Tag: ಖನೀಜಾ ಫಾತಿಮಾ

  • ಹಿಜಬ್ ಧರಿಸಿ ಕಲಾಪಕ್ಕೆ ಆಗಮಿಸಿದ ಕಲಬುರಗಿ ಕಾಂಗ್ರೆಸ್‍ ಶಾಸಕಿ

    ಹಿಜಬ್ ಧರಿಸಿ ಕಲಾಪಕ್ಕೆ ಆಗಮಿಸಿದ ಕಲಬುರಗಿ ಕಾಂಗ್ರೆಸ್‍ ಶಾಸಕಿ

    ಬೆಂಗಳೂರು: ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜಾ ಫಾತಿಮಾ ಹಿಜಬ್ ಧರಿಸಿಯೇ ಇಂದು ಕಲಾಪಕ್ಕೆ ಆಗಮಿಸಿದ್ದಾರೆ.

    ಈ ಹಿಂದೆ ಹಿಜಬ್ ವಿವಾದಕ್ಕೆ ಸಂಬಂಧಿಸಿ ಮಾತನಾಡಿ, ಹಿಜಬ್ ಧರಿಸುವುದು ಮುಸ್ಲಿಂ ಮಹಿಳೆಯರ ಸಂಪ್ರದಾಯ, ಅದು ಹಕ್ಕಾಗಿದೆ. ನಾನು ಹಿಜಬ್ ಧರಿಸಿಯೇ ವಿಧಾನ ಸಭೆಗೆ ಹೋಗುತ್ತೇನೆ. ಧೈರ್ಯ ಇದ್ದರೇ ತಡೆಯಲಿ ಎಂದು ಶಾಸಕಿ ಸವಾಲೊಡ್ಡಿದ್ದರು. ಅದರಂತೆ ಇಂದು ಹಿಜಬ್ ಧರಿಸಿ ಕಲಾಪದಲ್ಲಿ ಭಾಗಿಯಾಗಿದ್ದಾರೆ. ಈ ಹಿಂದಿನ ಅಧಿವೇಶನಗಳಲ್ಲೂ ಹಿಜಬ್ ಧರಿಸಿಯೇ ಕಲಾಪದಲ್ಲಿ ಪಾಲ್ಗೊಂಡಿದ್ದರು.

    ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಹೋಗಿದ್ದಕ್ಕೆ ತಡೆದು ಹೊರಗಡೆ ಕೂರಿಸಲಾಗಿದೆ. ಹಿಜಬ್‍ನ್ನು ನಾವು ಮೊದಲಿನಿಂದ ಧರಿಸುತ್ತಿದ್ದೇವೆ. ಈಗ ಹೊಸದಾಗಿ ಹಿಜಬ್ ಧರಿಸುತ್ತಿಲ್ಲ. ನಾನು ಕೂಡ ವಿಧಾನಸಭೆಗೆ ಹಿಜಬ್ ಧರಿಸಿಯೇ ಹೋಗಿದ್ದೇನೆ, ಮುಂದೆಯೂ ಹಿಜಬ್ ಧರಿಸಿಯೇ ಹೋಗುತ್ತೇನೆ. ಧೈರ್ಯ ಇದ್ದರೆ ನನ್ನನ್ನು ತಡೆಯಲಿ ಎಂದಿದ್ದರು. ಇದನ್ನೂ ಓದಿ: ಹೆಲ್ಮೆಟ್ ಹಾಕಿದ್ರೆ ಸೇಫ್ಟಿ ಅಲ್ವಾ ಅದ್ಕೆ ಹಿಜಬ್ ಹಾಕಿದ್ರೆ ಸೇಫ್ಟಿ ಅಂದಿದ್ದು: ಜಮೀರ್ ಸಮರ್ಥನೆ

    ಹಿಜಬ್ ವಿವಾದ ದಿನೇ ದಿನೇ ತೀವ್ರ ಸ್ವರೂಪ ಪಡೆದು ಕೊಳ್ಳುತ್ತಿದ್ದು, ಸಮವಸ್ತ್ರ ಧರಿಸಿಯೇ ಶಾಲೆಗೆ ಬರುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಈ ಬೆನ್ನಲ್ಲೆ ಸರ್ಕಾರ ಕೂಡ ಸೂಚನೆ ನೀಡಿತ್ತು. ಈ ಎಲ್ಲದರ ನಡುವೆಯೇ ಬೆಂಗಳೂರು, ಮೈಸೂರು, ಬೆಳಗಾವಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಹಿಜಬ್ ಧರಿಸಿ ಶಾಲೆಗೆ ಆಗಮಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿಯೇ ಶಾಲೆಗೆ ಬಂದ ವಿದ್ಯಾರ್ಥಿನಿಯರು

    ವಿದ್ಯಾರ್ಥಿನಿಯರು ತಮ್ಮ ಜೊತೆಗೆ ಷೋಷಕರನ್ನು ಕೂಡ ಶಾಲೆಗೆ ಕರೆತಂದಿದ್ದಾರೆ. ಸರ್ಕಾರದ ಆದೇಶದಂತೆ ಶಾಲಾ ಸಿಬ್ಬಂದಿ ಹಿಜಬ್ ತೆಗೆಸಿ ಕ್ಲಾಸ್ ರೂಮ್‍ಗೆ ಕಳುಹಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಮುಗಿಯದ ಸಮವಸ್ತ್ರ ಸಮರ – ವಿವಿಧ ಜಿಲ್ಲೆಗಳಲ್ಲಿ ಹಿಜಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರು

  • ಧಮ್ ಇದ್ರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ- ಶಾಸಕಿಗೆ ಈಶ್ವರಪ್ಪ ಸವಾಲು

    ಧಮ್ ಇದ್ರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ- ಶಾಸಕಿಗೆ ಈಶ್ವರಪ್ಪ ಸವಾಲು

    ಮೈಸೂರು: ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ ಎಂದು ಶಾಸಕಿ ಖನೀಜಾ ಫಾತಿಮಾಗೆ ಸಚಿವ ಕೆ.ಎಸ್ ಈಶ್ವರಪ್ಪ ಸವಾಲಾಕಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹಿಜಬ್ ಧರಿಸಿ ಅಧಿವೇಶನಕ್ಕೆ ಬರುವೆ ಎಂದು ಶಾಸಕಿ ಹೇಳಿಕೆ ವಿಚಾರವಾಗಿ ಸಚಿವರು ಖಾರವಾಗಿ ಪ್ರತಿಕ್ರಿಯಿಸಿದರು. ಹಿಜಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ನೀವು ಮೊದಲು ಮಸೀದಿಗೆ ಹೋಗಿ. ಎಷ್ಟು ಜನ ಮಹಿಳೆಯರು ಮಸೀದಿಗೆ ಹೋಗಲು ಅವಕಾಶ ಇದೆ ಎಂದು ಪ್ರಶ್ನಿಸಿದರು.

    ನಾವು ಶಾಲೆಗೆ ಮಾತ್ರ ಹಿಜಬ್ ನಿಷೇಧಿಸಿದ್ದೇವೆ. ಹೊರಗಡೆಗೆ ನಿಷೇಧ ಮಾಡಿಲ್ಲ ಎಲ್ಲಾ ಕಡೆ ಹಾಕಿಕೊಂಡು ಹೋಗಬಹುದು ಎಂದರು. ಹಿಜಬ್ ವಿಚಾರದಲ್ಲಿ ಎಂ.ಎಲ್.ಸಿ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ವಿಕೃತಿಯಿಂದ ಕೂಡಿದ ಹೇಳಿಕೆ. ಇದು ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ. ಅವರ ಮುಖ ನೋಡಲು ಹಿಜಬ್ ತೆಗೆಯಬೇಕಾ? ಇಬ್ರಾಹಿಂ ಅವರ ಈ ಹೇಳಿಕೆ ಯಾರೂ ಒಪ್ಪುವಂತದಲ್ಲ. ಸಮವಸ್ತ್ರದ ಹಿನ್ನೆಲೆಯಿಂದ ಈ ಆದೇಶ ಮಾಡಲಾಗಿದೆ ಎಂದರು. ಇದನ್ನೂ ಓದಿ: ಹಿಜಬ್-ಕೇಸರಿ ಪ್ರತಿಭಟನೆಗೆ ಸಾರ್ವಜನಿಕರ ಎಂಟ್ರಿ- ಮುಸ್ಲಿಂ, ಹಿಂದೂ ಸಂಘಟನೆಗಳಿಂದ ಇಂದು ಧರಣಿ

    ಹಿಜಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ. ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ. ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋತರು ಈಗ ಅಲ್ಲಿಂದಲೇ ಹಿಜಬ್ ವಿವಾದ ಸೃಷ್ಟಿಯಾಗಿದೆ. ಹಿಜಬ್ ವಿವಾದದ ಹಿಂದೆ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷ ಇದೆ. ವೋಟ್ ಬ್ಯಾಂಕ್‍ಗಾಗಿ ಕಾಂಗ್ರೆಸ್ ಮುಖಂಡರಿಂದ ಈ ಕೆಲಸವಾಗುತ್ತಿದೆ ಎಂದು ತಿಳಿಸಿದರು.

    ಕಾಂಗ್ರೆಸ್ ಮುಖಂಡರು ಮನಸು ಮಾಡಿದ್ದರೆ ಸಮಸ್ಯೆ ಬಗರಹರಿಸಬಹುದಿತ್ತು. ಆ ಆರು ಜನ ವಿದ್ಯಾರ್ಥಿನಿಯರಿಗೆ ತಿಳುವಳಿಕೆ ನೀಡಬಹುದಿತ್ತು. ಆದರೆ ಕಾಂಗ್ರೆಸ್‍ಗೆ ಮುಸ್ಲಿಂ ಮತಗಳೇ ಮುಖ್ಯವಾದವು. ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಹಿಂದೆ ವೀರಶೈವ ಲಿಂಗಾಯತ ಧರ್ಮ, ನಂತರ ಮತಾಂತರದ ವಿಷಯ ಗೋಹತ್ಯೆ, ಈಗ ಹಿಜವ್ ಅವರ ರಾಜಕೀಯ ವಿಚಾರವಾಗಿದೆ. ಹಿಂದೂ ಮುಸ್ಲಿಂ ಒಡೆದಿದ್ದು ಕಾಂಗ್ರೆಸ್ ಅಪವಾದ ಮಾತ್ರ ಬಿಜೆಪಿ ಮೇಲೆ ಎಂದು ಸಚಿವರು ಕಿಡಿಕಾರಿದರು.