Tag: ಕ್ರಮ

  • ಪೂನಂ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ: ಭುಗಿಲೆದ್ದ ಜನಾಕ್ರೋಶ

    ಪೂನಂ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ: ಭುಗಿಲೆದ್ದ ಜನಾಕ್ರೋಶ

    ರ್ಭಕಂಠದ ಕ್ಯಾನ್ಸರ್ (Cervical cancer) ಜಾಗೃತಿಗಾಗಿ ನಿನ್ನೆಯಷ್ಟೇ ಸತ್ತಿರುವುದಾಗಿ ಹುಚ್ಚಾಟ ಮಾಡಿರುವ ಬಾಲಿವುಡ್ ನಟಿ ಪೂನಂ ಪಾಂಡೆ (Poonam Pandey) ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಇದು ಜಾಗೃತಿಯಲ್ಲ, ಆಕೆ ಮಾಡಿರೋ ಹುಚ್ಚಾಟ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಪೋಸ್ಟ್ ಹಾಕುತ್ತಿದ್ದಾರೆ.

    ಗರ್ಭಕಂಠದ ಕ್ಯಾನ್ಸರ್ ನಿಂದಾಗಿ ಪೂನಂ ಪಾಂಡೆ ನಿಧನರಾಗಿದ್ದಾರೆ (Death) ಎಂದು ಈ ನಟಿಯ ಮ್ಯಾನೇಜರ್ ನಿನ್ನೆಯಷ್ಟೇ ಪೂನಂ ಅವರ ಅಧಿಕೃತ ಇನ್ಸ್ಟಾ ಪೇಜ್‍ ನಲ್ಲಿ ಹಾಕಲಾಗಿತ್ತು. ಈ ಸುದ್ದಿ ಓದಿ  ಅನೇಕರು ಶಾಕ್ ಆಗಿದ್ದರು. ಅದರಲ್ಲೂ ಈ ಕ್ಯಾನ್ಸರ್ ನಿಂದ ಬಳಲುತ್ತಿರುವವರು ಆತಂಕಕ್ಕೀಡಾಗಿದ್ದರು.

    ಇಂದು ಬೆಳಗ್ಗೆ ಅದೇ ಇನ್ಸ್ಟಾ ಪೇಜ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿರುವ ಪೂನಂ, ಇದೊಂದು ಜಾಗೃತಿಗಾಗಿ ಮಾಡಿರುವ ಗಿಮಿಕ್ ಎಂದು ಒಪ್ಪಿಕೊಂಡಿದ್ದಾರೆ. ಗಿಮಿಕ್ ಮಾಡಿ ಐಯಾಮ್ ಸಾರಿ ಎಂದೂ ಕೇಳಿದ್ದಾರೆ. ಈ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಪೂನಂ ವಿರುದ್ಧ ಕಾನೂನು ಕ್ರಮಕ್ಕೆ ಅನೇಕರು ಆಗ್ರಹ ಮಾಡಿದ್ದಾರೆ.

    ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿ ಜನರ ಭಾವನೆ ಜೊತೆ ಚೆಲ್ಲಾಟ ಆಡಬಾರದು. ಇದು ಗಂಭೀರ ವಿಚಾರ. ಜೊತೆಗೆ ಪೂನಂ ಪಾಂಡೆ ಸಾವಿನ ಸುಳ್ಳಿನಿಂದ  ಇತರೆ ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿರುವವರು ಮಹಿಳೆಯರು ಕೂಡ ಶಾಕ್ ಗೆ ಒಳಗಾಗಿರುತ್ತಾರೆ. ಹೀಗಾಗಿ ಈ ರೀತಿ ಸುಳ್ಳು ಸುದ್ದಿ ಹರಡಿಸಿ ಗಿಮಿಕ್ ಮಾಡಿದ ಪೂನಂ ವಿರುದ್ಧ ಕ್ರಮ ತಗೆದುಕೊಳ್ಳಿ ಎಂದಿದ್ದಾರೆ ಅನೇಕರು.

     

    ಕ್ಯಾನ್ಸರ್ ಬಗ್ಗೆ  ಜಾಗೃತಿಯನ್ನು ಅನೇಕ ಸಲಬ್ರೇಟಿಗಳು ಮೂಡಿಸ್ತಾರೆ. ಆದ್ರೇ ಈ ರೀತಿ ಸಾವಿನ ಸುಳ್ಳು ಸುದ್ದಿ ಹರಡಿಸಿ ಜಾಗೃತಿ ಮೂಡಿಸೋದು ಅಲ್ಲ. ಜಾಗೃತಿ ಮೂಡಿಸೋಕೆ ನಾನಾ ದಾರಿಗಳಿವೆ. ಆದರೆ, ಈ ರೀತಿ ಮಾಡಿದ್ದು ಎಷ್ಟರಚ ಮಟ್ಟಿಗೆ ಸರಿ ಅನ್ನೋ ಪ್ರಶ್ನೆ ಈಗ ಎಲ್ಲರಲ್ಲೂ ಮೂಡಿದೆ.

