Tag: ಕ್ರೂಸರ್

  • ಕೆಟ್ಟು ನಿಂತಿದ್ದ ಟೆಂಪೋಗೆ ಕ್ರೂಸರ್ ಡಿಕ್ಕಿ- ಇಬ್ಬರು ಸಾವು

    ಕೆಟ್ಟು ನಿಂತಿದ್ದ ಟೆಂಪೋಗೆ ಕ್ರೂಸರ್ ಡಿಕ್ಕಿ- ಇಬ್ಬರು ಸಾವು

    ಕೋಲಾರ: ಕೆಟ್ಟು ನಿಂತಿದ್ದ ಟೆಂಪೋಗೆ ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತವಾಗಿದ್ದು, ಇಬ್ಬರು ಸಾವನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ಕೋಲಾರ ತಾಲೂಕು ರಾಷ್ಟ್ರೀಯ ಹೆದ್ದಾರಿ 75 ರ ಕೆಂದಟ್ಟಿ ಬಳಿ ಈ ಘಟನೆ ನಡೆದಿದೆ. ಕೆಟ್ಟು ನಿಂತಿದ್ದ ಮೀನು ತುಂಬಿದ್ದ ಟೆಂಪೋಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ರಿಪೇರಿ ಮಾಡುತ್ತಿದ್ದ ಆಂಧ್ರದ ಪಲಮನೇರು ಮೂಲದ ಸೋಮಶೇಖರ್(28) ಹಾಗೂ ಚರಣ್ (30) ಸಾವನ್ನಪ್ಪಿದ್ದಾರೆ.

    ಘಟನೆಯಲ್ಲಿ ಕೋಲಾರ ತಾಲೂಕು ಚಿಕ್ಕ ಹಸಾಳ ಗ್ರಾಮದ ನಾಗೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.

    ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

  • ರಸ್ತೆ ದಾಟುವಾಗ ಬೈಕ್‍ಗೆ ಕ್ರೂಸರ್ ಡಿಕ್ಕಿ, ಇಬ್ಬರ ಸಾವು- ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ರಸ್ತೆ ದಾಟುವಾಗ ಬೈಕ್‍ಗೆ ಕ್ರೂಸರ್ ಡಿಕ್ಕಿ, ಇಬ್ಬರ ಸಾವು- ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಚಿಕ್ಕಮಗಳೂರು: ರೋಡ್ ಕ್ರಾಸ್ ಮಾಡುವಾಗ ಕ್ರೂಸರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್‍ನಲ್ಲಿದ್ದವರು ಸಿನಿಮೀಯ ರೀತಿಯಲ್ಲಿ ಹಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

    ಸೋಮವಾರ ಬೆಳಗ್ಗೆ ಕೊಪ್ಪದ ಪಟ್ಟಣ ಪಂಚಾಯ್ತಿ ಮುಂಭಾಗ ಬೈಕ್‍ನಲ್ಲಿ ಬರ್ತಿದ್ದ ಬಾವ-ಮೈದುನ ವೆಂಕಟೇಶ್ ಹಾಗೂ ರಾಮಪ್ಪ ರೋಡ್ ಕ್ರಾಸ್ ಮಾಡಲು ಮುಂದಾದ್ರು. ಈ ವೇಳೆ ಎದುರುಗಡೆಯಿಂದ ಬಂದ ಕ್ರೂಸರ್ ನೇರವಾಗಿ ಬೈಕಿಗೆ ಡಿಕ್ಕಿ ಹೊಡಿದಿತ್ತು. ಡಿಕ್ಕಿಯ ರಭಸಕ್ಕೆ ಸಿನಿಮೀಯ ರೀತಿಯಲ್ಲಿ ಇಬ್ಬರು ಬೈಕ್‍ನಿಂದ ಹಾರಿ ಬಿದ್ದು ಮೃತಪಟ್ಟಿದ್ದಾರೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡುಗರ ಮೈ ಜುಮ್ಮೆನಿಸುವಂತಿದೆ.

    ಒಟ್ಟಿನಲ್ಲಿ ಬೈಕ್ ಓಡಿಸೋರು ಒಂದು ಕ್ಷಣ ಮೈಮರೆತ್ರೂ ಏನೆಲ್ಲಾ ಆಗುತ್ತೆ ಅನ್ನೋದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಕೊಪ್ಪಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    https://youtu.be/Gwl_eFkFYzQ

  • ರಾಯಚೂರಿನಲ್ಲಿ ಇಂದೇ ಮತ್ತೊಂದು ದುರಂತ: ಕ್ರೂಸರ್ ಪಲ್ಟಿಯಾಗಿ ಐವರ ದುರ್ಮರಣ

    ರಾಯಚೂರಿನಲ್ಲಿ ಇಂದೇ ಮತ್ತೊಂದು ದುರಂತ: ಕ್ರೂಸರ್ ಪಲ್ಟಿಯಾಗಿ ಐವರ ದುರ್ಮರಣ

    ರಾಯಚೂರು: ಸಿಂಧನೂರು ತಾಲೂಕಿನ ದಡೆಸುಗೂರು ಬಳಿ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐದು ಜನ ಮೃತಪಟ್ಟ ಘಟನೆಯ ಬೆನ್ನಲ್ಲೇ ಇದೀಗ ಮತ್ತೊಂದು ಅಪಘಾತ ನಡೆದಿದೆ.

    ರಾಯಚೂರಿನ ದೇವದುರ್ಗ ತಾಲೂಕಿನ ಪಿಲಗುಂಡ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಐದು ಜನ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅರಕೇರಾ ಸರ್ಕಾರಿ ಆಸ್ಪತ್ರೆ ಹಾಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಗಾಯಾಳುಗಳನ್ನ ದಾಖಲಿಸಲಾಗಿದೆ.

    ಮೃತರನ್ನು ಬಸವರಾಜ,(35) , ಪಾಂಡುರಂಗ (13), ಮುತ್ತಣ್ಣ (35) ಹಾಗೂ ಅಯ್ಯಣ್ಣ(34) ಎಂದು ಗುರುತಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ.

    ಇದನ್ನೂ ಓದಿ: ಲಾರಿ-ಕಾರು ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಐವರ ದುರ್ಮರಣ

    ಮೃತರೆಲ್ಲಾ ದೇವದುರ್ಗ ತಾಲೂಕಿನ ಅರಕೇರಾ ಹಾಗೂ ಪಿಲಗುಂಡಾ ಗ್ರಾಮದವರಾಗಿದ್ದಾರೆ. ದೇವದುರ್ಗದಿಂದ ಸಿರವಾರ ಕಡೆಗೆ ಪ್ರಯಾಣಿಕರನ್ನ ಕರೆದ್ಯೊಯ್ಯುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

    ಘಟನೆ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಎರಡು ಅಪಘಾತಗಳಿಂದ ಒಟ್ಟು 10 ಜನ ಸಾವನ್ನಪ್ಪಿದ್ದಾರೆ.