ್-19 ಎರಡನೇ ಅಲೆ ವಿರುದ್ಧದ ಹೋರಾಟಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸೂಪರ್ ಸ್ಟಾರ್ ರಜನಿಕಾಂತ್ 50 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.

    ಸಚಿವಾಲಯದಲ್ಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಭೇಟಿಯಾದ ರಜನಿಕಾಂತ್ 50 ಲಕ್ಷ ರೂ. ದೇಣಿಗೆಯ ಚೆಕ್ ಹಸ್ತಾಂತರಿಸಿದರು. ಕೋವಿಡ್-19 ನಿಯಂತ್ರಣ ನಿಟ್ಟಿನಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಜನರು ಪಾಲಿಸುವಂತೆ ಮನವಿ ಮಾಡಿದ್ದಾರೆ.

    ಕೋವಿಡ್-19 ವಿರುದ್ಧದ ಹೋರಾಟಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಸ್ಟಾಲಿನ್ ಜನರಲ್ಲಿ ಮನವಿ ಮಾಡಿದ ನಂತರ ರಜನಿಕಾಂತ್ ದೇಣಿಗೆ ನೀಡಿದ್ದಾರೆ. ತಮಿಳುನಾಡಿನಲ್ಲಿ ನಿನ್ನೆ 12,450 ಹೊಸ ಕೋವಿಡ್-19 ಪ್ರಕರಣಗಳು, 20,905 ಗುಣಮುಖ ಹಾಗೂ 303 ಸಾವಿನ ಪ್ರಕರಣಗಳು ವರದಿಯಾಗಿವೆ.

  • ಸರ್ಕಾರ ಐಸಿಯುವಿನಲ್ಲಿಲ್ಲ, ಸಿದ್ದರಾಮಯ್ಯನವರೇ ಐಸಿಯುನಲ್ಲಿದ್ದಾರೆ: ಸೋಮಶೇಖರ್

    ಸರ್ಕಾರ ಐಸಿಯುವಿನಲ್ಲಿಲ್ಲ, ಸಿದ್ದರಾಮಯ್ಯನವರೇ ಐಸಿಯುನಲ್ಲಿದ್ದಾರೆ: ಸೋಮಶೇಖರ್

    ಮೈಸೂರು: ಸರ್ಕಾರ ಐಸಿಯುವಿನಲ್ಲಿಲ್ಲ, ಸಿದ್ದರಾಮಯ್ಯನವರೇ ಐಸಿಯುವಿನಲ್ಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಚಿವ ಎಸ್‍ಟಿ ಸೋಮಶೇಖರ್ ಅವರಿಗೆ ತಿರುಗೇಟು ನೀಡಿದ್ದಾರೆ.

    ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಸಿಎಂ ಬಿಎಸ್‍ವೈ ಆಸ್ಪತ್ರೆಯಲ್ಲಿದ್ದಾರೆ, ರಾಜ್ಯ ಬಿಜೆಪಿ ಸರ್ಕಾರ ಐಸಿಯುವಿನಲ್ಲಿದೆ ಎಂದು ಸಿದ್ದರಾಮಯ್ಯ ನಿನ್ನೆ ಸಾಲು ಸಾಲು ಟ್ವೀಟ್ ಮಾಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಎಸ್ ಟಿ ಸೋಮಶೇಖರ್, ಸಿಎಂಗೆ ಕೋವಿಡ್ ಪಾಸಿಟಿವ್ ಇರುವ ಕಾರಣ ಆಸ್ಪತ್ರೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿದ್ದರೂ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದಾರೆ. ಐಸಿಯುವಿನಲ್ಲಿರುವುದು ಸರ್ಕಾರ ಅಲ್ಲ, ಸಿದ್ದರಾಮಯ್ಯ ಎಂದಿದ್ದಾರೆ.

    ಮೈಸೂರಿನಲ್ಲಿ ದಿನೇದಿನೇ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುನ್ನಚ್ಚರಿಕೆ ಕ್ರಮ ಏನು ಕೈಗೊಳ್ಳಬೇಕು ಹಾಗೂ ಯಾವುದಾದರು ಹೊಸ ಆದೇಶ ಜಾರಿಗೊಳಿಸಬೇಕಾ ಎಂಬುದರ ಬಗ್ಗೆ ಇಂದು ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಸದ್ಯಕ್ಕೆ ಮೈಸೂರಿನಲ್ಲಿ ಬೆಡ್ ಆಕ್ಸಿಜನ್ ಕೊರತೆ ಇಲ್ಲ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಲಾಕ್‍ಡೌನ್ ಅವಶ್ಯಕತೆ ಇಲ್ಲ. ಲಾಕ್‍ಡೌನ್‍ನಿಂದ ಜನರು ಆರ್ಥಿಕವಾಗಿ ಕುಸಿದು ಹೋಗಿದ್ದಾರೆ. ಕಠಿಣ ಕ್ರಮಗಳ ಮೂಲಕ ವೈರಸ್ ನಿಯಂತ್ರಣ ಮಾಡಬಹುದು ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

    ಮೈಸೂರು ಡಿಸಿ ಆದೇಶ ರದ್ದಿಗೆ ಸಚಿವ ಸೋಮಶೇಖರ್ ಸ್ಪಷ್ಟನೆ ನೀಡಿದ್ದು, ಬೆಂಗಳೂರಿನಿಂದ ಮೈಸೂರಿಗೆ ಬರುವವರು ಕಡ್ಡಾಯವಾಗಿ ಕೊರೋನಾ ರಿಪೋರ್ಟ್ ತರಬೇಕೆಂದು ಮೈಸೂರು ಡಿಸಿ ಆದೇಶಿಸಿರಲಿಲ್ಲ. ಕೇವಲ ಸಲಹೆ ನೀಡಿ ಮನವಿ ಮಾಡಿದ್ದರು. ಆದರೆ ಇದನ್ನು ಯಾರೋ ತಿರುಚಿ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿದ್ದರು. ಹೀಗಾಗಿ ಡಿಸಿ ಅವರ ಎಲ್ಲ ಆದೇಶಗಳು ರದ್ದಾದವು. ಈ ವಿಚಾರವಾಗಿ ನಾನು ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನ ಪಟ್ಟೆ. ಅಷ್ಟರಲ್ಲಿ ಕಾಲ ಮಿಂಚಿತ್ತು ಎಂದು ಸ್ಪಷ್ಟನೆ ನೀಡಿದರು.

  • ಯಾರು ಲಸಿಕೆ ಪಡೆಯಬಹುದು? ಯಾರು ಪಡೆಯಬಾರದು? ಕೇಂದ್ರದ ಮಾರ್ಗಸೂಚಿಯಲ್ಲಿ ಏನಿದೆ?

    ಯಾರು ಲಸಿಕೆ ಪಡೆಯಬಹುದು? ಯಾರು ಪಡೆಯಬಾರದು? ಕೇಂದ್ರದ ಮಾರ್ಗಸೂಚಿಯಲ್ಲಿ ಏನಿದೆ?

    ನವದೆಹಲಿ: ದೇಶವನ್ನು ವರ್ಷಗಳ ಕಾಲ ಕಾಡಿರುವ ಮತ್ತು ಈಗಲೂ ಸಮಸ್ಯೆ ತಂದಿಟ್ಟಿರುವ ಹೆಮ್ಮಾರಿ ಕೊರೊನಾಗೆ ಲಸಿಕೆ ಬಂದಾಗಿದೆ. ದೇಶಾದ್ಯಂತ ಶನಿವಾರದಿಂದ ಕೊರೋನಾ ಲಸಿಕೆಯ ಮಹಾಯಜ್ಞ ಶುರುವಾಗಲಿದೆ.

    ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 10.30ಕ್ಕೆ ಚಾಲನೆಗೆ ನೀಡಲಿದ್ದಾರೆ. ಅಲ್ಲದೆ, ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೊದಲ ದಿನವಾದ ನಾಳೆ ದೇಶಾದ್ಯಂತ 3 ಲಕ್ಷ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಪಡೆಯಲಿದ್ದಾರೆ.

    ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಮತ್ತು ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ವ್ಯಾಕ್ಸಿನ್ ಹಂಚಿಕೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನೆ ಮಾಡಲಿದ್ದಾರೆ. ಪುಣೆಯ ಸೆರಮ್ ಇನ್‌ಸ್ಟಿಟ್ಯೂಟ್‌ ತಯಾರಿಸಿರುವ ʼಕೊವಿಶೀಲ್ಡ್’ ಲಸಿಕೆಗಳು ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ರವಾನೆಯಾಗಿದೆ.

    ಈ ಮಧ್ಯೆ, ನಾಳೆ ಹೈದ್ರಾಬಾದ್‍ನಿಂದಲೂ ಭಾರತ್ ಬಯೋಟೆಕ್‍ನ ಕೊವಾಕ್ಸಿನ್ ಲಸಿಕೆ ಪೊರೈಕೆ ಶುರುವಾಗಲಿದೆ. ದೇಶದ 12 ಕಡೆ 56 ಲಕ್ಷ ಕೊವಾಕ್ಸಿನ್ ಲಸಿಕೆ ಸಪ್ಲೈ ಆಗಲಿದೆ. 1 ಕೊವಾಕ್ಸಿನ್ ಲಸಿಕೆಗೆ 295 ರೂ.ನಂತೆ ವ್ಯಾಕ್ಸಿನ್ ಖರೀದಿ ಆಗಲಿದೆ. ಒಟ್ಟು 55 ಲಕ್ಷ ಲಸಿಕೆಯನ್ನು ಭಾರತ್ ಬಯೋಟೆಕ್ ಪೂರೈಸಲಿದ್ದು, ಮೊದಲ ಕಂತು – 38.5 ಲಕ್ಷ, ಎರಡನೇ ಕಂತು – 16.5 ಲಕ್ಷ ಲಸಿಕೆ ಇರಲಿದೆ.

    ದೇಶಾದ್ಯಂತ ಕೋವಿಡ್ ಲಸಿಕೆ ವಿತರಣೆ ಆಗುತ್ತಿರುವ ಹಿನ್ನೆಲೆಯಲ್ಲಿ . ಕೇಂದ್ರ ಆರೋಗ್ಯ ಸಚಿವಾಲಯ ಲಸಿಕೆ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಯಾರು ಲಸಿಕೆ ತೆಗೆದುಕೊಳ್ಳಬಹುದು..? ಯಾರಿಗೆ ಲಸಿಕೆ ಕೊಡಬಹುದು..? ಯಾರಿಗೆ ಕೋವಿಡ್ ಲಸಿಕೆ ಕೊಡಬಾರದು ಎಂಬ ಬಗ್ಗೆ ಮಾರ್ಗಸೂಚಿ ನೀಡಿದೆ.

