Tag: ಕ್ರಾಂತಿ

  • ಹುಟ್ಟುಹಬ್ಬಕ್ಕೆ ಬ್ರೇಕ್‌ ಹಾಕಿದ ರಚಿತಾ- ಸೋಶಿಯಲ್‌ ಮೀಡಿಯಾದಲ್ಲಿ ನಟಿ ಮನವಿ

    ಹುಟ್ಟುಹಬ್ಬಕ್ಕೆ ಬ್ರೇಕ್‌ ಹಾಕಿದ ರಚಿತಾ- ಸೋಶಿಯಲ್‌ ಮೀಡಿಯಾದಲ್ಲಿ ನಟಿ ಮನವಿ

    ಬುಲ್ ಬುಲ್ ಬೆಡಗಿ ರಚಿತಾ ರಾಮ್ (Rachitha Ram) ತಮ್ಮ ಅಭಿಮಾನಿಗಳಿಗೆ ಬ್ಯಾಡ್‌ ನ್ಯೂಸ್‌ ಕೊಟ್ಟಿದ್ದಾರೆ. ರಚ್ಚು ಹುಟ್ಟಿದ ಹಬ್ಬಕ್ಕೆ ನೆಚ್ಚಿನ ನಟಿಯನ್ನ ಕಣ್ತುಂಬಿಕೊಳ್ಳಬೇಕು ಎಂದುಕೊಂಡಿದ್ದ ಫ್ಯಾನ್ಸ್‌ಗೆ ಈ ವಿಚಾರ ಕೇಳಿದ್ರೆ ನಿರಾಸೆ ಆಗೋದು ಗ್ಯಾರಂಟಿ. ಈ ಬಾರಿ ರಚಿತಾ, ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಹೇಳಿದ್ದಾರೆ.

    ಅಕ್ಟೋಬರ್ 3ರಂದು ರಚಿತಾ ರಾಮ್ ಹುಟ್ಟುಹಬ್ಬವಾಗಿದ್ದು, ಈ ವರ್ಷ ಬರ್ತ್‌ಡೇ ಆಚರಣೆಗೆ ನಟಿ ಬ್ರೇಕ್ ಹಾಕಿದ್ದಾರೆ. ಎಲ್ಲರಿಗೂ ನಮಸ್ಕಾರ, ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳಿಂದ ಈ ವರ್ಷ ನನ್ನ ಜನ್ಮದಿನವನ್ನು ಆಚರಿಸುವುದು ಸೂಕ್ತವಲ್ಲ ಎನಿಸುತ್ತಿದೆ. ನಾನು ಮನೆಯಲ್ಲಿ ಇರುವುದಿಲ್ಲವಾದ್ದರಿಂದ ನನ್ನ ಅಭಿಮಾನಿಗಳು ನನ್ನ ಮನೆಯ ಹತ್ತಿರ ಬರಬೇಡಿ ಎಂದು ದಯೆಯಿಂದ ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಅಭಿಮಾನ ನನ್ನೊಂದಿಗೆ ಸದಾ ಇರಲಿ ಎಂದು ನಟಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Rachita Ram (@rachita_instaofficial)

    ಕಾವೇರಿ ನೀರಿನ ಹೋರಾಟದ ಮಧ್ಯೆ ತಾವು ಹುಟ್ಟುಹಬ್ಬ ಆಚರಿಸೋದು ಸರಿಯಲ್ಲ ಎಂದೆನಿಸಿ ತಮ್ಮ ಬರ್ತ್‌ಡೇ ಆಚರಣೆಯನ್ನು ಕ್ಯಾನ್ಸಲ್‌ ಮಾಡಿದ್ದಾರೆ. ಈ ಸುದ್ದಿ ಕೇಳಿ, ಅಭಿಮಾನಿಗಳು ಬಗೆ ಬಗೆಯ ಕಾಮೆಂಟ್ಸ್‌ ಹಾಕ್ತಿದ್ದಾರೆ. ಇದನ್ನೂ ಓದಿ:ತಲಕಾವೇರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್, ಅವಿವಾ ದಂಪತಿ

    ಅಭಿಷೇಕ್ ಅಂಬರೀಶ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಮತ್ತು ಸತೀಶ್ ನೀನಾಸಂ ಜೊತೆ `ಮ್ಯಾಟ್ನಿ’ ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಸದ್ಯದಲ್ಲೇ ಸಿನಿಮಾಗಳು ರಿಲೀಸ್ ಆಗಲಿವೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]