ವಾಷಿಂಗ್ಟನ್: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸದಂತೆ ಹೇಳಿದ್ದಕ್ಕೆ ಹರಿಯಾಣದ (Haryana) ಯುವಕನನ್ನು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಅಮೆರಿಕದ (America) ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.
ಹರಿಯಾಣದ ಜಿಂದ್ ಜಿಲ್ಲೆಯ ಬರಾಹ್ ಕಲಾ ಗ್ರಾಮದ ಕಪಿಲ್ (26) ಹತ್ಯೆಯಾದ ಯುವಕ. ಕಪಿಲ್ ಮೂರು ವರ್ಷದ ಹಿಂದೆಯೇ ಕೆಲಸದ ನಿಮಿತ್ತ ಅಮೆರಿಕಕ್ಕೆ ತೆರಳಿದ್ದರು. ಇದನ್ನೂ ಓದಿ: ಹರಿಯಾಣ | ಎಸಿ ಸ್ಫೋಟ – ಒಂದೇ ಕುಟುಂಬದ ಮೂವರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ
ಕಪಿಲ್ ಕೆಲಸ ಮಾಡುತ್ತಿದ್ದ ಸ್ಟೋರ್‌ನ ಹೊರಗಡೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಇದನ್ನು ಗಮನಿಸಿದ ಕಪಿಲ್ ಆತನ ಬಳಿ, ಸಾರ್ವಜನಿಕ ಸ್ಥಳವಾದ ಇಲ್ಲಿ ಮೂತ್ರ ವಿಸರ್ಜಿಸಬೇಡ ಎಂದಿದ್ದರು. ಈ ವೇಳೆ ಕೋಪಗೊಂಡ ವ್ಯಕ್ತಿ ಕಪಿಲ್‌ನ ಮೇಲೆ ಗುಂಡಿನ ದಾಳಿ ನಡೆಸಿದ್ದ. ಇದನ್ನೂ ಓದಿ: ಬೈಕ್ ಅಪಘಾತ – ರಸ್ತೆಗೆ ಬಿದ್ದ ಯುವತಿ ಮೇಲೆ ಹರಿದ ಬಸ್; 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದವಳ ದುರಂತ ಅಂತ್ಯ
ತಕ್ಷಣವೇ ಅಲ್ಲಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ, ಕಪಿಲ್‌ನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕಪಿಲ್ ಮೃತಪಟ್ಟಿದ್ದಾರೆ.
ಕುಟುಂಬಕ್ಕೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡ ತಂದೆ, ತಾಯಿ ಕಣ್ಣೀರಿಟ್ಟಿದ್ದಾರೆ. ಕಪಿಲ್ ಬಡ ಕುಟುಂಬದಲ್ಲಿ ಜನಿಸಿದ್ದ. ಕಪಿಲ್‌ನನ್ನು ಸಾಲ ಮಾಡಿ ಅಮೆರಿಕಕ್ಕೆ ಕಳುಹಿಸಿದರು. ಇದೀಗ ಮಗನ ಸಾವಿನ ಸುದ್ದಿ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ.






