ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ (Cruiser) ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ.
ಗದಗ (Gadag) ಮೂಲದ ಕುಟುಂಬವು ಗದಗದಿಂದ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ತೆರಳಿದ್ದರು. ಕೊಲ್ಲಾಪುರದಿಂದ ವಾಪಸ್ಸಾಗುತ್ತಿದ್ದಾಗ ಮುಲ್ಲಾ ಧಾಬಾ ಬಳಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಾಯಾಳುಗಳಿಗೆ ಧಾರವಾಡ ಜಿಲ್ಲಾ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಧಾರವಾಡ ಗರಗ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಯಾದಗಿರಿ: ಜಿಲ್ಲೆಯ ಅದೊಂದು ವಸತಿ ಶಾಲೆಯಲ್ಲಿ ಮೇಲಿಂದ ಮೇಲೆ ಎಡವಟ್ಟುಗಳು ನಡೆಯುತ್ತಲೇ ಇವೆ. ಆದ್ರೆ ಅಧಿಕಾರಿಗಳು ಮಾತ್ರ ಡೋಂಟ್ ಕೇರ್ ಅಂತಿದ್ದಾರೆ. ಇದೀಗ ಮತ್ತದೇ ವಸತಿ ಶಾಲೆ ಮಕ್ಕಳು ಕ್ರೂಸರ್ ಟಾಪ್ ಮೇಲೆ ಕುಂತು ಡೇಂಜರ್ ಮಾಡಿದ್ದಾರೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬಾಲಚೇಡ್ ಗ್ರಾಮದಲ್ಲಿರುವ ಎಪಿಜೆ ಅಬ್ದುಲ್ ಕಾಲಂ ವಸತಿ ಶಾಲೆಯಲ್ಲಿ (Abdul Kalam Residential School Yadagiri) ಈ ಎಡವಟ್ಟು ನಡೆದಿದೆ. ವಿದ್ಯಾರ್ಥಿಗಳನ್ನ ಪರೀಕ್ಷೆಗೆಂದು ಜಿಲ್ಲೆಯ ಶಹಾಪುರಕ್ಕೆ ಕರೆದುಕೊಂಡು ಹೋಗುವಾಗ ಪ್ರಾಂಶುಪಾಲ ಸಂತೋಷ್ ಮಾಡಿರೋ ಎಡವಟ್ಟಿದು. ವಿದ್ಯಾರ್ಥಿಗಳನ್ನ ಪರೀಕ್ಷೆಗೆ ಕರೆದುಕೊಂಡು ಹೋಗಲು ಎಲ್ಲಾ ಸೌಲಭ್ಯ ಇದೆ. ಆದರೂ ಈ ಪ್ರಾಂಶುಪಾಲರು ಮಾತ್ರ ಕ್ರೂಸರ್ ವಾಹನದ ಟಾಪ್ ಮೇಲೆ ಕುರಿಗಳನ್ನ ತುಂಬಿದಂತೆ ತುಂಬಿ ಪರೀಕ್ಷೆ ಬರೆಯಲು ಕರೆದುಕೊಂಡು ಹೋಗಿದ್ದಾರೆ.
ಈ ವಸತಿ ಶಾಲೆಯ ಎಡವಟ್ಟು ಇದೇ ಮೊದಲಲ್ಲ. ಕಳೆದ ಎರಡು ತಿಂಗಳ ಹಿಂದೆ ಇದೇ ವಸತಿ ಶಾಲೆಯಲ್ಲಿನ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿಚಿತ್ರ ಚರ್ಮ ರೋಗ ಕಾಣಿಸಿಕೊಂಡಿತ್ತು. ಕಲುಷಿತ ನೀರು ಹಾಗೂ ವಸತಿ ಶಾಲೆಯಲ್ಲಿ ಶುಚಿತ್ವ ಇಲ್ಲದೇ ಇದ್ದಿದ್ರಿಂದ ಶಾಲೆಯ ನೂರಕ್ಕೂ ಹೆಚ್ಚು ಮಕ್ಕಳಿಗೆ ಮೈತುಂಬಾ ಗುಳ್ಳೆಗಳು ಕಾಣಿಸಿಕೊಂಡಿತ್ತು. ಇಲ್ಲೂ ನಿರ್ಲಕ್ಷ್ಯ ಮಾಡಿದ್ದ ಪ್ರಾಂಶುಪಾಲ ಸಂತೋಷ್, ಮಕ್ಕಳ ಪೋಷಕರಿಗೆ ಯಾವುದೇ ಮಾಹಿತಿ ನೀಡಿದೇ ಮಕ್ಕಳ ಆರೋಗ್ಯದ ಬಗ್ಗೆ ಸಂಪೂರ್ಣ ಕಡೆಗಣಿಸಿದ್ದ. ಮಕ್ಕಳ ಆಯೋಗದವರು ಆ ವೇಳೆ ವಸತಿ ಶಾಲೆಗೆ ಭೇಟಿ ನೀಡಿ, ಛೀಮಾರಿ ಹಾಕಿದ್ರು.
ಮಕ್ಕಳ ಜೀವದ ಬಗ್ಗೆ ಯಾವುದೇ ಕಾಳಜಿ ಇಲ್ಲದೇ ಚೆಲ್ಲಾಟ ಆಡ್ತಿರೋ ಪ್ರಾಂಶುಪಾಲರ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡು, ಜಿಲ್ಲೆಯಲ್ಲಿ ಮತ್ತೊಮ್ಮೆ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕಿದೆ.
ತುಮಕೂರು: ನಿಂತಿದ್ದ ಕ್ರೂಸರ್ ಕಾರಿಗೆ (Cruiser Car) ಲಾರಿ (Lorry) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರಿನ (Tumakuru) ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ (Highway) 4ರಲ್ಲಿ ನಡೆದಿದೆ.
ಕ್ರೂಸರ್ ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಮೃತ ದುರ್ದೈವಿಗಳು. ಅಪಘಾತದಲ್ಲಿ (Accident) ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು, ಮೃತರು ಗಂಗಾವತಿ (Gangavati) ಮೂಲದವರು ಎನ್ನುವ ಮಾಹಿತಿ ದೊರೆತಿದೆ. ಇದನ್ನೂ ಓದಿ: ಬೆಸ್ಕಾಂ ಬಿಲ್ ಹೆಸರಲ್ಲಿ ಸೈಬರ್ ಹ್ಯಾಕ್ – ಬಿಲ್ ಕಟ್ಟೋಕೆ ಹೋದ್ರೆ ಅಕೌಂಟ್‌ನಲ್ಲಿದ್ದ ಹಣ ಮಾಯ
ಮೃತರು ಗಂಗಾವತಿಯಿಂದ ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ (Freedom Park) ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಈ ಕುರಿತು ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಪೇಯಿಂಟ್ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ಸಾವು
ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ (Crusier- Lorry Accident) ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ (Yadagiri) ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ.
ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ (50), ಸುಮ್ಮಿ (12) ಮೃತ ದುರ್ದೈವಿಗಳು. ಮೃತಪಟ್ಟ 5 ಮಂದಿ ಸಂಬಂಧಿಕರಾಗಿದ್ದಾರೆ. ಆಂಧ್ರಪ್ರದೇಶದ ಬಂಡಿ ಆತ್ಮಕೂರು ಗ್ರಾಮದ ತಂದೆ ಮುನೀರ್ ಹಾಗೂ ಪುತ್ರ ಮುದ್ದಸಿರ್ ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ವೆಲುಗೋಡ ಗ್ರಾಮದ ಮೂವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮೈ-ಬೆಂ. ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ಇಬ್ಬರು ಗಂಭೀರ
ಕ್ರೂಸರ್, ಆಂಧ್ರಪ್ರದೇಶ (Andhrapradesh) ದ ನಂದ್ಯಾಲ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ಬರುತ್ತಿತ್ತು. ಈ ವೇಳೆ ಬಳಿಚಕ್ರ ಬಳಿ ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಓರ್ವ ಬಾಲಕಿ, ಬಾಲಕ ಸೇರಿ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ. ನಿದ್ದೆ ಮಂಪರ್ ನಲ್ಲಿದ್ದ ಕ್ರೂಸರ್ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಹಿನ್ನೆಲೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ 13 ಜನರಿಗೆ ಗಾಯಗಳಾಗಿದ್ದು, ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ದಾಖಲಾದವರ ಪೈಕಿ 5 ಜನರ ಸ್ಥಿತಿ ಕೂಡ ಚಿಂತಾಜನಕವಾಗಿದೆ.
ಅಪಘಾತ ಸಂಬಂಧ ಯಾದಗಿರಿ ಎಸ್ ಪಿ ಡಾ ಸಿಬಿ ವೇದಮೂರ್ತಿ ಪ್ರತಿಕ್ರಿಯಿಸಿ, ಹೈವೇ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕ್ರೂಷರ್ ವಾಹನ ಡಿಕ್ಕಿ ಹೊಡೆದಿದೆ. ಕ್ರೂಸರ್ ವಾಹನದಲ್ಲಿದ್ದ ಐದು ಜನ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ನಂದ್ಯಾಲ ಗ್ರಾಮದ 18 ಜನ ಕ್ರೂಷರ್ ವಾಹನದಲ್ಲಿ ಪ್ರಯಾಣ ಮಾಡ್ತಿದ್ದರು. ಕಲಬುರಗಿ (kalaburagi) ಯ ಖಾಜಾ ಬಂದೇನವಾಜ ಉರುಸ್ ಗೆ ತೆರಳುತ್ತಿದ್ದರು. ನಸುಕಿನ ಜಾವ 4 ಗಂಟೆಗೆ ಈ ಒಂದು ಘಟನೆ ನಡೆದಿದೆ. ಗಾಯಗೊಂಡ 13 ಜನರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ ಎಂದರು.
ಘಟನೆ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀನಗರ: ಕ್ರೂಸರ್ (Cruiser) ವಾಹನವೊಂದು ಕಮರಿಗೆ ಬಿದ್ದು 7 ಮಂದಿ ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರ (jammu Kashmir) ದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಸುದೇಶ್ ಕುಮಾರ್, ಅಖ್ತರ್ ಹುಸೇನ್, ಅಬ್ದುಲ್ ರಶೀದ್, ಮುಬ್ಶರ್ ಅಹ್ಮದ್, ಇಟ್ವಾ, ರಾಹುಲ್ ಮತ್ತು ಕರಣ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಆತನನ್ನು ಕಿಶ್ತ್ವಾದಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ ದೇವಾನ್ಶ್ ಯಾದವ್ ಹೇಳಿದರು.
#WATCH | Seven dead and one critically injured in a road accident at Dangduru Dam site in Kishtwar, J&K. Details awaited.
ದಂಗದೂರು ಅಣೆಕಟ್ಟು ಸಮೀಪ ಪಾಕಲ್ ದುಲ್ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್ ಕಾಮಗಾರಿ ಸ್ಥಳದಲ್ಲಿ ಇವರೆಲ್ಲರೂ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಎಂದಿನಂತೆ ಸುಮಾರು 10 ಮಂದಿ ಕಾರ್ಮಿಕರು ದಚನ್ ಗ್ರಾಮದಲ್ಲಿರುವ ಕಾಮಗಾರಿ ಸ್ಥಳಕ್ಕೆ ಕ್ರೂಸರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಆಳದ ಕಮರಿಗೆ ಬಿದ್ದಿದೆ.
#WATCH | Seven dead and one critically injured in a road accident at Dangduru Dam site in Kishtwar, J&K. Injured being shifted to District Hospital Kishtwar or GMC Doda as per requirement. pic.twitter.com/ye7flNCslE
ಅಪಘಾತದ ವಿಚಾರ ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ವಿಜ್ಞಾನ ಹಾಗೂ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಕಿಶ್ತ್ವಾರ್ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಸಂಗ್ರಹಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ವಿಜಯಪುರ: ಬೆಳ್ಳಂಬೆಳಗ್ಗೆ ಕಬ್ಬು (sugar kane) ಸಾಗಿಸುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ (Cruiser) ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್‌ನಲ್ಲಿದ್ದ ಬೆಳಗಾವಿ (Belagavi) ಜಿಲ್ಲೆಯ ಅಥಣಿ ಮೂಲದ ದಂಪತಿ ಮೃತಪಟ್ಟಿದ್ದಾರೆ.
ಇತರೆ ಒಂಬತ್ತು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಮಹಾರಾಷ್ಟ್ರದ (Maharastra) ಸೊಲ್ಲಾಪುರಕ್ಕೆ ರವಾನೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ್ ಬಳಿಯ ಎನ್‌ಎಚ್ 50 ರಲ್ಲಿ ಘಟನೆ ಸಂಭವಿಸಿದೆ. ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಮೃತ ದಂಪತಿ. ಇದನ್ನೂ ಓದಿ: ಅಪ್ಪು ಗಂಧದಗುಡಿ ರಿಲೀಸ್‍ಗೆ ಕೌಂಟ್‍ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ
ಬೆಳಗಾವಿ (Belagavi) ಜಿಲ್ಲೆಯ ಅಥಣಿ ಮೂಲದ ಇವರೆಲ್ಲಾ ಕ್ರೂಸರ್‌ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು. ಆಗ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಝಳಕಿ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Live Tv
[brid partner=56869869 player=32851 video=960834 autoplay=true]
ತುಮಕೂರು: ಶಿರಾ ಬಳಿ ನಡೆದ ಅಪಘಾತದಲ್ಲಿ 9 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೂಲಿ ಕಾರ್ಮಿಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಹೌದು. ಅಪಘಾತದಲ್ಲಿ ಮೃತಪಟ್ಟ 9 ಮಂದಿಯಲ್ಲಿ 6 ಜನರು ನೇತ್ರದಾನ ಮಾಡಲು ಮುಂದಾಗಿದ್ದಾರೆ. ನೋವಿನ ಮಧ್ಯೆಯೂ ಕುಟುಂಬಸ್ಥರು ಮನೆ ಮಕ್ಕಳ ನೇತ್ರದಾನ ಮಾಡಿದ್ದಾರೆ. ಮೃತಪಟ್ಟ ಚಾಲಕ ಕೃಷ್ಣ, ಸಿದ್ದಯ್ಯಸ್ವಾಮಿ, ನಿಂಗಣ್ಣ, ಮೀನಾಕ್ಷಿ, ಸುಜಾತಾ, ಪ್ರಭುಸ್ವಾಮಿ ಎಂಬವರ ನೇತ್ರದಾನ ಮಾಡಲು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಶಿರಾ ತಾಲೂಕಾಸ್ಪತ್ರೆ ಮುಂದೆ ಮೃತರ ಸಂಬಂಧಿಕರ ಗೋಳಾಟ ಹೇಳತೀರದಂತಾಗಿದೆ.
ಈ ಸಂಬಂಧ ಶಿರಾ ತಹಶಿಲ್ದಾರ್ ಮಮತಾ ಸುದ್ದಿಗಾರರೊಂದಿಗೆ ಮಾತನಾಡಿ, ಮೃತರ ಕುಟುಂಬಸ್ಥರು ಸಾರ್ಥಕ ಕೆಲಸ ಮಾಡಿದ್ದಾರೆ. ಐ ಡೊನೇಟ್ ಮಾಡಿ ಮಾನವೀಯತೆ ಮೆರೆದಿದ್ದಾರೆ. 6 ಜನರ ಕುಟುಂಬಸ್ಥರು ಸ್ವ-ಇಚ್ಛೆಯಿಂದ ಕಣ್ಣು ದಾನ ಮಾಡಲು ಒಪ್ಪಿಕೊಂಡಿದ್ದಾರೆ. ಇನ್ನೊಬ್ಬರ ಬಾಳಲ್ಲಿ ಬೆಳಕಾಗಲು ಬಯಸಿದ್ದಾರೆ. ಆ ಕುಟುಂಬಕ್ಕೆ ಒಳ್ಳೆಯದಾಗಲಿ. ಅಲ್ಲದೆ ದುಃಖ ಸಹಿಸುವ ಶಕ್ತಿ ಬರಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ
ಇತ್ತ ನೇತ್ರದಾನದ ಬಳಿಕ ಮೃತ ಚಾಲಕ ಕೃಷ್ಣನ ತಂದೆ ತಿಪ್ಪಾರೆಡ್ಡಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನನ್ನ ಮಗನನ್ನು ಬೇರೆಯವರ ಕಣ್ಣಿನ ಮೂಲಕ ನೋಡಬೇಕು. ಹಾಗಾಗಿ ಕಣ್ಣು ದಾನ ಮಾಡಿದ್ದೇವೆ. ಕಣ್ಣು ದಾನದ ಮೂಲಕ ಮಗ ಜೀವಂತ ಆಗಿರಬೇಕು ಎಂದು ಬಯಸಿದ್ದೇವೆ. ಹಾಗಾಗಿ ಸ್ವ-ಇಚ್ಛೆಯಿಂದ ನೇತ್ರದಾನ ಮಾಡಿಸಿದ್ದೇವೆ ಎಂದು ಹೇಳಿದರು.
ಬಾಗಲಕೋಟೆ: ಸಿದ್ದರಾಮೋತ್ಸವಕ್ಕೆ ಹೊರಟ ಕ್ರೂಸರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯವಾದ ಘಟನೆ ಬಾದಾಮಿ ತಾಳೂಕಿನ ಹುಲಗೇರೆ ಸಮೀಪ ನಡೆದಿದೆ.
ಪ್ರಕಾಶ್ ಬಡಿಗೇರ್ (34) ಮೃತ ದುರ್ದೈವಿ. ಮೃತ ವ್ಯಕ್ತಿ ಮುಧೋಳ ತಾಲೂಕಿನ ಚಿಕ್ಕಾಲಗುಂಡಿ ಗ್ರಾಮದವಾನಾಗಿದ್ದರು. ಘಟನೆಯಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದರೇ, ಮೂವರಿಗೆ ಗಂಭೀರ ಗಾಯವಾಗಿದ್ದು, 6 ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ 11 ಜನ ಹಿರೇ ಆಲಗುಂಡಿ ಗ್ರಾಮದವರಾಗಿದ್ದಾರೆ. ಇವರೆಲ್ಲರೂ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವಕ್ಕೆ ಭಾಗಿಯಾಗಲು ಹೋರಟಿದ್ದರು. ಈ ಸಮಯದಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಎಸ್‍ಡಿಪಿಐ, ಪಿಎಫ್‍ಐ ಅವರನ್ನ ಸಾಕ್ತಿರೋದೆ ಬಿಜೆಪಿ: ಸಿದ್ದರಾಮಯ್ಯ
ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ಆಗಮಿಸುತ್ತಿದ್ದ ಮುದೋಳ ತಾಲೂಕಿನ ಪ್ರಕಾಶ್ ಬಡಿಗೇರ್ ಎಂಬವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುದ್ದಿ ತಿಳಿದು ಆಘಾತವಾಯಿತು.
ಮೃತ ಪ್ರಕಾಶ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.
ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
1/2
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ನಾಲೆಗೆ ಬಿದ್ದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಕಲ್ಯಾಳ ಬ್ರಿಡ್ಜ್ ಬಳಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತವಾಗಿದೆ. ಚಿಲಬಾಂವಿ (27), ಬಸವರಾಜ್ ದಳವಿ (30), ಬಸವರಾಜ ಹನಮನ್ನವರ (51), ಆಕಾಶ ಗಸ್ತಿ (22) ಹಾಗೂ ದಾಸನಟ್ಟಿ ಗ್ರಾಮದ ಫಕಿರಪ್ಪ ಹರಿಜನ (55), ಮಲ್ಲಪ್ಪ ದಾಸನಟ್ಟಿ (30) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಗೋಕಾಕ್ ತಾಲೂಕಿನ ದಾಸನಟ್ಟಿ, ಅಕ್ಕತಂಗೇರಹಾಳ, ಎಂ ಮಲ್ಲಾಪುರ ನಿವಾಸಿಗಳಾಗಿದ್ದರು. ಇವರೆಲ್ಲರೂ ಕೂಲಿ ಕೆಲಸಕ್ಕೆಂದು ಹೊರಟಿದ್ದರು. ಆದರೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ 7 ಜನರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಇಂದು ನಸುಕಿನ ಜಾವ ನಡೆದಿರುವ ಭೀಕರ ಅಪಘಾತಕ್ಕೆ ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿರ್ಲಕ್ಷ್ಯತನವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಮಾರೀಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:ಮಂಕಿಪಾಕ್ಸ್ ಜಾಗತಿಕ ಆರೋಗ್ಯ ತುರ್ತುಪರಿಸ್ಥಿತಿಯಲ್ಲ, ಆದರೆ ಹರಡುವ ಭೀತಿಯಿದೆ: WHO
ಜಿಲ್ಲೆಯ ಗೋಕಾಕ ತಾಲೂಕಿನ ಅಕ್ಕತಂಗೆರಹಾಳ ಗ್ರಾಮದಿಂದ ಮೂರು ಕ್ರೂಸ್‌ಗಳಲ್ಲಿ ಕಾರ್ಮಿಕ ಬೆಳಗಾವಿಯ ಸಮೀಪದಲ್ಲಿ ನಡೆಯುತ್ತಿರುವ ರೈಲ್ವೆ (ಡಬ್ಲಿಂಗ್) ಟ್ರಾಕ್ ಕಾಮಗಾರಿಗೆ ಹೊರಟಿದ್ದರು. ಒಂದು ಕ್ರೂಸ್‌ನಲ್ಲಿ 18 ಜನರು ಪ್ರಾಯಣಿಸುತ್ತಿದ್ದರು. ಗೋಕಾಕ್ ಮಾರ್ಗದಿಂದ ಅತಿವೇಗವಾಗಿ ಹೋಗುವಾಗ ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಲ್ಯಾಳ ರಸ್ತೆ ಬದಿಯ ಬ್ರಿಡ್ಜ್ ( ಪೂಲ್ )ಗೆ ಡಿಕ್ಕಿ ಹೊಡೆದು ಎರಡು ಬಾರಿ ಪಲ್ಟಿ ಹೊಡೆದು ಬಿದ್ದ ಪರಿಣಾಮ ಸ್ಥಳದಲ್ಲೇ ಏಳು ಜನರ ಸಾವಾಗಿದೆ. ಬೆಳಿಗ್ಗೆ 9.20ರ ಸುಮಾರಿಗೆ ಈ ಅಪಘಾತವಾಗಿದೆ. ಮೃತರೆಲ್ಲರೂ ಗೋಕಾಕ ತಾಲೂಕಿನ ಅಕ್ಕತಂಗೆರಹಾಳ ಮತ್ತು ದಾಸನಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ. ಇನ್ನೂ ಅಪಘಾತವಾದ ಪರಿಣಾಮ ಕ್ರೂಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಮುಂದುವರಿಯುತ್ತಿದೆ. ಕಳೆದ 1 ವಾರದಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 12 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.
ಬುಲೇರೊ ಕಾರ್ ಮತ್ತು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಯುವಕ ಆನಂದ ಮಾದರ (27) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ತಾಲೂಕಿನ ಚಳಮಟ್ಟಿ ಗ್ರಾಮದ ನಿವಾಸಿಯಾಗಿರುವ ಆನಂದ ಕಳೆದ ಮೇ 20 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಕುರಿತು ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಅಣ್ಣಿಗೇರಿ ತಾಲ್ಲೂಕಿನ ಭದ್ರಾಪೂರ ಬಳಿ ನಡೆದ ಮತ್ತೊಂದು ಪ್ರಕರಣದಲ್ಲಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ತಿಮ್ಮಣ್ಣ ಮರಿಗೌಡರ್ (27), ಮುಹಬಕರ್ ಅಲಿ (22), ಜುಬೇಕರ್ (25) ಮತ್ತು ಸುಹೇಬಾ (23) ಗಾಯಗೊಂಡಿದ್ದಾರೆ. ಸುಹೇಬಾಗೆ ಎದೆ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.