Tag: ಕ್ರೀಡಾಂಗಣ

  • ಕ್ರೀಡಾಂಗಣದಲ್ಲಿ ಸಾರ್ವಜನಿಕವಾಗಿ ಇಬ್ಬರ ತಲೆಗೆ 15 ಬಾರಿ ಗುಂಡಿಟ್ಟು ಮರಣದಂಡನೆ

    ಕ್ರೀಡಾಂಗಣದಲ್ಲಿ ಸಾರ್ವಜನಿಕವಾಗಿ ಇಬ್ಬರ ತಲೆಗೆ 15 ಬಾರಿ ಗುಂಡಿಟ್ಟು ಮರಣದಂಡನೆ

    ಕಾಬೂಲ್:‌ ಹತ್ಯೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಇಬ್ಬರನ್ನು ಸಾರ್ಜಜನಿಕವಾಗಿ ಕ್ರೀಡಾಂಗಣದಲ್ಲಿ ತಲೆಗೆ 15 ಬಾರಿ ಗುಂಡಿಟ್ಟು ಮರಣದಂಡನೆ ಶಿಕ್ಷೆ ನೀಡಿದ ಘಟನೆ ಅಫ್ಘಾನಿಸ್ತಾನದಲ್ಲಿ (Afghanistan) ನಡೆದಿದೆ.

    ಸಯ್ಯದ್ ಜಮಾಲ್ ಮತ್ತು ಗುಲ್ ಖಾನ್ ಶಿಕ್ಷೆಗೆ ಗುರಿಯಾದವರು. ಸೆಪ್ಟೆಂಬರ್ 2017 ಮತ್ತು ಜನವರಿ 202ರಲ್ಲಿ ನಡೆದ 2 ಪ್ರತ್ಯೇಕ ಕೊಲೆ ಪ್ರಕರಣದಲ್ಲಿ ಇವರಿಬ್ಬರನ್ನು ದೋಷಿ ಎಂದು ತಾಲಿಬಾನ್ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ತಾಲಿಬಾನ್‌ ನಾಯಕ ಹೈಬತುಲ್ಲಾ ಅಖುಂದ್‌ಜಾದಾ ಇಬ್ಬರಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಆದೇಶ ನೀಡಿದ್ದರು.

    ಇಬ್ಬರು ಅಪರಾಧಿಗಳನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ ಘಜ್ನಿ ನಗರದ ಅಲಿ ಲಲಾ ಪ್ರದೇಶದಲ್ಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಕರೆ ತರಲಾಯಿತು. ಈ ವೇಳೆ ಕ್ರೀಡಾಂಗಣದ ಸುತ್ತ ಸಾವಿರಾರು ಮಂದಿ ಜಮಾಯಿಸಿದ್ದರು. ಒಬ್ಬನ ತಲೆಗೆ 8, ಮತ್ತೊಬ್ಬನ ತಲೆಗೆ 7 ಗುಂಡುಗಳನ್ನು ಹಾರಿಸಿ ಹತ್ಯೆ ಮಾಡಲಾಯಿತು. ಇದನ್ನೂ ಓದಿ: ಹಡಗು ಡಿಕ್ಕಿಯಾಗಿ ಕುಸಿದ ಸೇತುವೆ- ಬಸ್‌ ನದಿಗೆ ಉರುಳಿ ಇಬ್ಬರ ದುರ್ಮರಣ

    ಕುಟುಂಬಸ್ಥರ ಮನವಿಗೆ ಡೋಂಟ್‌ ಕೇರ್:‌ ಮರಣದಂಡನೆ ಶಿಕ್ಷೆ ನೀಡುವುದಕ್ಕೂ ಮುನ್ನ ಅಪರಾಧಿಗಳ ಕುಟುಂಬಸ್ಥರು ಬಂದು ವಿನಾಯ್ತಿ ನೀಡುವಂತೆ ಮನವಿ ಮಾಡಿಕೊಂಡರು. ಆದರೆ ಇದಕ್ಕೆ ಕ್ಯಾರೇ ಎನ್ನದೇ ಗುಂಡು ಹಾರಿಸಿ ಕೊಲ್ಲಲಾಯಿತು. ಒಟ್ಟಿನಲ್ಲಿ ಈ ಮೂಲಕ ದಶಕಗಳ ಹಿಂದೆ ಅಫ್ಘಾನಿಸ್ತಾನದಲ್ಲಿದ್ದ ತಾಲಿಬಾನ್‌ನ (Taliban) ಷರಿಯಾ ವ್ಯವಸ್ಥೆ ಮತ್ತೊಮ್ಮೆ ಮುನ್ನೆಲೆಗೆ ಬಂದಂತಾಗಿದೆ.

  • ಶಮಿ ತವರಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ

    ಶಮಿ ತವರಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ

    ಲಕ್ನೋ: ವಿಶ್ವಕಪ್‌ ಟೂರ್ನಿಯಲ್ಲಿ (World Cup Cricket) ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ವೇಗಿ ಮೊಹಮ್ಮದ್‌ ಶಮಿ (Mohammed Shami) ಅವರ ಗ್ರಾಮದಲ್ಲೇ ಸಣ್ಣ ಕ್ರೀಡಾಂಗಣ (Minis Stadium) ನಿರ್ಮಾಣಕ್ಕೆ ಉತ್ತರ ಪ್ರದೇಶ ಸರ್ಕಾರ (Uttar Pradesh) ಮುಂದಾಗಿದೆ.

    ಉತ್ತರ ಪ್ರದೇಶದ ಅಮ್ರೋಹಾ (Amroha) ಜಿಲ್ಲೆಯ ಸಹಾಸ್ಪುರ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಈಗಾಗಲೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ಕ್ರೀಡಾಂಗಣದ ಕಾಮಗಾರಿ ಆರಂಭಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ.

    ಮೊಹಮ್ಮದ್ ಶಮಿ ಅವರ ಹಳ್ಳಿಯಾದ ಸಹಸ್‌ಪುರ ಅಲಿನಗರದಲ್ಲಿ ಮಿನಿ ಕ್ರೀಡಾಂಗಣವನ್ನು ನಿರ್ಮಿಸಲು ನಾವು ಪ್ರಸ್ತಾಪಿಸುತ್ತಿದ್ದೇವೆ. ಇದರಲ್ಲಿ ಮಿನಿ ಕ್ರೀಡಾಂಗಣದ ಜೊತೆಗೆ ತೆರೆದ ಜಿಮ್ ಸೇರಿದೆ ಎಂದು ಜಿಲ್ಲಾಧಿಕಾರಿ ರಾಜೇಶ್ ತ್ಯಾಗಿ ಹೇಳಿದ್ದಾರೆ.ಇದನ್ನೂ ಓದಿ: ಮತ್ತೆ ಮಾತಿನಲ್ಲೇ ತಿವಿದ ವಿಚ್ಛೇದಿತ ಪತ್ನಿ – ತೆರೆಯ ಹಿಂದೆ ಶಮಿಯ ಬದುಕು ಘೋರ!

    ಸರ್ಕಾರದಿಂದ ಘೋಷಣೆ ಹೊರ ಬಿದ್ದ ಬೆನ್ನಲ್ಲೇ ಉತ್ತರ ಪ್ರದೇಶದ ರಾಷ್ಟ್ರೀಯ ಲೋಕದಳ ಪಕ್ಷದ ರಾಜ್ಯಸಭಾ ಸದಸ್ಯ ಜಯಂತ್‌ ಸಿಂಗ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಶಮಿ ತವರಿನಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಸಹಾಯ ಮಾಡಲು ನನ್ನ ಸಂಸದರ ನಿಧಿಯನ್ನು ನೀಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.

    ಈ ಬಾರಿಯ ವಿಶ್ವಕಪ್‌ನಲ್ಲಿ ಶಮಿ ಆಡಿದ್ದು ಕೇವಲ 6 ಪಂದ್ಯವಾಡಿ 23 ವಿಕೆಟ್‌ ಪಡೆಯುವ ಮೂಲಕ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. 3 ಬಾರಿ ಶಮಿ 5 ವಿಕೆಟ್‌ಗಳ ಗೊಂಚಲು ಪಡೆದಿದ್ದಾರೆ. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ 7 ವಿಕೆಟ್‌ ಪಡೆದು ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದರು.

     

  • ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಹಾಜರಾದ 32 ಸಾವಿರ ಜನ – ಪೆನ್ನು, ಪೇಪರ್ ಹಿಡಿದು ಸ್ಟೇಡಿಯಂನಲ್ಲೆ ಕುಳಿತ್ರು

    ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಹಾಜರಾದ 32 ಸಾವಿರ ಜನ – ಪೆನ್ನು, ಪೇಪರ್ ಹಿಡಿದು ಸ್ಟೇಡಿಯಂನಲ್ಲೆ ಕುಳಿತ್ರು

    ಇಸ್ಲಾಮಾಬಾದ್: ಪಾಕಿಸ್ತಾನ (Pakistan) ಭೀಕರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ನಡುವೆ ನಿರುದ್ಯೋಗ ಸಮಸ್ಯೆಯೂ ಹೆಚ್ಚಾಗಿದೆ. ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹೊಸದೊಂದು ಫೋಟೋಗಳು ಹರಿದಾಡಿವೆ. ಬರೋಬ್ಬರು 32 ಸಾವಿರ ದ್ಯೋಗ ಆಕಾಂಕ್ಷಿಗಳು ಪೊಲೀಸ್ ಕಾನ್‌ಸ್ಟೇಬಲ್ (Police Constable) ಹುದ್ದೆಯ ನೇಮಕಾತಿಗಾಗಿ ಲಿಖಿತ ಪರೀಕ್ಷೆ (Recruitment Test) ಬರೆಯಲು ಕ್ರೀಡಾಂಗಣದಲ್ಲಿ (Stadium) ಪೆನ್ನು, ಪೇಪರ್ ಹಿಡಿದು ಕುಳಿತಿರುವುದು ಕಂಡುಬಂದಿದೆ.

    ಶನಿವಾರ ಇಸ್ಲಾಮಾಬಾದ್‌ನ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ ನಡೆದಿದ್ದು, ಸುಮಾರು 32 ಸಾವಿರ ಅಭ್ಯರ್ಥಿಗಳು ಸ್ಟೇಡಿಯಂನ ನೆಲದ ಮೇಲೆ ಕುಳಿತು ಪರೀಕ್ಷೆ ಬರೆದಿದ್ದಾರೆ.

    ವರದಿಗಳ ಪ್ರಕಾರ ಪಾಕಿಸ್ತಾನದಾದ್ಯಂತ 1,667 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆ ಖಾಲಿಯಿದೆ. ಇದಕ್ಕಾಗಿ ಲಿಖಿತ ಪರೀಕ್ಷೆ ನೀಡಲು ಜಾಹೀರಾತು ನೀಡಲಾಗಿತ್ತು. ಈ ಹಿನ್ನೆಲೆ 30 ಸಾವಿರಕ್ಕೂ ಹೆಚ್ಚಿನ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕಳೆದ 5 ವರ್ಷಗಳಿಂದ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳು ಖಾಲಿ ಉಳಿದಿವೆ ಎನ್ನಲಾಗಿದೆ. ಇದನ್ನೂ ಓದಿ: ಚೀನಾದಲ್ಲಿ ಭಾರತೀಯ ವಿದ್ಯಾರ್ಥಿ ಸಾವು – ಶವ ತರಿಸಿಕೊಳ್ಳಲು ಸಹಾಯ ಕೋರಿದ ಕುಟುಂಬಸ್ಥರು

    ಪಾಕಿಸ್ತಾನದಲ್ಲಿ ನಿರುದ್ಯೋಗ ಸಮಸ್ಯೆ ಉತ್ತುಂಗಕ್ಕೇರಿದೆ. ಸರ್ಕಾರಿ ಉದ್ಯೋಗಕ್ಕೆ ಅತ್ಯಂತ ಕಡಿಮೆ ನೇಮಕಾತಿ ಮಾಡಿಕೊಳ್ಳುವುದರಿಂದ ನಿರುದ್ಯೋಗಿಳ ಸಂಖ್ಯೆಯೂ ಹೆಚ್ಚಾಗಿದೆ. ಸರ್ಕಾರಿ ವಲಯದಲ್ಲಿ ಖಾಲಿಯಿರುವ ಕೆಲವೇ ಕೆಲವು ಹುದ್ದೆಗೆ ಲಕ್ಷಾಂತರ ಆಕಾಂಕ್ಷಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಇದನ್ನೂ ಓದಿ: ಭೂತ ಬಿಡಿಸುವ ನೆಪದಲ್ಲಿ 14ರ ಬಾಲಕಿಯ ಮೇಲೆ ಅತ್ಯಾಚಾರ

    Live Tv
    [brid partner=56869869 player=32851 video=960834 autoplay=true]

  • ಕಾಲ್ತುಳಿತಕ್ಕೆ 130 ಮಂದಿಯ ಸಾವಾಗಿದ್ದ ಇಂಡೋನೇಷ್ಯಾದ ಸ್ಟೇಡಿಯಂ ನೆಲೆಸಮಕ್ಕೆ ನಿರ್ಧಾರ

    ಕಾಲ್ತುಳಿತಕ್ಕೆ 130 ಮಂದಿಯ ಸಾವಾಗಿದ್ದ ಇಂಡೋನೇಷ್ಯಾದ ಸ್ಟೇಡಿಯಂ ನೆಲೆಸಮಕ್ಕೆ ನಿರ್ಧಾರ

    ಜಕಾರ್ತ: ಈ ತಿಂಗಳ ಆರಂಭದಲ್ಲಿ ಕಾಲ್ತುಳಿತದಿಂದಾಗಿ (Stampede) 130 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದ ಇಂಡೋನೇಷ್ಯಾದ (Indonesia) ಫುಟ್‌ಬಾಲ್  ಕ್ರೀಡಾಂಗಣವನ್ನು (Football Stadium) ಕೆಡವಲು (Demolish) ನಿರ್ಧರಿಸಲಾಗಿದೆ.

    ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೋಡೋ (Joko Widodo) ಮಂಗಳವಾರ ವಿಶ್ವ ಫುಟ್‌ಬಾಲ್ ಆಡಳಿತ ಮಂಡಳಿ ಫಿಫಾದ (FIFA) ಮುಖ್ಯಸ್ಥ ಜಿಯಾನಿ ಇನ್‌ಫಾಂಟಿನೋ (Gianni Infantino) ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಕ್ರೀಡಾಂಗಣವನ್ನು ನೆಲಸಮಗೊಳಿಸುವುದಾಗಿ ತಿಳಿಸಿದ್ದಾರೆ. ಮಾತ್ರವಲ್ಲದೇ ಆ ಕ್ರೀಡಾಂಗಣವನ್ನು ಮರು ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ.

    ಈ ತಿಂಗಳ ಆರಂಭದಲ್ಲಿ ಮಲಾಂಗ್‌ನಲ್ಲಿರುವ ಕಂಜುರುಹಾನ್ ಕ್ರೀಡಾಂಗಣದಲ್ಲಿ ಕಾಲ್ತುಳಿತ ಉಂಟಾಗಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದೀಗ ಆ ಕ್ರೀಡಾಂಗಣವನ್ನು ಕೆಡವಲು ನಿರ್ಧರಿಸಲಾಗಿದ್ದು, ಮತ್ತೆ ಅದನ್ನು ಫಿಫಾ ಮಾನದಂಡಗಳ ಪ್ರಕಾರ ಮರುನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತೀವ್ರ ಸ್ವರೂಪ ಪಡೆದ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ- ನೂರಾರು ಹೋರಾಟಗಾರರ ಬಂಧನ

    ಅಕ್ಟೋಬರ್ 1 ರಂದು ಮಲಾಂಗ್ ನಗರದಲ್ಲಿ ನಡೆದ ಫುಟ್‌ಬಾಲ್ ಪಂದ್ಯದ ಬಳಿಕ ಗಲಭೆ ಸಂಭವಿಸಿತ್ತು. ಈ ವೇಳೆ ಪೊಲೀಸರು ಸ್ಟೇಡಿಯಂನಲ್ಲಿ ಅಶ್ರುವಾಯು ಪ್ರಯೋಗಿಸಿದ್ದರು. ಜನಸಂದಣಿಯೂ ಹೆಚ್ಚಿದ್ದರಿಂದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ, ಪೊಲೀಸರು, ಮಕ್ಕಳು ಸೇರಿದಂತೆ 130ಕ್ಕೂ ಹೆಚ್ಚು ಜನರು ಸ್ಟೇಡಿಯಂನಲ್ಲಿ ಸಾವನ್ನಪ್ಪಿದ್ದರು.

    ಅಂದು ಸ್ಟೇಡಿಯಂನಲ್ಲಿ ನಡೆದ ಫುಟ್‌ಬಾಲ್ ಪಂದ್ಯದಲ್ಲಿ ಸ್ಥಳೀಯ ತಂಡ ಅರೆಮಾ ಫುಟ್‌ಬಾಲ್ ಕ್ಲಬ್ ಅನ್ನು ಪ್ರತಿಸ್ಪರ್ಧಿ ತಂಡ ಪರ್ಸೆಬಾಯಾ ಸೋಲಿಸಿತ್ತು. ಇದರಿಂದ ಬೇಸರಗೊಂಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಿಚ್‌ಗೆ ನುಗ್ಗಿದ್ದರು. ಬಳಿಕ ಸಾಮೂಹಿಕ ಗಲಭೆ ಭುಗಿಲೆದ್ದಿತ್ತು. ಇದನ್ನೂ ಓದಿ: ಉಜ್ಜಯಿನಿ ದೇವಾಲಯದಲ್ಲಿ ರೀಲ್ಸ್ ಮಾಡಿದ್ದ ಯುವತಿಗೆ ಕಂಟಕ – ಕ್ರಮಕ್ಕೆ ಸೂಚಿಸಿದ ಗೃಹ ಸಚಿವ

    Live Tv
    [brid partner=56869869 player=32851 video=960834 autoplay=true]

  • ಅಫ್ಘಾನಿಸ್ತಾನದ ಟಿ20 ಪಂದ್ಯದ ವೇಳೆ ಸ್ಟೇಡಿಯಂನಲ್ಲೇ ಬಾಂಬ್ ಸ್ಫೋಟ

    ಅಫ್ಘಾನಿಸ್ತಾನದ ಟಿ20 ಪಂದ್ಯದ ವೇಳೆ ಸ್ಟೇಡಿಯಂನಲ್ಲೇ ಬಾಂಬ್ ಸ್ಫೋಟ

    ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಶಪಜೀಜಾ ಕ್ರಿಕೆಟ್ ಲೀಗ್ ಟಿ20 ಪಂದ್ಯದ ವೇಳೆ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದೆ.

    ಬ್ಯಾಂಡ್-ಎ-ಅಮೀರ್ ಡ್ರ‍್ಯಾಗನ್ ಹಾಗೂ ಪಮೀರ್ ಝಲ್ಮಿ ತಂಡಗಳ ನಡುವೆ ಪಂದ್ಯ ನಡೆಯುತ್ತಿದ್ದ ವೇಳೆಯೇ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಸದ್ಯ ಎಲ್ಲಾ ಆಟಗಾರರೂ ಸುರಕ್ಷಿತರಾಗಿದ್ದು, ಅವರನ್ನು ರಕ್ಷಣೆಗೆ ಬಂಕರ್‌ಗೆ ಸಾಗಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ರಾಜ್ಯದಲ್ಲಿಂದು 2 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ – ನಾಲ್ವರು ಸಾವು

    ಸ್ಫೋಟ ಸಂಭವಿಸುತ್ತಲೇ ಕ್ರೀಡಾಂಗಣದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಜನರು ಪ್ರಾಣಾಪಾಯದಿಂದ ರಕ್ಷಿಸಿಕೊಳ್ಳಲು ಸುರಕ್ಷಿತ ಪ್ರದೇಶಗಳಿಗೆ ಗುಂಪಾಗಿ ಧಾವಿಸಿದ್ದಾರೆ. ಸದ್ಯ ಯಾವುದೇ ಪ್ರಾಣ ಹಾನಿಯಾಗಿಲ್ಲ ಎನ್ನಲಾಗಿದೆ. ಇದನ್ನೂ ಓದಿ: MIG-21 ವಿಮಾನವನ್ನು ಸೇವೆಯಿಂದ ವಜಾಗೊಳಿಸೋದು ಯಾವಾಗ? – ವರುಣ್ ಗಾಂಧಿ

    2 ದಿನಗಳ ಹಿಂದೆಯಷ್ಟೇ ಕಾಬೂಲ್ ಗುರುದ್ವಾರ ಕಾರ್ಟೆ ಪರ್ವಾನ್ ಗೇಟ್ ಬಳಿ ಸ್ಫೋಟ ಸಂಭವಿಸಿತ್ತು. ಇದರ ಬೆನ್ನಲ್ಲೇ ಇದೀಗ ಕ್ರೀಡಾಂಗಣದಲ್ಲಿ ಸ್ಫೋಟ ಸಂಭವಿಸಿದೆ. ಸಾರ್ವಕನಿಕರು ಹೆಚ್ಚಾಗಿ ಸೇರುವ ಪ್ರದೇಶಗಳಲ್ಲಿ ಬಾಂಬ್ ಸ್ಫೋಟದಂತಹ ಘಟನೆಗಳು ಆಗಾಗ ಮರುಕಳಿಸುತ್ತಿರುವುದು ಆಫ್ಘನ್ನರಲ್ಲಿ ನಡುಕ ಉಂಟು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಮಾಲ್ಡೀವ್ಸ್‌ನಲ್ಲಿ ಯೋಗ ಕಾರ್ಯಕ್ರಮದ ವೇಳೆ ದಾಳಿ

    ಮಾಲ್ಡೀವ್ಸ್‌ನಲ್ಲಿ ಯೋಗ ಕಾರ್ಯಕ್ರಮದ ವೇಳೆ ದಾಳಿ

    ಮಾಲೆ: ಅಂತಾರಾಷ್ಟ್ರೀಯ ಯೋಗ ದಿನದ ನಿಮಿತ್ತ ಮಾಲ್ಡೀವ್ಸ್‌ನ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಯೋಗ ಕಾರ್ಯಕ್ರಮಕ್ಕೆ ಗುಂಪೊಂದು ನುಗ್ಗಿ ಯೋಗ ಮಾಡಿದ್ದವರನ್ನು ಅಡ್ಡಿ ಪಡಿಸಿದ ಘಟನೆ ನಡೆದಿದೆ.

    ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ವಿಶ್ವದೆಲ್ಲೆಡೆ ಯೋಗ ಮಾಡಿ ಯೊಗ ದಿನವನ್ನು ಆಚರಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಮಾಲ್ಡೀವ್ಸ್‌ನ ಯುವ, ಕ್ರೀಡೆ ಮತ್ತು ಸಮುದಾಯ ಸಬಲೀಕರಣ ಸಚಿವಾಲಯವು ಭಾರತೀಯ ಸಾಂಸ್ಕೃತಿಕ ಕೇಂದ್ರದೊಂದಿಗೆ ಮಂಗಳವಾರ ಗಲೋಲ್ಹು ಕ್ರೀಡಾಂಗಣದಲ್ಲಿ ಧ್ಯಾನ ಮತ್ತು ಯೋಗವನ್ನು ಆಯೋಜಿಸಿತ್ತು. ಆದರೆ ಅಲ್ಲಿಗೆ ಬಂದ ಗುಪೊಂದು ಯೋಗಾಭ್ಯಾಸಕ್ಕೆ ಅಡ್ಡಿ ಪಡಿಸಿ ಪ್ರತಿಭಟನೆ ನಡೆಸಿದೆ.

    ಆ ಗುಂಪು ಯೋಗಾಭ್ಯಾಸದಲ್ಲಿ ಪಾಲ್ಗೊಂಡವರು ಕೂಡಲೇ ಕ್ರೀಡಾಂಗಣವನ್ನು ತೆರವು ಮಾಡಬೇಕೆಂದು ಆಗ್ರಹಿಸಿದೆ. ಅಷ್ಟೇ ಅಲ್ಲದೇ ಬೆದರಿಕೆಯನ್ನು ಹಾಕಿದೆ. ಇದರಿಂದಾಗಿ ಯೋಗಾಭ್ಯಾಸಕ್ಕೆ ಹಾಜರಾದವರಿಗೆ ಧ್ಯಾನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ.

    ಘಟನೆ ಸಂಬಂಧಿಸಿದಂತೆ ಅತಿರೇಕಕ್ಕೆ ಹೋಗುವ ಮೊದಲು ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಅಂತಾರಾಷ್ಟ್ರೀಯ ಯೋಗ ದಿನವನ್ನು ಆಯೋಜಿಸುವ ಘೋಷಣೆಯು ಕೆಲವು ಸಾರ್ವಜನಿಕರಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಅವರು ಅದನ್ನು ನಡೆಸದಂತೆ ಬೆದರಿಕೆ ಹಾಕಿದರು. ಇದನ್ನೂ ಓದಿ: ಯೋಗ ದಿನದಂದು ವಿಜಯಪುರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

    ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಹೇಳಿದ್ದಾರೆ. ಮಾಲ್ಡೀವ್ಸ್ ಸರ್ಕಾರವು ಈ ಸಮಸ್ಯೆಯನ್ನು ಅತ್ಯಂತ ಕಾಳಜಿಯಿಂದ ಪರಿಗಣಿಸುತ್ತಿದೆ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಮಠದ ಶಿಷ್ಯರೊಂದಿಗೆ ಯೋಗ ಮಾಡಿದ ಪೇಜಾವರ ಶ್ರೀ

    Live Tv

  • ಭಾರತ, ದಕ್ಷಿಣ ಆಫ್ರಿಕಾ T20 ಪಂದ್ಯ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

    ಭಾರತ, ದಕ್ಷಿಣ ಆಫ್ರಿಕಾ T20 ಪಂದ್ಯ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

    ಭುವನೇಶ್ವರ: ಭಾರತ ಮತ್ತು ದಕ್ಷಿಣ ಆಫ್ರಿಕಾದ ನಡುವಿನ ಟಿ20 ಸರಣಿ ಇದೇ ಜೂನ್ 9 ರಿಂದ ಆರಂಭವಾಗುತ್ತಿದೆ. ಆದರೆ ಜೂನ್ 12ರಂದು ಕಟಕ್‌ನ ಬಾರಮತಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯಗಳನ್ನು ರದ್ದುಗೊಳಿಸುವಂತೆ ಒಡಿಶಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಸಲಾಗಿದ್ದು, ತುರ್ತು ವಿಚಾರಣೆಗೆ ಕೋರಲಾಗಿದೆ.

    ಮಾನವ ಹಕ್ಕುಗಳ ಹೋರಾಟಗಾರ ಸಂಜಯ್ ಕುಮಾರ್ ನಾಯಕ್ ಈ ಅರ್ಜಿ ಸಲ್ಲಿಸಿದ್ದು, ಒಡಿಶಾ ಕ್ರಿಕೆಟ್ ಅಸೋಸಿಯೇಷನ್, ಬಿಸಿಸಿಐ ಸೇರಿದಂತೆ 15 ಪಕ್ಷಗಳನ್ನು ಪ್ರತಿವಾದಿಗಳಾಗಿದ್ದಾರೆ. ಇದನ್ನೂ ಓದಿ: ಎಂ.ಎಸ್ ಧೋನಿ ಸೇರಿ 8 ಮಂದಿ ವಿರುದ್ಧ FIR

    ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಸಂಬಂಧಿಸಿದ ಪ್ರಾಧಿಕಾರಕ್ಕೆ ರಚನಾತ್ಮಕ ಸುರಕ್ಷತಾ ಪ್ರಮಾಣಪತ್ರವನ್ನು ನೀಡಿಲ್ಲ, ಅಗ್ನಿ ಸುರಕ್ಷತಾ ಅಳತೆ ಪ್ರಮಾಣ ಪತ್ರವನ್ನೂ ನೀಡಿಲ್ಲ, 45,000 ಪ್ರೇಕ್ಷಕರು ಸೇರುವ ಪ್ರದೇಶದಲ್ಲಿ ನಿಯಮಗಳ ಉಲ್ಲಂಘನೆ ದೊಡ್ಡ ವಿಷಯವಾಗಿದೆ ಎಂದು ಅವರು ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

    ಕಾನೂನಿನ ಕಡ್ಡಾಯ ಅವಶ್ಯಕತೆಗಳನ್ನು ಅನುಸರಿಸದ ಸಂಸ್ಥೆಯು ಸರ್ಕಾರಿ ಪದಾಧಿಕಾರಿಗಳ ನೆರವಿನೊಂದಿಗೆ ಯಾವುದೇ ಕಾರ್ಯವನ್ನು ಮಾಡಲು ಅನುಮತಿಸಬಾರದು ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಕಾನೂನಿನ ಕಡ್ಡಾಯ ಪಾಲನೆ ಬಗ್ಗೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ವಿಶೇಷವಾಗಿ ಒಡಿಶಾ ಅಗ್ನಿಶಾಮಕ ತಡೆಗಟ್ಟುವಿಕೆ ಮತ್ತು ಅಗ್ನಿ ಸುರಕ್ಷತಾ ನಿಯಮಗಳು 2017ರ ಅಡಿಯಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.  ಇದನ್ನೂ ಓದಿ: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ ನೀಡಿಲ್ಲ: ಜಯ್ ಶಾ ಸ್ಪಷ್ಟನೆ

    ಪಂದ್ಯಗಳನ್ನು ನಡೆಸಲು ಯಾವುದೇ ವಿರೋಧವಿಲ್ಲ, ಆದರೆ 70 ವರ್ಷಗಳ ಹಳೆಯ ಕ್ರೀಡಾಂಗಣದಲ್ಲಿ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿ ಪಂದ್ಯಗಳನ್ನು ಏರ್ಪಡಿಸುವುದು ಅಪಾಯಕಾರಿ. ಹಾಗಾಗಿ ಅಗತ್ಯ ಕ್ರಮ ತೆಗೆದುಕೊಳ್ಳುವರೆಗೂ ಪಂದ್ಯಗಳನ್ನು ರದ್ದು ಮಾಡಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹಾಕಿ ಏಷ್ಯಾ ಕಪ್ 2022: ಭಾರತಕ್ಕೆ ಕಂಚಿನ ಪದಕ

    ಯಾವ ದಿನ – ಎಲ್ಲಿ ಪಂದ್ಯ?

    • ಮೊದಲ ಪಂದ್ಯ ಜೂನ್ 09 – ದೆಹಲಿ
    • 2ನೇ ಪಂದ್ಯ ಜೂನ್ 12 – ಕಟಕ್
    • 3ನೇ ಪಂದ್ಯ ಜೂನ್ 14 – ವಿಶಾಖಪಟ್ಟಣ
    • 4ನೇ ಪಂದ್ಯ ಜೂನ್ 17 – ರಾಜ್‌ಕೋಟ್
    • 5ನೇ ಪಂದ್ಯ ಜೂನ್ 19 – ಬೆಂಗಳೂರು 

  • ಕ್ರೀಡಾಪಟುಗಳನ್ನು ಸ್ಟೇಡಿಯಂನಿಂದ ಹೊರಹಾಕಿ, ಐಎಎಸ್ ಅಧಿಕಾರಿಯ ನಾಯಿಗೆ ವಾಕಿಂಗ್

    ಕ್ರೀಡಾಪಟುಗಳನ್ನು ಸ್ಟೇಡಿಯಂನಿಂದ ಹೊರಹಾಕಿ, ಐಎಎಸ್ ಅಧಿಕಾರಿಯ ನಾಯಿಗೆ ವಾಕಿಂಗ್

    ನವದೆಹಲಿ: ಐಎಎಸ್ ಅಧಿಕಾರಿಯಬ್ಬರು ತಮ್ಮ ನಾಯಿಗೆ ವಾಕಿಂಗ್ ಕರೆದುಕೊಂಡು ಹೋಗಲು ಸ್ಟೇಡಿಯಂನಲ್ಲಿದ್ದ ಕ್ರೀಡಾ ಪಟುಗಳನ್ನು ಸಮಯಕ್ಕಿಂತಲೂ ಮುಂಚಿತವಾಗಿ ಹೊರಗೆ ಕಳುಹಿಸಿರುವ ಘಟನೆ ವರದಿಯಾಗಿದೆ.

    ದೆಹಲಿಯಲ್ಲಿರುವ ತ್ಯಾಗರಾಜ್ ಸ್ಟೇಡಿಯಂ ಸಂಜೆ 8 ಗಂಟೆ ವರೆಗೂ ತೆರೆದಿಡಲಾಗುತ್ತಿತ್ತು. ಆದರೆ ಇತ್ತೀಚೆಗೆ ದೆಹಲಿ ಕಂದಾಯ ವಿಭಾಗದ ಮುಖ್ಯ ಕಾರ್ಯದರ್ಶಿ ಸಂಜೀವ್ ಖಿರ್ವಾರ್ ಅವರ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗಲು ಅಭ್ಯಾಸ ನಡೆಸುತ್ತಿದ್ದ ಕ್ರೀಡಾಪಟುಗಳನ್ನು ಅವಧಿಗಿಂತಲೂ ಮುಂಚಿತವಾಗಿ ಹೊರಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ನಾಯಿಯಾಗಲು ಲಕ್ಷಗಟ್ಟಲ್ಲೇ ಖರ್ಚು ಮಾಡಿದ

    ಈ ಬಗ್ಗೆ ಕ್ರೀಡಾ ತರಬೇತುದಾರರೊಬ್ಬರು, ನಾವು ರಾತ್ರಿ 8 ರಿಂದ 8:30ರ ವರೆಗೂ ತರಬೇತಿ ನಡೆಸುತ್ತಿದ್ದೆವು. ಆದರೆ ಈಗ ಅಧಿಕಾರಿಯ ನಾಯಿಗೆ ವಾಕಿಂಗ್ ಕರೆದುಕೊಂಡು ಹೋಗಲು ನಮ್ಮನ್ನು ಸಂಜೆ 7 ಗಂಟೆಗೆ ಮೈದಾನದಿಂದ ಹೊರಡಲು ಹೇಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: 1 ರೂಪಾಯಿ ಸಂಭಾವನೆ ಪಡೆದು, ಚಿತ್ರರಂಗಕ್ಕೆ ಕಾಲಿಟ್ಟ ಮಾಜಿ ಐಪಿಎಸ್ ಅಧಿಕಾರಿ

    ಈ ಬಗ್ಗೆ ಪ್ರತಿಕ್ರಿಯಿಸಿದ ಖಿರ್ವಾರ್ ನನ್ನ ಮೇಲೆ ಹೊರಿಸಿರುವ ಆರೋಪ ಶುದ್ಧ ಸುಳ್ಳು, ನಾನು ತೀರಾ ಅಪರೂಪಕ್ಕೆ ನಾಯಿಯನ್ನು ಸ್ಟೇಡಿಯಂಗೆ ಕರೆದುಕೊಂಡು ಹೋಗಿದ್ದೆ. ಆದರೆ ಇದರಿಂದ ಯಾವುದೇ ಕ್ರೀಡಾಪಟುಗಳಿಗೂ ಅಡ್ಡಿ ಪಡಿಸಿರಲಿಲ್ಲ ಎಂದಿದ್ದಾರೆ.

    ಈ ಘಟನೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗಮನಕ್ಕೆ ಬಂದಿದ್ದು, ನಗರದಲ್ಲಿನ ಎಲ್ಲಾ ಸರ್ಕಾರಿ ಕ್ರೀಡಾಂಗಣಗಳನ್ನು ರಾತ್ರಿ 10 ಗಂಟೆಯವರೆಗೆ ಕ್ರೀಡಾಪಟುಗಳಿಗೆ ಅಭ್ಯಾಸಕ್ಕೆ ತೆರೆದಿಡಲು ಆದೇಶ ನೀಡಿದ್ದಾರೆ.

  • ಮಧ್ಯಪ್ರದೇಶ ಕ್ರೀಡಾಂಗಣಕ್ಕೆ ಪ್ರಧಾನಿ ಮೋದಿ ಹೆಸರು

    ಮಧ್ಯಪ್ರದೇಶ ಕ್ರೀಡಾಂಗಣಕ್ಕೆ ಪ್ರಧಾನಿ ಮೋದಿ ಹೆಸರು

    ಭೋಪಾಲ್: ಸತ್‍ನಾದಲ್ಲಿಯೂ ಕ್ರೀಡಾಂಗಣವೊಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಇಡಲಾಗಿದೆ. ಗುಜರಾತ್ ಬಳಿಕ ಇದೀಗ ಮಧ್ಯಪ್ರದೇಶದಲ್ಲಿ ಮೋದಿ ಹೆಸರನ್ನು ಇಡಲಾಗಿದೆ.

    ಕ್ರೀಡಾಂಗಣವನ್ನು ಸತ್‍ನಾದ ಪವರ್ ಗ್ರಿಡ್ ಕಾರ್ಪೊರೇಷನ್‍ನಲ್ಲಿ 130 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿದೆ. ಮಧ್ಯ ಪ್ರದೇಶದ ವಿಧಾನಸಭೆ ಸ್ಪೀಕರ್ ಗಿರೀಶ್ ಗೌತಮ್ ಮತ್ತು ಸತ್‍ನಾ ಸಂಸದ ಗಣೇಶ್ ಸಿಂಗ್ ಅವರು ನರೇಂದ್ರ ದಾಮೋದರ ದಾಸ್ ಮೋದಿ ಸ್ಟೇಡಿಯಂ ಉದ್ಘಾಟಿಸಿದ್ದಾರೆ. ಇದನ್ನೂ ಓದಿ: ರಾಜರ ವಂಶವನ್ನು ನಾಶ ಮಾಡಲು ಹೋದ ಟಿಪ್ಪು ಸುಲ್ತಾನ್ ಹೆಸರು ರೈಲಿಗೆ ಯಾಕೆ?: ಪ್ರತಾಪ್ ಸಿಂಹ

    ಮೋದಿ ಸರ್ಕಾರವು ಕ್ರೀಡೆಯ ಉತ್ತೇಜನಕ್ಕೆ ಸಾಕಷ್ಟು ಕೆಲಸ ಮಾಡುತ್ತಿದೆ. ಪ್ರಧಾನಿ ಮೋದಿ ಅವರು ಕ್ರೀಡಾಳುಗಳ ಜತೆ ನೇರ ಸಂಪರ್ಕದಲ್ಲಿದ್ದು ಅವರಿಗೆ ಪ್ರೋತ್ಸಾಹ ನೀಡುತ್ತಾರೆ. ಹೀಗಾಗಿ ಕ್ರೀಡಾಂಗಣಕ್ಕೆ ಅವರ ಹೆಸರು ಇಡಲು ನಿರ್ಧರಿಸಿದ್ದೆವು ಎಂದು ಗಣೇಶ್ ಸಿಂಗ್ ಹೇಳಿದ್ದಾರೆ. 2021ರಲ್ಲಿ ಗುಜರಾತ್‍ನ ಮೊಟೆರಾ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಅವರ ಹೆಸರಿಡಲಾಗಿತ್ತು.

  • ಮದ್ಯದಂಗಡಿ ಮುಂದೆ ಪುರುಷರು, ರೇಷನ್ ಅಂಗಡಿ ಎದುರು ಮಹಿಳೆಯರು ಫುಲ್ ಕ್ಯೂ

    ಮದ್ಯದಂಗಡಿ ಮುಂದೆ ಪುರುಷರು, ರೇಷನ್ ಅಂಗಡಿ ಎದುರು ಮಹಿಳೆಯರು ಫುಲ್ ಕ್ಯೂ

    – ಮದ್ಯದಂಗಡಿ ಪಕ್ಕದಲ್ಲೇ ರೇಷನ್ ಅಂಗಡಿ
    – ರಾಯಚೂರಲ್ಲಿ ಸಿಕ್ಕಸಿಕ್ಕಲ್ಲೇ ಮದ್ಯಪಾನ

    ಧಾರವಾಡ/ರಾಯಚೂರು: ಇಂದು ಎಣ್ಣೆ ಅಂಗಡಿ ಮುಂದೆ ಎಲ್ಲಿ ನೋಡಿದರೂ ಉದ್ದದ್ದೂ ಕ್ಯೂ ಕಂಡುಬರುತ್ತಿದೆ. ಆದ್ರೆ ಧಾರವಾಡದಲ್ಲಿ ಒಂದೆಡೆ ಮದ್ಯದಂಗಡಿ ಇನ್ನೊಂದೆಡೆ ರೇಷನ್ ಅಂಗಡಿಗೆ ಕ್ಯೂ ಹಚ್ಚಿದ ಅಪರೂಪದ ದೃಶ್ಯಗಳು ಕಂಡುಬಂದಿವೆ.

    ಧಾರವಾಡದ ತೇಜಸ್ವಿ ನಗರದಲ್ಲಿರುವ ಖಾಸಗಿ ವೈನ್ ಶಾಪ್ ಪಕ್ಕವೇ ರೇಷನ್ ಅಂಗಡಿ ಸಹ ಇರುವುದರಿಂದ ಎಣ್ಣೆ ಅಂಗಡಿ ಮುಂದೆ ಪುರುಷರು ಕ್ಯೂ ನಿಂತಿದ್ದರೆ, ರೇಷನ್ ಅಂಗಡಿ ಮುಂದೆ ಮಹಿಳೆಯರು ಕ್ಯೂ ಹಚ್ಚಿದ್ದಾರೆ. ಎರಡು ಅಂಗಡಿಗಳು ಅಕ್ಕಪಕ್ಕದಲ್ಲಿರುವುದರಿಂದ ಈ ಅಪರೂಪ ದೃಶ್ಯ ಕಂಡು ಬಂದಿದೆ. ಒಂದು ಕಡೆ ಮಹಿಳೆಯರು ರೇಷನ್‍ಗೆ ಕ್ಯೂ ನಿಂತರೆ, ಮತ್ತೊಂದು ಕಡೆ ಮದ್ಯ ಖರೀದಿಗೆ ಪುರುಷರು ಕ್ಯೂ ನಿಂತಿದ್ದಾರೆ.

    ಇತ್ತ ರಾಯಚೂರಿನಲ್ಲಿ ಲಾಕ್‍ಡೌನ್ ಹಿನ್ನೆಲೆ ಕಂಗೆಟ್ಟಿದ್ದ ಮದ್ಯ ವ್ಯಸನಿಗಳು ಮದ್ಯದಂಗಡಿಗಳು ಆರಂಭಿಸುತ್ತಿದ್ದಂತೆ ಸಿಕ್ಕ ಸಿಕ್ಕಲ್ಲೇ ಮದ್ಯಪಾನ ಮಾಡುತ್ತಿದ್ದಾರೆ. ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮದ್ಯವ್ಯಸನಿಗಳು ಎಣ್ಣೆ ಪಾರ್ಟಿ ನಡೆಸಿದ್ದಾರೆ. ಕಟ್ಟಡದ ಹಿಂಭಾಗ, ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿ ಕೆಳಗೆ ಮದ್ಯ ಸೇವನೆ ಮಾಡುತ್ತಿದ್ದಾರೆ.

    ಕ್ರೀಡಾಂಗಣದಲ್ಲಿ ನೆರಳಿರುವ ಜಾಗದಲ್ಲಿ ಅಲ್ಲಲ್ಲೇ ಕುಳಿತು ಮದ್ಯ ಸೇವನೆ ಮಾಡುತ್ತಿದ್ದಾರೆ. ಮದ್ಯ ಕೇವಲ ಪಾರ್ಸಲ್ ಸಿಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯಲು ಸ್ಥಳವಿಲ್ಲದೆ ಸಿಕ್ಕಸಿಕ್ಕಲ್ಲೇ ಸೇವನೆ ಮಾಡಲು ಮುಂದಾಗಿದ್ದಾರೆ. ಸಿಎಲ್ 2 ಹಾಗೂ ಎಂಎಸ್‍ಐಎಲ್ ಮದ್ಯದಂಗಡಿಗಳಿಗೆ ಮಾತ್ರ ಅನುಮತಿಯನ್ನು ನೀಡಿರುವುದಿರಿಂದ ಮದ್ಯಸೇವನೆಗೆ ಸ್ಥಳದ ತೊಂದರೆಯಾಗಿದೆ. ಹೀಗಾಗಿ ನಿರ್ಜನ ಪ್ರದೇಶಗಳಲ್ಲಿ ಮದ್ಯಪಾನ ಜೋರಾಗಿ ನಡೆದಿದೆ.

    ಗ್ರೀನ್ ಝೋನಿನಲ್ಲಿ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆ ರಾಯಚೂರು ನಗರದಲ್ಲಿ ಎಲ್ಲಿ ನೋಡಿದರೂ ಜನರ ಓಡಾಟ ಜೋರಾಗಿದೆ. ಸಂಪೂರ್ಣ ಲಾಕ್‍ಡೌನ್ ತೆಗೆದಿರುವಂತೆ ವರ್ತಿಸುತ್ತಿರುವ ಜನ ಗುಂಪುಗುಂಪಾಗಿ ಓಡಾಡುತ್ತಿದ್ದಾರೆ. ಬೇರೆ ಬೇರೆ ಊರುಗಳಿಗೆ ತೆರಳಲು ಜನ ಪಾಸ್‍ಗಾಗಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಮುಗಿಬಿದ್ದಿದ್ದು, ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು.