Tag: ಖಾಸಗಿ ಬಸ್

  • ಹೈಟೆನ್ಷನ್ ತಂತಿ ತಗುಲಿ ಹೊತ್ತಿ ಉರಿದ ಬಸ್ – ಮೂವರು ಕಾರ್ಮಿಕರು ಸಾವು

    ಹೈಟೆನ್ಷನ್ ತಂತಿ ತಗುಲಿ ಹೊತ್ತಿ ಉರಿದ ಬಸ್ – ಮೂವರು ಕಾರ್ಮಿಕರು ಸಾವು

    ಜೈಪುರ: ಉತ್ತರ ಪ್ರದೇಶದ (Uttar Pradesh) ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್‌ನ ಮೇಲ್ಭಾಗವು ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 12 ಮಂದಿಗೆ ಗಂಭೀರ ಸುಟ್ಟು ಗಾಯಗಳಾಗಿವೆ.

    ಜೈಪುರ (Jaipur) ಗ್ರಾಮೀಣ ಜಿಲ್ಲೆಯ ಶಹಪುರ ಉಪವಿಭಾಗದ ಮನೋಹರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಟೋಡಿ ಗ್ರಾಮದ ಇಟ್ಟಿಗೆ ಗೂಡಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್‌ಗೆ 11,000 ವೋಲ್ಟ್ ಸಾಮರ್ಥ್ಯದ ಹೈಟೆನ್ಷನ್ ಲೈನ್ ತಗುಲಿದೆ. ಇದನ್ನೂ ಓದಿ: ಕೀನ್ಯಾ | 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – ಎಲ್ಲರೂ ಸಾವನ್ನಪ್ಪಿರುವ ಶಂಕೆ

    ಮನೋಹರಪುರದ ಹಳ್ಳಿಯೊಂದರ ಬಳಿಯ ರಸ್ತೆಯಿಂದ ಬಸ್ ಹಾದು ಹೋಗುವಾಗ ಬಸ್‌ನ ಮೇಲ್ಭಾಗದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ಗಳು ಮತ್ತು ಇತರ ಗೃಹೋಪಯೋಗಿ ವಸ್ತುಗಳು ಹೈಟೆನ್ಷನ್ ವಿದ್ಯುತ್ ತಂತಿಗೆ ತಾಗಿವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತೇಜ್‌ಪಾಲ್ ಸಿಂಗ್ ತಿಳಿಸಿದ್ದಾರೆ.

    ಬಸ್‌ನ ಮೇಲ್ಭಾಗವು ಹೈಟೆನ್ಷನ್ ಲೈನ್‌ಗೆ ತಗುಲುತ್ತಿದ್ದಂತೆ, ಜೋರಾದ ಸ್ಫೋಟ ಸದ್ದು ಕೇಳಿತ್ತು. ಕಾರ್ಮಿಕರ ಕಿರುಚಾಟ ಸದ್ದು ಕೇಳಿ ಹತ್ತಿರದ ನಿವಾಸಿಗಳು ಸ್ಥಳಕ್ಕೆ ಧಾವಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಮನೋಹರ್‌ಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಗಾಯಾಳುಗಳನ್ನು ತಕ್ಷಣವೇ ಶಹಪುರ ಉಪ-ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಿದ್ದಾರೆ.

  • Kurnool Bus Fire | ದುರಂತಕ್ಕೀಡಾದ ಖಾಸಗಿ ಬಸ್ ಮೇಲಿದೆ 23 ಸಾವಿರಕ್ಕೂ ಹೆಚ್ಚು ದಂಡ

    Kurnool Bus Fire | ದುರಂತಕ್ಕೀಡಾದ ಖಾಸಗಿ ಬಸ್ ಮೇಲಿದೆ 23 ಸಾವಿರಕ್ಕೂ ಹೆಚ್ಚು ದಂಡ

    ಹೈದರಾಬಾದ್: ಆಂಧ್ರದ ಕರ್ನೂಲಿನಲ್ಲಿ ದುರಂತಕ್ಕೀಡಾದ ಬಸ್ ಮೇಲೆ 16 ನಿಮಯ ಉಲ್ಲಂಘನೆ ಕೇಸ್‌ಗಳಿದ್ದು, ಒಟ್ಟು 23 ಸಾವಿರ ರೂ.ಗೂ ಅಧಿಕ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

