Tag: ಕೌನ್ಸಿಲಿಂಗ್

  • ಸೋನು ಗೌಡ ಕೇಸ್ – ಬಾಲಕಿ ಪೋಷಕರಿಗೆ ಕೌನ್ಸಿಲಿಂಗ್‌ಗೆ ಮುಂದಾದ ರಕ್ಷಣಾ ಆಯೋಗ

    ಸೋನು ಗೌಡ ಕೇಸ್ – ಬಾಲಕಿ ಪೋಷಕರಿಗೆ ಕೌನ್ಸಿಲಿಂಗ್‌ಗೆ ಮುಂದಾದ ರಕ್ಷಣಾ ಆಯೋಗ

    ಬೆಂಗಳೂರು: ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆ ತಾಯಿಯನ್ನು (Parents) ಕೌನ್ಸಿಲಿಂಗ್ (Counselling) ಮಾಡಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಮುಂದಾಗಿದೆ. ಕೌನ್ಸಿಲಿಂಗ್‌ನಲ್ಲಿ ಹಲವು ಅಂಶಗಳನ್ನು ಚರ್ಚಿಸಲಿದೆ. ತಂದೆ ತಾಯಿ ತಪ್ಪು ಮಾಡಿದ್ದರೆ ಕ್ರಮ, ಇಲ್ಲವಾದಲ್ಲಿ ತಂದೆ ತಾಯಿಗೆ ಮಗುವನ್ನ ವಾಪಸ್ ಕೊಡಿಸಲು ರಕ್ಷಣಾ ಆಯೋಗ ಮುಂದಾಗಿದೆ.

    ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ಸೋನು ಶ್ರೀನಿವಾಸ್ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಮಗುವಿನ ತಂದೆ ತಾಯಿಯನ್ನು ಕೌನ್ಸಿಲಿಂಗ್ ಮಾಡಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ ಮುಂದಾಗಿದೆ. ಮಗುವನ್ನು ಸೋನು ಶ್ರೀನಿವಾಸ್ ಗೌಡ ಕರೆದುಕೊಂಡು ಹೋದ ಮೇಲೆ ಪೋಷಕರು ಯಾಕೆ ದೂರು ಕೊಡಲಿಲ್ಲ? ಅವರಿಂದ ಆಮಿಷಕ್ಕೆ ಒಳಗಾಗಿದ್ರಾ ಎಂಬ ಆಯಾಮದಲ್ಲಿ ಕೌನ್ಸಿಲಿಂಗ್ ಮಾಡಿ ಮಗುವನ್ನು ರಕ್ಷಣೆ ಮಾಡೋಕೆ ಮುಂದಾಗಿದೆ. ಇದನ್ನೂ ಓದಿ: ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿಗೆ ಗನ್‌ಮ್ಯಾನ್‌!

    ಸದ್ಯ ಮಗು ಬಾಲಿಕ ಆಶ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿ ನಿಗಾದಲ್ಲಿದೆ. ದತ್ತು ಪಡೆಯುವಾಗ ಅನುಸರಿಸಬೇಕಾದ ನಿಯಮಗಳನ್ನು ಅನುಸರಿಸಿಲ್ಲ. ತಂದೆ ತಾಯಿಯನ್ನು ಕೌನ್ಸಿಲಿಂಗ್ ಮಾಡಿ ಅವರದ್ದು ತಪ್ಪು ಇದ್ದರೆ ಕ್ರಮಕ್ಕೆ ಮುಂದಾಗುತ್ತಾರೆ. ತಂದೆ ತಾಯಿ ತಪ್ಪು ಇಲ್ಲದಿದ್ದರೆ ಮಗುವನ್ನು ತಂದೆ ತಾಯಿಗೆ ವಾಪಸ್ ಒಪ್ಪಿಸಲು ತಯಾರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳು: ಹೆಚ್‍ಡಿಕೆ

    ಅತ್ತ ಸೋನು ಜೈಲಿನಲ್ಲಿದ್ದರೆ ಇತ್ತ ಮಕ್ಕಳ ಆಯೋಗ ತಂದೆ ತಾಯಿಯನ್ನು ಕೌನ್ಸಿಲಿಂಗ್ ಮಾಡೋದಕ್ಕೆ ಮುಂದಾಗಿದೆ. ಕೌನ್ಸಿಲಿಂಗ್ ಬಳಿಕ ಏನೆಲ್ಲ ಬೆಳವಣಿಗೆಗಳು ಆಗಲಿವೆ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಮಹುವಾ ಮೊಯಿತ್ರಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

  • ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್‌ ಕಾಲೇಜುಗಳ ಉಪನ್ಯಾಸಕರ ವರ್ಗಕ್ಕೆ ಕೌನ್ಸೆಲಿಂಗ್

    ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್‌ ಕಾಲೇಜುಗಳ ಉಪನ್ಯಾಸಕರ ವರ್ಗಕ್ಕೆ ಕೌನ್ಸೆಲಿಂಗ್

    – ಶೇ.15ರಷ್ಟು ಮೀರದಂತೆ ವರ್ಗ, ಹೊಸ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ
    – ಐದು ವಲಯವಾಗಿ ವಿಂಗಡನೆ

    ಬೆಂಗಳೂರು: ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಮೂಲಕ ನಡೆಯಲಿದ್ದು, ಒಟ್ಟು ಬೋಧನಾ ಸಿಬ್ಬಂದಿಯ ಪೈಕಿ ಶೇ.15ರಷ್ಟು ಮೀರದಂತೆ ವರ್ಗಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಉಪ ಮುಖ್ಯಮಂತ್ರಿ, ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

    ಈ ಬಗ್ಗೆ ಪದವಿ ಹಾಗೂ ತಾಂತ್ರಿಕ ಕಾಲೇಜುಗಳ ಬೋಧನಾ ಸಿಬ್ಬಂದಿ ವರ್ಗಕ್ಕೆ ಹೊಸ ನಿಯಮಾವಳಿ ರೂಪಿಸಿ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಒಂದೇ ಕಡೆ 4 ವರ್ಷ ಕೆಲಸ ಮಾಡಿರುವ ಬೋಧಕರು ವರ್ಗಾವಣೆಗೆ ಅರ್ಹರಾಗಿದ್ದು, ಈ ಅಂಶವನ್ನು ಆಧಾರವಾಗಿಟ್ಟುಕೊಂಡು ವರ್ಗಾವಣೆ ಪ್ರಮಾಣವನ್ನು ನಿಗದಿಪಡಿಸಲಾಗಿದೆ. ಪದವಿ ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಬೋಧಕರಿಗೆ ಇದು ಅನ್ವಯವಾಗುತ್ತದೆ ಎಂದು ಎಂದು ಅವರು ತಿಳಿಸಿದ್ದಾರೆ.

    ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವರ್ಗಾವಣೆಗೆ ಚಾಲನೆ ಸಿಗಲಿದೆ. ಆದಷ್ಟು ಬೇಗ ಕೌನ್ಸೆಲಿಂಗ್ ದಿನಾಂಕಗಳನ್ನು ಪ್ರಕಟಿಸಲಾಗುವುದು. ಎಲ್ಲರಿಗೂ ಇಷ್ಟವಾಗುವ ಹಾಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಅವರು ವಿವರಿಸಿದರು.

    ಐದು ವಲಯ:
    ರಾಜ್ಯವನ್ನು ಎ, ಬಿ, ಸಿ, ಡಿ ಮತ್ತು ಇ ವಲಯ ಎಂದು ಐದು ವಿಭಾಗ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯನ್ನು ‘ಎ’ ವಲಯವೆಂದು; ಬಿಡಿಎ ಮತ್ತು ಬೆಂಗಳೂರು ಹೊರತುಪಡಿಸಿದ ಇತರ ಮಹಾನಗರ ಪಾಲಿಕೆಗಳ ವ್ಯಾಪ್ತಿಯನ್ನು ‘ಬಿ’ ವಲಯವೆಂದು; ಜಿಲ್ಲಾ ಕೇಂದ್ರ ಹಾಗೂ ನಗರಸಭೆಗಳ ವ್ಯಾಪ್ತಿಯನ್ನು ‘ಸಿ’ ವಲಯ; ತಾಲ್ಲೂಕು ಕೇಂದ್ರ ಹಾಗೂ ಪಟ್ಟಣ ಪಂಚಾಯತಿಗಳನ್ನು ‘ಡಿ’ ವಲಯ ಹಾಗೂ ಮೇಲಿನ ಎಲ್ಲ ವಲಯಗಳ ವ್ಯಾಪ್ತಿಯನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಕಾಲೇಜುಗಳನ್ನು ‘ಇ’ ವಲಯಗಳೆಂದು ವಿಂಗಡಿಸಲಾಗಿದೆ. ಯಾರು ಯಾವ ವಲಯದಲ್ಲಿ ನಾಲ್ಕು ವರ್ಷ ಸೇವೆ ಸಲ್ಲಿಸುತ್ತಾರೊ ಅವರು ಬೇರೊಂದು ವಲಯಕ್ಕೆ ವರ್ಗವಾಗಲು ಅರ್ಹತೆ ಪಡೆಯುತ್ತಾರೆ ಎಂದು ಉಪ ಮುಖ್ಯಮಂತ್ರಿ ವಿವರಿಸಿದರು.

    ವರ್ಗಾವಣೆ ಹೇಗೆ?
    ರಾಜ್ಯದ ಐದೂ ಶೈಕ್ಷಣಿಕ ವಿಭಾಗಗಳ ವ್ಯಾಪ್ತಿಯ ಪದವಿ, ಡಿಪ್ಲೊಮೋ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಒಟ್ಟು ಬೋಧನಾ ಸಿಬ್ಬಂದಿಯ ಪೈಕಿ ಶೇ.9ರಷ್ಟು ಬೋಧಕರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕಡ್ಡಾಯವಾಗಿ ವರ್ಗ ಮಾಡಲಾಗುವುದು. ಪತಿ-ಪತ್ನಿಯರ ಪ್ರಕರಣಗಳಲ್ಲಿ ಶೇ.3ರಷ್ಟು ಸಿಬ್ಬಂದಿಯನ್ನು ಮಾತ್ರ ವರ್ಗ ಮಾಡಲಾಗುವುದು. ವಿಧವೆಯರು, ಡಿವೋರ್ಸ್‌ ಪಡೆದ ಬೋಧಕಿಯರು, ವಿಕಲಚೇತನರ ಹೊಣೆಗಾರಿಕೆ ಇರುವವರು, ಸೇನೆ ಅಥವಾ ಅರೆ ಸೇನಾಪಡೆಯಲ್ಲಿ ಕೆಲಸ ಮಾಡುತ್ತಿರುವವರ ಪ್ರಕರಣಗಳಲ್ಲಿ ಶೇ.1ರಷ್ಟು, ಅಂಗವೈಕಲ್ಯ ಹೊಂದಿರುವ ವ್ಯಕ್ತಿಯ ಶೇ.1ರಷ್ಟು ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳು ಇರುವವರ ಪೈಕಿ ಶೇ.1ರಷ್ಟು ಬೋಧಕರನ್ನು ವರ್ಗಾವಣೆಗೆ ಪರಿಗಣಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

    ಪಾರದರ್ಶಕತೆ:
    ವರ್ಗಾವಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಸರಕಾರದ ಮುಖ್ಯ ಉದ್ದೇಶವಾಗಿದೆ. 4 ವರ್ಷಗಳಿಗೂ ಹೆಚ್ಚು ಕಾಲದಿಂದ ಒಂದೇ ಕಡೆ ಠಿಕಾಣಿ ಹೂಡಿರುವ ಬೋಧನಾ ಸಿಬ್ಬಂದಿಯನ್ನು ಮುಲಾಜಿಲ್ಲದೆ ವರ್ಗ ಮಾಡಲಾಗುವುದು. ಇದಕ್ಕೆ ಸಂಬಂಧಿತ ಎಲ್ಲ ನಿಯಮಗಳನ್ನು ಪ್ರಕಟಿಸಲಾಗಿದೆ ಎಂದಿದ್ದಾರೆ.

    ಈ ಹಿಂದೆ ವರ್ಗಾವಣೆ ಎಂದರೆ ದೊಡ್ಡ ಪ್ರಹಸನದಂತೆ ನಡೆಯುತ್ತಿತ್ತು. ಆದರೆ, ಇಡೀ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಣೆಗೊಳಪಡಿಸಿ ಎಲ್ಲವೂ ಆನ್‌ಲೈನ್‌ ಮೂಲಕವೇ ನಡೆಸಲಾಗುತ್ತಿದೆ. ವೈಜ್ಞಾನಿಕವಾಗಿ ಎಲ್ಲವೂ ನಡೆಯಲಿದೆ. ಉಪನ್ಯಾಸಕರು ಇನ್ನು ಮುಂದೆ ಸಚಿವರು, ಅಧಿಕಾರಿಗಳ ಕಚೇರಿಗಳ ಸುತ್ತ ಅಲೆಯುವ ಅವ್ಯವಸ್ಥೆ ಇರುವುದಿಲ್ಲ. ಕೌನ್ಸೆಲಿಂಗ್‌ ಮೂಲಕವೇ ವರ್ಗಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

  • ಪ್ರವಾಹ ಸಂತ್ರಸ್ತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಕೌನ್ಸಿಲಿಂಗ್‍ಗೆ ಅವಕಾಶ ಸಾಧ್ಯವಿಲ್ಲ- ಡಿಕೆಶಿ

    ಪ್ರವಾಹ ಸಂತ್ರಸ್ತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಕೌನ್ಸಿಲಿಂಗ್‍ಗೆ ಅವಕಾಶ ಸಾಧ್ಯವಿಲ್ಲ- ಡಿಕೆಶಿ

    ಬೆಂಗಳೂರು: ಮಡಿಕೇರಿಯ ಪ್ರವಾಹ ಸಂತ್ರಸ್ತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ವೈದ್ಯಕೀಯ ಸೀಟ್ ಕೌನ್ಸಿಲಿಂಗ್‍ಗೆ ಅವಕಾಶ ಸಾಧ್ಯವಿಲ್ಲ. ಈ ಕುರಿತು ಸರ್ಕಾರ ಮಧ್ಯ ಪ್ರವೇಶ ಮಾಡುವುದಿಲ್ಲ. ಇದು ಅವರ ವೈಯಕ್ತಿಕ ಸಮಸ್ಯೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಕೌನ್ಸಿಲಿಂಗ್ ಭಾಗಿಯಾಗಲು ಅವಕಾಶ ಕೋರಿ ಯಾವುದೇ ದೂರು ಕೂಡ ಬಂದಿಲ್ಲ. ಆ ರೀತಿ ದೂರು ಬಂದ್ರು ಸರ್ಕಾರ ಏನು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

    ಇಂದು ಕೊನೆ ದಿನದ ಮೆಡಿಕಲ್ ಕೌನ್ಸಿಲಿಂಗ್ ನಡೆಯುತ್ತಿದೆ. ನಾನು ಇಂಟರ್ ಫಿಯರ್ ಆಗಬಾರದು ಅಂತಾ ಕೊನೆ ದಿನ ಬಂದಿದ್ದೇನೆ. ಕೆಇಎ ಸರಿಯಾಗಿ ಪಾರದರ್ಶಕವಾಗಿ ಒಟ್ಟು 49 ಕಾಲೇಜುಗಳ 6,260 ಸೀಟ್ ಗೆ ಕೌನ್ಸಿಲಿಂಗ್ ಪ್ರಕ್ರಿಯೆ ನಡೆದಿದೆ. ಬಾಕಿ ಉಳಿದ 750 ಸೀಟ್ ಗೆ ಇಂದು ಕೊನೆ ಹಂತದ ಕೌನ್ಸಿಲಿಂಗ್ ನಡೆಸಲಾಗುತ್ತಿದೆ. ಮಹಾರಾಷ್ಟ್ರ ತಮಿಳುನಾಡು ಕೇರಳ ರಾಜ್ಯಗಳು ನಮ್ಮನ್ನ ನೋಡಿ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುತ್ತಿದೆ. ಕಾನೂನಿನ ಅಡಿಯಲ್ಲಿ ಒಂದು ಸೀಟ್ ಸಹ ದೋಖಾ ಆಗಿಲ್ಲ. ಇನ್ನು 15 ಸೆಪ್ಟೆಂಬರ್ ಒಳಗೆ ರಿಂದ ಉಳಿದ ಡೆಂಟಲ್ ಸೀಟ್ ಕೌನ್ಸಿಲಿಂಗ್ ಮುಗಿಸಲಾಗುತ್ತೆ ಅಂತ ಅವರು ಹೇಳಿದ್ರು.

    ಇದಕ್ಕೂ ಮೊದಲು ಕೌನ್ಸಿಲಿಂಗ್ ನಲ್ಲಿ ಗೋಲ್ ಮಾಲ್ ನಡೆಯುತ್ತಿರುವ ಅರೋಪ ಹಿನ್ನೆಲೆಯಲ್ಲಿ ಸಚಿವ ಡಿಕೆ ಶಿವಕುಮಾರ್ ಅವರು ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ದಿಢೀರ್ ಭೇಟಿ ನೀಡಿದ್ದಾರೆ. ಅಲ್ಲದೇ ಇದೇ ವೇಳೆ ಕೌನ್ಸಿಲಿಂಗ್ ಬಂದ ವಿದ್ಯಾರ್ಥಿಗಳ, ಪೋಷಕರ ಜತೆ ಸಚಿವರ ಚರ್ಚೆ ನಡೆಸಿದ್ದು, ಕೌನ್ಸಿಲಿಂಗ್ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದಾರೆ

    16 ಸಾವಿರ ಶುಲ್ಕವನ್ನ ಏಕಾಏಕಿ 50 ಸಾವಿರಕ್ಕೆ ಏರಿಕೆ ಮಾಡಿದ ಕುರಿತ ಮಾಧ್ಯಮಗಳ ಪ್ರಶ್ನೆಗೆ, ಒಂದು ಮೆಡಿಕಲ್ ವಿದ್ಯಾರ್ಥಿಯನ್ನ ಓದಿಸಲು 10 ಲಕ್ಷ ರೂ. ಖರ್ಚಾಗುತ್ತೆ. ಯುಕೆಜಿ ಎಲ್ ಕೆಜಿ ಮಕ್ಕಳನ್ನ 50 ಸಾವಿರ ಕೊಟ್ಟು ಶಾಲೆಗೆ ಕಳುಹಿಸುತ್ತಾರೆ. ಮೆಡಿಕಲ್ ಗೆ ಸೇರುವವರಿಗೆ ಏನು ಕಷ್ಟನಾ ಅಂತ ಮರು ಪ್ರಶ್ನೆ ಹಾಕಿದ್ದಾರೆ. ಸಚಿವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮಂಜುಳಾ ಸಾಥ್ ನೀಡಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv