Tag: ಖಾಸಗಿ ಆಸ್ಪತ್ರೆ

  • ವಾಣಿವಿಲಾಸ ಆಸ್ಪತ್ರೆಯಲ್ಲಿ ಔಷಧಗಳ ಕೊರತೆ – ಸಿಎಂ ಅವ್ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ!

    ವಾಣಿವಿಲಾಸ ಆಸ್ಪತ್ರೆಯಲ್ಲಿ ಔಷಧಗಳ ಕೊರತೆ – ಸಿಎಂ ಅವ್ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ!

    – ಅನಿವಾರ್ಯವಾಗಿ ಖಾಸಗಿ ಮೆಡಿಕಲ್‌ಗಳಲ್ಲಿ ಮೆಡಿಸಿನ್‌ ಖರೀದಿ ಮಾಡ್ತಿರೋ ರೋಗಿಗಳು

    ಬೆಂಗಳೂರು: ವಾಣಿವಿಲಾಸ ಸರ್ಕಾರಿ ಆಸ್ಪತ್ರೆಯಲ್ಲಿ (Vanivilas Government Hospital) ಮೆಡಿಸಿನ್ ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಯಾಕೆ ಶಾರ್ಟೆಜ್ ಅಂತ ಪ್ರಶ್ನಿಸಿದ್ರೆ ರೋಗಿಗಳಿಗೆ ಸಿಬ್ಬಂದಿ ಗದರಿಸ್ತಿದ್ದಾರೆ, ಸಿಎಂ ಅವರನ್ನೇ ಕೇಳಿ ಅಂತ ಉಡಾಫೆ ಉತ್ತರ ಕೊಡ್ತಿದ್ದಾರೆ. ಈ ಕರ್ಮಕಾಂಡ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಹೌದು. ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಮೆಡಿಸಿನ್ ಶಾರ್ಟೆಜ್ (Medicines Shortage) ಇದೆ. ಅಗತ್ಯ ಔಷಧಿಗಳು ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಅನಿವಾರ್ಯವಾಗಿ ಖಾಸಗಿ ಮೆಡಿಕಲ್‌ಗಳಲ್ಲಿ (Private Medical) ಕಾಸು ಕೊಟ್ಟು ಔಷಧ ಖರೀದಿ ಮಾಡ್ತಿದ್ದಾರೆ. ಆದ್ರೆ ಔಷಧ ಕೊಡಿ ಅಂತ ರೋಗಿಗಳು ಕೇಳಿದ್ರೆ ಖಾಲಿಯಾಗಿದೆ, ಸಿಎಂ ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ ಉತ್ತರ ನೀಡಿದ್ದಾರೆ. ದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಪುಂಡರ ಅಟ್ಟಹಾಸ – ಸಿಕ್ಕಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್‌ ತೋರಿಸಿ ಹಣ ವಸೂಲಿ

    ಸಮಸ್ಯೆ ಆಗಿದ್ರೆ ಸರಿಪಡಿಸುವ ಕೆಲಸ ಮಾಡ್ತೇವೆ
    ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಔಷಧಿಗಳ ಪೂರೈಕೆಯಲ್ಲಿ ವ್ಯತ್ಯಯ ಆಗ್ತಿದೆ. ಇದರಿಂದ ವಾಣಿವಿಲಾಸ ಆಸ್ಪತ್ರೆಗೆ ಅಗತ್ಯ ಔಷಧಿಗಳು ಪೂರೈಕೆ ಆಗ್ತಿಲ್ಲ. ಕೆಲ ಮಾತ್ರೆಗಳು ಮಾತ್ರ ಸ್ಟಾಕ್ ಇದೆ ಎನ್ನಲಾಗ್ತಿದೆ. ಇನ್ನೂ ಈ ವಿಚಾರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಮಾತನಾಡಿ, ಸಮಸ್ಯೆ ಆಗಿದ್ರೆ ಮಾಹಿತಿ ಪಡೆದು ಸರಿಪಡಿಸುವ ಕೆಲಸ ಮಾಡಲಾಗುತ್ತೆ ಎಂದು ತಿಳಿಸಿದರು. ದನ್ನೂ ಓದಿ: ಮಲ್ಲೇಶ್ವರಂ | ಫರ್ನಿಚರ್ ಶಾಪ್‍ನಲ್ಲಿ ಭಾರೀ ಅಗ್ನಿ ಅವಘಡ – 5 ಕೋಟಿ ಮೌಲ್ಯದ ವಸ್ತುಗಳು ಭಸ್ಮ

    ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಉಚಿತವಾಗಿ ಸಿಗುತ್ತೆ ಅಂತ ಆಸ್ಪತ್ರೆ ಆವರಣದಲ್ಲಿದ್ದ ಜನೌಷಧಿ ಕೇಂದ್ರಗಳನ್ನ ಮುಚ್ಚಿಸಿದ್ರು. ಈಗ ಆಸ್ಪತ್ರೆಯಲ್ಲಿ ಔಷಧಿಗಳೇ ಸಿಗ್ತಿಲ್ಲ. ಔಷಧಿ ಖರೀದಿಗೆ ಕರೆಯಲಾಗಿರುವ ಟೆಂಡರ್‌ ಕೂಡ ಅಂತಿಮ ಆಗಿಲ್ಲ. ಹೀಗಾಗಿ ಕೆಲ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಿಸುವಂತಾಗಿದೆ. ದನ್ನೂ ಓದಿ: ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್‌ – ಹಣದ  ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು

  • ಕುಟುಂಬಸ್ಥರ ಚಿಕಿತ್ಸೆಗಾಗಿ ಭಿಕ್ಷೆ ಬೇಡಿದ ಜನ – ಮೈಸೂರಲ್ಲೊಂದು ಮನಕಲಕುವ ಘಟನೆ

    ಕುಟುಂಬಸ್ಥರ ಚಿಕಿತ್ಸೆಗಾಗಿ ಭಿಕ್ಷೆ ಬೇಡಿದ ಜನ – ಮೈಸೂರಲ್ಲೊಂದು ಮನಕಲಕುವ ಘಟನೆ

    – ನೊಂದ ಕುಟುಂಬದ ಕಣ್ಣೀರಿಗೆ ಕರಗಿದ ಆಸ್ಪತ್ರೆ ಆಡಳಿತ ಮಂಡಳಿ

    ಮೈಸೂರು: ನಂಜನಗೂಡು (Nanjangud) ತಾಲ್ಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆ ಹಣಕ್ಕಾಗಿ ಗ್ರಾಮದ ಯುವಕರು, ಸಂಬಂಧಿಗಳ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ.

    ಹೌದು. ಇದೇ ತಿಂಗಳ 2ನೇ ತಾರೀಖು ಬದನವಾಳು ಬಳಿ 2 ಬೈಕ್ ನಡುವೆ ಅಪಘಾತ ಆಗಿದ್ದು, 6 ಜನ ಗಾಯಗೊಂಡಿದ್ದರು. ಅದರಲ್ಲಿ ಒಂದೇ ಕುಟುಂಬದ ತಂದೆ ಮಹೇಶ್ (38) ತಾಯಿ ರಾಣಿ (32) ಹಾಗೂ ಮಗಳು ಆದ್ಯ (5) ಗಾಯಗೊಂಡಿದ್ರು. ಇದನ್ನೂ ಓದಿ: ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರ ತಡೆ – ಬಿಜೆಪಿ, ಹಿಂದೂ ಕಾರ್ಯಕರ್ತರು ವಶಕ್ಕೆ

    ತಾಯಿ, ಮಗು ಒಂದೆಡೆ, ತಂದೆ ಮತ್ತೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸದ್ಯ ಮಗು ಆದ್ಯಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. 3 ದಿನದ ಚಿಕಿತ್ಸೆಗೆ 1,80,000 ಹಣ ಕಟ್ಟಬೇಕು ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಮಗು ನೋಡಬೇಕು, ವೆಂಟಿಲೇಟರ್‌ನಿಂದ ಹೊರ ತೆಗೆಯಬೇಕು ಅಂದ್ರೆ ಹಣ ಕಟ್ಟಿ ಅಂತಿದ್ದಾರೆ ಅಂತ ಸಂಬಂಧಿಕರು ಆರೋಪಿಸಿದ್ದಾರೆ. ಕೂಲಿ ಮಾಡುವ ಕುಟುಂಬಕ್ಕೆ ಅಷ್ಟು ಹಣ ನೀಡಲು ಆಗದ ಕಾರಣ ಬಡ ಕುಟುಂಬದ ನೆರವಿಗೆ ಗ್ರಾಮದ ಯುವಕರು, ಸಂಬಂಧಿಗಳು ಭಿಕ್ಷೆ ಬೇಡಿದ್ದಾರೆ. ಇದನ್ನೂ ಓದಿ: ಸಚಿವ ಹೆಚ್‌.ಸಿ ಮಹದೇವಪ್ಪ ಹೆಸರಿನಲ್ಲಿ ಬರೋಬ್ಬರಿ 27 ಲಕ್ಷ ರೂ. ವಂಚಿಸಿದ ಮಹಿಳೆ

    ದೊಡ್ಡಮ್ಮ ಮಂಗಳ ಅನ್ನೋವ್ರು ಭಿಕ್ಷೆ ಬೇಡೋ ವಿಡಿಯೋ ವೈರಲ್ ಆಗಿದೆ. ಆದರೆ, ಖಾಸಗಿ ಆಸ್ಪತ್ರೆ (ಬೃಂದಾವನ) ಆಡಳಿತ ಮಂಡಳಿಯ ಖಂಡೇಶ್ ಸ್ಪಷ್ಟನೆ ನೀಡಿದ್ದು, ಆಸ್ಪತ್ರೆ ಬಂದಾಗ ಇಲ್ಲಿನ ಚಿಕಿತ್ಸಾ ವೆಚ್ಚದ ಬಗ್ಗೆ ತಿಳಿಸಲಾಗಿತ್ತು. ಅವರು ಅದಕ್ಕೆ ಒಪ್ಪಿದ್ದರು. ಆ ಕುಟುಂಬದ ಆರ್ಥಿಕ ಪರಿಸ್ಥಿತಿ ನಮಗೆ ಗೊತ್ತಿರಲಿಲ್ಲ. ಭಿಕ್ಷೆ ಬೇಡಿ ಹಣ ತಂದಿದ್ದಾರೆ ಎಂಬುದು ನಮಗೆ ವಿಡಿಯೋ ಮೂಲಕ ತಿಳಿಯಿತು. ಹೀಗಾಗಿ ಈ ವಿಡಿಯೋ ನೋಡಿ ನಾವು ರಿಯಾಯಿತಿ ಕೊಡಲು ತೀರ್ಮಾನ ಮಾಡಿದ್ದೇವೆ. ಮಗು ಐಸಿಯುನಲ್ಲಿದ್ದರೂ ಡಿಸ್ಚಾರ್ಜ್ ಮಾಡಿ ಎನ್ನುತ್ತಿದ್ದಾರೆ ಅಂದಿದ್ದಾರೆ. ಇದನ್ನೂ ಓದಿ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ – ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

  • ಪಾಟ್ನಾ ಆಸ್ಪತ್ರೆಯಲ್ಲಿ ಐವರ ಗ್ಯಾಂಗ್‌ನಿಂದ ಫೈರಿಂಗ್ – ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಆರೋಪಿ ಸಾವು

    ಪಾಟ್ನಾ ಆಸ್ಪತ್ರೆಯಲ್ಲಿ ಐವರ ಗ್ಯಾಂಗ್‌ನಿಂದ ಫೈರಿಂಗ್ – ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಆರೋಪಿ ಸಾವು

    ಪಾಟ್ನಾ: ಐವರ ಗ್ಯಾಂಗೊಂದು ಗನ್ ಹಿಡಿದು ಆಸ್ಪತ್ರೆಯೊಳಗೆ ನುಗ್ಗಿ ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಆರೋಪಿಯನ್ನು ಗುಂಡಿಕ್ಕಿ ಕೊಲೆಗೈದಿರುವ ಘಟನೆ ಪಾಟ್ನಾದ (Patna) ಪರಾಸ್ ಆಸ್ಪತ್ರೆಯಲ್ಲಿ ನಡೆದಿದೆ.

    ಪೆರೋಲ್ ಮೇಲೆ ಹೊರಗಿದ್ದ ಬಕ್ಸಾರ್ ಜಿಲ್ಲೆಯ ನಿವಾಸಿ ಚಂದನ್ ಮಿಶ್ರಾ ಮೃತ ಆರೋಪಿ. ದಾಳಿಕೋರರನ್ನು ರಿಯಲ್ ಎಸ್ಟೇಟ್‌ಗೆ ಸಂಬಂಧಿಸಿದ ಬಿಲ್ಡರ್‌ಗಳಾಗಿ ಕೆಲಸ ಮಾಡುತ್ತಿದ್ದರು ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಐವರು ದುಷ್ಕರ್ಮಿಗಳು ಕೃತ್ಯ ಎಸಗಿದ್ದು, ಘಟನೆಯ ದೃಶ್ಯಗಳು ಆಸ್ಪತ್ರೆಯಲ್ಲಿದ್ದ ಸಿಸಿಟವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂಗೆ ಬರಬೇಡ ಅಂದಿದ್ದೇ ಬಿಎಸ್‍ವೈ: ಯತ್ನಾಳ್ ಬಾಂಬ್

    ವಿಡಿಯೋದಲ್ಲಿ ಐವರ ಗ್ಯಾಂಗ್ ಗನ್ ಹಿಡಿದು ಆಸ್ಪತ್ರೆಯ ಒಳನುಗ್ಗಿದ್ದಾರೆ. ವಾರ್ಡ್ವೊಂದಕ್ಕೆ ತೆರಳಿ, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಿ, ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ. ಈ ವೇಳೆ ಗಾಯಗೊಂಡಿದ್ದ ಚಂದನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯಲ್ಲಿದ್ದ ಇತರರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

    ಮೃತ ಚಂದನ್ ಕೊಲೆ ಆರೋಪದಲ್ಲಿ ಜೈಲುಪಾಲಾಗಿದ್ದ. ಆದರೆ ಆರೋಗ್ಯ ಸಮಸ್ಯೆಯಿರುವ ಕಾರಣ ಚಿಕಿತ್ಸೆ ಪಡೆಯಲು ಪೆರೋಲ್ ಮೇಲೆ ಹೊರಬಂದಿದ್ದ. ಇದೇ ವೇಳೆ ಅವನ ವಿರೋಧಿ ಗ್ಯಾಂಗ್‌ವೊಂದು ಸೇಡು ತೀರಿಸಿಕೊಳ್ಳಲು ದಾಳಿ ನಡೆಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಇನ್ನೂ ದಾಳಿಕೋರರು ಈ ಮುಂಚೆ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದರು, ಸದ್ಯ ಅವರ ಫೋಟೋ ನಮ್ಮ ಬಳಿಯಿದ್ದು, ಪತ್ತೆಗಾಗಿ ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆಗಳ ಉಪಟಳ – ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ

    ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆಗಳ ಉಪಟಳ – ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ

    ಇದನ್ನೂ ಓದಿ: ಮಂಗಳೂರು| ಕಿರಿಯ ವಯಸ್ಸಿನಲ್ಲೇ ರೋಲ್ಸ್‌ ರಾಯ್ಸ್‌ನಲ್ಲಿ ಉದ್ಯೋಗ; ವರ್ಷಕ್ಕೆ 72 ಲಕ್ಷ ಸಂಬಳ- ಯುವತಿಗೆ ಸನ್ಮಾನ

  • ಬೆಳಗಾವಿಯಲ್ಲಿ ಗರ್ಭಿಣಿ ಸಾವು – ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಆರೋಪ

    ಬೆಳಗಾವಿಯಲ್ಲಿ ಗರ್ಭಿಣಿ ಸಾವು – ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಆರೋಪ

    ಬೆಳಗಾವಿ: ದುಡ್ಡು ಕಟ್ಟಿಲ್ಲ ಎಂದು ಚಿಕಿತ್ಸೆ ನೀಡದ್ದಕ್ಕೆ ಆರು ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ಬೆಳಗಾವಿ (Belagavi) ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಜಿಲ್ಲೆಯ ಕಂಗ್ರಾಳ ಗಲ್ಲಿಯ ನಿವಾಸಿ ಆರತಿ ಅನಿಲ್ ಚವ್ಹಾಣ (30) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಫೆಬ್ರವರಿಯಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಜಮೀರ್

    ಮಂಗಳವಾರ ಬೆಳಿಗ್ಗೆ ಹೊಟ್ಟೆನೋವು ಎಂದು ಜಿಲ್ಲೆಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರು ಮಧ್ಯಾಹ್ನ ಎರಡು ಗಂಟೆ ಹೊತ್ತಿಗೆ ಬಂದು ಮಗು ಹೊಟ್ಟೆಯಲ್ಲಿಯೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

    ಈ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ 30 ಸಾವಿರ ರೂ. ಹಣ ಕಟ್ಟುವಂತೆ ವೈದ್ಯರು ತಿಳಿಸಿದ್ದು, ಸದ್ಯಕ್ಕೆ 10 ಸಾವಿರ ರೂ. ಹಣವನ್ನು ಕಟ್ಟಿ, ಉಳಿದ ಹಣವನ್ನು ಆಮೇಲೆ ಕಟ್ಟುವುದಾಗಿ ಕುಟುಂಬಸ್ಥರು ಹೇಳಿದ್ದರು. ಬಾಕಿ ಹಣ ಕಟ್ಟದೇ ಇರುವ ಕಾರಣ ಗರ್ಭಿಣಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ. ಆದ್ದರಿಂದ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಠಾಣೆಯಲ್ಲಿ ನ್ಯಾಯ ಕೊಡಿಸುವಂತೆ ಕಣ್ಣೀರು ಹಾಕಿದ್ದು, ಸದ್ಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ (KhadeBazar Police Station) ದೂರು ದಾಖಲಾಗಿದೆ.ಇದನ್ನೂ ಓದಿ: Valmiki Scam | ಬಳ್ಳಾರಿ ಚುನಾವಣೆಗೆ ಹಣ ಬಳಕೆ – ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ

  • ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಖಾಸಗಿ ಅಂಗಕ್ಕೆ ಬ್ಲೇಡ್ ಹಾಕಿ ಪಾರಾದ ನರ್ಸ್!

    ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಖಾಸಗಿ ಅಂಗಕ್ಕೆ ಬ್ಲೇಡ್ ಹಾಕಿ ಪಾರಾದ ನರ್ಸ್!

    ಪಾಟ್ನಾ: ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯರೊಬ್ಬರ ಮರ್ಮಾಂಗಕ್ಕೆ ನರ್ಸ್ ಬ್ಲೇಡ್ ಹಾಕಿ ಪಾರಾದ ಘಟನೆ ಬಿಹಾರದ (Bihar) ಸಮಸ್ತಿಪುರ್ (Samastipur) ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

    ಈ ಘಟನೆ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಡೆದಿದ್ದು, ಡಾಕ್ಟರ್ ಹಾಗೂ ಆತನ ಸಹಚರರು ಮದ್ಯದ ನಶೆಯಲ್ಲಿದ್ದರು. ಸಂತ್ರಸ್ತೆ ನರ್ಸ್ ಕೆಲಸ ಮುಗಿಸಿ ಮನೆಗೆ ಹೊರಡುವ ವೇಳೆ ಡಾಕ್ಟರ್ ಹಾಗೂ ಆತನ ಸಹಚರರು ಅತ್ಯಾಚಾರವೆಸಗಲು ಮುಂದಾದರು. ಆ ಸಂದರ್ಭದಲ್ಲಿ ತನ್ನ ಆತ್ಮರಕ್ಷಣೆ ಮಾಡಿಕೊಳ್ಳಲು ಆಕೆ ವೈದ್ಯರ ಖಾಸಗಿ ಅಂಗಕ್ಕೆ ಬ್ಲೇಡ್‌ನಿಂದ ಗಾಯ ಮಾಡಿ ಅಲ್ಲಿಂದ ತಪ್ಪಿಸಿಕೊಂಡು ಹೊರ ಬಂದರು. ನಂತರ ಆಸ್ಪತ್ರೆಯಿಂದ ಹೊರಬಂದು ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ ಘಟನೆಯ ಬಗ್ಗೆ ಸಂತ್ರಸ್ತೆ ಹೇಳಿಕೆ ನೀಡಿರುವುದಾಗಿ ಸಮಸ್ತಿಪುರ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಸಂಜಯ್ ಕುಮಾರ್ ಪಾಂಡೆ ಗುರುವಾರ ಮಾಧ್ಯಮಗಳ ಮುಂದೆ ಮಾಹಿತಿ ನೀಡಿದರು. ಇದನ್ನೂ ಓದಿ: ಸಿಇಟಿ, ನೀಟ್ 2ನೇ ಸುತ್ತಿನ ಸೀಟು ಹಂಚಿಕೆಗೆ ತಯಾರಿ ಆರಂಭ- ಕೆಇಎ

    ಪೊಲೀಸರು ಕೂಡಲೇ ಸ್ಥಳಕ್ಕೆ ಬಂದು ಸಂತ್ರಸ್ತೆಯನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ನಂತರ ಅಧಿಕಾರಿಗಳ ತಂಡವೊಂದು ಆಸ್ಪತ್ರೆಯ ಒಳಗೆ ಹೋಗಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳು, ದಲಿತರೇ ಟಾರ್ಗೆಟ್: ಛಲವಾದಿ ನಾರಾಯಣಸ್ವಾಮಿ

    ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸುವ ಮುನ್ನಾ ಡಾಕ್ಟರ್ ಹಾಗೂ ಆತನ ಸಹಚರರು ಸಿಸಿಟಿವಿ ಕ್ಯಾಮೆರಾ ಸ್ವಿಚ್ ಆಫ್ ಮಾಡಿದ್ದಾರೆ. ಒಳಗಡೆಯಿಂದ ಆಸ್ಪತ್ರೆಯನ್ನು ಲಾಕ್ ಮಾಡಿದ್ದರು. ಮಹಿಳೆ ಅಲ್ಲಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಸಂತ್ರಸ್ತೆ ನೀಡಿದ ಆಧಾರದ ಮೇಲೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದಿಂದ ಬ್ಲೇಡ್ ಹಾಗೂ ಇತರೆ ಸಾಕ್ಷಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು. ಇದನ್ನೂ ಓದಿ: ನಾಗ್ಪುರ ಆಡಿ ಕಾರು ಅಪಘಾತ – ಬಾರ್‌ನಲ್ಲಿದ್ದ ಬಿಜೆಪಿ ಮುಖಂಡನ ಪುತ್ರನ ವೀಡಿಯೋ ಮಿಸ್ಸಿಂಗ್

  • ಹಾಸನದಲ್ಲಿ ಡೆಂಗ್ಯೂಗೆ 13 ವರ್ಷದ ಬಾಲಕಿ ಬಲಿ!

    ಹಾಸನದಲ್ಲಿ ಡೆಂಗ್ಯೂಗೆ 13 ವರ್ಷದ ಬಾಲಕಿ ಬಲಿ!

    ಹಾಸನ: ಬೆಂಗಳೂರು ಬಳಿಕ ಮಾರಕ ಡೆಂಗ್ಯೂ ಜ್ವರಕ್ಕೆ (Dengue Fever) ಹಾಸನದಲ್ಲೊಂದು ಜೀವ ಬಲಿಯಾಗಿದೆ. 13 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ಹಾಸನ ತಾಲೂಕಿನ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಅಕ್ಷತಾ (13) ಮೃತ ಬಾಲಕಿ. ಅಕ್ಷತಾ ಮೂಲತಃ ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದವರು. ಕೂಲಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿ ಪುತ್ರಿ ಅಕ್ಷತಾ, ಹಾಸನದ ಖಾಸಗಿ ಶಾಲೆಯಲ್ಲಿ (Hassan Private School) 7ನೇ ತರಗತಿ‌ ಓದುತ್ತಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಗ್ಯೂಗೆ 27 ವರ್ಷದ ಯುವಕ ಬಲಿ

    ಕಳೆದ ಬುಧವಾರ ಜ್ವರಕ್ಕೆ ತುತ್ತಾಗಿದ್ದರು. ನಂತರ ಬಾಲಕಿಗೆ ಬೊಮ್ಮನಾಯಕಹಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಆದಾಗ್ಯೂ ಬಾಲಕಿ ಗುಣಮುಖಳಾಗದೇ ಇದ್ದ ಕಾರಣ ಪೋಷಕರು ಆಕೆಯನ್ನ ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಅಕ್ಷತಾ ಆರೋಗ್ಯದಲ್ಲಿ ಚೇತರಿಕೆ ಕಾಣದೇ ಮತ್ತೊಂದು ಆಸ್ಪತ್ರೆಗೆ ದಾಖಲಿಸಿದ್ದರು.

    ಬಾಲಕಿ ಸ್ಥಿತಿ ಗಂಭೀರವಾಗುತ್ತಿದ್ದಂತೆ ಜಿಲ್ಲಾಸ್ಪತ್ರೆ ಕರೆದುಕೊಂಡು ಹೋಗುವಂತೆ ಖಾಸಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ನಂತರ ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ. ಬಾಲಕಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಲೋಕಸಭೆಯಲ್ಲಿ ಹಿನ್ನಡೆಗೆ ಅತಿಯಾದ ಆತ್ಮವಿಶ್ವಾಸ, ಕಾರ್ಯಕರ್ತರ ಕಡೆಗಣನೆ ಕಾರಣ: ಡಿವಿಎಸ್

  • ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇರಿಸಿ ಚಿತ್ರೀಕರಣಕ್ಕೆ ಯತ್ನ!

    ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇರಿಸಿ ಚಿತ್ರೀಕರಣಕ್ಕೆ ಯತ್ನ!

    – ಪೊಲೀಸರಿಂದ ಅಪ್ರಾಪ್ತನ ಬಂಧನ

    ಮಂಗಳೂರು: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ್ದ ಅಪ್ರಾಪ್ತನೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇನಲ್ಲಿ ನಡೆದಿದೆ. ಮೇ 6ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಖತರ್ನಾಕ್ ಪ್ಲ್ಯಾನ್‌ ಮಾಡಿದ್ದ ಆಸಾಮಿ:
    ಮೆಡಿಕಲ್ ಕಾಲೇಜಿಗೆ ರೋಗಿ ನೆಪದಲ್ಲಿ ಬಂದಿದ್ದ ಅಪ್ರಾಪ್ತ, ಬಳಿಕ ಅಲ್ಲೇ ಇದ್ದ ಲೇಡಿಸ್ ಟಾಯ್ಲೆಟ್‌ಗೆ ನುಗ್ಗಿ ಮೊಬೈಲ್ ಇಟ್ಟಿದ್ದಾನೆ. ಮೊಬೈಲ್ ಇಟ್ಟುಬಂದ ಸ್ವಲ್ಪ ಹೊತ್ತಿನಲ್ಲೇ ಮೊಬೈಲ್ ರಿಂಗ್ ಆಗುವುದು ಕೇಳಿಸಿದೆ. ಇದನ್ನೂ ಓದಿ: ಹಿಂದೆ ಡಿಕೆಶಿ ಟೆಂಟ್‌ನಲ್ಲಿ ಸಿನಿಮಾ ತೋರಿಸುತ್ತಿದ್ದ ಪ್ರವೃತ್ತಿ ಮುಂದುವರಿಸಿದ್ದಾರೆ: ಸಿಪಿವೈ ವಾಗ್ದಾಳಿ

    ಕೂಡಲೇ ಟಾಯ್ಲೆಟ್ ಕೊಠಡಿಯೊಳಗೆ ಬಂದ ಭದ್ರತಾ ಸಿಬ್ಬಂದಿ ಹುಡುಕಾಡಿದಾಗ ಮೊಬೈಲ್ ಕಣ್ಣಿಗೆ ಬಿದ್ದಿದೆ. ಸದ್ಯ ಮೊಬೈಲ್‌ನಲ್ಲಿ ಯಾವುದೇ ದೃಶ್ಯ ಸೆರೆಯಾಗಿಲ್ಲ ಎಂದು ತಿಳಿದುಬಂದಿದೆ. ಬಳಿಕ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಈ ಸಂಬಂಧ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸದು ಕಾಲೇಜು ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ 17 ವರ್ಷದ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: Stardom: ಕ್ಲೈಮ್ಯಾಕ್ಸ್‌ ಶೂಟಿಂಗ್‌ನಲ್ಲಿ ಬ್ಯುಸಿಯಾದ ಆರ್ಯನ್‌ಗೆ ಸಾಥ್ ಕೊಟ್ಟ ಶಾರುಖ್ ಖಾನ್

  • ಹೃದಯಾಘಾತ – ಬಿಎಂಟಿಸಿ ಬಸ್‌ನಲ್ಲೇ ವ್ಯಕ್ತಿ ಸಾವು

    ಹೃದಯಾಘಾತ – ಬಿಎಂಟಿಸಿ ಬಸ್‌ನಲ್ಲೇ ವ್ಯಕ್ತಿ ಸಾವು

    ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 60ರ ವೃದ್ಧರೊಬ್ಬರು ಹೃದಯಾಘಾತದಿಂದ (Heart Attack)ಸಾವನ್ನಪ್ಪಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ಕೃಷ್ಣ (60) ಎಂದು ಗುರುತಿಸಲಾಗಿದೆ. ವ್ಯಕ್ತಿ ಬಸ್‌ನಲ್ಲಿ (BMTC Bus) ಟಿಕೆಟ್ ಪಡೆದು ಕುಳಿತಿದ್ದ 15 ನಿಮಿಷಗಳಲ್ಲೇ ಹೃದಯಾಘಾತ ಸಂಭವಿಸಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆಯನ್ನು ಕಣ್ಣಾರೆ ಕಂಡ ಇತರೇ ಪ್ರಯಾಣಿಕರು ಬಸ್ಸಿನಲ್ಲೇ ಕಿರುಚಾಡಿದ್ದಾರೆ. ಇದನ್ನೂ ಓದಿ: ಜೆಡಿಎಸ್‌ನಲ್ಲಿ ಉಳಿದಿರೋ ನಿಷ್ಠಾವಂತರು ‘ಇಂಡಿಯಾ’ ಕೂಟಕ್ಕೆ ಬೆಂಬಲ ಕೊಡ್ತೀವಿ: ಸಿಎಂ ಇಬ್ರಾಹಿಂ

    ಮೆಜೆಸ್ಟಿಕ್‌ನಲ್ಲಿ ಬಸ್ ಹತ್ತಿದ್ದ ಮೃತ ವ್ಯಕ್ತಿ, ರಾಜಾಜೀನಗರದ ನವರಂಗ್ ವೃತ್ತದ ಬಳಿ ಬರುತ್ತಿದ್ದ ವೇಳೆ ಸಾವು ಸಂಭವಿಸಿದೆ. ಕೂಡಲೇ ಆತನನ್ನ ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಕೊಡಿಸುವಷ್ಟರಲ್ಲಿ ವ್ಯಕ್ತಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜಧಾನಿಯಲ್ಲಿ ಹೆಚ್ಚಾಯ್ತು ಬಿಸಿಲಿನ ಝಳ – ತಾಪಮಾನ ಏರಿಕೆ ಬೆನ್ನಲ್ಲೇ ಮಾರ್ಗಸೂಚಿ ಬಿಡುಗಡೆ

  • 3 ಗಂಟೆಯಲ್ಲಿ 300 ಕಿಮೀ ಕ್ರಮಿಸಿ 7 ದಿನದ ಮಗುವಿನ ಜೀವ ಉಳಿಸಿದ ಹೀರೋ

    3 ಗಂಟೆಯಲ್ಲಿ 300 ಕಿಮೀ ಕ್ರಮಿಸಿ 7 ದಿನದ ಮಗುವಿನ ಜೀವ ಉಳಿಸಿದ ಹೀರೋ

    – ಅಂಬುಲೆನ್ಸ್‌ ಚಾಲಕನಿಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

    ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಖಾಸಗಿ ಆಸ್ಪತ್ರೆ ಅಂಬುಲೆನ್ಸ್‌ ಚಾಲಕ (Ambulance Driver) ಶಿಜು ವರ್ಗಿಸ್ ಅವರು Zero Traffic ವ್ಯವಸ್ಥೆ ಇಲ್ಲದೆಯೂ 300 ಕಿಮೀ ದೂರವನ್ನು ಕೇವಲ 3 ಗಂಟೆ ಅವಧಿಯಲ್ಲಿ ಕ್ರಮಿಸಿ 7 ದಿನದ ಹೆಣ್ಣು ಮಗುವಿನ ಜೀವ ಉಳಿಸಿದ್ದಾರೆ. ಅಂಬುಲೆನ್ಸ್‌ ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಮಡಿಕೇರಿ (Madikeri) ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ 7 ದಿನದ ಹೆಣ್ಣು ಮಗುವಿಗೆ ತೀವ್ರ ಉಸಿರಾಟದ ತೊಂದರೆ ಉಂಟಾಗಿತ್ತು. ಈ ವೇಳೆ ಮಗುವನ್ನು ತುರ್ತು ಚಿಕಿತ್ಸೆಗಾಗಿ 300 ಕಿಮೀ ದೂರದಲ್ಲಿದ್ದ ಕೇರಳದ ಪೆರಂದಲ್‌ ಮಣ್ಣನ್‌ ಊರಿನಲ್ಲಿರೋ ಖಾಸಗಿ ಆಸ್ಪತ್ರೆಗೆ (Private Hospital) ಕರೆದೊಯ್ಯಬೇಕಿತ್ತು.

    ವೈದ್ಯರ ಸಲಹೆ ಮೇರೆಗೆ ಚಾಲಕ ಶಿಜು ವರ್ಗಿಸ್ ಜೀರೋ ಟ್ರಾಫಿಕ್‌ ವ್ಯವಸ್ಥೆ ಇಲ್ಲದೆಯೂ 300 ಕಿಮೀ ದೂರವನ್ನು 3 ಗಂಟೆಯಲ್ಲಿ ಕ್ರಮಿಸಿ, ಮಗುವಿಗೆ ಚಿಕಿತ್ಸೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಮೊಂಡುವಾದ ಬಿಟ್ಟು ರಾಜ್ಯಕ್ಕೆ ಅನ್ಯಾಯವಾಗುತ್ತಿರೋದನ್ನ ಹರೀಶ್ ಪೂಂಜಾ ಒಪ್ಪಿಕೊಳ್ಳಬೇಕು: ದಿನೇಶ್ ಗುಂಡೂರಾವ್

    ಕಿರಿದಾದ ದುರ್ಗಮ ರಸ್ತೆಯಲ್ಲಿ ಮಡಿಕೇರಿಯಿಂದ ವಿರಾಜಪೇಟೆ ಮಾರ್ಗವಾಗಿ ಕೊಡಗಿನ ಗಡಿಭಾಗದವರೆಗೆ ಅಂಬುಲೆನ್ಸ್‌ ಚಾಲನೆ ಮಾಡಿದ್ದಾರೆ. ಶಿಜು ವರ್ಗಿಸ್ ಅವರ ಈ ಸಾಹಸಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಗೃಹಿಣಿ ಸಾವು ಕೇಸ್‌ಗೆ ಟ್ವಿಸ್ಟ್ – ಪತಿಯೇ ಮಾಸ್ಟರ್ ಮೈಂಡ್, ಸ್ನೇಹಿತನ ಪತ್ನಿಯ ಕೊಲೆ ರಹಸ್ಯವೂ ಬಯಲು

  • ಆಸ್ಪತ್ರೆಯಲ್ಲಿಯೇ ಪತ್ನಿ ಜೊತೆ ಗಾಯಾಳು ಸೆಕ್ಸ್- ನೋಡಿದ ಬಾಲಕಿಯ ಮೇಲೆ ರೇಪ್!

    ಆಸ್ಪತ್ರೆಯಲ್ಲಿಯೇ ಪತ್ನಿ ಜೊತೆ ಗಾಯಾಳು ಸೆಕ್ಸ್- ನೋಡಿದ ಬಾಲಕಿಯ ಮೇಲೆ ರೇಪ್!

    ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ (Mangaluru Private Hospital) ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗಳನ್ನು ಅಬ್ದುಲ್ ಹಲೀಂ(37) ಹಾಗೂ ಶಮೀನಾ ಬಾನು(22) ಎಂದು ಗುರುತಿಸಲಾಗಿದೆ.

    ಏನಿದು ಪ್ರಕರಣ..?: ಬೈಕ್ ಅಪಘಾತದಲ್ಲಿ ಗಾಯಗೊಂಡು ಅಬ್ದುಲ್ ಹಲೀಂ ಮತ್ತು ಆತನ ಸ್ನೇಹಿತ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಹೀಗಾಗಿ ಗಾಯಾಳುಗಳನ್ನು ನೋಡಲು ತಾಯಿ, ತನ್ನ ಅಪ್ರಾಪ್ತ ಮಗಳನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ ಶಮೀನಾ ಬಾನು ಜೊತೆ ಬಾಲಕಿಯನ್ನು ಬಿಟ್ಟು ತಾಯಿ ಪೊಲೀಸ್ ಠಾಣೆಗೆ ಹೋಗಿದ್ದರು. ಇದನ್ನೂ ಓದಿ: ಡ್ಯಾಂನಲ್ಲಿ ತುಂಬಿ ಹಿಡಿದುಟ್ಟುಕೊಳ್ಳಲು ಆಗದೇ ಇದ್ದಾಗ ತಮಿಳುನಾಡಿಗೆ ನೀರು ಬಿಟ್ಟಿದ್ವಿ: ಹೆಚ್‍ಡಿಕೆ

    ಇತ್ತ ಆಸ್ಪತ್ರೆಯಲ್ಲಿ ಅಬ್ದುಲ್ ಹಲೀಂ-ಶಮೀನಾ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾರೆ. ಇದನ್ನು ಅಪ್ರಾಪ್ತೆ ನೋಡಿದ್ದಾಳೆ. ಹೀಗಾಗಿ ಅಬ್ದುಲ್ ಹಲೀಂ, ಬಾಲಕಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ. ಈ ವೇಳೆ ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದಾಳೆ. ಆಗ ಶಮೀನಾ ಬಾನು ಬಾಲಕಿಯ ಕೈ ಹಿಡಿದು ಬಾಯಿ ಮುಚ್ಚಿ ಅತ್ಯಾಚಾರ ಮಾಡಲು ಸಹಾಯ ಮಾಡಿದ್ದಾಳೆ. ಬಳಿಕ ಹಲೀಂ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

    ಈ ಸಂಬಂಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]