Tag: ಕ್ಯಾಸಿನೊ

  • ಜೈಪುರ ಕ್ಯಾಸಿನೊ ಪ್ರಕರಣ- ಕೋಲಾರದ CPI ಆಂಜಪ್ಪ ಅಮಾನತು

    ಜೈಪುರ ಕ್ಯಾಸಿನೊ ಪ್ರಕರಣ- ಕೋಲಾರದ CPI ಆಂಜಪ್ಪ ಅಮಾನತು

    ಕೋಲಾರ/ಜೈಪುರ: ಜೈಸಿಂಗ್‌ಪುರ ಖೋರ್ ಪ್ರದೇಶದಲ್ಲಿ ನಡೆದ ಜೂಟಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ CPI ಆಂಜಪ್ಪನನ್ನು ಅಮಾನತು ಮಾಡಲಾಗಿದೆ.

    ಆಂಜಪ್ಪನನ್ನು ಅಮಾನತು ಮಾಡಿರುವುದಾಗಿ ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್ ಆದೇಶಿಸಿದ್ದಾರೆ ಎಂದು ಕೋಲಾರದ ಎಸ್‌ಪಿ ಡಿ.ದೇವರಾಜ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 8 ತಿಂಗಳ ಗರ್ಭಿಣಿಯನ್ನು ಒದ್ದ ಟಿಎಂಸಿ ಶಾಸಕನ ಬೆಂಬಲಿಗರು

    ಜೈಪುರದ ಜೈಸಿಂಗ್‌ಪುರ ಖೋರ್ ಪ್ರದೇಶದ ರೆಸಾರ್ಟ್ ಮೇಲೆ ಪೊಲೀಸರು ದಾಳಿ ನಡೆಸಿದ ಬಳಿಕ ಅಕ್ರಮ ಜೂಜಾಟದಲ್ಲಿ ತೊಡಗಿದ್ದ 13 ಮಹಿಳೆಯರು ಸೇರಿದಂತೆ 84 ಮಂದಿಯನ್ನು ನಿನ್ನೆ ಬಂಧಿಸಲಾಗಿದೆ. ಇದರಲ್ಲಿ ಕೋಲಾರದ CPI ಆಂಜಪ್ಪ, ಬೆಂಗಳೂರು ಗ್ರಾಮಾಂತರ ಸಬ್ ರಿಜಿಸ್ಟರ್ ಶ್ರೀನಾಥ್, ತೆರಹಳ್ಳಿ ಸರ್ಕಾರಿ ಶಾಲೆ ಶಿಕ್ಷಕ ಕೆ.ಎನ್.ರಮೇಶ್, ಬಿಜೆಪಿ ಮುಖಂಡ ರಾಜೇಶ್ ಹಾಗೂ ವ್ಯಾಪಾರಿ ಸುಧಾಕರ್ ಸೇರಿ ಕರ್ನಾಟಕದ 7 ಮಂದಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: `ಜೈಲರ್’ ಲುಕ್‌ನಲ್ಲಿ ರಜನಿಕಾಂತ್ ಮಿಂಚಿಂಗ್: ಹೇಗಿರಲಿದೆ ಶಿವಣ್ಣನ ಲುಕ್?

    ಜೈಪುರ ಪೊಲೀಸರ ತಂಡ ಶನಿವಾರ ರಾತ್ರಿ ಆರೋಪಿಗಳು ಜೂಜಾಡುತ್ತಿದ್ದ ಸಾಯಿಪುರ ಬಾಗ್ ರೆಸಾರ್ಟ್ ಮೇಲೆ ದಾಳಿ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ. 9 ಹುಕ್ಕಾ, ಐಎಂಎಫ್‌ಎಲ್‌ನ 44 ಬಾಟಲಿಗಳು, 66 ಬಿಯರ್ ಬಾಟಲಿಗಳು, 14 ಐಷಾರಾಮಿ ಕಾರುಗಳು, ಒಂದು ಟ್ರಕ್ ಮತ್ತು 23.78 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜೈಪುರ ಪೊಲೀಸ್ ಹೆಚ್ಚುವರಿ ಆಯುಕ್ತ ಅಜಯ್‌ಪಾಲ್ ಲಂಬಾ ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬೆಂಗ್ಳೂರಲ್ಲಿ ಗೋವಾ ಮಾದರಿ ಜೂಜಾಟ

