Tag: ಕ್ಲೈಮ್ಯಾಕ್ಸ್

  • ‘ಮ್ಯಾಕ್ಸ್’ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ನಲ್ಲಿ ಕಿಚ್ಚ

    ‘ಮ್ಯಾಕ್ಸ್’ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ನಲ್ಲಿ ಕಿಚ್ಚ

    ಕ್ರಿಕೆಟ್, ಬಿಗ್ ಬಾಸ್ ನಡುವೆಯೂ ನಿರೀಕ್ಷಿತ ಮ್ಯಾಕ್ಸ್ (Max) ಸಿನಿಮಾದ ಚಿತ್ರೀಕರಣ ಮುಗಿಸುತ್ತಿದ್ದಾರೆ ಕಿಚ್ಚ ಸುದೀಪ್. ಸದ್ಯ ಈ ಸಿನಿಮಾದ ಕ್ಲೈಮ್ಯಾಕ್ಸ್ (Climax) ಶೂಟಿಂಗ್ ನಡೆದಿದ್ದು, ಈ ಭಾಗದ ಚಿತ್ರೀಕರಣದಲ್ಲಿ (Shooting) ಸುದೀಪ್ ಭಾಗಿಯಾಗಿದ್ದಾರೆ.  ಅಂದುಕೊಂಡ ತಿಂಗಳಲ್ಲೇ ಸಿನಿಮಾ ತೆರೆಗೆ ತರಬೇಕಾಗಿದ್ದರಿಂದ ಚಿತ್ರೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದಾರಂತೆ.

    ‘ಮ್ಯಾಕ್ಸ್’ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಮಾಡಿದ ಮೇಲೆ ಸಿನಿಮಾ ಬಗ್ಗೆ ಯಾವುದೇ ಅಪ್‌ಡೇಟ್ ಸಿಕ್ಕಿರಲಿಲ್ಲ. ಈ ಕುರಿತಂತೆ ಚಿತ್ರದ ಕೆಲಸ ಎಲ್ಲಿಯವರೆಗೂ ಬಂತು ಎಂದು ಸ್ವತಃ ಸುದೀಪ್ (Sudeep) ಅವರೇ ಮೊನ್ನೆ ಮಾಹಿತಿ ನೀಡಿದ್ದರು.

    ಬಹುನಿರೀಕ್ಷಿತ ಮ್ಯಾಕ್ಸ್ ಬಗ್ಗೆ ಸುದೀಪ್ ಮಾಹಿತಿ ನೀಡುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದರು. ‘ಸಂಕ್ರಾಂತಿ’ ನಂತರ ಮ್ಯಾಕ್ಸ್ ಸಿನಿಮಾದ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭ ಮಾಡುತ್ತಿದ್ದೇವೆ. ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ. ಚಿತ್ರದ ಉಳಿದ ಭಾಗಗಳ ಚಿತ್ರೀಕರಣ ಪ್ರಗತಿಯಲ್ಲಿದೆ ಎಂದು ಮೊನ್ನೆಯಷ್ಟೇ ಮಾಹಿತಿ ಹಂಚಿಕೊಂಡಿದ್ದರು.

     

    ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಅಭಿಮಾನಿಗಳು ಪದೇ ಪದೇ ಅಪ್‌ಡೇಟ್ ಕೇಳುತ್ತಿದ್ದರು. ನಿಮ್ಮ ಪ್ರೀತಿ, ಕ್ಯೂರಿಯಾಸಿಟಿ ನನಗೆ ಅರ್ಥವಾಗುತ್ತದೆ. ಆದರೆ, ಸಿನಿಮಾ ಶೂಟ್ ಪೂರ್ಣಗೊಳ್ಳದೆ ಆ ಬಗ್ಗೆ ಅಪ್‌ಡೇಟ್ ನೀಡೋದು ಹೇಗೆ ಅನ್ನೋದು ಸುದೀಪ್ ಅವರ ಪ್ರಶ್ನೆಯಾಗಿತ್ತು. ನವೆಂಬರ್‌ನಲ್ಲಿ ಮಳೆಯಿಂದ ಶೂಟ್ ಮಾಡಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್‌ನಲ್ಲಿ ಕೆಲವು ಅಡೆತಡೆಗಳು ಎದುರಾದವು. ಈಗ ಸಂಕ್ರಾಂತಿ ಬಳಿಕ ಮತ್ತೆ ‘ಮ್ಯಾಕ್ಸ್’ ಶೂಟಿಂಗ್ ಶುರು ಆಗಿದೆ ಎಂದು ತಿಳಿಸಿದ್ದರು.

  • ಸ್ವರ್ಣಮುಖಿ ನದಿಯ ತಟದಲ್ಲಿ ಪುಷ್ಪ 2 ಚಿತ್ರದ ಕ್ಲೈಮ್ಯಾಕ್ಸ್

    ಸ್ವರ್ಣಮುಖಿ ನದಿಯ ತಟದಲ್ಲಿ ಪುಷ್ಪ 2 ಚಿತ್ರದ ಕ್ಲೈಮ್ಯಾಕ್ಸ್

    ಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 ಸಿನಿಮಾದ ಶೂಟಿಂಗ್ ಕುಂಟುತ್ತಾ ಸಾಗಿದೆ. ಸದ್ಯ ಚಿತ್ರದ ಕ್ಲೈಮ್ಯಾಕ್ಸ್ (Climax) ದೃಶ್ಯದ ಚಿತ್ರೀಕರಣವನ್ನು ಮಾಡಲು ನಿರ್ದೇಶಕ ಸುಕುಮಾರನ್ (Sukumaran) ಪ್ಲ್ಯಾನ್ ಮಾಡಿದ್ದು, ಅದೊಂದು ರೋಮಾಂಚನಕಾರಿ ನೀಡುವಂತಹ ಸನ್ನಿವೇಶವಾಗಿದೆ ಎಂದು ಹೇಳಲಾಗುತ್ತಿದೆ. ಈ ದೃಶ್ಯವನ್ನು ತಿರುಪತಿ ಜಿಲ್ಲೆಯ ಪೂರ್ವ ಘಟ್ಟದಲ್ಲಿರುವ ಸ್ವರ್ಣಮುಖಿ (Swarnamukhi) ನದಿಯ ತೀರದಲ್ಲಿ ಶೂಟ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

    ಕ್ಲೈಮ್ಯಾಕ್ಸ್ ಸನ್ನಿವೇಶದಲ್ಲಿ ಅಲ್ಲು ಅರ್ಜುನ್ ಜೊತೆ ಫಾಸಿಲ್ ಕೂಡ ಭಾಗಿಯಾಗಲಿದ್ದಾರಂತೆ. ಈ ದೃಶ್ಯಕ್ಕೆ ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ರಕ್ತ ಚಂದನವನ್ನು ಕಳ್ಳ ಮಾರ್ಗದಲ್ಲಿ ಸಾಗಿಸುವ ಪುಷ್ಪರಾಜನ ವಿರುದ್ಧ ಭನ್ವಿರ್ ಸಿಂಗ್ ಮಾಡುವ ದಾಳಿಯೇ ಕ್ಲೈಮ್ಯಾಕ್ಸ್ ದೃಶ್ಯ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಗುಂಟೂರು ಖಾರ ಸವಿಯಲು ಬರುತ್ತಿದ್ದಾರೆ ರಮ್ಯಾ ಕೃಷ್ಣ

    ಈ ನಡುವೆ ‘ಪುಷ್ಪ 2’ (Pushpa 2) ಸಿನಿಮಾದ ಆಡಿಯೋ (Audio) ಹಕ್ಕು (Right) ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆ. ಈವರೆಗೂ ದಾಖಲಾಗಿದ್ದ ಎಲ್ಲ ಮೊತ್ತವನ್ನೂ ಅದು ಹಿಂದಿಕ್ಕಿದ್ದು ಟಿ ಸೀರಿಸ್ ಕಂಪೆನಿಯು 65 ಕೋಟಿ ರೂಪಾಯಿ ಹಣ ನೀಡಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ ಎಂದು ವರದಿಯಾಗಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಸೇರಿದಂತೆ ರಿಲೀಸ್ ಆಗುವ ಅಷ್ಟು ಭಾಷೆಗಳಿಗೆ ಈ ಹಕ್ಕು ಅನ್ವಯಿಸಲಿದೆ.

     

    ಈ ಹಿಂದೆ ರಿಲೀಸ್ ಆಗಿರುವ ಬಾಹುಬಲಿ ಚಿತ್ರದ ಆಡಿಯೋ ಹಕ್ಕು ಹತ್ತು ಕೋಟಿ ಸೇಲ್ ಆಗಿತ್ತು. ಆರ್.ಆರ್.ಆರ್ ಆಡಿಯೋ ಹಕ್ಕು 25 ಕೋಟಿಗೆ ಬಿಕರಿ ಆಗಿತ್ತು. ಸಾಹೋ ಸಿನಿಮಾದ ಆಡಿಯೋ ಹಕ್ಕು ಕೂಡ 22 ಕೋಟಿಗೆ ಸೇಲ್ ಆಗಿತ್ತು. ಈ ಎಲ್ಲ ದಾಖಲೆಗಳನ್ನೂ ಪುಷ್ಪ 2 ಸಿನಿಮಾ ಮುರಿದಿದೆ. ಅಲ್ಲದೇ, ಓಟಿಟಿಗೂ ಭಾರೀ ಮೊತ್ತಕ್ಕೆ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ.

  • ಕ್ಲೈಮ್ಯಾಕ್ಸ್ ತಲುಪಿದ ‘ಅನ್ ಲಾಕ್ ರಾಘವ’ ಸಿನಿಮಾ

    ಕ್ಲೈಮ್ಯಾಕ್ಸ್ ತಲುಪಿದ ‘ಅನ್ ಲಾಕ್ ರಾಘವ’ ಸಿನಿಮಾ

    ವಿಭಿನ್ನವಾದ ಟೈಟಲ್ ನಿಂದ ಗಮನ ಸೆಳೆದಿರುವ ‘ಅನ್ ಲಾಕ್ ರಾಘವ’ (Unlock Raghava) ಸಿನಿಮಾದ  ಕ್ಲೈಮ್ಯಾಕ್ಸ್ ಚಿತ್ರೀಕರಣ ಭರದಿಂದ ಸಾಗಿದೆ. ಸತ್ಯ ಮತ್ತು ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಈ ಸಿನಿಮಾದ ಕ್ಲೈಮಾಕ್ಸ್ ಹಾಸ್ಯಲೇಪನದೊಂದಿಗೆ ಸಾಕಷ್ಟು ಅಚ್ಚರಿ ಮೂಡಿಸಲಿದೆ ಎನ್ನುತ್ತಿದೆ ಚಿತ್ರತಂಡ. ದೀಪಕ್ ಮಧುವನಹಳ್ಳಿ (Deepak Madhavanahalli) ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಮಿಲಿಂದ್ (Milind) ನಾಯಕ ನಟನಾಗಿ ನಟಿಸುತ್ತಿದ್ದು, ನಾಯಕಿಯಾಗಿ ರೇಚಲ್ ಡೇವಿಡ್ (Rachel David) ನಟಿಸುತ್ತಿದ್ದಾರೆ. ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ನಾಯಕ, ನಾಯಕಿ ಒಳಗೊಂಡಂತೆ ಸಾಧುಕೋಕಿಲ, ಸುಂದರ್, ವೀಣಾ ಸುಂದರ್, ಶೋಭರಾಜ್, ಅವಿನಾಶ್ ಸೇರಿದಂತೆ ಹಲವು ಕಲಾವಿದರು ಪಾಲ್ಗೊಂಡಿದ್ದು, ಇದೇ ಸಂದರ್ಭದಲ್ಲಿ ಚಿತ್ರತಂಡ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

    ಅನ್ ಲಾಕ್ ರಾಘವ ಚಿತ್ರದ ನಿರ್ದೇಶಕ ದೀಪಕ್ ಮಧುವನಹಳ್ಳಿ ಮಾತನಾಡಿ “ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆಯುತ್ತಿದೆ. ಎಂಟು ದಿನಗಳ ಕಾಲ ಕ್ಲೈಮಾಕ್ಸ್ ಚಿತ್ರೀಕರಣ ಯೋಜಿಸಿದ್ದು, ಇನ್ನು ಮೂರು ದಿನದಲ್ಲಿ ಕ್ಲೈಮ್ಯಾಕ್ಸ್ ಚಿತ್ರೀಕರಣ ಮುಗಿಯಲಿದೆ. ಎರಡು ಸಾಂಗ್ ಹಾಗೂ ಟಾಕಿ ಪೋಷನ್ ಮುಗಿಸಿದ್ರೆ ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗುತ್ತದೆ. ಒಟ್ಟು 50 ರಿಂದ 55 ದಿನ ಚಿತ್ರೀಕರಣ ಮಾಡಿದ್ದೇವೆ. ಎಲ್ಲಾ ಕಲಾವಿದರ ಕಾಂಬಿನೇಶನ್ ನಲ್ಲಿ ಕ್ಲೈಮ್ಯಾಕ್ಸ್ ಚಿತ್ರೀಕರಿಸುತ್ತಿದ್ದೇವೆ. ವಿನೋದ್ ಮಾಸ್ಟರ್ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಹೊಸ ರೀತಿಯ ಪ್ರಯತ್ನ ಸಿನಿಮಾದಲ್ಲಿದೆ. ಆಕ್ಷನ್ ಜೊತೆಗೆ ಹ್ಯೂಮರ್ ಕೂಡ ಇಡೀ ಸಿನಿಮಾದಲ್ಲಿ ಜೊತೆಯಾಗಿ ಟ್ರಾವೆಲ್ ಆಗಲಿದೆ. ಸಿನಿಮಾಗೆ ಏನೂ ಕೊರತೆ ಆಗದ ಹಾಗೆ ನಿರ್ಮಾಪಕರು ನೋಡಿಕೊಂಡಿದ್ದಾರೆ” ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮಂಜು ಪಾವಗಡ ಮೇಲೆ ಅಮೂಲ್ಯ ಲವ್: ರಾಕೇಶ್ ಅಡಿಗ ಕಕ್ಕಾಬಿಕ್ಕಿ

    ಚಿತ್ರದ ನಿರ್ಮಾಪಕ ಮಂಜುನಾಥ್.ಡಿ ಮಾತನಾಡಿ “ಒಳ್ಳೆಯ ಕಂಟೆಂಟ್ ಕೊಟ್ರೆ ಖಂಡಿತಾ ಜನ ಸಿನಿಮಾವನ್ನು ನೋಡ್ತಾರೆ, ಗೆಲ್ಲಿಸ್ತಾರೆ. ಈ ಸಿನಿಮಾದ ಕಂಟೆಂಟ್ ತುಂಬಾ ಚೆನ್ನಾಗಿದೆ, ಒಳ್ಳೆಯ ಕಲಾವಿದರು ಇದ್ದಾರೆ. ಗೆಲ್ತೀವಿ ಎನ್ನುವ ಕಾನ್ಫಿಡೆನ್ಸ್ ನಿಂದ ಹೆಜ್ಜೆ ಇಟ್ಟಿದ್ದೇವೆ. ಏಪ್ರಿಲ್ ನಂತರದಲ್ಲಿ ಸಿನಿಮಾ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದರು. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರಾದ ಡಿ.ಸತ್ಯಪ್ರಕಾಶ್ ಅವರು ಮಾತನಾಡಿ “ಖಂಡಿತವಾಗಿಯೂ, ಇಡೀ ಸಿನಿಮಾವನ್ನು ನಗ್ತಾ ನಗ್ತಾ ಸಿನಿಮಾ ನೋಡ್ತೀರ. ಸಬ್ಜೆಕ್ಟ್ ಬಹಳ ವಿಭಿನ್ನವಾಗಿದೆ. ದೊಡ್ಡ ದೊಡ್ಡ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಸಾಧುಕೋಕಿಲ ಸರ್ ಪೂರ್ತಿ ಸಿನಿಮಾದಲ್ಲಿ ಕಾಣಿಸಿಕೊಳ್ತಾರೆ. ಇನ್ನು ಸುಂದರ್ ಸರ್ ಬಹಳ ವಿಭಿನ್ನ ಪಾತ್ರ ನಿರ್ವಹಿಸಿದ್ದಾರೆ. ಅವರ ಪಾತ್ರದ ವೈಶಿಷ್ಟ್ಯವನ್ನು ಫಿಲಂ ನೋಡಿನೇ ತಿಳ್ಕೋಬೇಕು. ವಿಶೇಷ ಅಂದರೆ ಎಲ್ಲ ಪಾತ್ರಗಳಿಗೂ ಅದರದ್ದೇ ಆದ ವಿಶೇಷತೆಗಳಿವೆ. ಇಡೀ ಫ್ಯಾಮಿಲಿ ಒಟ್ಟಾಗಿ ಕುಳಿತು ನೋಡುವ ಸಿನಿಮಾವಿದು. ಒಂದೊಳ್ಳೆ ಮೆಸೇಜ್ ಚಿತ್ರದಲ್ಲಿದೆ. ಇನ್ನು ನನ್ನ ದೀಪಕ್ ಅವರ ಸ್ನೇಹ 15 ವರ್ಷದ್ದು. ನಾನು ಕಥೆಯಲ್ಲಿ ಬರೆದಿರೋ ಹ್ಯೂಮರನ್ನು ದೀಪಕ್ ಚೆನ್ನಾಗಿ ತೆರೆ ಮೇಲೆ ತಂದಿದ್ದಾರೆ. ಇಡೀ ಸಿನಿಮಾ ಕಟ್ಟುವಾಗ ನಮ್ಮ ಜೊತೆ ಸಪೋರ್ಟಿವ್ ಆಗಿ ನಿಂತು ನಿರ್ಮಾಪಕರಾದ  ಮಂಜುನಾಥ್ ಅವರು ಸಹಕಾರ ನೀಡಿದ್ದಾರೆ” ಎಂದು ಮಾಹಿತಿ ಹಂಚಿಕೊಂಡರು.

    ನಾಯಕ ನಟ ಮಿಲಿಂದ್ ಮಾತನಾಡಿ “ಒಬ್ಬ ಹೀರೋ ಆಗಿ ನನಗೆ ಬಹಳ ಮುಖ್ಯವಾದ ಸಿನಿಮಾವಿದು. ಅದ್ಭುತವಾದ ಕಥೆ ಆಯ್ಕೆ ಮಾಡಿಕೊಂಡಿದ್ದೇನೆ. ಈ ಸಿನಿಮಾದ ಶಕ್ತಿ ಎಂದರೆ ಸತ್ಯ ಸರ್ ಬರವಣಿಗೆ. ಕಮರ್ಶಿಯಲ್ ಸಿನಿಮಾವಾದ್ರು ಕೂಡ ಜಾಸ್ತಿ ಹೊಡೆದಾಟ ಬಡಿದಾಟಕ್ಕೆ ಹೋಗಿಲ್ಲ. ಬದಲಾಗಿ ರೋಮ್ಯಾನ್ಸ್ ಮತ್ತು ಕಾಮಿಡಿ ಜಾನರ್ ಸಿನಿಮಾವಿದು ಅದಕ್ಕೆ ಹೆಚ್ಚು ಒತ್ತು ನೀಡಿದ್ದೇವೆ. ಮೊದಲ ಸಿನಿಮಾದಲ್ಲಿ ಪೆಟ್ಟು ತಿಂದಿದ್ದರಿಂದ, ಈ ಸಿನಿಮಾ ಮಾಡುವಾಗ ಒಂದು ಫಿಯರ್ ಇತ್ತು. ನಿರ್ದೇಶಕ ದೀಪಕ್ ಸರ್ ಅದನ್ನೆಲ್ಲ ಹೋಗಲಾಡಿಸಿ, ಸಾಕಷ್ಟು ತಿದ್ದಿದ್ದಾರೆ. ನಾನು ಈ ಸಿನಿಮಾ ಮಾಡೋದಕ್ಕೆ ಮುಖ್ಯ ಕಾರಣ ಅಂದ್ರೆ ನಮ್ಮ ತಂದೆ. ಅವರಿಗೆ ಸಿನಿಮಾ ಅಂದ್ರೆ ಪ್ಯಾಶನ್, ನಾನು ನಟನಾಗಬೇಕು ಎಂಬುದು ಅವರ ಆಸೆ. ಈ ಸಿನಿಮಾ ಜರ್ನಿಯಲ್ಲಿ ಪ್ರತಿ ಹಂತದಲ್ಲಿ ನನ್ನ ಜೊತೆ ನಿಂತಿದ್ದಾರೆ. ಈ ಸಿನಿಮಾ ಗೆಲ್ಲುತ್ತೆ ಎನ್ನುವ ಕಾನ್ಫಿಡೆನ್ಸ್ ಇದೆ“ ಎಂದು ಭರವಸೆಯ ಮಾತುಗಳನ್ನಾಡಿದರು.

    ನಾಯಕ ನಟಿ, ರೇಚಲ್ ಡೇವಿಡ್ ಮಾತನಾಡಿ “ವಿಶೇಷವಾದಂತಹ ಪಾತ್ರ ನನ್ನದು. ಈಗ ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಇಲ್ಲಿವರೆಗೂ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಹಿರಿಯ ನಟರೊಂದಿಗೆ ನಟಿಸಿದ್ದು ಒಳ್ಳೆ ಅನುಭವ ನೀಡಿದೆ. ಚಿತ್ರದಲ್ಲಿ ಜಾನಕಿ ಹೆಸರಲ್ಲಿ ಆರ್ಕಿಯೋಲಜಿಸ್ಟ್ ಪಾತ್ರ ನಿರ್ವಹಿಸಿದ್ದೇನೆ” ಎಂದು ತಿಳಿಸಿದರು. ಹಿರಿಯ ನಟ ಅವಿನಾಶ್ ಮಾತನಾಡಿ “ಇದು ಬಹಳ ಒಳ್ಳೆಯ ಕಥಾಹಂದರ ಇರುವ ಸಿನಿಮಾ. ಹಲವು ಕಲಾವಿದರು ಈ ಚಿತ್ರದಲ್ಲಿದ್ದೇವೆ. ಬೇರೆ ರೀತಿಯ ಕಥೆ ಮಾಡಿಕೊಂಡಿದ್ದಾರೆ. ಥ್ರಿಲ್ ಇದೆ, ಹ್ಯೂಮರ್ ಇದೆ, ವಿಡಂಬನಾತ್ಮಕವಾಗಿ ಸಿನಿಮಾ ಹೋಗುತ್ತೆ. ನಿರ್ದೇಶಕ ದೀಪಕ್ ಸಿನಿಮಾವನ್ನು ತುಂಬಾ ಚೆನ್ನಾಗಿ ನಿರ್ದೇಶಿಸಿದ್ದಾರೆ. ಈ ಸಿನಿಮಾ ನನಗೆ ಒಳ್ಳೆಯ ಅನುಭವ ನೀಡಿದೆ” ಎಂದು ತಿಳಿಸಿದರು.

    ‘ಅನ್ ಲಾಕ್ ರಾಘವ’ ಚಿತ್ರವನ್ನು ಸತ್ಯ ಹಾಗೂ ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್. ಡಿ, ಡಿ ಸತ್ಯಪ್ರಕಾಶ್ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದಾರೆ.  ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಮಾರ್ಟಿನ್’ ಸಿನಿಮಾದಲ್ಲಿ ದುಬಾರಿ ಕ್ಲೈಮ್ಯಾಕ್ಸ್ ದೃಶ್ಯ

    ‘ಮಾರ್ಟಿನ್’ ಸಿನಿಮಾದಲ್ಲಿ ದುಬಾರಿ ಕ್ಲೈಮ್ಯಾಕ್ಸ್ ದೃಶ್ಯ

    ಧ್ರುವ ಸರ್ಜಾ (Dhruva Sarja) ನಟನೆಯ ‘ಮಾರ್ಟಿನ್’ ಸಿನಿಮಾ (Cinema) ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಿಸುತ್ತಲೇ ಸಾಗುತ್ತಿದೆ. ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಡಿಸೆಂಬರ್ ಒಳಗೆ ಬಿಡುಗಡೆ ಆಗಬೇಕಿತ್ತು. ಸಿನಿಮಾದ ಕೆಲ ಕೆಲಸಗಳು ಬಾಕಿ ಇರುವುದರಿಂದ ನಿಗದಿತ ದಿನಾಂಕದಂದು ರಿಲೀಸ್ ಆಗುವುದು ಕಷ್ಟ ಎಂದು ಹೇಳಲಾಗುತ್ತಿದೆ. ಕೆಲ ತಿಂಗಳಿಂದ ಚಿತ್ರ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, ಕಾಯುವ ಅಭಿಮಾನಿಗಳಿಗಾಗಿಯೇ ಭರ್ಜರಿ ಸುದ್ದಿಯೊಂದು ಸಿಕ್ಕಿದೆ.

    ಮಾರ್ಟಿನ್ (Martin) ಸಿನಿಮಾದಲ್ಲಿ ಅದ್ದೂರಿ ಕ್ಲೈಮ್ಯಾಕ್ಸ್ (Climax) ದೃಶ್ಯವೊಂದನ್ನು ಸಂಯೋಜನೆ ಮಾಡಲಾಗಿದ್ದು, ಈ ದೃಶ್ಯವನ್ನು ಚಿತ್ರೀಕರಿಸಲು 50ಕ್ಕೂ ಹೆಚ್ಚು ದಿನಗಳನ್ನು ತಗೆದುಕೊಳ್ಳಲಾಗಿದೆಯಂತೆ. ಭಾರತೀಯ ಸಿನಿಮಾ ರಂಗದಲ್ಲೇ ಈ ಪ್ರಮಾಣದಲ್ಲಿ ದಿನಗಳನ್ನು ತಗೆದುಕೊಂಡು ಕ್ಲೈಮ್ಯಾಕ್ಸ್ ಶೂಟ್ ಮಾಡಿಲ್ಲ ಎನ್ನಲಾಗುತ್ತಿದೆ. ಈ ದೃಶ್ಯವನ್ನು ಸೆರೆ ಹಿಡಿಯುವುದಕ್ಕಾಗಿ ಹಲವು ದುಬಾರಿ ಕ್ಯಾಮೆರಾಗಳನ್ನೂ ಬಳಸಲಾಗಿದೆಯಂತೆ. ಇದನ್ನೂ ಓದಿ:`ಬನಾರಸ್’ ಚಿತ್ರದ ಬೆನ್ನಲ್ಲೇ ಝೈದ್ ಖಾನ್‌ಗೆ ಬಂತು ಬಿಗ್ ಆಫರ್

    ಈ ದೃಶ್ಯದಲ್ಲಿ 40ಕ್ಕೂ ಹೆಚ್ಚು ಟ್ರಕ್, 80ಕ್ಕೂ ಹೆಚ್ಚು ಜೀಪುಗಳನ್ನು ಬಳಕೆ ಮಾಡಲಾಗಿದೆಯಂತೆ. ಅಷ್ಟೇ ಅಲ್ಲದೇ ಯುದ್ಧ ವಿಮಾನ ಕೂಡ ಬಳಕೆಯಾಗಿರುವುದು ಮತ್ತೊಂದು ವಿಶೇಷ. ಸಾಕಷ್ಟು ಕಲಾವಿದರು ಕೂಡ ಈ ದೃಶ್ಯದಲ್ಲಿ ಭಾಗಿಯಾಗಿದ್ದಾರಂತೆ. ಹಾಗಾಗಿ ಇದು ಅತೀ ದುಬಾರಿ ವೆಚ್ಚದಲ್ಲಿ ತಯಾರಾದ ದೃಶ್ಯವೆಂದೇ ಬಣ್ಣಿಸಲಾಗುತ್ತಿದೆ. ಅಂಥದ್ದು ಈ ದೃಶ್ಯದಲ್ಲಿ ಏನಿದೆ ಎನ್ನುವುದನ್ನು ಸಿನಿಮಾದಲ್ಲಿಯೇ ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ಬಾಂಬ್ ಸ್ಫೋಟ ದೃಶ್ಯ ಚಿತ್ರೀಕರಿಸುವಾಗ ಬೆಂಕಿ ತಗುಲಿ ಸುಟ್ಟು ಭಸ್ಮವಾದ `ಕೇಸರಿ’ ಸೆಟ್!

    ಬಾಂಬ್ ಸ್ಫೋಟ ದೃಶ್ಯ ಚಿತ್ರೀಕರಿಸುವಾಗ ಬೆಂಕಿ ತಗುಲಿ ಸುಟ್ಟು ಭಸ್ಮವಾದ `ಕೇಸರಿ’ ಸೆಟ್!

    ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸುತ್ತಿರುವ ಕೇಸರಿ ಚಿತ್ರದ ಸೆಟ್ ನಲ್ಲಿ ಬೆಂಕಿ ಅವಘಡ ಸಂಭವಿದೆ.

    ಸತಾರಾ ಜಿಲ್ಲೆಯಿಂದ 30 ಕಿ.ಮಿ ದೂರದಲ್ಲಿರುವ ವೈ ತೆಹಸಿಲ್‍ನ ಪಿಂಪೋಡೆ ಬುದ್ರಕ್ ಗ್ರಾಮದಲ್ಲಿ ಚಿತ್ರದ ಶೂಟಿಂಗ್ ನಡಿಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

    ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳು ಚಿತ್ರಿಕರಿಸುವಾಗ ಬಾಂಬ್‍ಗಳನ್ನು ಉಪಯೋಗಿಸುತ್ತಿದ್ದರು. ಆಗ ಬೆಂಕಿಯ ಕಿಡಿ ಒಂದು ವಸ್ತುವಿನ ಮೇಲೆ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಸತಾರಾ ಪೊಲೀಸರು ತಿಳಿಸಿದ್ದಾರೆ.

    ಕೇಸರಿ ಚಿತ್ರತಂಡ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರಿಕರಿಸುತ್ತಿದ್ದರು. ಚಿತ್ರದ ನಟ ಅಕ್ಷಯ್ ಕುಮಾರ್ ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿ ಅಲ್ಲಿಂದ ಹೊರಟು ಹೋದ ನಂತರ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಅಗ್ನಿ ಅವಘಡದ ಬಗ್ಗೆ ಕೇಸರಿ ಚಿತ್ರತಂಡ ಅಥವಾ ಅಕ್ಷಯ್ ಕುಮಾರ್ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    1897ನಲ್ಲಿ ನಡೆದ ಯುದ್ಧದಲ್ಲಿ 21 ಸಿಖ್ ಧರ್ಮದವರು 10 ಸಾವಿರ ಅಫ್ಘಾನ್ ಮಂದಿಯ ಜೊತೆ ಯುದ್ಧ ಮಾಡಿದ ಸನ್ನಿವೇಶದಿಂದ ಸ್ಫೂರ್ತಿಯಾಗಿ ಈ ಚಿತ್ರವನ್ನು ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಪರಿಣೀತಿ ಚೋಪ್ರಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅನುರಾಗ್ ಸಿಂಗ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಧರ್ಮ ಪ್ರೊಡಕ್ಷನ್, ಕೇಪ್ ಆಫ್ ಗುಡ್ ಫಿಲ್ಮ್ಸ್ ಹಾಗೂ ಅಝೂರ್ ಎಂಟರ್ ಟೈನ್‍ಮೆಂಟ್ ನಿರ್ಮಾಣ ಮಾಡುತ್ತಿದೆ.

  • ಪ್ರೇಮ್ ಅಡ್ಡದಲ್ಲಿ ಶಿವಣ್ಣ, ಕಿಚ್ಚನ ಕಾಳಗ ಶುರು- ನಿಜವಾದ ‘ವಿಲನ್’ ಯಾರು?

    ಪ್ರೇಮ್ ಅಡ್ಡದಲ್ಲಿ ಶಿವಣ್ಣ, ಕಿಚ್ಚನ ಕಾಳಗ ಶುರು- ನಿಜವಾದ ‘ವಿಲನ್’ ಯಾರು?

    ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭಾರಿ ಕುತೂಹಲ ಹಟ್ಟುಸಿರೋ ‘ದಿ-ವಿಲನ್’ ಚಿತ್ರ ಅಭಿಮಾನಿಗಳ ಮನದಲ್ಲಿ ಹಲ್‍ಚಲ್ ಎಬ್ಬಿಸಿದೆ. ಕರಿಯ, ಎಕ್ಸ್‍ಕ್ಯೂಸ್ ಮಿ, ಜೋಗಿ ಸಿಸಿಮಾಗಳಂತಹ ಸೂಪರ್ ಡೂಪರ್ ಹಿಟ್ ಕೊಟ್ಟಂತ ನಿರ್ದೇಶಕ ಪ್ರೇಮ್, ಶಿವಣ್ಣ ಹಾಗೂ ಕಿಚ್ಚ ಸುದೀಪ್‍ರನ್ನು ಹಾಕಿಕೊಂಡು ಏನ್ ಮಾಡುತ್ತಾರೆ ಎನ್ನುವ ಕುತೂಹಲ ಆಕಾಶ ಮುಟ್ಟಿದೆ.

    ದಿನೇ ದಿನೇ ಒಂದಿಲ್ಲೊಂದು ಸೆನ್ಸೆಷನಲ್ ಸಮಾಚಾರ ‘ದಿ-ವಿಲನ್’ ತಂಡದಿಂದ ಹೊರಬರುತ್ತಿದೆ. ಬೆಂಗಳೂರು, ಚಿಕ್ಕಮಗಳೂರು, ಉತ್ತರ ಕರ್ನಾಟಕ ಹಾಗೂ ಲಂಡನ್‍ನಲ್ಲಿ ಶೂಟಿಂಗ್ ಮುಗಿಸಿಕೊಂಡು ಬಂದು ಈಗ ಕೊನೆಯ ಹಂತದ ಶೂಟಿಂಗ್‍ಗೆ ಚಿತ್ರತಂಡ ಅಣಿಯಾಗಿದೆ. ಆ ಕೊನೆಯ ಹಂತದ ರೋಚಕ ಚಿತ್ರೀಕರಣವೇ ವಿಲನ್ಸ್ ಕಾಳಗ ಎಂದು ಹೇಳಲಾಗಿದೆ.

    `ದಿ-ವಿಲನ್’ ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಶೂಟಿಂಗ್ ನಲ್ಲಿ ಶಿವಣ್ಣ ಹಾಗೂ ಸುದೀಪ್ ನಡುವೆ ಕಾಳಗದ ದೃಶ್ಯವಿದೆ. ಈ ಸೀನ್‍ಗಾಗಿ ಅದ್ಧೂರಿಯಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸೆಟ್ ಹಾಕಲಾಗಿದೆ.

    ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ಸಾರಥ್ಯದಲ್ಲಿ ಈ ಫೈಟಿಂಗ್ ಸೀನ್ ಶೂಟಿಂಗ್ ನಡೆಯುತ್ತಿದೆ. ಡಿಫರೆಂಟ್ ಆಗಿ ವಿಲನ್‍ಗಳು ಈ ದೃಶ್ಯದಲ್ಲಿ ಕಾಣಿಸಿಕೊಳ್ಳಲಿದ್ದು, ಅಸಲಿ ವಿಲನ್ ಯಾರು ಎನ್ನುವುದನ್ನು ಈ ದೃಶ್ಯ ಸಾಬೀತು ಮಾಡಲಿದೆ.

    ಸಿ.ಆರ್. ಮನೋಹರ್ ನಿರ್ಮಾಣದಲ್ಲಿ ಬರೋಬ್ಬರಿ 6 ಭಾಷೆಯಲ್ಲಿ `ದಿ-ವಿಲನ್’ ಮೂಡಿಬರುತ್ತಿದೆ. ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣದಲ್ಲಿ ಚಿತ್ರತಂಡ ಮಗ್ನವಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಕುತೂಹಲ ಮೂಡಿಸುವ ಟೀಸರ್ ಪ್ರೇಕ್ಷಕರ ಮುಂದೆ ಇಡಲಿದ್ದಾರೆ.