Tag: ಕ್ರಿಮಿನಲ್ ಕೇಸ್

  • ಗಣೇಶೋತ್ಸವವನ್ನು ಸ್ವಾಗತಿಸಲ್ಲ, ಹುಬ್ಬಳ್ಳಿ ಆಯುಕ್ತರ ವಿರುದ್ಧ ಕ್ರಿಮಿನಲ್ ಕೇಸ್‌ : ಅಂಜುಮನ್ ಸಂಸ್ಥೆ

    ಗಣೇಶೋತ್ಸವವನ್ನು ಸ್ವಾಗತಿಸಲ್ಲ, ಹುಬ್ಬಳ್ಳಿ ಆಯುಕ್ತರ ವಿರುದ್ಧ ಕ್ರಿಮಿನಲ್ ಕೇಸ್‌ : ಅಂಜುಮನ್ ಸಂಸ್ಥೆ

    ಹುಬ್ಬಳ್ಳಿ: ನಾವು ಗಣೇಶೋತ್ಸವವನ್ನು ಸ್ವಾಗತಿಸಲ್ಲ. ಹುಬ್ಬಳ್ಳಿ ಆಯುಕ್ತರ ವಿರುದ್ಧ ಕ್ರಿಮಿನಲ್ ಕೇಸ್‌ ಹಾಕುತ್ತೇವೆ. ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುವುದಾಗಿ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಯುಸೂಫ್ ಸವಣೂರ ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 200 ವರ್ಷಗಳಿಂದ ಗಣೇಶೋತ್ಸವ ವಿಚಾರ ಬಂದೇ ಇರಲಿಲ್ಲ. ಈಗ ಮುನ್ನೆಲೆಗೆ ಬಂದಿದ್ದು ಯಾಕೆ ಎಂದು ಪ್ರಶ್ನಿಸಿದರು.

    ಗಣೇಶೋತ್ಸವ ವಿಚಾರವಾಗಿ ಮೇಯರ್ ಅವರು ಸಮಿತಿ ರಚನೆ ಮಾಡಿದ್ದರು. ಅದರಲ್ಲಿ ಮೂವರು ಬಿಜೆಪಿ ಹಾಗೂ ಇಬ್ಬರು ಕಾಂಗ್ರೆಸ್ ಪಾಲಿಕೆ ಸದಸ್ಯರಿದ್ದರು. ಉಳಿದ ಜೆಡಿಎಸ್, ಎಂಐಎಂ ಹಾಗೂ ಪಕ್ಷೇತರ‌ ಸದಸ್ಯರನ್ನ ಅವರು ಸಮಿತಿಯಲ್ಲಿ ಹಾಕಿರಲಿಲ್ಲ ಎಂದು ದೂರಿದರು. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ

    ಈ ಹಿಂದೆ ಬಸವರಾಜ್ ಶೆಟ್ಟರ್ ಎಂಬುವವರು ಈದ್ಗಾ ಮೈದಾನದಲ್ಲಿ ಚಾಂಗ ದೇ‌ವ ಜಾತ್ರೆ ಮಾಡಲು ಅನುಮತಿಗೆ ಕೇಳಿದ್ದು ಅರ್ಜಿ ಹಾಕಿದ್ದರು. ನಮಾಜ್ ಆದ ಮೇಲೆ ಜಾತ್ರೆಗೆ ಅವಕಾಶ ಕೇಳಿದ್ದನ್ನ ಜಿಲ್ಲಾ ಹಾಗೂ ಹೈಕೋರ್ಟ್ ವಜಾ ಮಾಡಿದೆ. ಇಲ್ಲಿ ವಾಣಿಜ್ಯ ಮಳಿಗೆ‌ ಇತ್ತು. ಕೋರ್ಟ್‌ ಆದೇಶದಂತೆ ಆ ಕಟ್ಟಡವನ್ನು ನೆಲಸಮ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಸ್ವಾತಂತ್ರ್ಯ ಬಂದ ಮೇಲೂ ಗಣೇಶೋತ್ಸವಕ್ಕೆ ಪರದಾಡುತ್ತಿದ್ದೇವೆ: ಮುತಾಲಿಕ್‌

    ಈಗ ವಿಶೇಷ ಸಭೆ ಮಾಡಿ ಗಣೇಶೋತ್ಸವ ಮಾಡಲು ಅವಕಾಶಕ್ಕಾಗಿ ಸಮಿತಿ ಮಾಡಿದ್ದಾರೆ. ಆ ಈದ್ಗಾ ಒಪ್ಪಂದದಲ್ಲಿ ಬೇರೆ ಉದ್ದೇಶಕ್ಕಾಗಿ ಮೈದಾನವನ್ನು ಬಳಕೆ ಮಾಡುವಂತಿಲ್ಲ. ಹೈಕೋರ್ಟ್‌ನಲ್ಲಿ ಈ ಬಗ್ಗೆ ವಾದ ವಿವಾದ ನಡೆದಾಗ ಹುಬ್ಬಳ್ಳಿ ಪಾಲಿಕೆ ಆಯುಕ್ತರು ಆಗಲೇ‌ ಗಣೇಶೋತ್ಸವಕ್ಕೆ ಜಾಗ ಕೊಡಲಾಗಿದೆ ಎಂದು ಆದೇಶ ಪ್ರತಿ ನೀಡಿದ್ದಾರೆ ಎಂದು ಹೇಳಿದರು.

    1990 ಪ್ರಕಾರ ಆದೇಶದ ಪ್ರಕಾರ ಪಾಲಿಕೆಯಿಂದ ನ್ಯಾಯಾಂಗ ನಿಂದನೆ ಆಗಿದೆ. ಹೀಗಾಗಿ ಪಾಲಿಕೆ ಆಯುಕ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುತ್ತೇವೆ. ಈ‌ ಹಬ್ಬ ಮಾಡುವ ಮೊದಲೇ ಪ್ರಹ್ಲಾದ್‌ ಜೋಶಿ, ಜಗದೀಶ್‌ ಶೆಟ್ಟರ್, ಬಸವರಾಜ್ ಹೊರಟ್ಟಿ ಹಾಗೂ ಪ್ರಸಾದ ಅಬ್ಬಯ್ಯಗೆ ಕರೆದು ಸಭೆ ಮಾಡಬಹುದಿತ್ತು. ಅಂಜುಮನ್ ಸಂಸ್ಥೆಯವರನ್ನು ಕರೆದು ಮೂರು ಸಾವಿರಮಠದಲ್ಲಿ‌ ಸಭೆ ಮಾಡಬಹುದಿತ್ತು ಎಂದರು.

    ನಾವು ಗಣೇಶೋತ್ಸವವನ್ನು ಸ್ವಾಗತ ಮಾಡುವುದಿಲ್ಲ. ಹೈಕೋರ್ಟ್ ಆದೇಶವನ್ನು ಸ್ವಾಗತ ಮಾಡುತ್ತೇವೆ. ಕೋರ್ಟ್ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು. ನಾವು ಮಾಡುತ್ತೇವೆ ಎಂದು ಅವರು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಕಂಬಳದಲ್ಲಿ ಮೋಸ ಮಾಡಲು ಯಾರಿಗೂ ಸಾಧ್ಯವಿಲ್ಲ: ಶ್ರೀನಿವಾಸ ಗೌಡ

    ಕಂಬಳದಲ್ಲಿ ಮೋಸ ಮಾಡಲು ಯಾರಿಗೂ ಸಾಧ್ಯವಿಲ್ಲ: ಶ್ರೀನಿವಾಸ ಗೌಡ

    ಮಂಗಳೂರು: ನನ್ನ ಮೇಲೆ ಮಾಡಿರುವ ಈ ಆರೋಪಗಳೆಲ್ಲವೂ ಸುಳ್ಳು. ನಕಲಿ ದಾಖಲೆ ಸೃಷ್ಟಿಸಲು ಸಾಧ್ಯವಿಲ್ಲ. ಎಲ್ಲಾ ಕಂಬಳದಲ್ಲೂ ಲೈವ್ ಇರುತ್ತದೆ. ಪಾರದರ್ಶಕತೆ ಇರುತ್ತೆ ಟೈಮಿಂಗ್‍ನ್ನು ತೋರಿಸುವ ಪರದೆಯೂ ಸಹ ಇರುತ್ತದೆ. ಹೀಗಾಗಿ ಮೋಸ ಮಾಡಲು ಯಾರಿಗೂ ಸಾಧ್ಯವಿಲ್ಲ ಎಂದು ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ ಗೌಡ ತಿಳಿಸಿದ್ದಾರೆ.

    ತನ್ನ ವಿರುದ್ಧ ಕ್ರಿಮಿನಲ್ ದೂರು ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ದೂರು ನೀಡಿದ ಲೋಕೇಶ್ ಶೆಟ್ಟಿ ಫಿಲ್ಮ್ ಮಾಡುತ್ತೇನೆ ಅಂದಾಗ ನಾನು ಒಪ್ಪಿರಲಿಲ್ಲ. ಇದನ್ನು ಸಹಿಸಲು ಆಗದೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಲೋಕೇಶ್ ಶೆಟ್ಟಿ ವಿರುದ್ಧ ದೂರು ನೀಡುತ್ತೇನೆ. ಮಾನನಷ್ಟ ಮೊಕದ್ದಮೆಯನ್ನು ದಾಖಲು ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕರಾವಳಿಯ ಉಸೇನ್ ಬೋಲ್ಟ್ ಖ್ಯಾತಿಯ ಕಂಬಳ ಓಟಗಾರ ಶ್ರೀನಿವಾಸ್ ಗೌಡ ವಿರುದ್ಧ ಪ್ರಕರಣ ದಾಖಲು

    ದೂರು ನೀಡಿದ ಬಳಿಕ ನನ್ನ ಹೇಳಿಕೆಯನ್ನು ಪೊಲೀಸ್ ಠಾಣೆಗೆ ನೀಡಿದ್ದೇನೆ. ಕೋಣೆಗಳನ್ನು ಓಡಿಸುವುದು ಮಾತ್ರ ನಮ್ಮ ಕೆಲಸ. ಕಂಬಳ ಓಟದ ಸಮಯ, ರಿಸಲ್ಟ್ ಹೇಳೋದು ತೀರ್ಪುಗಾರರು. ಈ ಸುಳ್ಳು ಆರೋಪದಿಂದಾಗಿ ನೆಮ್ಮದಿಯಿಂದ ಇರುವುದಕ್ಕೆ ಆಗ್ತಿಲ್ಲ ಎಂದರು. ಇದನ್ನೂ ಓದಿ: ನಿಮ್ಮದೆಲ್ಲಾ ಬಯಲಿಗೆ ಎಳೆಯುತ್ತೇನೆ ಜಸ್ಟ್ ವೈಟ್: ಎಂ.ಸಿ.ಸುಧಾಕರ್‌ಗೆ ಸಚಿವ ಸುಧಾಕರ್ ವಾರ್ನಿಂಗ್

    ಶ್ರೀನಿವಾಸಗೌಡ ವಿರುದ್ಧದ ಆರೋಪ ಏನು..?
    ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ. ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ ಲಕ್ಷಾಂತರ ಹಣ ಸಂಗ್ರಹ ಮಾಡಿದ್ದಾರೆ ಎಂದು ಆರೋಪಿಸಿ ಲೋಕೇಶ್ ಶೆಟ್ಟಿ ಎಂಬವರು ಕಂಬಳ ಓಟಗಾರ ಶ್ರೀನಿವಾಸ ಗೌಡ, ಗುಣಪಾಲ ಕಡಂಬ ಮತ್ತು ರತ್ನಾಕರ ಎಂಬವರ ವಿರುದ್ದ ಕ್ರಿಮಿನಲ್ ದೂರು ನೀಡಿದ್ದಾರೆ. ಇದನ್ನೂ ಓದಿ: 8.96 ಸೆಕೆಂಡ್‍ನಲ್ಲಿ 100 ಮೀ. ಕ್ರಮಿಸಿ ಕಂಬಳದಲ್ಲಿ ತಮ್ಮದೇ ದಾಖಲೆ ಸರಗಟ್ಟಿದ ಶ್ರೀನಿವಾಸ್ ಗೌಡ

    2020ರ ಫೆ.1ರಂದು ಐಕಳ ಕಂಬಳದಲ್ಲಿ 100 ಮೀ. ದೂರವನ್ನು 9.55 ಸೆಕೆಂಡ್ ನಲ್ಲಿ ಕ್ರಮಿಸಿದ್ದ ಶ್ರೀನಿವಾಸ ಗೌಡ ಅವರು 2009ರಲ್ಲಿ ಉಸೇನ್ ಬೋಲ್ಟ್ 100 ಮೀ. ಅನ್ನು 9.58 ಸೆಕೆಂಡ್ ನಲ್ಲಿ ಕ್ರಮಿಸಿದ ದಾಖಲೆ ಉಡೀಸ್ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಗಣಿಧಣಿ ಜನಾರ್ದನ ರೆಡ್ಡಿ ಮೇಲೆ ಕ್ರಿಮಿನಲ್ ಕೇಸ್..!

    ಗಣಿಧಣಿ ಜನಾರ್ದನ ರೆಡ್ಡಿ ಮೇಲೆ ಕ್ರಿಮಿನಲ್ ಕೇಸ್..!

    ಬೆಂಗಳೂರು: ಮಾಜಿ ಸಚಿವ, ಗಣಧಣಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಅದಿರು ಸಾಗಾಣೆ ಪ್ರಕರಣದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

    2009-10 ರ ಆದಾಯ ತೆರಿಗೆ ವಂಚಿಸಿ ಸಾವಿರಾರು ಟನ್‍ಗಟ್ಟಲೇ ಅದಿರು ಸಾಗಿಸಿದ ಆರೋಪದ ಮೇಲೆ ಜನಾರ್ದನ ರೆಡ್ಡಿ ನಿವಾಸ, ಕಚೇರಿ ಸೇರಿ ಐಟಿ ಇಲಾಖೆ ಹಲವೆಡೆ ದಾಳಿ ನಡೆಸಿತ್ತು. ಈ ಬಗ್ಗೆ ಕೆಲವೊಂದು ದಾಖಲಾತಿ, ಡಿಜಿಟಲ್ ಸಾಕ್ಷ್ಯ ಲಭ್ಯವಾಗಿತ್ತು. ಈ ಬಗ್ಗೆ, ಖಾಸಗಿ ದೂರು ದಾಖಲಾಗಿತ್ತು.

    ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯಕ್ಕೆ ಎಸ್‍ಐಟಿ ತಂಡ, ತನಿಖೆ ವೇಳೆ ಬೇರೊಂದು ಕಂಪನಿಯಕ್ರಮವಾಗಿದೆ ಅಂತ ತಿಳಿಸಿತ್ತು. ಹೀಗಾಗಿ ಜನಾರ್ದನ ರೆಡ್ಡಿ ಸೇರಿದಂತೆ ಪ್ರಕರಣದಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚಿಸಿದೆ.  ಇದನ್ನೂ ಓದಿ: ಬೆಂಗ್ಳೂರಲ್ಲಿ ಗುಂಡಿ ಮುಚ್ಚದ ಬಿಬಿಎಂಪಿಗೆ ತರಾಟೆ – ಬೆಸ್ಕಾಂ, ಜಲ ಮಂಡಳಿಗೂ ಹೈಕೋರ್ಟ್ ಚಾರ್ಜ್

  • ಮದುವೆಗೆ ಹೆಚ್ಚು ಜನ ಸೇರಿಸಿದ್ರೆ ಕ್ರಿಮಿನಲ್ ಕೇಸ್ – ಪೊಲೀಸರಿಂದ ಖಡಕ್ ರೂಲ್ಸ್

    ಮದುವೆಗೆ ಹೆಚ್ಚು ಜನ ಸೇರಿಸಿದ್ರೆ ಕ್ರಿಮಿನಲ್ ಕೇಸ್ – ಪೊಲೀಸರಿಂದ ಖಡಕ್ ರೂಲ್ಸ್

    ಮೈಸೂರು: ಕೊರೊನಾ ಲಾಕ್‍ಡೌನ್ ಶುರುವಾಗಿದ್ದೇ ಬಂತು. ಚಿತ್ರಮಂದಿರ, ಕಲ್ಯಾಣ ಮಂಟಪ, ಸಾರ್ವಜನಿಕ ಸಭೆ- ಸಮಾರಂಭಗಳಿಗೆಲ್ಲ ಆತಂಕ ಶುರುವಾಗಿದೆ. ಅದರಲ್ಲೂ ಮೈಸೂರಿನಲ್ಲಿ ಕಲ್ಯಾಣ ಮಂಟಪಗಳ ಹೊಸ ನಿಯಮ ಜಾರಿಯಾಗಿದೆ. ಹೆಚ್ಚು ಜನ ಸೇರಿದರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. ಇತ್ತ ಕಲ್ಯಾಣ ಮಂಟಪದ ಮಾಲೀಕರು ಸಹ ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

    ಕೊರೊನಾ ಬಂದ ಮೇಲೆ ಜೀವನ ಶೈಲಿಯೇ ಬದಲಾಗುತ್ತಿದೆ. ಮೊದಲೆಲ್ಲ ಮದುವೆ, ಉಪನಯನ, ಹುಟ್ಟುಹಬ್ಬ, ಬೀಗರೂಟ ಹೀಗೆ ಶುಭ ಸಮಾರಂಭಗಳಿಗೆ ಬಂಧು- ಬಳಗದವರೆಲ್ಲ ಸೇರಿ ಸಂಭ್ರಮಿಸುತ್ತಿದ್ದರು. ಕೊರೊನಾ ಕಾಲಿಟ್ಟ ಬಳಿಕ ಶುಭ ಸಮಾರಂಭಗಳ ಚಿತ್ರಣವೇ ಬದಲಾಗಿ ಹೋಗಿದೆ. ಈ ನಡುವೆ ಮೈಸೂರು ಪೊಲೀಸರು ಕಲ್ಯಾಣ ಮಂಟಪಗಳಿಗೆ ಹೊಸ ಆದೇಶ ಜಾರಿ ಮಾಡಿದ್ದಾರೆ. ಮದುವೆಗಳಿಗೆ ಕೇವಲ 200 ಜನ ಮಾತ್ರ ಇರಬೇಕು. ಹುಟ್ಟುಹಬ್ಬ, ನಾಮಕರಣದಂತಹ ಸಮಾರಂಭಗಳಿಗೂ ನಿಗದಿಪಡಿಸಿದಷ್ಟು ಜನ ಮಾತ್ರ ಸೇರಬೇಕು. ಹೆಚ್ಚು ಜನರಿದ್ದು ಕೊರೊನಾ ಮಾರ್ಗಸೂಚಿ ಉಲ್ಲಂಘನೆಯಾದ್ರೆ, ಕ್ರಿಮಿನಲ್ ಕೇಸ್ ಹಾಕ್ತೀವಿ ಅಂತ ಎಚ್ಚರಿಕೆ ನೀಡಿದ್ದಾರೆ.

    ಈ ನಿಯಮ ಕಲ್ಯಾಣ ಮಂಟಪಗಳ ಮಾಲೀಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಡೀ ಮದುವೆ ಸೀಸನ್ ಕೊರೊನಾ ಲಾಕ್‍ಡೌನ್‍ನಲ್ಲೇ ಕಳೆದು ಹೋಯ್ತು. ಈಗಷ್ಟೆ ಒಂದೋ ಎರಡೋ ದಿನ ಬುಕ್ಕಿಂಗ್ ಸಿಗುತ್ತಿದೆ. ಅದಕ್ಕೂ ನಿಯಮ, ನಿಬಂಧನೆ ವಿಧಿಸಿದ್ರೆ ಜನ ಕಲ್ಯಾಣ ಮಂಟಪಗಳನ್ನೇ ಮರೆತು ಬಿಡ್ತಾರೆ ಎನ್ನುವ ಆತಂಕ ಶುರುವಾಗಿದೆ. ಕೆಲ ಕಲ್ಯಾಣ ಮಂಟಪಗಳ ಮಾಲೀಕರು ಪೊಲೀಸರ ಆದೇಶವನ್ನು ಸ್ವಾಗತಿಸಿದ್ದಾರೆ. ಆದರೆ ಬಹುತೇಕರು ಕ್ರಿಮಿನಲ್ ಪ್ರಕರಣ ದಾಖಲಿಸುವ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

    ಮೈಸೂರಿನಲ್ಲಿ ಬಹುತೇಕ ಕಲ್ಯಾಣ ಮಂಟಪಗಳು ಖಾಲಿ ಹೊಡೆಯುತ್ತಿವೆ. ಶುಭ ಸಮಾರಂಭ ನಡೆಯಲೀ ಬಿಡಲಿ ಲೈಸೆನ್ಸ್, ಎನ್‍ಒಸಿ, ಕರೆಂಟು ಬಿಲ್, ವಾಟರ್ ಬಿಲ್, ಸೆಕ್ಯೂರಿಟಿ ಹೀಗೆ ಹತ್ತಾರು ಮೇಂಟೆನೆನ್ಸ್ ಖರ್ಚುಗಳು ಇದ್ದೇ ಇರುತ್ತವೆ. ಇದೆಲ್ಲವನ್ನೂ ನಿಭಾಯಿಸಿಕೊಂಡು, ಕೊರೊನಾ ನಿಯಮಗಳನ್ನೂ ಪಾಲಿಸೋದು ಅಷ್ಟು ಸುಲಭವಲ್ಲ. ಆದರೆ ಕೊರೊನಾ ಮಾಹಾಮಾರಿ ವಿರುದ್ಧ ಹೋರಾಡುವುದು ಸಾಮಾಜಿಕ ಜವಾಬ್ದಾರಿ ಅನ್ನೋದನ್ನು ಕಲ್ಯಾಣ ಮಂಟಪದ ಮಾಲೀಕರು ಒಪ್ಪಿಕೊಳ್ಳುತ್ತಾರೆ.

    ಒಟ್ಟಾರೆ ಮೈಸೂರಿನಲ್ಲಿ ಕೊರೊನಾ ಕಂಟ್ರೋಲ್‍ಗೆ ಬರುತ್ತಿದ್ದು, ಅದನ್ನ ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕ್ರಿಮಿನಲ್ ಕೇಸ್ ಅಸ್ತ್ರ ಎಷ್ಟರ ಮಟ್ಟಿಗೆ ವರ್ಕ್ ಆಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

  • ಕ್ವಾರಂಟೈನ್ ತಪ್ಪಿಸಿಕೊಳ್ಳಲು ಪರಾರಿಯಾಗಿರೋ ಪ್ರಯಾಣಿಕರಿಗೆ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ

    ಕ್ವಾರಂಟೈನ್ ತಪ್ಪಿಸಿಕೊಳ್ಳಲು ಪರಾರಿಯಾಗಿರೋ ಪ್ರಯಾಣಿಕರಿಗೆ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ

    ಬೆಂಗಳೂರು: ಕ್ವಾರಂಟೈನ್ ಆಗುವುದನ್ನು ತಪ್ಪಿಸಿಕೊಂಡು ಹೋದ ಪ್ರಯಾಣಿಕರನ್ನು ಹುಡುಕಿ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮುಂಬೈನಿಂದ ಬಂವದರಿಗೆ ಖಡಕ್ ಎಚ್ಚರಿಕೆ ನೀಡಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಭಾಸ್ಕರ್ ರಾವ್, ಬೆಳಗ್ಗೆ ಮುಂಬೈಯಿಂದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಗಳೂರಿಗೆ 667 ಪ್ರಯಾಣಿಕರು ಬಂದಿದ್ದಾರೆ. ಮುಂಬೈಯಿಂದ ಬಂದವರನ್ನ ಕ್ವಾರಂಟೈನ್ ಮಾಡಲು ರಾಜ್ಯ ಸರ್ಕಾರ ಸೂಚಿಸಿದೆ. ಆದರೆ ಕ್ವಾರಂಟೈನ್ ತಪ್ಪಿಸಿಕೊಳ್ಳಲು ಬಹಳ ಜನರು ಓಡಿಹೋಗಿದ್ದಾರೆ. ಆದರೆ ಅವರ ಬೆನ್ನತ್ತಿ ಹೋಗುವುದು ಸರಿಯಲ್ಲ ಎಂದು ನಾವು ಹೋಗಿಲ್ಲ ಎಂದು ತಿಳಿಸಿದರು.

    ರೈಲ್ವೆ ಇಲಾಖೆಯಿಂದ ಅವರ ವಿಳಾಸ ತೆಗೆದುಕೊಂಡು ಅವರನ್ನು ಪತ್ತೆ ಮಾಡುತ್ತೇವೆ. ನಂತರ ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸುತ್ತೇವೆ. ಪ್ರಯಾಣಿಕರು ಅವರಾಗಿ ಬಂದು ಬಿಬಿಎಂಪಿ, ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕ ಮಾಡಬೇಕು. ಒಂದು ವೇಳೆ ಅವರು ಆರೋಗ್ಯ ಅಧಿಕಾರಿಗಳನ್ನು ಸಂಪರ್ಕ ಮಾಡದೆ ಹೋದರೆ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಸೂಚಿಸಿದರು.

    ಪಾಲಿಕೆ ಆರೋಗ್ಯ ಅಧಿಕಾರಿಗಳು ಹಾಗೂ ಪೊಲೀಸರು ಮುಂಬೈಯಿಂದ ಬಂದ ಪ್ರಯಾಣಿಕರಿಗೆ ಕ್ವಾರಂಟೈನ್ ಮಾಡಲು ಮುಂದಾಗಿದ್ದಾರೆ. ಆಗ ಪ್ರಯಾಣಿಕರು ಕ್ವಾರಂಟೈನ್ ಆಗಲು ವಿರೋಧಿಸಿ ಗಲಾಟೆ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ತಪ್ಪಿಸಿಕೊಂಡು ಹೋಗಿರುವವರು ಪ್ಯಾಸೆಂಜರ್ಸ್ ತಕ್ಷಣ ಪಾಲಿಕೆ ಆರೋಗ್ಯ ಅಧಿಕಾರಿಗಳನ್ನ ಸಂಪರ್ಕ ಮಾಡಿದರೆ ಕ್ರಿಮಿನಲ್ ಕೇಸ್‍ನಿಂದ ಮುಕ್ತಿ ಸಿಗುತ್ತದೆ. ಇಲ್ಲದೇ ಹೋದರೆ ರೈಲ್ವೇ ಇಲಾಖೆಯಿಂದ ಮಾಹಿತಿ ಪಡೆದು ತಪ್ಪಿಸಿಕೊಂಡು ಹೋದ ಪ್ರಯಾಣಿಕರನ್ನು ಹುಡುಕಿ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತೆ ಎಂದು ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ನೀಡಿದರು.

  • ಖಾಸಗಿ ಆಸ್ಪತ್ರೆ, ಕ್ಲಿನಿಕ್ ಮುಚ್ಚಿದ್ರೆ ಲೈಸೆನ್ಸ್ ರದ್ದು, ಜೊತೆಗೆ ಕ್ರಿಮಿನಲ್ ಕೇಸ್: ಶ್ರೀರಾಮುಲು

    ಖಾಸಗಿ ಆಸ್ಪತ್ರೆ, ಕ್ಲಿನಿಕ್ ಮುಚ್ಚಿದ್ರೆ ಲೈಸೆನ್ಸ್ ರದ್ದು, ಜೊತೆಗೆ ಕ್ರಿಮಿನಲ್ ಕೇಸ್: ಶ್ರೀರಾಮುಲು

    ರಾಯಚೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಆದರೆ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‍ಗಳನ್ನು ಮುಚ್ಚಬಾರದು. ಒಂದು ವೇಳೆ ಖಾಸಗಿ ಆಸ್ಪತ್ರೆಗಳು ಮುಚ್ಚಿದರೆ ಆ ವೈದ್ಯರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

    ನಗರದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾದ ಕೊರೊನಾ ನಿಯಂತ್ರಣ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಎಚ್ಚರಿಕೆ ವಹಿಸಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಂದ್ ಆಗಿರುವ ಆಸ್ಪತ್ರೆಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಆಸ್ಪತ್ರೆಯ ಲೈಸೆನ್ಸ್ ಕೂಡ ರದ್ದು ಮಾಡಬೇಕು ಎಂದು ಜಿಲ್ಲಾಡಳಿತಕ್ಕೆ ಶ್ರೀರಾಮುಲು ಸೂಚಿಸಿದ್ದಾರೆ.

    ಈ ಕುರಿತು ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಕೂಡಲೇ ಸೂಚನೆ ನೀಡಲು ಸಚಿವ ಶ್ರೀರಾಮುಲು ಆದೇಶ ಮಾಡಿದ್ದಾರೆ. ಈ ಮೊದಲೇ ಮಾಹಿತಿ ನೀಡಿ ಎಚ್ಚರಿಸಿದ್ದರೂ ಆಸ್ಪತ್ರೆ ಅಥವಾ ಕ್ಲಿನಿಕ್ ಸ್ಥಗಿತಗೊಳಿಸಿದ್ದರೆ ಯಾವ ಮುಲಾಜಿಲ್ಲದೆ ಆಸ್ಪತ್ರೆ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ಜೊತೆಗೆ ಅವರ ಮೇಲೆ ಕ್ರಿಮಿನಲ್ ಕೇಸ್ ಸಹ ಹಾಕಲಾಗುತ್ತದೆ ಎಂದು ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.