    ಮಾರ್ಗಸೂಚಿಯಲ್ಲಿ ಏನಿದೆ?
    – 18 ಮತ್ತು 18 ವರ್ಷ ಮೇಲ್ಪಟ್ಟವರಿಗಷ್ಟೇ ಲಸಿಕೆ
    – ಬಾಣಂತಿಯರು, ಸ್ತನ್ಯಪಾನ ನೀಡುತ್ತಿರುವ ತಾಯಂದಿರಿಗೆ ವ್ಯಾಕ್ಸಿನ್ ಬೇಡ
    – ಗರ್ಭಿಣಿಯರು, ಗರ್ಭಧಾರಣೆ ಬಗ್ಗೆ ಇನ್ನೂ ಸ್ಪಷ್ಟ ಆಗದೇ ಇದ್ದಲ್ಲಿ ವ್ಯಾಕ್ಸಿನ್ ಬೇಡ
    – ಅಲರ್ಜಿ ಸಮಸ್ಯೆ ಇರುವವರು ವ್ಯಾಕ್ಸಿನ್ ಪಡೆಯಬಾರದು
    – ಕೊವಿಡ್ ಸೋಂಕಿಗೆ ಒಳಗಾದವರು, ಬಹು ಕಾಯಿಲೆ ಬಾಧಿತರು, ರೋಗ ನಿರೋಧಕ ಶಕ್ತಿ ಕಡಿಮೆ ಇರೋವವರು ಲಸಿಕೆ ಹಾಕಿಸಿಕೊಳ್ಳಬೇಕು

    – ಮೊದಲಿಗೆ ಯಾವ ವ್ಯಾಕ್ಸಿನ್ ತೆಗೆದುಕೊಳ್ತಿರೋ 2ನೇ ಡೋಸ್ ಅದೇ ಇರಬೇಕು (ಉದಾ: ಕೊವಿಶೀಲ್ಡ್ ಲಸಿಕೆ ಪಡೆದಿದ್ದರೆ, 2ನೇ ಡೋಸ್ ಕೋವಿಶೀಲ್ಡ್‌ ಆಗಿರಬೇಕು)
    – ಸದ್ಯಕ್ಕೆ ಕೊವಿಡ್ ಚಿಕಿತ್ಸೆ, ರೋಗ ನಿರೋಧಕ ಔಷಧಿ, ಪ್ಲಾಸ್ಮಾ ಚಿಕಿತ್ಸೆ ಪಡೆಯುತ್ತಿದ್ದರೆ ವ್ಯಾಕ್ಸಿನ್ ಬೇಡ
    – ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರೂ ಲಸಿಕೆ ಬೇಡ

    – ಗುಣಮುಖರಾದ 4 ರಿಂದ 8 ವಾರಗಳ ಬಳಿಕ ಲಸಿಕೆ ಪಡೆಯಬಹುದು
    – ಸಣ್ಣ ಪ್ರಮಾಣದ ಅಡ್ಡ ಪರಿಣಾಮ ಕಾಣಿಸಬಹುದು
    – ಸ್ವಲ್ಪ ಜ್ವರ, ಇಂಜೆಕ್ಷನ್ ಪಡೆದ ಕಡೆ ನೋವು, ದೇಹದಲ್ಲಿ ನೋವು ಕಾಣಿಸಿಕೊಳ್ಳಬಹುದು
    – ಅಡ್ಡ ಪರಿಣಾಮಗಳ ಬಗ್ಗೆ ಚಿಂತೆ ಬೇಡ, ತಾನಾಗೇ ಗುಣಮುಖ ಆಗುತ್ತೆ
    – ಸಂತಾನೋತ್ಪತ್ತಿ ಮೇಲೆ ಕೊವಿಡ್ ಲಸಿಕೆ ಪರಿಣಾಮ ಬೀರಲ್ಲ
    – ಬೇರೆ ಲಸಿಕೆ ಪಡೆಯುತ್ತಿದ್ದರೆ 14 ದಿನಗಳ ಅಂತರದಲ್ಲಿ ಕೋವಿಡ್ ಲಸಿಕೆ ಪಡೆಯಬಹುದು
    – ಕೊ-ವಿನ್ ಆ್ಯಪ್‍ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ
    – ಸಾರ್ವಜನಿಕರಿಗೆ ನೋಂದಣಿಗಾಗಿ ಇನ್ನೂ ಕೊ-ವಿನ್ ಆ್ಯಪ್ ಬಿಡುಗಡೆ ಆಗಿಲ್ಲ