Tag: ಕ್ರೂಸರ್

  • ದೇವರ ದರ್ಶನ ಪಡೆದು ಬರುತ್ತಿದ್ದ ಕ್ರೂಸರ್ ಪಲ್ಟಿ- 12 ಮಂದಿ ಗಂಭೀರ

    ದೇವರ ದರ್ಶನ ಪಡೆದು ಬರುತ್ತಿದ್ದ ಕ್ರೂಸರ್ ಪಲ್ಟಿ- 12 ಮಂದಿ ಗಂಭೀರ

    ವಿಜಯಪುರ: ದೇವರ ದರ್ಶನ ಪಡೆದು ವಾಪಾಸ್ ಬರುತ್ತಿದ್ದ ವೇಳೆ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ಕ್ರೂಸರ್ ಪಲ್ಟಿಯಾಗಿದೆ.

    ಇಂಡಿ ತಾಲೂಕಿನ ಧೂಳಖೇಡ ಬಳಿಯ ಚಾಚಾ ದಾಬಾದ ಹತ್ತಿರ ಈ ಅಪಘಾತ ಸಂಭವಿಸಿದೆ. ತುಳಜಾಪುರಕ್ಕೆ ಹೋಗಿ ವಾಪಸ್ಸು ಬರುವಾಗ ಘಟನೆ ನಡೆದಿದ್ದು, ಈ ಅಪಘಾತದಲ್ಲಿ ಮದುವೆಯ ನಂತರ ದೇವಸ್ಥಾನಕ್ಕೆ ಹೋಗಿದ್ದ ನವ ದಂಪತಿ ಕೂಡ ಗಾಯಗೊಂಡಿದ್ದಾರೆ. ಜೊತೆಗೆ ವಾಹನದಲ್ಲಿದ್ದ 12 ಮಂದಿ ಗಂಭೀರ ಗಾಯಗೊಂಡಿದ್ದಾರೆ.

    ರಾಷ್ಟೀಯ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಕ್ರೂಸರ್ ಚಾಲಕ ಮುಂದಾಗಿದ್ದನು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಏಕಾಏಕಿ ಪಲ್ಟಿಯಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

  • ಗೋವಾದಿಂದ ವಾಪಸ್ಸಾಗ್ತಿದ್ದಾಗ ಕ್ಯಾಂಟರ್‌ಗೆ ಡಿಕ್ಕಿ- ಕ್ರೂಸರ್‌ನಲ್ಲಿದ್ದ 9 ಮಂದಿ ಸಾವು

    ಗೋವಾದಿಂದ ವಾಪಸ್ಸಾಗ್ತಿದ್ದಾಗ ಕ್ಯಾಂಟರ್‌ಗೆ ಡಿಕ್ಕಿ- ಕ್ರೂಸರ್‌ನಲ್ಲಿದ್ದ 9 ಮಂದಿ ಸಾವು

    ವಿಜಯಪುರ: ಬೆಳ್ಳಂಬೆಳಗ್ಗೆ ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಸರ್‌ನಲ್ಲಿದ್ದ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಈ ಘಟನೆ ವಿಜಯಪುರದ ಸಿಂದಗಿ ತಾಲೂಕಿನ ಚಿಕ್ಕಸಿಂಧಗಿ ಗ್ರಾಮದ ಬಳಿ ಕ್ಯಾಂಟರ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಾಗರ್(25), ಚಾಂದಬಾಶಾ(26), ಅಜೀಮ್(25), ಅಂಬರೀಶ್(27), ಶಕೀರ್(28), ಗುರು(32), ಶ್ರೀನಾಥ(ಕ್ರೂಸರ್‌ ಡ್ರೈವರ್ 30), ಯುನೂಸ್(27), ಮಂಗಸಾಬ್(27) ಮೃತರನ್ನು ಗುರುತಿಸಲಾಗಿದೆ.

    ಅಪಘಾತದಿಂದಾಗಿ ಮಲ್ಲಿಕಾರ್ಜುನ, ಮಂಜು ಸದ್ದಾಂ, ಸಾಜೀದ್ ಎಂಬ ಮೂವರಿಗೆ ಗಂಭೀರ ಗಾಯಗಳಾಗಿವೆ. ಕ್ಯಾಂಟರ್‌ನಲ್ಲಿದ್ದ ಇಬ್ಬರಿಗೂ ಗಾಯಗಳಾಗಿದ್ದು, ಎಲ್ಲರನ್ನೂ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಮೃತರು ಎಲ್ಲರು ಕಲಬುರಗಿ ಜಿಲ್ಲೆ ಚಿತ್ತಾಪುರ ಗ್ರಾಮದವರು ಎಂದು ತಿಳಿದುಬಂದಿದ್ದು, ಕಳೆದ 19ರಂದು ಮೋಜಿಗಾಗಿ ಗೋವಾಗೆ ತೆರಳಿದ್ದರು ಎನ್ನಲಾಗಿದೆ. ಗೋವಾದಿಂದ ಚಿತ್ತಾಪುರಕ್ಕೆ ಮರಳುತ್ತಿದ್ದ ಸಂದರ್ಭದಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

    ಕ್ಯಾಂಟರ್ ಚಾಲಕ ಆಕಾಶ ದೊರೆ ಹಾಗೂ ಆನಂದ್‍ಗೆ ಕೂಡ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ರೂಸರ್ ವಾಹನ ಚಾಲಕ ಕುಡಿದ ಮತ್ತಿನಲ್ಲಿ, ನಿದ್ರೆಗೆ ಜಾರಿದ್ದೆ ಅಪಘಾತಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

  • ಕ್ರೂಸರ್, ಕ್ಯಾಂಟರ್ ಡಿಕ್ಕಿ- 9 ಮಂದಿ ದಾರುಣ ಸಾವು

    ಕ್ರೂಸರ್, ಕ್ಯಾಂಟರ್ ಡಿಕ್ಕಿ- 9 ಮಂದಿ ದಾರುಣ ಸಾವು

    ವಿಜಯಪುರ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಕ್ರೂಸರ್-ಕ್ಯಾಂಟರ್ ಡಿಕ್ಕಿಯಾಗಿ 9 ಜನ ಮೃತಪಟ್ಟಿದ್ದಾರೆ.

    ವಿಜಯಪುರ ಜಿಲ್ಲೆಯ ಚಿಕ್ಕಸಿಂದಗಿ ಬಳಿ ಈ ಘಟನೆ ನಡೆದಿದೆ. ಕ್ರೂಸರ್ ಹಾಗೂ ಕ್ಯಾಂಟರ್ ಪರಸ್ಪರ ಡಿಕ್ಕಿಯಾಗಿದೆ. ಪರಿಣಾಮ 9 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕಲಬುರಗಿ ಜಿಲ್ಲೆಯ ಚಿತ್ತಪೂರದವರು ಎಂದು ಹೇಳಲಾಗುತ್ತಿದೆ.

    ಕ್ಯಾಂಟರ್ ಸಿಂದಗಿ ಮೂಲಕ ವಿಜಯಪುರಕ್ಕೆ ಬರುತ್ತಿತ್ತು. ಇತ್ತ ಕ್ರೂಸರ್ ನಲ್ಲಿದ್ದ ಪ್ರಯಾಣಿಕರು ಗೋವಾದಲ್ಲಿ ಪಾರ್ಟಿ ಮುಗಿಸಿ ಹಿಂತಿರುಗುವಾಗ ಈ ಘಟನೆ ನಡೆದಿದೆ. ಅಲ್ಲದೆ ಕ್ರೂಸರ್ ನಲ್ಲಿ 15 ಮಂದಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಅದರಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸಿಂದಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಅಪಘಾತದಿಂದಾಗಿ ವಾಹನ ಸಂಪೂರ್ಣ ನಜ್ಜುಗುಜ್ಜು ಆಗಿದ್ದು, ಪರಿಣಾಮ ಮೃತರ ಗುರುತು ಸಿಗುತ್ತಿಲ್ಲ. ಸದ್ಯ ಈ ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕಿದೆ.

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

  • ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕ್ರೂಸರ್- ಎರಡು ಸಾವು, 15 ಮಂದಿಗೆ ಗಾಯ

    ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕ್ರೂಸರ್- ಎರಡು ಸಾವು, 15 ಮಂದಿಗೆ ಗಾಯ

    ರಾಯಚೂರು: ಬೈಕ್ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತವಾಗಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿರವಾರ ತಾಲೂಕಿನ ಪಾತಾಪೂರ ಗ್ರಾಮದ ಬಳಿ ನಡೆದಿದೆ.

    ಚಂದಪ್ಪ ಮೃತ ಬೈಕ್ ಸವಾರ. ಮೃತ ಹಿಂಬದಿ ಬೈಕ್ ಸವಾರನ ಗುರುತು ತಿಳಿದು ಬಂದಿಲ್ಲ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತುಂಗಳ ಮಠ ಗ್ರಾಮದಿಂದ ಶ್ರೀ ಶೈಲಕ್ಕೆ ಹೊರಟಿದ್ದ ಕ್ರೂಸರ್ ಬೈಕ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪಲ್ಟಿಯಾಗಿದ್ದರಿಂದ ಕ್ರೂಸರ್ ನಲ್ಲಿದ್ದ 15 ಜನರು ಗಾಯಗೊಂಡಿದ್ದಾರೆ.

    ಈ ಸಂಬಂಧ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮರಕ್ಕೆ ಕ್ರೂಸರ್ ಡಿಕ್ಕಿ – ವ್ಯಕ್ತಿ ದಾರುಣ ಸಾವು

    ಮರಕ್ಕೆ ಕ್ರೂಸರ್ ಡಿಕ್ಕಿ – ವ್ಯಕ್ತಿ ದಾರುಣ ಸಾವು

    ಕಾರವಾರ: ಕ್ರೂಸರ್ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, 10 ಮಂದಿಗೆ ಗಾಯಗಳಾದ ಘಟನೆ ಕಾರವಾರ ತಾಲೂಕಿನ ಚಂಡ್ಯಾ ಗ್ರಾಮದ ಬಳಿ ನಡೆದಿದೆ.

    ಮೃತ ದುರ್ದೈವಿಯನ್ನು ನಿಂಗಪ್ಪ ಹನುಮಂತಪ್ಪ (52)ಎಂದು ಗುರುತಿಸಲಾಗಿದೆ. ಕುಷ್ಟಗಿಯಿಂದ ಗೋವಾಕ್ಕೆ ತೆರಳುತ್ತಿದ್ದ ವಾಹನ ಅತೀ ವೇಗದಲ್ಲಿ ಸಂಚರಿಸುತ್ತಿದ್ದು ನಿದ್ದೆ ಮಂಪರಿನಲ್ಲಿದ್ದರಿಂದ ಕ್ರೂಸರ್, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಕಾರವಾರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

  • ಕ್ರೂಸರ್, ಟ್ರಕ್ ನಡುವೆ ಡಿಕ್ಕಿ- ಐವರು ಸಾವು, 8 ಮಂದಿಗೆ ಗಾಯ

    ಕ್ರೂಸರ್, ಟ್ರಕ್ ನಡುವೆ ಡಿಕ್ಕಿ- ಐವರು ಸಾವು, 8 ಮಂದಿಗೆ ಗಾಯ

    ಚಿತ್ರದುರ್ಗ: ಕ್ರೂಸರ್, ಟ್ರಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು, 8 ಮಂದಿಗೆ ಗಾಯವಾಗಿರುವ ಘಟನೆ ಚಿತ್ರದುರ್ಗ ಹೊರವಲಯದ ಸಿಬಾರದಲ್ಲಿ ನಡೆದಿದೆ.

    ಸಿದ್ದಾರ್ಥ, ರಾಕೇಶ್, ಶಿವಲಿಂಗು, ವಿನೋದ್ ಹಾಗು ಕ್ರೂಸರ್ ಚಾಲಕ ಶಿವಲಿಂಗು ಮೃತ ದುರ್ದೈವಿಗಳು. ಇಂದು ಬೆಳಗ್ಗೆ 7:30ಕ್ಕೆ ಈ ಅಪಘಾತದಲ್ಲಿ ಸಂಭವಿಸಿದೆ. ಮೃತರು ಸುಮಾರು 18 ರಿಂದ 24 ವರ್ಷದೊಳಗಿನ ಯುವಕರು ಎಂದು ಹೇಳಲಾಗಿದ್ದು, ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮುನ್ಯಾಳು ಗ್ರಾಮದವರು ಎಂದು ತಿಳಿದುಬಂದಿದೆ. ಮೈಸೂರು ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಈ ಅವಘಡ ನಡೆದಿದೆ.

    8 ಮಂದಿ ಗಾಯಾಳುಗಳು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮರಕ್ಕೆ ಕ್ರೂಸರ್ ಡಿಕ್ಕಿ- ಪ್ರವಾಸಕ್ಕೆ ಹೋಗಿದ್ದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಗಂಭೀರ ಗಾಯ

    ಮರಕ್ಕೆ ಕ್ರೂಸರ್ ಡಿಕ್ಕಿ- ಪ್ರವಾಸಕ್ಕೆ ಹೋಗಿದ್ದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಗಂಭೀರ ಗಾಯ

    ಚಿತ್ರದುರ್ಗ: ಶೈಕ್ಷಣಿಕ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಹುಳಿಯಾರು ರಸ್ತೆಯಲ್ಲಿ ನಡೆದಿದೆ.

    ಬುಧವಾರ ಬೆಳಗಿನ ಜಾವ ಈ ಘಟನೆ ಸಂಭವಿಸಿದ್ದು, ಗಾಯಗೊಂಡವರು ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಹಟ್ಟಿ ಚಿನ್ನದಗಣಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

    ಕ್ರೂಸರ್ ವಾಹನದಲ್ಲಿದ್ದ ಮೂರು ಮಂದಿ ಶಿಕ್ಷಕರು, ಡ್ರೈವರ್, ಅಡುಗೆ ಕೆಲಸದವನು ಸೇರಿದಂತೆ ಒಟ್ಟು 16 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಹಿರಿಯೂರು ತಾಲೂಕು ಆಸ್ಪತ್ರೆ, ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆ ಹಾಗೂ ದಾವಣಗೆರೆ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

    ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಡ್ರೈವರ್ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಶ್ರೀನಿವಾಸ್ ಎಂಬ ಮತ್ತೊಬ್ಬ ವ್ಯಕ್ತಿ ವಾಹನ ಚಲಾಯಿಸುತ್ತಿದ್ದರು ಎಂದು ಶಿಕ್ಷಕ ಲಿಂಗಪ್ಪ ಪೂಜಾರ್ ತಿಳಿಸಿದ್ದಾರೆ.

    ಅಪಘಾತವಾದ ನಂತರ ನಮಗೆ ಎಚ್ಚರವಾಯಿತು, ಅಪಘಾತ ಯಾಕೆ ಸಂಭವಿಸಿದೆ ಎಂಬ ಬಗ್ಗೆ ಮಾಹಿತಿ ಇಲ್ಲ ಲಿಂಗಪ್ಪ ಪೂಜಾರ್ ಪ್ರತಿಕ್ರಿಯಿಸಿದ್ದಾರೆ.

     

  • ಸೇತುವೆಗೆ ಡಿಕ್ಕಿ ಹೊಡೆದ ಕ್ರೂಸರ್ – ಸ್ಥಳದಲ್ಲೇ ಇಬ್ಬರ ಸಾವು

    ಸೇತುವೆಗೆ ಡಿಕ್ಕಿ ಹೊಡೆದ ಕ್ರೂಸರ್ – ಸ್ಥಳದಲ್ಲೇ ಇಬ್ಬರ ಸಾವು

    ತುಮಕೂರು: ಕ್ರೂಸರ್ ವಾಹನ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ.

    ಮಂಜುನಾಥ್(35), ಮೊಹಮ್ಮದ್ ನೇಮತ್ ಉಲ್ಲಾ (42) ಮೃತ ದುರ್ದೈವಿಗಳಾಗಿದ್ದು, ಮೂಲತಃ ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದೆ.

    ಹಿರಿಯೂರು ಕಡೆಯಿಂದ ಬರುತ್ತಿದ್ದ ಕ್ರೂಸರ್ ವಾಹನ ಶಿರಾ ಪಟ್ಟಣ ಆಂಜನೇಯ ದೇವಾಲಯದ ಬಳಿ ಇರುವ ಸೇತುವೆಗೆ ಡಿಕ್ಕಿ ಹೊಡೆದಿದೆ. ಕ್ರೂಸರ್ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನದಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಈ ವೇಳೆ ಕ್ರೂಸರ್ ನಲ್ಲಿ ಐದು ಜನ ಪ್ರಯಾಣಿಸುತ್ತಿದ್ದು, ಶೇಖ್ ಅಬ್ದುಲ್ಲಾ, ಅಫ್ರಿದ್, ಖಲಂದರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಕುರಿತು ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಕ್ರೂಸರ್-ಬಸ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 6 ಮಂದಿ ಸಾವು

    ಕ್ರೂಸರ್-ಬಸ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 6 ಮಂದಿ ಸಾವು

    ಬಾಗಲಕೋಟೆ: ಕ್ರೂಸರ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್ ನಲ್ಲಿ ನಡೆದಿದೆ.

    ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು ಅವರಿನ್ನ ಬೀಳಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಾರಾಷ್ಟ್ರ ಪಾಸಿಂಗ್ ಇರುವ ಕ್ರೂಸರ್ ಹಾಗೂ ವಿಜಯಪುರದಿಂದ ಹುಬ್ಬಳಿ ಮಾರ್ಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಈ ದುರಂತ ನಡೆದಿದೆ.

    ಅಪಘಾತ ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ 12 ಮಂದಿಗೆ ಗಾಯ

    ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ 12 ಮಂದಿಗೆ ಗಾಯ

    ದಾವಣಗೆರೆ: ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ 12 ಮಂದಿಗೆ ಗಾಯಗಳಾದ ಘಟನೆ ನಡೆದಿದೆ.

    ಜಗಳೂರು ತಾಲೂಕಿನ ದೇವಿಕೆರೆ ಬಳಿ ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ. ಇಬ್ಬರು ಚಿಕ್ಕಮಕ್ಕಳು ಸೇರಿದಂತೆ ಆರು ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಾಳುಗಳನ್ನು ದಾವಣಗೆರೆ ನಿಟ್ಟುವಳ್ಳಿಯ ಶ್ರಿನಿವಾಸ್, ಪರಶುರಾಮ, ದೀಪಿಕಾ, ಮಹಾಲಕ್ಷ್ಮಿ, ರೇಣುಕಮ್ಮ, ಸಿಂಚನಾ, ಇಂಚರಾ, ರವಿಕುಮಾರ್, ನೇತ್ರಾವತಿ, ಶಶಿಕಲಾ, ಮಣಿ, ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ.

    ಪಾವಗಡ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ದೇವಿಕೆರೆ ಸಮೀಪ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಕ್ರೂಸರ್ ನ ಮುಂಭಾಗದಲ್ಲಿ ಕುಳಿತವರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ದಾವಣಗೆರೆ ಬಾಪೂಜೆ, ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಸಂಬಂಧ ಜಗಳೂರು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.