Tag: ಖಾಸಗಿ

  • ಅಣು ಶಕ್ತಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾಸಗಿ ಹಣ – ರೇಸ್‌ನಲ್ಲಿ ಟಾಟಾ, ರಿಲಯನ್ಸ್‌, ಅದಾನಿ

    ಅಣು ಶಕ್ತಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾಸಗಿ ಹಣ – ರೇಸ್‌ನಲ್ಲಿ ಟಾಟಾ, ರಿಲಯನ್ಸ್‌, ಅದಾನಿ

    ನವದೆಹಲಿ: ಪರಮಾಣು ಕ್ಷೇತ್ರದಲ್ಲಿ (Nuclear Power) ಮೊದಲ ಬಾರಿಗೆ ಖಾಸಗಿ ಕಂಪನಿಗಳ ಹೂಡಿಕೆಗೆ (Private Investment ) ಕೇಂದ್ರ ಸರ್ಕಾರ ಅವಕಾಶ ನೀಡಿದೆ.

    ಈ ವಲಯದಲ್ಲಿ ಹೂಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಕಂಪನಿಗಳನ್ನು ಆಹ್ವಾನಿಸಿದೆ. ರಿಲಯನ್ಸ್ ಇಂಡಸ್ಟ್ರೀಸ್, ಟಾಟಾ ಪವರ್, ಅದಾನಿ ಪವರ್ ಮತ್ತು ವೇದಾಂತ ಲಿಮಿಟೆಡ್ ಸೇರಿದಂತೆ ಕನಿಷ್ಠ ಐದು ಖಾಸಗಿ ಸಂಸ್ಥೆಗಳೊಂದಿಗೆ ಸರ್ಕಾರವು ಸುಮಾರು 2.16 ಲಕ್ಷ ರೂ. ಹೂಡಿಕೆ ಮಾಡಲು ಮಾತುಕತೆ ನಡೆಸುತ್ತಿದೆ ಎಂದು ಈ ವಿಷಯದಲ್ಲಿ ನೇರವಾಗಿ ಭಾಗಿಯಾಗಿರುವ ಎರಡು ಮೂಲಗಳು ತಿಳಿಸಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಅಣು ಸಚಿವಾಲಯ ಮತ್ತು ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ಕಳೆದ ವರ್ಷದಲ್ಲಿ ಹೂಡಿಕೆ ಯೋಜನೆ ಕುರಿತು ಖಾಸಗಿ ಕಂಪನಿಗಳೊಂದಿಗೆ ಅನೇಕ ಸುತ್ತಿನ ಚರ್ಚೆಗಳನ್ನು ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಾಂಗ್ರೆಸ್‌ ಪಕ್ಷದ ಖಾತೆಗಳಿಂದ 65 ಕೋಟಿ ರೂ. ಕಡಿತ – IT ವಿರುದ್ಧ ಗಂಭೀರ ಆರೋಪ

    ಪ್ರಸ್ತುತ ಭಾರತದ (India) ಅಣು ಇಂಧನ ಕ್ಷೇತ್ರ ಸಂಪೂರ್ಣ ಸರ್ಕಾರದ ನಿಯಂತ್ರಣದಲ್ಲಿದೆ. ರಿಯಾಕ್ಟರ್ ನಿರ್ಮಾಣ, ಉತ್ಪಾದನೆ, ಇಂಧನ ನಿರ್ವಹಣೆಯು ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದ ಎನ್‌ಪಿಸಿಐಎಲ್‌ಗೆ ಇರಲಿದೆ. ಇದನ್ನೂ ಓದಿ: ಯುಪಿ ಬಗ್ಗೆ ರಾಗಾ ವಿವಾದಾತ್ಮಕ ಮಾತು- ಮಗನಿಗೆ ಬುದ್ಧಿ ಹೇಳುವಂತೆ ಸೋನಿಯಾಗೆ ಸ್ಮೃತಿ ಸಲಹೆ

    ಹೊಸ ಖಾಸಗಿ ಹೂಡಿಕೆ ರಿಯಾಕ್ಟರ್ ಹೊರಗಿನ ನಿರ್ಮಾಣ, ಭೂಮಿ ಖರೀದಿ, ನೀರು ಮತ್ತು ಇತರೆ ಮೂಲಸೌಕರ್ಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿರಲಿದೆ. ಹೂಡಿಕೆ ಮಾಡಿದ ಕಂಪನಿಗಳು ವಿದ್ಯುತ್ ಮಾರಾಟದ ಲಾಭ ಪಡೆದುಕೊಳ್ಳಲಿದೆ.

    ಹಾಲಿ ಅಣುಶಕ್ತಿ ಸಾಮರ್ಥ  7,500 ಮೆಗಾ ವ್ಯಾಟ್‌ ಇದ್ದು, 2040ರ ವೇಳೆಗೆ 11,000 ಮೆ.ವ್ಯಾ.ಗೆ ಏರಿಸುವ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಯೋಜನೆಯು ಇನ್ನೂ ಅಂತಿಮ ಹಂತದಲ್ಲಿದೆ .

    ಈ ಯೋಜನೆಗೆ 1962 ರ ಭಾರತದ ಪರಮಾಣು ಶಕ್ತಿ ಕಾಯ್ದೆಗೆ ಯಾವುದೇ ತಿದ್ದುಪಡಿ ಮಾಡುವ ಅಗತ್ಯವಿಲ್ಲ. ಪರಮಾಣು ವಿದ್ಯುತ್ ಸ್ಥಾವರಗಳನ್ನು ಖಾಸಗಿ ಕಂಪನಿಗಳು ಸ್ಥಾಪಿಸುವುದಕ್ಕೆ ಭಾರತೀಯ ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ ಘಟಕಗಳು, ಉಪಕರಣಗಳನ್ನು ಪೂರೈಸಲು ಮತ್ತು ರಿಯಾಕ್ಟರ್‌ಗಳ ಹೊರಗಿನ ಕೆಲಸಕ್ಕೆ ಕಾಯ್ದೆಯಲ್ಲಿ ಅವಕಾಶವಿದೆ.

     

  • ಇನ್ಮುಂದೆ ಖಾಸಗಿ ಶಾಲಾ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ಕೇಂದ್ರ ನಿರ್ಧಾರ

    ಇನ್ಮುಂದೆ ಖಾಸಗಿ ಶಾಲಾ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ಕೇಂದ್ರ ನಿರ್ಧಾರ

    ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಖಾಸಗಿ ಶಾಲೆಗಳ ಶಿಕ್ಷಕರಿಗೂ (Private School Teacher) ರಾಷ್ಟ್ರೀಯ ಪ್ರಶಸ್ತಿ (National Awards to Teachers 2023) ನೀಡಲು ಕೇಂದ್ರ ನಿರ್ಧರಿಸಿದೆ.

    ಇಷ್ಟು ದಿನ ಸರ್ಕಾರಿ ಶಾಲಾ ಶಿಕ್ಷಕರಿಗಷ್ಟೇ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿತ್ತು. ಇದೀಗ ಕೇಂದ್ರ ಹೊಸ ನಿಯಮವನ್ನು ಜಾರಿಗೆ ತಂದಿದ್ದು, ಈ ವರ್ಷದಿಂದ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತ್ಯತ್ತಮ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ತೀರ್ಮಾನಿಸಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಚಿತ್ರೋದ್ಯಮದ ಗಣ್ಯರು

    ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023ಕ್ಕೆ ಕೇಂದ್ರ ಸರ್ಕಾರ ಅರ್ಜಿ ಆಹ್ವಾನ ಮಾಡಿದೆ. ಜುಲೈ 15 ರವರೆಗೆ ಆನ್‌ಲೈನ್ ಮೂಲಕ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ನೀಡಲಾಗಿದೆ. ಅತ್ಯುತ್ತಮ ಶಿಕ್ಷಕರಿಗೆ ಹಾಗೂ 10 ವರ್ಷ ಸತತವಾಗಿ ಸೇವೆ ಸಲ್ಲಿಸಿರುವ ಖಾಸಗಿ ಶಿಕ್ಷಕರಿಗೂ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ – 2 ಆಮೆಗಳು ಪತ್ತೆ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಹುಬ್ಬಳ್ಳಿ ಏರ್‌ಪೋರ್ಟ್ ಖಾಸಗಿ ತೆಕ್ಕೆಗೆ – 130 ಕೋಟಿ ರೂ. ನಿರೀಕ್ಷೆ

    ಹುಬ್ಬಳ್ಳಿ ಏರ್‌ಪೋರ್ಟ್ ಖಾಸಗಿ ತೆಕ್ಕೆಗೆ – 130 ಕೋಟಿ ರೂ. ನಿರೀಕ್ಷೆ

    ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿರುವ ವಿಮಾನ ನಿಲ್ದಾಣ ಕರ್ನಾಟಕದಲ್ಲೇ ಮೂರನೇ ಅತಿ ದೊಡ್ಡ ನಿಲ್ದಾಣವಾಗಿದ್ದು, ಸರಿ ಸುಮಾರು 150 ಕೋಟಿ ರೂ.ಗಳಿಗೂ ಅಧಿಕ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ನಿಲ್ದಾಣವನ್ನಾಗಿ ಅಭಿವೃದ್ಧಿ ಪಡಿಸಲಾಗಿದೆ. ಇದೀಗ ಮೂಲಸೌಕರ್ಯ ಕ್ಷೇತ್ರಕ್ಕೆ ಆರ್ಥಿಕ ಸಂಪನ್ಮೂಲ ಹೊಂದಿಸಲು ಕೇಂದ್ರ ಸರ್ಕಾರ ರೂಪಿಸಿರುವ ನ್ಯಾಷನಲ್ ಮಾನಿಟೈಸೇಶನ್ ಪೈಪ್‍ಲೈನ್ ಎನ್‍ಎಂಪಿ (ರಾಷ್ಟ್ರೀಯ ನಗದೀಕರಣ ಯೋಜನೆ)ಯೋಜನೆಯಡಿ ಖಾಸಗಿಗೆ ವಹಿಸಿಕೊಡಲು ಹುಬ್ಬಳ್ಳಿ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವನ್ನು ಗುರುತಿಸಲಾಗಿದೆ.

    ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಉಡಾನ್ ಯೋಜನೆಯಡಿ ವಿಮಾನಗಳ ಸಂಖ್ಯೆ ಹೆಚ್ಚಿಸಿದ ಪರಿಣಾಮ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಹೀಗಾಗಿಯೇ ಕರ್ನಾಟಕದಲ್ಲಿ ಅತೀ ಹೆಚ್ಚು ಪ್ರಯಾಣಿಕರ ಸಾಂದ್ರತೆ ಹೊಂದಿರುವ ನಿಲ್ದಾಣಗಳಲ್ಲೊಂದಾಗಿದೆ. ದೇಶದ 25 ನಿಲ್ದಾಣಗಳನ್ನು ಎನ್‍ಎಂಪಿ ಯೋಜನೆಗೊಳಪಡಿಸಿದ್ದು, ರಾಜ್ಯದ ಹುಬ್ಬಳ್ಳಿ ವಿಮಾನ ನಿಲ್ದಾಣ ಖಾಸಗಿ ನಿರ್ವಹಣೆಗೆ ಆಯ್ಕೆ ಮಾಡಲಾಗಿದೆ. ನೀತಿ ಆಯೋಗ ವೆಬ್‍ಸೈಟ್‍ನಲ್ಲಿ ಪ್ರಕಟಿಸಿರುವ ಮಾಹಿತಿ ಪ್ರಕಾರ 25 ನಿಲ್ದಾಣಗಳಿಂದ 20,782 ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಹುಬ್ಬಳ್ಳಿ ನಿಲ್ದಾಣದಿಂದ 130 ಕೋಟಿ ರೂ.ಗಳಿಗೆ ಖಾಸಗಿ ತೆಕ್ಕೆಗೆ ನೀಡುವ ಉದ್ದೇಶಿಸಲಾಗಿದೆ. ಇದನ್ನೂ ಓದಿ: 6 ಲಕ್ಷ ಕೋಟಿ ಸಂಗ್ರಹ ಗುರಿ – ಖಾಸಗಿಯವರಿಗೆ ಸಿಗಲಿದೆ ರೈಲು, ರಸ್ತೆ, ಗಣಿ

    ನಾಲ್ಕು ಹಂತಗಳಲ್ಲಿ ಏರ್‌ಪೋರ್ಟ್ ಗಳನ್ನು ಖಾಸಗಿಗೆ ವಹಿಸಿಕೊಡಲಾಗುತ್ತಿದ್ದು, ಹುಬ್ಬಳ್ಳಿ ನಿಲ್ದಾಣವನ್ನು 2023-24ನೇ ಸಾಲಿಗೆ ನಿಗದಿಪಡಿಸಲಾಗಿದೆ. ಮೊದಲ ಹಂತದಲ್ಲಿ (2021-22)ವಾರಾಣಸಿ, ನಾಗ್ಪುರ ಮತ್ತು ಭುವನೇಶ್ವರ, ಅಮೃತಸರ, ತಿರುಚಿ, ಇಂದೋರ್, ರಾಯಪುರ್ ನಿಲ್ದಾಣಗಳಿಂದ 3,600 ಕೋಟಿ ರೂ., ಹಾಗೂ 2022-23ರಲ್ಲಿ ಕ್ಯಾಲಿಕಟ್, ಕೊಯಮತ್ತೂರು, ನಾಗಪುರ್, ಪಾಟ್ನಾ, ಮಧುರೈ, ಸೂರತ್, ರಾಂಚಿ, ಜೋಧಪುರ್ ನಿಲ್ದಾಣಗಳಿಂದ 4,295 ಕೋಟಿ ರೂ, 2023-24ರಲ್ಲಿ ಚೆನ್ನೈ, ವಿಜಯವಾಡಾ, ತಿರುಪತಿ, ವಡೋದರ, ಭೋಪಾಲ್, ಹುಬ್ಬಳ್ಳಿ ನಿಲ್ದಾಣಗಳಿಂದ 4,193 ಕೋಟಿ ರೂ. ಮತ್ತು 2024-25ರಲ್ಲಿ ಇಂಪಾಲ, ಅಗರ್ತಲಾ, ಉದಯಿಪುರ್, ಡೆಹ್ರಾಡೂನ್, ರಾಜಮುದ್ರಿ ನಿಲ್ದಾಣಗಳನ್ನು ಆಯ್ಕೆ ಮಾಡಿದ್ದು ಇವುಗಳಿಂದ 1,857 ಕೋಟಿ ರೂ.ಗಳು ಸಂಗ್ರಹವಾಗುವ ನಿರೀಕ್ಷೆ ಹೊಂದಿದೆ.  ಇದನ್ನೂ ಓದಿ: ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ: ಹೆಚ್.ಡಿ. ಕುಮಾರಸ್ವಾಮಿ

    ಆದರೆ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ವಹಣೆ ಖಾಸಗಿಯವರಿಗೆ ವಹಿಸುವ ಕುರಿತು ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕ ಪ್ರಮೋದ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

  • ಖಾಸಗಿ ವೈದ್ಯರು ಗ್ರಾಮ ದತ್ತು ಸ್ವೀಕರಿಸಿ, ಕೊರೊನಾ ನಿಯಂತ್ರಿಸಬಹುದು- ದಾವಣಗೆರೆ ಡಿಸಿ ಮನವಿ

    ಖಾಸಗಿ ವೈದ್ಯರು ಗ್ರಾಮ ದತ್ತು ಸ್ವೀಕರಿಸಿ, ಕೊರೊನಾ ನಿಯಂತ್ರಿಸಬಹುದು- ದಾವಣಗೆರೆ ಡಿಸಿ ಮನವಿ

    ದಾವಣಗೆರೆ: ಎರಡನೇ ಅಲೆಯಲ್ಲಿ ಕೊರೊನಾ ಸೋಂಕು ಗ್ರಾಮೀಣ ಭಾಗದಲ್ಲಿ ಅತಿ ವೇಗವಾಗಿ ಹರಡುತ್ತಿದ್ದು, ಇದನ್ನು ನಿಯಂತ್ರಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಖಾಸಗಿ ವೈದ್ಯರು ಗ್ರಾಮ ದತ್ತು ಪಡೆಯಬೇಕು. ಸತತ 10 ದಿನಗಳ ಕಾಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ, ರೋಗಪತ್ತೆ, ಚಿಕಿತ್ಸೆ ನೀಡಲು ಖಾಸಗಿ ವೈದ್ಯರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮನವಿ ಮಾಡಿದರು.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕಿನ 2ನೇ ಅಲೆ ಅವಧಿಯಲ್ಲಿ ನಿರೀಕ್ಷೆಗಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಅನೇಕರು ನಮ್ಮ ಕಣ್ಣಮುಂದೆಯೇ ಮರೆಯಾಗುತ್ತಿದ್ದಾರೆ. ಸದ್ದಿಲ್ಲದೆ ಸೋಂಕು, ಬಡವರು, ಶ್ರೀಮಂತರು, ನಿರ್ಗತಿಕರು ಎನ್ನದೆ ಬಹಳಷ್ಟು ಜನರನ್ನು ಬಲಿತೆಗೆದುಕೊಳ್ಳುತ್ತಿದೆ. ದಾವಣಗೆರೆಯ ಶೇ.70ರಷ್ಟು ಹಳ್ಳಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಅಲ್ಲಿನ ಜನರಿಗೆ ಸರಿಯಾದ ಮಾರ್ಗದರ್ಶನ, ಜಾಗೃತಿ ಹಾಗೂ ಚಿಕಿತ್ಸೆ ಸಿಗದೆ ಮತ್ತಷ್ಟು ಹೆಚ್ಚಾಗುತ್ತಿದೆ. ಹೀಗಾಗಿ ಖಾಸಗಿ ವೈದ್ಯರು ಒಂದೊಂದು ಗ್ರಾಮವನ್ನು ದತ್ತು ಪಡೆದು ಚಿಕಿತ್ಸೆ ನೀಡಬೇಕು ಎಂದರು.

    ಈ ಹಿಂದೆ ಸಂಭವಿಸಿದ ಲಾತೂರ್ ಭೂಕಂಪ, ಕಂಡು ಕೇಳರಿಯದ ಪ್ರವಾಹ, ಕೊಡಗಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಭೂಕುಸಿತ ಸಂದರ್ಭಗಳಲ್ಲಿ ಜಿಲ್ಲೆಯ ಖಾಸಗಿ ವೈದ್ಯರ ತಂಡ, ದುರಂತ ಸ್ಥಳಗಳಿಗೆ ತೆರಳಿ, ಜನರ ಪ್ರಾಣ ರಕ್ಷಣೆ ಮಾಡಿದ ನಿದರ್ಶನವಿದೆ. ಹೀಗಾಗಿ ಜಿಲ್ಲೆಯ ವೈದ್ಯರ ಬಗ್ಗೆ ನಮಗೆ ಹೆಮ್ಮೆ ಇದೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಗ್ರಾಮಗಳಲ್ಲಿ ವೇಗವಾಗಿ ವ್ಯಾಪಿಸುತ್ತಿದೆ, ಜಿಲ್ಲೆ ಕಷ್ಟಕರ ಪರಿಸ್ಥಿತಿ ಎದುರಿಸುತ್ತಿದೆ ಎಂದು ತಿಳಿಸಿದರು.

    ಲಾಕ್‍ಡೌನ್ ಪರಿಣಾಮವಾಗಿ ನಗರ, ಪಟ್ಟಣಗಳಿಂದ ಗ್ರಾಮಗಳಿಗೆ ಹಿಂದಿರುಗಿದ ಜನರಿಂದ ಸೋಂಕು ವ್ಯಾಪಕವಾಗುತ್ತಿದೆ. ಗ್ರಾಮಗಳಲ್ಲಿ ರೋಗದ ಬಗ್ಗೆ ಜನರಿಗೆ ಸರಿಯಾದ ತಿಳುವಳಿಕೆ ಇಲ್ಲ. ಜನರು ತಪ್ಪು ಕಲ್ಪನೆ ಹಾಗೂ ಭೀತಿಯಿಂದ ರೋಗ ಲಕ್ಷಣಗಳಿದ್ದರೂ ಪರೀಕ್ಷೆ ಮಾಡಿಸಿಕೊಳ್ಳದೆ, ರೋಗ ಮುಚ್ಚಿಡುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹವರು ರೋಗವನ್ನು ಬೇರೆಯವರಿಗೆ ಹರಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಶೇ.70ರಷ್ಟು ಪ್ರಕರಣಗಳು ಗ್ರಾಮೀಣ ಪ್ರದೇಶಗಳಿಂದ ವರದಿಯಾಗುತ್ತಿವೆ. ಹೀಗಾಗಿ ಕೋವಿಡ್ ಸೋಂಕಿನ ಕುರಿತು ಗ್ರಾಮೀಣ ಜನರಲ್ಲಿ ಸರಿಯಾದ ತಿಳುವಳಿಕೆ, ಅರಿವು ಮೂಡಿಸಬೇಕಿದೆ, ಇದರ ಜೊತೆಗೆ ಅವರಲ್ಲಿನ ತಪ್ಪು ಕಲ್ಪನೆಗಳನ್ನು ತೊಡೆದುಹಾಕಿ, ಚಿಕಿತ್ಸೆಯ ಬಗ್ಗೆ ಹಾಗೂ ಸರ್ಕಾರ ನಿಮ್ಮೊಂದಿಗಿದೆ ಎನ್ನುವ ವಿಶ್ವಾಸವನ್ನು ಮೂಡಿಸಬೇಕಿದೆ ಎಂದು ತಿಳಿಸಿದರು.

    ಗ್ರಾಮಗಳು ಉಳಿದರೆ, ಇಡೀ ದೇಶ ಉಳಿದಂತೆ. ಯಾವುದೇ ಗ್ರಾಮದಲ್ಲಿ 15 ರಿಂದ 20 ಜನರಲ್ಲಿ ಸೋಂಕು ಇರುವುದು ದೃಢಪಟ್ಟಲ್ಲಿ ಆಯಾ ಗ್ರಾಮದ ಶಾಲೆ ಅಥವಾ ಸಮುದಾಯ ಭವನದಲ್ಲಿಯೇ ಕೋವಿಡ್ ಕೇರ್ ಸೆಂಟರ್ ತೆರೆದು, ಸೋಂಕಿತರಿಗೆ ಸೂಕ್ತ ವೈದ್ಯಕೀಯ ನೆರವು ನೀಡಲು ಜಿಲ್ಲಾಡಳಿತ ಸಿದ್ಧವಿದೆ. ಅದ್ದರಿಂದ ಖಾಸಗಿ ವೈದ್ಯರು ಕನಿಷ್ಟ 2 ತಿಂಗಳು ಗ್ರಾಮಗಳ ದತ್ತು ಸ್ವೀಕರಿಸಬೇಕು. ಖಾಸಗಿ ಹಾಗೂ ಸರ್ಕಾರಿ ವೈದ್ಯರನ್ನು ಒಳಗೊಂಡ ನಿಯೋಜಿತ ತಂಡಗಳು ದತ್ತು ಸ್ವೀಕೃತ ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿನ ಜನರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಮನವಿ ಮಾಡಿದರು.

  • ಬಸ್ ಡಿಕ್ಕಿಯಿಂದ ಸೊಂಟ ಮುರಿದಿದ್ದ ದಸರಾ ಆನೆ ಸಾವು

    ಬಸ್ ಡಿಕ್ಕಿಯಿಂದ ಸೊಂಟ ಮುರಿದಿದ್ದ ದಸರಾ ಆನೆ ಸಾವು

    ಮಡಿಕೇರಿ: ಖಾಸಗಿ ಬಸ್ ಡಿಕ್ಕಿಯಿಂದ ಸೊಂಟ ಮುರಿತಕ್ಕೊಳಗಾಗಿದ್ದ ದಸರಾ ಆನೆ ಮೃತಪಟ್ಟಿದೆ. ಈ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಗರಹೋಳೆ ಅಭಯಾರಣ್ಯದ ಮತ್ತಿಗೋಡು ಆನೆ ಶಿಬಿರದ ರಸ್ತೆಯಲ್ಲಿ ಸಂಭವಿಸಿತ್ತು.

    ನಲವತ್ತೈದು ವರ್ಷ ಪ್ರಾಯದ ಸಾಕಾನೆಯಾದ ರಂಗನನ್ನು ಎಂದಿನಂತೆ ರಾತ್ರಿ ತಿರಾಗಾಡಲು ಬಿಟ್ಟಿದ್ದರು. ಈ ವೇಳೆ ಕಣ್ಣನ್ನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಸಾಕಾನೆ ಗುದ್ದಿದೆ. ಪರಿಣಾಮ ಆನೆಯ ಸೊಂಟ ಮುರಿದು ಸ್ಥಳದಲ್ಲೇ ಕುಸಿದು ಬಿದ್ದಿತ್ತು. ರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು.

    ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಮಾವುತರು ಹಾಗೂ ಪುಶುವೈದ್ಯ ಡಾ.ಮುಜೀಬ್ ಸಹಾಯದಿಂದ ಆನೆಗೆ ಚಿಕಿತ್ಸೆ ನೀಡಿತಾದರೂ, ಗಂಭೀರವಾಗಿ ಪೆಟ್ಟು ತಿಂದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ.

    ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ರೌಡಿ ರಂಗನೆಂದೇ ಖ್ಯಾತಿ ಪಡೆದಿದ್ದ ಈ ಆನೆಯನ್ನು ಸೆರೆ ಹಿಡಿದು, ಮತ್ತಿಗೋಡು ಆನೆ ಶಿಬಿರದಲ್ಲಿ ಪಳಗಿಸಲಾಗಿತ್ತು.

    ಘಟನೆ ಸಂಬಂಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಖಾಸಗಿ ಬಸ್ ಡಿಕ್ಕಿ- ದಸರಾ ಆನೆಯ ಸೊಂಟ ಮುರಿತ!

    ಖಾಸಗಿ ಬಸ್ ಡಿಕ್ಕಿ- ದಸರಾ ಆನೆಯ ಸೊಂಟ ಮುರಿತ!

    ಮಡಿಕೇರಿ: ವಿರಾಜಪೇಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯದ ಮತ್ತಿಗೋಡು ಆನೆ ಶಿಬಿರದ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ದಸರಾಗೆ ತೆರಳಬೇಕಿದ್ದ ಸಾಕಾನೆಯೊಂದು ಸೊಂಟ ಮುರಿದಿದೆ.

    ಮತ್ತಿಗೋಡು ಆನೆ ಶಿಬಿರದ 45 ವರ್ಷ ವಯಸ್ಸಿನ ರಂಗ ಎನ್ನುವ ಸಾಕಾನೆಯ ಸೊಂಟ ಮುರಿದಿದೆ. ಮಾವುತರು ಎಂದಿನಂತೆ ಭಾನುವಾರ ರಾತ್ರಿ ರಂಗನನ್ನು ತಿರುಗಾಡಲು ಬಿಟ್ಟಿದ್ದರು. ಈ ವೇಳೆ ಕಣ್ಣೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಆನೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆನೆ ಸ್ಥಳದಲ್ಲೇ ಕುಸಿದು ಬಿದ್ದು, ಸೊಂಟ ಮುರಿದಿದೆ.

    ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಮಾವುತರು ಹಾಗೂ ಪುಶುವೈದ್ಯ ಡಾ.ಮುಜೀಬ್ ಸಹಾಯದಿಂದ ಆನೆಗೆ ಚಿಕಿತ್ಸೆ ನೀಡಿ, ಶಿಬಿರಕ್ಕೆ ಕರೆತರಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ರೌಡಿ ರಂಗನೆಂದೇ ಖ್ಯಾತಿ ಪಡೆದಿದ್ದ ಈ ಆನೆಯನ್ನು ಸೆರೆ ಹಿಡಿದು, ಮತ್ತಿಗೋಡು ಆನೆ ಶಿಬಿರದಲ್ಲಿ ಪಳಗಿಸಲಾಗಿತ್ತು.

    ದುರಂತವೇನೆಂದರೆ ಇನ್ನೆರಡು ದಿನ ಕಳೆದಿದ್ದರೆ ರಂಗ ದಸರಾದಲ್ಲಿ ಪಾಲ್ಗೊಳ್ಳಲು ತೆರಳಬೇಕಿತ್ತು. ಸದ್ಯ ರಂಗ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಸಂಬಂಧ ಖಾಸಗಿ ಬಸ್ ಚಾಲಕನ ವಿರುದ್ಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿರೋಧದ ನಡುವೆಯೂ ಸರ್ಕಾರಿ ಹೆರಿಗೆ ಆಸ್ಪತ್ರೆಯನ್ನು ಉಡುಪಿ ಉದ್ಯಮಿಗೆ ನೀಡಿದ್ರು ಸಿಎಂ

    ವಿರೋಧದ ನಡುವೆಯೂ ಸರ್ಕಾರಿ ಹೆರಿಗೆ ಆಸ್ಪತ್ರೆಯನ್ನು ಉಡುಪಿ ಉದ್ಯಮಿಗೆ ನೀಡಿದ್ರು ಸಿಎಂ

    ಉಡುಪಿ: ಹಲವು ಕಾನೂನು ಹೋರಾಟ ಮತ್ತು ಜನರ ಪ್ರತಿಭಟನೆಯ ನಡುವೆಯೇ ಸರ್ಕಾರ ಉಡುಪಿಯ ಸರ್ಕಾರಿ ಹೆರಿಗೆ ಆಸ್ಪತ್ರೆಯನ್ನು ಉದ್ಯಮಿ ಬಿ.ಆರ್ ಶೆಟ್ಟಿಗೆ ನೀಡಿತು. ಸ್ವತ: ಸಿಎಂ, ಆರೋಗ್ಯ ಸಚಿವರು ಬಂದು ಆಸ್ಪತ್ರೆ ಉದ್ಘಾಟಿಸಿ ಬಿ.ಆರ್.ಶೆಟ್ಟಿ ಅವರ ಕೆಲಸವನ್ನು ಹೊಗಳಿದರು.

    ಉದ್ಯಮಿ ಬಿ.ಆರ್. ಶೆಟ್ಟಿ ಹಣ ಹೂಡಿರುವ ಸರ್ಕಾರಿ ಆಸ್ಪತ್ರೆಗೆ ಆರಂಭದಿಂದಲೂ ವಿರೋಧ ಕೇಳಿಬರುತ್ತಿತ್ತು. ಇದು ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದ ಹೊಸ ಪ್ರಯೋಗ ಆಸ್ಪತ್ರೆ. ಬಿ.ಆರ್ ಶೆಟ್ಟಿಯವರು ತಮ್ಮ ತಾಯಿಯ ಸ್ಮರಣಾರ್ಥ ಒಂದು ಹೆರಿಗೆ ಆಸ್ಪತ್ರೆ ಕಟ್ಟಿಸಿಕೊಟ್ಟಿದ್ದಾರೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯ ಮೇಲ್ವಿಚಾರಣೆಯಲ್ಲಿ ಈ ಆಸ್ಪತ್ರೆಯ ನಿರ್ವಹಣೆ ನಡೆಯುತ್ತದೆ. ಆದರೆ ಈ ಆಸ್ಪತ್ರೆಗೆ ಸಿಬ್ಬಂದಿ ನೇಮಕ ಮತ್ತು ಎಲ್ಲಾ ಉಸ್ತುವಾರಿ ಶೆಟ್ಟರ ಬಿ.ಆರ್. ವೆಂಚರ್ಸ್ ಕೈಯ್ಯಲ್ಲೇ ಇರುತ್ತದೆ. ಸರ್ಕಾರಿ ಆಸ್ಪತ್ರೆ ಮತ್ತು ಅದಕ್ಕೆ ಸೇರಿದ ಮೂರು ಮುಕ್ಕಾಲು ಎಕರೆ ಸ್ಥಳವನ್ನು ಸರ್ಕಾರ ಖಾಸಗಿಯವರಿಗೆ ದಾನ ಮಾಡಿದೆ.

    ದಶಕಗಳ ಹಿಂದೆ ದಾನಿ ಹಾಜೀ ಅಬ್ದುಲ್ ಸಾಹೇಬರು ಮಹಿಳಾ ಹೆರಿಗೆ ಹಾಗೂ ಮಕ್ಕಳ ಆಸ್ಪತ್ರೆಗಾಗಿ ಭೂಮಿ ಧಾನವಾಗಿ ಸರ್ಕಾರಕ್ಕೆ ನೀಡಿದ್ರು. ಆದ್ರೆ ಅದೇ ಭೂಮಿಯನ್ನು ಸರ್ಕಾರ ಈಗ ಖಾಸಗಿಯವರ ವಶಕ್ಕೆ ನೀಡಿ ಕೈತೊಳೆದು ಕೊಂಡಿದೆ. ಹಾಗಾಗಿ ಸಾಮಾಜಿಕ ವಲಯದಲ್ಲಿ ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ವಿರೋಧ, ಪ್ರತಿಭಟನೆ ನಡೆಯುತ್ತಿದೆ. ಆದ್ರೆ ಪ್ರತಿಭಟನೆ ನಡುವೆಯೇ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜೀ ಅಬ್ದುಲ್ ಸಾಹೇಬ್ ಆಸ್ಪತ್ರೆಯನ್ನು ದೀಪ ಬೆಳಗಿಸಿ ರಿಬ್ಬನ್ ಕತ್ತರಿಸಿ ಉದ್ಘಾಟಿಸಿದ್ರು. ಆಸ್ಪತ್ರೆ ಸರ್ಕಾರ ವಶದಲ್ಲೇ ಇರುತ್ತದೆ, ಖಾಸಗಿಯವರು ನಡೆಸುತ್ತಾರೆ ಅದರಲ್ಲೇನೂ ತಪ್ಪಿದೆ ಎಂದು ಪ್ರಶ್ನಿಸಿದರು.

    ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ತಿದ್ದುಪಡಿ ಮಸೂದೆ ತರಲು ಹೊರಟು ವೈದ್ಯರ ಕೆಂಗಣ್ಣಿಗೆ ಗುರಿಯಾಗಿರುವ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಮುತುವರ್ಜಿಯಲ್ಲೇ ಈ ಒಪ್ಪಂದ ಆಗಿದೆ. ಸ್ವತ: ಸಿಎಂ ಸಿದ್ದರಾಮಯ್ಯನವರೇ ಶಂಕುಸ್ಥಾಪನೆ ಮಾಡಿರುವ ಈ ಆಸ್ಪತ್ರೆ ಒಂದೇ ವರ್ಷದೊಳಗೆ ಉದ್ಘಾಟನೆಗೊಂಡಿದೆ.

    ಚುನಾವಣಾ ನೀತಿ ಸಂಹಿತೆ ಸೇರಿದಂತೆ ಯಾವುದೇ ಅಡ್ಡಿ ಬರಬಾರದು ಎಂಬ ಕಾರಣಕ್ಕೆ ತರಾತುರಿಯಲ್ಲಿ ಉದ್ಘಾಟನೆ ನಡೆದಿದೆ. ಆರೋಗ್ಯ ಕ್ಷೇತ್ರದ ಖಾಸಗೀಕರಣ ಬಗ್ಗೆ ಸರ್ಕಾರದ ಈ ದ್ವಿಮುಖ ನೀತಿಗೆ ಖಂಡನೆ ವ್ಯಕ್ತವಾಗುತ್ತಿದೆ. ಸರಕಾರಿ ಆಸ್ಪತ್ರೆಯನ್ನು ಉಳಿಸಬೇಕು ಎಂದು ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಮುಂದುವರಿಸಿದೆ. ಆಸ್ಪತ್ರೆಗೆ ಭೂಮಿ ದಾನ ಮಾಡಿದ್ದ ಹಾಜಿ ಅಬ್ದುಲ್ಲಾ ಸಾಹೇಬರ ಕುಟುಂಬಸ್ಥರು ಕೂಡಾ ಈ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಈಗ ಜಿಲ್ಲಾ ಕೋರ್ಟ್ ಮೆಟ್ಟಿಲು ಏರಿದ್ದು, ಮುಂದೆ ಹೈಕೋರ್ಟ್ ನಲ್ಲೂ ಹೋರಾಟ ಮುಂದುವರಿಸುತ್ತೇವೆ ಎಂದು ಹೋರಾಟಗಾರ ಪಿ.ವಿ ಭಂಡಾರಿ ಹೇಳಿದ್ದಾರೆ.

    ಉಡುಪಿ ಜಿಲ್ಲೆಯಲ್ಲಿ 4 ಇಂದಿರಾ ಕ್ಯಾಂಟೀನ್ ಗಳಿಗೆ ಸಿಎಂ ಶಿಲಾನ್ಯಾಸ ಮಾಡಿದರು. ಮಹಿಳಾ ಮೀನುಗಾರರ ಸಮಾವೇಶದಲ್ಲಿ ಭಾಗವಹಿಸಿದ ಸಿಎಂ ಉಡುಪಿ ಜಿಲ್ಲೆಯನ್ನು ಬಯಲು ಮುಕ್ತ ಜಿಲ್ಲೆಯೆಂದು ಘೊಷಿಸಿದ್ರು.

    ಇದೇ ವೇಳೆ, ಮದ್ಯ ನಿಷೇಧಿಸುವ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು. ಇಂದಿರಾ ಕ್ಯಾಂಟೀನ್ ಮತ್ತು ಅನ್ನಭಾಗ್ಯದ ಅಕ್ಕಿ ಸೂಪರ್ ಕ್ವಾಲಿಟಿಯದ್ದು ಎಂದು ಸಿಎಂ ಸರ್ಟಿಫಿಕೇಟ್ ಕೊಟ್ಟರು.