Tag: ಕ್ರಷರ್ ಮಾಲೀಕ

  • ಸರ್ಕಾರಿ ಜಾಗದಲ್ಲಿ ರಸ್ತೆ ಮಾಡುವ ವಿಚಾರಕ್ಕೆ ಗಲಾಟೆ – ಕ್ರಷರ್ ಮಾಲೀಕನಿಂದ ರೈತನಿಗೆ ಗುಂಡೇಟು

    ಸರ್ಕಾರಿ ಜಾಗದಲ್ಲಿ ರಸ್ತೆ ಮಾಡುವ ವಿಚಾರಕ್ಕೆ ಗಲಾಟೆ – ಕ್ರಷರ್ ಮಾಲೀಕನಿಂದ ರೈತನಿಗೆ ಗುಂಡೇಟು

    ಚಿಕ್ಕಬಳ್ಳಾಪುರ: ಸರ್ಕಾರಿ ಜಾಗದಲ್ಲಿ ರಸ್ತೆ ಮಾಡಲು ಮುಂದಾದ ಕ್ರಷರ್ ಮಾಲೀಕ ಹಾಗೂ ಸ್ಥಳೀಯ ರೈತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಕ್ರಷರ್ ಮಾಲೀಕ ರೈತರೊಬ್ಬರ (Farmer) ಕಾಲಿಗೆ ಗುಂಡು ಹಾರಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮಾಜಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶ್ ಕುಮಾರ್ ಎಂಬಾತ ಮಂಚೇನಹಳ್ಳಿ ಗ್ರಾಮದ ಚಿಕನ್ ರವಿ ಅಲಿಯಾಸ್ ಜಿಮ್ ರವಿ ಎಂಬ ರೈತರೊಬ್ಬರ ಮೇಲೆ ಗುಂಡು ಹಾರಿಸಿದ್ದಾನೆ. ಇದನ್ನೂ ಓದಿ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ – ಪ್ರಹ್ಲಾದ್ ಜೋಶಿ

    ಸಕಲೇಶ್ ಕುಮಾರ್‌ಗೆ ಕೋಟಗಾನ ಗುಟ್ಟ ಎಂಬ ಬೆಟ್ಟದಲ್ಲಿ ಕ್ರಷರ್ ಮಾಡಲು ಮಂಜೂರಾತಿ ಸಿಕ್ಕಿತ್ತು. ಆದರೆ ಬೆಟ್ಟಕ್ಕೆ ತೆರಳಲು ದಾಳಿ ಇರಲಿಲ್ಲ. ಹೀಗಾಗಿ ಸಕಲೇಶ್ ತಾನೇ ಮುಂದೆ ನಿಂತು ಸರ್ಕಾರಿ ಜಾಗದಲ್ಲಿ ರಸ್ತೆ ಮಾಡಲು ಮುಂದಾಗಿದ್ದು, ಇದು ಸ್ಥಳೀಯ ರೈತರ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: Pahalgam Terror Attack | ಭಾರತ ಶೀಘ್ರದಲ್ಲೇ ಪ್ರತೀಕಾರ ತೀರಿಸಿಕೊಳ್ಳಲಿದೆ – ಉಗ್ರರಿಗೆ ರಾಜನಾಥ್‌ ಸಿಂಗ್‌ ಎಚ್ಚರಿಕೆ

    ಇಂದು ಸಹ ಸಕಲೇಶ್ ಕಡೆಯವರು ಜೆಸಿಬಿಗಳ ಮೂಲಕ ರಸ್ತೆ ಮಾಡಲು ಮುಂದಾಗಿದ್ದು, ಗ್ರಾಮಸ್ಥರು ಕ್ರಷರ್ ಮಾಡಬಾರದು. ರಸ್ತೆಯನ್ನೂ ಅಗೆಯಬಾರದು ಎಂದು ಅಡ್ಡಿಪಡಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಸಕಲೇಶ್ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕಿರುತೆರೆ ದಂಪತಿ

    ಈ ವೇಳೆ ಸಕಲೇಶ್ ತನ್ನ ಪರವಾನಿಗೆ ಸಹಿತ ರಿವಾಲ್ವರ್‌ನಿಂದ ಚಿಕನ್ ರವಿ ಎಂಬ ರೈತರೊಬ್ಬರ ಕಾಲಿಗೆ ಗುಂಡು ಹಾರಿಸಿದ್ದಾನೆ. ಬಳಿಕ ನನ್ನ ತಲೆಗೆ ಕಲ್ಲಿನಿಂದ ಹೊಡೆದವರು ಯಾರು ಎಂದು ಕೂಗಾಡುತ್ತಾ ರಿವಾಲ್ವರ್ ಕೈಯಲ್ಲಿ ಹಿಡಿದು ಜನರನ್ನ ಬೆದರಿಸಿದ್ದಾನೆ. ಇದನ್ನೂ ಓದಿ: ಇಂದು ಮನೆಗೆ ಮರಳಬೇಕಿದ್ದ ಉದ್ಯಮಿ ಉಗ್ರರ ಗುಂಡಿಗೆ ಬಲಿ – ಇಡೀ ಗ್ರಾಮದಲ್ಲಿ ಮಡುಗಟ್ಟಿದ ಮೌನ

    ಘಟನೆಯಲ್ಲಿ ಗಾಯಗೊಂಡ ರವಿ ಎಂಬ ರೈತನಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಆರೋಪಿ ಸಕಲೇಶ್‌ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

  • ಕ್ರಷರ್‌ಗಳ ಮೇಲೆ ಐಎಸ್‍ಡಿ ದಾಳಿ- 234 ಜಿಲೆಟಿನ್ ಕಡ್ಡಿ ಸೇರಿದಂತೆ ಸ್ಫೋಟಕ ವಶಕ್ಕೆ

    ಕ್ರಷರ್‌ಗಳ ಮೇಲೆ ಐಎಸ್‍ಡಿ ದಾಳಿ- 234 ಜಿಲೆಟಿನ್ ಕಡ್ಡಿ ಸೇರಿದಂತೆ ಸ್ಫೋಟಕ ವಶಕ್ಕೆ

    ಧಾರವಾಡ: ಶಿವಮೊಗ್ಗದಲ್ಲಿ ಭಾರೀ ಸ್ಫೋಟ ಉಂಟಾಗಿ ಸಾವು-ನೋವು ಸಂಭವಿಸಿದ ಬೆನ್ನಲ್ಲೇ ಧಾರವಾಡದಲ್ಲಿ ಕ್ರಷರ್‍ಗಳ ಮೇಲೆ ಆಂತರಿಕ ಭದ್ರತಾ ವಿಭಾಗ (ಐಎಸ್‍ಡಿ) ದಾಳಿ ನಡೆಸಿದೆ.

    ದಾಳಿ ವೇಳೆ 234 ಜಿಲೆಟಿನ್ ಕಡ್ಡಿ ಸೇರಿದಂತೆ ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಡೆ ಒಡೆಯಲು ಮಾಲೀಕ ಸ್ಫೋಟಕಗಳನ್ನು ಸಂಗ್ರಹಿಸಿದ್ದ. ಈ ಹಿನ್ನೆಲೆಯಲ್ಲಿ ಕ್ರಷರ್ ಮಾಲೀಕ ವಿರೇನ್‍ಗೌಡ ಪಾಟೀಲ್ ಮೇಲೆ ಕೇಸ್ ದಾಖಲಿಸಲಾಗಿದೆ. ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಸಂಭವಿಸಿದ ಬ್ಲಾಸ್ಟ್‍ನಿಂದಾಗಿ ಭಾರೀ ಪ್ರಮಾಣದ ಹಾನಿ ಸಂಭವಿಸಿದ್ದು, ಹಲವು ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸದ್ಯ ಐವರ ಮೃತದೇಹಗಳು ಪತ್ತೆಯಾಗಿವೆ. ಸ್ಫೋಟದಿಂದ ಜೀವ ಹಾನಿ ಜೊತೆಗೆ ಆಸ್ತಿ ಪಾಸ್ತಿ ಸಹ ಹಾನಿಯಾಗಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಅಲ್ಲದೆ 1,422 ಕುಟುಂಬಗಳಿಗೆ ತೊಂದರೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು.

    ಜಿಲ್ಲೆಯ ಅಬ್ಬಲೆಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹೂಣಸೊಂಡ, ಬಸವನಗಂಗೂರು, ಕಲ್ಲುಗಂಗೂರು, ಅಬ್ಬಲಗೆರೆಯಲ್ಲಿ 150 ಕ್ಕು ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಅಬ್ಬಲಗೆರೆ ಸೇರಿ ಒಟ್ಟು 7 ಗ್ರಾಮಗಳಲ್ಲಿ ಕ್ರಷರ್ ಗಳದ್ದೇ ಸಾಮ್ರಾಜ್ಯ ಎನ್ನುವಂತಾಗಿದ್ದು, ಹೂಣಸೊಂಡದಲ್ಲಿ ಆಪಾರ ಪ್ರಮಾಣದ ಹಾನಿ ಸಂಭವಿಸಿದೆ.

  • ಶಿವಮೊಗ್ಗದ ಹುಣಸೋಡು ಬಳಿ ಸ್ಫೋಟ ಪ್ರಕರಣ: ಕ್ರಷರ್ ಮಾಲೀಕ ಸುಧಾಕರ್ ಅರೆಸ್ಟ್

    ಶಿವಮೊಗ್ಗದ ಹುಣಸೋಡು ಬಳಿ ಸ್ಫೋಟ ಪ್ರಕರಣ: ಕ್ರಷರ್ ಮಾಲೀಕ ಸುಧಾಕರ್ ಅರೆಸ್ಟ್

    ಶಿವಮೊಗ್ಗ: ಜಿಲ್ಲೆಯ ಹಣಸೋಡು ಬಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕ್ರಷರ್ ಮಾಲೀಕ ಸುಧಾಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.

    ಶಿವಮೊಗ್ಗ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಸುಧಾಕರ್ ನನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಗಣಿಗಾರಿಕೆಗೆ ಭೂಮಿ ಕೊಟ್ಟಿರುವ ಅನಿಲ್ ಕುಲಕರ್ಣಿ ಯನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಶಿವಮೊಗ್ಗದ ರವೀಂದ್ರ ನಗರದ ನಿವಾಸಿ ಸುಧಾಕರ್ ಒಡೆತನದ ಕಲ್ಲನಾಗೂರಿನಲ್ಲಿರುವ ಬಿವಿಎಸ್ ಸ್ಟೋನ್ ಕ್ರಷರ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೂರು ವರ್ಷದ ಮಟ್ಟಿಗೆ ಜಿಲ್ಲಾಡಳಿತ ಪರವಾನಗಿ ನೀಡಿತ್ತು. ಈ ವೇಳೆ ಸುರಕ್ಷಿತ ವಲಯದ ಸುತ್ತ 100 ಮೀಟರ್ ಅಂತರದಲ್ಲಿ ಯಾವುದೇ ಚಟುವಟಿಕೆ ಕೈಗೊಳ್ಳಲ್ಲ ಎಂಬ ಷರತ್ತಿಗೆ ಒಪ್ಪಿಗೆ ಸೂಚಿಸಿ ಸುಧಾಕರ್ ಸಹಿ ಕೂಡ ಹಾಕಿದ್ದ.

    ಆ ಬಳಿಕ ಸ್ಫೋಟಕಗಳ ಬಗ್ಗೆ ಸ್ಥಳೀಯರು ಹತ್ತಾರು ಬಾರಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಜಿಲ್ಲಾಡಳಿತ ಹಾಗೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಇದೀಗ ಸ್ಥಳೀಯ ನಿವಾಸಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ನಿನ್ನೆ ರಾತ್ರಿ 10.30ರ ವೇಳೆ ಭಾರೀ ಶಬ್ದ ಕೇಳಿದ ಜನ ಭಯಭೀತರಾಗಿದ್ದರು. ಬಳಿಕ ಅದು ಜಲ್ಲಿ ಕ್ರಷರ್‍ನಲ್ಲಿ ಲಾರಿಯಲ್ಲಿದ್ದ ಜಿಲೆಟಿನ್ ಸ್ಫೋಟಗೊಂಡಿರುವುದಾಗಿ ಬಯಲಾಗಿದೆ. ಈ ದುರ್ಘಟನೆಯಲ್ಲಿ ಕಾರ್ಮಿಕರು ಮೃತಪಟ್ಟಿದ್ದು, ಸದ್ಯ 7 ಮೃತದೇಹಗಳು ಪತ್ತೆಯಾಗಿವೆ. ಜಿಲೆಟಿನ್ ತುಂಬಿದ ಲಾರಿ ಸ್ಫೋಟದ ತೀವ್ರತೆಗೆ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿ ಪೀಸ್ ಪೀಸ್ ಆಗಿದೆ. ಕಿಲೋಮೀಟರ್ ದೂರದವರೆಗೂ ಲಾರಿಯ ಬಿಡಿಭಾಗಗಳು ಹಾರಿವೆ.

    ಕಾರ್ಮಿಕರ ಮೃತದೇಹ ಛಿದ್ರ ಛಿದ್ರವಾಗಿದ್ದು, ಒಂದೊಂದು ಅಂಗಾಂಗ ಒಂದೊಂದು ಕಡೆ ಸಿಕ್ಕಿದೆ. ಕ್ರಷರ್ ಸುತ್ತಮುತ್ತ ಇದ್ದ ಬಹುತೇಕ ಮರಗಳು ನಾಶವಾಗಿವೆ. 40 ಕಿಲೋಮೀಟರ್ ದೂರದವರೆಗೂ ಶಬ್ದ ಕೇಳಿದೆ. ಸ್ಫೋಟದ ಸ್ಥಳದಲ್ಲಿ ಕೆಟ್ಟ ವಾಸನೆ ಬರುತ್ತಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಅಲ್ಲದೆ ಘಟನೆಯಿಂದ ಭಾರೀ ಹಾನಿ ಸಂಭವಿಸಿದೆ.