Tag: ಕ್ಯಾಲಿಕಟ್

  • ತಾಂತ್ರಿಕ ಸಮಸ್ಯೆಯಿಂದ ದೋಹಾಗೆ ಹೊರಟಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಕ್ಯಾಲಿಕಟ್‌ಗೆ ವಾಪಸ್

    ತಾಂತ್ರಿಕ ಸಮಸ್ಯೆಯಿಂದ ದೋಹಾಗೆ ಹೊರಟಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಕ್ಯಾಲಿಕಟ್‌ಗೆ ವಾಪಸ್

    ತಿರುವನಂತಪುರಂ: ದೋಹಾಗೆ (Doha) ಹೊರಟಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ (Air India Express) ವಿಮಾನವೊಂದರಲ್ಲಿ ತಾಂತ್ರಿಕ ಸಮಸ್ಯೆ (Technical Issue) ಉಂಟಾಗಿ ಟೇಕ್ ಆಫ್ ಆದ 2 ಗಂಟೆಗಳ ನಂತರ ಸುರಕ್ಷಿತವಾಗಿ ಮತ್ತೆ ಕ್ಯಾಲಿಕಟ್‌ಗೆ (Calicut) ವಾಪಸ್ಸಾಗಿದೆ.

    ಬುಧವಾರ ಬೆಳಿಗ್ಗೆ 9:05ರ ಸುಮಾರಿಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ  IX 375 ಕ್ಯಾಲಿಕಟ್‌ನಿಂದ ಟೇಕ್ ಆಫ್ ಆಗಿ ದೋಹಾಗೆ ತೆರಳಿತ್ತು. ಮಾರ್ಗ ಮಧ್ಯೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಟೇಕ್ ಆಫ್ ಆದ 2 ಗಂಟೆಗಳ ನಂತರ 11:15 ಸುಮಾರಿಗೆ ಕ್ಯಾಲಿಕಟ್‌ಗೆ ಸುರಕ್ಷಿತವಾಗಿ ಮರಳಿದೆ.ಇದನ್ನೂ ಓದಿ: ಜಗದೀಪ್‌ ಧನಕರ್‌ ರಾಜೀನಾಮೆ – ಉಪ ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಚುನಾವಣಾ ಆಯೋಗ

    ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ವಿಮಾನದ ಕ್ಯಾಬಿನ್ ಎಸಿಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ವಿಮಾನವನ್ನು ಕ್ಯಾಲಿಕಟ್‌ನಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ. ಇದು ತುರ್ತು ಲ್ಯಾಂಡಿಂಗ್ ಅಲ್ಲ. ಇನ್ನೂ ವಿಮಾನದಲ್ಲಿ ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿ ಒಟ್ಟು 188 ಜನರಿದ್ದರು. ವಿಮಾನ ಲ್ಯಾಂಡಿಂಗ್ ಆದ ಬಳಿಕ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

    ಈ ಬಗ್ಗೆ ಏರ್ ಇಂಡಿಯಾ ಹೇಳಿಕೆ ಬಿಡುಗಡೆಗೊಳಿಸಿದ್ದು, ವಿಮಾನಯಾನದ ವೇಳೆ ಸುರಕ್ಷತೆ ನಮ್ಮ ಮುಖ್ಯ ಆದ್ಯತೆಯಾಗಿದೆ. ಹೀಗಾಗಿ ವಿಷಾದ ವ್ಯಕ್ತಪಡಿಸುತ್ತೇವೆ. ಇನ್ನೂ ವಿಮಾನ ವಿಳಂಬವಾಗಿದ್ದರಿಂದ ಪ್ರಯಾಣಿಕರಿಗೆ ಉಪಹಾರದ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ. ಬಳಿಕ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ತಿಳಿಸಿದೆ.

    ಇದಕ್ಕೂ ಮುನ್ನ ಮಂಗಳವಾರ ಹಾಂಗ್ ಕಾಂಗ್‌ನಿಂದ ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಏರ್ ಇಂಡಿಯಾ ವಿಮಾನವು ಲ್ಯಾಂಡಿಂಗ್ ಆದ ಕೆಲವೇ ಸಮಯದಲ್ಲಿ ವಿಮಾನದ ಎಪಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.ಇದನ್ನೂ ಓದಿ: ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ – ರಾಮನಗರದಲ್ಲಿ ವಾಟಾಳ್ ಪ್ರತಿಭಟನೆ

  • ಮರಳಿ ಮನೆಗೆ – ಟೇಕಾಫ್‌ ಮೊದಲು ಕುಟುಂಬದೊಂದಿಗೆ ಫೇಸ್‌ಶೀಲ್ಡ್‌ ಹಾಕಿ ಸೆಲ್ಫಿ, ಪ್ರಯಾಣಿಕ ಸಾವು

    ಮರಳಿ ಮನೆಗೆ – ಟೇಕಾಫ್‌ ಮೊದಲು ಕುಟುಂಬದೊಂದಿಗೆ ಫೇಸ್‌ಶೀಲ್ಡ್‌ ಹಾಕಿ ಸೆಲ್ಫಿ, ಪ್ರಯಾಣಿಕ ಸಾವು

    ಕ್ಯಾಲಿಕಟ್‌: ಕೊರೊನಾ ವೈರಸ್‌ನಿಂದಾಗಿ ಸ್ವದೇಶ ಬರಲು ಹರಸಾಹಸ ಪಟ್ಟು ಕೊನೆಗೆ ವಂದೇಭಾರತ್‌ ಮಿಷನ್‌ ಅಡಿ ಟಿಕೆಟ್‌ ಪಡೆದು ಕುಟುಂಬದೊಂದಿಗೆ ಕೇರಳಕ್ಕೆ ಬರುತ್ತಿದ್ದ ವ್ಯಕ್ತಿಯೊಬ್ಬರು ವಿಮಾನ ದುರಂತಕ್ಕೆ ಬಲಿಯಾಗಿದ್ದಾರೆ.

    ಕ್ಯಾಲಿಕಟ್‌ ಮೂಲದ 35 ವರ್ಷದ ಶರಫು ಗಲ್ಫ್‌ನಲ್ಲಿ ಕೆಲಸ ಮಾಡುತ್ತಿದ್ದು ಪತ್ನಿ ಅಮೀನಾ, ಮಗಳು ಈಶಾ ಫಾತಿಮಾ ಜೊತೆ ದುಬೈನಿಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಹತ್ತಿದ್ದರು.

    ವಿಮಾನ ಟೇಕಾಫ್‌ ಆಗುವುದಕ್ಕೆ ಮೊದಲು ಫೇಸ್‌ಶೀಲ್ಡ್‌, ಪಿಪಿಇ ಕಿಟ್‌, ಮುಖಕ್ಕೆ ಮಾಸ್ಕ್‌ ಧರಿಸಿ ಪತ್ನಿ, ಪುತ್ರಿಯ ಜೊತೆ ಸೆಲ್ಫಿ ಕ್ಲಿಕ್‌ ಮಾಡಿ ‘ಮರಳಿ ಮನೆಗೆʼ ಎಂದು ಬರೆದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದರು.

    ವೈದ್ಯಕೀಯ ತುರ್ತು ಕಾರಣ ನೀಡಿ ಕೊನೆಗೆ ಶರಫು ಕುಟುಂಬಕ್ಕೆ ವಂದೇ ಭಾರತ್‌ ಮಿಶನ್‌ ಅಡಿ ಸ್ವದೇಶಕ್ಕೆ ಬರಲು ಟಿಕೆಟ್‌ ಸಿಕ್ಕಿತ್ತು. ಶರಫು ಪತ್ನಿ ಆರೋಗ್ಯ ಸ್ಥಿರವಾಗಿದ್ದು, ಪುತ್ರಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಶರಫ್‌ ಸ್ನೇಹಿತ ಶಫಿ ಎಂಬವರು ಈ ಪೋಸ್ಟ್‌ಗೆ ಕಮೆಂಟ್‌ ಮಾಡಿ, ಕೇರಳಕ್ಕೆ ಹೋಗುವ ಮೊದಲು ನನ್ನ ಹೋಟೆಲಿಗೆ ಬಂದಿದ್ದ. ಮನಸ್ಸು ಬಹಳ ಗೊಂದಲದಲ್ಲಿತ್ತು. ಮುಂದೆ ಏನೋ ಆಗಬಹುದು ಎಂಬುದರ ಕುರಿತು ಆತನಿಗೆ ನ್ಸೂಚನೆ ಸಿಕ್ಕಿರಬೇಕು ಎಂದು ನಾನು ಭಾವಿಸುತ್ತೇನೆ. ನನಗೆ ಆತ ಹಣವನ್ನು ನೀಡಿ, ಉದ್ಯೋಗವಿಲ್ಲದವರಿಗೆ ಆಹಾರವನ್ನು ನೀಡಲು ಇದನ್ನು ಬಳಸಬೇಕು ಎಂದು ಹೇಳಿದ್ದ. ಕೊರೊನಾ ಸಮಯದಲ್ಲಿ ಶರಫು ಅವರು ಬಡವರಿಗೆ ಹಣ ನೀಡುವ ಮೂಲಕ ಸಹಾಯ ಮಾಡಿದ್ದ ಎಂದು ಬರೆದುಕೊಂಡಿದ್ದಾರೆ.

  • ಕೇರಳದ ಮುಸ್ಲಿಂ ಶಿಕ್ಷಣ ಸಂಸ್ಥೆಯ ಕ್ಯಾಂಪಸ್‍ನಲ್ಲಿ ಬುರ್ಕಾ ಬ್ಯಾನ್

    ಕೇರಳದ ಮುಸ್ಲಿಂ ಶಿಕ್ಷಣ ಸಂಸ್ಥೆಯ ಕ್ಯಾಂಪಸ್‍ನಲ್ಲಿ ಬುರ್ಕಾ ಬ್ಯಾನ್

    ತಿರುವನಂತಪುರಂ: ಕೇರಳದ ಅತಿದೊಡ್ಡ ಶಿಕ್ಷಣ ಸಂಸ್ಥೆಯಾದ ಕ್ಯಾಲಿಕಟ್‍ನ ಹೆಸರಾಂತ ಮುಸ್ಲಿಂ ಶಿಕ್ಷಣ ಸಂಸ್ಥೆ (ಎಂಇಎಸ್) ತನ್ನ ಕಾಲೇಜ್ ಕ್ಯಾಂಪಸ್‍ನಲ್ಲಿ ಬುರ್ಕಾ ವನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿದೆ.

    ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಪಿ.ಎ.ಫಜಲ್ ಗಫೂರ್ ಅವರು, ಕೇರಳದಲ್ಲಿ ಇಸ್ಲಾಮ್ ಧರ್ಮವನ್ನು ಪಾಲಿಸೋಣ. ಆದರೆ ಮಧ್ಯಪ್ರಾಚ್ಯದ ಇಸ್ಲಾಂನಲ್ಲ ಎಂದು ತಿಳಿಸಿದ್ದಾರೆ.

    ಸಂಪ್ರದಾಯವಾದಿ ಮುಸ್ಲಿಂ ಗುಂಪುಗಳು ಕಳೆದ ಐದು ವರ್ಷಗಳಿಂದ ಕೇರಳ ಸಂಸ್ಥೆಗಳಲ್ಲಿ ಇದೇ ರೀತಿಯ ಉಡುಪನ್ನು ಧರಿಸಬೇಕು ಎಂದು ಒತ್ತಾಯಿಸುತ್ತಿವೆ. ಇವರ ಒತ್ತಾಯಕ್ಕೆ ಮಣಿಯದೇ ನಾವು ನಮ್ಮ ಸಂಸ್ಥೆಯಲ್ಲಿ ಸಲ್ವಾರ್ ಕಮೀಝ್ ಡ್ರೆಸ್ ಕೋಡ್ ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

    ಗಫೂರ್ ಅವರು ಮಹಿಳೆಯರು ಬುರ್ಕಾ ಧರಿಸುತ್ತಿರುವುದಕ್ಕೆ ಹಿಂದಿನಿಂದಲೇ ವಿರೋಧ ವ್ಯಕ್ತಪಡಿಸಿಕೊಂಡು ಬಂದಿದ್ದಾರೆ. 2014 ರಲ್ಲಿ ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬುರ್ಕಾ ಧರಿಸುವುದು ಇಸ್ಲಾಮಿನ ಭಾಗವಲ್ಲ. ಮುಖದ ಮೇಲೆ ಸೂರ್ಯನ ಕಿರಣಗಳು ಬೀಳುವುದನ್ನು ತಡೆಯುದರಿಂದ ಮುಸ್ಲಿಂ ಮಹಿಳೆಯರು ವಿಟಮಿನ್ ಡಿ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದರು.

    ನಾವು ತಾಲಿಬಾನ್ ಆಡಳಿತದಲ್ಲಿ ಇಲ್ಲ. ಭಾರತದಲ್ಲಿ ಮಾತನಾಡಲು ಸ್ವಾತಂತ್ರ್ಯವಿದೆ. ಹೀಗಾಗಿ ನಾವು ಧರ್ಮದ ಪದ್ದತಿ ವಿರುದ್ಧ ಮಾತನಾಡುತ್ತೇವೆ. ಮುಖ ಮುಚ್ಚಿಕೊಳ್ಳುವುದೇ ಇಸ್ಲಾಮಿನ ಭಾಗವಲ್ಲ ಎಂದು ಗಫೂರ್ ಹೇಳಿದ್ದಾರೆ.

