Tag: ಖಲೀಂ ಪಾಷಾ

  • ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ಮಿಡ್‍ನೈಟ್ ಆಪರೇಷನ್ – ಕಾರ್ಪೊರೇಟರ್ ಪತಿ ಖಲೀಂ ಪಾಷಾ ಅರೆಸ್ಟ್

    ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ಮಿಡ್‍ನೈಟ್ ಆಪರೇಷನ್ – ಕಾರ್ಪೊರೇಟರ್ ಪತಿ ಖಲೀಂ ಪಾಷಾ ಅರೆಸ್ಟ್

    – 53ಕ್ಕೂ ಹೆಚ್ಚು ಕ್ರಿಮಿಗಳು ಅಂದರ್

    ಬೆಂಗಳೂರು: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮತ್ತೊಬ್ಬ ಆರೋಪಿ ಖಲೀಂ ಪಾಷಾನನ್ನು ಪೊಲೀಸರು ಮಧ್ಯರಾತ್ರಿ ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಗಲಭೆ – ಟಿಪ್ಪು ಆರ್ಮಿ ಸಂಘಟನೆಯ ಮುಖಂಡ ಅರೆಸ್ಟ್

    ಕೆಜಿ ಹಳ್ಳಿ ಕಾರ್ಪೊರೇಟರ್ ಪತಿ ಖಲೀಂ ಪಾಷಾನನ್ನು ಬಂಧಿಸಿದ್ದಾರೆ. ಆರೋಪಿ ಖಲೀಂ ಪಾಷಾ ಗಲಭೆಯ ಉದ್ರಿಕ್ತರಿಗೆ ಪ್ರಚೋದನೆ ನೀಡುತ್ತಿದ್ದನು. ಅಂದರೆ ಗಲಭೆಕೋರರಿಗೆ ಪ್ರಚೋದನಕಾರಿ ಭಾಷಣ ಮಾಡುತ್ತಿದ್ದನು ಎಂಬುದು ತನಿಖೆ ವೇಳೆ ತಿಳಿದು ಬಂದಿದೆ. ಹೀಗಾಗಿ ಮಧ್ಯರಾತ್ರಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ, ಡಿಜೆ ಹಳ್ಳಿ ಪೊಲೀಸರು ಮಧ್ಯರಾತ್ರಿ ಅಂದರೆ ಸುಮಾರು 15 ಗಂಟೆಗೆ ಆಪರೇಷನ್ ಕಾರ್ಯಾಚರಣೆ ಮಾಡಲು ಶುರು ಮಾಡಿದ್ದರು. ಅದೇ ರೀತಿ ಡಿಜೆ ಹಳ್ಳಿ, ಕೆಜಿ ಹಳ್ಳಿಯ ಗಲ್ಲಿಗಲ್ಲಿಯಲ್ಲೂ ಪೊಲೀಸ್ ಸುತ್ತಾಡಿದ್ದಾರೆ. ರಾತ್ರಿ 12ರಿಂದ ಬೆಳಗಿನ ಜಾವ 4 ಗಂಟೆವರೆಗೆ ಮಿಡ್‍ನೈಟ್ ಆಪರೇಷನ್ ಮಾಡಿದ್ದಾರೆ.

    ಕಿಡಿಕೇಡಿಗಳು ಗಲಭೆ ಮಾಡಿದ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದರು. ಕೊನೆಗೆ ಸಿಸಿಬಿ, ಡಿಜೆ ಪೊಲೀಸರು ವಿಡಿಯೋಗಳನ್ನು ಪರಿಶೀಲನೆ ಮಾಡಿದ್ದಾರೆ. ಆಗ ಆರೋಪಿಗಳನ್ನು ಗುರುತಿಸಿ ಅವರ ಮನೆಗೆ ಮಧ್ಯರಾತ್ರಿ ಹೋಗಿ ಬಂಧಿಸಿದ್ದಾರೆ.

    100ಕ್ಕೂ ಹೆಚ್ಚು ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, 50ಕ್ಕೂ ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಇಲ್ಲಿವರೆಗೆ 200ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

  • ಮಾಜಿ ಗೃಹ ಸಚಿವ ಜಾರ್ಜ್‌ ಜೊತೆ ಸುತ್ತಾಡಿದ ಬೆಂಗಳೂರು ಗಲಭೆಯ ಆರೋಪಿ

    ಮಾಜಿ ಗೃಹ ಸಚಿವ ಜಾರ್ಜ್‌ ಜೊತೆ ಸುತ್ತಾಡಿದ ಬೆಂಗಳೂರು ಗಲಭೆಯ ಆರೋಪಿ

    ಬೆಂಗಳೂರು: ಎಫ್‌ಬಿ ಪೋಸ್ಟ್‌ನಿಂದ ಹೊತ್ತಿ ಉರಿದ ಬೆಂಗಳೂರು ಪ್ರಕರಣದ ಮುಖ್ಯ ಆರೋಪಿಯೊಬ್ಬ ಮಾಜಿ ಗೃಹ ಸಚಿವ ಕೆಜೆ ಜಾರ್ಜ್‌ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯವಾಗಿದೆ.

    ಹೌದು. ನಾಗವಾರ ವಾರ್ಡ್‌ನ ಕಾಂಗ್ರೆಸ್‌ ಪಾಲಿಕೆ ಸದಸ್ಯೆ ಇರ್ಷಾದ್‌ ಬೇಗಂ ಪತಿ ಖಲೀಂ ಪಾಷಾ ಬೆಂಗಳೂರು ಗಲಭೆಯ 7ನೇ ಆರೋಪಿಯಾಗಿದ್ದಾನೆ. ಗಲಾಟೆ ನಡೆದ ರಾತ್ರಿ ಈತನ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಈತ ಮನೆಯಲ್ಲಿ ಇರಲಿಲ್ಲ. ಆದರೆ ಖಲೀಂ ಜಾರ್ಜ್‌ ಜೊತೆ ಸುತ್ತಾಡಿದ್ದಾನೆ.

    ಅಷ್ಟೇ ಅಲ್ಲದೇ ಆರೋಪಿ ಜಾರ್ಜ್‌ ಹೊತೆ ಪೊಲೀಸ್‌ ಠಾಣೆಗೆ ಬಂದಿದ್ದಾನೆ. ಠಾಣೆಗೆ ಬಂದಿದ್ದರೂ ಪೊಲೀಸರು ಆತನನ್ನು ಬಂಧಿಸಿಲ್ಲ.

    ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಖಲೀಂ ಪಾಷಾ, ನಾನು ಗಲಭೆಯಲ್ಲಿ ಭಾಗಿಯಾಗಿಲ್ಲ. ನನ್ನ ವಿರುದ್ಧ ಎಫ್‌ಐಆರ್‌ ಆಗಿರುವುದು ನನಗೆ ಗೊತ್ತಿಲ್ಲ. ಪೊಲೀಸರು ಬಂದಾಗ ನಾನು ಮನೆಗೆ ಬೀಗ ಹಾಕಿರಲಿಲ್ಲ. ಹೆಂಡತಿ ಮನೆಯಲ್ಲಿ ಇದ್ದೆ ಅದಕ್ಕೆ ಪೊಲೀಸರು ತಪ್ಪು ತಿಳಿದುಕೊಂಡಿದ್ದಾರೆ. ನನಗೂ ಗಲಭೆಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾನೆ.