Tag: ಕ್ರಿಕೆಟ್ ಬ್ಯಾಟ್

  • ನನ್ನ ಪತ್ನಿ ಜೊತೆ ಮಾತನಾಡಬೇಡ ಅಂದಿದ್ದಕ್ಕೆ ಕ್ರಿಕೆಟ್ ಬ್ಯಾಟ್,  ವಿಕೆಟ್‌ನಿಂದ ಹೊಡೆದು ಕೊಲೆಗೈದ್ರು

    ನನ್ನ ಪತ್ನಿ ಜೊತೆ ಮಾತನಾಡಬೇಡ ಅಂದಿದ್ದಕ್ಕೆ ಕ್ರಿಕೆಟ್ ಬ್ಯಾಟ್, ವಿಕೆಟ್‌ನಿಂದ ಹೊಡೆದು ಕೊಲೆಗೈದ್ರು

    ಚಿಕ್ಕಬಳ್ಳಾಪುರ: ‘ನನ್ನ ಪತ್ನಿ ಜೊತೆ ಮಾತನಾಡಬೇಡ’ ಅಂದಿದ್ದಕ್ಕೆ ಕ್ರಿಕೆಟ್ ಬ್ಯಾಟ್, ವಿಕೆಟ್‌ನಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಬಳಿ ನಡೆದಿದೆ.

    ಶ್ರೀನಿವಾಸ್(38) ಕೊಲೆಯಾದ ವ್ಯಕ್ತಿ. ಈತನನ್ನು ಇಬ್ಬರು ಸಂಬಂಧಿಗಳೇ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಇಬ್ಬರು ಆರೋಪಿಗಳನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನವೀನ್ ಹಾಗೂ ವೆಂಕಟರಾಮು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಡಿಸೆಂಬರ್ ಒಳಗಾಗಿ ಮಹದಾಯಿ ಯೋಜನೆಗೆ ಚಾಲನೆ ಸಿಗಲಿದೆ: ಕಾರಜೋಳ 

    ಹಿನ್ನೆಲೆ ಏನು?
    ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಗ್ರಾಮ ಶ್ರೀನಿವಾಸ್, ಆಗಸ್ಟ್ 3 ರಂದು ಬೆಳಗ್ಗೆ ಗ್ರಾಮ ಹೊರಹೊಲಯದಲ್ಲಿ ಹತ್ಯೆಯಾಗಿದ್ದ. ಈ ಹಿನ್ನೆಲೆ ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೊಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ. ಈಗ ಕೊಲೆಯ ರಹಸ್ಯ ಬಯಲಾಗಿದೆ. ಸ್ವತಃ ಶ್ರೀನಿವಾಸ್‍ನ ಸಹೋದರ ಸಂಬಂಧಿ ನವೀನ್ ಹಾಗೂ ಶ್ರೀನಿವಾಸ್‍ನ ಅಕ್ಕನ ಮಗ ವೆಂಕಟರಾಮುನೇ ಕೊಲೆ ಮಾಡಿದ್ದಾರೆ ಎಂಬ ಆಘಾತಕಾರಿ ವಿಷಯ ಬಯಲಾಗಿದೆ.

    ಅನೈತಿಕ ಸಂಬಂಧದ ಸಂಶಯ
    ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೃತನ ತಾಯಿ ಗಂಗಮ್ಮ ಬಾಗೇಪಲ್ಲಿ ಪೊಲೀಸರಿಗೆ ದೂರು ನೀಡಿ, ನನ್ನ ಸೊಸೆಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿದ್ದಾರೆ. ನನ್ನ ಮಗ ಶ್ರೀನಿವಾಸ್ ತನ್ನ ಪತ್ನಿ ಅಶ್ವಿನಿಯ ಮೇಲೆ ಅನುಮಾನ ಪಟ್ಟು, ಆಕೆಯ ಜೊತೆ ಸಲುಗೆಯಿಂದ ಇದ್ದ ನವೀನ್‍ಗೆ ಬೈಯ್ದು ಬುದ್ಧಿವಾದ ಹೇಳಿದ್ದ. ಅದೇ ಈ ಕೊಲೆಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

    ಇದ್ರಿಂದ ಎಚ್ಚೆತ್ತ ಪೆÇಲೀಸರು, ಆದಿಗಾನಹಳ್ಳಿ ಗ್ರಾಮದ ನವೀನ್‍ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಶ್ರೀನಿವಾಸ್‍ನ ಅಕ್ಕನ ಮಗ ವೆಂಕಟರಾಮ ಕೆಲಸ ಕಾರ್ಯಗಳಿಗೆ ಹೋಗದೆ ಮನೆಯಲ್ಲಿ ಇರುವ ಕಾರಣ ಆತನಿಗೂ ಶ್ರೀನಿವಾಸ್ ಬುದ್ಧಿ ಹೇಳಿದ್ದ. ಇದ್ರಿಂದ ಇಬ್ಬರು ಸೇರಿ ಕೆಲಸಕ್ಕೆ ಹೊಗ್ತಿದ್ದ ಶ್ರೀನಿವಾಸ್‍ನನ್ನು ಅಡ್ಡಗಟ್ಟಿ, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‍ಗಳಿಂದ ತಲೆಗೆ ಹೊಡೆದು ಹತ್ಯೆ ಮಾಡಿ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪೈಪ್‍ಲೈನ್ ಅಡುಗೆ ಅನಿಲದ ಬೆಲೆ ಪ್ರತಿ ಯೂನಿಟ್‍ಗೆ 2.63 ರೂ. ಏರಿಕೆ 

    ಪತ್ನಿ ಕೈವಾಡ
    ಶ್ರೀನಿವಾಸ್ ಕೊಲೆ ಪ್ರಕರಣದಲ್ಲಿ ಆತನ ಪತ್ನಿ ಅಶ್ವಿನಿಯ ಕೈವಾಡದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಸದ್ಯ ಯಾವುದೇ ಸಾಕ್ಷ್ಯಾಧರಗಳು ಲಭ್ಯವಾಗಿಲ್ಲ. ಇದ್ರಿಂದ ಆರೋಪಿಗಳಾದ ನವೀನ್ ಹಾಗೂ ವೆಂಕಟರಾಮುನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದ ಪತ್ನಿ – ಕೋರ್ಟ್ ಮೊರೆ ಹೋದ ಪತಿ

    ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದ ಪತ್ನಿ – ಕೋರ್ಟ್ ಮೊರೆ ಹೋದ ಪತಿ

    ಜೈಪುರ: ಕೌಟುಂಬಿಕ ಹಿಂಸಾಚಾರದ ಆಘಾತಕಾರಿ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹೊರಹೊಮ್ಮಿದ್ದು, ಮಹಿಳೆಯೊಬ್ಬಳು ಮಗನ ಮುಂದೆಯೇ ಕ್ರಿಕೆಟ್ ಬ್ಯಾಟ್‍ನಿಂದ ಪತಿಯನ್ನು ಥಳಿಸಿದ್ದಾಳೆ. ಈ ಹಿನ್ನೆಲೆ ಪತಿಯೂ ತನ್ನ ರಕ್ಷಣೆ ಮಾಡಿ ಎಂದು ನ್ಯಾಯಾಲಯಕ್ಕೆ ಮೊರೆ ಹೋಗಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.

    ತೊಂದರೆಗೀಡಾದ ಪತಿಯೂ ಶಾಲೆಯ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ ಇವರು ಪೊಲೀಸರಿಗೆ ದೂರನ್ನು ಕೊಟ್ಟಿದ್ದು, ನನ್ನ ಪತ್ನಿಯೂ ನನಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾಳೆ. ಈ ಹಿನ್ನೆಲೆ ನನಗೆ ರಕ್ಷಣೆ ಕೊಡಿ ಎಂದು ಪ್ರಾಂಶುಪಾಲರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪಗೆ ಕೊಟ್ಟು ಗೊತ್ತೇ ಹೊರತು ಬೇಡಿ ಪಡೆದು ಗೊತ್ತಿಲ್ಲ: ಬಿ.ವೈ.ವಿಜಯೇಂದ್ರ 

    ಪತಿಯು ದೂರಿನಲ್ಲಿ, ಪತ್ನಿ ನನ್ನ ಮೇಲೆ ಪ್ಯಾನ್, ಸ್ಟಿಕ್ ಮತ್ತು ಕ್ರಿಕೆಟ್ ಬ್ಯಾಟ್‍ನಿಂದ ಹಲ್ಲೆ ನಡೆಸುತ್ತಿದ್ದಾಳೆ. ಇದರಿಂದ ಗಾಬರಿಗೊಂಡ ನಾನು ಸಾಕ್ಷ್ಯ ಸಂಗ್ರಹಿಸಲು ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದೆ ಎಂದು ತಿಳಿಸಿದ್ದಾರೆ. ಪತ್ನಿ ಹಲ್ಲೆ ಮಾಡುತ್ತಿರುವ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದ್ದು, ವೈರಲ್ ಆಗಿದೆ.

    ವೀಡಿಯೋದಲ್ಲಿ ಏನಿದೆ?
    ಪತ್ನಿಯೂ ತಮ್ಮ ಮಗ ಮುಂದೆಯೇ ಕ್ರಿಕೆಟ್ ಬ್ಯಾಟ್ ಹಿಡಿದು ಪತಿಗೆ ಕ್ರಿಕೆಟ್ ಬ್ಯಾಟ್‍ನಿಂದ ಹೊಡೆಯುತ್ತಿರುವುದನ್ನು ಕಾಣಬಹುದು. ಈ ಹಿನ್ನೆಲೆ ಪತಿಯೂ ರಕ್ಷಣೆಗಾಗಿ ನ್ಯಾಯಾಲಯದ ಮೊರೆ ಹೋಗಿದ್ದು, ಘಟನೆಯ ದೃಶ್ಯಾವಳಿಗಳನ್ನು ಹಾಜರುಪಡಿಸಿದ್ದಾರೆ. ಅವರಿಗೆ ಭದ್ರತೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

    ನಡೆದಿದ್ದೇನು?
    ಪ್ರಾಂಶುಪಾಲರಾದ ಅಜಿತ್ ಸಿಂಗ್ ಯಾದವ್ ಅವರು ಏಳು ವರ್ಷಗಳ ಹಿಂದೆ ಹರಿಯಾಣದ ಸೋನಿಪತ್ ನಿವಾಸಿ ಸುಮನ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ, ಅವರ ಜೀವನವು ಚೆನ್ನಾಗಿತ್ತು. ಆದರೆ ಸ್ವಲ್ಪ ಸಮಯದ ನಂತರ ಸುಮನ್ ಅವರು ಅಜಿತ್ ಅವರಿಗೆ ಹೊಡೆಯುವುದನ್ನು ಪ್ರಾರಂಭಿಸಿದರು. ಆಗಾಗ್ಗೆ ಪತ್ನಿ ನೀಡುತ್ತಿದ್ದ ಹಿಂಸೆಯಿಂದ ಅಜಿತ್‍ಗೆ ಹಲವು ಗಾಯವಾಗಿದೆ. ಅವುಗಳನ್ನು ಗುಣಪಡಿಸಲು ಅವರು ವೈದ್ಯಕೀಯ ಸಹಾಯವನ್ನು ಪಡೆಯುತ್ತಿದ್ದರು ಎಂದು ಅವರೇ ತಿಳಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಬೆಂಗಳೂರಿನಲ್ಲಿದ್ದರೆ, ಈ ದೇವಸ್ಥಾನಕ್ಕೆ ಭೇಟಿ ಪಕ್ಕಾ 

    ಯಾವುದೇ ರೀತಿಯ ಸಾಕ್ಷ್ಯಿಗಳು ಇಲ್ಲದ ಹಿನ್ನೆಲೆ ಅಜಿತ್ ಮನೆಯಲ್ಲಿ ಯಾರಿಗೂ ತಿಳಿಯದಂತೆ ಕ್ಯಾಮೆರಾ ಇಟ್ಟಿದ್ದಾರೆ. ನಂತರ ಸುಮನ್ ಬ್ಯಾಟ್‍ನಲ್ಲಿ ಹೊಡೆಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಹೆಂಡತಿ ಮಿತಿಗಳನ್ನು ಮೀರಿದ್ದರಿಂದ ನಾನು ನ್ಯಾಯಾಲಯದ ಆಶ್ರಯ ಪಡೆದಿದ್ದೇನೆ. ಸೋದರ ಮಾವ ಸಹ ನನ್ನ ಪತ್ನಿಯನ್ನು ಹಿಂಸೆಗೆ ಪ್ರೇರೇಪಿಸುತ್ತಾನೆ ಎಂದು ಆರೋಪಿಸಿದರು.

  • ಯಾರ ಮಗ ಆಗಿದ್ದರೂ ಸರಿ ಪಕ್ಷದಿಂದ ಹೊರಗೆ ಹಾಕಿ: ಮೋದಿ ಕೆಂಡಾಮಂಡಲ

    ಯಾರ ಮಗ ಆಗಿದ್ದರೂ ಸರಿ ಪಕ್ಷದಿಂದ ಹೊರಗೆ ಹಾಕಿ: ಮೋದಿ ಕೆಂಡಾಮಂಡಲ

    ನವದೆಹಲಿ: ಇತ್ತೀಚೆಗೆ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ಅವಮಾನಿಸಿದ್ದ ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯ್‍ವರ್ಗಿಯಾ ಅವರ ಮಗ ಹಾಗೂ ಶಾಸಕ ಆಕಾಶ್ ವಿಜಯ್‍ವರ್ಗಿಯಾ ವಿರುದ್ಧ ಪ್ರಧಾನಿ ಮೋದಿ ಕೆಂಡಾಮಂಡಲರಾಗಿದ್ದು, ಯಾರ ಮಗ ಆಗಿದ್ದರೂ ಸರಿ, ಪಕ್ಷದಿಂದ ಹೊರ ಹಾಕಿ ಎಂದು ಕಿಡಿಕಾರಿದ್ದಾರೆ.

    ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ಈ ವಿಷಯದ ಕುರಿತು ಕೆಂಡಾಮಂಡಲರಾಗಿದ್ದು, ಈ ರೀತಿ ದುರ್ವರ್ತನೆ ತೋರುವ ನಾಯಕರನ್ನು ಮುಲಾಜಿಲ್ಲದೆ, ಯಾವ ನಾಯಕರ ಮಗನೆಂದೂ ನೋಡದೆ ಪಕ್ಷದಿಂದ ಹೊರ ಹಾಕಿ ಎಂದು ಗುಡುಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಅಷ್ಟಕ್ಕೆ ಸುಮ್ಮನಾಗದ ಪ್ರಧಾನಿ ಮೋದಿ, ಆಕಾಶ್ ವಿಜಯ್‍ವರ್ಗಿಯಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಅವರನ್ನು ಸ್ವಾಗತಿಸಿದವರನ್ನೂ ಪಕ್ಷದಿಂದ ಹೊರಗಡೆ ಹಾಕಿ ಎಂದು ಕಿಡಿ ಕಾರಿದ್ದಾರೆ.

    ಸಭೆಯ ಬಳಿಕ ರಾಜೀವ್ ಪ್ರತಾಪ್ ರೂಡಿಯ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಪ್ರಧಾನಿ ಮೋದಿ ಅವರು ಈ ವಿಚಾರದಲ್ಲಿ ಅಸಮಾಧಾನಗೊಂಡಿದ್ದಾರೆ. ಪಕ್ಷದ ಹೆಸರನ್ನು ಹೇಳಿಕೊಂಡು ಅಸಭ್ಯ ವರ್ತನೆ ನಡೆಸಲು ಯಾರಿಗೂ ಅವಕಾಶವಿಲ್ಲ. ಈ ರೀತಿ ವರ್ತನೆ ತೋರಿದ ಯಾರನ್ನೂ ಸಹಿಸಲು ಸಾಧ್ಯವಿಲ್ಲ ಎಂದು ಕಠಿಣ ಪದಗಳಲ್ಲಿ ಹೇಳಿದ್ದಾರೆ ಎಂದು ತಿಳಿಸಿದರು.

    ಶಾಸಕ ಆಕಾಶ್ ವಿಜಯ್‍ವರ್ಗಿಯಾ ಕಳೆದ ವಾರ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ಅವಮಾನಿಸಿದ್ದರು. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಶಾಸಕನನ್ನು ಪೊಲೀಸರು ಬಂಧಿಸಿದ್ದರು. ಜಾಮೀನಿನ ಮೇಲೆ ಹೊರ ಬಂದ ಆಕಾಶ್ ವಿಜಯ್‍ವರ್ಗಿಯಾ ಇನ್ನೊಮ್ಮೆ ಈ ರೀತಿ ಮಾಡುವುದಿಲ್ಲ ಎಂದು ಕ್ಷಮೆಯಾಚಿಸಿದ್ದರು. ಇಂದೋರ್‍ನಲ್ಲಿ ನಡೆದ ಈ ಘಟನೆಯ ವಿಡಿಯೊ ವೈರಲ್ ಆಗಿತ್ತು. ಅಲ್ಲದೆ, ವಿಪರೀತ ಚರ್ಚೆಗೆ ಗ್ರಾಸವಾಗಿತ್ತು. ಶಾಸಕ ಆಕಾಶ್ ಹಾಗೂ ಆತನ ಬೆಂಬಲಿಗರು ಪೊಲೀಸರು ಹಾಗೂ ಟಿವಿ ವಾಹಿನಿ ಸಿಬ್ಬಂದಿಯ ಎದುರೇ ಸರ್ಕಾರಿ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್ ಹಿಡಿದು ಬೆನ್ನಟ್ಟಿದ್ದರು. ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು.

    ಅಂದು ನಡೆದಿದ್ದು ಏನು?
    ಇಂದೋರ್ ನಗರದಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ ಕಟ್ಟಡಗಳನ್ನು ಇಂದು ಅಧಿಕಾರಿಗಳು ತೆರವುಗೊಳಿಸುತ್ತಿದ್ದರು. ಆದರೆ ಶಾಸಕರು ತಮ್ಮ ಬೆಂಬಲಿಗನ ಕಟ್ಟಡ ತೆರವುಗೊಳಿಸದಂತೆ ಸೂಚನೆ ನೀಡಿದ್ದರು. ಇದಕ್ಕೆ ಕ್ಯಾರೆ ಎನ್ನದ ಅಧಿಕಾರಿಗಳು ಕಟ್ಟಡ ತೆರವುಗೊಳಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರು ಅಧಿಕಾರಿಗೆ ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದಿದ್ದರು. ಅಷ್ಟೇ ಅಲ್ಲದೆ ಶಾಸಕರ ಬೆಂಬಲಿಗರು ಅಧಿಕಾರಿಯ ಅಂಗಿ ಹಿಡಿದು ಎಳೆದಾಡಿದ್ದರು. ಘಟನೆಯಿಂದ ತಕ್ಷಣವೇ ಜಾಗೃತಗೊಂಡ ಪೊಲೀಸರು ಅಧಿಕಾರಿಯನ್ನು ರಕ್ಷಿಸಿದ್ದರು.

  • ಭಾರತ ರಾಯಭಾರಿಯಿಂದ ಇಮ್ರಾನ್ ಖಾನ್‍ಗೆ ಗಿಫ್ಟ್!

    ಭಾರತ ರಾಯಭಾರಿಯಿಂದ ಇಮ್ರಾನ್ ಖಾನ್‍ಗೆ ಗಿಫ್ಟ್!

    ಇಸ್ಲಾಮಾಬಾದ್: ಭಾರತದ ಪಾಕ್ ರಾಯಭಾರಿ ಅಜಯ್ ಬಿಸಾರಿಯಾ ಅವರು ಪಾಕಿಸ್ತಾನದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಪಾಕಿಸ್ತಾನ್ ತೆಹ್ರೇಕ್ ಇ ಇಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ರನ್ನು ಭೇಟಿ ಮಾಡಿ ಟೀಂ ಇಂಡಿಯಾ ಆಟಗಾರರು ಸಹಿ ಮಾಡಿದ ಕ್ರಿಕೆಟ್ ಬ್ಯಾಟನ್ನು ಕಾಣಿಕೆಯಾಗಿ ನೀಡಿದ್ದಾರೆ.

    ಭಾರತದ ಹೈ ಕಮಿಷನರ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಶುಕ್ರವಾರ ಇಮ್ರಾನ್ ಖಾನ್ ರನ್ನು ಭೇಟಿ ಮಾಡಿ ಎರಡು ದೇಶಗಳ ನಡುವಿನ ಸಹಕಾರ ವೃದ್ಧಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಭೇಟಿಯ ವೇಳೆ ನೆನಪಿನ ಕಾಣಿಕೆಯಾಗಿ ಬ್ಯಾಟ್ ನೀಡಿದ್ದಾರೆ.

    ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೇಕ್ ಇ ಇಸಾಫ್ ಪಕ್ಷ ಜುಲೈ 25 ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆಗಸ್ಟ್ 18 ರಂದು ಪಾಕಿಸ್ತಾನದ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಿಟಿಐ ಪಕ್ಷದ ಮೂಲಗಳು ಮಾಹಿತಿ ನೀಡಿದೆ. ಅಲ್ಲದೇ ಟೀಂ ಇಂಡಿಯಾ ಮಾಜಿ ಆಟಗಾರರದ ಕಪಿಲ್ ದೇವ್, ನವಜೋಥ್ ಸಿಂಗ್ ಸಿಧು ಹಾಗೂ ಸುನೀಲ್ ಗವಾಸ್ಕರ್ ಅವರಿಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

    65 ವರ್ಷದ ಇಮ್ರಾನ್ ಖಾನ್ ಪಾಕ್ ಕ್ರಿಕೆಟ್ ತಂಡದ ನಾಯಕರಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು, ಬಳಿಕ ರಾಜಕೀಯಕ್ಕೆ ಪ್ರವೇಶ ನೀಡಿ ತಮ್ಮದೇ ಪಕ್ಷವನ್ನು ಸ್ಥಾಪಿಸಿದ್ದರು. ಹಲವು ಏಳುಬೀಳುಗಳ ಬಳಿಕ ಈ ಬಾರಿಯ ಚುನಾವಣೆಯಲ್ಲಿ ಪಕ್ಷವೂ ಬಹುದೊಡ್ಡ ಸಂಖ್ಯೆಯಲ್ಲಿ ಸ್ಥಾನ ಗಳಿಸಿತ್ತು. ಈ ವೇಳೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ ಇಮ್ರಾನ್ ಖಾನ್ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಹಕಾರ ವೃದ್ಧಿ ಹೆಚ್ಚಿನಗೆ ಒತ್ತು ನೀಡಲಾಗವುದು ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಕ್ರಿಕೆಟ್ ಬ್ಯಾಟಿನಿಂದ ಹೊಡೆದು ಅಣ್ಣನಿಂದಲೇ ತಮ್ಮನ ಕಗ್ಗೊಲೆ!

    ಕ್ರಿಕೆಟ್ ಬ್ಯಾಟಿನಿಂದ ಹೊಡೆದು ಅಣ್ಣನಿಂದಲೇ ತಮ್ಮನ ಕಗ್ಗೊಲೆ!

    ಮುಂಬೈ: ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ತಮ್ಮನನ್ನು ಕೊಲೆ ಮಾಡಿದ ಆರೋಪದ ಮೇಲೆ 35 ವರ್ಷದ ಅಣ್ಣನನ್ನು ಪೊಲೀಸರು ಬಂಧಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.

    ಆರೋಪಿ ಅಜಯ್ ಮುಕ್ವಾನಾ ತನ್ನ ತಮ್ಮ ಮುಕೇಶ್ ಮುಕ್ವಾನನ್ನು ಕೊಲೆ ಮಾಡಿದ್ದಾನೆ. ಸದ್ಯ ಆರೋಪಿ ಅಜಯ್ ನ್ನು ಪೊಲಿಸರು ಬಂಧಿಸಿದ್ದು, ನ್ಯಾಯಾಂಗಬಂಧನಕ್ಕೆ ಒಪ್ಪಿಸಿದ್ದಾರೆ.

    ಏನಿದು ಪ್ರಕರಣ?: ಆರೋಪಿ ಅಜಯ್ ಮಕ್ವಾನಾ ಮತ್ತು ತಮ್ಮ ಮುಖೇಶ್ ಮಕ್ವಾನಾ ಮಧ್ಯೆ ಮನೆಯಲ್ಲಿ ವಾಗ್ದಾನ ನಡೆದಿದ್ದೇ ಮುಖೇಶ್ ಕೊಲೆಗೆ ಕಾರಣ ಅಂತ ಭೋವಾಡಾ ಪೊಲೀಸ್ ಠಾಣೆಯ ಮೂಲಗಳು ತಿಳಿಸಿವೆ.

    ಅಜಯ್ ಮದ್ಯವ್ಯಸನಿಯಾಗಿದ್ದು, ಕೆಇಎಂ ಆಸ್ಪತ್ರೆಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ. ಮುಕೇಶ್ ಅನಕ್ಷರಸ್ಥನಾಗಿದ್ದನು. ಹೀಗಾಗಿ ಆತ ಮನೆಯಲ್ಲೇ ಇದ್ದು ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದನು. ಇದರಿಂದ ತಾಯಿಗೂ ಮುಕೇಶ್ ಮೇಲೆ ಜಾಸ್ತಿ ಪ್ರೀತಿ ಇತ್ತು. ಈ ಹಿನ್ನೆಲೆಯಲ್ಲಿ ಮೊದಲೇ ಮದ್ಯ ವ್ಯಸನಿಯಾಗಿದ್ದ ಅಜಯ್ ಕುಡಿದು ಬಂದು ತನ್ನ 75 ವರ್ಷದ ತಾಯಿಯ ಜೊತೆ ಪ್ರತೀದಿನ ಜಗಳವಾಡುತ್ತಿದ್ದನು. ಇದೇ ಕಾರಣಕ್ಕೆ ಅಣ್ಣ- ತಮ್ಮನ ಜೊತೆ ಕೂಡ ಜಗಳವಾಗಿದ್ದು, ಈ ವೇಳೆ ತಾಯಿ ಮುಕೇಶ್ ಜೊತೆ ಸೇರಿ ಅಣ್ಣ ಅಜಯ್‍ಗೆ ಬೈದಿದ್ದಾರೆ.

    ಇದ್ರಿಂದ ಕೋಪೋದ್ರಿಕ್ತನಾದ ಅಣ್ಣ ಅಜಯ್ ಅಲ್ಲೇ ಇದ್ದ ಕ್ರಿಕೆಟ್ ಬ್ಯಾಟಿನಿಂದ ತಮ್ಮ ಮುಕೇಶ್ ತಲೆಗೆ ಹೊಡೆದಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ಮುಕೇಶ್ ಅಲ್ಲೇ ಕುಸಿದುಬಿದ್ದಿದ್ದಾನೆ. ಇದರಿಂದ ಭಯಗೊಂಡ ಆರೋಪಿ ಅಜಯ್ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಗಂಭೀರ ಗಾಯಗೊಂಡ ಮುಕೇಶ್‍ನನ್ನು ಕೂಡಲೇ ಕೆಇಎಂ ಆಸ್ಪತ್ರೆಗೆ ದಾಖಲಿಸಿದ್ದರೂ, ಅದಾಗಲೇ ಆತ ಮೃತಪಟ್ಟಿದ್ದಾನೆ ಅಂತಾ ಪೊಲೀಸರು ತಿಳಿಸಿದ್ದಾರೆ.

    ಘಟನೆಯಿಂದಾಗಿ ಅಜಯ್ ವಿರುದ್ಧ ಪೊಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಜಯ್ ನನ್ನು ಭಾನುವಾರ ಪೊಲೀಸರು ಬಂಧಿಸಿದ್ದು, ಜುಲೈ 7 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.