Tag: ಕ್ರೂಸರ್

  • ರಸ್ತೆ ಅಪಘಾತಕ್ಕೆ 5ರ ಮಗು ಬಲಿ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

    ರಸ್ತೆ ಅಪಘಾತಕ್ಕೆ 5ರ ಮಗು ಬಲಿ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

    ಹುಬ್ಬಳ್ಳಿ: ಮೇ 20ರಂದು ಧಾರವಾಡ ಜಿಲ್ಲೆಯಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

    ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ 5 ವರ್ಷದ ಮಗು ಸೇರಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ACCIDENT

    ಆರಾಧ್ಯ ಹುತಮಲ್ಲಣ್ಣವರ (5) ಹಾಗೂ ಮುತ್ತು ಮರಿಗೌಡ (16) ಎಂಬವರೇ ಮೃತಪಟ್ಟವರು. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರನ್ನು 6 ದಿನಗಳ ಹಿಂದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಶೀಲ ಶಂಕಿಸಿ ತಲೆ ಹಿಡಿದು ನೆಲಕ್ಕೆ ಜಜ್ಜಿದ ಪತಿ – ಸ್ಥಳದಲ್ಲೇ ಪತ್ನಿ ಸಾವು 

    ಇದೇ ಮೇ 20 ರಂದು ಧಾರವಾಡದ ಬಾಡ ಬಳಿ ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದರು. ಐಸಿಯುನಲ್ಲಿದ್ದ ಇಬ್ಬರು ಇಂದು ಮೃತಪಟ್ಟಿದ್ದು ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

  • ಧಾರವಾಡದಲ್ಲಿ ಮರಕ್ಕೆ ಕ್ರೂಸರ್ ಡಿಕ್ಕಿ – 7 ಮಂದಿ ಸಾವು

    ಧಾರವಾಡದಲ್ಲಿ ಮರಕ್ಕೆ ಕ್ರೂಸರ್ ಡಿಕ್ಕಿ – 7 ಮಂದಿ ಸಾವು

    ಧಾರವಾಡ: ರಾಜ್ಯದಲ್ಲಿ ಒಂದು ಕಡೆ ಮಳೆಯ ಅಬ್ಬರದಿಂದಾಗಿ ಅನಾಹುತಗಳು ಸಂಭವಿಸುತ್ತಿದ್ದರೆ ಇನ್ನೊಂದು ಕಡೆ ಇವತ್ತು ಎರಡು ಭೀಕರ ಅಪಘಾತಗಳು ಸಂಭವಿಸಿದೆ.

    ಧಾರವಾಡದ ಬಾಡಾ ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಮೂವರು ಮಕ್ಕಳು ಸೇರಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮಂಕಿಪಾಕ್ಸ್ ಎಚ್ಚರಿಕೆ – ಅಂತರಾಷ್ಟ್ರೀಯ ಪ್ರವೇಶ ಕೇಂದ್ರಗಳಲ್ಲಿ ಕಣ್ಗಾವಲು

    ACCIDENT (1)

    ಇಂದು ನಡೆಯಬೇಕಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನಸೂರ ಗ್ರಾಮದಿಂದ ಬೆನಕನಟ್ಟಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ಮೃತರನ್ನು ಮಹೇಶ್ವರಯ್ಯ (11), ಅನನ್ಯ (14), ಹರೀಶ್ (12), ಶಿಲ್ಪಾ (34), ನೀಲವ್ವ(60), ಮಧುಶ್ರೀ (20) ಹಾಗೂ ಶಂಭುಲಿಂಗಯ್ಯ (35) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸೆಕ್ಸ್‌ನಿಂದಲೂ ಹರಡಬಹುದು ಮಂಕಿಪಾಕ್ಸ್- ತಜ್ಞರಿಂದ ಎಚ್ಚರಿಕೆ

    ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬೆನ್ನಲ್ಲೇ ಕ್ರೂಸರ್ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ಟೈರ್ ಬ್ಲಾಸ್ಟ್ ಆಗಿ ಕ್ರೂಸರ್ ಪಲ್ಟಿ – ಮಹಿಳೆ ಸಾವು

    ಟೈರ್ ಬ್ಲಾಸ್ಟ್ ಆಗಿ ಕ್ರೂಸರ್ ಪಲ್ಟಿ – ಮಹಿಳೆ ಸಾವು

    ರಾಯಚೂರು: ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ನಡೆದಿದೆ.

    ಕೊಪ್ಪಳದ ಗಿಣಿಗೇರಾ ಮೂಲದ ಲಕ್ಷ್ಮೀದೇವಿ (45) ಮೃತ ಮಹಿಳೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಹತ್ತಿ ಬಿಡಿಸಲು ಕೂಲಿ ಕಾರ್ಮಿಕರನ್ನ ಕ್ರೂಸರ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕ್ರೂಸರ್ ಟೈರ್ ಬ್ಲಾಸ್ಟ್ ಆಗಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಇದನ್ನೂ ಓದಿ: ಜಗತ್ತಿನಲ್ಲಿ ಮೊಟ್ಟ ಮೊದಲು ವಿಮಾನ ಹಾರಿಸಿದವನು ರಾವಣನೇ?- ಲಂಕಾ ಅಧ್ಯಯನ

    ವಾಹನ ಪಲ್ಟಿ ಹೊಡೆದು ಉಲ್ಟಾ ಬಿದ್ದಿದ್ದರಿಂದ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.  ಇದನ್ನೂ ಓದಿ:  ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್

  • ತಿಮ್ಮಪ್ಪನ ದರ್ಶನ ಪಡೆದು ಹಿಂದಿರುಗುತ್ತಿದ್ದ ಭಕ್ತರ ಕ್ರೂಸರ್ ಕ್ಯಾಂಟರ್‌ಗೆ ಡಿಕ್ಕಿ

    ತಿಮ್ಮಪ್ಪನ ದರ್ಶನ ಪಡೆದು ಹಿಂದಿರುಗುತ್ತಿದ್ದ ಭಕ್ತರ ಕ್ರೂಸರ್ ಕ್ಯಾಂಟರ್‌ಗೆ ಡಿಕ್ಕಿ

    ಹಾವೇರಿ: ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಗಂಭೀರ ಗಾಯಗೊಂಡು, ಓರ್ವ ಕ್ರೂಸರ್ ನಲ್ಲಿ ಸಿಕ್ಕು ಪರದಾಡಿದ ಘಟನೆಹಾವೇರಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದೆ.

    ಕ್ರೂಸರ್ ವಾಹನದಲ್ಲಿ ಸಿಲುಕಿ ಪಾರದಾಡುತ್ತಿದ್ದ ವ್ಯಕ್ತಿಯನ್ನ ಸತೀಶ್ ಕಾಸರಕರ (43) ಎಂದು ಗುರುತಿಸಲಾಗಿದೆ. ಕ್ರೂಸರ್ ನಲ್ಲಿ ಕಾಲು ಸಿಲುಕಿದ್ದರಿಂದ ಸತೀಶ್ ಅವರನ್ನ ಹೊರತೆಗೆಯಲು 108 ಸಿಬ್ಬಂದಿ ಹಾಗೂ ಪೊಲೀಸರು ಹರಸಾಹಸ ಪಟ್ಟಿದ್ದಾರೆ.

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಾರಾಷ್ಟ್ರ ಮೂಲದ ಕ್ರೂಸರ್ ವಾಹನ, ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಊರಿಗೆ ತೆರಳುತ್ತಿದ್ದ ಈ ವೇಳೆ ದುರ್ಘಟನೆ ನಡೆದಿದೆ. ಹಾವೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • ಚಿತ್ರದುರ್ಗ ಬಳಿ ಕ್ರೂಸ್‍ರ್, ಬಸ್ ಅಪಘಾತ – ಸಾವಿನ ಸಂಖ್ಯೆ 5ಕ್ಕೆ ಏರಿಕೆ

    ಚಿತ್ರದುರ್ಗ ಬಳಿ ಕ್ರೂಸ್‍ರ್, ಬಸ್ ಅಪಘಾತ – ಸಾವಿನ ಸಂಖ್ಯೆ 5ಕ್ಕೆ ಏರಿಕೆ

    – ಬದುಕು ಕಟ್ಟಿಕೊಳ್ಳಲು ಹೊರಟವರು ಮಾರ್ಗದಲ್ಲೇ ಸಾವು

    ಚಿತ್ರದುರ್ಗ: ಬೆಳಗಿನ ಜಾವ ಸುಮಾರು ಮೂರು ಗಂಟೆಗೆ ಬಿ.ಜಿ.ಕೆರೆ ಗ್ರಾಮದ ಬಳಿ ಬಸ್ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 5ಕ್ಕೇರಿಕೆಯಾಗಿದೆ. ಆರು ಜನರ ಸ್ಥಿತಿ ಗಂಭೀರವಾಗಿದೆ. ಮೃತರೆಲ್ಲರೂ ರಾಯಚೂರು ದೇವದುರ್ಗ ತಾಲೂಕಿನವರು ಎಂದು ತಿಳಿದು ಬಂದಿದೆ.

    ದೇವದುರ್ಗ ತಾಲೂಕಿನ ತಿಮ್ಮಣ್ಣ (40), ರತ್ನಮ್ಮ (38), ಗಜಲಿ ಗ್ರಾಮದ ಮಹೇಶ್ (16), ಸೋಮನಮರಡಿ ದುರುಗಪ್ಪ ಮತ್ತು 55 ವರ್ಷದ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಗಾಯಾಳುಗಳಿಗೆ ಚಳ್ಳಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಮೃತರು ಕ್ರೂಸರ್ ನಲ್ಲಿ ರಾಯಚೂರಿನ ಲಿಂಗಸಗೂರಿನಿಂದ ಬೆಂಗಳೂರಿನತ್ತ ಹೊರಟಿದ್ದರು. ಬೆಳಗಿನ ಜಾವ ಮೂರು ಗಂಟೆಗೆ ರಾಯಚೂರಿನತ್ತ ಹೊರಟಿದ್ದ ಬಸ್ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಕ್ರೂಸರ್ ರಸ್ತೆ ಬದಿ ಸ್ಥಳಾಂತರಿಸಿ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

  • ಕ್ರೂಸರ್, ಕಾರ್ ಮುಖಾಮಖಿ ಡಿಕ್ಕಿ – ಸ್ಥಳದಲ್ಲೇ ನಾಲ್ವರ ಸಾವು

    ಕ್ರೂಸರ್, ಕಾರ್ ಮುಖಾಮಖಿ ಡಿಕ್ಕಿ – ಸ್ಥಳದಲ್ಲೇ ನಾಲ್ವರ ಸಾವು

    – ಅಣ್ಣಿಗೇರಿ ಬಳಿ ಭೀಕರ ಅಪಘಾತ

    ಧಾರವಾಡ: ಕ್ರೂಸರ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾದ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿಯ ಕೊಂಡಿಕೊಪ್ಪ ಕ್ರಾಸ್ ಬಳಿ ಬೆಳಗಿನ ಜಾವ ಸುಮಾರು ಮೂರು ಗಂಟೆಗೆ ಅಪಘಾತ ಸಂಭವಿಸಿದೆ.

    ಸಣ್ಣಗಂಗಣ್ಣ (52), ನಾಗಮ್ಮ (48), ಹನಮಪ್ಪ ಭೋವಿ (37) ಹಾಗೂ ಈರಣ್ಣಾ (24) ಮೃತ ದುರ್ದೈವಿಗಳು. ಮೃತರೆಲ್ಲರೂ ರಾಯಚೂರು ಜಿಲ್ಲೆಯ ಮಾನ್ವಿಯ ವಿಠ್ಠಲ ನಗರ ನಿವಾಸಿಗಳು ಎಂದು ತಿಳಿದು ಬಂದಿದೆ. ಸಣ್ಣ ಈರಣ್ಣ ಮತ್ತು ಲಕ್ಷ್ಮಿ ಎಂಬವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕಾರ್ ಮಾನ್ವಿಯಿಂದ ಕಾರವಾರದ ಹಲಗದ ಆಸ್ಪತ್ರೆಗೆ ಹೋಗುತ್ತಿತ್ತು. ಅಪಘಾತದ ತೀವ್ರತೆಗೆ ಕಾರ್ ನಲ್ಲಿದ್ದ ಆರು ಜನರ ಪೈಕಿ ನಾಲ್ವರು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಕ್ರೂಸರ್ ಚಾಲಕನೂ ಕೂಡಾ ಗಾಯಗೊಂಡಿದ್ದು, ಆತನಿಗೆ ಕೂಡಾ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

     

  • ಮಹಿಳೆಯರ ಜೊತೆ ಅಸಭ್ಯ ವರ್ತನೆ – 9 ಯುವಕರ ಬಂಧನ

    ಮಹಿಳೆಯರ ಜೊತೆ ಅಸಭ್ಯ ವರ್ತನೆ – 9 ಯುವಕರ ಬಂಧನ

    ಚಿತ್ರದುರ್ಗ: ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ 9 ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹರ್ತಿಕೋಟೆ ಬಳಿ ನಡೆದಿದೆ.

    ಚಳ್ಳಕೆರೆ ಮೂಲದ ವಿವೇಕಾನಂದ, ಜಗದೀಶ, ತಿಪ್ಪೇಸ್ವಾಮಿ, ಶಿವಕುಮಾರ್, ವಿರುಪಾಕ್ಷ, ಬಸವರಾಜ, ಸುರೇಶ, ಮಾರುತಿ, ಶಿವಣ್ಣ ಬಂಧಿತ ಆರೋಪಿಗಳು. ಕುಡಿದ ಅಮಲಿನಲ್ಲಿ ಆರೋಪಿಗಳು ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ.

    ಮಹಿಳೆಯರು ಗಾರ್ಮೆಂಟ್ ಕೆಲಸ ಮುಗಿಸಿ ಕ್ರೂಸರ್ ನಲ್ಲಿ ಗ್ರಾಮಕ್ಕೆ ಹಿಂದಿರುಗುತ್ತಿದ್ದರು. ಈ ವೇಳೆ ಕಿಡಿಗೇಡಿಗಳು ಮತ್ತೊಂದು ಕ್ರೂಸರ್ ವಾಹನದಲ್ಲಿ ತೆರಳಿದ್ದಾರೆ. ಗನ್ನಾಯಕನಹಳ್ಳಿಯಿಂದ ಹರ್ತಿಕೋಟೆ ಗ್ರಾಮದವರೆಗೆ ಹಿಂಬಾಲಿಸಿ ದುರ್ವರ್ತನೆ ತೋರಿದ್ದಾರೆ.

    ಹರ್ತಿಕೋಟೆ ಬಳಿ ಕ್ರೂಸರ್ ಚಾಲಕನ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ. ಹಲ್ಲೆಯನ್ನು ಬಿಡಿಸಲು ಹೋದ ಮಹಿಳೆಯರ ಜೊತೆಯೂ ಕಿಡಿಗೇಡಿಗಳು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳೀಯರು ಕಿಡಿಗೇಡಿಗಳಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಐಮಂಗಲ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

  • ಕಾರು, ಕ್ರೂಸರ್ ಮುಖಾಮುಖಿ ಡಿಕ್ಕಿ: ನಾಲ್ವರು ಯುವಕರು ಸ್ಥಳದಲ್ಲೇ ಸಾವು

    ಕಾರು, ಕ್ರೂಸರ್ ಮುಖಾಮುಖಿ ಡಿಕ್ಕಿ: ನಾಲ್ವರು ಯುವಕರು ಸ್ಥಳದಲ್ಲೇ ಸಾವು

    ಚಿತ್ರದುರ್ಗ: ಕಾರು ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಲ್ಕೆರೆ ಗ್ರಾಮ ಬಳಿ ನಡೆದಿದೆ.

    ಈ ಘಟನೆಯಲ್ಲಿ ಕಾರಿನಲ್ಲಿದ್ದ ಅರಸೀಕೆರೆ ಮೂಲದ ಗೌತಮ್ ಸಿಂಗ್, ಮದನ್ ಸಿಂಗ್ ಮತ್ತು ಮುಖೇಶ್ ಸಿಂಗ್ ಸಾವನ್ನಪ್ಪಿದ್ದು, ಕ್ರೂಸರ್ ವಾಹನದಲ್ಲಿದ್ದ ಚಿಕ್ಕಮಗಳೂರು ಜಿಲ್ಲೆ ಮೂಲದ ಲೋಕೇಶ್ ಎಂಬವರು ಸಾವನ್ನಪ್ಪಿದ್ದಾರೆ.

    ಚಿತ್ರದುರ್ಗದ ಗಣೇಶೋತ್ಸಕ್ಕೆ ಬಂದು ತನ್ನ ಕ್ರೂಸರ್ ವಾಹನದಲ್ಲಿ ಹಿಂದಿರುಗುತ್ತಿದ್ದ ಲೊಕೇಶ್, ಮಾರ್ಗ ಮಧ್ಯೆ ಹೊಸದುರ್ಗದಿಂದ ಹಿಂದಿರುಗುತ್ತಿದ್ದ ಇಟಿಯಾಸ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಎರಡು ವಾಹನಗಳು ಸಂಪೂರ್ಣ ನುಜ್ಜಾಗಿವೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  • ಕ್ರೂಸರ್, ಬೈಕ್ ಡಿಕ್ಕಿ- ಬರ್ತ್ ಡೇ ಮುಗಿಸಿ ಬರ್ತಿದ್ದ ಮೂವರ ಸಾವು

    ಕ್ರೂಸರ್, ಬೈಕ್ ಡಿಕ್ಕಿ- ಬರ್ತ್ ಡೇ ಮುಗಿಸಿ ಬರ್ತಿದ್ದ ಮೂವರ ಸಾವು

    ಧಾರವಾಡ: ಕ್ರೂಸರ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಬಳಿ ನಡೆದಿದೆ.

    ಜಿಲ್ಲೆಯ ಹನಸಿ ಗ್ರಾಮದ ಮಹಾಂತೇಶ ನಿಂಗಪ್ಪ ಗುಜ್ಜಳ (26), ಚಂದ್ರಗೌಡ ಶಿವನಗೌಡ ರಾಯನಗೌಡ (28) ಹಾಗೂ ಹೆಬ್ಬಾಳ ಗ್ರಾಮದ ಆನಂದ ನಿಂಗಪ್ಪ ಜೆಟ್ಟೆನವರ (26) ಎಂಬವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

    ರಾತ್ರಿ ಈ ಮೂವರು ಗೆಳೆಯನ ಬರ್ತ್ ಡೇ ಪಾರ್ಟಿಗೆಂದು ನವಲಗುಂದಕ್ಕೆ ಹೋಗಿದ್ದಾರೆ. ಅಲ್ಲಿಯ ಒಂದು ಡಾಬಾದಲ್ಲಿ ಪಾರ್ಟಿ ಮುಗಿಸಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಾರು, ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, 4 ಮಂದಿಗೆ ಗಾಯ

    ಕಾರು, ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, 4 ಮಂದಿಗೆ ಗಾಯ

    ಚಿತ್ರದುರ್ಗ: ಇಂಡಿಕಾ ಕಾರು ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದಿದೆ.

    ಈ ಘಟನೆಯಲ್ಲಿ ರಾಯಚೂರು ಜಿಲ್ಲೆ ಲಿಂಗಸುಗೂರು ಮೂಲದ ಕಾರು ಚಾಲಕ ಹನುಮಂತಪ್ಪ (29) ಸಾವನ್ನಪ್ಪಿದ್ದಾರೆ. ಗಾಯಗೊಂಡ ನಾಲ್ಕು ಜನರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.

    ಈ ಘಟನೆ ತಡರಾತ್ರಿ ನಡೆದಿದ್ದು, ವೇಗವಾಗಿ ಬಂದ ಇಂಡಿಕಾ ಕಾರು ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇಂಡಿಕಾ ಕಾರು ಬಲಭಾಗ ಸಂಪೂರ್ಣ ಜಖಂ ಹಾಗಿದ್ದು, ಕಾರಿಗೆ ಡಿಕ್ಕಿ ಹೊಡೆದ ಕ್ರೂಸರ್ ರಸ್ತೆ ದಾಟಿ ಪಕ್ಕದಲ್ಲಿದ್ದ ಪೊದೆಯೊಳಗೆ ಹೋಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಆನಂದ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.