Tag: ಕ್ಯಾಂಪಸ್

  • ಕ್ಯಾಂಪಸ್‍ನಲ್ಲಿ ಗುಂಡಿನ ದಾಳಿ: ಮೂವರು ಬಲಿ, ಇಬ್ಬರಿಗೆ ಗಂಭೀರ ಗಾಯ

    ಕ್ಯಾಂಪಸ್‍ನಲ್ಲಿ ಗುಂಡಿನ ದಾಳಿ: ಮೂವರು ಬಲಿ, ಇಬ್ಬರಿಗೆ ಗಂಭೀರ ಗಾಯ

    ಮನಿಲಾ: ಫಿಲಿಪೈನ್ಸ್‌ನ ರಾಜಧಾನಿ ಮನಿಲಾದ ವಿಶ್ವವಿದ್ಯಾಲಯ ಕ್ಯಾಂಪಸ್‍ನಲ್ಲಿ ಭಾನುವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಗೆ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

    ಕ್ವಿಜಾನ್ ಸಿಟಿ ಪೊಲೀಸ್ ಜಿಲ್ಲಾ ನಿರ್ದೇಶಕ ರೆಮುಸ್ ಮದೀನಾ ಈ ಕುರಿತು ಮಾಹಿತಿ ನೀಡಿದ್ದು, ಕ್ವಿಜಾನ್ ನಗರದ ಅಟೆನಿಯೊ ಡಿ ಮನಿಲಾ ವಿಶ್ವವಿದ್ಯಾಲಯದ ಗೇಟ್ ಬಳಿ ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಈ ವೇಳೆ ಹಂತಕ ಗೇಟ್ ಬಳಿಯಿದ್ದ ವಾಚ್‍ಮ್ಯಾನ್‍ನನ್ನು ಕೊಂದು ಒಳಗೆ ಬಂದಿದ್ದಾನೆ. ವಿಶ್ವವಿದ್ಯಾಲಯದಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತೆ: ರಾಜನಾಥ್ ಸಿಂಗ್ 

    ಪ್ರಸ್ತುತ ಶೂಟರ್ ಕಾರನ್ನು ವಶಪಡಿಸಿಕೊಂಡಿದ್ದು, ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಆದರೆ ಪೊಲೀಸರು ಅವನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಸಂತ್ರಸ್ತರಿಗೆ ಸಹಾಯ ಮಾಡಲು ರಾಷ್ಟ್ರೀಯ ತನಿಖಾ ಏಜೆಂಟರನ್ನು ಸಹ ಕ್ಷೇತ್ರಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.

    ವಿಶ್ವವಿದ್ಯಾಲಯದ ಮುಖ್ಯಸ್ಥರು ಘಟನೆ ಕುರಿತು ಪ್ರತಿಕ್ರಿಯೆ ಕೊಟ್ಟಿದ್ದು, ಸುಪ್ರಿಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಅಲೆಕ್ಸಾಂಡರ್ ಗೆಸ್ಮುಂಡೊ ಅವರು ಭಾನುವಾರ ಮಧ್ಯಾಹ್ನ ಕಾನೂನು ಶಾಲೆಯ ಪದವಿ ಸಮಾರಂಭಕ್ಕೆ ಹಾಜರಾಗಬೇಕಿತ್ತು. ಆದರೆ ಗುಂಡಿನ ದಾಳಿ ನಡೆದ ಪರಿಣಾಮ ಕಾರ್ಯಕ್ರಮ ರದ್ದಾಯಿತು. ಪ್ರಸ್ತುತ ನಮ್ಮ ಕ್ಯಾಂಪಸ್ ಲಾಕ್‍ಡೌನ್‍ನಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯಕ್ಷಗಾನದ ಭಾಗವತಿಕೆ ಮೂಲಕ ರಾಷ್ಟ್ರಪತಿಗೆ ಸ್ವಾಗತ ಕೋರಿದ ಬಾಲೆ

    ಸುಪ್ರೀಂ ಕೋರ್ಟ್ ವಕ್ತಾರ ಬ್ರಿಯಾನ್ ಹೊಸಾಕಾ ಈ ಕುರಿತು ಮಾತನಾಡಿದ್ದು, ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆಯುವ ಸಂದರ್ಭದಲ್ಲಿ ಗೆಸ್ಮುಂಡೊ ಅವರು ವಿಶ್ವವಿದ್ಯಾಲಯಕ್ಕೆ ಹೋಗುತ್ತಿದ್ದರು. ಆದರೆ ವಿಷಯ ತಿಳಿದ ತಕ್ಷಣ ಹಿಂತಿರುಗಲು ಸಲಹೆ ನೀಡಲಾಯಿತು ಎಂದು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • JNU ಕ್ಯಾಂಪಸ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

    JNU ಕ್ಯಾಂಪಸ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

    ನವದೆಹಲಿ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‍ಯು) ಕ್ಯಾಂಪಸ್‍ನ ಅರಣ್ಯ ಪ್ರದೇಶದಲ್ಲಿ ನಡೆದಿದೆ.

    CRIME 2

    ಘಟನೆ ಕುರಿತಂತೆ ಶುಕ್ರವಾರ ಸಂಜೆ 6.30ರ ಸುಮಾರಿಗೆ ದೆಹಲಿ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವ ಕೊಳೆತಿದ್ದು, ಕೆಲ ದಿನಗಳ ಹಿಂದೆಯೇ ವ್ಯಕ್ತಿ ಮೃತಪಟ್ಟಿದ್ದಾರೆ. ಅಲ್ಲದೇ ವ್ಯಕ್ತಿಗೆ ಸುಮಾರು 40-45 ವರ್ಷ ವಯಸ್ಸಾಗಿರಬಹುದು. ಸದ್ಯ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 5 ವರ್ಷದ ಬಾಲಕಿಯ ಮಾದರಿಯನ್ನು ಮಂಕಿಪಾಕ್ಸ್ ಪರೀಕ್ಷೆಗೆ ಕಳುಹಿಸಿದ ವೈದ್ಯರು

    crime

    ಇದೀಗ ಪತ್ತೆಯಾಗಿರುವ ಶವ ವಿದ್ಯಾರ್ಥಿಯದ್ದೋ, ಅಧ್ಯಾಪಕರದ್ದೋ ಅಥವಾ ಹೊರಗಿನವರದ್ದೋ ಎಂದು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾರಿನಲ್ಲೇ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್ – ಓರ್ವ ಅರೆಸ್ಟ್, ಆರೋಪಿಗಳ ಪೈಕಿ ಮೂವರು ಅಪ್ರಾಪ್ತರು

  • 3 ವರ್ಷದ ಬಾಲಕನನ್ನ ಕಿಡ್ನಾಪ್ ಮಾಡಿ, 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ 16ರ ಪೋರ

    3 ವರ್ಷದ ಬಾಲಕನನ್ನ ಕಿಡ್ನಾಪ್ ಮಾಡಿ, 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ 16ರ ಪೋರ

    ಧಾರವಾಡ: ಮೂರು ವರ್ಷದ ಬಾಲಕನನ್ನು 16 ವರ್ಷದ ಬಾಲಕನೊಬ್ಬ ಕಿಡ್ನಾಪ್ ಮಾಡಿ ಐದು ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ ಘಟನೆ ವಿದ್ಯಾಕಾಶಿ ಧಾರವಾಡದಲ್ಲಿ ನಡೆದಿದೆ.

    ಧಾರವಾಡದ ಜಯನಗರದಲ್ಲಿನ ಸಂಕಲ್ಪ ಪಿಜಿ ಸೆಂಟರ್‌ನ ಮಾಲೀಕರ ಮಗುವನ್ನು 16 ವರ್ಷದ ಅಪ್ರಾಪ್ತ ಬಾಲಕ ಇಂದು ಮಧ್ಯಾಹ್ನ ಅಪಹರಿಸಿದ್ದ. ಬಳಿಕ ಭಾರತಿ ಅವರಿಗೆ ಕರೆ ಮಾಡಿ, ನಿಮ್ಮ ಮಗ ನಮ್ಮ ಬಳಿಯೇ ಇದ್ದಾನೆ. ಐದು ಲಕ್ಷ ರೂ. ತಂದುಕೊಟ್ಟು ಮಗನನ್ನು ಕರೆದುಕೊಂಡು ಹೋಗಿ ಎಂದು ಹೇಳಿದ್ದ. ಇದರಿಂದ ಗಾಬರಿಗೊಳಗಾದ ಭಾರತಿ ಪೊಲೀಸರು ಮೊರೆ ಹೋಗಿದ್ದರು.

    ಭಾರತಿ ಅವರಿಗೆ ಕರೆ ಮಾಡಿದ್ದ ಅಪ್ರಾಪ್ತನ ಮೊಬೈಲ್ ನಂಬರ್ ಅನ್ನು ಪೊಲೀಸರು ಟ್ರೇಸ್ ಮಾಡಿದ್ದರು. ಈ ವೇಳೆ ಅಪಹರಣಕಾರ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಸುತ್ತಾಡುತ್ತಿರುವುದು ಖಚಿತವಾಗಿತ್ತು. ಕವಿವಿ ಆವರಣದಲ್ಲಿ ಕಾರ್ಯಾಚರಣೆಗೆ ಇಳಿದ 30ಕ್ಕೂ ಹೆಚ್ಚು ಪೊಲೀಸರು ಕ್ಯಾಂಪಸ್ ಸುತ್ತಲೂ ನಾಕಾಬಂಧಿ ಮಾಡಿದ್ದರು. ಇತ್ತ ಭಾರತಿ ಅವರು 5 ಲಕ್ಷ ರೂ. ತೆಗೆದುಕೊಂಡು ವಿಶ್ವವಿದ್ಯಾಲಯ ಕ್ಯಾಂಪಸ್‍ಗೆ ಬಂದಿದ್ದರು.

    ಬಟಾನಿಕಲ್ ಗಾರ್ಡನ್‍ನಲ್ಲಿ ಬಾಲಕನ ಸಮೇತ ಬಚ್ಚಿಟ್ಟುಕೊಂಡಿದ್ದ ಅಪ್ರಾಪ್ತನನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಬಳಿಕ ಭಾರತಿ ಅವರ ಮಗುವನ್ನ ರಕ್ಷಿಸಿ ಅಪ್ರಾಪ್ತನನ್ನು ವಶಕ್ಕೆ ಪಡಿದಿದ್ದಾರೆ.

    ಅಪ್ರಾಪ್ತನು ಈ ಹಿಂದೆ ಸಂಕಲ್ಪ ಪಿಜಿ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಕೆಲ ದಿನಗಳ ಹಿಂದೆ ಕೆಲಸ ಬಿಟ್ಟು ಹೋಗಿದ್ದ. ಶುಕ್ರವಾರ ಮನೆಗೆ ಬಂದು ಭಾರತಿ ಅವರನ್ನು ಮಾತನಾಡಿಸಿ ವಾಪಸ್ ಹೋಗಿದ್ದ. ಹಾಗೆಯೇ ಇವತ್ತು ಕೂಡ ಮನೆಗೆ ಬಂದು, ವಾಪಸ್ ಹೋಗುವಾಗ ಮನೆಯ ಮುಂದೆ ಆಡುತ್ತಿದ್ದ ಮಗುವನ್ನು ಎತ್ತಿಕೊಂಡು ಹೋಗಿದ್ದಾನೆ. ಕರ್ನಾಟಕ ವಿಶ್ವವಿದ್ಯಾಲಯ ಕ್ಯಾಂಪಸ್ ಸೇರಿದ ನಂತರ ಭಾರತಿ ಅವರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  • ಬೀದರ್ ವಿವಿಯಲ್ಲಿ ಯುವಕ-ಯುವತಿ ಒಟ್ಟಿಗೆ ತಿರುಗಾಡುವುದಕ್ಕೆ ಬ್ರೇಕ್!

    ಬೀದರ್ ವಿವಿಯಲ್ಲಿ ಯುವಕ-ಯುವತಿ ಒಟ್ಟಿಗೆ ತಿರುಗಾಡುವುದಕ್ಕೆ ಬ್ರೇಕ್!

    ಬೀದರ್: ಕ್ಯಾಂಪಸ್ ನಲ್ಲಿ ಯುವಕ-ಯುವತಿ ಕಾರಣವಿಲ್ಲದೇ ಒಟ್ಟಿಗೆ ತಿರುಗಾಡುವುದಕ್ಕೆ ಬೀದರ್ ವಿವಿ ಬ್ರೇಕ್ ಹಾಕಿದೆ.

    ಬೀದರ್ ಹೊರವಲಯದ ನಂದಿ ನಗರದಲ್ಲಿರುವ ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ ಹಾಸ್ಟೆಲ್ ವಾರ್ಡನ್ ಜಗನ್ನಾಥ್ ಅವರು ಈ ಆದೇಶ ಹೊರಡಿಸಿದ್ದಾರೆ.

    ಯುವಕ-ಯುವತಿ ಒಟ್ಟಿಗೆ ಸುತ್ತಾಡುತ್ತಿದ್ದರೆ ಅದು ಜನರಿಗೆ ತಪ್ಪು ಸಂದೇಶ ನೀಡುತ್ತೆ. ಹೀಗಾಗಿ ಕಾಲೇಜ್ ಕ್ಯಾಂಪಸ್‍ನಲ್ಲಿ ಹಾಗೂ ಬೀದರ್ ನಗರದಲ್ಲಿ ಯುವಕ-ಯುವತಿ ಒಟ್ಟಿಗೆ ತಿರುಗಾಡಿದರೆ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಆದೇಶದಲ್ಲಿ ಏನಿದೆ?
    ನಮ್ಮ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿನಿಯರು ಸಂಜೆ ವೇಳೆ ಯುವಕರ ಜೊತೆ ನಂದಿನಿ ಗೇಟ್ ಬಳಿ, ಕಾಲೇಜ್ ಕ್ಯಾಂಪಸ್ ಹಾಗೂ ನಗರದ ಹೊರವಲಯದಲ್ಲಿ ತಿರುಗಾಡುತ್ತಿರುವ ವಿಷಯ ಮುಖ್ಯ ವಾರ್ಡನ್, ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರ ಗಮನಕ್ಕೆ ಬಂದಿದೆ.

    ಕಾಲೇಜ್ ಕ್ಯಾಂಪಸ್ ಅಲ್ಲದೇ ನಗರದ ಹೊರವಲಯದಲ್ಲೂ ಯುವಕ- ಯುವತಿಯರು ಒಟ್ಟಿಗೆ ತಿರುಗಾಡುತ್ತಿದ್ದಾರೆ. ಈ ರೀತಿ ತಿರುಗಾಡುವುದರಿಂದ ಜನರಿಗೆ ತಪ್ಪು ಸಂದೇಶ ನೀಡುತ್ತದೆ. ಯಾವುದೇ ಕಾರಣ ಇಲ್ಲದೇ ಯುವಕ-ಯುವತಿಯರು ಒಟ್ಟಿಗೆ ತಿರುಗಾಡುತ್ತಿರುವುದು ಕಂಡು ಬಂದರೆ, ಅವರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುತ್ತದೆ. ದಿಢೀರ್ ಆಗಿ ಭೇಟಿ ನೀಡಿ ಈ ರೀತಿಯ ಬೆಳವಣಿಗೆಯನ್ನು ತಡೆಯಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಎಲ್ಲ ವಿದ್ಯಾರ್ಥಿಗಳು ಕ್ಯಾಂಪಸಿನಲ್ಲಿ ಶಿಸ್ತನ್ನು ಕಾಪಾಡಬೇಕು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv