Tag: ಕ್ವಿಂಟನ್ ಡಿ ಕಾಕ್

  • ವಿಶ್ವಕಪ್‌ನಲ್ಲಿ ವಿಶೇಷ ಸಾಧನೆ ಮಾಡಿದ ಡಿ ಕಾಕ್‌ – ಸಚಿನ್‌ ವಿಶ್ವ ದಾಖಲೆ ಮುರಿಯಲು ಬೇಕಿದೆ 129 ರನ್‌

    ವಿಶ್ವಕಪ್‌ನಲ್ಲಿ ವಿಶೇಷ ಸಾಧನೆ ಮಾಡಿದ ಡಿ ಕಾಕ್‌ – ಸಚಿನ್‌ ವಿಶ್ವ ದಾಖಲೆ ಮುರಿಯಲು ಬೇಕಿದೆ 129 ರನ್‌

    ನವದೆಹಲಿ: ಭಾರತದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್‌ 2023 ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟರ್‌ ಕ್ವಿಂಟನ್‌ ಡಿ ಕಾಕ್‌ (Quinton de Kock) ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಆಟಗಾರನಾಗಿದ್ದು ಹೊರಹೊಮ್ಮಿದ್ದು, ವಿಶ್ವಕಪ್‌ ಇತಿಹಾಸದಲ್ಲಿ ಅಗ್ರ ಸ್ಥಾನದಲ್ಲಿರುವ ಸಚಿನ್‌ ತೆಂಡೂಲ್ಕರ್‌ ವಿಶ್ವ ದಾಖಲೆ ಮುರಿಯಲು 129 ರನ್‌ಗಳಷ್ಟೇ ಬಾಕಿ ಇದೆ.

    ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ಇಂದು (ಬುಧವಾರ) ನಡೆದ ಪಂದ್ಯದಲ್ಲಿ ಆಫ್ರಿಕಾ (South Africa) ಪರ ಕ್ವಿಂಟನ್ ಡಿ ಕಾಕ್ ಶತಕ ಸಿಡಿಸಿ ಮಿಂಚಿದರು. ಆ ಮೂಲಕ ಐಸಿಸಿ ವಿಶ್ವಕಪ್ 2023 ರಲ್ಲಿ 500 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಆಸೀಸ್‌ಗೆ ಆಘಾತ – ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಮ್ಯಾಕ್ಸ್‌ವೆಲ್ ಔಟ್

    ಪಂದ್ಯದ ಆರಂಭಕ್ಕೂ ಮುನ್ನ ಡಿ ಕಾಕ್‌ಗೆ 500 ರನ್‌ಗಳನ್ನು ಪೂರೈಸಲು 69 ರನ್‌ಗಳ ಅಗತ್ಯವಿತ್ತು. ಅವರು ನ್ಯೂಜಿಲೆಂಡ್ ವಿರುದ್ಧ 114 ರನ್‌ ಬಾರಿಸಿದರು. ಆ ಮೂಲಕ ಈ ಪಂದ್ಯಾವಳಿಯ 7 ಪಂದ್ಯಗಳಲ್ಲಿ 545 ರನ್ ಗಳಿಸಿದ್ದಾರೆ.

    30ರ ಹರೆಯದ ಅವರು ವಿಶ್ವಕಪ್ ಆವೃತ್ತಿಯಲ್ಲಿ 500 ರನ್ ಗಳಿಸಿದ ದಕ್ಷಿಣ ಆಫ್ರಿಕಾದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 2007 ರ ವಿಶ್ವಕಪ್‌ನಲ್ಲಿ ಜಾಕ್ವೆಸ್ ಕಾಲಿಸ್ ಅವರ 485 ರನ್‌ಗಳ ದಾಖಲೆಯನ್ನು ಮುರಿದಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಗೆದ್ದರೂ ಪಟಾಕಿ ಸಿಡಿಸುವಂತಿಲ್ಲ – BCCI ಪಟಾಕಿ ಬ್ಯಾನ್‌ ಮಾಡಿದ್ದೇಕೆ?

    ಸಚಿನ್‌ ದಾಖಲೆ ಉಡೀಸ್‌ಗೆ ಬೇಕು 128 ರನ್‌
    ಐಸಿಸಿ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಐದು ಆಟಗಾರರು 600 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 2003ರ ವಿಶ್ವಕಪ್‌ನಲ್ಲಿ ಭಾರತದ ಸಚಿನ್ ತೆಂಡೂಲ್ಕರ್ (Sachin Tendulkar) 673 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದರೆ, 2007ರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಮ್ಯಾಥ್ಯೂ ಹೇಡನ್ 659 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಸಚಿನ್‌ ದಾಖಲೆ ಮುರಿಯಲು ಡಿ ಕಾಕ್‌ಗೆ 129 ರನ್‌ಗಳಷ್ಟೇ ಬಾಕಿ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಡಿಯೂರಲು ಒಪ್ಪಿದ ಡಿ ಕಾಕ್ ಶ್ರೀಲಂಕಾ ವಿರುದ್ಧ ಪಂದ್ಯಕ್ಕೆ ಹಾಜರ್

    ಮಂಡಿಯೂರಲು ಒಪ್ಪಿದ ಡಿ ಕಾಕ್ ಶ್ರೀಲಂಕಾ ವಿರುದ್ಧ ಪಂದ್ಯಕ್ಕೆ ಹಾಜರ್

    ದುಬೈ: ಟಿ20 ವಿಶ್ವಕಪ್‍ನಲ್ಲಿ ಬ್ಲ್ಯಾಕ್ ಲೈವ್ಸ್ ಮ್ಯಾಟರ್ (ಬಿಎಲ್‍ಎಂ) ಅಭಿಯಾನಕ್ಕೆ ಬೆಂಬಲ ಸೂಚಿಸಿ ಮಂಡಿಯೂರಿ ನಿಲ್ಲಲು ಒಪ್ಪದೆ ದಕ್ಷಿಣ ಆಫ್ರಿಕಾ ತಂಡದಿಂದ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ಕ್ವಿಂಟನ್ ಡಿ ಕಾಕ್ ಹೊರ ನಡೆದಿದ್ದರು. ಆದರೆ ಇಂದು ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಮಂಡಿಯೂರಿ ಆಫ್ರಿಕಾ ತಂಡದೊಂದಿಗೆ ಕಣಕ್ಕಿಳಿದಿದ್ದಾರೆ.

    ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಆರಂಭಕ್ಕೂ ಮೊದಲು ಡಿ ಕಾಕ್ ಆಡುವ ಹನ್ನೊಂದರ ಬಳಗದಲ್ಲಿ ಇದ್ದರು. ಆದರೆ ದಕ್ಷಿಣ ಆಪ್ರಿಕಾ ಕ್ರಿಕೆಟ್ ಮಂಡಳಿಯ ಆ ಒಂದು ಸಂದೇಶದ ವಿರುದ್ಧ ತಿರುಗಿಬಿದ್ದ ಡಿ ಕಾಕ್ ಕಡೆಯ ಕ್ಷಣದಲ್ಲಿ ಆಡುವ ಬಳಗದಿಂದ ಹೊರ ನಡೆದರು. ಇದಕ್ಕೆ ಕಾರಣ ಬಿಎಲ್‍ಎಂ ಆಂದೋಲನವಾಗಿತ್ತು. ಬಳಿಕ ಡಿ ಕಾಕ್ ಜೊತೆ ಆಫ್ರಿಕಾ ಕ್ರಿಕೆಟ್ ಮಂಡಳಿ ಚರ್ಚಿಸಿತ್ತು. ಡಿ ಕಾಕ್ ಕೂಡ ನಾನು ಈ ಆಂದೋಲನಕ್ಕೆ ಬೆಂಬಲ ಸೂಚಿಸುವುದಾಗಿ ತಿಳಿಸಿ ಇಂದಿನ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಂಡಿಯೂರಲು ಒಪ್ಪದ ಡಿ ಕಾಕ್ ಆಫ್ರಿಕಾ ತಂಡದಿಂದ ಔಟ್?

    ಏನಿದು ಬಿಎಲ್‍ಎಂ?
    ಬ್ಲ್ಯಾಕ್ ಲೈವ್ಸ್ ಮ್ಯಾಟರ್ (ಬಿಎಲ್‍ಎಂ) ಕಳೆದ ವರ್ಷ ಅಮೆರಿಕದಲ್ಲಿ ಕಪ್ಪು ವರ್ಣೀಯ ಆರೋಪಿಯೊಬ್ಬರನ್ನು ಅಲ್ಲಿಯ ಪೊಲೀಸರು ನಡು ರಸ್ತೆಯಲ್ಲೇ ಹಲ್ಲೆ ನಡೆಸಿ ಕೊಂದಿದ್ದರು. ಇದನ್ನು ಕಪ್ಪು ವರ್ಣೀಯರು ವಿರೋಧಿಸಿ ಬಿಎಲ್‍ಎಂ ಆಂದೋಲನ ಆರಂಭಿಸಿದರು. ಬಳಿಕ ವಿಶ್ವಾದ್ಯಂತ ವಿವಿಧ ಕ್ರೀಡೆಗಳಲ್ಲಿ ಆಟಗಾರರು ಈ ಆಂದೋಲನಕ್ಕೆ ಸಾಂಕೇತಿಕವಾಗಿ ಮಂಡಿಯೂರಿ ಒಂದು ಕೈ ಎತ್ತಿ ಬೆಂಬಲ ಕೊಡಲು ಆರಂಭಿಸಿದರು. ಇದು ಇದೀಗ ಟಿ20 ವಿಶ್ವಕಪ್ ಪಂದ್ಯದಲ್ಲೂ ಕೂಡ ಮುಂದುವರಿಯುತ್ತಿದೆ. ಪ್ರತಿ ಪಂದ್ಯ ಆರಂಭಕ್ಕೂ ಮುನ್ನ ಆಟಗಾರರು ಮೈದಾನದಲ್ಲಿ ವಿವಿಧ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

    ದಕ್ಷಿಣ ಆಫ್ರಿಕಾ ತಂಡದಲ್ಲಿ ಕಪ್ಪು ವರ್ಣೀಯ ಆಟಗಾರರು ಮತ್ತು ಬಿಳಿ ವರ್ಣೀಯ ಆಟಗಾರರು ಇದ್ದಾರೆ. ಹಾಗಾಗಿ ಅಲ್ಲಿನ ಕ್ರಿಕೆಟ್ ಮಂಡಳಿ ಕಡ್ಡಾಯವಾಗಿ ಆಟಗಾರೆಲ್ಲರೂ ಮಂಡಿಯೂರಿ ಬಿಎಲ್‍ಎಂಗೆ ಬೆಂಬಲಿಸಬೇಕಾಗಿ ಆದೇಶ ಹೊರಡಿಸಿತ್ತು. ಇದಕ್ಕೆ ಒಪ್ಪದ ಡಿ ಕಾಕ್ ತಂಡದಿಂದ ಹಿಂದೆ ಸರಿದಿದ್ದರು. ಬಳಿಕ ಡಿ ಕಾಕ್ ನಡೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಡಿ ಕಾಕ್ ಆಫ್ರಿಕಾ ತಂಡದಿಂದಲೇ ಕಿಕ್ ಔಟ್ ಆಗುವ ಸಾಧ್ಯತೆ ಮೂಡಿತ್ತು. ಇದೀಗ ಡಿ ಕಾಕ್ ಮಂಡಿಯೂರಿ ಬಿಎಲ್‍ಎಂಗೆ ಬೆಂಬಲ ಸೂಚಿಸಿ ಈ ಸಮಸ್ಯೆಯನ್ನು ಬಗೆಹರಿಸಿದ್ದಾರೆ. ಇದನ್ನೂ ಓದಿ: ಹಿಂದೂಗಳ ನಡುವೆ ನಮಾಜ್ – ಟೀಕೆಯ ಬಳಿಕ ಕ್ಷಮೆಯಾಚಿಸಿದ ವಕಾರ್ ಯೂನಿಸ್

    ಬಿಎಲ್‍ಎಂ ಆಂದೋಲನಕ್ಕೆ ವಿಶ್ವಕಪ್‍ನಲ್ಲಿ ಎಲ್ಲಾ ತಂಡಗಳು ಕೂಡ ಬೆಂಬಲ ಸೂಚಿಸುತ್ತಿದೆ. ಇದರಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮುನ್ನ ಭಾರತದ ಆಟಗಾರರೆಲ್ಲರೂ ಮಂಡಿಯೂರಿ ಸಂಪೂರ್ಣವಾಗಿ ಬಿಎಲ್‍ಎಂಗೆ ಬೆಂಬಲ ಸೂಚಿಸಿದ್ದರು.

  • ಮಂಡಿಯೂರಲು ಒಪ್ಪದ ಡಿ ಕಾಕ್ ಆಫ್ರಿಕಾ ತಂಡದಿಂದ ಔಟ್?

    ಮಂಡಿಯೂರಲು ಒಪ್ಪದ ಡಿ ಕಾಕ್ ಆಫ್ರಿಕಾ ತಂಡದಿಂದ ಔಟ್?

    ದುಬೈ: ಟಿ20 ವಿಶ್ವಕಪ್‍ನಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದಲ್ಲಿ Black Lives Matter (BLM) ಅಭಿಯಾನಕ್ಕೆ ಬೆಂಬಲ ಸೂಚಿಸಿ ಮಂಡಿಯೂರಿ ನಿಲ್ಲಲು ಒಪ್ಪದ ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ಕ್ವಿಂಟನ್ ಡಿ ಕಾಕ್ ತಂಡದಿಂದ ಹೊರ ನಡೆಯುವ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

    ಮಂಗಳವಾರ ನಡೆದ ವಿಂಡೀಸ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಆರಂಭಕ್ಕೂ ಮೊದಲು ಡಿ ಕಾಕ್ ಆಡುವ ಹನ್ನೊಂದರ ಬಳಗದಲ್ಲಿ ಇದ್ದರು. ಆದರೆ ದಕ್ಷಿಣ ಆಪ್ರಿಕಾ ಕ್ರಿಕೆಟ್ ಮಂಡಳಿಯ ಆ ಒಂದು ಸಂದೇಶದ ವಿರುದ್ಧ ತಿರುಗಿಬಿದ್ದ ಡಿ ಕಾಕ್ ಕಡೆಯ ಕ್ಷಣದಲ್ಲಿ ಆಡುವ ಬಳಗದಿಂದ ಹೊರ ನಡೆದರು. ಇದಕ್ಕೆ ಕಾರಣ ಬಿಎಲ್‍ಎಂ ಆಂದೋಲನ. ಇದನ್ನೂ ಓದಿ: ಹಿಂದೂಗಳ ನಡುವೆ ನಮಾಜ್ – ಟೀಕೆಯ ಬಳಿಕ ಕ್ಷಮೆಯಾಚಿಸಿದ ವಕಾರ್ ಯೂನಿಸ್

    ಏನಿದು BLM?
    Black Lives Matter (BLM) ಕಳೆದ ವರ್ಷ ಅಮೆರಿಕದಲ್ಲಿ ಕಪ್ಪು ವರ್ಣೀಯ ಆರೋಪಿಯೊಬ್ಬರನ್ನು ಅಲ್ಲಿಯ ಪೊಲೀಸರು ನಡು ರಸ್ತೆಯಲ್ಲೇ ಹಲ್ಲೆ ನಡೆಸಿ ಕೊಂದಿದ್ದರು. ಇದನ್ನು ಕಪ್ಪು ವರ್ಣೀಯರು ವಿರೋಧಿಸಿ ಬಿಎಲ್‍ಎಂ ಆಂದೋಲನ ಆರಂಭಿಸಿದರು. ಬಳಿಕ ವಿಶ್ವಾದ್ಯಂತ ವಿವಿಧ ಕ್ರೀಡೆಗಳಲ್ಲಿ ಆಟಗಾರರು ಈ ಆಂದೋಲನಕ್ಕೆ ಸಾಂಕೇತಿಕವಾಗಿ ಮಂಡಿಯೂರಿ ಒಂದು ಕೈ ಎತ್ತಿ ಬೆಂಬಲ ಕೊಡಲು ಆರಂಭಿಸಿದರು. ಇದು ಇದೀಗ ಟಿ20 ವಿಶ್ವಕಪ್ ಪಂದ್ಯದಲ್ಲೂ ಕೂಡ ಮುಂದುವರಿಯುತ್ತಿದೆ. ಪ್ರತಿ ಪಂದ್ಯ ಆರಂಭಕ್ಕೂ ಮುನ್ನ ಆಟಗಾರರು ಮೈದಾನದಲ್ಲಿ ವಿವಿಧ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

    ದಕ್ಷಿಣ ಆಫ್ರಿಕಾ ತಂಡದಲ್ಲಿ ಕಪ್ಪು ವರ್ಣೀಯ ಆಟಗಾರರು ಮತ್ತು ಬಿಳಿ ವರ್ಣೀಯ ಆಟಗಾರರು ಇದ್ದಾರೆ. ಹಾಗಾಗಿ ಅಲ್ಲಿನ ಕ್ರಿಕೆಟ್ ಮಂಡಳಿ ಕಡ್ಡಾಯವಾಗಿ ಆಟಗಾರೆಲ್ಲರೂ ಮಂಡಿಯೂರಿ ಬಿಎಲ್‍ಎಂಗೆ ಬೆಂಬಲಿಸಬೇಕಾಗಿ ಆದೇಶ ಹೊರಡಿಸಿತ್ತು. ಇದಕ್ಕೆ ಒಪ್ಪದ ಡಿ ಕಾಕ್ ತಂಡದಿಂದ ಹಿಂದೆ ಸರಿದಿದ್ದಾರೆ. ಇದೀಗ ಡಿ ಕಾಕ್ ನಡೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು ಡಿ ಕಾಕ್ ಆಫ್ರಿಕಾ ತಂಡದಿಂದಲೇ ಕಿಕ್ ಔಟ್ ಆಗುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ಪಾಕ್ ಗೆಲವು ಸಂಭ್ರಮಿಸಿದವ್ರ ವಿರುದ್ಧ ದೂರು ದಾಖಲಿಸಿದವರಿಗೆ ಉಗ್ರರ ವಾರ್ನಿಂಗ್

    ಬಿಎಲ್‍ಎಂ ಆಂದೋಲನಕ್ಕೆ ವಿಶ್ವಕಪ್‍ನಲ್ಲಿ ಎಲ್ಲಾ ತಂಡಗಳು ಕೂಡ ಬೆಂಬಲ ಸೂಚಿಸುತ್ತಿದೆ. ಇದರಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮುನ್ನ ಭಾರತದ ಆಟಗಾರರೆಲ್ಲರೂ ಮಂಡಿಯೂರಿ ಸಂಪೂರ್ಣವಾಗಿ ಬಿಎಲ್‍ಎಂಗೆ ಬೆಂಬಲ ಸೂಚಿಸಿದ್ದರು. ಇದನ್ನೂ ಓದಿ: ರೋಹಿತ್ ಡ್ರಾಪ್ ಮಾಡ್ತೀರಾ – ಪ್ರಶ್ನೆಗೆ ತಲೆ ಕೆಳಗಡೆ ಹಾಕಿ Unbelievable ಎಂದ ಕೊಹ್ಲಿ

  • ಕೀಪರ್ ಕ್ವಿಂಟನ್ ಡಿ ಕಾಕ್ ಚಮಕ್‍ಗೆ 193 ರನ್‍ಗಳಿಸಿದ್ದ ಫಖರ್ ರನೌಟ್

    ಕೀಪರ್ ಕ್ವಿಂಟನ್ ಡಿ ಕಾಕ್ ಚಮಕ್‍ಗೆ 193 ರನ್‍ಗಳಿಸಿದ್ದ ಫಖರ್ ರನೌಟ್

    ಜೊಹಾನ್ಸ್‌ಬರ್ಗ್‌: ಎರಡನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಫಖರ್ ಝಮಾನ್ ಅವರನ್ನು ದಕ್ಷಿಣ ಆಫ್ರಿಕಾದ ಕೀಪರ್ ಕ್ವಿಂಟನ್ ಡಿ ಕಾಕ್ ಅವರು ಚಮಕ್ ಮಾಡಿ ರನೌಟ್ ಮಾಡಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 341 ರನ್ ಗಳಿಸಿತ್ತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ ಒಂದು ಕಡೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ್ದರೂ ಆರಂಭಿಕ ಆಟಗಾರ ಫಖರ್ ಜಮಾನ್ ಅವರು ಬಂಡೆಯಂತೆ ನಿಂತು ಪಾಕಿಸ್ತಾನದ ಮೊತ್ತವನ್ನು 300ರ ಗಡಿ ದಾಟಿಸಿದ್ದರು.

    49.1ನೇ ಓವರ್‍ನಲ್ಲಿ ಎರಡು ರನ್ ಓಡುವ ಸಂದರ್ಭದಲ್ಲಿ 193 ರನ್‍ಗಳಿಸಿದ್ದ ಫಖರ್ ಜಮಾನ್ 9ನೇಯವರಾಗಿ ರನೌಟ್ ಆದರು. ಆದರೆ ರನೌಟ್ ವಿಚಾರ ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಟಾಪಿಕ್ ಆಗಿದೆ.

    ರನೌಟ್ ಆಗಿದ್ದು ಹೇಗೆ?
    ಲುಂಗಿ ಎನ್‍ಗಿಡಿ ಅವರ ಎಸೆತವನ್ನು ಜಮಾನ್ ಲಾಂಗ್ ಆಫ್‍ಗೆ ಬೌಂಡರಿ ಹೊಡೆಯುವ ಯತ್ನದಲ್ಲಿ ಬಲವಾಗಿ ಹೊಡೆದರು. ಆದರೆ ಚೆಂಡನ್ನು ಮಾಕ್ರರ್ಮ್ ತಡೆದರು. ಬಾಲ್ ತಡೆದ ಕಾರಣ ಇಬ್ಬರು ಬ್ಯಾಟ್ಸ್‌ಮನ್‌ಗಳು ಎರಡು ರನ್ ಓಡಲು ಮುಂದಾದರು. ಈ ಸಂದರ್ಭದಲ್ಲಿ ಮಾಕ್ರರ್ಮ್ ಬಾಲನ್ನು ನೇರವಾಗಿ ಸ್ಟ್ರೈಕ್‍ನತ್ತ ಎಸೆದರು. ಬಾಲ್ ತನ್ನತ್ತ ಬರುವುದನ್ನು ಗಮನಿಸಿದ ಕೀಪರ್ ಕಾಕ್ ಕೈ ತೋರಿಸಿ ಬೌಲರ್ ಎಂಡ್‍ನತ್ತ ಎಸೆಯುವಂತೆ ಹೇಳಿದರು. ಕೀಪರ್ ಕಡೆಯಿಂದ ಬಂದ ಸಿಗ್ನಲ್ ನೋಡಿ ಫಖರ್ ಓಡುವ ವೇಗವನ್ನು ಕಡಿಮೆ ಮಾಡಿ ನಾನ್‍ಸ್ಟ್ರೈಕ್‍ನತ್ತ ನೋಡಿದರು. ಈ ವೇಳೆ ಬಾಲ್ ಸ್ಟ್ರೈಕ್‍ನತ್ತ ಬರುತ್ತಿದೆ ಎನ್ನುವುದು ತಿಳಿಯುವಷ್ಟರಲ್ಲಿ ಬಾಲ್ ನೇರವಾಗಿ ವಿಕೆಟ್ ಬಡಿದಾಗಿತ್ತು.

    ರನೌಟ್ ಆದ ಬಳಿಕ ಫಖರ್ ನಿರಾಸೆಯಿಂದ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ಒಂದು ವೇಳೆ ಫಖರ್ ಜಮಾನ್ ಈ ಪಂದ್ಯದಲ್ಲಿ 200 ರನ್ ಹೊಡೆದಿದ್ದರೆ ಪಾಕ್ ಪರ ಎರಡು ಬಾರಿ 200 ರನ್‍ಗಳ ಗಡಿಯನ್ನು ದಾಟಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತಿದ್ದರು. ಈ ಮೊದಲು ಜಿಂಬಾಬ್ವೆ ವಿರುದ್ಧ ಫಖರ್ 2018 ರಲ್ಲಿ ಔಟಾಗದೇ 210 ರನ್ ಹೊಡೆದಿದ್ದರು.

    ಪಾಕಿಸ್ತಾನ ಅಂತಿಮವಾಗಿ 9 ವಿಕೆಟ್ ನಷ್ಟಕ್ಕೆ 324 ರನ್ ಗಳಿಸಿ ಸೋಲನ್ನು ಅನುಭವಿಸಿತು. ಅತ್ಯುತ್ತಮ ಆಟಕ್ಕೆ ಫಖರ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    ಕ್ವಿಂಟನ್ ಡಿ ಕಾಕ್ ಅವರ ಈ ಆಟಕ್ಕೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವರು ಇದು ಮೋಸದಾಟ, ಕ್ರೀಡಾ ಸ್ಪೂರ್ತಿಯನ್ನು ಮರೆತು ಆಡಿದ್ದಾರೆ ಎಂದು ಟೀಕಿಸಿದರೆ ಇನ್ನು ಕೆಲವರು ಕಾಕ್ ಏನು ತಪ್ಪು ಮಾಡಿಲ್ಲ. ಬ್ಯಾಟ್ಸ್‌ಮನ್‌ ಆದವರಿಗೆ ರನ್ ಓಡುವುದರಲ್ಲೇ ಗಮನ ಇರಬೇಕು. ಮುಂದಿನ ದಿನಗಳಲ್ಲಿ ಎಲ್ಲ ಬ್ಯಾಟ್ಸ್‌ಮನ್‌ಗಳು ಇದನ್ನು ಪಾಠವಾಗಿ ತಿಳಿದುಕೊಳ್ಳಬೇಕು ಎಂದು ಕೆಲವರು ಹೇಳಿದ್ದಾರೆ.