Tag: ಖಲಿಸ್ತಾನ್

  • ಲಂಡನ್‌ನಲ್ಲಿ ಖಲಿಸ್ತಾನಿ ಉಗ್ರರಿಂದ ವಿದೇಶಾಂಗ ಸಚಿವ ಜೈಶಂಕರ್‌ ಮೇಲೆ ದಾಳಿಗೆ ಯತ್ನ

    ಲಂಡನ್‌ನಲ್ಲಿ ಖಲಿಸ್ತಾನಿ ಉಗ್ರರಿಂದ ವಿದೇಶಾಂಗ ಸಚಿವ ಜೈಶಂಕರ್‌ ಮೇಲೆ ದಾಳಿಗೆ ಯತ್ನ

    – ಭಾರತದ ಧ್ವಜವನ್ನು ಹರಿದು ಹಾಕಿದ ಖಲಿಸ್ತಾನಿ ಉಗ್ರ

    ಲಂಡನ್‌: ಲಂಡನ್‌ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ.

    ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಕಾರಿನಿಂದ ಇಳಿಯುತ್ತಿದ್ದ ಜೈಶಂಕರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

    ಚಾಥಮ್ ಹೌಸ್ ನಡೆಸಿದ ಚರ್ಚೆಯಲ್ಲಿ ವಿದೇಶಾಂಗ ಸಚಿವರು ಭಾಗವಹಿಸಿದ್ದ ಸ್ಥಳದ ಹೊರಗೆ ಖಲಿಸ್ತಾನ್ ಪರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಆನ್‌ಲೈನ್‌ನಲ್ಲಿ ಪ್ರಸಾರವಾಗುತ್ತಿರುವ ವೀಡಿಯೊದಲ್ಲಿ, ಲಂಡನ್ ಪೊಲೀಸ್ ಅಧಿಕಾರಿಗಳ ಮುಂದೆಯೇ ವ್ಯಕ್ತಿಯೊಬ್ಬ ಜೈಶಂಕರ್ ಅವರ ವಾಹನದ ಕಡೆಗೆ ನುಗ್ಗಿ ಭಾರತದ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದು ಕಂಡುಬಂದಿದೆ. ವಿಧ್ವಂಸಕ ಕೃತ್ಯಕ್ಕೆ ಅವರು ಪ್ರತಿಕ್ರಿಯಿಸಲಿಲ್ಲ.

    ವಿದೇಶಾಂಗ ಸಚಿವ ಜೈಶಂಕರ್ ಚರ್ಚೆಯಲ್ಲಿ ಭಾಗವಹಿಸಿದ್ದ ಸ್ಥಳದ ಹೊರಗೆ ಹಲವಾರು ಖಲಿಸ್ತಾನಿ ಪರ ಬೆಂಬಲಿಗರು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತ ಖಲಿಸ್ತಾನಿಗಳನ್ನು ಪೊಲೀಸರು ವಶಕ್ಕೆ ಪಡೆದರು.

    ಆಸ್ಟ್ರೇಲಿಯಾ, ಕೆನಡಾ ಮತ್ತು ಯುನೈಟೆಡ್ ಕಿಂಗ್‌ಡಮ್‌ನಂತಹ ದೇಶಗಳು ಖಲಿಸ್ತಾನಿ ಭಯೋತ್ಪಾದಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಲವು ವರ್ಷಗಳಿಂದ ಭಾರತ ಒತ್ತಾಯಿಸಿದೆ. ಪ್ರಧಾನಿ ಮೋದಿ ಈ ರಾಷ್ಟ್ರಗಳ ನಾಯಕರೊಂದಿಗೆ, ವಿಶೇಷವಾಗಿ ಕೆನಡಾದಲ್ಲಿ ಸಿಖ್ಖರು ಸುಮಾರು 2% ರಷ್ಟಿದ್ದಾರೆ, ಈ ವಿಷಯವನ್ನು ವೈಯಕ್ತಿಕವಾಗಿ ಎತ್ತಿದ್ದಾರೆ.

  • ಖಲಿಸ್ತಾನಿ ಉಗ್ರರು ಕೆನಡಾ ಗುಪ್ತಚರ ಸಂಸ್ಥೆಯ ಆಸ್ತಿ: ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ

    ಖಲಿಸ್ತಾನಿ ಉಗ್ರರು ಕೆನಡಾ ಗುಪ್ತಚರ ಸಂಸ್ಥೆಯ ಆಸ್ತಿ: ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ

    ಒಟ್ಟಾವಾ: ಖಲಿಸ್ತಾನಿ ಭಯೋತ್ಪಾದಕರು ಕೆನಡಾ ಭದ್ರತಾ ಗುಪ್ತಚರ ಸೇವೆಯ (CSIS) ಆಸ್ತಿ ಎಂದು ಕೆನಡಾದಲ್ಲಿರುವ (Canada) ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ (Sanjay Kumar Verma) ಸ್ಫೋಟಕ ಆರೋಪ ಮಾಡಿದ್ದಾರೆ.

    ತನ್ನ ವಿರುದ್ಧ ಟ್ರುಡೋ ಸರ್ಕಾರ (Justin Trudeau Govt) ಆರೋಪ ಮಾಡಿದ ಒಂದು ವಾರದ ನಂತರ ಸಂಜಯ್ ಕುಮಾರ್ ವರ್ಮಾ ಅವರು ಕೆನಡಾ ಮೂಲದ ಸಿಟಿವಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಕೆನಡಾ ಸರ್ಕಾರವು ಖಲಿಸ್ತಾನಿ ಉಗ್ರರನ್ನು ಪ್ರೋತ್ಸಾಹಿಸುತ್ತಿದೆ ಎಂದು ನೇರವಾಗಿಯೇ ಹೇಳಿದರು.

    ಭಾರತೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಸವಾಲೆಸೆಯಲು ಪ್ರಯತ್ನಿಸುತ್ತಿರುವವರೊಂದಿಗೆ ಸ್ನೇಹಯುತವಾಗಿ ನಡೆದುಕೊಳ್ಳುವ ಮೊದಲು ಕೆನಡಾ ಸರ್ಕಾರ ನಮ್ಮ ಮೂಲ ಕಾಳಜಿಯನ್ನು ಪ್ರಾಮಾಣಿಕವಾಗಿ ಅರ್ಥಮಾಡಿಕೊಳ್ಳಬೇಕೆಂದು ತಿಳಿಸಿದರು.

     


    ಈ ಖಲಿಸ್ತಾನಿ ಉಗ್ರಗಾಮಿಗಳು ಭಾರತೀಯ ಪ್ರಜೆಗಳಲ್ಲ, ಅವರು ಕೆನಡಾದ ಪ್ರಜೆಗಳು ಮತ್ತು ಯಾವುದೇ ದೇಶವು ತನ್ನ ನಾಗರಿಕರಿಗೆ ಮತ್ತೊಂದು ರಾಷ್ಟ್ರದ ಸಾರ್ವಭೌಮತ್ವವನ್ನು ಪ್ರಶ್ನಿಸಲು ಅವಕಾಶ ನೀಡಬಾರದು ಎಂದು ಅವರು ಹೇಳಿದರು. ಇದನ್ನೂ ಓದಿ: ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರಿಗೆ ಅನ್ನಪೂರ್ಣ – ಶೀಘ್ರವೇ ಅಧಿಕೃತ ಪ್ರಕಟಣೆ ಸಾಧ್ಯತೆ

    ಖಾಲಿಸ್ತಾನಿ ಭಯೋತ್ಪಾದಕರ ಹತ್ಯೆಗೆ ಸಂಬಂಧಿಸಿದಂತೆ ತನ್ನ ಮೇಲೆ ಹೊರಿಸಲಾದ ಎಲ್ಲಾ ಆರೋಪಗಳನ್ನು ನಿರಾಕರಿಸಿದ ಅವರು, ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದು ಯಾವುದೇ ಸಾಕ್ಷ್ಯಗಳನ್ನು ನೀಡಿಲ್ಲ ಎಂದರು.

    ಭಾತದ ಹೈಕಮಿಷನರ್ ಆಗಿರುವ ನಾನು ಅಂತಹ ಯಾವುದೇ ಕೆಲಸ ಮಾಡಿಲ್ಲ. ಕೆನಡಾದಲ್ಲಿ ಖಲಿಸ್ತಾನಿ ಪರ ಅಂಶಗಳನ್ನು ಮೇಲ್ವಿಚಾರಣೆ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಯ ವಿಷಯವಾಗಿದೆ. ನಮ್ಮ ತಂಡವು ಮುಕ್ತ ಮೂಲಗಳ ಮೂಲಕ ಮಾಹಿತಿಯನ್ನು ಸಂಗ್ರಹಿಸುತ್ತದೆ. ನಾವು ಪತ್ರಿಕೆಗಳನ್ನು ಓದುತ್ತೇವೆ, ಅವರ ಹೇಳಿಕೆಗಳನ್ನು ನಾವು ಗಮನಿಸುತ್ತೇವೆ ಎಂದು ವಿವರಿಸಿದರು.

    ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಸರ್ರೆ ನಗರದ ಗುರುದ್ವಾರದ ಬಳಿ ಖಲಿಸ್ತಾನಿ ಉಗ್ರ ನಿಜ್ಜಾರ್‌ ಆಗುಂತಕರ ಗುಂಡೇಟಿಗೆ ಬಲಿಯಾಗಿದ್ದ. ಈತನ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂದು ಆರೋಪಿಸಿದ ಬೆನ್ನಲ್ಲೇ ಎರಡು ದೇಶಗಳ ಮಧ್ಯೆ ರಾಜತಾಂತ್ರಿಕ ಸಮಸ್ಯೆ ಸೃಷ್ಟಿಯಾಗಿತ್ತು. ನಂತರ ಮಾತುಕತೆಯ ಮೂಲಕ ಎರಡು ದೇಶಗಳ ನಡುವಿನ ಬಿಕ್ಕಟ್ಟು ಬಗೆ ಹರಿದಿತ್ತು.

    ಘಟನೆ ನಡೆದು ಒಂದು ವರ್ಷ ಕಳೆದ ಬಳಿಕ ಈ ವಿಚಾರವನ್ನು ಮತ್ತೊಮ್ಮೆ ಪ್ರಸ್ತಾಪಿಸಿ ಕೆನಡಾ ಭಾರತದ ಕೆಂಗಣ್ಣಿದೆ ಗುರಿಯಾಗಿದೆ. ಹತ್ಯೆಯ ಹಿಂದೆ ಭಾರತೀಯ ರಾಯಭಾರಿ ಸಂಜಯ್‌ಕುಮಾರ್‌ ವರ್ಮಾ ಅವರ ಪಾತ್ರವಿದ್ದು, ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಹೇಳುವ ಮೂಲಕ ಜಸ್ಟಿನ್‌ ಟ್ರುಡೋ ಸರ್ಕಾರ ಚೇಷ್ಟೆ ಮುಂದುವರಿಸಿದೆ.

     

  • ರಾಹುಲ್‌ ಹೇಳಿಕೆ ಉಲ್ಲೇಖಿಸಿ ಪ್ರತ್ಯೇಕ ಖಲಿಸ್ತಾನ ರಾಷ್ಟ್ರ ಬೇಡಿಕೆ ಮುಂದಿಟ್ಟ ಉಗ್ರ ಪನ್ನುನ್

    ರಾಹುಲ್‌ ಹೇಳಿಕೆ ಉಲ್ಲೇಖಿಸಿ ಪ್ರತ್ಯೇಕ ಖಲಿಸ್ತಾನ ರಾಷ್ಟ್ರ ಬೇಡಿಕೆ ಮುಂದಿಟ್ಟ ಉಗ್ರ ಪನ್ನುನ್

    ನವದೆಹಲಿ: ಭಾರತ ಸರ್ಕಾರ ನಿಷೇಧಿಸಿದ ಖಲಿಸ್ತಾನಿ ಪರ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ರಾಹುಲ್‌ ಗಾಂಧಿ (Rahul Gandhi) ಹೇಳಿಕೆಯನ್ನು ಉಲ್ಲೇಖಿಸಿ ಪ್ರತ್ಯೇಕ ಖಲಿಸ್ತಾನ್‌ ರಾಷ್ಟ್ರ (Khalistan Nation) ಬೇಡಿಕೆಯನ್ನು ಮತ್ತೊಮ್ಮೆ ಮುಂದಿಟ್ಟಿದ್ದಾನೆ.

    ವಾಷಿಂಗ್ಟನ್‌ನಲ್ಲಿರುವ ಗುರುಪತ್‌ವಂತ್ ಸಿಂಗ್ ಪನ್ನುನ್ ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾನೆ.

    ಹೇಳಿಕೆಯಲ್ಲಿ ಏನಿದೆ?
    ಅನೇಕ ಖಲಿಸ್ತಾನ್ ಪರ ಸಿಖ್ಖರು ಹಾಜರಿದ್ದ ವಾಷಿಂಗ್ಟನ್ ಡಿಸಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಅವರು SFJ ಯ ಜಾಗತಿಕ ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹ ಅಭಿಯಾನವನ್ನು ಸಮರ್ಥಿಸಿಕೊಂಡಿದ್ದಾರೆ. ಭಾರತದಲ್ಲಿ ಸಿಖ್ಖರಿಗೆ ಪೇಟ, ಕಡವನ್ನು ಧರಿಸಿ ಗುರುದ್ವಾರಕ್ಕೆ ಹೋಗುವುದಕ್ಕೆ ಅನುಮತಿ ನೀಡಲಾಗುತ್ತದೆಯೇ ಎಂಬುದರ ಬಗ್ಗೆ ಯೋಚಿಸಬೇಕಿದೆ ಎಂದು ಹೇಳಿದ್ದಾರೆ.

    ಭರತದ ಸಿಖ್ಬರ್‌ ಬಗ್ಗೆ ರಾಹುಲ್‌ ಆಡಿರುವ ಮಾತು ದಿಟ್ಟತನದಿಂದ ಕೂಡಿರುವುದು ಮಾತ್ರವಲ್ಲ 1947 ರಿಂದ ಭಾರತದಲ್ಲಿ ಸಿಖ್ಖರು ಎದುರಿಸುತ್ತಿರುವ ವಾಸ್ತವಿಕ ಇತಿಹಾಸದಲ್ಲಿ ಎದುರಿಸುತ್ತಿರವ ಸಮಸ್ಯೆಯನ್ನು ತಿಳಿಸಿದೆ. ಸಿಖ್ಸ್ ಫಾರ್ ಜಸ್ಟಿಸ್‌ ಸಂಘಟನೆ ಸಿಖ್ಖರ ತಾಯ್ನಾಡಾಗಿ ಖಲಿಸ್ತಾನ ಪ್ರತ್ಯೇಕ ರಾಷ್ಟ್ರ ಸ್ಥಾಪಿಸಬೇಕೆಂಬ ಪಂಜಾಬ್ ಸ್ವಾತಂತ್ರ್ಯದ ಜನಾಭಿಪ್ರಾಯ ಸಂಗ್ರಹಣೆಯ ಸಮರ್ಥನೆಯನ್ನು ದೃಢೀಕರಿಸುತ್ತದೆ ಎಂದು ಹೇಳಿದ್ದಾನೆ. ಇದನ್ನೂ ಓದಿ: ರಾಹುಲ್ ಗಾಂಧಿಯನ್ನು ಕೋರ್ಟ್‌ಗೆಳೆಯುತ್ತೇವೆ; ಸಿಖ್ ಸಮುದಾಯದ ಬಗ್ಗೆ ಹೇಳಿಕೆಗೆ ಎಚ್ಚರಿಕೆ ನೀಡಿ ಕೇಂದ್ರ ಸಚಿವ ಪುರಿ

    ರಾಹುಲ್‌ ಹೇಳಿದ್ದೇನು?
    ಸಿಖ್ಖರು (Sikhs) ಟರ್ಬನ್, ಖಡಗ ಧರಿಸುವುದಕ್ಕೆ ಹೆದರುವಂತಾಗಿದೆ. ಇದು ಒಬ್ಬ ವ್ಯಕ್ತಿ ಮತ್ತು ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲಾ ಧರ್ಮಗಳಲ್ಲೂ ಇಂತಹ ಸ್ಥಿತಿ ಇದೆ. ಸ್ವಾತಂತ್ರ್ಯಾನಂತರದ ಇತಿಹಾಸದಲ್ಲಿ, ಸಿಖ್‌ ಸಮುದಾಯದ ಮೇಲೆ ಹತ್ಯಾಕಾಂಡ ನಡೆದ ಸಂದರ್ಭವಿತ್ತು. ಆಗ 3,000 ಅಮಾಯಕ ಸಿಖ್ಖರನ್ನು ಕೊಲ್ಲಲಾಯಿತು. ಆ ಸಂದರ್ಭದಲ್ಲಿ ನನ್ನ ಕೆಲವು ಸಹೋದರರು ಪೇಟ ಧರಿಸುವುದನ್ನೇ ಬಿಟ್ಟರು ಎಂದು ರಾಹುಲ್‌ ಹೇಳಿದ್ದರು.

    ಗುರುಪತ್‌ವಂತ್ ಸಿಂಗ್ ಪುನ್ನುನ್‌ ಹೇಳಿಕೆ ಬಂದ ಹಿನ್ನೆಲೆಯಲ್ಲಿ ಬಿಜೆಪಿ ರಾಹುಲ್‌ ಗಾಂಧಿಯನ್ನು ಟೀಕಿಸಿದೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ನಿಜಕ್ಕೂ ಭಾರತದ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅವರು ಭಾರತದ ಸಾಮಾಜಿಕ ರಚನೆಯನ್ನು ನಾಶಮಾಡಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್‌ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

    ಪನ್ನುನ್ ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ಅಮೆರಿಕ ಮೂಲದ ಸಿಖ್ ಫಾರಿ ಜಸ್ಟಿಸ್‌ನ (ಎಸ್‌ಎಫ್‌ಜೆ) ಮುಖ್ಯಸ್ಥನಾಗಿದ್ದಾನೆ. ಮಾತ್ರವಲ್ಲದೇ ಭಾರತೀಯ ತನಿಖಾ ಸಂಸ್ಥೆಗಳಿಗೆ ಮೋಸ್ಟ್ ವಾಂಟೆಡ್ ವ್ಯಕ್ತಿಯಾಗಿದ್ದಾನೆ.

     

  • ಉಗ್ರನ ಬಿಡುಗಡೆಗೆ ಕೇಜ್ರಿವಾಲ್‌ಗೆ 133 ಕೋಟಿ ರೂ. ಪಾವತಿಸಿದ್ದೇವೆ: ಖಲಿಸ್ತಾನಿ ಉಗ್ರ ಪನ್ನು

    ಉಗ್ರನ ಬಿಡುಗಡೆಗೆ ಕೇಜ್ರಿವಾಲ್‌ಗೆ 133 ಕೋಟಿ ರೂ. ಪಾವತಿಸಿದ್ದೇವೆ: ಖಲಿಸ್ತಾನಿ ಉಗ್ರ ಪನ್ನು

    ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ (Delhi Liquor Scam) ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಖಲಿಸ್ತಾನಿ (Khalistani) ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರೂ.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ.

    ಭಾರತಕ್ಕೆ ಬೇಕಾಗಿರುವ ಖಾಲಿಸ್ತಾನಿ ಉಗ್ರ ಗುರ್ಪತ್‌ವಂತ್ ಸಿಂಗ್ ಪನ್ನುನ್ (Gurpatwant Pannun) ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಈ ವಿಡಿಯೋದಲ್ಲಿ ಆತ ಆಪ್‌ ಪಕ್ಷಕ್ಕೆ 2014 ಮತ್ತು 2022 ರ ನಡುವೆ ಹಣ ಸಂದಾಯವಾಗಿದೆ ಎಂದು ಹೇಳಿದ್ದಾನೆ.

    1993ರ ದೆಹಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಖಲಿಸ್ತಾನಿ ಉಗ್ರ ದೇವೇಂದರ್ ಪಾಲ್ ಸಿಂಗ್ ಭುಲ್ಲಾರ್‌ನನ್ನು ಬಿಡುಗಡೆ ಮಾಡಿಸುತ್ತೇನೆ ಎಂದು ನಂಬಿಸಿ ನಮ್ಮಿಂದ ಕೇಜ್ರಿವಾಲ್‌ ಹಣ ಪಡೆದಿದ್ದಾರೆ ಎಂದು ಪನ್ನು ಆರೋಪಿಸಿದ್ಧಾನೆ. 1993ರ ದೆಹಲಿ ಬಾಂಬ್ ಸ್ಫೋಟದಲ್ಲಿ 9 ಮಂದಿ ಮೃತಪಟ್ಟು 31 ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ತೆಲಂಗಾಣದಲ್ಲಿ ಫೋನ್‌ ಕದ್ದಾಲಿಕೆ ಕೇಸ್‌ – ಇಂಟಲಿಜೆನ್ಸ್‌ ಬ್ಯೂರೋ ಮಾಜಿ ಮುಖ್ಯಸ್ಥ ಆರೋಪಿ ನಂ.1

    2014ರಲ್ಲಿ ನ್ಯೂಯಾರ್ಕ್‌ನಲ್ಲಿರುವ ಗುರುದ್ವಾರದಲ್ಲಿ ಕೇಜ್ರಿವಾಲ್‌ ಅವರನ್ನು ನಾನು ಭೇಟಿಯಾಗಿ ಮಾತುಕತೆ ನಡೆಸಿದ್ದೆ. ಈ ವೇಳೆ ದೇವೇಂದರ್ ಪಾಲ್ ಸಿಂಗ್ ಭುಲ್ಲಾರ್‌ ಬಿಡುಗಡೆಗೊಳಿಸಿವ ವಾಗ್ದಾನ ನೀಡಿದ್ದರು ಎಂದು ಆರೋಪಿಸಿದ್ದಾನೆ.

     

    ಆಪ್‌ ಖಲಿಸ್ತಾನಿ ಗುಂಪುಗಳಿಂದ ಹಣವನ್ನು ಪಡೆಯುತ್ತಿದೆ ಎಂದು ಪನ್ನುನ್ ಆರೋಪಿಸಿದ್ದು ಇದೇ ಮೊದಲಲ್ಲ. ಜನವರಿಯಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಅಮೆರಿಕ ಮತ್ತು ಕೆನಡಾದಲ್ಲಿನ ಖಲಿಸ್ತಾನ್ ಬೆಂಬಲಿಗರಿಂದ 6 ಮಿಲಿಯನ್ ಡಾಲರ್‌ ಪಡೆದಿದ್ದಾರೆ ಎಂದು ಹೇಳಿದ್ದ. ಇದನ್ನೂ ಓದಿ: ಯುವಕರು ಏನಾದ್ರೂ ಮೋದಿ ಮೋದಿ ಅಂದ್ರೆ ಕಪಾಳಕ್ಕೆ ಹೊಡಿಯಬೇಕು: ಶಿವರಾಜ್‌ ತಂಗಡಗಿ

    ಪನ್ನುನ್ ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ಅಮೆರಿಕ ಮೂಲದ ಸಿಖ್ ಫಾರಿ ಜಸ್ಟಿಸ್‌ನ (ಎಸ್‌ಎಫ್‌ಜೆ) ಮುಖ್ಯಸ್ಥನಾಗಿದ್ದಾನೆ. ಮಾತ್ರವಲ್ಲದೇ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿರುವ ಮೋಸ್ಟ್ ವಾಂಟೆಡ್ ವ್ಯಕ್ತಿಯಾಗಿದ್ದಾನೆ.

     

  • ವಿಶ್ವಕಪ್‌ ಕ್ರಿಕೆಟ್‌ ಅಲ್ಲ, ವಿಶ್ವ ಟೆರರ್‌ ಕಪ್‌ ಮಾಡ್ತೀವಿ – ಖಲಿಸ್ತಾನ್‌ ಉಗ್ರನಿಂದ ಬೆದರಿಕೆ

    ವಿಶ್ವಕಪ್‌ ಕ್ರಿಕೆಟ್‌ ಅಲ್ಲ, ವಿಶ್ವ ಟೆರರ್‌ ಕಪ್‌ ಮಾಡ್ತೀವಿ – ಖಲಿಸ್ತಾನ್‌ ಉಗ್ರನಿಂದ ಬೆದರಿಕೆ

    – ಗುರುಪತ್ವಂತ್ ಸಿಂಗ್ ಪನ್ನುನ್‌ ವಿರುದ್ಧ ಎಫ್‌ಐಆರ್‌ ದಾಖಲು

    ಅಹಮದಾಬಾದ್‌: ಭಾರತದಲ್ಲಿ ಆರಂಭವಾಗುವುದು ವಿಶ್ವಕಪ್‌ ಕ್ರಿಕೆಟ್‌ ಅಲ್ಲ (World Cup Cricket) ಅದು World Terror Cup (ವಿಶ್ವ ಭಯೋತ್ಪಾದನಾ ಕಪ್) ಎಂದು ಸಿಖ್ ಫಾರ್ ಜಸ್ಟಿಸ್ ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್‌ (Gurpatwant Singh Pannun) ಬೆದರಿಕೆ ಹಾಕಿದ್ದಾನೆ. ಈ ಬೆದರಿಕೆ ಹಿನ್ನೆಲೆಯಲ್ಲಿ ಆತನ ವಿರುದ್ಧ ಗುಜರಾತಿನ ಅಹಮದಾಬಾದ್‌ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ವಿಶ್ವಕಪ್ ಕ್ರಿಕೆಟ್‌ ಗುರಿಯಾಗಿಸಿಕೊಂಡು ಪನ್ನುನ್ ಆಡಿಯೋ ಸಂದೇಶ ಬಿಡುಗಡೆ ಮಾಡಿದ್ದಾನೆ. ಅಕ್ಟೋಬರ್ 5 ರಿಂದ ಭಾರತದಲ್ಲಿ (India) ವಿಶ್ವಕಪ್ ಕ್ರಿಕೆಟ್‌ ಆರಂಭವಾಗಲಿದೆ. ಆದರೆ ಅಕ್ಟೋಬರ್ 5 ರಿಂದ ತನ್ನ ಸಂಸ್ಥೆಯು ವಿಶ್ವ ಭಯೋತ್ಪಾದಕ ಕಪ್ ಅನ್ನು ಪ್ರಾರಂಭಿಸಲಿದೆ ಎಂದು ಬೆದರಿಕೆ ಹಾಕಿದ್ದಾನೆ.  ಇದನ್ನೂ ಓದಿ: ಏನಿದು ಖಲಿಸ್ತಾನ್‌ ಚಳುವಳಿ? – ಇದಕ್ಕೂ ಭಾರತ-ಕೆನಡಾ ಬಿಕ್ಕಟ್ಟಿಗೂ ಏನು ಸಂಬಂಧ?

    ಅಷ್ಟೇ ಅಲ್ಲದೇ ಆಡಿಯೋದಲ್ಲಿ ನಿಜ್ಜರ್‌ ಹತ್ಯೆಗೆ ಪ್ರತೀಕಾರವಾಗಿ ಅಹಮದಾಬಾದ್ ಸ್ಟೇಡಿಯಂ ಮೇಲೆ ದಾಳಿ ನಡೆಸಲಾಗುವುದು ಎಂದು ಹೇಳಿದ್ದಾನೆ. ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಹಲವು ಜನರ ಮೊಬೈಲ್‌ಗಳಿಗೆ ಪನ್ನುನ್ ಹೆಸರಿನಲ್ಲಿ ವಿದೇಶಿ ಸಂಖ್ಯೆಯಿಂದ ಆಡಿಯೋ ಕರೆ ಬರುತ್ತಿರುವ ಹಿನ್ನೆಲೆಯಲ್ಲಿ ಈಗ ಎಫ್‌ಐಆರ್‌ ದಾಖಲಿಸಲಾಗಿದೆ. ಇದನ್ನೂ ಓದಿ: ಭಾರತವನ್ನು ಶತ್ರು ರಾಷ್ಟ್ರವೆಂದು ನಾಲಿಗೆ ಹರಿಬಿಟ್ಟ ಪಾಕ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ

    ಸಿಖ್ಖರು ಮತ್ತು ದೇಶದ ಇತರ ಸಮುದಾಯಗಳ ನಡುವೆ ದ್ವೇಷವನ್ನು ಸೃಷ್ಟಿಸಲು ಮತ್ತು ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪನ್ನುನ್ ಪ್ರಯತ್ನಿಸುತ್ತಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ.

    ಕೆನಡಾದಲ್ಲಿ ನೆಲೆಸಿರುವ ಖಲಿಸ್ತಾನಿ ಉಗ್ರ (Khalistani Terrorist) ಗುರುಪತ್‌ವಂತ್‌ ಸಿಂಗ್‌ ಪನ್ನುನ್‌ ಭಾರತಕ್ಕೆ ಬೇಕಾಗಿರುವ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದು ಭಾರತದಲ್ಲಿ ಹೊಂದಿದ್ದ ಆಸ್ತಿಯನ್ನು ರಾಷ್ಟ್ರೀಯ ತನಿಖಾ ದಳ (NIA) ಮುಟ್ಟುಗೋಲು ಹಾಕಿದೆ. ಕಳೆದ ವಾರ ಚಂಡಿಗಢ ಮತ್ತು ಅಮೃತಸರದಲ್ಲಿ ಪನ್ನುನ್‌ ಹೊಂದಿದ್ದ ಆಸ್ತಿಯನ್ನು ಎನ್‌ಐಎ ಜಪ್ತಿ ಮಾಡಿತ್ತು.

     

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಏನಿದು ಖಲಿಸ್ತಾನ್‌ ಚಳುವಳಿ? – ಇದಕ್ಕೂ ಭಾರತ-ಕೆನಡಾ ಬಿಕ್ಕಟ್ಟಿಗೂ ಏನು ಸಂಬಂಧ?

    ಏನಿದು ಖಲಿಸ್ತಾನ್‌ ಚಳುವಳಿ? – ಇದಕ್ಕೂ ಭಾರತ-ಕೆನಡಾ ಬಿಕ್ಕಟ್ಟಿಗೂ ಏನು ಸಂಬಂಧ?

    ಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ (Hardeep Singh Nijjar) ಹತ್ಯೆಯ ನಂತರ ಭಾರತ ಮತ್ತು ಕೆನಡಾ (India-Canada) ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದಿದ್ದು, ಇನ್ನೂ ಶಮನಗೊಂಡಿಲ್ಲ. ಭಾರತ-ಕೆನಡಾ ಸಂಬಂಧ ಹಳಸಲು ಖಲಿಸ್ತಾನಿಗಳ ಸಮಸ್ಯೆಯೂ ಒಂದು. ಕೆನಡಾದಲ್ಲಿ ಸಕ್ರಿಯರಾಗಿ ಅಲ್ಲಿನ ಹಿಂದೂಗಳು ಮತ್ತು ಭಾರತದಲ್ಲಿ ಹಿಂಸಾಚಾರ ನಡೆಯುತ್ತಿದೆ. ಖಲಿಸ್ತಾನಿ ಉಗ್ರರ (Khalistani Terrorists) ಮೇಲೆ ಕ್ರಮಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಕೆನಡಾ ಮೇಲೆ ಭಾರತಕ್ಕೆ ಮುನಿಸು. ಇಂತಹ ಸನ್ನಿವೇಶದಲ್ಲಿ, ಭಾರತದ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ಅವರು ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಕುರಿತು ಆಡಿದ ಮಾತುಗಳು ಎರಡು ದೇಶಗಳ ನಡುವೆ ಬಿಕ್ಕಟ್ಟು ಉಲ್ಬಣಗೊಳ್ಳಲು ಕಾರಣವಾಯಿತು.

    ಅಷ್ಟಕ್ಕೂ ಭಾರತ-ಕೆನಡಾ ಬಿಕ್ಕಟ್ಟಿಗೆ ಕಾರಣವೇನು? ಕೆನಡಾದಲ್ಲಿ ಭಾರತೀಯರೆಷ್ಟಿದ್ದಾರೆ? ಯಾರು ಈ ಖಲಿಸ್ತಾನಿಗಳು? ಏನು ಇವರ ಚಳುವಳಿ? ಖಲಿಸ್ತಾನಿಗಳ ಚಳುವಳಿ ಭಾರತದಿಂದ ಕೆನಡಾಗೆ ಹೋಗಿದ್ದು ಹೇಗೆ? ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಉಂಟಾಗಲು ಇವರು ಹೇಗೆ ಕಾರಣವಾಗುತ್ತಾರೆ? ಬನ್ನಿ ಈ ಬಗ್ಗೆ ವಿವರವಾಗಿ ತಿಳಿಯೋಣ. ಇದನ್ನೂ ಓದಿ: ಉಲ್ಟಾ ಹೊಡೆದ ಕೆನಡಾ- ಭಾರತವನ್ನು ಪ್ರಚೋದಿಸುತ್ತಿಲ್ಲವೆಂದ ಟ್ರುಡೋ

    ಸಿಖ್‌ ಚಳುವಳಿಯ ಇತಿಹಾಸ
    ಗುರುನಾನಕ್‌ ಒಬ್ಬ ದಾರ್ಶನಿಕ. ಸಿಖ್‌ ಧರ್ಮದ ಸಂಸ್ಥಾಪಕ. ಇವರು 15ನೇ ಶತಮಾನದಲ್ಲಿ ಸಿಖ್‌ ಧರ್ಮವನ್ನು ಪ್ರತಿಪಾದಿಸಿದರು. 1675 ರ ಸಂದರ್ಭದಲ್ಲಿ ಗುರು ಗೋಬಿಂದ್ ಸಿಂಗ್ ಅವರನ್ನು ಸಿಖ್ ಧರ್ಮದ ನಾಯಕರಾಗಿ ಘೋಷಿಸಲಾಯಿತು. 1947 ರಲ್ಲಿ ಬ್ರಿಟಿಷರಿಂದ ಭಾರತ ಸ್ವಾತಂತ್ರ್ಯ ಪಡೆಯಿತು. 1948 ರಲ್ಲಿ ತಾರಾ ಸಿಂಗ್ ಪಂಜಾಬಿ ಮಾತನಾಡುವ ಸ್ವಾಯತ್ತ ಸಿಖ್ ರಾಜ್ಯವನ್ನು ಸ್ಥಾಪಿಸಲು ಕರೆ ನೀಡಿದರು. 1970ರ ಬಳಿಕ ಭಾರತ ಮತ್ತು ವಿದೇಶಗಳಲ್ಲಿ ಸಿಖ್‌ ಸ್ವಾತಂತ್ರ್ಯ ಚಳುವಳಿ ಪ್ರಬಲವಾಗಿ ಬೆಳೆಯಲು ಪ್ರಾರಂಭಿಸಿತು. 1984ರ ಜೂನ್‌ ತಿಂಗಳಲ್ಲಿ ಸಿಖ್ ಧರ್ಮದ ಪವಿತ್ರ ಸ್ಥಳವಾದ ಗೋಲ್ಡನ್ ಟೆಂಪಲ್‌ನಲ್ಲಿ ಆಶ್ರಯ ಪಡೆದಿದ್ದ ಪ್ರತ್ಯೇಕತಾವಾದಿಗಳನ್ನು (Khalistani Separatists) ಹೊರಹಾಕಲು ಭಾರತೀಯ ಪಡೆಗಳು ದಾಳಿ ನಡೆಸಿದವು. 1984 ರ ಅಕ್ಟೋಬರ್‌ 31 ರಂದು ದೇವಾಲಯದ ಮೇಲೆ ದಾಳಿ ನಡೆಸಲು ಆದೇಶಿಸಿದ ಅಂದಿನ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರನ್ನು ಅವರ ಇಬ್ಬರು ಸಿಖ್ (Sikhs) ಅಂಗರಕ್ಷಕರು ಹತ್ಯೆ ಮಾಡಿದರು. 1985 ರಲ್ಲಿ ಕೆನಡಾ ಮೂಲದ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಟೊರೊಂಟೊದಿಂದ ನವದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ‘ಕನಿಷ್ಕಾ’ ಮೇಲೆ ಬಾಂಬ್ ಸ್ಫೋಟಿಸಿ 329 ಮಂದಿ ಹತ್ಯೆಗೈದರು. 2011 ರ ಜನಗಣತಿಯ ಪ್ರಕಾರ, 2.08 ಕೋಟಿ ಸಿಖ್ಖರು ಭಾರತದಲ್ಲಿದ್ದಾರೆ. ಭಾರತದ ಒಟ್ಟು ಜನಸಂಖ್ಯೆಯಲ್ಲಿ ಸಿಖ್ಖರು 7% ರಷ್ಟಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕರಿಗೆ ಕೆನಡಾದಲ್ಲಿ ಸುರಕ್ಷಿತ ನೆಲೆ ಸಿಕ್ಕಿದೆ: ಟ್ರುಡೊ ವಿರುದ್ಧ ಲಂಕಾ ಸಚಿವ ವಾಗ್ದಾಳಿ

    ಐತಿಹಾಸಿಕ ಪಂಜಾಬ್ ಪ್ರದೇಶವು ಭಾರತೀಯ ಉಪಖಂಡದ ಉತ್ತರ ಭಾಗದಲ್ಲಿದೆ. ಆಧುನಿಕ ಪೂರ್ವ ಪಾಕಿಸ್ತಾನ ಮತ್ತು ವಾಯುವ್ಯ ಭಾರತವನ್ನು ಒಳಗೊಂಡಿದೆ. ಭಾರತದಲ್ಲಿ ಇದು ಲುಧಿಯಾನ, ಅಮೃತಸರ, ಚಂಡೀಗಢ ಮತ್ತು ಜಲಂಧರ್‌ನಂತಹ ನಗರಗಳನ್ನು ಒಳಗೊಂಡಿದೆ. ಅಲ್ಲದೇ ಪಾಕಿಸ್ತಾನದಲ್ಲಿ ಲಾಹೋರ್, ಫೈಸಲಾಬಾದ್, ನಂಕಾನಾ ಸಾಹಿಬ್, ರಾವಲ್ಪಿಂಡಿ ಮತ್ತು ಮುಲ್ತಾನ್ ಪ್ರದೇಶ ಹೊಂದಿದೆ. ಕೆಲವು ಖಲಿಸ್ತಾನ್ ಬೆಂಬಲಿಗರು ಪಂಜಾಬ್‌ನ ಪಾಕಿಸ್ತಾನದ ಭಾಗವನ್ನು (ಭಾರತ-ಪಾಕ್‌ ವಿಭಜನೆ) ಸಂಯೋಜಿಸಲು ಕರೆ ನೀಡಿದ್ದಾರೆ. ಆದರೆ ಇತರ ಗುಂಪುಗಳು, ಹರಿಯಾಣ ಮತ್ತು ಹಿಮಾಚಲ ಪ್ರದೇಶದ ಕೆಲವು ಪ್ರದೇಶಗಳು ಹಾಗೂ ಭಾರತದ ಪಂಜಾಬ್‌ನ ಸುತ್ತಲಿನ ರಾಜ್ಯಗಳು ಸಹ ಉದ್ದೇಶಿತ ರಾಷ್ಟ್ರದ ಭಾಗವಾಗಬೇಕೆಂದು ವಾದಿಸುತ್ತವೆ.

    ಕೆನಡಾದಲ್ಲಿರುವ ಸಿಖ್ಖರ ಸಂಖ್ಯೆ ಎಷ್ಟು?
    ಕೆನಡಾದಲ್ಲಿನ ಒಟ್ಟು ಜನಸಂಖ್ಯೆ 3.98 ಕೋಟಿ. ಅವರ ಪೈಕಿ 16.80 ಕೋಟಿ ಮಂದಿ ಭಾರತೀಯರಿದ್ದಾರೆ. 8 ಲಕ್ಷದಷ್ಟು ಜನ ಸಿಖ್ಖರೇ ಇದ್ದಾರೆ. ಆದರೆ ಇಲ್ಲಿರುವ ಸಿಖ್ಖರಲ್ಲಿ ಖಲಿಸ್ತಾನ ಪ್ರತ್ಯೇಕತಾವಾದಿಗಳ ಪರವಾಗಿ ಇರುವವರು ಎಷ್ಟು ಎಂಬುದರ ಬಗ್ಗೆ ಮಾಹಿತಿ ಇಲ್ಲ. ಕೆನಡಾ ಜನಸಂಖ್ಯೆಯಲ್ಲಿ ಭಾರತೀಯರ ಪ್ರಮಾಣ 4% ರಷ್ಟಿದೆ. ಇಲ್ಲಿನ ಒಟ್ಟು ಭಾರತೀಯರಲ್ಲಿ 13 ಲಕ್ಷ ಮಂದಿ ಕೆನಡಾ ಪೌರತ್ವ ಪಡೆದುಕೊಂಡಿದ್ದಾರೆ. 3.80 ಲಕ್ಷ ವಿದ್ಯಾರ್ಥಿಗಳ ಸಂಖ್ಯೆ ಇಲ್ಲಿದೆ.

    ಭಾರತ-ಕೆನಡಾ ಬಿಕ್ಕಟ್ಟಿಗೆ ಕಾರಣವೇನು?
    2007ರಲ್ಲಿ ಪಂಜಾಬ್‌ನಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬೇಕಾಗಿದ್ದ ಹರ್ದೀಪ್ ಸಿಂಗ್ ನಿಜ್ಜಾರ್‌ನನ್ನು ಭಾರತ ಸರ್ಕಾರ ಉಗ್ರರ ಪಟ್ಟಿಗೆ ಸೇರಿಸಿತ್ತು. ಭಾರತದಲ್ಲಿ ಉಗ್ರರ ಸಂಘಟನೆ ಎಂದು ಪಟ್ಟಿ ಮಾಡಲಾಗಿ ಖಲಿಸ್ತಾನ್ ಟೈಗರ್ ಫೋರ್ಸ್‌ನ ಅಧ್ಯಕ್ಷನಾಗಿದ್ದ ನಿಜ್ಜಾರ್ 1990 ರ ದಶಕದಲ್ಲೇ ಭಾರತ ತೊರೆದು ಕೆನಡಾ ಸೇರಿದ್ದ. ಅಲ್ಲಿನ ಪೌರತ್ವವನ್ನೂ ಪಡೆದಿದ್ದ. ಖಲಿಸ್ತಾನ ಪ್ರತ್ಯೇಕತಾವಾದಿಗಳಿಗೆ ತರಬೇತಿ ಮತ್ತಿತರ ನೆರವು ನೀಡಿದ ಆರೋಪಗಳೂ ಆತನ ಮೇಲಿದ್ದವು. ಆತನ ಹೆಸರಿದ್ದ ಉಗ್ರನ ಪಟ್ಟಿಯನ್ನು ಭಾರತ ಈಚಿನ ವರ್ಷಗಳಲ್ಲಿ ಕೆನಡಾಕ್ಕೆ ಹಸ್ತಾಂತರಿಸಿತ್ತು. ಕೆನಡಾ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಕೆನಡಾದ ಬ್ರಿಟಿಷ್ ಕೊಲಂಬಿಯಾದ ರ‍್ರೆಯಲ್ಲಿನ ಗುರುದ್ವಾರದ ಅಧ್ಯಕ್ಷನಾಗಿದ್ದ ನಿಜ್ಜಾರ್‌ನನ್ನು ಇಬ್ಬರು ಮುಸುಕುಧಾರಿಗಳು ಇದೇ ಜೂನ್‌ನಲ್ಲಿ ಗುಂಡಿಟ್ಟು ಕೊಂದರು. ಭಾರತ ಮತ್ತು ಕೆನಡಾ ಸಂಬಂಧ ಹದಗೆಡಲು ಅಲ್ಲಿಂದ ಪ್ರಾರಂಭವಾಯಿತು.

    ಯಾರೀ ಖಲಿಸ್ತಾನಿಗಳು?
    ಸಿಖ್ ಪ್ರತ್ಯೇಕತಾವಾದಿಗಳು ತಮ್ಮ ತಾಯ್ನಾಡು ಖಲಿಸ್ತಾನ್, ಅಂದರೆ “ಶುದ್ಧರ ನಾಡು” ಅನ್ನು ಪಂಜಾಬ್‌ನಿಂದ ರಚಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಭಾರತವನ್ನು ಹಲವು ರಾಷ್ಟ್ರಗಳಾಗಿ ವಿಭಜಿಸುವುದೇ ಅವರ ಗುರಿ. 1970 ಮತ್ತು 1980 ರ ದಶಕದ ಹಿಂಸಾತ್ಮಕ ದಂಗೆಯ ಸಮಯದಿಂದಲೂ ಬೇಡಿಕೆಯನ್ನು ಹಲವು ಬಾರಿ ಪುನರುಚ್ಚರಿಸಿದ್ದಾರೆ. ಪಂಜಾಬ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದನೆ ಚಟುವಟಿಕೆ ಹರಡುವಲ್ಲಿ ಖಲಿಸ್ತಾನಿ ನಾಯಕರು ಪ್ರಮುಖ ಸೂತ್ರಧಾರಿಗಳಾಗಿದ್ದಾರೆ.

    ಖಲಿಸ್ತಾನಿಗಳ ಚಳುವಳಿ
    1980 ರ ದಶಕದ ಆರಂಭದಲ್ಲಿ ಪಂಜಾಬ್‌ನಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಚಳುವಳಿ ಪ್ರಾರಂಭವಾಯಿತು. ಪಂಜಾಬ್ ಮತ್ತು ಉತ್ತರ ಭಾರತದ ಇತರ ಭಾಗಗಳಲ್ಲಿ ‘ಶುದ್ಧರ ನಾಡು’ ಹೆಸರಿನಲ್ಲಿ ಸಿಖ್ ನಾಡು ರಚನೆಯೇ ಇವರ ಪ್ರಮುಖ ಉದ್ದೇಶವಾಗಿದೆ. ಖಲಿಸ್ತಾನಿಗಳಲ್ಲಿ ಹಲವು ಗುಂಪುಗಳಿವೆ. ಒಂದೊಂದು ಗುಂಪಿನ ಪ್ರಸ್ತಾಪವೂ ಭಿನ್ನವಾಗಿದೆ. ಕೆಲವರು ಇಡೀ ಭಾರತವು ಪಂಜಾಬ್ ನಾಡಾಗಬೇಕು ಎಂದು ಪ್ರತಿಪಾದಿಸುತ್ತಾರೆ. ಆದರೆ ಇತರರು ಪಾಕಿಸ್ತಾನಿ ಪಂಜಾಬ್ ಮತ್ತು ಉತ್ತರ ಭಾರತದ ಇತರ ಭಾಗಗಳಾದ ಚಂಡೀಗಢ, ಹರಿಯಾಣ ಮತ್ತು ಹಿಮಾಚಲ ಪ್ರದೇಶ ಪ್ರತ್ಯೇಕ ನಾಡು ಆಗಬೇಕೆಂದು ಪ್ರತಿಪಾದಿಸುತ್ತಾರೆ. ಇದನ್ನೂ ಓದಿ: ಜಾಗರೂಕರಾಗಿರಿ! – ಭಾರತದಲ್ಲಿರುವ ತನ್ನ ಪ್ರಜೆಗಳಿಗೆ ಕೆನಡಾ ಎಚ್ಚರಿಕೆ

    ಖಲಿಸ್ತಾನದ ಬೇರುಗಳು, 1800 ರ ದಶಕದ ಕೊನೆಯಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಸಿಖ್ ಮತ್ತು ಹಿಂದೂಗಳನ್ನು ವಿಭಜಿಸಲು ಪ್ರಯತ್ನಿಸಿದ ಬ್ರಿಟಿಷ್ ವಸಾಹತುಶಾಹಿ ನೀತಿಗಳಲ್ಲಿವೆ. ಬ್ರಿಟಿಷ್ ರಾಜ್ ವಿರುದ್ಧ ಬಂಡಾಯವೆದ್ದ ಹಿಂದೂ ಆಡಳಿತಗಾರರ ವಿರುದ್ಧ ಬಳಸಲು ಸಿಖ್ಖರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬ್ರಿಟಿಷ್ ಸೇನೆಗೆ ಸೇರಿಸಿಕೊಳ್ಳಲಾಯಿತು. ತರುವಾಯ, 1947 ರಲ್ಲಿ ಭಾರತದ ಸ್ವಾತಂತ್ರ‍್ಯದ ನಂತರ ಪಂಜಾಬ್ ರಾಜ್ಯ ಮತ್ತು ಭಾರತ ಸರ್ಕಾರದ ನಡುವೆ ಉದ್ವಿಗ್ನತೆ ಕಾಣಿಸಿಕೊಂಡಿತು. ಇದು ಭಾರತ ಸರ್ಕಾರದ ವಿರುದ್ಧ ಸಿಖ್ಖರಲ್ಲಿ ಅಸಮಾಧಾನಕ್ಕೆ ಕಾರಣವಾಯಿತು.

    ಚಳುವಳಿ ಭಾರತದಿಂದ ಕೆನಡಾಗೆ ವಿಸ್ತರಿಸಿದ್ದು ಹೇಗೆ?
    ಕೆನಡಾಕ್ಕೆ ಸಿಖ್ಖರ ವಲಸೆಯು 20 ನೇ ಶತಮಾನದ ಮೊದಲ ದಶಕದಲ್ಲಿ ಪ್ರಾರಂಭವಾಯಿತು. 1970 ರ ಹೊತ್ತಿಗೆ ಸಿಖ್ಖರು ಕೆನಡಾದ ಸಮಾಜದ ಭಾಗವಾಗಿದ್ದರು. ಖಲಿಸ್ತಾನಿ ಚಳುವಳಿಯು 1980-90ರ ದಶಕದಲ್ಲಿ ಉತ್ತುಂಗಕ್ಕೇರಿತು. ಹಿಂಸಾತ್ಮಕ ಕಾರ್ಯಾಚರಣೆ ಪ್ರಾರಂಭವಾಯಿತು. ಬಾಂಬ್ ದಾಳಿಗಳು, ಹತ್ಯೆ, ಅಪಹರಣ, ಟಾರ್ಗೆಟೆಡ್ ಹತ್ಯೆಗಳು ಮತ್ತು ನಾಗರಿಕರ ಹತ್ಯಾಕಾಂಡಗಳು ನಡೆದವು. ಇಂತಹ ಪ್ರಕರಣಗಳು ಪಂಜಾಬ್‌ನಲ್ಲಿ ಹೆಚ್ಚಾಗಿ ಘಟಿಸಿದವು.

    1985 ರಲ್ಲಿ ಕೆನಡಾ ಮೂಲದ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಟೊರೊಂಟೊದಿಂದ ನವದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ‘ಕನಿಷ್ಕಾ’ ಮೇಲೆ ಬಾಂಬ್ ಸ್ಫೋಟಿಸಿದರು. ವಿಮಾನದಲ್ಲಿದ್ದ 13 ವರ್ಷದೊಳಗಿನ 82 ಮಕ್ಕಳು ಸೇರಿದಂತೆ ಎಲ್ಲಾ 329 ಪ್ರಯಾಣಿಕರು ಹತ್ಯೆಯಾದರು. ಈ ಹಿಂಸಾಚಾರವು ಅಂತಾರಾಷ್ಟ್ರೀಯ ಆಯಾಮ ಪಡೆದುಕೊಂಡಿತು. ಆ ಘಟನೆಯು ಕೆನಡಾದ ಇತಿಹಾಸದಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿಯಾಗಿ ಉಳಿದಿದೆ.

    ಚಳುವಳಿಗೆ ಪ್ರತಿಕ್ರಿಯೆಯಾಗಿ ಮತ್ತು ರಾಜ್ಯದಲ್ಲಿ ಉಗ್ರವಾದವನ್ನು ಕೊನೆಗೊಳಿಸಲು ಭಾರತೀಯ ಭದ್ರತಾ ಪಡೆಗಳು ಮತ್ತು ಸ್ಥಳೀಯ ಪಂಜಾಬ್ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪರಿಣಾಮವಾಗಿ 1990 ರ ದಶಕದ ಅಂತ್ಯದ ವೇಳೆಗೆ ಭಾರತದಲ್ಲಿ ಖಲಿಸ್ತಾನಿ ಚಳುವಳಿಯು ಬಹುತೇಕ ಕೊನೆಯ ಹಂತದಲ್ಲಿತ್ತು. ಆದರೆ ಕೆನಡಾದಲ್ಲಿ ಅದು ಬೆಳೆಯಿತು. 2015 ರ ಫೆಡರಲ್ ಚುನಾವಣೆಯಲ್ಲಿ ತನ್ನ ಲಿಬರಲ್ ಪಕ್ಷವನ್ನು ಬೆಂಬಲಿಸುವ ಹಲವಾರು ಖಲಿಸ್ತಾನಿ ಪರ ಗುಂಪುಗಳೊಂದಿಗೆ ಜಸ್ಟಿನ್ ಟ್ರುಡೊ ಅಧಿಕಾರಕ್ಕೆ ಬಂದಾಗ ಚಳುವಳಿ ಮತ್ತೆ ಜೀವ ಪಡೆಯಿತು.

    ಕಾನಿಷ್ಕಾ ಬಾಂಬ್ ಸ್ಫೋಟ ಕರಾಳತೆ
    1985ರ ಜೂ.1 ರಂದು ಭಾರತದ ಗುಪ್ತಚರ ಸಂಸ್ಥೆಗಳು ಕೆನಡಾ ಪ್ರಾಧಿಕಾರಗಳಿಗೆ ಖಲಿಸ್ತಾನಿ ಉಗ್ರವಾದಿಗಳು ನಡೆಸಬಹುದಾದ ವಿಮಾನ ದಾಳಿಯ ವಿರುದ್ಧ ಸೂಕ್ತ ಭದ್ರತಾ ಕ್ರಮ ಕೈಗೊಳ್ಳುವಂತೆ ತುರ್ತು ಸಂದೇಶ ರವಾನಿಸಿದ್ದವು. ಇದಾದ ನಂತರ, ಅದೇ ವರ್ಷದ ಜೂ.23 ರಂದು ಏರ್ ಇಂಡಿಯಾ ವಿಮಾನ (ಕಾನಿಷ್ಕಾ)ದಲ್ಲಿ ಸೂಟ್‌ಕೇಸ್ ಬಾಂಬ್ ಇರಿಸಲಾಗಿತ್ತು. ಟೊರೊಂಟೊದಿಂದ ಬ್ರಿಟನ್‌ನ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಈ ವಿಮಾನದಲ್ಲಿ ಒಟ್ಟು 329 ಪ್ರಯಾಣಿಕರಿದ್ದರು. ಹತ್ಯೆಗೀಡಾಗಿದ್ದ ಬಹುತೇಕ ಪ್ರಯಾಣಿಕರಲ್ಲಿ ಕೆನಡಾ ಪ್ರಜೆಗಳಿದ್ದರು. ಇದನ್ನೂ ಓದಿ: ನಿಜ್ಜರ್‌ನಿಂದ ಕೆನಡಾದಲ್ಲಿ ಶಸ್ತ್ರಾಸ್ತ್ರ ತರಬೇತಿ, ಭಾರತದಲ್ಲಿ ದಾಳಿಗೆ ಧನ ಸಹಾಯ: ಗುಪ್ತಚರ ದಾಖಲೆ

    ಕಾನಿಷ್ಕಾ ದಾಳಿಯ ಸೂತ್ರಧಾರಿಯಾಗಿದ್ದ ಪಾರ್ಮರ್‌ನನ್ನು 1992 ರಲ್ಲಿ ಪಂಜಾಬ್‌ನಲ್ಲಿ ಪೊಲೀಸರು ಹತ್ಯೆ ಮಾಡಿದರು. ಆದರೆ ಅದೇ ವರ್ಷ ಜೂನ್ ತಿಂಗಳಲ್ಲಿ ಕೆನಡಾದ ಹಲವು ಭಾಗಗಳಲ್ಲಿ ಪಾರ್ಮರ್‌ಗೆ ಗೌರವ ಸೂಚಿಸುವ ಹಲವಾರು ಭಿತ್ತಿ ಚಿತ್ರಗಳು ಕಾಣಿಸಿಕೊಂಡಿದ್ದವು.

    ಖಲಿಸ್ತಾನಿ ಉಗ್ರರ ಪರವಾಗಿ ಕೆನಡಾ ಸಹಾನುಭೂತಿ ತೆರೆಮರೆಯಲ್ಲಿ ನಡೆದಿದೆ. ಇದರಿಂದ ಭಾರತಕ್ಕೆ ಮತ್ತೆ ಖಲಿಸ್ತಾನಿಗಳಿಂದ ಭದ್ರತಾ ಅಪಾಯ ಎದುರಾಗಿದೆ. ಏರ್ ಇಂಡಿಯಾ ಕಾನಿಷ್ಕಾ ಬಾಂಬ್ ದಾಳಿಯನ್ನು ಭಾರತ ಎಂದಿಗೂ ಮರೆಯಲು ಸಾಧ್ಯವಿಲ್ಲ. ಆದರೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ಕಾನಿಷ್ಕಾ ಬಂಬ್ ದಾಳಿಯ ಪರಂಪರೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಬೆಳವಣಿಗೆ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿಗೆ ಕಾರಣವಾಗಿದೆ.

