Tag: ಕ್ಷಮೆ

  • ಸುಪ್ರೀಂ ಚಾಟಿ ಬೆನ್ನಲ್ಲೇ ದೊಡ್ಡ ಗಾತ್ರದಲ್ಲಿ ಪ್ರಕಟಿಸಿ ಕ್ಷಮೆ ಕೋರಿದ ಪತಂಜಲಿ

    ಸುಪ್ರೀಂ ಚಾಟಿ ಬೆನ್ನಲ್ಲೇ ದೊಡ್ಡ ಗಾತ್ರದಲ್ಲಿ ಪ್ರಕಟಿಸಿ ಕ್ಷಮೆ ಕೋರಿದ ಪತಂಜಲಿ

    ನವದೆಹಲಿ: ಸುಪ್ರೀಂ ಕೋರ್ಟ್‌ (Supreme Court) ತರಾಟೆ ಬೆನ್ನಲ್ಲೇ ಪತಂಜಲಿ (Patanjali) ಸಂಸ್ಥೆ ಪತ್ರಿಕೆಗಳಲ್ಲಿ ದೊಡ್ಡ ಗಾತ್ರದಲ್ಲಿ ಪ್ರಕಟಿಸಿ ಕ್ಷಮೆ (Apology) ಕೇಳಿದೆ.

    ಯೋಗ ಗುರು ಬಾಬಾ ರಾಮದೇವ್‌ (Yoga Guru Ramdev) ಮತ್ತು ಆಚಾರ್ಯ ಬಾಲಕೃಷ್ಣ (Acharya Balkrishna) ಅವರು, ನಮ್ಮ ಜಾಹೀರಾತುಗಳನ್ನು ಪ್ರಕಟಿಸುವಲ್ಲಿ ಮಾಡಿದ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಮುಂದೆ ಅಂತಹ ದೋಷಗಳು ಪುನರಾವರ್ತನೆಯಾಗುವುದಿಲ್ಲ. ಇದು ನೀಡುತ್ತಿರುವ ಹೃದಯಪೂರ್ವಕ ಬದ್ಧತೆ ಎಂದು ಪ್ರಕಟಿಸಿ ಕ್ಷಮೆ ಕೋರಿದ್ದಾರೆ. ಇದನ್ನೂ ಓದಿ: ವ್ಯಕ್ತಿಯ ಸಾವಿನ ನಂತರವೂ ಆಸ್ತಿ ಕಿತ್ತುಕೊಳ್ಳುವ ಮೂಲಕ ಕಾಂಗ್ರೆಸ್‌ ಲೂಟಿಗೆ ಇಳಿದಿದೆ: ನರೇಂದ್ರ ಮೋದಿ

    ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ಹಿಂದೆ ಪತ್ರಿಕೆಗಳಲ್ಲಿ ಕ್ಷಮೆ ಕೇಳಬೇಕೆಂದು ಸೂಚಿಸಿತ್ತು. ಆದರೆ ಪತಂಜಲಿ ಸಂಸ್ಥೆ ಸಣ್ಣ ಗಾತ್ರದ ಜಾಹೀರಾತು ನೀಡಿ ಕ್ಷಮೆ ಕೇಳಿತ್ತು. ಇದಕ್ಕೆ ಸಿಟ್ಟಾದ ಕೋರ್ಟ್‌ ಜಾಹೀರಾತು ಯಾವ ಗಾತ್ರದಲ್ಲಿ ಪ್ರಕಟವಾಗಿದೆಯೋ ಅದೇ ಗಾತ್ರದಲ್ಲಿ ಕ್ಷಮೆ ಕೇಳುವಂತೆ ಆದೇಶಿಸಿತ್ತು. ಇದನ್ನೂ ಓದಿ: ಚುನಾವಣಾ ಪ್ರಚಾರದ ವೇಳೆ ಪ್ರಜ್ಞೆ ತಪ್ಪಿದ ನಿತಿನ್ ಗಡ್ಕರಿ

    ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನ್ಯಾ.ಹಿಮಾ ಕೊಹ್ಲಿ ಮತ್ತು ನ್ಯಾ. ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆಯುತ್ತಿದ್ದು ಮುಂದಿನ ವಿಚಾರಣೆಯನ್ನು ಏ.30ಕ್ಕೆ ಮುಂದೂಡಿದೆ. ಅಂದು ನ್ಯಾಯಾಲಯಕ್ಕೆ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಹಾಜರಾಗಬೇಕೆಂದು ಸೂಚಿಸಿದೆ.

     

  • ಬಾಬಾ ರಾಮ್‌ದೇವ್‌ಗೆ ಮತ್ತೆ ಸುಪ್ರೀಂ ತಪರಾಕಿ

    ಬಾಬಾ ರಾಮ್‌ದೇವ್‌ಗೆ ಮತ್ತೆ ಸುಪ್ರೀಂ ತಪರಾಕಿ

    ನವದೆಹಲಿ: ಸುಳ್ಳು ಜಾಹೀರಾತು ಸಂಬಂಧ ಪತಂಜಲಿ(Patanjali) ಸಂಸ್ಥೆಯ ಬಾಬಾ ರಾಮದೇವ್ (Baba Ramdev) ಮತ್ತು ಆಚಾರ್ಯ ಬಾಲಕೃಷ್ಣಗೆ(Acharya Balkrishna) ಸುಪ್ರೀಂಕೋರ್ಟ್ ಮತ್ತೆ ತಪರಾಕಿ ಹಾಕಿದೆ.

