Tag: ಖಾಸಗಿ ಕಾಲೇಜು

  • ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮವಿತ್ತ ಅಪ್ರಾಪ್ತೆ – ಮಗು ಕರುಣಿಸಿದ ಭೂಪನಿಗಾಗಿ ಹುಡುಕಾಟ!

    ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮವಿತ್ತ ಅಪ್ರಾಪ್ತೆ – ಮಗು ಕರುಣಿಸಿದ ಭೂಪನಿಗಾಗಿ ಹುಡುಕಾಟ!

    ಕೋಲಾರ: ಅಪ್ರಾಪ್ತೆಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ (Kolara Private College) ನಡೆದಿದೆ.

    ಪ್ರಥಮ ಪಿಯುಸಿ ವಿದ್ಯಾರ್ಥಿನಿ (PUC Student) ಕಾಲೇಜು ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಅಪ್ರಾಪ್ತೆ ಜನ್ಮ ನೀಡಿದ್ದಾಳೆ. ಈ ಸಂಭಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಮಹಿಳಾ ಪೊಲೀಸರು (Kolara Women Police) ಬಾಲಕಿ ಸ್ಥಿತಿಗೆ ಕಾರಣನಾದ ಭೂಪನಿಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯಾ ಹೌಸ್’ ಸಿನಿಮಾ

    ಏನಿದು ಘಟನೆ?
    ಪೊಲೀಸರಿಗೆ ಸಿಕ್ಕ ಪ್ರಾಥಮಿಕ ಮಾಹಿತಿ ಪ್ರಕಾರ, ಬಾಲಕಿಯು ಯುವಕನೊಂದಿಗೆ ಪ್ರೀತಿಯಲ್ಲಿದ್ದಳು. ಆದ್ರೆ ಆತ ಅದೇ ಕಾಲೇಜಿನ ಯುವಕನಾ ಅಥವಾ ಹೊರಗಿನವನಾ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಬಾಲಕಿ ಸ್ಥಿತಿ ಕಾರಣನಾದ ಯುವಕನಿಗಾಗಿ ಹುಟುಕಾಟ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಾರ್ಬಡೋಸ್‌ನಲ್ಲೇ ಸಿಲುಕಿದ ಟೀಂ ಇಂಡಿಯಾ – ಜಿಂಬಾಬ್ವೆ ಸರಣಿಗೆ ಸುದರ್ಶನ್‌, ರಾಣಾ, ಜಿತೇಶ್‌ ಆಯ್ಕೆ!

    ಮಂಗಳವಾರ ಶೌಚಾಲಯಕ್ಕೆ ತೆರಳಿದಾಗ ಬಾಲಕಿ ಅಲ್ಲಿಯೇ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಬಾಲಕಿಯನ್ನ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಇಷ್ಟು ದಿನ ಯಾರಿಗೂ ಗೊತ್ತಿರಲಿಲ್ಲವೇ? ಅಥವಾ ಸ್ನೇಹಿತರಿಗೆ ಗೊತ್ತಿದ್ದೂ ವಿಚಾರ ಮುಚ್ಚಿಟ್ಟಿದ್ದರಾ? ಅನ್ನೋ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: 17% ಭಾರತೀಯರ ಬ್ಯಾಂಕಿಂಗ್ ಪಾಸ್‌ವರ್ಡ್ ಅಸುರಕ್ಷಿತವಾಗಿವೆ – ಸಮೀಕ್ಷೆ

  • ಉಪನ್ಯಾಸಕನ ವಿರುದ್ಧ ಕಿರುಕುಳದ ಆರೋಪ- ವಿದ್ಯಾರ್ಥಿ ಆತ್ಮಹತ್ಯೆ

    ಉಪನ್ಯಾಸಕನ ವಿರುದ್ಧ ಕಿರುಕುಳದ ಆರೋಪ- ವಿದ್ಯಾರ್ಥಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿಯೊಬ್ಬ ಸೆಲ್ಫಿ ವೀಡಿಯೋ ಮೂಲಕ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮಲ್ಲಹಳ್ಳಿ ಗ್ರಾಮದ ಲಲಿತಮ್ಮ ಹಾಗೂ ದೇವರಾಜು ದಂಪತಿಯ ಪುತ್ರ ಗಜೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವಾತ. ಈತ ಚಿಕ್ಕಬಳ್ಳಾಪುರ ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೊಮಾ ಮೆಕ್ಯಾನಿಕಲ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಇದೀಗ ಈತ ಉಪನ್ಯಾಸಕ ಮುಂಜುನಾಥ್ ವಿರುದ್ಧ ಕಿರುಕುಳದ ಆರೋಪ ಮಾಡಿ ಸೂಸೈಡ್ ಮಾಡಿಕೊಂಡಿದ್ದಾನೆ.

    ಆರೋಪವೇನು?: ಗಜೇಂದ್ರನಿಗೆ ಉಪನ್ಯಾಸಕ ಮಂಜುನಾಥ್ ವಿನಾಕಾರಣ ವೈಯಕ್ತಿಕವಾಗಿ ಟಾರ್ಗೆಟ್ ಮಾಡಿ ಕಿರುಕುಳ ಕೊಡುತ್ತಿದ್ದರು. ಅಲ್ಲದೇ ಪದೇ ಪದೇ ಹಲ್ಲೆ ಮಾಡುವುದು, ಅಸೈನ್ ಮೆಂಟ್ ಬುಕ್ ಹರಿದು ಹಾಕಿ ಉಳಿದ ವಿದ್ಯಾರ್ಥಿಗಳ ಎದುರೇ ಮರ್ಯಾದೆ ತೆಗೆದಿರುವುದಾಗಿ ಗಜೇಂದ್ರ ಸೆಲ್ಫಿ ವಿಡಿಯೋದಲ್ಲಿ ಆರೋಪಿಸಿದ್ದಾನೆ. ನನ್ನ ಸಾವಿಗೆ ಮಂಜುನಾಥ್ ಕಾರಣ. ನನ್ನ ಮರ್ಯಾದೆ ಹೋಯ್ತು. ಅದೇ ಕಾರಣಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತ ವೀಡಿಯೋದಲ್ಲಿ ಗಜೇಂದ್ರ ತಿಳಿಸಿದ್ದಾನೆ. ಇದನ್ನೂ ಓದಿ: ಕಾಂಗ್ರೆಸ್ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ಮಾತನಾಡಿದ್ದೇನೆ: ಜಮೀರ್

    ಬುಧವಾರ ರಾತ್ರಿ ಒಂದು ವೀಡಿಯೋ ಹಾಗೂ ಗುರುವಾರ ಬೆಳಗ್ಗೆ ಮತ್ತೊಂದು ವೀಡಿಯೋ ಸೇರಿದಂತೆ ಎರಡು ವೀಡಿಯೋ ಮಾಡಿ ಗಜೇಂದ್ರ ಮನೆಯ ಮುಂಭಾಗದ ಹಳೆಯ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾನೆ. ಇತ್ತ ಮಗ ಆತ್ಮಹತ್ಯೆ ಯಾಕೆ ಮಾಡಿಕೊಂಡ ಎಂಬುದನ್ನು ಅರಿಯದ ಪೋಷಕರು, ಗಜೇಂದ್ರನನ್ನು ಮಣ್ಣು ಮಾಡಿ ಸುಮ್ಮನಾಗಿದ್ದಾರೆ. ಆದರೆ ಇಂದು ಬೆಳಗ್ಗೆ ಗಜೇಂದ್ರ ಮೊಬೈಲ್ ಪರಿಶೀಲನೆ ಮಾಡಿದಾಗ ಸೆಲ್ಫಿ ವೀಡಿಯೋ ಪತ್ತೆಯಾಗಿದ್ದು ಸಾವಿನ ಸತ್ಯ ಬಯಲಾಗಿದೆ.

    ವಿಚಾರ ತಿಳಿಯುತ್ತಿದ್ದಂತೆಯೇ ಗಜೇಂದ್ರ ಪೊಷಕರು ಹಾಗೂ ಸಂಬಂಧಿಕರು ಪಾಲಿಟೆಕ್ನಿಕ್ ಕಾಲೇಜಿಗೆ ಮುತ್ತಿಗೆ ಹಾಕಿ ಪ್ರಾಂಶುಪಾಲರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ನಂದಿಗಿರಿಧಾಮ ಪೊಲೀಸರು ಹಾಗೂ ಪ್ರತಿಭಟನಕಾರರ ವಾಗ್ವಾದ ನಡೆದಿದೆ.

  • ಯಾರೂ ಯಾಕೆ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ- ನೋವನ್ನು ಅಕ್ಷರ ರೂಪಕ್ಕಿಳಿಸಿದ ಚಂದನಾ ಹೇಳಿದ್ದೇನು..?

    ಯಾರೂ ಯಾಕೆ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ- ನೋವನ್ನು ಅಕ್ಷರ ರೂಪಕ್ಕಿಳಿಸಿದ ಚಂದನಾ ಹೇಳಿದ್ದೇನು..?

    ಚಾಮರಾಜನಗರ: ಖಾಸಗಿ ಕಾಲೇಜಿನ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಚಂದುಳ್ಳಿ ಚೆಲುವೆಯ ಸಾವು ಎಲ್ಲರಿಗೂ ಶಾಕ್ ತಂದುಕೊಟ್ಟಿದೆ. ಈಕೆಯ ಸಾವಿನ ಸುದ್ದಿ ತಿಳಿದು ನೂರಾರು ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಎಲ್ಲದಕ್ಕಿಂತ ಹೆಚ್ಚಾಗಿ ಪಾಲಕರು ಮರುಗಿದ್ದಾರೆ.

    ಆಕೆ ಬಾಳಿ ಬದುಕಬೇಕಿದ್ದ ಯುವತಿ. ಆದ್ರೆ ಆಕೆಗೆ ಏನಾಯ್ತೋ ಏನೋ ತನ್ನ ಹುಟ್ಟುಹಬ್ಬದ ದಿನವೇ ತನ್ನ ಜೀವನವನ್ನು ಕೊನೆಗಾಣಿಸಿಕೊಂಡಿದ್ದಾಳೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಉಪನ್ಯಾಸಕಿ ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ಚೆಲುವೆ. ಚಂದನಾ ಚಾಮರಾಜನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೆಎಸ್‍ಎಸ್ ಕಾಲೇಜಿನ ಹಾಸ್ಟೆಲ್‍ನಲ್ಲೇ ವಾಸ್ತವ್ಯ ಹೂಡಿದ್ದಳು. ಇದನ್ನೂ ಓದಿ: ಪಾಕ್ ರಾಜಕಾರಣಿ ಸಂಬಂಧಿ ಕಾರ್ ಓವರ್‌ಟೇಕ್ – ಹಿಂದೂ ಕುಟುಂಬದ ಮೇಲೆ ದಾಳಿ

    ಈಕೆ ಎಲ್ಲರ ಜೊತೆಯಲ್ಲೂ ಉತ್ತಮ ಬಾಂದವ್ಯ ಹೊಂದಿದ್ರು. ಇವತ್ತು ಆಕೆಯ ಹುಟ್ಟುಹಬ್ಬ ಇತ್ತು. ಹೀಗಾಗಿ ಆಕೆಯ ಸ್ನೇಹಿತರು, ವಿದ್ಯಾರ್ಥಿಗಳು ಶುಭಾಶಯ ಕೋರಿದ್ರು. ಆದ್ರೆ ಇದಾದ ನಂತರ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಜೊತೆ ಕೊಠಡಿಯಲ್ಲಿದ್ದ ಸ್ನೇಹಿತರು ಹೊರಹೋದ ನಂತರ ತನ್ನ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಡೆತ್ ನೋಟ್‍ನಲ್ಲಿ ಬಯಲಾದ ಸತ್ಯ
    ಆತ್ಮಹತ್ಯೆಗೂ ಮುನ್ನ ಚಂದನಾ ಡೆತ್‍ನೋಟ್ ಬರೆದಿಟ್ಟಿದ್ದು, ಯಾಕೆ ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಪ್ರಾರಂಭಿಸಿದ್ದು, ತನ್ನ ಮನದಾಳದ ನೋವನ್ನು ಅಕ್ಷರ ರೂಪ ನೀಡಿ ಕೊನೆಗೆ ನನ್ನ ಸಾವಿಗೆ ಯಾರು ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ತನ್ನ ಇಬ್ಬರು ಅಕ್ಕಂದಿರಿಗೆ ಸಾರಿ ಕೇಳಿರುವ ಚಂದನಾ, ತಂಗಿಯನ್ನು ಉದ್ದೇಶಿಸಿ ಯಾವುದೇ ಕಾರಣಕ್ಕೂ ಉಪನ್ಯಾಸಕಿ ಹುದ್ದೆಗೆ ಬರಬೇಡ ಎಂದು ತನ್ನ ಕೊನೆಯ ಸಲಹೆಯನ್ನು ಕೊಟ್ಟಿದ್ದಾರೆ.

    ತಂದೆ ಜೊತೆ ಕೊನೆಯ ಬಾರಿ ಪಾನಿಪೂರಿ
    ಇಂದು ಚಂದನಾಳ ಹುಟ್ಟುಹಬ್ಬವಾಗಿದ್ದು, ಆಕೆಯ ತಂದೆ ಕೇಕ್ ಕಟ್ ಮಾಡಿಸಲು ಸಕಲ ಸಿದ್ಧತೆಯನ್ನು ನಡೆಸಿದ್ದರು. ಸೋಮವಾರ ಸಂಜೆ ಅಷ್ಟೇ ಮಗಳೊಟ್ಟಿಗೆ ಪಾನಿಪೂರಿ ಸೇವಿಸಿ ಊರಿಗೆ ಬರುವಂತೆ ಹೇಳಿದ್ದರಂತೆ, ಬೆಳಗ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಕೂಡಲೇ ಅವರ ತಂದೆ ಹಾಸ್ಟೆಲ್‍ನ ಸೆಕ್ಯೂರಿಟಿಗೆ ಕರೆ ಮಾಡಿ ಚಂದನಾ ಫೋನ್ ತೆಗೆಯುತ್ತಿಲ್ಲವೆಂದು ತಿಳಿಸಿದ್ದಾರೆ. ಈ ವೇಳೆ ಚಂದನಾ ಕೊಠಡಿ ಬಳಿ ಹೋದ ವಾರ್ಡನ್ ಚಂದನಾ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಇದನ್ನೂ ಓದಿ:  ಮೊಹರಂ ಹಬ್ಬದಲ್ಲೂ ಅಪ್ಪು – ಹೊಂಡದಲ್ಲಿ ಪುನೀತ್ ಫೋಟೋ ಹಿಡಿದು ಬಂದ ಬಾಲಕ 

    ಕೂಡಲೇ ಆತ ಹಾಸ್ಟೆಲ್‍ನ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾನೆ. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಮಗೂ ಉಚಿತ ಲ್ಯಾಪ್‍ಟಾಪ್ ಕೊಡಿ – ಪ್ರತಿಭಟನೆಗಿಳಿದ ಖಾಸಗಿ ಕಾಲೇಜು ವಿದ್ಯಾರ್ಥಿಗಳು

    ನಮಗೂ ಉಚಿತ ಲ್ಯಾಪ್‍ಟಾಪ್ ಕೊಡಿ – ಪ್ರತಿಭಟನೆಗಿಳಿದ ಖಾಸಗಿ ಕಾಲೇಜು ವಿದ್ಯಾರ್ಥಿಗಳು

    ಯಾದಗಿರಿ: ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಲ್ಯಾಪ್‍ಟಾಪ್ ಯೋಜನೆಯನ್ನು, ಖಾಸಗಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ವಿಸ್ತರಣೆ ಮಾಡುವಂತೆ ಒತ್ತಾಯಿಸಿ, ಯಾದಗಿರಿ ಜಿಲ್ಲಾ ಖಾಸಗಿ ಪದವಿ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಮತ್ತು ನೂರಾರು ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

    ನಗರದ ತಹಶೀಲ್ದಾರ್ ಕಚೇರಿ ಎದುರು ನಡೆದ ಈ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೇವಲ ಸರ್ಕಾರಿ ಕಾಲೇಜುಗಳಲ್ಲಿ ಮಾತ್ರ ಬಡ ವಿದ್ಯಾರ್ಥಿಗಳು ಇರುವುದಿಲ್ಲ. ಖಾಸಗಿ ಕಾಲೇಜುಗಳಲ್ಲೂ ಸಹ ಬಡ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ನಮಗೂ ಸರ್ಕಾರದಿಂದ ಉಚಿತ ಲ್ಯಾಪ್‍ಟಾಪ್ ನೀಡಿ ಎಂದು ಪ್ರತಿಭಟನೆ ಮಾಡಿದರು.

    ಸರ್ಕಾರ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮಲತಾಯಿ ಧೋರಣೆ ತೋರಿಸುತ್ತಿದೆ. ಸರ್ಕಾರಿ ಪದವಿ ವಿದ್ಯಾರ್ಥಿಗಳಂತೆ ಖಾಸಗಿ ಕಾಲೇಜಗಳ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ರಾಜ್ಯ ಸರ್ಕಾರ ನೀಡಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.