    ಖಲಿಸ್ತಾನಿಗಳ ಬಗ್ಗೆ ಕೆನಡಾ ಸಹಾನುಭೂತಿ ಯಾಕೆ?
    ಭಾರತದ ನಂತರ ಸಿಖ್ಖರು ಹೆಚ್ಚಿನ ಸಂಖ್ಯೆಯಲ್ಲಿರುವ ದೇಶ ಕೆನಡಾ. ಈ ಜನಸಂಖ್ಯೆಯು ಕೆನಡಾದ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದಕ್ಕೆ ಇಂಬು ನೀಡುವಂತೆ ಪ್ರಧಾನಿ ಜಸ್ಟಿನ್‌ ಟ್ರುಡೋ ಅವರ ಲಿಬರಲ್‌ ಪಕ್ಷಕ್ಕೆ ಬೆಂಬಲ ನೀಡಿರುವುದು ಖಲಿಸ್ತಾನ ಪ್ರತ್ಯೇಕತಾ ಹೋರಾಟದಲ್ಲಿ ಭಾಗಿಯಾಗಿರುವ ಜಗಮೀತ್‌ ಸಿಂಗ್‌ ಅವರ ನ್ಯೂ ಡೆಮಾಕ್ರಟಿಕ್‌ ಪಕ್ಷ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿದೇಶದಲ್ಲಿರುವ ಖಲಿಸ್ತಾನ್‌ ಉಗ್ರರಿಗೆ ಶಾಕ್‌ – OCI Card ರದ್ದು

    ವಿದೇಶದಲ್ಲಿರುವ ಖಲಿಸ್ತಾನ್‌ ಉಗ್ರರಿಗೆ ಶಾಕ್‌ – OCI Card ರದ್ದು

    ನವದೆಹಲಿ: ವಿದೇಶದಲ್ಲಿದ್ದುಕೊಂಡು ಭಾರತದ ವಿರುದ್ಧ ಕಿತಾಪತಿ ಮಾಡುತ್ತಿರುವ ಖಲಿಸ್ತಾನ್‌ ಉಗ್ರರಿಗೆ (Khalistan Terrorist) ಬಿಸಿ ಮುಟ್ಟಿಸಲು ಕೇಂದ್ರ ಸರ್ಕಾರ ಈಗ ಮುಂದಾಗಿದೆ.

    ಅಮೆರಿಕ, ಯುಕೆ, ಕೆನಡಾ, ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಎಲ್ಲಾ ಖಲಿಸ್ತಾನಿ ಉಗ್ರರನ್ನು ಪತ್ತೆ ಹಚ್ಚಿ ಅವರ ಒಸಿಐ ಕಾರ್ಡ್‌ (OCI Card) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗೆ ಸೂಚಿಸಿದೆ ಎಂದು ವರದಿಯಾಗಿದೆ.

    ಕೇಂದ್ರ ಸರ್ಕಾರ ಒಸಿಐ ಕಾರ್ಡ್‌ ರದ್ದುಗೊಳಿಸಿದರೆ ಅವರು ಮರಳಿ ಭಾರತಕ್ಕೆ ಬರಲು ಸಾಧ್ಯವಿಲ್ಲ. ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬುರ್ಕಾ ಧರಿಸಿ ನೃತ್ಯ – ವ್ಯಕ್ತಿ ಬಂಧನ

     

    ಕೆನಡಾದಲ್ಲಿ ನೆಲೆಸಿರುವ ಖಲಿಸ್ತಾನಿ ಉಗ್ರ ಗುರುಪತ್‌ವಂತ್‌ ಸಿಂಗ್‌ ಪನ್ನು (Gurpatwant Singh Pannu) ಭಾರತದಲ್ಲಿ ಹೊಂದಿದ್ದ ಆಸ್ತಿಯನ್ನು ರಾಷ್ಟ್ರೀಯ ತನಿಖಾ ದಳ (NIA) ಮುಟ್ಟುಗೋಲು ಹಾಕಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈಗ ವಿದೇಶದಲ್ಲಿ ನೆಲೆಸಿರುವ ಇತರೇ ಖಲಿಸ್ತಾನ್‌ ಉಗ್ರರ ಆಸ್ತಿ ಮುಟ್ಟುಗೋಲು ಹಾಕಲು ಸೂಚಿಸಿದೆ.

    ಚಂಡಿಗಢ ಮತ್ತು ಅಮೃತಸರದಲ್ಲಿ ಗುರುಪತ್‌ವಂತ್‌ ಸಿಂಗ್‌ ಪನ್ನು ಹೊಂದಿದ್ದ ಆಸ್ತಿಯನ್ನು ಎನ್‌ಐಎ ಮುಟ್ಟುಗೋಲು ಹಾಕಿದ ಬಳಿಕ  ಸರ್ಕಾರ ಈಗ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

    ಏನಿದು ಒಸಿಐ ಕಾರ್ಡ್‌?
    ಭಾರತೀಯ ಮೂಲದ ವಿದೇಶಿ ಪ್ರಜೆಗೆ ಭಾರತ ನೀಡಿದ ಕಾನೂನಿನ ಸ್ಥಾನಮಾನ ಓಸಿಐ. ಇದರಿಂದಾಗಿ ವ್ಯಕ್ತಿಗೆ ಭಾರತದ ಶಾಶ್ವತ ಪ್ರಜೆ ಎಂಬ ಸ್ಥಾನ ಸಿಗುವುದಾದರೂ ಪೌರತ್ವ ಸಿಗುವುದಿಲ್ಲ. ವೀಸಾ ಹೊಂದಿರುವವರಿಗಿಂತ ಓಸಿಐ ಕಾರ್ಡ್‌ ಹೆಚ್ಚಿನ ಪ್ರಯೋಜನ ನೀಡುತ್ತದೆ ಶಾಶ್ವತವಾಗಿ ಭಾರತದ ವೀಸಾ ಇವರಿಗೆ ಇರುತ್ತದೆ. ಎಷ್ಟು ಬಾರಿ ಬೇಕಾದರೂ ಇವರು ಭಾರತಕ್ಕೆ ಬರಬಹುದು. ಇಲ್ಲಿ ವಾಸ, ಕೆಲಸ ಹಾಗೂ ವ್ಯಾಪಾರವನ್ನು ಅನಿರ್ದಿಷ್ಟ ಕಾಲಾವಧಿಯವರೆಗೆ ಮುಂದುವರಿಸಬಹುದು.


    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆನಡಾದಲ್ಲಿ ಖಲಿಸ್ತಾನಿ ಉಗ್ರನ ಹತ್ಯೆ – ಹೊಣೆ ಹೊತ್ತುಕೊಂಡ ಬಿಷ್ಣೋಯ್‌ ಗ್ಯಾಂಗ್‌

    ಕೆನಡಾದಲ್ಲಿ ಖಲಿಸ್ತಾನಿ ಉಗ್ರನ ಹತ್ಯೆ – ಹೊಣೆ ಹೊತ್ತುಕೊಂಡ ಬಿಷ್ಣೋಯ್‌ ಗ್ಯಾಂಗ್‌

    ನವದೆಹಲಿ: ಕೆನಡಾದಲ್ಲಿ (Canada) ಖಲಿಸ್ತಾನಿ ಉಗ್ರ ಸುಖದೂಲ್ ಸಿಂಗ್ (Khalistani Terrorist Sukhdool Singh) ಹತ್ಯೆಯ ಹೊಣೆಯನ್ನು ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್‌ ಹೊತ್ತುಕೊಂಡಿದೆ.

    ಈ ಸಂಬಂಧ ಪೋಸ್ಟ್‌ ಪ್ರಕಟಿಸಿದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌, ಗುರ್ಲಾಲ್ ಬ್ರಾರ್ ಮತ್ತು ವಿಕ್ಕಿ ಮಿದ್ದುಖೇರಾ ಹತ್ಯೆಯಲ್ಲಿ ಸುಖದೂಲ್ ಸಿಂಗ್ ಪ್ರಮುಖ ಪಾತ್ರವಹಿಸಿದ್ದ. ಈ ಕಾರಣಕ್ಕೆ ಆತನನ್ನು ಹತ್ಯೆ ಮಾಡಲಾಗಿದೆ. ಆತನ ಪಾಪಗಳಿಗೆ ಶಿಕ್ಷೆ ನೀಡಲಾಗಿದೆ ಎಂದು ಬರೆಯಲಾಗಿದೆ.

    ಬುಧವಾರ ರಾತ್ರಿ ನಡೆದ ಹಿಂಸಾಚಾರದಲ್ಲಿ ಸುಖದೂಲ್ ಸಿಂಗ್‌ನನ್ನ ಹತ್ಯೆ ಮಾಡಲಾಗಿತ್ತು. ಖಲಿಸ್ತಾನ್ ಚಳವಳಿಯ ನಾಯಕನಾಗಿದ್ದ ಈತ 2017ರಲ್ಲಿ ನಕಲಿ ಪಾಸ್‌ಪೋರ್ಟ್‌ ಮೂಲಕ ಕೆನಡಾಕ್ಕೆ ಪರಾರಿಯಾಗಿದ್ದ.

    ಬುಧವಾರ ರಾಷ್ಟ್ರೀಯ ತನಿಖಾ ದಳ (NIA) 43 ಮಂದಿ ಖಲಿಸ್ತಾನಿ ಉಗ್ರರ ಫೋಟೋ ರಿಲೀಸ್‌ ಮಾಡಿತ್ತು. ಈ ಪಟ್ಟಿಯಲ್ಲಿ ಸುಖದೂಲ್ ಸಿಂಗ್ ಫೋಟೋ ಇತ್ತು.  ಇದನ್ನೂ ಓದಿ: ಕೆನಡಾದ ಪ್ರಜೆಗಳಿಗೆ ಭಾರತೀಯ ವೀಸಾ ಸೇವೆ ತಾತ್ಕಾಲಿಕ ಸ್ಥಗಿತ

    ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿಆರೋಪಿಯಾಗಿರುವ ಲಾರೆನ್ಸ್ ಬಿಷ್ಣೋಯ್ ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಅಹಮದಾಬಾದ್‌ನಲ್ಲಿ ಜೈಲಿನಲ್ಲಿದ್ದು, ಎನ್‌ಐಎ ತನಿಖೆ ನಡೆಸುತ್ತಿದೆ.

    ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಭಾರತೀಯ ಸರ್ಕಾರಿ ಏಜೆಂಟರಿಗೆ ಸಂಬಂಧವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸಂಸತ್ತಿಗೆ ತಿಳಿಸಿದ ಬಳಿಕ ಕೆನಡಾ ಮತ್ತು ಭಾರತದ ಸಂಬಂಧ ಹಳಸಿದೆ. ಈ ಸಂದರ್ಭದಲ್ಲೇ ಸುಖದೂಲ್ ಸಿಂಗ್‌ ಹತ್ಯೆ ನಡೆದಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆನಡಾದ ಪ್ರಜೆಗಳಿಗೆ ಭಾರತೀಯ ವೀಸಾ ಸೇವೆ ತಾತ್ಕಾಲಿಕ ಸ್ಥಗಿತ

    ಕೆನಡಾದ ಪ್ರಜೆಗಳಿಗೆ ಭಾರತೀಯ ವೀಸಾ ಸೇವೆ ತಾತ್ಕಾಲಿಕ ಸ್ಥಗಿತ

    ನವದೆಹಲಿ: ಭಾರತ (India) ಹಾಗೂ ಕೆನಡಾ (Canada) ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮೂಡಿರುವ ಹಿನ್ನೆಲೆ ಕೆನಡಾದ ಪ್ರಜೆಗಳಿಗೆ ಭಾರತೀಯ ವೀಸಾ (Visa) ಸೇವೆಯನ್ನು ಗುರುವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

    ಜೂನ್‌ನಲ್ಲಿ ಕೆನಡಾದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ಆರೋಪಿಸಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮೂಡಿದ್ದು, ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

    ಈ ಬಗ್ಗೆ ವೀಸಾ ಸಲಹೆಗಳನ್ನು ಒದಗಿಸುವ ಭಾರತದ ಆನ್‌ಲೈನ್ ವೀಸಾ ಅರ್ಜಿ ಕೇಂದ್ರ ಬಿಎಲ್‌ಎಸ್ ಇಂಟರ್‌ನ್ಯಾಷನಲ್ ತನ್ನ ವೆಬ್‌ಸೈಟ್‌ನಲ್ಲಿ ಸೂಚನೆಯನ್ನು ಪೋಸ್ಟ್ ಮಾಡಿದೆ. ಭಾರತೀಯ ಮಿಷನ್‌ನಿಂದ ಪ್ರಮುಖ ಸೂಚನೆ: ಕಾರ್ಯಾಚರಣೆಯ ಕಾರಣಗಳಿಂದಾಗಿ 2023ರ ಸೆಪ್ಟೆಂಬರ್ 21ರಿಂದ ಜಾರಿಗೆ ಬರುವಂತೆ ಭಾರತೀಯ ವೀಸಾ ಸೇವೆಗಳನ್ನು ಮುಂದಿನ ಸೂಚನೆಯ ತನಕ ಸ್ಥಗಿತಗೊಳಿಸಲಾಗಿದೆ ಎಂದು ಬರೆದಿದೆ. ಇದನ್ನೂ ಓದಿ: ಕೆನಡಾದಲ್ಲಿ ಗ್ಯಾಂಗ್‌ವಾರ್‌ – ಖಲಿಸ್ತಾನಿ ಭಯೋತ್ಪಾದಕ ಹತ್ಯೆ

    ಕೆನಡಾದ ಪ್ರಧಾನಿ ಟ್ರುಡೋ ಸೋಮವಾರ ಸಂಸತ್ತಿನಲ್ಲಿ ಮಾತನಾಡುತ್ತಾ, ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್‌ನ ಮಾರಣಾಂತಿಕ ಗುಂಡಿನ ದಾಳಿಯ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಆರೋಪಿಸಿದ್ದರು. ಆದರೆ ಈ ಆರೋಪವನ್ನು ಭಾರತ ತಳ್ಳಿ ಹಾಕಿದೆ. ನಾವು ತಮ್ಮ ಸಂಸತ್ತಿನಲ್ಲಿ ಕೆನಡಾ ಪ್ರಧಾನಿಯವರ ಹೇಳಿಕೆಯನ್ನು ಗಮನಿಸಿದ್ದೇವೆ ಹಾಗೂ ಅದನ್ನು ತಿರಸ್ಕರಿಸುತ್ತೇವೆ. ಮತ್ತು ಅವರ ವಿದೇಶಾಂಗ ಸಚಿವರ ಹೇಳಿಕೆನ್ನೂ ತಿರಸ್ಕರಿಸುತ್ತೇವೆ ಎಂದು ಭಾರತದ ವಿದೇಶಾಂಗ ಸಚಿವಾಲಯ (MEA) ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಭಾರತ ವಿರೋಧಿ ಪ್ರಚಾರಕ್ಕೆ ಖಲಿಸ್ತಾನ್ ಉಗ್ರರ ಜೊತೆ ಕೈ ಜೋಡಿಸಿದ ಪಾಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತ ವಿರೋಧಿ ಪ್ರಚಾರಕ್ಕೆ ಖಲಿಸ್ತಾನ್ ಉಗ್ರರ ಜೊತೆ ಕೈ ಜೋಡಿಸಿದ ಪಾಕ್

    ಭಾರತ ವಿರೋಧಿ ಪ್ರಚಾರಕ್ಕೆ ಖಲಿಸ್ತಾನ್ ಉಗ್ರರ ಜೊತೆ ಕೈ ಜೋಡಿಸಿದ ಪಾಕ್

    ನವದೆಹಲಿ: ಭಾರತ (India) ವಿರೋಧಿ ಪ್ರಚಾರಕ್ಕೆ ಸಂಚು ರೂಪಿಸಲು ಕೆನಡಾದಲ್ಲಿರುವ (Canada) ಪಾಕಿಸ್ತಾನದ (Pakistan) ಗುಪ್ತಚರ ಸಂಸ್ಥೆಯ (ಐಎಸ್‍ಐ) ಏಜೆಂಟ್‍ಗಳು ಮತ್ತು ಖಲಿಸ್ತಾನ್ (Khalistan) ಭಯೋತ್ಪಾದಕ ಗುಂಪುಗಳ ಮುಖ್ಯಸ್ಥರು ಇತ್ತೀಚೆಗೆ ವ್ಯಾಂಕೋವರ್‌ನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ.

    ಇದೇ ವಾರ ಸಭೆ ನಡೆದಿದ್ದು, ಸಿಖ್ಸ್ ಫಾರ್ ಜಸ್ಟಿಸ್ (ಎಸ್‍ಎಫ್‍ಜೆ) ಮುಖ್ಯಸ್ಥ ಗುರುಪತ್‍ವಂತ್ ಸಿಂಗ್ ಪನ್ನುನ್ ಮತ್ತು ಖಲಿಸ್ತಾನಿ ಸಂಘಟನೆಗಳ ಇತರ ಮುಖ್ಯಸ್ಥರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಭಾರತದ ವಿರುದ್ಧ ನಕಾರಾತ್ಮಕ ಪ್ರಚಾರ ಮಾಡಲು ತಿರ್ಮಾನಿಸಲಾಗಿದೆ. ಅಲ್ಲದೇ ಸಾಧ್ಯವಾದಷ್ಟು ಈ ಯೋಜನೆಯನ್ನು ಕಾರ್ಯಗತಗೊಳಿಸಲು ಸಂಘಟನೆಗಳು ಮುಂದಾಗಿವೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಇದನ್ನೂ ಓದಿ: ಉಗ್ರ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ: ಕೆನಡಾ ಗಂಭೀರ ಆರೋಪ

    ಪ್ಲಾನ್-ಕೆ ಎಂದು ಹೆಸರಿಸಲಾದ ಯೋಜನೆಯ ಭಾಗವಾಗಿ ಐಎಸ್‍ಐ ಕಳೆದ ಕೆಲವು ತಿಂಗಳುಗಳಿಂದ ಕೆನಡಾದಲ್ಲಿ ಖಲಿಸ್ತಾನ್ ಚಟುವಟಿಕೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಣವನ್ನು ನೀಡುತ್ತಿದೆ. ಈ ಹಣವನ್ನು ಪ್ರತಿಭಟನೆಗಳನ್ನು ನಡೆಸಲು ಜನರನ್ನು ಪ್ರಚೋದಿಸಲು ಮತ್ತು ಭಾರತ ವಿರೋಧಿ ಪ್ರಚಾರಕ್ಕಾಗಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ತಯಾರಿಸಲು ಬಳಸಲಾಗುತ್ತಿದೆ. ಅಲ್ಲದೇ ಸಂಘಟನೆಗಳಿಗೆ ಹೊಸಬರನ್ನು ಸೇರಿಸಿಕೊಳ್ಳಲು ಇದೇ ಹಣವನ್ನು ಬಳಕೆ ಮಾಡಲಾಗುತ್ತಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

    20ಕ್ಕೂ ಹೆಚ್ಚು ಖಲಿಸ್ತಾನಿ ಮತ್ತು ದರೋಡೆಕೋರರು ಕೆನಡಾದಲ್ಲಿ ಅಡಗಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ದೇಶದ ಇತರ ಏಜೆನ್ಸಿಗಳು ಕೆನಡಾಕ್ಕೆ ಪರಸ್ಪರ ಕಾನೂನು ಸಹಾಯ ಕೇಳಿದ್ದವು. ಆದರೆ ಕೆನಡಾದ ತನಿಖಾ ಸಂಸ್ಥೆಗಳು ತನಿಖೆಗೆ ಪ್ರತಿಕ್ರಿಯಿಸಿಲ್ಲ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಭಾರತದ ಮೇಲಿನ ಕೆನಡಾ ಆರೋಪಕ್ಕೆ ಕಳವಳ ವ್ಯಕ್ತಪಡಿಸಿದ ಅಮೆರಿಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]