    ಬೆಂಗ್ಳೂರಲ್ಲಿ ಗೋವಾ ಮಾದರಿ ಜೂಜಾಟ

    -40 ಜನರು, 37.41 ಲಕ್ಷ ರೂ. ಹಣ ವಶಕ್ಕೆ ಪಡೆದ ಸಿಸಿಬಿ

    ಬೆಂಗಳೂರು: ಗೋವಾ ಮಾದರಿಯಲ್ಲಿ ನಡೆಯುತ್ತಿದ್ದ ಕ್ಯಾಸಿನೊ ಕ್ಲಬ್ ಮೇಲೆ ಸಿಸಿಬಿ ದಾಳಿ ಮಾಡಿದ್ದು, 40 ಜನರನ್ನು ಹಾಗೂ 37.41 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದೆ.

    ನಗರದ ಕೆ.ಆರ್.ಪುರಂ ನಲ್ಲಿರುವ ಡಿಲೈಟ್ ರಿಕ್ರಿಯೇಷನ್ ಕ್ಲಬ್ ಮೇಲೆ ಸಿಸಿಬಿಯ ಎಸಿಪಿ ಪಿ.ಟಿ.ಸುಬ್ರಮಣ್ಯ ನೇತೃತ್ವದ ತಂಡವು ಗುರುವಾರ ದಾಳಿ ನಡೆಸಿದೆ. ಮಂಗಳೂರು ಮೂಲದ ಮಣಿಕಂಠ ಡಿಲೈಟ್ ರಿಕ್ರಿಯೇಷನ್ ಕ್ಲಬ್‍ನಲ್ಲಿ ಕ್ಯಾಸಿನೊ ನಡೆಸುತ್ತಿದ್ದ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

    ಕ್ಯಾಸಿನೊ ಆಡಲು ಇಲ್ಲಿಗೆ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಜನರು ಬರುತ್ತಿದ್ದರು. ಅಷ್ಟೇ ಅಲ್ಲದೆ ಆನ್‍ಲೈನ್ ಮೂಲಕ ಜೂಜು ಆಡಲು ಕೆಲವು ಗ್ರಾಹಕರು ಹಣ ಪಾವತಿ ಮಾಡುತ್ತಿದ್ದರು.

    ಕ್ಯಾಸಿನೊ ನಡೆಸಲಾಗುತ್ತಿದೆ ಎನ್ನುವ ಮಾಹಿತಿ ಸಿಸಿಬಿ ಅಧಿಕಾರಿಗೆ ಗಮನಕ್ಕೆ ಬಂದಿತ್ತು. ಎಸಿಪಿ ಪಿ.ಟಿ.ಸುಬ್ರಮಣ್ಯ ಅವರು ತಂಡ ರಚಿಸಿ ಗುರುವಾರ ಸಂಜೆ 7 ಗಂಟೆಗೆ ಕ್ಲಬ್ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಕ್ಯಾಸಿನೊ ಆಡಲು ಬಂದಿದ್ದ 40 ಜನರನ್ನು, 29 ಲಕ್ಷ ರೂ. ನಗದು ಹಾಗೂ ಜೂಜಾಡಲು ಆನ್‍ಲೈನ್ ಮೂಲಕ ಪಾವತಿ ಮಾಡಿದ್ದ 8.60 ಲಕ್ಷ ರೂ. ಸೇರಿದಂತೆ ಒಟ್ಟು 37.41 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಈ ಕುರಿತು ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv