Tag: ಖಡ್ಗ

  • ವಿಜಯ್ ಮಲ್ಯಗೆ ಮುಳುವಾಗಿದ್ದ ಟಿಪ್ಪು ಖಡ್ಗ 145 ಕೋಟಿಗೆ ಹರಾಜು

    ವಿಜಯ್ ಮಲ್ಯಗೆ ಮುಳುವಾಗಿದ್ದ ಟಿಪ್ಪು ಖಡ್ಗ 145 ಕೋಟಿಗೆ ಹರಾಜು

    ಲಂಡನ್: ಭಾರತದಿಂದ ಪಲಾಯನಗೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ (Vijay Mallya) ಕೊಂಡುಕೊಂಡಿದ್ದ ಟಿಪ್ಪು ಸುಲ್ತಾನ್‌ನ ಖಡ್ಗ (Tipu Sultan’s sword) 145 ಕೋಟಿ ರೂ.ಗೆ ಹರಾಜಾಗಿದೆ.

    ಖಡ್ಗವನ್ನು ಲಂಡನ್‍ನಲ್ಲಿ ಬೋನ್‍ಹ್ಯಾಮ್ ಹರಾಜು ಸಂಸ್ಥೆ ಹರಾಜು ಹಾಕಿದ್ದು 145 ಕೋಟಿ ರೂ.ಗೆ ಬಿಡ್ ಆಗಿದೆ. ಗೌಪ್ಯತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಖಡ್ಗವನ್ನು ಖರೀದಿ ಮಾಡಿದ ವ್ಯಕ್ತಿಯ ಹೆಸರನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಬೋನ್‍ಹ್ಯಾಮ್ ಹೌಸ್ ಸಂಯೋಜಕ ಎನ್ರಿಕಾ ಮೆಡುಗ್ನೊ ಹೇಳಿದ್ದಾರೆ. ಇದನ್ನೂ ಓದಿ: ಇವತ್ತೇ ಸಿದ್ದು ಸಂಪುಟಕ್ಕೆ ಕ್ಲೈಮ್ಯಾಕ್ಸ್ – 24 ಸಂಭವನೀಯ ಸಚಿವರು ಯಾರು?

    2004ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಕಟ್ಟಿಕೊಂಡು ಸ್ಪರ್ಧೆಗೆ ಇಳಿದಿದ್ದ ಮಲ್ಯ, ಪ್ರಚಾರದ ತಂತ್ರವಾಗಿ ಖಡ್ಗವನ್ನು ಬಳಸಿಕೊಂಡಿದ್ದರು. ಆದರೆ ಅವರ ಸಮೇತ ಜನತಾ ಪಕ್ಷದ ಎಲ್ಲಾ ಅಭ್ಯರ್ಥಿಗಳು ಸೋಲು ಕಂಡಿದ್ದರು. ವಿಜಯ್ ಮಲ್ಯ ದಿವಾಳಿಯಾಗಿ ಭಾರತದಿಂದ ಪಲಾಯಾನಗೊಳ್ಳಲು ಈ ಖಡ್ಗ ಕಾರಣ ಎಂಬ ಮಾತು ಕೇಳಿ ಬಂದಿತ್ತು.

    2016ರಲ್ಲಿ ಲಂಡನ್ ಹೈಕೋರ್ಟ್ ಮೆಟ್ಟಿಲೇರಿದ್ದ ಭಾರತೀಯ ಬ್ಯಾಂಕ್‍ಗಳ ಒಕ್ಕೂಟವು ಮಲ್ಯ ಅವರ ಯಾವುದೇ ಚರ, ಸ್ಥಿರ ಆಸ್ತಿ ಮಾರಾಟ ಮಾಡದಂತೆ ನಿಬರ್ಂಧ ವಿಧಿಸಲು ಮನವಿ ಮಾಡಿದ್ದವು. ಈ ವೇಳೆ ಉತ್ತರ ನೀಡಿದ್ದ ಮಲ್ಯ, ನಮ್ಮ ಕುಟುಂಬಕ್ಕೆ ಕೇಡು ತಂದ ಖಡ್ಗವನ್ನು ಮಾರಾಟ ಮಾಡಿರುವುದಾಗಿ ತಿಳಿಸಿದ್ದರು.

    1799ರಲ್ಲಿ ನಡೆದ 4ನೇ ಆಂಗ್ಲೊ-ಮೈಸೂರು ಯುದ್ಧದಲ್ಲಿ ಟಿಪ್ಪು ಸುಲ್ತಾನ್ (Tipu Sultan) ಮರಣ ಹೊಂದಿದಾಗ ಅವರ ಅರಮನೆಯಲ್ಲಿ ಪತ್ತೆಯಾಗಿದ್ದ ಖಡ್ಗವನ್ನು ತೆಗೆದುಕೊಂಡು ಹೋಗಿದ್ದ ಬ್ರಿಟಿಷ್ ಸೇನೆ ಮೆಜರ್ ಜನರಲ್ ಬೇರ್ಡೆಗೆ ಒಪ್ಪಿಸಿತ್ತು. ಬ್ರಿಟಿಷ್ ರಾಜಮನೆತನದ ವಸ್ತು ಸಂಗ್ರಹಾಲಯದಲ್ಲಿದ್ದ ಟಿಪ್ಪು ಖಡ್ಗವನ್ನು 2004 ರಲ್ಲಿ ವಿಜಯ್ ಮಲ್ಯ 1.57 ಕೋಟಿ ರೂ.ಗೆ ಹರಾಜಿನಲ್ಲಿ ಖರೀದಿ ಮಾಡಿದ್ದರು. ಇದನ್ನೂ ಓದಿ: ಕುನೋ ನ್ಯಾಷನಲ್ ಪಾರ್ಕ್‌ನಲ್ಲಿ ಇನ್ನೆರಡು ಚೀತಾ ಮರಿಗಳ ಸಾವು – ಕಳೆದ ಎರಡು ತಿಂಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಳ

  • ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ – ದೆಹಲಿಯಿಂದ ಬೆಂಗ್ಳೂರಿಗೆ ಬಂದ 4,000 ಕೆ.ಜಿ ತೂಕದ ಖಡ್ಗ

    ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ – ದೆಹಲಿಯಿಂದ ಬೆಂಗ್ಳೂರಿಗೆ ಬಂದ 4,000 ಕೆ.ಜಿ ತೂಕದ ಖಡ್ಗ

    ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4,000 ಕೆ.ಜಿ. ತೂಕದ ಖಡ್ಗವು ದೆಹಲಿಯಿಂದ ಬೆಂಗಳೂರನ್ನು ತಲುಪಿದೆ.

    ವಿಶೇಷ ಟ್ರಕ್ ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಸೋಮವಾರ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಪುರೋಹಿತರು, ಸಚಿವರ ನೇತೃತ್ವದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆಯನ್ನು ನೆರವೇರಿಸಿದರು. ಜೊತೆಗೆ ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಎಲ್ಲ ಕಾರ್ಮಿಕ ಸಿಬ್ಬಂದಿಗೂ ಅಭಿನಂದನೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೆಐಎನಲ್ಲಿ 23 ಎಕರೆ ವಿಸ್ತಾರದಲ್ಲಿ ಕೆಂಪೇಗೌಡರ ಸ್ಮರಣಾರ್ಥ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತರ್ ಅವರು ಈ ಪ್ರತಿಮೆಯನ್ನು ಮಾಡಿಕೊಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ ಹೆಗಲು ಮುಟ್ಟಿಕೊಂಡು ನೋಡಿಕೊಂಡಿದ್ದೇಕೆ: ಡಿಕೆಶಿ ಪ್ರಶ್ನೆ

    ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿಗೆ ಬಂದಿಳಿಯುವವರಿಗೆ ಕೆಂಪೇಗೌಡರ ಬೃಹದಾಕಾರದ ಪ್ರತಿಮೆಯ ನೋಟವೇ ಒಂದು ದಿವ್ಯ ಅನುಭೂತಿಯನ್ನು ಮಾಡುವಂತಿರಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ ಎಂದು ಅವರು ಬಣ್ಣಿಸಿದರು.

    ಈ ಸಂದರ್ಭದಲ್ಲಿ ಅಮೆರಿಕದ ‘ಅಕ್ಕ’ ಕನ್ನಡ ಕೂಟಗಳ ಮುಖ್ಯಸ್ಥ ಡಾ.ಅಮರನಾಥ್ ಗೌಡ, ಪ್ರಾಧಿಕಾರದ ಆಯುಕ್ತ ವಿನಯ್ ದೀಪ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಪ್ರಾಧಿಕಾರದ ನಿರ್ದೇಶಕರು ಉಪಸ್ಥಿತರಿದ್ದರು. ಸೋಮವಾರದಂದು ಬೆಂಗಳೂರನ್ನು ತಲುಪಿದ ಕೆಂಪೇಗೌಡರ ಪ್ರತಿಮೆಯ ಖಡ್ಗಕ್ಕೆ (ಕತ್ತಿ) ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಸಾಂಪ್ರದಾಯಿಕವಾಗಿ ಶಕ್ತಿಪೂಜೆಯನ್ನು ನೆರವೇರಿಸಿದರು.

  • ತಿರುಪತಿ ತಿಮ್ಮಪ್ಪನಿಗೆ ಆರೂವರೆ ಕೆ.ಜಿಯ ಚಿನ್ನದ ಖಡ್ಗ ನೀಡಿದ ದಂಪತಿ

    ತಿರುಪತಿ ತಿಮ್ಮಪ್ಪನಿಗೆ ಆರೂವರೆ ಕೆ.ಜಿಯ ಚಿನ್ನದ ಖಡ್ಗ ನೀಡಿದ ದಂಪತಿ

    ಹೈದ್ರಾಬಾದ್‍: ತಿರುಮಲ ವೇಂಕಟೇಶ್ವರ ದೇವಸ್ಥಾನಕ್ಕೆ ಹೈದ್ರಾಬಾದ್‍ನ ಭಕ್ತರೊಬ್ಬರು ದುಬಾರಿ ಬೆಲೆಯ ಚಿನ್ನದ ಖಡ್ಗ ನೀಡಿದ್ದಾರೆ.

    ಹೈದರಾಬಾದ್‍ನ ಭಕ್ತ ಎಂ.ಶ್ರೀನಿವಾಸ್ ಪ್ರಸಾದ್ ಮತ್ತು ಅವರ ಪತ್ನಿ ವೆಂಕಟೇಶ್ವರ ಸ್ವಾಮಿಗೆ 4 ಕೋಟಿ ರೂಪಾಯಿ ಮೌಲ್ಯದ 6.5 ಕೆಜಿ ತೂಕವುಳ್ಳ ಚಿನ್ನದ ಖಡ್ಗವನ್ನು ದೇವರಿಗೆ ಅರ್ಪಿಸಿದ್ದಾರೆ. ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಅಧಿಕಾರಿಗಳಿಗೆ ಹಸ್ತಾಂತರ ಮಾಡಿದ್ದಾರೆ. ದೇವರಿಗೆ ಖಡ್ಗವನ್ನು ನೀಡುವ ಮೊದಲು ತಿರುಮಲ ಕಲೆಕ್ವಿವ್ ಅತಿಥಿ ಗೃಹದಲ್ಲಿ ಭಾನುವಾರ ಮಾಧ್ಯಮಗಳ ಮುಂದೆ ಚಿನ್ನದ ಖಡ್ಗವನ್ನು ಪ್ರದರ್ಶಿಸಿದ್ದಾರೆ.

    ಈ ದಂಪತಿ ಕಳೆದ ವರ್ಷವೇ ದೇವಸ್ಥಾನಕ್ಕೆ ಖಡ್ಗ ಕಾಣಿಕೆಯಾಗಿ ಕೊಡಬೇಕು ಎಂದು ನಿರ್ಧರಿಸಿದ್ದೇವು. ಆದರೆ ಕೊರೊನಾ ಇರುವ ಕಾರಣದಿಂದಾಗಿ ಕೊಡಲು ಸಾಧ್ಯವಾಗಿರಲಿಲ್ಲ ಎಂದು ದಂಪತಿ ಹೇಳಿಕೊಂಡಿದ್ದಾರೆ.

    ಈ ಖಡ್ಗವನ್ನು ತಮಿಳುನಾಡಿನ ಕೊಯುಮತ್ತೂರಿನಲ್ಲಿರುವ ವಿಶೇಷ ಆಭರಣಕಾರರು ತಯಾರಿಸಿದ್ದಾರೆ. ಆರುತಿಂಗಳ ಕಾಲಾವಕಾಶದಲ್ಲಿ ಖಡ್ಗ ತಯಾರಿಸಲಾಗಿದೆ. ಸುಮಾರು ಆರೂವರೆ ಕೆಜಿ ತೂಕವಿದೆ. ಸರಿಸುಮಾರಾಗಿ 4 ಕೋಟಿ ರೂಪಾಯಿಯಾಗಿದೆ.

    ಇದಕ್ಕೂ ಮೊದಲು ತಮಿಳುನಾಡಿನ ತೆನಿ ಮೂಲದ ಜವಳಿ ವ್ಯಾಪಾರಿ ತಂಗಾ ದೋರೈ ಅವರು 2018ರಲ್ಲಿ 1.75 ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನದ ಕತ್ತಿಯನ್ನು ವೆಂಕಟೇಶ್ವರ ಸ್ವಾಮಿಗೆ ಅರ್ಪಿಸಿದ್ದರು.

  • ‘ನಿಮ್ಮ ಕತ್ತನ್ನೇ ಹೊಡಿತೀನಿ’ – ಖಡ್ಗ ತೋರಿಸಿ ಅಭಿಮಾನಿಗಳಿಗೆ ಬಿಸಿ ಮುಟ್ಟಿಸಿದ ಡಿಕೆಶಿ

    ‘ನಿಮ್ಮ ಕತ್ತನ್ನೇ ಹೊಡಿತೀನಿ’ – ಖಡ್ಗ ತೋರಿಸಿ ಅಭಿಮಾನಿಗಳಿಗೆ ಬಿಸಿ ಮುಟ್ಟಿಸಿದ ಡಿಕೆಶಿ

    ಮಂಡ್ಯ: ಕೈಯಲ್ಲಿ ಖಡ್ಗ ಹಿಡಿದು, ಪೇಟ ಧರಿಸಿ ಟಿಪ್ಪು ಸುಲ್ತಾನ್ ಅವತಾರದಲ್ಲಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕಾಣಿಸಿಕೊಂಡಿದ್ದಾರೆ. ಈ ವೇಳೆ ಗಲಾಟೆ ಮಾಡುತ್ತಿದ್ದ ಅಭಿಮಾನಿಗಳಿಗೆ ಕತ್ತಿ ತೋರಿಸಿ, ನಿಮ್ಮ ಕತ್ತನ್ನೇ ಹೊಡಿತೀನಿ ಎಂದು ಹೇಳಿ ವ್ಯಂಗ್ಯವಾಗಿ ಬಿಸಿ ಮುಟ್ಟಿಸಿದ್ದಾರೆ.

    ಇಂದು ಮಂಡ್ಯದ ಶ್ರೀರಂಗಪಟ್ಟಣದ ಟಿಪ್ಪು ಮಡಿದ ಸ್ಥಳದಲ್ಲಿ ಡಿಕೆಶಿ ಅಭಿಮಾನಿಗಳತ್ತ ಖಡ್ಗ ಪ್ರದರ್ಶಿಸಿದ್ದಾರೆ. ಟಿಪ್ಪು ಮಡಿದ ಸ್ಥಳಕ್ಕೆ ಭೇಟಿ ಕೊಟ್ಟ ಡಿಕೆಶಿ ಅವರನ್ನು ಸ್ಥಳೀಯ ಮುಸ್ಲಿಂ ಮುಖಂಡರು ಪೇಟ, ಕತ್ತಿ ನೀಡಿ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ:ಡಿಕೆಶಿ ಜೊತೆ ಜಿಟಿಡಿ ಚಾಮುಂಡಿ ದರ್ಶನ- ದೇವೇಗೌಡ್ರನ್ನು ನೋಡ್ತಿದ್ದಂತೆ ಎಸ್ಕೇಪ್

    ಈ ವೇಳೆ ಡಿಕೆಶಿ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳು ಗಲಾಟೆ ಮಾಡುತ್ತಿದ್ದರು. ಆಗ ಡಿಕೆಶಿ ಸುಮ್ಮನಿರಿ ಎಂದು ಮನವಿ ಮಾಡಿದರು. ಆದರೂ ಅವರ ಹಿಂದೆ ನಿಂತಿದ್ದ ಅಭಿಮಾನಿಗಳು ಡಿಕೆಶಿಯನ್ನು ನೋಡಲು ಗಲಾಟೆ ಮಾಡುತ್ತಿದ್ದರು. ಹೀಗಾಗಿ ‘ಏಯ್ ಸುಮ್ನಿರಿ, ಹಿಂಗೇ ಮಾತಾಡ್ತಿದ್ರೆ ನಿಮ್ಮ ಕತ್ತನ್ನೇ ಹೊಡಿತೀನಿ’ ಎಂದು ಕೈಯಲ್ಲಿದ್ದ ಖಡ್ಗ ತೋರಿಸಿ ತಮಾಷೆ ಮಾಡಿದರು.

    ಈ ವೇಳೆ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತು ಸುರೇಶ್‍ಗೌಡ ಜೊತೆ ಕೂಡ ಡಿಕೆಶಿ ಜೊತೆಗಿದ್ದರು. ಸ್ಥಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ನಾವು ಮತ್ತು ಜೆಡಿಎಸ್ ಅವರು ಒಟ್ಟಿಗೆ ಕೆಲಸ ಮಾಡಿದ್ದೇವೆ. ಜೆಡಿಎಸ್ ಮತ್ತು ನಮ್ಮ ಪ್ರೀತಿ ವೈಯಕ್ತಿಕ ವಿಚಾರ. ಪಕ್ಷದ ಸಿದ್ದಾಂತಗಳನ್ನು ಇಬ್ಬರೂ ಒಪ್ಪಿಕೊಳ್ಳುತ್ತೇವೆ. ಜಾತ್ಯಾತೀತ ತತ್ವದ ಬಗ್ಗೆ ಒಪ್ಪಿಕೊಳ್ಳುತ್ತೇವೆ. ನಾವು ಒಟ್ಟಿಗೆ ಕೆಲಸ ಮಾಡಬೇಕಿದೆ. ರಾಜಕೀಯವಾಗಿ ನಮ್ಮ ಇಬ್ಬರ ಪಕ್ಷದಲ್ಲಿ ಬೇಕಾದಷ್ಟು ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಕಾರ್ಯಕರ್ತರು ಪ್ರೀತಿ ಮಾಡವಾಗ ನಾವು ಇಲ್ಲ ಎಂದು ಹೇಳಲು ಆಗುವುದಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಹೋಗುವ ಕೆಲಸ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ:ಡಿಕೆಶಿ ಜೊತೆ ಸಿದ್ದರಾಮಯ್ಯ ಸಂಧಾನ-‘ಟಗರು’ ರಾಜಿ ಆಫರ್​ಗೆ ‘ಬಂಡೆ’ ಉತ್ತರ

    ಹಾಗೆಯೇ ಶ್ರೀರಂಗಪಟ್ಟಣದ ನಿಮಿಷಾಂಬ ದೇವಾಲಯಕ್ಕೂ ಡಿಕೆಶಿ ಭೇಟಿ ಕೊಟ್ಟು, ವಿಶೇಷ ಪೂಜೆ ಮಾಡಿಸಿದರು. ಈ ಸಂದರ್ಭದಲ್ಲಿ ಮಳೆಯ ನಡುವೆಯೂ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನನ್ನು ಸ್ವಾಗತಿಸಿ ಪ್ರೀತಿ ಮೆರೆದರು.

  • ಗಣೇಶ ವಿಸರ್ಜನೆ ವೇಳೆ ಖಡ್ಗ ಪ್ರದರ್ಶಿಸಿದ ಬಿಜೆಪಿ ಮುಖಂಡ

    ಗಣೇಶ ವಿಸರ್ಜನೆ ವೇಳೆ ಖಡ್ಗ ಪ್ರದರ್ಶಿಸಿದ ಬಿಜೆಪಿ ಮುಖಂಡ

    ವಿಜಯಪುರ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಜಿ.ಪಂ ಬಿಜೆಪಿ ಉಪಾಧ್ಯಕ್ಷನಿಂದ ಖಡ್ಗ ಪ್ರದರ್ಶನ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.

    ವಿಜಯಪುರ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮೆರವಣಿಗರ ವೇಳೆ ಖಡ್ಗ ಪ್ರದರ್ಶನ ಮಾಡಿದ್ದು, ಖಡ್ಗ ಪ್ರದರ್ಶನಕ್ಕೆ ಸಾರ್ವಜನಿಕರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮುದ್ದೇಬಿಹಾಳ ಪಟ್ಟಣದ ಮಾರುತಿ ಬಡಾವಣೆಯಲ್ಲಿ ಕೂರಿಸಿದ್ದ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

    ಈ ವಿಚಾರದ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಪ್ರಭುಗೌಡ ದೇಸಾಯಿ, ನಾನು ಖಡ್ಗ ಪ್ರದರ್ಶನ ಮಾಡಿದರಲ್ಲಿ ಬೇರೆ ಯಾವ ಉದ್ದೇಶವಿಲ್ಲ. ದೇವರ ವಿಚಾರವಾಗಿ ನಾನು ಅದನ್ನು ಹಿಡಿದುಕೊಂಡೆ. ಆದರಲ್ಲಿ ಯಾವುದೇ ಕೆಟ್ಟ ಸಂದೇಶವಿಲ್ಲ. 25 ವರ್ಷದಿಂದ ನಾನು ರಾಜಕೀಯದಲ್ಲಿ ಇದ್ದೇನೆ ನನ್ನ ಮೇಲೆ ಇಲ್ಲಿಯವರೆಗೂ ಯಾವುದೇ ಕೇಸ್ ಆಗಿಲ್ಲ. ನಮ್ಮ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲ ಸಮುದಾಯದವರನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡುತ್ತಿದ್ದೇನೆ ಎಂದು ದೇಸಾಯಿ ಸ್ಪಷ್ಟೀಕರಣ ನೀಡಿದರು.

    ಸಾರ್ವಜನಿಕರಿಂದ ಸಣ್ಣ ತಪ್ಪಾದ್ರೆ ಕೂಡಲೇ ಕಾರ್ಯಪ್ರವೃತ್ತರಾಗುವ ಪೊಲೀಸರು ಮೌನಕ್ಕೆ ಶರಣಾಗಿದ್ದಾರೆ. ಒಂದು ವೇಳೆ ಸಾಮಾನ್ಯ ವ್ಯಕ್ತಿ ಈ ರೀತಿ ಮಾಡಿದ್ದರೆ ಪೊಲೀಸರು ಸುಮ್ಮನೆ ಇರುತ್ತಿದ್ದರಾ? ಮೆರವಣಿವಣಿಗೆ ವೇಳೆ ಖಡ್ಗ ಪ್ರದರ್ಶಿಸಿರುವ ಪ್ರಭುಗೌಡ ದೇಸಾಯಿ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳುವಂತೆ ಸಾರ್ಜನಿಕರು ಆಗ್ರಹಿಸಿದ್ದಾರೆ.

  • ಜನರಿಗೆ ಕೊಟ್ಟ ಆಶ್ವಾಸನೆ ಈಡೇರಿಸದೇ ಕಾಗೆ ಹಾರಿಸಿದ ಶಾಸಕ ಶಿವರಾಜ್ ತಂಗಡಗಿ

    ಜನರಿಗೆ ಕೊಟ್ಟ ಆಶ್ವಾಸನೆ ಈಡೇರಿಸದೇ ಕಾಗೆ ಹಾರಿಸಿದ ಶಾಸಕ ಶಿವರಾಜ್ ತಂಗಡಗಿ

    ಕೊಪ್ಪಳ: ರಾಜಕೀಯ ನಾಯಕರು ಜನ ಸಮೂಹದ ಮುಂದೆ ಭಾಷಣ ಮಾಡುವಾಗ, ಕೊಟ್ಟ ಆಶ್ವಾಸನೆ ಈಡೇರಿಸದೇ ಕಾಗೆ ಹಾರಿಸೋದು ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಪಕ್ಷದ ಶಾಸಕರೊಂದಿಗೆ ಸೇರಿ ದೇವರಿಗೂ ಕಾಗೆ ಹಾರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಕನಕಗಿರಿ ಶಾಸಕ ಶಿವರಾಜ್ ತಂಗಡಗಿ ಮತ್ತು ರಾಹುಲ್ ಕನಕಗಿರಿಯ ಲಕ್ಷ್ಮೀ ನರಸಿಂಹ ಕನಕಾಚಲಪತಿ ದೇವರಿಗೆ ನೀಡಿದ್ದ ಆಶ್ವಾಸನೆಯನ್ನೇ ಮರೆತಿದ್ದಾರೆ. ಕಳೆದ ವಾರ ಹೈದರಾಬಾದ್ ಕರ್ನಾಟಕ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ ಫೆ.11 ರಂದು ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ವೇಳೆ ರಾಹುಲ್ ಸನ್ಮಾನಿಸಿದ ಶಾಸಕ ಶಿವರಾಜ್ ತಂಗಡಗಿ ಬೆಳ್ಳಿ ಖಡ್ಗವನ್ನು ಉಡುಗೊರೆ ನೀಡಿದ್ದರು.

    ಖಡ್ಗ ಕೈಗಿಡುತ್ತಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಲಹೆಯಂತೆ ರಾಹುಲ್ ಗಿಫ್ಟ್ ತಿರಸ್ಕರಿಸಿದ್ದರು. ರಾಹುಲ್ ಈ ನಡೆಗೂ ಒಂದು ಫ್ಲ್ಯಾಶ್ ಬ್ಯಾಕ್ ಇದೆ. ಅದೇನೆಂದರೆ ಫೆ. 10 ರಂದು ಹೊಸಪೇಟೆಯಲ್ಲಿ ಕೂಡ್ಲಿಗಿ ಮಾಜಿ ಶಾಸಕ ನಾಗೇಂದ್ರ ರಾಹುಲ್ ಗಾಂಧಿಗೆ ಕೆಜಿಗಟ್ಟಲೇ ಚಿನ್ನ ಮತ್ತು ಬೆಳ್ಳಿ ಮಿಶ್ರಿತ ವಾಲ್ಮೀಕಿ ಮೂರ್ತಿಯನ್ನು ಉಡುಗೊರೆಯಾಗಿ ಮಾಡಿದ್ದರು. ಇದರಿಂದ ರಾಹುಲ್ ದುಬಾರಿ ಉಡುಗೊರೆ ಪಡೆದರು ಎಂದು ಮಾಧ್ಯಮದಲ್ಲಿ ದೊಡ್ಡ ಸುದ್ದಿಯಾಗಿ, ರಾಹುಲ್ ಮುಜುಗರಕ್ಕೆ ಈಡಾಗಿದ್ದರು.

    ಕೂಡಲೇ ಎಚ್ಚೆತ್ತ ರಾಹುಲ್, ಗಿಫ್ಟ್ ವಾಪಾಸ್ ನೀಡಲು ನಿರ್ಧರಿಸಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಸಲಹೆಯಂತೆ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ನೀಡುವುದಾಗಿ ಘೋಷಣೆ ಮಾಡಿ ಪ್ರಕರಣಕ್ಕೆ ತೆರೆ ಎಳೆದಿದ್ದರು. ಈ ಕಾರಣಕ್ಕೆ ಶಾಸಕ ಶಿವರಾಜ್ ತಂಗಡಗಿ ನೀಡಿದ ಬೆಳ್ಳಿ ಖಡ್ಗವನ್ನು ರಾಹುಲ್ ನಿರಾಕರಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಈ ಬಗ್ಗೆ ಜನರ ಮುಂದೆ ಅನೌನ್ಸ್ ಮಾಡಿದ ಶಾಸಕ ಶಿವರಾಜ್ ತಂಗಡಗಿ, ಈ ಬೆಳ್ಳಿ ಖಡ್ಗವನ್ನು ಕನಕಾಚಲಪತಿ ದೇವಸ್ಥಾನಕ್ಕೆ ನೀಡುವುದಾಗಿ ತಿಳಿಸಿದ್ದರು.

    ಆದರೆ ಕಾರ್ಯಕ್ರಮ ಮುಗಿದು 12 ದಿನ ಕಳೆದರೂ ಖಡ್ಗ ದೇವಸ್ಥಾನ ಸೇರಿಲ್ಲ. ಇದರಿಂದ ಶಾಸಕ ತಂಗಡಗಿ ಇದನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡರಾ ಅಥವಾ ಮಾಧ್ಯಮಗಳ ಬಾಯಿ ಮುಚ್ಚಿಸಲು ನಾಟಕ ಮಾಡಿ, ರಾಹುಲ್ ಗಾಂಧಿಯೇ ಖಡ್ಗವನ್ನು ತೆಗೆದುಕೊಂಡು ಹೋದರಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.