  • ಕೊರೊನಾಗೆ ನೋ ಎಂಟ್ರಿ- ಗ್ರಾಮವನ್ನೇ ದಿಗ್ಬಂಧನ ಮಾಡಿಕೊಂಡ ಗ್ರಾಮಸ್ಥರು

    ಕೊರೊನಾಗೆ ನೋ ಎಂಟ್ರಿ- ಗ್ರಾಮವನ್ನೇ ದಿಗ್ಬಂಧನ ಮಾಡಿಕೊಂಡ ಗ್ರಾಮಸ್ಥರು

    ದಾವಣಗೆರೆ: ಕೊರೊನಾ ಎರಡನೇ ಅಲೆಯಲ್ಲಿ ನಗರಗಳಿಗಿಂತ ಹಳ್ಳಿಗಳಲ್ಲಿ ಸೋಂಕು ಹೆಚ್ಚಾಗಿದೆ. ಹೀಗಾಗಿ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿಯ ಗ್ರಾಮಸ್ಥರು ಇಡೀ ಗ್ರಾಮವನ್ನೇ ದಿಗ್ಬಂಧನ ಮಾಡಿಕೊಂಡಿದ್ದಾರೆ.

    ದಾವಣಗೆರೆಯ 70 ರಷ್ಟು ಗ್ರಾಮಗಳಿಗೆ ಸೋಂಕು ಹೆಚ್ಚಾಗಿದ್ದು, ಇದರಿಂದ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿಯ ಗ್ರಾಮಸ್ಥರು ಸ್ವಯಂ ದಿಗ್ಬಂಧನ ಮಾಡಿಕೊಂಡಿದ್ದಾರೆ. ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರಿದ್ದು, ಎರಡನೇ ಅಲೆಯಲ್ಲಿ ಗ್ರಾಮಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಇಡೀ ಗ್ರಾಮಸ್ಥರು ದಿಗ್ಬಂಧನ ಮಾಡಿಕೊಳ್ಳುವಂತೆ ಗ್ರಾಮಸ್ಥರು ನಿರ್ಧರಿಸಿದ್ದಾರೆ.

    ಗ್ರಾಮಕ್ಕೆ ಎಂಟ್ರಿ ಕೊಡುವ ರಸ್ತೆಗಳನ್ನು ಬಂದ್ ಮಾಡಿದ್ದು, ರಸ್ತೆಗೆ ಮುಳ್ಳು ಹಾಕಿ ಯಾರು ಬಾರದಂತೆ ದಿಗ್ಬಂಧನ ಮಾಡಿದ್ದಾರೆ. ಬೇರೆ ಜಿಲ್ಲೆಗಳಿಂದ ಹಾಗೂ ಗ್ರಾಮಗಳಿಂದ ಆಗಮಿಸುವವರಿಗೆ ಸಂಪೂರ್ಣ ನಿಷೇಧ ಮಾಡಿದ್ದು, ಚಿಕ್ಕಮ್ಮನಹಟ್ಟಿಯಿಂದಲೂ ಕೂಡ ಯಾರು ಹೊರ ಹೋಗದಂತೆ ಸೂಚನೆ ನೀಡಿದ್ದಾರೆ. ಗ್ರಾಮದಲ್ಲಿ ಎಲ್ಲರೂ ಆರೋಗ್ಯವನ್ನು ಕಾಪಾಡಿಕೊಂಡು, ಗುಂಪು ಸೇರದಂತೆ, ಅನಾವಶ್ಯಕ ಕೂತು ಮಾತನಾಡದಂತೆ ಡಂಗೂರ ಸಾರಿದ್ದಾರೆ. ಹೀಗೆ ತಮ್ಮ ಗ್ರಾಮಕ್ಕೆ ಕೊರೊನಾ ಎಂಟ್ರಿ ಕೊಡದ ಹಾಗೆ ಹಾಗೂ ಸೋಂಕು ನಿಯಂತ್ರಣ ಮಾಡಲು ಇಡೀ ಗ್ರಾಮಸ್ಥರು ಕ್ರಮ ಕೈಗೊಂಡಿದ್ದಾರೆ.

  • ಧನ್ಯಶ್ರೀ ಆತ್ಮಹತ್ಯೆ ಪ್ರಕರಣ- ಆಘಾತಕಾರಿ ಅಂಶ ತೆರೆದಿಟ್ಟ ಎಸ್‍ಪಿ ಅಣ್ಣಾಮಲೈ

    ಧನ್ಯಶ್ರೀ ಆತ್ಮಹತ್ಯೆ ಪ್ರಕರಣ- ಆಘಾತಕಾರಿ ಅಂಶ ತೆರೆದಿಟ್ಟ ಎಸ್‍ಪಿ ಅಣ್ಣಾಮಲೈ

    ಚಿಕ್ಕಮಗಳೂರು : ಚಿಕ್ಕಮಗಳೂರಿನ ಮೂಡಿಗೆರೆ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರೋ ಚಿಕ್ಕಮಗಳೂರು ಎಸ್‍ಪಿ ಅಣ್ಣಾಮಲೈ ಆಘಾತಕಾರಿ ಅಂಶವನ್ನು ತೆರೆದಿಟ್ಟಿದ್ದಾರೆ.

    ಪೊಲೀಸ್ ಇಲಾಖೆ ಬಗ್ಗೆ ಬಾಯಿಗೆ ಬಂದಂತೆ ಮಾತನಾಡ್ತಿರೋ ಸಂಘಟನಾಕಾರರು ಹಾಗೂ ವ್ಯಕ್ತಿಗಳ ಬಗ್ಗೆ ಹಾವಿನ ಜೊತೆ ಸರಸವಾಡಬೇಡಿ ಎಂದು ಎಚ್ಚರಿಕೆ ನೀಡಿದ ಅಣ್ಣಾಮಲೈ, ಮೃತ ಧನ್ಯಶ್ರೀಗೆ ಸಂತೋಷ್ ಸೇರಿದಂತೆ ಐವರು ಸಂಘಟನೆ ಕಾರ್ಯಕರ್ತರು ಧಮ್ಕಿ ಹಾಕಿದ್ದ ಹಿನ್ನೆಲೆಯಲ್ಲಿ ಧನ್ಯಶ್ರೀ ಸಾವಿಗೂ ಮುನ್ನ 36 ಗಂಟೆ ಏನನ್ನೂ ತಿನ್ನದೆ ಖಾಲಿ ಹೊಟ್ಟೆ ಇದ್ದದ್ದು ಮರಣೋತ್ತರ ಪರೀಕ್ಷೆಯಿಂದ ಧೃಡಪಟ್ಟಿದೆ ಎಂದು ಹೇಳಿದ್ದಾರೆ.

    ಧನ್ಯಶ್ರೀ ಮನೆಗೆ ಐವರು ಸಂಘಟನಾಕಾರರು ಎರಡು ಬಾರಿ ಹೋಗಿ ಬಂದಿರೋ ದಾಖಲೆ ಇದೆ. ಅವರ ಮನೆಗೆ ಹೋಗಿ ಹೆತ್ತವರ ಎದುರೇ ಸೊಂಟದ ಕೆಳಗಿನ ಭಾಷೆಯಲ್ಲಿ ಬಾಯಿಗೆ ಬಂದಂತೆ ಬಯ್ದಿರೋದು ಗೊತ್ತಾಗಿದೆ. ಎರಡು, ಮೂರು, ನಾಲ್ಕನೇ ತಾರೀಖು ಬೋಲ್ಡ್ ಆಗಿದ್ದ ಧನ್ಯಶ್ರೀ ಐದನೇ ತಾರೀಖು, ಐವರು ಎರಡು ಬಾರಿ ಮನೆಗೆ ಬಂದುಹೋದ ಮೇಲೆ ಆಕೆ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ.

    ಈ ಬಗ್ಗೆ ಎಲ್ಲಾ ದಾಖಲೆಗಳು ನಮ್ಮ ಬಳಿ ಇವೆ. ಧನ್ಯಶ್ರೀ ತಂದೆಯಿಂದ ತಪ್ಪಾಗಿ ದೂರು ನೀಡಿಸಿದವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾಕಂದರೆ ಧನ್ಯಶ್ರೀ ತಂದೆ ನೀಡಿದ್ದ ದೂರಿಗೂ, ಸಿಕ್ಕ ದಾಖಲೆಗಳು, ಡೆತ್‍ನೋಟ್‍ಗೂ 1 ಪರ್ಸೆಂಟ್ ಕೂಡ ಮ್ಯಾಚ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾಲದಕ್ಕೆ ಸಂತೋಷ್ ಎಂಬ ಹೆಸರಿನಲ್ಲಿ ಧನ್ಯಶ್ರೀ ಜೊತೆ ವಾಟ್ಸಪ್‍ನಲ್ಲಿ ಚಾಟ್ ಮಾಡಿರೋ ವ್ಯಕ್ತಿ ಸಂತೋಷ್ ಅಲ್ಲ. ಆತ ಯಾರೆಂಬುದು ಗೊತ್ತಾಗಿದೆ. ಸದ್ಯದಲ್ಲೇ ಅವನನ್ನೂ ಅರೆಸ್ಟ್ ಮಾಡ್ತೇವೆ ಎಂದು ಅಣ್ಣಾಮಲೈ ಹೇಳಿದ್ದಾರೆ.

    ಸಂಘಟನಾಕಾರರು ಪೊಲೀಸ್ ಇಲಾಖೆ ಬಗ್ಗೆ ಬಾಯಿಗೆ ಬಂದಂತೆ ಮಾತನಾಡ್ತಿದ್ದಾರೆ. ನಾವು ಖಾಕಿ ಬಟ್ಟೆ ಹಾಕಿದ ಮೇಲೆ ನಮಗೆ ಎಲ್ಲರೂ ಒಂದೇ. ಎಲ್ಲಾ ಧರ್ಮವೂ ಒಂದೇ. ನನ್ನ ಸಬ್ ಇನ್ಸ್ ಪೆಕ್ಟರ್ ನನ್ನ ಅಣತಿಯಂತೆ ಕೆಲಸ ಮಾಡಿದ್ದಾರೆ. ಇಲಾಖೆ ಬಗ್ಗೆ ಕೇವಲವಾಗಿ ಮಾತನಾಡಿರೋರ ಬಗ್ಗೆಯೂ ಕ್ರಮ ಕೈಗೊಳ್ಳುತ್ತೇವೆ. ಈ ಪ್ರಕರಣವನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಪ್ರಕರಣದಲ್ಲಿ ಯಾರೇ ಇರಲಿ, ಎಷ್ಟೆ ದೊಡ್ಡ ವ್ಯಕ್ತಿಗಳೇ ಬರಲಿ, ಎಷ್ಟೆ ಒತ್ತಡ ಬಂದರು ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅಣ್ಣಾಮಲೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

  • ಮಂಗ್ಳೂರಿನ ಮಾಲ್‍ನಲ್ಲಿ ಡ್ಯಾನ್ಸ್ ಮಾಡಿದ್ದಕ್ಕೆ ಮುಸ್ಲಿಂ ಯುವತಿ ವಿರುದ್ಧ ಟೀಕೆ

    ಮಂಗ್ಳೂರಿನ ಮಾಲ್‍ನಲ್ಲಿ ಡ್ಯಾನ್ಸ್ ಮಾಡಿದ್ದಕ್ಕೆ ಮುಸ್ಲಿಂ ಯುವತಿ ವಿರುದ್ಧ ಟೀಕೆ

    ಮಂಗಳೂರು: ಮುಸ್ಲಿಂ ಹೆಣ್ಮಕ್ಕಳಿಗೆ ಸಂಗೀತ ಹಾಗೂ ಕುಣಿತ ಧಾರ್ಮಿಕ ಕಟ್ಟುಪಾಡುಗಳ ಅನುಸಾರ ನಿಷೇಧವಾಗಿದೆ. ಆದರೆ ಈಗಿನ ತಲೆಮಾರಿನ ಕೆಲವು ಹೆಣ್ಮಕ್ಕಳು ಹಾಡು ಮತ್ತು ಕುಣಿತಕ್ಕೆ ಮುಂದಾಗುತ್ತಿರುವುದು ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.

    ಮಂಗಳೂರಿನ ಮಾಲ್ ಒಂದರಲ್ಲಿ ಇತರೇ ಹುಡುಗಿಯರ ಜೊತೆ ಬುರ್ಖಾ ಹಾಕಿಕೊಂಡಿದ್ದ ಯುವತಿಯೊಬ್ಬಳು ಡ್ಯಾನ್ಸ್ ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕಿದ ವಿಡಿಯೋ ಈಗ ವೈರಲ್ ಆಗಿದ್ದು ಮುಸ್ಲಿಂ ವಾಟ್ಸಪ್ ಗ್ರೂಪ್‍ಗಳಲ್ಲಿ ಹರಿದಾಡುತ್ತಿದೆ.

    ಕುಣಿತ ಹಾದರಕ್ಕೆ ಸಮ ಎನ್ನುವಂತೆ ಟೀಕಿಸುತ್ತಿದ್ದು ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒಂದು ವರ್ಗ ಒತ್ತಾಯಿಸುತ್ತಿದೆ. ಈ ಹಿಂದೆ ಖಾಸಗಿ ವಾಹಿನಿಯಲ್ಲಿ ಶಿವಮೊಗ್ಗ ಮೂಲದ ಸುಹಾನಾ ಎಂಬ ಮುಸ್ಲಿಂ ಹುಡುಗಿ ಹಾಡು ಹಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.