    ಎಂಇಎಸ್ ಎಪ್ರಿಲ್ 17 ರಂದು ಸುತ್ತೋಲೆಯನ್ನು ಹೊರಡಿಸಿದ್ದು, ಇದಕ್ಕೆ ಕೆಲ ಮುಸ್ಲಿಂ ಸಂಘಟನೆಗಳು ಭಾರೀ ವಿರೋಧ ವ್ಯಕ್ತಪಡಿಸಿವೆ. ಇದು ಸಮುದಾಯದ ಧಾರ್ಮಿಕ ತತ್ವಗಳು ಮತ್ತು ಭಾವನೆಗಳನ್ನು ವಿರೋಧಿಸುತ್ತಿದೆ. ಈ ನಿರ್ಧಾರ ತೆಗೆದುಕೊಳ್ಳುವ ಮೊದಲು ಶೈಕ್ಷಣಿಕ ಸಂಸ್ಥೆಯು ವಿವಿಧ ಸಂಘಟನೆಗಳ ಜೊತೆಗೆ ಚರ್ಚೆ ಮಾಡಬೇಕಿತ್ತು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

    10 ವೃತ್ತಿಪರ ಕಾಲೇಜು ಸೇರಿದಂತೆ 150 ಶಿಕ್ಷಣ ಕೇಂದ್ರಗಳನ್ನು ಎಂಇಎಸ್ ಹೊಂದಿದೆ. ಅಷ್ಟೇ ಅಲ್ಲದೇ ಇಲ್ಲಿ ವ್ಯಾಸಂಗ ಮಾಡುವವರಲ್ಲಿ ಶೇ.80 ರಷ್ಟು ಮುಸ್ಲಿಮ್ ವಿದ್ಯಾರ್ಥಿನಿಯರಿದ್ದಾರೆ.

    ಶ್ರೀಲಂಕಾದಲ್ಲಿ ನಿಷೇಧಗೊಂಡಂತೆ ಭಾರತದಲ್ಲೂ ಭದ್ರತೆಯ ದೃಷ್ಟಿಯಿಂದ ಸಾರ್ವಜನಿಕ ಸ್ಥಳದಲ್ಲಿ ಬುರ್ಕಾವನ್ನು ನಿಷೇಧಿಸಬೇಕೆಂದು ಮಹಾರಾಷ್ಟ್ರದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾದ ಶಿವಸೇನೆ ಆಗ್ರಹಿಸಿತ್ತು.

    ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದ ಸಂಪಾದಕೀಯದಲ್ಲಿ, ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಅವರು ತಮ್ಮ ದೇಶದಲ್ಲಿ ಬುರ್ಕಾವನ್ನು ನಿಷೇಧ ಮಾಡಿದ್ದಾರೆ. ಅದೇ ರೀತಿಯಲ್ಲಿ ಭಾರತದಲ್ಲೂ ಬುರ್ಕಾವನ್ನು ನಿಷೇಧಿಸಬೇಕೆಂದು ಒತ್ತಾಯಿಸಿದೆ.

    ಬುರ್ಕಾ ಧರಿಸುವುದರಿಂದ ಉಗ್ರರು ತಮ್ಮ ಮುಖ ಮುಚ್ಚಿಕೊಂಡು ಸುಲಭವಾಗಿ ತಪ್ಪಿಸಿಕೊಳ್ಳುತ್ತಾರೆ. ಈ ರೀತಿಯ ಸಂಪೂರ್ಣ ಮುಖ ಮುಚ್ಚಿಕೊಳ್ಳುವ ಉಡುಪುಗಳನ್ನು ಧರಿಸುವುದರಿಂದ ರಾಷ್ಟ್ರೀಯ ಭದ್ರತೆಗೆ ಹಿನ್ನಡೆಯಾಗುತ್ತಿದೆ. ಭಾರತದ ಮೇಲೂ ಉಗ್ರರು ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಭದ್ರತೆಯ ದೃಷ್ಟಿಯಿಂದ ನಮ್ಮ ದೇಶದಲ್ಲೂ ಬುರ್ಕಾವನ್ನು ನಿಷೇಧಿಸುವಂತೆ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಹೇಳಿತ್ತು.