Tag: ಕೌಸ್ತುಭ ಮಣಿ

  • ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ‘ನನ್ನರಸಿ ರಾಧೆ’ ನಟಿ

    ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ‘ನನ್ನರಸಿ ರಾಧೆ’ ನಟಿ

    ಕಿರುತೆರೆಯ ಜನಪ್ರಿಯ ಸೀರಿಯಲ್‌ ‘ನನ್ನರಸಿ ರಾಧೆ’ ನಟಿ (Nannarasi Radhe) ಕೌಸ್ತುಭ ಮಣಿ (Kaustubha Mani) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದಾರೆ. ತಾಯಿಯಾಗ್ತಿರುವ ಶುಭಸುದ್ದಿಯನ್ನು ನಟಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

    ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿಚಾರವನ್ನು ಖುದ್ದಾಗಿ ನಟಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್ ಮತ್ತು ಕಿರುತೆರೆ ಕಲಾವಿದರು ಕೌಸ್ತುಭಗೆ ಶುಭಕೋರುತ್ತಿದ್ದಾರೆ. ಇದನ್ನೂ ಓದಿ:ದರ್ಶನ್ ಜೊತೆಗಿನ ಹೊಸ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ- ವಾವ್ ಎಂದ ಫ್ಯಾನ್ಸ್

    ಕಳೆದ ವರ್ಷ ಏಪ್ರಿಲ್‌ನಲ್ಲಿ ಸಿದ್ಧಾಂತ್ (Sidhanth) ಜೊತೆ ಕೌಸ್ತುಭ ಮಣಿ ಅದ್ಧೂರಿಯಾಗಿ ಮದುವೆಯಾದರು. ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಇದನ್ನೂ ಓದಿ:ನಮ್ಮ ಜನಗಳನ್ನ ಸಾಯಿಸ್ತಾರೆ ಅಂದ್ರೆ ನಾವ್ ಯುದ್ಧ ಮಾಡ್ಲೇಬೇಕು – ಉಗ್ರರ ದಾಳಿ ಖಂಡಿಸಿದ ಪ್ರೇಮ್

    ಕಿರುತೆರೆಯಲ್ಲಿ ಹೆಸರು ಮಾಡಿದ್ದ ನಟಿ ಕೌಸ್ತುಭ ಮಣಿ ಹಿರಿತೆರೆಯಲ್ಲೂ ನಟಿಸಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ’45’ ಸಿನಿಮಾದಲ್ಲಿ ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಜೊತೆ ಕೌಸ್ತುಭ ಕೂಡ ನಟಿಸಿದ್ದಾರೆ. ಈ ಚಿತ್ರದಲ್ಲಿ ಆಗಸ್ಟ್ 15ರಂದು ಬಹುಭಾಷೆಗಳಲ್ಲಿ ’45’ ಚಿತ್ರ ರಿಲೀಸ್ ಆಗಲಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ನನ್ನರಸಿ ರಾಧೆ’ ನಟಿ ಕೌಸ್ತುಭ ಮಣಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ನನ್ನರಸಿ ರಾಧೆ’ ನಟಿ ಕೌಸ್ತುಭ ಮಣಿ

    ಕಿರುತೆರೆ ನಟಿ ಕೌಸ್ತುಭ ಮಣಿ (Kaustubha Mani) ಅದ್ಧೂರಿಯಾಗಿ ಇಂದು (ಏ.26) ಮದುವೆಯಾಗಿದ್ದಾರೆ. ಸಿದ್ಧಾಂತ್ ಸತೀಶ್ (Sidhanth Satish) ದಾಂಪತ್ಯ (Wedding) ಜೀವನಕ್ಕೆ ನಟಿ ಕಾಲಿಟ್ಟಿದ್ದಾರೆ. ಮದುವೆ ಸಂಭ್ರಮದಲ್ಲಿರುವ ನಟಿಗೆ ಅಭಿಮಾನಿಗಳು ಶುಭಕೋರಿದ್ದಾರೆ.

    ಕೌಸ್ತುಭ ಮದುವೆ ಫೋಟೋ ವೈರಲ್ ಆಗಿದ್ದು, ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದಾರೆ. ವರ ಸಿದ್ಧಾಂತ್ ಪಂಚೆ ಮತ್ತು ಶಲ್ಯ ಧರಿಸಿದ್ದಾರೆ. ನಟಿಯ ಮದುವೆಯಲ್ಲಿ ಕುಟುಂಬಸ್ಥರು, ಆಪ್ತರಷ್ಟೇ ಭಾಗಿಯಾಗಿದ್ದರು.

    ಪ್ರಿ ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ಲಿಪ್‌ಲಾಕ್ ಫೋಟೋ ಶೇರ್ ಮಾಡುವ ಮೂಲಕ ಈ ಜೋಡಿ ಗಮನ ಸೆಳೆದಿತ್ತು. ಪುಟ್ಟ ವಿಮಾನದಲ್ಲಿ ರೊಮ್ಯಾಂಟಿಕ್ ಆಗಿ ಫೋಟೋಶೂಟ್ ಮಾಡಿಸಿದ್ದರು. ಇದನ್ನೂ ಓದಿ:ದ್ವೇಷದ ವಿರುದ್ಧ ಮತ ಹಾಕಿದ್ದೇನೆ: ನಟ ಪ್ರಕಾಶ್ ರೈ ವಿಡಿಯೋ ವೈರಲ್

    ಅಂದಹಾಗೆ, ಕೌಸ್ತುಭ ಮಣಿ ಅವರದ್ದು ಅರೇಂಜ್ ಮ್ಯಾರೇಜ್. ಸಿದ್ಧಾಂತ್ ಸತೀಶ್ ಅವರು ಸಾಪ್ಟ್ವೇರ್ ಡೆವಲಪರ್ ಆಗಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಿದ್ಧಾಂತ್ ಅವರು ಕೆನಡಾದ ವಿಶ್ವವಿದ್ಯಾಲಯದಲ್ಲಿ ಎಂಬಿಎ ಮಾಡಿದ್ದರು. ಇತ್ತೀಚೆಗೆ ನಟಿಯ ಎಂಗೇಜ್‌ಮೆಂಟ್ ಅದ್ಧೂರಿಯಾಗಿ ನಡೆದಿತ್ತು.

    ನನ್ನರಸಿ ರಾಧೆ, ಗೌರಿ ಶಂಕರ ಸೀರಿಯಲ್‌ನಲ್ಲಿ ಕೌಸ್ತುಭ ನಟಿಸಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ’45’ ಸಿನಿಮಾದಲ್ಲಿ ಶಿವಣ್ಣ ಮತ್ತು ರಾಜ್ ಬಿ ಶೆಟ್ಟಿ ಜೊತೆ ನಟಿ ತೆರೆಹಂಚಿಕೊಂಡಿದ್ದಾರೆ.

  • ಲಿಪ್‌ಲಾಕ್ ಫೋಟೋ ಹಂಚಿಕೊಂಡ ಕೌಸ್ತುಭ ಮಣಿ

    ಲಿಪ್‌ಲಾಕ್ ಫೋಟೋ ಹಂಚಿಕೊಂಡ ಕೌಸ್ತುಭ ಮಣಿ

    ಕಿರುತೆರೆ ನಟಿ ಕೌಸ್ತುಭ ಮಣಿ (Kaustubha Mani) ಮನೆಯಲ್ಲಿ ಮದುವೆ (Wedding) ಸಂಭ್ರಮ ಮನೆ ಮಾಡಿದೆ. ಭಾವಿ ಪತಿ ಜೊತೆ ಲಿಪ್‌ಲಾಕ್ ಮಾಡುತ್ತಾ ರೊಮ್ಯಾಂಟಿಕ್ ಮೂಡ್‌ಗೆ ನಟಿ ಜಾರಿದ್ದಾರೆ. ಪ್ರಿ ವೆಡ್ಡಿಂಗ್ ಫೋಟೋಶೂಟ್ ಅನ್ನು ರೊಮ್ಯಾಂಟಿಕ್ ಆಗಿ ಮಾಡಿಸಿದ್ದಾರೆ. ಇಬ್ಬರ ಸುಂದರ ಫೋಟೋಗಳನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

    ಕೌಸ್ತುಭ ಮಣಿ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಈಗಾಗಲೇ ಮೆಹೆಂದಿ ಶಾಸ್ತ್ರ ಕೂಡ ಜರುಗಿದೆ. ಸದ್ಯ ಪ್ರಿ ವೆಡ್ಡಿಂಗ್ ಶೂಟ್ ಅನ್ನು ಪುಟ್ಟ ವಿಮಾನದಲ್ಲಿ ಮಾಡಿಸಿದ್ದಾರೆ. ಲೈಟ್ ಬಣ್ಣದ ಧಿರಿಸಿನಲ್ಲಿ ಇಬ್ಬರೂ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ.

    ವಿಮಾನದ ಬಳಿ ಭಾವಿ ಪತಿ ಜೊತೆ ಲಿಪ್‌ಲಾಕ್ ಮಾಡಿರುವ ಫೋಟೋವನ್ನು ನಟಿ ಶೇರ್ ಮಾಡಿದ್ದಾರೆ. ಇಬ್ಬರ ಫೋಟೋಗೆ ನೆಟ್ಟಿಗರು ಬಗೆ ಬಗೆಯ ಕಾಮೆಂಟ್‌ಗಳನ್ನು ಶೇರ್ ಮಾಡಿದ್ದಾರೆ.‌ ಇದನ್ನೂ ಓದಿ:ಎರಡೂ ಕೈ ಮುರಿದುಕೊಂಡಿದ್ದ ನಟಿ ಮನೆಗೆ ವಾಪಸ್ಸು

    ಅಂದಹಾಗೆ, ಕೌಸ್ತುಭ ಮಣಿ ಅವರದ್ದು ಅರೇಂಜ್ ಮ್ಯಾರೇಜ್. ಸಿದ್ಧಾಂತ್ ಸತೀಶ್ ಅವರು ಸಾಪ್ಟ್‌ವೇರ್ ಡೆವಲಪರ್ ಆಗಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಿದ್ಧಾಂತ್ ಅವರು ಕೆನಡಾದ ವಿಶ್ವವಿದ್ಯಾಲಯದಲ್ಲಿ ಎಂಬಿಎ ಮಾಡಿದ್ದರು. ಇತ್ತೀಚೆಗೆ ನಟಿಯ ಎಂಗೇಜ್‌ಮೆಂಟ್‌ ಅದ್ಧೂರಿಯಾಗಿ ನಡೆದಿತ್ತು.

    ನನ್ನರಸಿ ರಾಧೆ (Nanrasi Radhe), ಗೌರಿ ಶಂಕರ ಸೀರಿಯಲ್‌ನಲ್ಲಿ ಕೌಸ್ತುಭ ನಟಿಸಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ’45’ ಸಿನಿಮಾದಲ್ಲಿ ಶಿವಣ್ಣ ಮತ್ತು ರಾಜ್ ಬಿ ಶೆಟ್ಟಿ ಜೊತೆ ನಟಿ ತೆರೆಹಂಚಿಕೊಂಡಿದ್ದಾರೆ.

  • ‌’ನನ್ನರಸಿ ರಾಧೆ’ ನಟಿ ಕೌಸ್ತುಭ ಮಣಿ ಮದುವೆ ಡೇಟ್‌ ಫಿಕ್ಸ್

    ‌’ನನ್ನರಸಿ ರಾಧೆ’ ನಟಿ ಕೌಸ್ತುಭ ಮಣಿ ಮದುವೆ ಡೇಟ್‌ ಫಿಕ್ಸ್

    ಕಿರುತೆರೆ ಬ್ಯೂಟಿ ಕೌಸ್ತುಭ ಮಣಿ (Kaustubha Mani) ಅವರು ಇತ್ತೀಚೆಗೆ ಎಂಗೇಜ್‌ಮೆಂಟ್ ಮಾಡಿಕೊಳ್ಳುವ ಮೂಲಕ ಪಡ್ಡೆಹುಡುಗರಿಗೆ ಶಾಕ್ ಕೊಟ್ಟಿದ್ದರು. ಇದೀಗ ನಟಿಯ ಮದುವೆ (Wedding) ಡೇಟ್ ಫಿಕ್ಸ್ ಆಗಿದೆ. ಏಪ್ರಿಲ್‌ನಲ್ಲಿ ಸಿದ್ಧಾಂತ್ ಸತೀಶ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

    ತಮ್ಮ ಬದುಕಿನ ಹೊಸ ಜರ್ನಿ ಶುರು ಮಾಡಲು ‘ನನ್ನರಸಿ ರಾಧೆ’ ನಟಿ ಎದುರುನೋಡ್ತಿದ್ದಾರೆ. ಗುರುಹಿರಿಯರ ಸಮ್ಮತಿಯ ಮೇರೆಗೆ ಮುಂದಿನ ತಿಂಗಳು ಹಸೆಮಣೆ ಏರೋದಕ್ಕೆ ರೆಡಿಯಾಗಿದ್ದಾರೆ. ಈ ಮದುವೆಗೆ ತಮ್ಮ ಕುಟುಂಬದ ಜೊತೆ ಆಪ್ತರು, ಸ್ನೇಹಿತರಿಗಷ್ಟೇ ಆಹ್ವಾನವಿರಲಿದೆ. ಮಾರ್ಚ್ ಮೊದಲ ಅದ್ಧೂರಿಯಾಗಿ ಎಂಗೇಜ್‌ಮೆಂಟ್ ಆಗಿರುವ ಬಗ್ಗೆ ನಟಿ ಗುಡ್ ನ್ಯೂಸ್ ಹಂಚಿಕೊಂಡಿದ್ದರು.

    ಇತ್ತೀಚೆಗೆ ‘ಗೌರಿ ಶಂಕರ’ ಎಂಬ ಸೀರಿಯಲ್‌ನಲ್ಲಿ ನಟಿಸುತ್ತಿದ್ದರು. ಮದುವೆ ನಿಶ್ಚಯವಾಗಿದೆ ಎಂಬ ಕಾರಣಕ್ಕೆ ನಟಿ ಸೀರಿಯಲ್‌ನಿಂದ ಹೊರಬಂದಿದ್ದರು. ಈ ವಿಚಾರ ಫ್ಯಾನ್ಸ್‌ಗೆ ನಿರಾಸೆ ಮೂಡಿಸಿತ್ತು. ಇದನ್ನೂ ಓದಿ:ನಾಯಕಿಯ ಅಮ್ಮನ ಕಣ್ಣಲ್ಲಿ ಕಳೆಗಟ್ಟಿದ ಕೆರೆಬೇಟೆ!

    ‘ರಾಮಾಚಾರಿ 2.0’ ಸಿನಿಮಾದಲ್ಲಿ ನಾಯಕಿಯಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿಗೆ ಜೋಡಿಯಾಗಿ ನಟಿಸಿದ್ದಾರೆ. ಶಿವಣ್ಣ, ಉಪೇಂದ್ರ, ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಈ ಚಿತ್ರದ ರಿಲೀಸ್ ಬಗ್ಗೆ ಮಾಹಿತಿ ಸಿಗಲಿದೆ.

  • ನಿಶ್ಚಿತಾರ್ಥ ಸಂಭ್ರಮದಲ್ಲಿ ಕೌಸ್ತುಭ ಮಣಿ

    ನಿಶ್ಚಿತಾರ್ಥ ಸಂಭ್ರಮದಲ್ಲಿ ಕೌಸ್ತುಭ ಮಣಿ

    ಕಿರುತೆರೆ ನಟಿ ಕೌಸ್ತುಭ ಮಣಿ (Kaustubha Mani) ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಗೌರಿ ಶಂಕರ’ (Gowri Shankara) ಸೀರಿಯಲ್‌ನಿಂದ ಹೊರಬರುತ್ತಿದ್ದಂತೆ ನಟಿ ಎಂಗೇಜ್‌ಮೆಂಟ್ (Engagement) ಮಾಡಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡಿದ್ದಾರೆ.

    ‘ನನ್ನರಸಿ ರಾಧೆ’ ಸೀರಿಯಲ್ ಮೂಲಕ ಟಿವಿ ಪರದೆಗೆ ರಾಧೆಯಾಗಿ ಪರಿಚಿತರಾದ ಕೌಸ್ತುಭ ಇದೀಗ ಅದ್ಧೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಸಿದ್ಧಾಂತ್ ಸತೀಶ್ ಎಂಬುವವರ ಜೊತೆ ನಿಶ್ಚಿತಾರ್ಥ ನಡೆದಿದೆ. ಇದೀಗ ಮದುವೆಯಾಗುವ ಹುಡುಗನ ಜೊತೆ ಚೆಂದದ ಫೋಟೋಶೂಟ್ ಶೇರ್ ಮಾಡಿ ಖುಷಿ ಹಂಚಿಕೊಂಡಿದ್ದಾರೆ.

    ಇತ್ತೀಚೆಗೆ ‘ಗೌರಿ ಶಂಕರ’ ಎಂಬ ಸೀರಿಯಲ್‌ನಲ್ಲಿ ನಟಿಸುತ್ತಿದ್ದರು. ಮದುವೆ ನಿಶ್ಚಯವಾಗಿದೆ ಎಂಬ ಕಾರಣಕ್ಕೆ ನಟಿ ಸೀರಿಯಲ್‌ನಿಂದ ಹೊರಬಂದಿದ್ದರು. ಈ ವಿಚಾರ ಫ್ಯಾನ್ಸ್‌ಗೆ ನಿರಾಸೆ ಮೂಡಿಸಿತ್ತು. ಇದನ್ನೂ ಓದಿ:ರವಿಚಂದ್ರನ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

    ‘ರಾಮಾಚಾರಿ 2.0’ ಸಿನಿಮಾದಲ್ಲಿ ನಾಯಕಿಯಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿಗೆ ಜೋಡಿಯಾಗಿ ನಟಿಸಿದ್ದಾರೆ. ಶಿವಣ್ಣ, ಉಪೇಂದ್ರ, ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಈ ಚಿತ್ರದ ರಿಲೀಸ್ ಬಗ್ಗೆ ಮಾಹಿತಿ ಸಿಗಲಿದೆ.

  • ‘ಗೌರಿಶಂಕರ’ ಸೀರಿಯಲ್‌ಗೆ ಗುಡ್‌ ಬೈ ಹೇಳಿದ ಕೌಸ್ತುಭ ಮಣಿ

    ‘ಗೌರಿಶಂಕರ’ ಸೀರಿಯಲ್‌ಗೆ ಗುಡ್‌ ಬೈ ಹೇಳಿದ ಕೌಸ್ತುಭ ಮಣಿ

    ಕಿರುತೆರೆ ರಾಧೆ ಕೌಸ್ತುಭ ಮಣಿ (Kaustubha Mani) ಅಭಿಮಾನಿಗಳಿಗೆ ಕಹಿ ಸುದ್ದಿ ಸಿಕ್ಕಿದೆ. ವೀಕ್ಷಕರ ಗಮನ ಸೆಳೆದ ‘ಗೌರಿಶಂಕರ’ (Gowrishankara) ಸೀರಿಯಲ್‌ನಿಂದ ನಾಯಕಿ ಕೌಸ್ತುಭ ಹೊರನಡೆದಿದ್ದಾರೆ. ಈ ಬಗ್ಗೆ ನಟಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:`ಚೌ ಚೌ ಬಾತ್’ ಟ್ರೈಲರ್ ಬಿಡುಗಡೆ: ಅನೇಕ ಮೊದಲಗಳ ಸಾಕ್ಷಿಯಾಗಿ ಬರಲಿದೆ ಚಿತ್ರ

    ‘ನನ್ನರಸಿ ರಾಧೆ’ (Nannarasi Radhe) ಸೀರಿಯಲ್ ಮೂಲಕ ಬಣ್ಣದ ಬದುಕು ಪ್ರಾರಂಭಿಸಿದ ಕೌಸ್ತುಭ ಮಣಿ ಅವರು ಗ್ಯಾಪ್ ನಂತರ ಗೌರಿಶಂಕರ ಸೀರಿಯಲ್‌ನ ನಾಯಕಿ ಗೌರಿಯಾಗಿ ಎಂಟ್ರಿ ಕೊಟ್ಟಿದ್ದರು. ಇದೀಗ ಈ ಸೀರಿಯಲ್‌ನ ನಟಿ ಕೈಬಿಟ್ಟಿದ್ದಾರೆ.

    ತಾವು ಧಾರಾವಾಹಿಯಿಂದ ಹೊರಬರುತ್ತಿರುವ ವಿಚಾರವನ್ನು ಸ್ವತಃ ಕೌಸ್ತಭ ಮಣಿ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹಾಯ್, ನಾನು ನಿಮ್ಮ ಪ್ರೀತಿಯ ಗೌರಿ. ಕೆಲವೊಂದು ವೈಯಕ್ತಿಕ ಕಾರಣಗಳಿಂದ ಇನ್ನು ಮುಂದೆ ನಾನು ‘ಗೌರಿಶಂಕರ’ ಧಾರಾವಾಹಿಯಲ್ಲಿ ನಟಿಸುವುದಕ್ಕೆ ಆಗುತ್ತಿಲ್ಲ. ನನ್ನ ಜಾಗಕ್ಕೆ ಹೊಸ ಗೌರಿ ಬರುತ್ತಿದ್ದಾಳೆ. ನನಗೆ ಕೊಟ್ಟಷ್ಟೇ ಪ್ರೀತಿ ಅವಳಿಗೂ ಕೊಟ್ಟು ಸಪೋರ್ಟ್ ಮಾಡಿ, ಹರಸಿ, ಹಾರೈಸಿ. ಥ್ಯಾಂಕ್ಯೂ ಎಂದು ಆಕೆ ಹೇಳಿಕೊಂಡಿದ್ದಾರೆ.

    ಗೌರಿ ಪಾತ್ರಕ್ಕೆ ನಟಿ ಗುಡ್ ಬೈ ಹೇಳಿರೋದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಸಿನಿಮಾ ಇರುವ ಕಾರಣ, ಕಿರುತೆರೆಯಲ್ಲಿ ನಟಿಸಲು ಬ್ರೇಕ್ ಹಾಕಿದ್ರಾ ಎಂಬ ಅನುಮಾನ ಪ್ರೇಕ್ಷಕರಲ್ಲಿ ಮೂಡಿದೆ. ಮತ್ತೆ ಟಿವಿ ಪರದೆಗೆ ಬರುತ್ತಾರಾ ಕಾಯಬೇಕಿದೆ. ಇದನ್ನೂ ಓದಿ:ಸ್ನೇಹಿತ್ ಜೊತೆ ಫ್ರೆಂಡ್‌ಶಿಪ್ ಕಂಟಿನ್ಯೂ ಮಾಡ್ತಾರಾ? ನಮ್ರತಾ ಸ್ಪಷ್ಟನೆ

    ಕೌಸ್ತುಭ ಮಣಿ ಸದ್ಯ ಅರ್ಜುನ್ ಜನ್ಯ ನಿರ್ದೇಶನದ ’45’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅವರ ಜೊತೆ ತೆರೆಹಂಚಿಕೊಂಡಿದ್ದಾರೆ.

  • ಪಡ್ಡೆಗಳ ನಿದ್ದೆಗೆಡಿಸಿದ ‘ನನ್ನರಿಸಿ ರಾಧೆ’ಯ ಕೌಸ್ತುಭ

    ಪಡ್ಡೆಗಳ ನಿದ್ದೆಗೆಡಿಸಿದ ‘ನನ್ನರಿಸಿ ರಾಧೆ’ಯ ಕೌಸ್ತುಭ

    ನ್ನರಸಿ ರಾಧೆ ಧಾರಾವಾಹಿಯ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ಕೌಸ್ತುಭ ಮಣಿ, ಇದೀಗ ಹೊಸ ಫೋಟೋ ಶೂಟ್ (Photo Shoot) ಮಾಡಿಸಿದ್ದಾರೆ. ಬ್ಲ್ಯಾಕ್ ಕಲರ್ ಕಾಸ್ಟ್ಯೂಮ್ ನಲ್ಲಿ ಸಖತ್ ಹಾಟ್ ಹಾಟ್ (Hot) ಆಗಿ ಕಾಣಿಸುತ್ತಾರೆ. ಅವರ ಈ ಬೋಲ್ಡ್ ಫೋಟೋ ಶೂಟ್ ಪಡ್ಡೆಗಳ ನಿದ್ದೆಗೆಡಿಸಿದೆ.

    ನನ್ನರಿಸಿ ರಾಧೆ ಧಾರಾವಾಹಿಯಲ್ಲಿ ಇವರದ್ದು ಇಂಚರಾ ಹೆಸರಿನ ಪಾತ್ರ. ಆ ಪಾತ್ರವನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ  ಉತ್ತಮ ನಟಿಯಾಗಿ ಕೌಸ್ತುಭ ಹೊರ ಹೊಮ್ಮಿದ್ದರು. ಅವರು ಪಾತ್ರ ಸಾಕಷ್ಟು ತೂಕದಿಂದ ಕೂಡಿತ್ತು.

    ಕೇವಲ ಧಾರಾವಾಹಿಗಳಲ್ಲಿ ಮಾತ್ರವಲ್ಲ ಸಿನಿಮಾದಲ್ಲೂ ಕೌಸ್ತುಭ ನಟಿಸುತ್ತಿದ್ದಾರೆ. ಹೆಸರಾಂತ ನಟರ ಜೊತೆ ತೆರೆ ಹಂಚಿಕೊಳ್ಳುವ ಮೂಲಕ ಮತ್ತೆ ಸುದ್ದಿಗೆ ಸಿಕ್ಕಿದ್ದಾರೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗಿನಲ್ಲೂ ಅವರು ನಾನಾ ಪ್ರಾಜೆಕ್ಟ್ ಗಳನ್ನು ಮಾಡುತ್ತಿದ್ದಾರೆ.

    ಸದಭಿರುಚಿ ಚಿತ್ರಗಳ ನಿರ್ಮಾಪಕರಾದ ರಮೇಶ್ ರೆಡ್ಡಿ ನಿರ್ಮಾಣದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಪ್ರಥಮ ನಿರ್ದೇಶನದಲ್ಲಿ ಮೂಡಿ ಬರಲಿರುವ ‘45’ ಸಿನಿಮಾಗೆ ನಾಯಕಿ ಯಾರಾಗಲಿದ್ದಾರೆ ಎನ್ನುವ ಕುತೂಹಲವಿತ್ತು. ಹಲವು ನಾಯಕಿಯರ ಹೆಸರೂ ಕೇಳಿ ಬಂದಿದ್ದವು. ಅದರಲ್ಲೂ ಸೀರಿಯಲ್ ನಟಿ ಕೌಸ್ತುಭ ಮಣಿ (Kaustubha Mani) ನಾಯಕಿ ಎಂದು ಹೇಳಲಾಗಿತ್ತು. ಇದೀಗ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಿದೆ.

    ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ಕೌಸ್ತುಭ ಮಣಿ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಚಿತ್ರತಂಡವೇ ಘೋಷಿಸಿದೆ. ಕಲರ್ಸ್ ಕನ್ನಡದ ‘ನನ್ನರಸಿ ರಾಧೆ’, ಜೀ ತೆಲುಗಿನ ಪ್ರಸಿದ್ದ ಧಾರಾವಾಹಿ ಹಾಗೂ ಕನ್ನಡದ ರಾಮಾಚಾರಿ 2.0 ಚಿತ್ರದಲ್ಲಿ ಕೌಸ್ತುಭ ಮಣಿ ನಟಿಸಿದ್ದಾರೆ.

    ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ (Arjun Janya) ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ಶಿವಣ್ಣ (Shivanna), ಉಪ್ಪಿ, ರಾಜ್ ಬಿ ಶೆಟ್ಟಿಗೆ(Raj B Shetty) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. `45′ ಚಿತ್ರದಲ್ಲಿ ಅನೇಕ ವಿಶೇಷತೆಗಳನ್ನು ಹೊಂದಿದೆ ಎಂದು ಈಗಾಗಲೇ ನಿರ್ದೇಶಕರು ಕೆಲ ಮಾಹಿತಿ ನೀಡಿದ್ದಾರೆ.

     

    ಶಿವರಾಜ್‌ಕುಮಾರ್ (Shivarajkumar) ನಟನೆಯ `45′ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ. ಈ ಸಿನಿಮಾಗೆ ರಮೇಶ್ ರೆಡ್ಡಿ ನಿರ್ಮಾಣ ಮಾಡ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭ ಆಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಕಾಣಿಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅರ್ಜುನ್ ಜನ್ಯ ಚಿತ್ರಕ್ಕೆ ಕೌಸ್ತುಭ ಮಣಿ ನಾಯಕಿ: ಚಿತ್ರತಂಡ ಘೋಷಣೆ

    ಅರ್ಜುನ್ ಜನ್ಯ ಚಿತ್ರಕ್ಕೆ ಕೌಸ್ತುಭ ಮಣಿ ನಾಯಕಿ: ಚಿತ್ರತಂಡ ಘೋಷಣೆ

    ದಭಿರುಚಿ ಚಿತ್ರಗಳ ನಿರ್ಮಾಪಕರಾದ ರಮೇಶ್ ರೆಡ್ಡಿ ನಿರ್ಮಾಣದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಪ್ರಥಮ ನಿರ್ದೇಶನದಲ್ಲಿ ಮೂಡಿ ಬರಲಿರುವ ‘45’ ಸಿನಿಮಾಗೆ ನಾಯಕಿ ಯಾರಾಗಲಿದ್ದಾರೆ ಎನ್ನುವ ಕುತೂಹಲವಿತ್ತು. ಹಲವು ನಾಯಕಿಯರ ಹೆಸರೂ ಕೇಳಿ ಬಂದಿದ್ದವು. ಅದರಲ್ಲೂ ಸೀರಿಯಲ್ ನಟಿ ಕೌಸ್ತುಭ ಮಣಿ (Kaustubha Mani) ನಾಯಕಿ ಎಂದು ಹೇಳಲಾಗಿತ್ತು. ಇದೀಗ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಿದೆ.

    ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ಕೌಸ್ತುಭ ಮಣಿ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಚಿತ್ರತಂಡವೇ ಘೋಷಿಸಿದೆ. ಕಲರ್ಸ್ ಕನ್ನಡದ ‘ನನ್ನರಸಿ ರಾಧೆ’, ಜೀ ತೆಲುಗಿನ ಪ್ರಸಿದ್ದ ಧಾರಾವಾಹಿ ಹಾಗೂ ಕನ್ನಡದ ರಾಮಾಚಾರಿ 2.0 ಚಿತ್ರದಲ್ಲಿ ಕೌಸ್ತುಭ ಮಣಿ ನಟಿಸಿದ್ದಾರೆ.

    ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ (Arjun Janya) ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ಶಿವಣ್ಣ (Shivanna), ಉಪ್ಪಿ, ರಾಜ್ ಬಿ ಶೆಟ್ಟಿಗೆ(Raj B Shetty) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. `45′ ಚಿತ್ರದಲ್ಲಿ ಅನೇಕ ವಿಶೇಷತೆಗಳನ್ನು ಹೊಂದಿದೆ ಎಂದು ಈಗಾಗಲೇ ನಿರ್ದೇಶಕರು ಕೆಲ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ‘ಅಭಿರಾಮಚಂದ್ರ’ನಿಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್

    ಶಿವರಾಜ್‌ಕುಮಾರ್ (Shivarajkumar) ನಟನೆಯ `45′ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ. ಈ ಸಿನಿಮಾಗೆ ರಮೇಶ್ ರೆಡ್ಡಿ ನಿರ್ಮಾಣ ಮಾಡ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭ ಆಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಕಾಣಿಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ.

  • ಅರ್ಜುನ್ ಜನ್ಯ- ಶಿವಣ್ಣ ಚಿತ್ರಕ್ಕೆ ನಟಿ ಕೌಸ್ತುಭ ಹೀರೋಯಿನ್

    ಅರ್ಜುನ್ ಜನ್ಯ- ಶಿವಣ್ಣ ಚಿತ್ರಕ್ಕೆ ನಟಿ ಕೌಸ್ತುಭ ಹೀರೋಯಿನ್

    ರ್ಜುನ್ ಜನ್ಯ, ಉಪೇಂದ್ರ, ರಾಜ್ ಬಿ ಶೆಟ್ಟಿ ಕಾಂಬಿನೇಷನ್ `45′ ಚಿತ್ರಕ್ಕೆ ನಾಯಕಿಯ ಎಂಟ್ರಿಯಾಗಿದೆ. ಕಿರುತೆರೆಯಲ್ಲಿ ಮೋಡಿ ಮಾಡಿರುವ ರಾಧೆ ಕೌಸ್ತುಭ ಮಣಿ ಹೀರೋಯಿನ್ ಆಗಿ ಸೆಲೆಕ್ಟ್ ಆಗಿದ್ದಾರೆ.

    ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ (Arjun Janya) ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ಶಿವಣ್ಣ (Shivanna), ಉಪ್ಪಿ, ರಾಜ್ ಬಿ ಶೆಟ್ಟಿಗೆ(Raj B Shetty) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. `45′ ಚಿತ್ರದಲ್ಲಿ ರಾಜ್ ಬಿ ಶೆಟ್ಟಿಗೆ ನಟಿ ಕೌಸ್ತುಭ (Kaustubha Mani) ನಾಯಕಿಯಾಗಿದ್ದಾರೆ.

    `ನನ್ನರಸಿ ರಾಧೆ’ ಮತ್ತು ತೆಲುಗು ಸೀರಿಯಲ್‌ಗಳಲ್ಲಿ ನಟಿಸಿರುವ ಕೌಸ್ತುಭ, `ರಾಮಾಚಾರಿ 2.0′ ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈ ಬೆನ್ನಲ್ಲೇ ಅರ್ಜುನ್ ಜನ್ಯ ಅವರ ಸಿನಿಮಾದಲ್ಲಿ ನಟಿಸಲು ಬಿಗ್ ಆಫರ್ ಸಿಕ್ಕಿದೆ. ಇದನ್ನೂ ಓದಿ: Exclusive: ರಾಜಕೀಯ ಅಖಾಡಕ್ಕೆ ನಿರ್ಮಾಪಕ ಕೆ.ಮಂಜು

    ಶಿವರಾಜ್‌ಕುಮಾರ್ (Shivarajkumar) ನಟನೆಯ `45′ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ. ಈ ಸಿನಿಮಾಗೆ ರಮೇಶ್ ರೆಡ್ಡಿ ನಿರ್ಮಾಣ ಮಾಡ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭ ಆಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಕಾಣಿಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ.