Tag: ಕ್ವೆಟ್ಟಾ

  • ಪಾಕಿಸ್ತಾನದಲ್ಲಿ ಬಾಂಬ್‌ ದಾಳಿ – ಕನಿಷ್ಠ 10 ಜನರು ಸಾವು

    ಪಾಕಿಸ್ತಾನದಲ್ಲಿ ಬಾಂಬ್‌ ದಾಳಿ – ಕನಿಷ್ಠ 10 ಜನರು ಸಾವು

    – 30ಕ್ಕೂ ಅಧಿಕ ಮಂದಿಗೆ ಗಾಯ

    ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

    ಮಂಗಳವಾರ (ಸೆ.30) ಬೆಳಗ್ಗೆ ಕ್ವೆಟ್ಟಾದ ಜರ್ಘೂನ್ ರಸ್ತೆಯಲ್ಲಿರುವ ಅರೆಸೈನಿಕ ಪಡೆಯ ಪ್ರಧಾನಿ ಕಚೇರಿ ಮೇಲೆ ಪ್ರಬಲವಾದ ಬಾಂಬ್‌ ಸ್ಫೋಟಗೊಂಡಿದೆ. ಪೊಲೀಸರ ಮಾಹಿತಿ ಪ್ರಕಾರ, ಸ್ಫೋಟದ ತೀವ್ರತೆಯಿಂದಾಗಿ ಸಮೀಪದ ಕಟ್ಟಡಗಳ ಬಾಗಿಲು ಹಾಗೂ ಕಿಟಕಿಗಳು ಪುಡಿಪುಡಿಯಾಗಿವೆ. ಸ್ಫೋಟದ ಸ್ವಲ್ಪ ಹೊತ್ತಿನ ನಂತರ ಗುಂಡಿನ ಚಕಮಕಿಯು ಕೇಳಿಬಂದಿದೆ ಎಂದು ತಿಳಿಸಿದ್ದಾರೆ.

    ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.ಇದನ್ನೂ ಓದಿ: ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ

    ಈ ಕುರಿತು ಬಲೂಚಿಸ್ತಾನದ ಆರೋಗ್ಯ ಸಚಿವ ಬಖ್ತ್ ಮುಹಮ್ಮದ್ ಕಾಕರ್ ಮಾತನಾಡಿ, ನಗರದಾದ್ಯಂತ ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ, ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿ ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ನಿರ್ದೇಶಿಸಿದ್ದಾರೆ. ಇನ್ನೂ ಸ್ಫೋಟದ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ಈಗಾಗಲೇ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಸ್ಫೋಟದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹೊಗೆಯಾವರಿಸಿಕೊಂಡಿರುವುದು ಕಂಡುಬಂದಿದೆ.

    ಇದಕ್ಕೂ ಮುನ್ನ ಸೆ.4ರಂದು ಕ್ವೆಟ್ಟಾದಲ್ಲಿ ನಡೆದ ರಾಜಕೀಯ ರ‍್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿದರು ಮತ್ತು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.ಇದನ್ನೂ ಓದಿ: RSSಗೆ 100 ವರ್ಷ – ನಾಳೆ ಪೋಸ್ಟ್ ಸ್ಟ್ಯಾಂಪ್, ನಾಣ್ಯ ಬಿಡುಗಡೆ ಮಾಡಲಿದ್ದಾರೆ ಪ್ರಧಾನಿ ಮೋದಿ

  • ಪಿಎಸ್‍ಎಲ್ ಆರಂಭಕ್ಕೆ 3 ದಿನ ಇರೋವಾಗ ಬಾಂಬ್ ಸ್ಫೋಟ – ಪಾಕಿಗೆ ಮತ್ತೆ ಮುಖಭಂಗ

    ಪಿಎಸ್‍ಎಲ್ ಆರಂಭಕ್ಕೆ 3 ದಿನ ಇರೋವಾಗ ಬಾಂಬ್ ಸ್ಫೋಟ – ಪಾಕಿಗೆ ಮತ್ತೆ ಮುಖಭಂಗ

    ಇಸ್ಲಾಮಾಬಾದ್: ಪಾಕಿಸ್ತಾನ ಸೂಪರ್ ಲೀಗ್(ಪಿಎಸ್‍ಎಲ್) ಆರಂಭಗೊಳ್ಳಲು ಮೂರು ದಿನ ಇರುವಂತೆಯೇ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟಗೊಂಡು 7 ಮಂದಿ ಸಾವನ್ನಪ್ಪಿದ್ದಾರೆ.

    ನಡು ರಸ್ತೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ ಸಾಗುತ್ತಿದ್ದಾಗ ಆತ್ಮಾಹುತಿ ದಾಳಿಕೋರ ತನ್ನನ್ನು ತಾನು ಸ್ಫೋಟಗೊಳಿಸುವ ಮೂಲಕ ಈ ಕೃತ್ಯ ಎಸಗಿದ್ದು 25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.

    ವಿಶೇಷ ಏನೆಂದರೆ ಇದೇ 20ರಿಂದ ಸೂಪರ್ ಲೀಗ್ ಕ್ರಿಕೆಟ್ ಆರಂಭಗೊಳ್ಳಲಿದೆ. ಒಟ್ಟು 6 ತಂಡಗಳು ಈ ಟೂರ್ನಿಯಲ್ಲಿ ಆಡಲಿದ್ದು 26 ಪಂದ್ಯ ನಡೆಯಲಿದೆ. ಮೊದಲ ಪಂದ್ಯ ಕ್ವೆಟ್ಟಾ ಗ್ಲಾಡಿಯೆಟರ್ಸ್ ಮತ್ತು ಇಸ್ಲಾಮಾಬಾದ್ ಯುನೈಟೆಡ್ ತಂಡಗಳ ಮಧ್ಯೆ ಗುರುವಾರ ನಡೆಯಲಿದೆ.

    ಪಾಕಿಸ್ತಾನದಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ವಿದೇಶಿ ಕ್ರಿಕೆಟಿಗರು ಪ್ರವಾಸ ಕೈಗೊಳ್ಳುತ್ತಿರಲಿಲ್ಲ. ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ದುಬೈನಲ್ಲಿ ಕ್ರಿಕೆಟ್ ಆಯೋಜನೆ ಮಾಡುತ್ತಿತ್ತು. ಆದರೆ ಕಳೆದ ವರ್ಷದ ಅಕ್ಟೋಬರ್ ನಲ್ಲಿ ಶ್ರೀಲಂಕಾ ಮೊದಲ ಬಾರಿಗೆ ಪಾಕ್ ಪ್ರವಾಸ ಕೈಗೊಂಡಿತ್ತು. ಬಳಿಕ ಜನವರಿಯಲ್ಲಿ ಬಾಂಗ್ಲಾದೇಶ ಪ್ರವಾಸ ಕೈಗೊಂಡಿತ್ತು.

    ವಿಶೇಷ ಏನೆಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಂತಾರಾಷ್ಟ್ರೀಯ ಸಮುದಾಯವನ್ನು ಉದ್ದೇಶಿಸಿ ಪಾಕಿಸ್ತಾನ ಉಗ್ರರ ತವರು ನೆಲವಲ್ಲ. ನಾವು ಉಗ್ರರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದರು. ಈ ರೀತಿ ಹೇಳಿದ ದಿನವೇ ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ ನಡೆದಿದೆ. ಪಿಎಸ್‍ಎಲ್ ಹಿನ್ನೆಲೆಯಲ್ಲಿ ಈಗಾಗಲೇ ವಿದೇಶಿ ಆಟಗಾರರು ಪಾಕಿಸ್ತಾನಕ್ಕೆ ಆಗಮಿಸಿದ್ದಾರೆ.

    ಉಗ್ರರಿಗೆ ಬಹಿರಂಗವಾಗಿ ಸಹಕಾರ ನೀಡುತ್ತಿರುವ ಪಾಕಿಸ್ತಾನ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‍ಎಟಿಎಫ್)ನ ಕಪ್ಪು ಪಟ್ಟಿಗೆ ಸೇರ್ಪಡೆಯಾಗುತ್ತಾ? ಇಲ್ಲವೋ ಎನ್ನುವುದು ಇಂದು ನಿರ್ಧಾರವಾಗಲಿದೆ.

    ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಎಫ್‍ಎಟಿಎಫ್ ಸಭೆ ಪ್ಯಾರಿಸ್ ನಲ್ಲಿ ನಡೆಯುತ್ತಿದೆ. ಈ ಹಿಂದೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ರೆಸಲ್ಯೂಶನ್ 1267 ಕ್ರಮವನ್ನು ಸಂಪೂರ್ಣವಾಗಿ ಜಾರಿಗೆ ತರಲು ಪಾಕಿಸ್ತಾನ ಯಾವುದೇ ಕ್ರಮ ಕೈಗೊಂಡಿಲ್ಲ. ಭಯೋತ್ಪಾನೆಯ ಹಣಕಾಸು ವ್ಯವಸ್ಥೆ(ಟೆರರ್ ಫಂಡಿಂಗ್)ಯ ವಿರುದ್ಧ ಕ್ರಮ ಕೈಗೊಂಡಿರುವ ಕುರಿತು ಸ್ಪಷ್ಟಪಡಿಸಿಲ್ಲ ಎಂದು ಎಫ್‍ಎಟಿಎಫ್ ಪಾಕಿಸ್ತಾನವನ್ನು ತಿವಿದಿತ್ತು.

    ಭಾರತ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸುತ್ತಾ ಬಂದಿದ್ದರೂ ಚೀನಾ, ಟರ್ಕಿ, ಮಲೇಷ್ಯಾ ಗಳು ಪಾಕಿಸ್ತಾನದ ಪರ ಬೆಂಬಲ ವ್ಯಕ್ತಪಡಿಸುತ್ತಿವೆ. ಈಗ ಬೂದು ಪಟ್ಟಿಯಲ್ಲಿರುವ ಪಾಕಿಸ್ತಾನ ಕಪ್ಪು ಪಟ್ಟಿಗೆ ಸೇರ್ಪಡೆಯಾದರೆ ಆರ್ಥಿಕವಾಗಿ ಬಹಳಷ್ಟು ಹೊಡೆತ ತಿನ್ನಲಿದೆ.