    ಕ್ಷಮೆಯಾಚನೆಯ ನೈಜತೆ ತಿಳಿಯಲು ಇಂದು ಇಬ್ಬರ ಜೊತೆ ಸುಪ್ರೀಂಕೋರ್ಟ್ (Supreme Court) ವೈಯಕ್ತಿಕವಾಗಿ ಸಂವಹನ ನಡೆಸಿತು. ಈ ಹಂತದಲ್ಲಿ ಇಬ್ಬರು ಕ್ಷಮೆಯಾಚಿದರೂ, ಅದನ್ನು ಹಿಮಾ ಕೊಹ್ಲಿ, ಅಮಾನುಲ್ಲಾ ಅವರಿದ್ದ ನ್ಯಾಯಪೀಠ ಸಂಪೂರ್ಣವಾಗಿ ಒಪ್ಪಲಿಲ್ಲ.  ಇದನ್ನೂ ಓದಿ: ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

    ನಿಮ್ಮನ್ನು ಕ್ಷಮಿಸಿದ್ದೇವೆ ಎಂದು ನಾವು ಹೇಳುವುದಿಲ್ಲ. ನೀವೇನು ಅಮಾಯಕರಲ್ಲ. ನಿಮ್ಮ ಹಿಂದಿನ ಇತಿಹಾಸದ ಬಗ್ಗೆ ನಾವು ಕುರುಡರಾಗಿರಲು ಸಾಧ್ಯವಿಲ್ಲ. ನಿಮ್ಮ ಕ್ಷಮೆಯಾಚನೆ ಬಗ್ಗೆ ಆಲೋಚಿಸ್ತೇವೆ. ನಿಮ್ಮನ್ನು ಕುಣಿಕೆಯಿಂದ ಬಿಡಿಸಲಾಗಿದೆ ಎಂದು ನಾವು ಹೇಳುತ್ತಿಲ್ಲ. ಮುದ್ರಿಸುವ ಮೂಲಕ ಬಹಿರಂಗವಾಗಿ ಕ್ಷಮೆ ಕೇಳಿ ಎಂದು ಎಚ್ಚರಿಕೆಯ ಧಾಟಿಯಲ್ಲಿ ಸುಪ್ರೀಂಕೋರ್ಟ್ ಚಾಟಿ ಬೀಸಿದೆ.  ಇದನ್ನೂ ಓದಿ: ಅವಕಾಶ ಕೇಳಿ ಬಂದಿದ್ದ ಶೈಲಜಾ ಜೊತೆ 2ನೇ ಮದುವೆಯಾದರು ದ್ವಾರಕೀಶ್

    ಪತಂಜಲಿ ಮತ್ತದರ ಸಂಸ್ಥೆಗಳು ತಮ್ಮನ್ನು ತಾವು ಸುಧಾರಿಸಿಕೊಳ್ಳುವುದಾಗಿ ನೀಡಿದ ಹೇಳಿಕೆ ದಾಖಲಿಸಿಕೊಂಡ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಿತು.

     

  • ಅದು ನನ್ನ ಸಿನಿಮಾವಲ್ಲ, ನನ್ನ ಕ್ಷಮಿಸಿ: ‘ರಂಗನಾಯಕ’ ಬಗ್ಗೆ ಜಗ್ಗೇಶ್ ಅಚ್ಚರಿ ಹೇಳಿಕೆ

    ಅದು ನನ್ನ ಸಿನಿಮಾವಲ್ಲ, ನನ್ನ ಕ್ಷಮಿಸಿ: ‘ರಂಗನಾಯಕ’ ಬಗ್ಗೆ ಜಗ್ಗೇಶ್ ಅಚ್ಚರಿ ಹೇಳಿಕೆ

    ರಂಗನಾಯಕ ಸಿನಿಮಾ ಕುರಿತಂತೆ ಸಾಕಷ್ಟು ಮೆಚ್ಚುಗೆ ಮಾತುಗಳನ್ನು ಆಡಿದ್ದ ನಟ ಜಗ್ಗೇಶ್ (Jaggesh), ಆ ಸಿನಿಮಾದ ಬಗ್ಗೆ ನೆಗೆಟಿವ್ ಕಾಮೆಂಟ್ಸ್ ಬರುತ್ತಿದ್ದಂತೆಯೇ ಅಚ್ಚರಿಯ ಹೇಳಿಕೆಯನ್ನು ಕೊಟ್ಟಿದ್ದಾರೆ. ನಿನ್ನೆ ಅವರ ಹುಟ್ಟು ಹಬ್ಬ. ಪ್ರತಿ ವರ್ಷದಂತೆ ಈ ಬಾರಿಯೂ ಅವರು ರಾಯರ ಸನ್ನಿಧಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡು ಅಲ್ಲಿಂದಲೇ ಫೇಸ್ ಬುಕ್ ಲೈವ್ ಮಾಡಿದ್ದಾರೆ. ಹಲವಾರು ವಿಚಾರಗಳನ್ನು ಮಾತನಾಡುತ್ತಾ, ರಂಗನಾಯಕ (Ranganayaka) ಬಗ್ಗೆಯೂ ಮಾತನಾಡಿದ್ದಾರೆ.

    ಮೊನ್ನೆಯಷ್ಟೇ ಒಂದು ಸಿನಿಮಾ ಮಾಡಿದ್ದೆ. ಅದು ನಿಮಗೆ ಇಷ್ಟವಾಗಿಲ್ಲ. ಅದು ನನ್ನ ಸಿನಿಮಾವಲ್ಲ, ಅದು ನಿರ್ದೇಶಕರ ಸಿನಿಮಾ. ಒಬ್ಬರನ್ನು ನಂಬಿ ನಾನು ಕೆಲಸ ಮಾಡುತ್ತೇನೆ. ಆ ನಿರ್ದೇಶಕರು ತಮ್ಮ ಆಸೆಯಂತೆ ಸಿನಿಮಾ ಮಾಡಿದ್ದಾರೆ. ಪ್ರಿಮಿಯರ್ ಪದ್ಮಿನಿ ಸೇರಿದಂತೆ ಹಲವಾರು ಹಿಟ್ ಚಿತ್ರಗಳನ್ನು ಕೊಟ್ಟಿದ್ದೇನೆ. ಹಾಗೆ ಸಿನಿಮಾ ಇಷ್ಟವಾಗದೇ ಇದ್ದಾಗ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ ಜಗ್ಗೇಶ್.

    ಲೈವ್‌ನಲ್ಲಿ ಜಗ್ಗೇಶ್, ತಮ್ಮ ಬೆಳವಣಿಗೆಗೆ ಮುಖ್ಯ ಕಾರಣ ನನ್ನ ಗುರುಗಳು ರಾಘವೇಂದ್ರ ಸ್ವಾಮಿಗಳು ಎಂದು ಹೇಳಿದ್ದಾರೆ. ಮುಖ್ಯ ವಿಚಾರಕ್ಕೆ ಬರುತ್ತೇನೆ ಎಂದ ಜಗ್ಗೇಶ್, ನಾನು ನೇರವಾಗಿ ಮಾತಾಡುವ ಮನುಷ್ಯ, ಹಳ್ಳಿಯ ಸೊಗಡಿನವನು, ನನ್ನ ಮಾತುಗಳಲ್ಲಿ ಹಳ್ಳಿ ಪದಗಳು ಬಂದು ಬಿಡುತ್ತವೆ ಎಂದು ಪರೋಕ್ಷವಾಗಿ ವರ್ತೂರು ಸಂತೋಷ್ ಅವರಿಗೆ ಬೈದದನ್ನೂ ನೆನಪಿಸಿಕೊಂಡಿದ್ದಾರೆ.

    ನಾನು ಎಂದಿಗೂ ಯಾರಿಗೂ ಕೆಟ್ಟದ್ದನ್ನು ಬಯಸುವುದಿಲ್ಲ ಎಂದು ಮಾತನಾಡಿದ್ದಾರೆ. ಬಳಿಕ ಜಗ್ಗೇಶ್, ಮೈಕ್ ಹಿಡಿದ ಮಾತಾಡುವಾಗ ನನ್ನ ಮಾತಿನಿಂದ ಯಾರಿಗಾದ್ರೂ ಬೇಜಾರಾಗಿದ್ದರೆ ಕ್ಷಮಿಸಿಬಿಡಿ. ನಿಮ್ಮ ತಂದೆಯ ವಯಸ್ಸಿನವನು ಅಂದುಕೊಂಡು ಕ್ಷಮಿಸಿ ಎಂದು ಮಾತನಾಡಿದ್ದಾರೆ.

     

    ಸಿನಿಮಾವೊಂದರ ಪ್ರಚಾರದ ವೇಳೆ, ಹುಲಿ ಉಗುರು ಪ್ರಕರಣದ ಬಗ್ಗೆ ಮಾತನಾಡುತ್ತಾ, ಬಿಗ್ ಬಾಸ್ ಸ್ಪರ್ಧಿ (Bigg Boss Kannada 10) ವರ್ತೂರು ಸಂತೋಷ್ ಅವರನ್ನು ‘ಕಿತ್ತೋದ್ ನನ್ ಮಗ’ ಎಂಬ ಪದ ಬಳಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ ಈಗ ಜಗ್ಗೇಶ್, ವರ್ತೂರು ಸಂತೋಷ್ (Varthur Santhosh) ಹೆಸರು ಹೇಳದೇ ಕ್ಷಮೆ ಕೇಳಿದ್ದಾರೆ.

  • ಟ್ರಾಫಿಕ್ ಪೊಲೀಸರ ಜೊತೆ ಸೌಮ್ಯ ರಾದ್ಧಾಂತ: ಕ್ಷಮೆ ಕೇಳಿದ ನಟಿ

    ಟ್ರಾಫಿಕ್ ಪೊಲೀಸರ ಜೊತೆ ಸೌಮ್ಯ ರಾದ್ಧಾಂತ: ಕ್ಷಮೆ ಕೇಳಿದ ನಟಿ

    ಮ್ಮ ತಪ್ಪಿನ ಅರಿವಾಗಿ ಕೊನೆಗೂ ಕ್ಷಮೆ ಕೇಳಿದ್ದಾರೆ ನಟಿ ಸೌಮ್ಯ ಜಾನು.  ರಾಂಗ್ ರೂಟ್ ನಲ್ಲಿ ಕಾರು ಚಲಾಯಿಸಿದ್ದಲ್ಲದೇ, ಪೊಲೀಸರ (Police) ಜೊತೆಯೇ ಕಿರಿಕ್ ಮಾಡಿಕೊಂಡಿದ್ದ ತೆಲುಗು ನಟಿ ಸೌಮ್ಯ ಜಾನು (Soumya Janu) ವಿರುದ್ಧ ಹೈದರಾಬಾದ್ (Hyderabad)ನ ಬಂಜಾರ (Banjara Hills) ಹಿಲ್ಸ್ ಪೊಲೀಸರು ಪ್ರಕರಣ ದಾಖಲಾಗಿತ್ತು. ತುರ್ತು ಕಾರಣದಿಂದಾಗಿ ರಾಂಗ್ ರೂಟ್ ನಲ್ಲಿ ಬಂದೆ. ಪೊಲೀಸರಿಗೆ ನನಗೆ ಕೆಟ್ಟದಾಗಿ ನಿಂದಿಸಿದರು ಎಂದು ನಟಿ ಹೇಳಿಕೊಂಡಿದ್ದರು.

    ತಾಯಿಗೆ ಮೆಡಿಷನ್ ತರಬೇಕಿತ್ತು ಎನ್ನುವ ಕಾರಣಕ್ಕಾಗಿ ಸೌಮ್ಯ, ತಮ್ಮ ಕಾರನ್ನು ರಾಂಗ್ ರೂಟ್ ನಲ್ಲಿ ಚಲಾಯಿಸಿದ್ದರಂತೆ. ಈ ಸಮಯದಲ್ಲಿ ಇವರ ಕಾರನ್ನು ತಡೆದ ಟ್ರಾಫಿಕ್ ಹೋಮ್ ಗಾರ್ಡ್ ದಂಡ ಕಟ್ಟುವಂತೆ ಹೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ಮಧ್ಯ ಮಾತಿನ ಚಕಮಕಿ ನಡೆದಿತ್ತು. ಈ ಘಟನೆಯಲ್ಲಿ ಹೋಮ್ ಗಾರ್ಡ್ ಸಮವಸ್ತ್ರ ಹರಿದಿತ್ತು. ಈ ವಿಡಿಯೋ ವೈರಲ್ ಆಗಿತ್ತು.

    ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸೌಮ್ಯ ಜಾನು ಕುಡಿದು ಕಾರು ಚಲಾಯಿಸುತ್ತಿದ್ದರು ಎಂದು ಕೆಲವರು ಹೇಳಿದ್ದರು. ಆದರೆ, ಸೌಮ್ಯಗೆ ಕುಡಿಯುವ ಅಭ್ಯಾಸವಿಲ್ಲ ಎಂದು ನಟಿ ಹೇಳಿಕೊಂಡಿದ್ದರು. ಪೊಲೀಸ್ ತಮ್ಮೊಂದಿಗೆ ಅನುಚಿತ ವರ್ತನೆ ಮಾಡಿದ್ದೇ ಇಷ್ಟೆಲ್ಲ ರಾದ್ಧಾಂತಕ್ಕೆ ಕಾರಣ ಎಂದಿದ್ದರು.

     

    ಲಯನ್ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ಸೌಮ್ಯ ಕೂಡ ಹೋಮ್ ಗಾರ್ಡ್ ವಿರುದ್ಧ ದೂರು ದಾಖಲಿಸುವುದಾಗಿ ಹೇಳಿದ್ದರು. ಸದ್ಯ ಬಂಜಾರ್ ಹಿಲ್ಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ನಟಿ ಕ್ಷಮೆಯಾಚಿಸಿದ್ದಾರೆ.

  • ತ್ರಿಶಾನ ‘ರೆಸಾರ್ಟ್’ಗೆ ಕರೆಯಿಸಿಕೊಂಡಿದ್ದೆ: ಮಾತಿಗೆ ಕ್ಷಮೆ ಕೇಳಿದ ರಾಜು

    ತ್ರಿಶಾನ ‘ರೆಸಾರ್ಟ್’ಗೆ ಕರೆಯಿಸಿಕೊಂಡಿದ್ದೆ: ಮಾತಿಗೆ ಕ್ಷಮೆ ಕೇಳಿದ ರಾಜು

    ಹಿರಿಯ ರಾಜಕಾರಣಿಗಾಗಿ ನಟಿ ತ್ರಿಶಾರನ್ನು 25 ಲಕ್ಷ ರೂಪಾಯಿ ಕೊಟ್ಟು ರೆಸಾರ್ಟ್ ಗೆ ಕರೆಯಿಸಿಕೊಂಡಿದ್ದೆವು ಎಂದು ಎಐಎಡಿಎಂಕೆ ಉಚ್ಚಾಟಿತ ಮುಖಂಡ ಎ.ವಿ.ರಾಜು ಅಸಂಬದ್ಧ ಹೇಳಿಕೆ ನೀಡಿದ್ದರು. ಈ ಮಾತು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ತಮಿಳು ಸಿನಿಮಾ ರಂಗದ ಅನೇಕರು ರಾಜು ವಿರುದ್ಧ ಹರಿಹಾಯ್ದಿದ್ದರು. ತ್ರಿಶಾ ಕೂಡ ಕಾನೂನು ರೀತಿಯ ಕ್ರಮಕ್ಕೆ ಮುಂದಾಗುವ ಕುರಿತು ಪ್ರತಿಕ್ರಿಯೆ ನೀಡಿದ್ದರು.

    ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ರಾಜು ಕ್ಷಮೆ ಕೇಳಿದ್ದಾರೆ. ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ. ನಾನು ತ್ರಿಶಾ ರೀತಿಯ ನಟಿಯನ್ನು ಎಂದು ಹೇಳಿದ್ದು, ತ್ರಿಶಾ ಅವರನ್ನೇ ಅಂತ ಹೇಳಿಲ್ಲ. ಆದರೂ, ನಾನು ಕ್ಷಮೆ (Kshame) ಕೇಳುತ್ತೇನೆ. ಯಾರನ್ನೂ ನೋಯಿಸುವ ಉದ್ದೇಶ ತಮಗೆ ಇರಲಿಲ್ಲವೆಂದು ಹೇಳಿದ್ದಾರೆ.

    ಪದೇ ಪದೇ ನಟಿ ತ್ರಿಶಾ (Trisha) ಅವರ ಮೇಲೆ ಮಾನಹಾನಿ ಮಾಡುವಂತಹ ಘಟನೆಗಳು ತಮಿಳು ನಾಡಿನಲ್ಲಿ ನಡೆಯುತ್ತಿವೆ. ಈ ಹಿಂದೆ ಮನ್ಸೂರ್ ಅಲಿ ಖಾನ್ ಕೂಡ ತ್ರಿಶಾರ ಬಗ್ಗೆ ಅವಹೇಳನ ಮಾಡುವಂತ ಮಾತುಗಳನ್ನು ಆಡಿದ್ದರು. ಇದೀಗ ತಮಿಳು ನಾಡಿನ ರಾಜಕೀಯ ಮುಖಂಡ  ಎ.ವಿ.ರಾಜು (A.V. Raju)ನಾಲಿಗೆ ಹರಿಬಿಟ್ಟಿದ್ದರು.

    ಲೈಂಗಿಕ ಕೆಲಸಕ್ಕಾಗಿ ಎ.ವೆಂಕಟಾಚಲಂ (A. Venkatachalam) ಅವರು ತ್ರಿಶಾರಿಗೆ 25 ಲಕ್ಷ ರೂಪಾಯಿ ಆಫರ್ ನೀಡಿದ್ದರು. ಶಾಸಕರೊಬ್ಬರು ಅದಕ್ಕೆ ಒಪ್ಪಿಸಿದ್ದರು ಎಂದು ರಾಜು ಹೇಳಿದ್ದರು. ಇಂತಹ ಅನೇಕ ನಟಿಯರು ನಮ್ಮಲ್ಲಿ ಇದ್ದಾರೆ ಎಂದು ರಾಜು ಹೇಳಿಕೆ ನೀಡಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ಈ ವಿಡಿಯೋ ಭಾರೀ ಸದ್ದು ಮಾಡುತ್ತಿದ್ದಂತೆಯೇ ಇದ್ದಕ್ಕೆ ನಟಿ ತ್ರಿಶಾ ಕೂಡ ಪ್ರತಿಕ್ರಿಯೆ ನೀಡಿದ್ದರು. ಪ್ರಚಾರಕ್ಕಾಗಿ ಹೀಗೆ ನಾಲಿಗೆ ಹರಿಬಿಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ಲೀಗಲ್ ಟೀಮ್ ತಕ್ಕ ಪಾಠ ಕಲಿಸೋಕೆ ಸಜ್ಜಾಗಿದೆ ಎಂದು ತ್ರಿಷಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

    ಪ್ರಚಾರಕ್ಕಾಗಿ ಇಂತ ಕೀಳು ಮಟ್ಟದ ವ್ಯಕ್ತಿಗಳನ್ನು ಎದುರುಗೊಳ್ಳೋಕೆ ಅಸಹ್ಯವಾಗುತ್ತಿದೆ. ಇದನ್ನು ಎಂದಿಗೂ ಸಹಿಸಲ್ಲ ಮತ್ತು ಸುಮ್ಮನೆ ಕೂರುವುದಿಲ್ಲ. ನನ್ನ ಲೀಗಲ್ ಟೀಮ್ ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದರು.

  • ಪೂನಂ ಪರವಾಗಿ ಕ್ಷಮೆ ಕೇಳಿದ ಡಿಜಿಟಲ್ ಟೀಮ್

    ಪೂನಂ ಪರವಾಗಿ ಕ್ಷಮೆ ಕೇಳಿದ ಡಿಜಿಟಲ್ ಟೀಮ್

    ಸಾವಿನ ನಾಟಕವಾಡಿ ಅಭಿಮಾನಿಗಳ ಶಾಕ್ ಗೆ ಕಾರಣವಾಗಿದ್ದ ಪೂನಂ ಪಾಂಡೆ (Poonam Pandey) ಪರವಾಗಿ ಅವರ ಡಿಜಿಟಲ್ ಟೀಮ್ ಕ್ಷಮೆ ಕೇಳಿದೆ. ಪೂನಂ ಅವರ ಉದ್ದೇಶ ಒಳ್ಳೆಯದಾಗಿತ್ತು. ಆದರೆ, ಆಯ್ಕೆ ಮಾಡಿಕೊಂಡ ಕ್ರಮಕ್ಕಾಗಿ ನಾವು ವಿಷಾದಿಸುತ್ತೇವೆ ಎಂದು ಟೀಮ್ ಹೇಳಿಕೊಂಡಿದೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಕೂಡ ಮಾಡಿದೆ.

    ಗರ್ಭಕಂಠ ಕ್ಯಾನ್ಸರ್ (Cervical Cancer) ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿಷಾದ ವ್ಯಕ್ತ ಪಡಿಸಿದ್ದರೂ, ಅವರ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.

    ಈ ಪ್ರಕರಣದ ಕುರಿತಂತೆ ಪೂನಂ ಮೇಲೆ  ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.

    ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಮ್ಯಾನೇಜರ್ ಮೂಲಕ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದರೆ, ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮಾತ್ರ ನಟಿಯ ಬೆಂಬಲಕ್ಕೆ ನಿಂತಿದ್ದಾರೆ. ಪೂನಂ ಮಾಡಿದ ಕೆಲಸ ಉತ್ತಮವಾದದ್ದು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

     

    ನೀವು ಮಾಡಿದ ಕೆಲಸಕ್ಕೆ ಟೀಕೆಗಳು ಬರಬಹುದು. ಆದರೆ, ನೀವು ಮಾಡಿದ ಕೆಲಸ ಮೆಚ್ಚುವಂಥದ್ದು. ನಿಮ್ಮಿಂದಾಗಿ ಗರ್ಭಕಂಠ ಕ್ಯಾನ್ಸರ್ ಕುರಿತಂತೆ ವ್ಯಾಪಕವಾಗಿ ಪ್ರಚಾರ ಸಿಕ್ಕಿದೆ. ನಿಮ್ಮಂತೆಯೇ ನಿಮ್ಮ ಆತ್ಮ ಕೂಡ ಸುಂದರ. ನಿಮಗೆ ಮತ್ತಷ್ಟು ಆಯುಷ್ಯ ಹೆಚ್ಚಲಿ ಎಂದು ವರ್ಮಾ ಬರೆದುಕೊಂಡಿದ್ದಾರೆ.

  • ನಟಿ ತ್ರಿಷಾಗೆ ಕೊನೆಗೂ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

    ನಟಿ ತ್ರಿಷಾಗೆ ಕೊನೆಗೂ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

    ಖ್ಯಾತ ನಟಿ ತ್ರಿಷಾಗೆ ಮಾನಹಾನಿ ಆಗುವಂತಹ ಹೇಳಿಕೆ ನೀಡಿದ್ದ ಹಿರಿಯ ನಟ ಮನ್ಸೂರ್ ಅಲಿ ಖಾನ್ ಕೊನೆಗೂ ಕ್ಷಮೆ ಕೇಳಿದ್ದಾರೆ. ಪೊಲೀಸ್ ಠಾಣೆ, ಕೋರ್ಟ್ ಮೆಟ್ಟಿಲು ಏರುತ್ತಿದ್ದಂತಯೆ ಎಚ್ಚೆತ್ತುಕೊಂಡ ಮನ್ಸೂರ್, ತನ್ನಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳಿದ್ದಾರೆ. ನಿಮ್ಮ ವಿವಾಹದ ದಿನದಂದು ಮಾಂಗಲ್ಯವನ್ನು ಮುಟ್ಟಿ ಆಶೀರ್ವದಿಸುವಂತಹ ಅವಕಾಶ ನನಗೆ ಬರಲಿ ಎಂದು ಅವರು ಹೇಳಿದ್ದಾರೆ.

    ಮೊನ್ನೆಯಷ್ಟೇ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌ‍ಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ.

    ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದಾರೆ. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಸೆಷನ್ಸ್ ನ್ಯಾಯಾಲಯ ಗರಂ ಆಗಿದೆ ಎಂದು ವರದಿ ಆಗಿತ್ತು.

    ಮನ್ಸೂರ್ ಅಲಿ ಖಾನ್ (Mansoor Ali Khan) ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳು ಚಿತ್ರೋದ್ಯಮದಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ. ಲಿಯೋ ಸಿನಿಮಾದಲ್ಲಿ ನಾಯಕಿ ತ್ರಿಷಾ (Trisha) ಅವರನ್ನು ರೇಪ್ (Rape) ಮಾಡುವಂತಹ ಸನ್ನಿವೇಶ ಇದೆ ಅಂದುಕೊಂಡಿದೆ. ಆದರೆ, ಇರಲಿಲ್ಲ. ಇದ್ದರೆ ಅನಾಮತ್ತಾಗಿ ಎತ್ತಿಕೊಂಡು ಹೋಗಿ ಬೆಡ್ ಮೇಲೆ ಬೀಸಾಕುತ್ತಿದ್ದೆ. ಈ ಹಿಂದೆ ಖುಷ್ಬೂ ಸೇರಿದಂತೆ ಹಲವರನ್ನು ಹಾಗೆಯೇ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದರು.

    ತ್ರಿಷಾ ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು. ಜೊತೆಗೆ ಲಿಯೋ ಸಿನಿಮಾದ ನಿರ್ದೇಶಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಮತ್ತೆ ಆತನೊಂದಿಗೆ ನಾನು ನಟಿಸುವುದಿಲ್ಲ ಎಂದು ತ್ರಿಷಾ ಹೇಳಿಕೊಂಡಿದ್ದರು.

     

    ಇದೀಗ ಖಷ್ಬೂ (Khushboo) ಈ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಮನ್ಸೂರ್ ಅಲಿ ಖಾನ್ ನಂತಹ ಕೊಳಕು ಮನಸ್ಥಿತಿಯವರಿಗೆ ಕಾನೂನು ಮೂಲಕ ಪಾಠ ಕಲಿಸಬೇಕು. ಇಲ್ಲದಿದ್ದರೆ ಇಂತಹ ಗಂಡಸರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಮಾತನಾಡಿದ್ದಾರೆ. ಮತ್ತು ತಾವು ಕಾನೂನು ಮೂಲಕವೇ ಉತ್ತರಿಸುವುದಾಗಿ ತಿಳಿಸಿದ್ದರು. ಇದೀಗ ಮನ್ಸೂರ್ ಕಾನೂನು ಕುಣಿಕೆಯಲ್ಲಿ ತೂಗಾಡುತ್ತಿದ್ದಾರೆ. ಈ ಮಧ್ಯೆ ಅವರು ಕ್ಷಮೆ ಕೇಳುವ ಮೂಲಕ ಘಟನೆಯನ್ನು ತಿಳಿಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

  • ಅಭಿಮಾನಿಗೆ ಕಪಾಳಮೋಕ್ಷ: ಕ್ಷಮೆ ಕೇಳಿದ ನಟ ನಾನಾ ಪಾಟೇಕರ್

    ಅಭಿಮಾನಿಗೆ ಕಪಾಳಮೋಕ್ಷ: ಕ್ಷಮೆ ಕೇಳಿದ ನಟ ನಾನಾ ಪಾಟೇಕರ್

    ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ್ದ ನಟ ನಾನಾ ಪಾಟೇಕರ್ (Nana Patekar) ಕೊನೆಗೂ ಕ್ಷಮೆ (Apologized) ಕೇಳಿದ್ದಾರೆ. ಶೂಟಿಂಗ್ ಸಮಯದಲ್ಲಿ ಫೋಟೋಗಾಗಿ ಅಭಿಮಾನಿಯೊಬ್ಬ ಪಾಟೇಕರ್ ಬಳಿ ಬಂದಿದ್ದ, ಅಭಿಮಾನಿಗೆ ಫೋಟೋ ಕೊಡುವ ಬದಲು, ಕಪಾಳಕ್ಕೆ ಬಾರಿಸಿದ್ದರು ನಾನಾ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ನಾನಾ ಪಾಟೇಕರ್ ಅಭಿಮಾನಿಯ ಕೆನ್ನೆಗೆ ಹೊಡೆದ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಆ ವಿಡಿಯೋ ವೈರಲ್ ಕೂಡ ಆಗಿತ್ತು. ಅನೇಕರು ನಾನಾ ನಡೆಯನ್ನು ಖಂಡಿಸಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು ಸಿನಿಮಾದ ದೃಶ್ಯ ಎನ್ನುವಂತೆ ಬಿಂಬಿಸಲಾಗಿತ್ತು. ಆದರೆ, ಅದು ಸಿನಿಮಾದ ವಿಡಿಯೋ ಅಲ್ಲ ಎನ್ನುವುದನ್ನು ನಾನಾ ಒಪ್ಪಿಕೊಂಡಿದ್ದಾರೆ.

     

    ಅಭಿಮಾನಿಗೆ ಹೊಡೆದಿರುವುದು ನನಗೂ ನೋವಾಗಿದೆ. ಅವರು ನನ್ನ ಸಿನಿಮಾ ತಂಡದವರು ಅಂದುಕೊಂಡಿದ್ದೆ. ಆ ನಂತರ ನಾನು ಅವರನ್ನು ಹುಡುಕಿ ಕ್ಷಮೆ ಕೇಳೋಣ ಅಂದುಕೊಂಡಿದ್ದೆ. ಆದರೆ, ಅವರು ಭಯದಿಂದ ಓಡಿದ್ದರು. ನನ್ನಿಂದ ತಪ್ಪಾಗಿದೆ ದಯವಿಟ್ಟು ಕ್ಷಮಿಸಿ. ನಾನು ಎಂದೂ ಆ ರೀತಿ ಮಾಡಿದವನು ಅಲ್ಲ ಎಂದು ನಾನಾ ಪಾಟೇಕರ್ ವಿಡಿಯೋವೊಂದನ್ನು ಮಾಡಿ ಕ್ಷಮೆ ಕೇಳಿದ್ದಾರೆ.

  • ನರ್ಸ್‌ಗಳ ಸೌಂದರ್ಯದ ಕುರಿತು ಹೇಳಿಕೆ- ರಾಜು ಕಾಗೆ ಕ್ಷಮೆಯಾಚನೆ

    ನರ್ಸ್‌ಗಳ ಸೌಂದರ್ಯದ ಕುರಿತು ಹೇಳಿಕೆ- ರಾಜು ಕಾಗೆ ಕ್ಷಮೆಯಾಚನೆ

    ಚಿಕ್ಕೋಡಿ: ತುಂಬಿದ ಸಭೆಯಲ್ಲಿ ನರ್ಸ್‌ಗಳ (Nurse) ಸೌಂದರ್ಯ ಬಗ್ಗೆ ಕಾಂಗ್ರೆಸ್ ಶಾಸಕ ರಾಜು ಕಾಗೆ (Raju Kage) ಮಾತನಾಡಿದ ವಿಚಾರಕ್ಕೆ ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ (Apology)  ಕೇಳುತ್ತೇನೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದ್ದಾರೆ.

    ಈ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ ಕಾಂಗ್ರೆಸ್ (Congress) ಶಾಸಕ ರಾಜು ಕಾಗೆ ಕ್ಷಮೆ ಕೋರಿದ್ದಾರೆ. ಭಾನುವಾರ ಸಮಾರಂಭದಲ್ಲಿ ಮಾತನಾಡಿದ್ದು ಯಾರನ್ನೂ ಉದ್ದೇಶಿಸಿ ಅಲ್ಲ. ನಾನೇನೂ ನಾಲ್ಕು ಗೋಡೆಯಲ್ಲಿ ಮಾತನಾಡಿಲ್ಲ. ಸಾವಿರಾರು ಜನರಿದ್ದ ಸಭೆಯಲ್ಲಿ ಮಾತನಾಡಿದ್ದೇನೆ. ನಾನು ಜವಾಬ್ದಾರಿಯಿಂದ ಮಾತನಾಡಿದ್ದೇನೆ. ನಾನು ಹೇಳಿದ್ದು ವಯಸ್ಸು ಆಯ್ತಲ್ಲ, ಮುದುಕನಾದೆನಲ್ಲ ಅಂತಾ ಮನಸ್ಸಿಗೆ ನೋವಾಯ್ತು ಅಂತಾ ಹೇಳಿದೆ ಎಂದರು. ಇದನ್ನೂ ಓದಿ:‌ ನರ್ಸ್‌ಗಳು, ಚೆಂದ ಚೆಂದ ಹುಡುಗಿಯರು ಇದ್ದಾರೆ.. ನನ್ನನ್ನು ಅಜ್ಜ ಅಂತಾರೆ: ರಾಜು ಕಾಗೆ ಬೇಸರ

    ಶಬ್ಧದ ಅರ್ಥ ಸಾವಿರಾರೂ ರೀತಿಯಲ್ಲಿ ನೀವು ಅರ್ಥ ಮಾಡಿಕೊಳ್ಳಬಹುದು. ನನಗೆ ವಯಸ್ಸಾಯ್ತು ಅಂತಾ ಮಾನಸಿಕ ನೋವಾಯ್ತು. ಏನಾದರೂ ನನ್ನ ಮಾತಿನಿಂದ ನೋವಾಗಿದ್ರೆ ಕ್ಷಮೆ ಕೇಳುತ್ತಿದ್ದೇನೆ. ಯಾವುದೇ ಉದ್ದೇಶದಿಂದ ನಾನು ಮಾತನಾಡಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ರಾಜು ಕಾಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಹುಟ್ಟುಹಬ್ಬ – ಮಾವುತ, ಕಾವಾಡಿಗಳಿಗೆ ಉಪಹಾರಕೂಟ ಏರ್ಪಡಿಸಿ ಆಚರಣೆ

    ತುಂಬಿದ ಸಭೆಯಲ್ಲಿ ನರ್ಸ್‌ಗಳ ಸೌಂದರ್ಯದ ಬಗ್ಗೆ ಶಾಸಕ ರಾಜು ಕಾಗೆ ಮಾತನಾಡಿದ ವಿಡಿಯೋ ವೈರಲ್ ಆಗಿತ್ತು. ಬೆಳಗಾವಿ (Belagvi) ಜಿಲ್ಲೆ ಅಥಣಿ ತಾಲೂಕಿನ ಪಿ.ಕೆ.ನಾಗನೂರು ಗ್ರಾಮದಲ್ಲಿ ದಸರಾ ಮಹೋತ್ಸವದಲ್ಲಿ ಭಾಷಣ ಮಾಡಿದ್ದ ಅವರು, ಲಿವರ್ ಟ್ರಾನ್ಸ್‌ಪ್ಲಾಂಟ್ ಆದಾಗ ಒಂದು ತಿಂಗಳು ಆಸ್ಪತ್ರೆಯಲ್ಲಿದ್ದೆ. ವೈದ್ಯರು ದಿನವೂ ಬಂದು ಹೇಗಿದ್ದೀರಿ ಅಂತಾ ಕೇಳೋರು. ಆಗ ಆಸ್ಪತ್ರೆಯಲ್ಲಿ ಇದ್ದ ಡಾಕ್ಟರ್‌ಗೆ ನಾನು ಹೇಳಿದ್ದೆ. ನನ್ನ ಆರೋಗ್ಯಕ್ಕೆ ಏನೂ ಆಗಿಲ್ಲ. ನನ್ನ ಆಪರೇಷನ್ ಸಕ್ಸಸ್ ಮಾಡಿದ್ದೀರಿ, ಎಲ್ಲಾ ಆಗಿದೆ. ಆದರೆ ನಿಮ್ಮಲ್ಲಿ ನರ್ಸ್ಗಳು ಚೆಂದ ಚೆಂದ ಹುಡುಗಿಯರು ಇದ್ದಾರೆ. ಅವರು ನನಗೆ ಅಜ್ಜ ಅನ್ನುತ್ತಿದ್ದಾರೆ. ಅದು ನನಗೆ ಮಾನಸಿಕ ಹಿಂಸೆ ಆಗಿದೆ ಎಂದಿದ್ದೆ ಎಂದು ಶಾಸಕ ರಾಜು ಕಾಗೆ ಹೇಳಿದ್ದರು. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಕೌಂಟ್‍ಡೌನ್?- ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ಯಾರಿಕೇಡ್ ಮುರಿದು ನುಗ್ಗಿದ ಅಭಿಮಾನಿಗಳು: ಭೇಟಿ ನಿಲ್ಲಿಸಿ ಕ್ಷಮೆ ಕೇಳಿದ ಕಿಚ್ಚ

    ಬ್ಯಾರಿಕೇಡ್ ಮುರಿದು ನುಗ್ಗಿದ ಅಭಿಮಾನಿಗಳು: ಭೇಟಿ ನಿಲ್ಲಿಸಿ ಕ್ಷಮೆ ಕೇಳಿದ ಕಿಚ್ಚ

    ಕಿಚ್ಚ ಸುದೀಪ್ (Kiccha Sudeep) ನಿನ್ನೆಯಿಂದಲೇ ಅಭಿಮಾನಿಗಳ ಜೊತೆ ಹುಟ್ಟು ಹಬ್ಬವನ್ನು (birthday) ಆಚರಿಸಿಕೊಳ್ಳುತ್ತಿದ್ದಾರೆ. ಇಡೀ ರಾತ್ರಿ ಮತ್ತು ಇಂದು ಬೆಳಗ್ಗೆಯಿಂದ ನೆಚ್ಚಿನ ಅಭಿಮಾನಿಗಳ (fans) ಜೊತೆಯೇ ಇದ್ದು, ಅವರೊಂದಿಗೆ ಸಂಭ್ರಮಿಸಿದ್ದಾರೆ. ಆದರೆ, ಕೊನೆಯ ಕ್ಷಣದಲ್ಲಿ ಆದ ಘಟನೆಯಿಂದಾಗಿ ಅಭಿಮಾನಿಗಳ ಭೇಟಿ ನಿಲ್ಲಿಸಿದ್ದಾರೆ ಸುದೀಪ್.

    ನಿನ್ನೆ ರಾತ್ರಿಯಿಂದಲೇ ಅಭಿಮಾನಿಗಳ ಜೊತೆ ಸುದೀಪ್ ನಿದ್ದೆ ಬಿಟ್ಟು, ಅವರೊಂದಿಗೆ ಬೆರೆತಿದ್ದರು. ಅಭಿಮಾನಿಗಳನ್ನು ಭೇಟಿ ಮಾಡಿದ್ದರು. ಇಂದು ಸುದೀಪ್ ಮನೆ ಮುಂದೆ ಯಾರೂ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದರೂ ಅಭಿಮಾನಿಗಳು ಬಿಡಲಿಲ್ಲ. ಹಾಗಾಗಿ ಎಲ್ಲರ ಭೇಟಿಗಾಗಿ ಅವರ ಮನೆಮುಂದೆ ಬ್ಯಾರಿಕೇಡ್ ಹಾಕಿ ಭೇಟಿಯ ವ್ಯವಸ್ಥೆ ಮಾಡಲಾಗಿತ್ತು.

    ನೆಚ್ಚಿನ ನಟನಿಗೆ ಕೈ ಕುಲುಕಿ ಶುಭ ಹಾರೈಸುವುದಕ್ಕಾಗಿ ಮತ್ತೆ ಸಾವಿರಾರು ಜನರು ಮನೆ ಮುಂದೆ ಜಮಾಯಿಸಿದ್ದರು. ಮೊದ ಮೊದಲು ವ್ಯವಸ್ಥಿತವಾಗಿಯೇ ಭೇಟಿ ಸಾಧ್ಯವಾಯಿತು. ಸೆಕ್ಯೂರಿಟಿ ಕೂಡ ಚೆನ್ನಾಗಿತ್ತು. ಅಭಿಮಾನಿಗಳ ಸಂಖ್ಯೆ ಜಾಸ್ತಿಯಾಗುತ್ತಾ ನೂಕುನುಗ್ಗಲು ಉಂಟಾಯಿತು. ಸೆಕ್ಯೂರಿಟಿಗೆ ಎಂದೇ ಹಾಕಿದ್ದ ಬ್ಯಾರಿಕೇಡ್ ಗಳನ್ನು ಮುರಿದು ಹಾಕಿ ಅಭಿಮಾನಿಗಳು ಸುದೀಪ್ ಅವರತ್ತ ನುಗ್ಗಿದರು. ಸೆಕ್ಯೂರಿಟಿ ಅಸಾಧ್ಯವಾಯಿತು. ಹಾಗಾಗಿ ಭೇಟಿ ನಿಲ್ಲಿಸಿ ಮನೆಯೊಳಗೆ ಹೊರಟು ಬಿಟ್ಟರು.

     

    ಅಭಿಮಾನಿಗಳಿಗೆ ಅದರಿಂದ ನಿರಾಸೆಯಾಗಿದೆ ಎಂದು ಅರಿತ ಸುದೀಪ್, ವಿಡಿಯೋವೊಂದನ್ನು ಪೋಸ್ಟ್‌ ಮಾಡಿ ಕ್ಷಮೆ ಕೇಳಿದ್ದಾರೆ. ‘ಎಲ್ಲರನ್ನೂ ಭೇಟಿಯಾಗಲು ಸಾಧ್ಯವಾಗದಿದ್ದಕ್ಕೆ ಕ್ಷಮೆಯಾಚಿಸುತ್ತೇನೆ. ಎಲ್ಲಾ ಬ್ಯಾರಿಕೇಡ್ ಗಳು ಮುರಿದು ಹೋಗಿದ್ದರಿಂದ ಮತ್ತು ಜನರು ವಿಶೇಷವಾಗಿ ಎಲ್ಲಾ ಮಕ್ಕಳು ಉಸಿರುಗಟ್ಟಲು ಪ್ರಾರಂಭಿಸಿದ್ದರಿಂದ ಅದರ ಭದ್ರತೆಯಿಂದ ಹಿಂತೆಗೆದುಕೊಳ್ಳಲಾಯಿತು. ಉತ್ತಮ ವ್ಯವಸ್ಥೆಗಳೊಂದಿಗೆ ಶೀಘ್ರದಲ್ಲೇ ನಿಮ್ಮೆಲ್ಲರನ್ನೂ ಭೇಟಿ ಮಾಡುತ್ತೇನೆ’ ಎಂದು ಬರೆದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]