Tag: ಖಲಿಸ್ತಾನಿ ಉಗ್ರರು

  • ಕಪಿಲ್‌ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಭಯೋತ್ಪಾದಕರಿಂದ ಗುಂಡಿನ ದಾಳಿ

    ಕಪಿಲ್‌ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಭಯೋತ್ಪಾದಕರಿಂದ ಗುಂಡಿನ ದಾಳಿ

    ಒಟ್ಟಾವಾ: ಕೆನಡಾದಲ್ಲಿ (Canada) ಹಾಸ್ಯನಟ ಕಪಿಲ್ ಶರ್ಮಾ (Kapil Sharma) ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಖಲಿಸ್ತಾನ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.

    ಖಲಿಸ್ತಾನಿ ಭಯೋತ್ಪಾದಕ (Khalistani Terrorists) ಹರ್ಜೀತ್ ಸಿಂಗ್ ಲಡ್ಡಿ ಗುಂಡಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಇದರಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕೆಫೆ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ. ಇದನ್ನೂ ಓದಿ: ರಾಜಾಸಾಬ್ ವರ್ಸಸ್ ಧುರಂಧರ್ ಬಾಕ್ಸಾಫೀಸ್ ಕ್ಲ್ಯಾಶ್: ಸಂಜುಬಾಬ ಸ್ಫೋಟಕ ಹೇಳಿಕೆ

    ಕ್ಯಾಪ್ಸ್ ಕೆಫೆ ಎಂದು ಕರೆಯಲ್ಪಡುವ ಈ ಕೆಫೆ, ರೆಸ್ಟೋರೆಂಟ್ ಉದ್ಯಮದಲ್ಲಿ ಶರ್ಮಾ ಅವರ ಮೊದಲ ಪ್ರಯತ್ನವಾಗಿದೆ. ಅವರ ಪತ್ನಿ ಗಿನ್ನಿ ಚತ್ರತ್ ಕೂಡ ಈ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆನಡಾದ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿರುವ ಈ ಕೆಫೆಯನ್ನು ಕೆಲವು ದಿನಗಳ ಹಿಂದಷ್ಟೇ ಉದ್ಘಾಟಿಸಲಾಗಿತ್ತು.

    ಕಾರಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಕೆಫೆಯ ಕಿಟಕಿಯ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸುತ್ತಿರುವ ವೀಡಿಯೋ ವೈರಲ್‌ ಆಗಿದೆ. ಲಡ್ಡಿ ಭಯೋತ್ಪಾದನಾ ವಿರೋಧಿ ಸಂಸ್ಥೆ NIA ಯ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದಾನೆ. ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್‌ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಸ್ಯನಟನ ಹೇಳಿಕೆಯಿಂದ ಮನನೊಂದಿದ್ದರಿಂದ ಅವನು ಗುಂಡಿನ ದಾಳಿಗೆ ಆದೇಶಿಸಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರೀಲ್ಸ್ ಚಟ – ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ತಂದೆ

    ಗುಂಡಿನ ದಾಳಿಯ ನಂತರ ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಯುತ್ತಿದೆ. ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ನಾಯಕ ವಿಕಾಸ್ ಪ್ರಭಾಕರ್ ಅಲಿಯಾಸ್ ವಿಕಾಸ್ ಬಗ್ಗಾ ಹತ್ಯೆಗೆ ಸಂಬಂಧಿಸಿದಂತೆ ಹರ್ಜೀತ್ ಸಿಂಗ್ ಲಡ್ಡಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಬೇಕಾಗಿದ್ದಾರೆ. ವಿಹೆಚ್‌ಪಿ ನಾಯಕನನ್ನು 2024 ರ ಏಪ್ರಿಲ್‌ನಲ್ಲಿ ಪಂಜಾಬ್‌ನ ರೂಪನಗರ ಜಿಲ್ಲೆಯ ಅವರ ಅಂಗಡಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

  • Uttar Pradesh | ಖಾಲಿಸ್ತಾನ್‌ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್‌

    Uttar Pradesh | ಖಾಲಿಸ್ತಾನ್‌ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್‌

    ಲಕ್ನೋ: ನಿಷೇಧಿತ ಸಂಘಟನೆ ಖಲಿಸ್ತಾನ್‌ ಕಮಾಂಡೋ ಫೋರ್ಸ್‌ನ (ಖಲಿಸ್ತಾನ್‌ ಜಿಂದಾಬಾದ್‌ ಫೋರ್ಸ್‌) ಮೂವರು ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್‌ (Encounter) ಮಾಡಿದ್ದಾರೆ. ಸೋಮವಾರ ಮುಂಜಾನೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

    ಎನ್‌ಕೌಂಟರ್‌‌ನಲ್ಲಿ ಹತರಾದ ಖಲಿಸ್ತಾನಿ ಭಯೋತ್ಪಾದಕರನ್ನು (Khalistani Terrorist) ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಿದೆ. ಹತರು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

    ಎನ್‌ಕೌಂಟರ್ ನಂತರ ಪೊಲೀಸರು ಎರಡು ಎಕೆ -47 ರೈಫಲ್‌ಗಳು, ಎರಡು ಗ್ಲಾಕ್ ಪಿಸ್ತೂಲ್‌ಗಳು ಮತ್ತು ಹಲವು ಮ್ಯಾಕ್ಸಿನ್ ಜೀವಂತ ಗುಂಡುಗಳನ್ನು ಮೃತರಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಪಿಲಿಭಿತ್ ಜಿಲ್ಲೆಯ ಪುರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಮೂವರು ಆರೋಪಿಗಳ ಉಪಸ್ಥಿತಿಯ ಬಗ್ಗೆ ಪಂಜಾಬ್ ಪೊಲೀಸರ ತಂಡವು ಪಿಲಿಭಿತ್ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಮೂವರು ವ್ಯಕ್ತಿಗಳು ಪುರನ್‌ಪುರದಲ್ಲಿ ಅನುಮಾನಾಸ್ಪದ ವಸ್ತುಗಳೊಂದಿಂಗೆ ಸಂಚರಿಸುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು.

    ಮಾಹಿತಿಯ ಆಧಾರದ ಮೇಲೆ, ಪೊಲೀಸರು ಕಾರ್ಯಚರಣೆಗೆ ತೆರಳಿದಾಗ ಮೂವರು ಶಂಕಿತರು ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದರು. ಬಳಿಕ ಪೊಲೀಸರ ಪ್ರತಿ ದಾಳಿಯಲ್ಲಿ ಅವರು ಕೊಲ್ಲಲ್ಪಟ್ಟರು. ಪಂಜಾಬ್ ಪೊಲೀಸ್ ಮತ್ತು ಉತ್ತರ ಪ್ರದೇಶ ಪೊಲೀಸರ ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿವೆ. ಪಂಜಾಬ್ ಪೊಲೀಸ್ ತಂಡವು ಅವರ ವಿದೇಶಿ ಸಂಪರ್ಕಗಳ ಬಗ್ಗೆಯೂ ತಿಳಿಸಿದೆ.

    ತನಿಖೆ ಇಡೀ ಘಟನೆಯ ಬಗ್ಗೆ ತನಿಖೆ ನಡೆಸಲಾಗಿದೆ ಎಂದು ಪಿಲಿಬಿಹಿತ್ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಳೆದ ಶನಿವಾರ ಡಿಸೆಂಬರ್ 21 ರಂದು ಗುರುದಾಸ್‌ಪುರ ಜಿಲ್ಲೆಯ ಕಲಾನೌರ್ ಉಪವಿಭಾಗದಲ್ಲಿರುವ ಕೈಬಿಡಲಾದ ಪೊಲೀಸ್ ಪೋಸ್ಟ್‌ನಲ್ಲಿ ಸ್ಫೋಟ ಸಂಭವಿಸಿತ್ತು. ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ನಡೆದ ದಾಳಿಯಲ್ಲಿ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿರಲಿಲ್ಲ.

  • ಕೆನಡಾದಲ್ಲಿ ಮತ್ತೊಂದು ಹಿಂದೂ ದೇವಾಲಯ ಧ್ವಂಸ – ಖಲಿಸ್ತಾನಿ ಉಗ್ರರ ಪೋಸ್ಟರ್‌ ಅಂಟಿಸಿ ವಿಕೃತಿ

    ಕೆನಡಾದಲ್ಲಿ ಮತ್ತೊಂದು ಹಿಂದೂ ದೇವಾಲಯ ಧ್ವಂಸ – ಖಲಿಸ್ತಾನಿ ಉಗ್ರರ ಪೋಸ್ಟರ್‌ ಅಂಟಿಸಿ ವಿಕೃತಿ

    ಒಟ್ಟೋವಾ: ಕೆನಡಾದ (Canada) ಬ್ರಿಟಿಷ್ ಕೊಲಂಬಿಯಾದಲ್ಲಿರುವ ಹಿಂದೂ ದೇವಾಲಯವನ್ನು (Hindu Temple) ಶನಿವಾರ ಮಧ್ಯರಾತ್ರಿ ಧ್ವಂಸಗೊಳಿಸಲಾಗಿದೆ. ಅಲ್ಲದೇ ಹತ್ಯೆಯಾಗಿರುವ ಖಲಿಸ್ತಾನಿ ಭಯೋತ್ಪಾದಕರ (Khalistani Terrorist’s) ಪೋಸ್ಟರ್‌ಗಳನ್ನು ದೇವಾಲಯದ ಮುಖ್ಯ ಬಾಗಿಲಿಗೆ ಅಂಟಿಸಿರುವ ಘಟನೆ ನಡೆದಿದೆ.

    ಜೂನ್ 18 ರ ಹತ್ಯೆಯಲ್ಲಿ ಭಾರತದ ಪಾತ್ರವನ್ನು ಕೆನಡಾ ತನಿಖೆ ಮಾಡುತ್ತದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಬಾಗಿಲಿಗೆ ಅಂಟಿಸಲಾಗಿದ್ದ ಪೋಸ್ಟರ್‌ನಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಫೋಟೋ ಕೂಡ ಇತ್ತು. ಇದನ್ನೂ ಓದಿ: 14ರ ಬಾಲಕಿ ಪಕ್ಕದಲ್ಲಿ ಕುಳಿತು ಹಸ್ತಮೈಥುನ – ಭಾರತೀಯ ಅಮೆರಿಕನ್ ಡಾಕ್ಟರ್‌ ಅರೆಸ್ಟ್‌!

    ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದ ಸರ್ರೆಯಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರ ಸಾಹಿಬ್‌ನ ಮುಖ್ಯಸ್ಥನಾಗಿದ್ದ. ಜೂನ್ 18 ರಂದು ಸಂಜೆ ಗುರುದ್ವಾರದ ಆವರಣದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಆತನನ್ನು ಕೊಂದಿದ್ದರು.

    ಧ್ವಂಸಗೊಳಿಸಲಾದ ದೇವಾಲಯವು ಸರ್ರೆಯಲ್ಲಿರುವ ಲಕ್ಷ್ಮಿ ನಾರಾಯಣ ಮಂದಿರ. ಬ್ರಿಟಿಷ್ ಕೊಲಂಬಿಯಾದಲ್ಲಿನ ಅತಿದೊಡ್ಡ ಮತ್ತು ಹಳೆಯ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ಕೆನಡಾದಲ್ಲಿ ಈ ವರ್ಷ ನಡೆದ ಮೂರನೇ ದೇವಸ್ಥಾನ ಧ್ವಂಸ ಘಟನೆ ಇದಾಗಿದೆ. ಇದನ್ನೂ ಓದಿ: ಜಗತ್ತಿನ ಬೃಹತ್ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಹೆಚ್‍ಡಿಕೆ

    ಜನವರಿ 31 ರಂದು, ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಪ್ರಮುಖ ಹಿಂದೂ ದೇವಾಲಯವನ್ನು ಭಾರತ ವಿರೋಧಿ ಗೀಚುಬರಹದೊಂದಿಗೆ ಧ್ವಂಸಗೊಳಿಸಲಾಗಿತ್ತು. ಈ ಕೃತ್ಯ ಭಾರತೀಯ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿತ್ತು.

    ಈ ವರ್ಷದ ಏಪ್ರಿಲ್‌ನಲ್ಲಿ ಕೆನಡಾದ ಒಂಟಾರಿಯೊದಲ್ಲಿರುವ ಮತ್ತೊಂದು ಹಿಂದೂ ದೇವಾಲಯವನ್ನು ಭಾರತ ವಿರೋಧಿ ಗೀಚುಬರಹದಿಂದ ಧ್ವಂಸಗೊಳಿಸಲಾಗಿತ್ತು. ವಿಂಡ್ಸರ್ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದು, ಇಬ್ಬರು ಶಂಕಿತರು ಹಿಂದೂ ದೇವಾಲಯದ ಗೋಡೆಗಳ ಮೇಲೆ ಪೇಂಟಿಂಗ್ ಎರಚಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]