    ತೆಲಂಗಾಣ ರಾಜ್ಯದಲ್ಲಿ ದುರಂತಕ್ಕೀಡಾದ ಖಾಸಗಿ ಬಸ್ ಮೇಲೆ ಟ್ರಾಫಿಕ್ ನಿಯಮ ಉಲ್ಲಂಘನೆಯಡಿ 16 ಕೇಸ್‌ಗಳು ದಾಖಲಾಗಿವೆ. ಅತಿವೇಗದಲ್ಲಿ ಚಾಲನೆ, ಒನ್ ವೇ ಎಂಟ್ರಿ ಸೇರಿದಂತೆ ಹಲವು ನಿಯಮ ಉಲ್ಲಂಘಿಸಿದ ಹಿನ್ನೆಲೆ ಬಸ್ ವಿರುದ್ಧ 16 ದಂಡದ ಚಲನ್ ಬಾಕಿಯಿದ್ದು, 3,120 ರೂ. ದಂಡ ವಿಧಿಸಲಾಗಿದೆ. ಆದರೆ ಈವರೆಗೂ ದಂಡದ ಮೊತ್ತ ಪಾವತಿಯಾಗಿಲ್ಲ.ಇದನ್ನೂ ಓದಿ: Karnool Bus Fire | ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಘೋಷಣೆ

    ಅದಲ್ಲದೇ ಬಸ್ ವಿರುದ್ಧ ಅಪಾಯಕಾರಿಯಾಗಿ ಚಾಲನೆ ಮತ್ತು ಅನಧಿಕೃತ ಮಾರ್ಗದಲ್ಲಿ ಸಂಚಾರ ಎಂದು ಸಾರ್ವಜನಿಕ ದೂರುಗಳು ದಾಖಲಾಗಿದೆ.

    ಗುರುವಾರ (ಅ.23) ಮಧ್ಯರಾತ್ರಿ 2:45ರ ಸುಮಾರಿಗೆ ಹೈದ್ರಾಬಾದ್‌ನಿಂದ ಬೆಂಗಳೂರಿಗೆ ಬರ್ತಿದ್ದ ಖಾಸಗಿ ಎಸಿ ಬಸ್ ಆಂಧ್ರದ ಕರ್ನೂಲ್ ಬಳಿ ಬೈಕ್‌ವೊಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತವಾದ ಬಳಿಕವೂ ಡ್ರೆöÊವರ್ ಬಸ್ ನಿಲ್ಲಿಸದೇ ಸವಾರನ ಸಮೇತ ಬೈಕ್ ಅನ್ನು ಸುಮಾರು 300 ಮೀಟರ್ ಎಳೆದೊಯ್ದಿದ್ದಾನೆ. ಈ ವೇಳೆ, ಬೈಕ್‌ನಲ್ಲಿದ್ದ ಪೆಟ್ರೋಲ್ ಚೆಲ್ಲಿ ಬಸ್ ಅಡಿ ಬೆಂಕಿ ಹೊತ್ತಿಕೊಂಡಿದೆ. ನಂತರ ಇಡೀ ಬಸ್‌ಗೆ ಬೆಂಕಿ ಹಬ್ಬಿದೆ. ಎಸಿ ಬಸ್ ಆಗಿದ್ದ ಕಾರಣ ಕ್ಷಣಾರ್ಧದಲ್ಲಿ ಇಡೀ ಬಸ್‌ಗೆ ಬೆಂಕಿ ಆವರಿಸಿದೆ.

    ಬಸ್ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದು, 24 ಜನರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದರೂ ಕೂಡ ಸುಟ್ಟಗಾಯಗಳಿಂದಾಗಿ ಒದ್ದಾಡುತ್ತಿದ್ದಾರೆ.ಇದನ್ನೂ ಓದಿ: Kurnool Bus Fire | ಬೆಂಕಿ ವ್ಯಾಪಿಸಲು ಬೆಂಗಳೂರಿಗೆ ಸಾಗಿಸುತ್ತಿದ್ದ ಮೊಬೈಲ್ ಫೋನ್‌ಗಳು ಒಟ್ಟಾಗಿ ಸ್ಫೋಟಿಸಿದ್ದೂ ಕಾರಣ!

  • ಹಬ್ಬಕ್ಕೆ ಸಾಲು ಸಾಲು ರಜೆ – ಖಾಸಗಿ ಬಸ್ ಪ್ರಯಾಣ ದರ ಏರಿಕೆ, ನಿಮ್ಮೂರಿಗೆ ಎಷ್ಟು ನೋಡಿ!

    ಹಬ್ಬಕ್ಕೆ ಸಾಲು ಸಾಲು ರಜೆ – ಖಾಸಗಿ ಬಸ್ ಪ್ರಯಾಣ ದರ ಏರಿಕೆ, ನಿಮ್ಮೂರಿಗೆ ಎಷ್ಟು ನೋಡಿ!

    ಬೆಂಗಳೂರು: ದೀಪಗಳ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದ್ದು, ಕುಟುಂಬದವರೊಂದಿಗೆ ಹಬ್ಬ ಆಚರಿಸಲು ಜನ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಇದೇ ಶುಕ್ರವಾರವೇ ಹೊರಡುತ್ತಿದ್ದಾರೆ. ಆದ್ರೇ ಇದನ್ನೇ ಬಂಡವಾಳವಾಗಿಸಿಕೊಂಡ ಪ್ರೈವೇಟ್‌ ಬಸ್‌ಗಳು ಪ್ರಯಾಣಿಕರಿಂದ ಸುಲಿಗೆಗಿಳಿದಿವೆ.

    ಅಜ್ಞಾನವನ್ನು ಕಳೆದು ಬದುಕಿಗೆ ಬೆಳಕನ್ನು ಕೊಡೋ ಬೆಳಕಿನ ಹಬ್ಬ ದೀಪಾವಳಿಗೆ ಕೌಂಟ್‌ಡೌನ್ ಶುರು ಆಗಿದೆ. ಬೆಂಗಳೂರಿನ ಜನ ತಮ್ಮ ಕುಟುಂಬದವರೊಂದಿಗೆ ಹಬ್ಬ ಆಚರಿಸಲು ಊರುಗಳಿಗೆ ಹೊರಡಲು ಪ್ಲಾನ್‌ ಮಾಡಿಕೊಂಡಿದ್ದಾರೆ. ಒಂದು ವಾರಗಳ ಕಾಲ ರಜೆಯ ಯೋಜನೆ ಹಾಕಿದ್ದಾರೆ. ಈ ನಿಟ್ಟಿನಲ್ಲಿ ಇದೇ ಶುಕ್ರವಾರ 17ರಂದು ರಾತ್ರಿಯೇ ಹೊರಡೋ ಪ್ಲಾನ್‌ ಮಾಡಿದ್ದಾರೆ. 18 ಶನಿವಾರ, 19 ಭಾನುವಾರ, 20 ನರಕ ಚತುರ್ದಶಿ, 21 ಅಮಾವ್ಯಾಸೆ, 22 ದೀಪಾವಳಿಯಿದೆ. ಹೀಗಾಗಿ ಸಾಲು ಸಾಲು ರಜೆ ಬಂದಿವೆ. ಇದನ್ನೂ ಓದಿ: ದೀಪಾವಳಿಗೆ ಬೆಂಗಳೂರಿನಿಂದ ಹೆಚ್ಚುವರಿ KSRTC ಬಸ್ – ನಿಮ್ಮ ಊರಿಗೂ ಇದ್ಯಾ ಪರಿಶೀಲಿಸಿ

    ಪ್ರತಿ ಸಲ ಯಾವುದೇ ಹಬ್ಬ ಬಂದ್ರೂ ಖಾಸಗಿ ಬಸ್‌ಗಳ ಟಿಕೆಟ್ ದರ ಹೆಚ್ಚಿಸಿ, ಪ್ರಯಾಣಿಕರ ಜೇಬಿಗೆ ಬರೆ ಹಾಕೋದು ಮಾಮೂಲಿಯಾಗಿದೆ. ಅದ್ರಂತೆ ಇದೇ ಶುಕ್ರವಾರ ಬೆಂಗಳೂರಿನಿಂದ ಕರ್ನಾಟಕದ ವಿವಿಧ ಊರುಗಳಿಗೆ ತೆರಳೋ ಖಾಸಗಿ ಬಸ್‌ಗಳು ಟಿಕೆಟ್ ದರವನ್ನು ದುಪ್ಪಟು ಮಾಡಿವೆ. ಇನ್ನೂ ಕೆಲ ಬಸ್‌ಗಳು 50% ಟಿಕೆಟ್ ದರ ಏರಿಕೆ ಮಾಡಿದ್ದು, ಈ ಸೀಜನ್ 30%ವರೆಗೂ ಟಿಕೆಟ್ ದರ ಏರಿಕೆ ಮಾಡಿದ್ದೇವೆ ಅಂತಾರೆ ಖಾಸಗಿ ಬಸ್‌ಗಳ ಮಾಲೀಕರು.

    ಖಾಸಗಿ ಬಸ್ ದುಪ್ಪಟ್ಟು ದುಬಾರಿ
    ಬೆಂಗಳೂರು-ಹುಬ್ಬಳ್ಳಿ
    ಹಳೆ ದರ: 900-1,000 ರೂ.
    ಹೊಸ ದರ: 2,500-3,000 ರೂ.

    ಬೆಂಗಳೂರು-ಬೆಳಗಾವಿ
    ಹಳೆ ದರ: 1,500-1,600ರೂ.
    ಹೊಸ ದರ: 2,600-4,000ರೂ.

    ಬೆಂಗಳೂರು-ಗದಗ
    ಹಳೆ ದರ: 1,100-1,200ರೂ.
    ಹೊಸ ದರ: 1,800-2,000ರೂ.

    ಬೆಂಗಳೂರು-ಮಂಗಳೂರು
    ಹಳೆ ದರ: 1,300-1,400ರೂ.
    ಹೊಸ ದರ: 2,300-2,700ರೂ.

    ಬೆಂಗಳೂರು-ಉಡುಪಿ
    ಹಳೆ ದರ: 1,500-1,700ರೂ.
    ಹೊಸ ದರ: 2,000-2,300ರೂ.

    ಬೆಂಗಳೂರು-ಬೀದರ್
    ಹಳೆ ದರ: 1,700-1,800ರೂ.
    ಹೊಸ ದರ:- 2,500-3,500ರೂ.

    ಬೆಂಗಳೂರು-ರಾಯಚೂರು
    ಹಳೆ ದರ: 1,000-1,200ರೂ.
    ಹೊಸ ದರ: 1,900-2,700ರೂ

    ಬೆಂಗಳೂರು-ಕಲಬುರಗಿ
    ಹಳೆ ದರ: 1,700-1,800ರೂ.
    ಹೊಸ ದರ: 2,500-2,600ರೂ.

    ಇನ್ನೂ ಖಾಸಗಿ ಬಸ್‌ಗಳ ಟಿಕೆಟ್ ದರ ಏರಿಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ಕೊಟ್ಟಿದ್ದಾರೆ. ಈ ಟಿಕೆಟ್ ದರ ಏರಿಕೆ ಸರಿಯಲ್ಲ. ಸಾರಿಗೆ ಇಲಾಖೆಯಿಂದ ಟಿಕೆಟ್ ದರ ಏರಿಕೆ ಮಾಡಿದ ಬಸ್‌ಗಳ ಕಾರ್ಯಾಚರಣೆ ಮಾಡ್ತೇವೆ. ಜನರಿಗೆ ಸಹಾಯವಾಗಲಿ ಅಂತಾನೇ 2,500 ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಹೆಚ್ಚುವರಿಯಾಗಿ ಬಿಟ್ಟಿದ್ದೇವೆ ಎಂದು ಹೇಳಿದ್ದಾರೆ.

    ಹಬ್ಬಕ್ಕೆ ಊರಿಗೆ ಹೋಗೋದೇ ಕಷ್ಟವಾಗಿದೆ. ತಿಂಗಳೆಲ್ಲಾ ಕಷ್ಟಪಟ್ಟು ದುಡಿದ ಹಣವನ್ನು ಬಸ್‌ಗಳಿಗೆ ಹಾಕೋದಾ? ಎಂದು ಪ್ರಯಾಣಿಕರು ಬೇಸರ ಹೊರಹಾಕ್ತಿದ್ದಾರೆ. ಒಟ್ನಲ್ಲಿ ಪ್ರತಿ ಸಲ ಹಬ್ಬ ಬಂದಾಗಲೂ ಖಾಸಗಿ ಬಸ್‌ಗಳ ಟಿಕೆಟ್ ದರ ಏರಿಕೆಯಿಂದ ಜನರ ಜೇಬಿಗೆ ಕತ್ತರಿ ಬೀಳುತ್ತಿರೋದಂತೂ ಸತ್ಯ.

  • ಕೊಪ್ಪಳ ಹುಲಿಗೆಮ್ಮ ಪಾದಯಾತ್ರಿಕರ ಮೇಲೆ ಹರಿದ ಬಸ್‌ – ಮೂವರು ಸಾವು, ನಾಲ್ವರಿಗೆ ಗಾಯ

    ಕೊಪ್ಪಳ ಹುಲಿಗೆಮ್ಮ ಪಾದಯಾತ್ರಿಕರ ಮೇಲೆ ಹರಿದ ಬಸ್‌ – ಮೂವರು ಸಾವು, ನಾಲ್ವರಿಗೆ ಗಾಯ

    ಕೊಪ್ಪಳ: ಹುಲಿಗೆಮ್ಮ ದೇವಸ್ಥಾನದ (Huligemma Devi Temple) ಪಾದಯಾತ್ರೆಗೆ ಹೊರಟಿದ್ದರ ಮೇಲೆ ಖಾಸಗಿ ಬಸ್‌ (Private Bus) ಹರಿದು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಕೂಕನಪಳ್ಳಿ ಗ್ರಾಮದ ರಾ.ಹೆ. 50 ರಲ್ಲಿ ನಡೆದಿದೆ.

    ಅನ್ನಪೂರ್ಣ(40),ಪ್ರಕಾಶ್(25), ಶರಣಪ್ಪ(19) ಮೃತರು. ಸಿಂದಗಿಯಿಂದ ಬೆಂಗಳೂರಿಗೆ (Bengaluru) ತೆರಳುತ್ತಿದ್ದ ಖಾಸಗಿ ಸ್ಲೀಪರ್‌ ಕೋಚ್‌ ಬಸ್‌ ಹರಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.  ಇದನ್ನೂ ಓದಿ: ಮೌಂಟ್ ಎವರೆಸ್ಟ್‌ನಲ್ಲಿ ಭಾರಿ ಹಿಮಪಾತ 1,000 ಜನ ಸಿಲುಕಿರುವ ಶಂಕೆ; 350 ಚಾರಣಿಗರ ರಕ್ಷಣೆ

    ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದ ಇವರು ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಶನಿವಾರ ಪಾದಯಾತ್ರೆಗೆ ಹೊರಟಿದ್ದರು. ಇನ್ನು ಕೇವಲ ಕೇವಲ 3 ಗಂಟೆ ಕಳೆದರೆ ಇವರು ದೇವಸ್ಥಾನ ತಲುಪುತ್ತಿದ್ದರು.

    ಪ್ರಾಣಾಪಾಯದಿಂದ ಪಾರಾದ ನಾಲ್ವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ ರಾಮ್ ಅರಸಿದ್ದಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮುನಿರಾಬಾದ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಖಾಸಗಿ ಬಸ್‌ ಚಾಲಕನನ್ನು ಬಂಧಿಸಿಲಾಗಿದೆ.

    ಬೈಕ್ ಡಿಕ್ಕಿಯಾಗಿ ಸಾವು: ಕುಕನೂರಿನಿಂದ ಹುಲಿಗೆಗೆ ಪಾದಯಾತ್ರೆ ಮಾಡುತ್ತಿದ್ದ ಯವಕನಿಗೆ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ಭಾನಾಪುರ ಬಳಿ ರಾತ್ರಿ ನಡೆದಿದೆ.

    ಕುಕನೂರಿನ ವೀರೇಶ ಹಳ್ಳಿಕೇರಿ (28) ಮೃತಪಟ್ಟಿದ್ದಾರೆ. ಒಟ್ಟು 9 ಭಕ್ತರು ಪಾದಯಾತ್ರೆಗೆ ಹೊರಟ್ಟಿದ್ದರು. ಭಾನಾಪುರ ಬಳಿ ಬೈಕ್‌ ಡಿಕ್ಕಿಯಾಗಿ ವೀರೇಶನಿಗೆ ಗಂಭೀರ ಗಾಯವಾಗಿ ಮೃತಟ್ಟಿದ್ದಾರೆ.

     

  • ಟೈರ್ ಬ್ಲಾಸ್ಟ್ ಆಗಿ ಕಾಂಪೌಂಡ್ ಗೋಡೆಗೆ ಖಾಸಗಿ ಬಸ್ ಡಿಕ್ಕಿ – 10 ಮಂದಿಗೆ ಗಂಭೀರ ಗಾಯ

    ಟೈರ್ ಬ್ಲಾಸ್ಟ್ ಆಗಿ ಕಾಂಪೌಂಡ್ ಗೋಡೆಗೆ ಖಾಸಗಿ ಬಸ್ ಡಿಕ್ಕಿ – 10 ಮಂದಿಗೆ ಗಂಭೀರ ಗಾಯ

    ಆನೇಕಲ್: ಟೈರ್ ಬ್ಲಾಸ್ಟ್ (Tyre Blast) ಆದ ಪರಿಣಾಮ ನಿಯಂತ್ರಣ ತಪ್ಪಿ ಖಾಸಗಿ ಕಂಪನಿಯ ಕಾಂಪೌಂಡ್ ಗೋಡೆಗೆ ಖಾಸಗಿ ಬಸ್ (Private Bus) ಡಿಕ್ಕಿಯಾಗಿ 10 ಮಂದಿ ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನ (Tamil Nadu) ಹೊಸೂರಿನ (Hosur) ದರ್ಗಾ ಎಂಬಲ್ಲಿ ನಡೆದಿದೆ.

    ಬೆಂಗಳೂರು-ಹೊಸೂರು ಹೆದ್ದಾರಿಯ ಹೊಸೂರಿನಲ್ಲಿ ಚಲಿಸುತ್ತಿದ್ದ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್ – ಜಾಮೀನಿನ ಮೇಲೆ ಹೊರಗಿರುವ 5 ಆರೋಪಿಗಳಿಗೂ ಶುರುವಾದ ಸಂಕಷ್ಟ

    ಘಟನೆ ಸಂಭವಿಸಿದ ವೇಳೆ ಬಸ್ಸಿನಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಈ ಪೈಕಿ 10 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಪ್ಕಾಟ್ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕ್ಷೇತ್ರಕ್ಕೆ ಅವಮಾನ – ಯೂಟ್ಯೂಬರ್‌ ಸಮೀರ್‌ ನಾಪತ್ತೆ

  • ಬೆಂಗಳೂರಿಗೆ ಬರುತ್ತಿದ್ದಾಗ ಹೊಸೂರು ಬಳಿ ಕಂದಕಕ್ಕೆ ಉರುಳಿದ ಬಸ್ಸು

    ಬೆಂಗಳೂರಿಗೆ ಬರುತ್ತಿದ್ದಾಗ ಹೊಸೂರು ಬಳಿ ಕಂದಕಕ್ಕೆ ಉರುಳಿದ ಬಸ್ಸು

    ಚೆನ್ನೈ: ತಮಿಳುನಾಡಿನಿಂದ (Tamil Nadu) ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ಕಂದಕಕ್ಕೆ ಉರುಳಿದ ಪರಿಣಾಮ 40 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಹೊಸೂರು (Hosur) ಬಳಿ ನಡೆದಿದೆ.

    ಮಧುರೈನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಬಸ್ ಇದಾಗಿತ್ತು. ಬಸ್‌ನಲ್ಲಿದ್ದ ಬಹುತೇಕ ಮಂದಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಅತಿ ವೇಗವಾಗಿ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಕರುಕಂಪಟ್ಟಿ ಬಳಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಬಿದ್ದಿದೆ. ಇದನ್ನೂ ಓದಿ: ಮೋಟೆಬೆನ್ನೂರಿನಲ್ಲಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸಾವು, 6 ಜನರಿಗೆ ಗಂಭೀರ ಗಾಯ

    ಪರಿಣಾಮ ಬಸ್‌ನಲ್ಲಿದ್ದ 40 ಮಂದಿ ಗಾಯಗೊಂಡಿದ್ದು, ಮೂವರು ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನ ಹೊಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಉತ್ತನಪಲ್ಲಿ ಪೊಲೀಸ್ (Uttanapalli Police) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಕಾರವಾರ | ಹಳ್ಳಕ್ಕೆ ಬಿದ್ದ ಖಾಸಗಿ ಬಸ್ – ಓರ್ವ ಸಾವು, ಐವರು ಗಂಭೀರ

    ಕಾರವಾರ | ಹಳ್ಳಕ್ಕೆ ಬಿದ್ದ ಖಾಸಗಿ ಬಸ್ – ಓರ್ವ ಸಾವು, ಐವರು ಗಂಭೀರ

    ಕಾರವಾರ: ಬೆಂಗಳೂರಿನಿಂದ ಮಂಗಳೂರಿನ ಕಡೆ ತೆರಳುತ್ತಿದ್ದ ಖಾಸಗಿ ಬಸ್ (Private Bus) ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ಅಂಕೋಲದ (Ankola) ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು ಬಳಿ ನಡೆದಿದೆ.

    ಬೆಂಗಳೂರಿನಿಂದ ಮಂಗಳೂರು ಕಡೆ 18 ಜನರನ್ನು ಕರೆದೊಯ್ಯುತ್ತಿದ್ದ ವೇಳೆ ಅತೀ ವೇಗದಲ್ಲಿ ಬಂದ ಬಸ್ ಅಗಸೂರಿನ ಹೆದ್ದಾರಿಯ ಬ್ರಿಡ್ಜ್ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಉಳಿದವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಕತ್ರಾ ಮಾತಾ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ – ನಾಲ್ವರಿಗೆ ಗಾಯ

    ಗಂಭೀರ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದವರಿಗೆ ಅಂಕೋಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೃತನ ಗುರುತು ಪತ್ತೆಯಾಗಬೇಕಿದೆ. ಇದನ್ನೂ ಓದಿ: ಮುಡಾ ಕೇಸ್ | ಸಿಎಂ ಪತ್ನಿ ವಿಚಾರಣೆ ರದ್ದು – ನಿಮ್ಮನ್ಯಾಕೆ ರಾಜಕೀಯಕ್ಕೆ ಬಳಕೆ ಮಾಡ್ತಾರೆ?: ಇ.ಡಿಗೆ ಸುಪ್ರೀಂ ಛೀಮಾರಿ

    ಸ್ಥಳಕ್ಕೆ ಅಂಕೋಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಕ್ರೇನ್ ಮೂಲಕ ಬಸ್ಸನ್ನು ಹಳ್ಳದಿಂದ ಮೇಲಕ್ಕೆತ್ತಿದ್ದಾರೆ. ಘಟನೆ ಸಂಬಂಧ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪುತ್ತೂರು | ಖಾಸಗಿ ಬಸ್, ಕಾರು ನಡುವೆ ಅಪಘಾತ – ತಂದೆ, ಮಗಳಿಗೆ ಗಂಭೀರ ಗಾಯ

    ಪುತ್ತೂರು | ಖಾಸಗಿ ಬಸ್, ಕಾರು ನಡುವೆ ಅಪಘಾತ – ತಂದೆ, ಮಗಳಿಗೆ ಗಂಭೀರ ಗಾಯ

    ಮಂಗಳೂರು: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ತಂದೆ, ಮಗಳು ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನ (Puttur) ಮುರದಲ್ಲಿ ನಡೆದಿದೆ.

    ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ಪುತ್ತೂರಿನಿಂದ ಕೆದಿಲ ಕಡೆಗೆ ತೆರಳುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಮುರ ಎಂಬಲ್ಲಿ ಕಾರು ಚಾಲಕ ಬಲಕ್ಕೆ ತೆಗೆದುಕೊಳ್ಳುವಾಗ ಕಾರಿನ ಹಿಂಬದಿಗೆ ಬಸ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಡಿವೈಡರ್‌ಗೆ ಲಾರಿ ಡಿಕ್ಕಿ – ಚೆಲ್ಲಾಪಿಲ್ಲಿಯಾದ ಔಷಧ ಬಾಕ್ಸ್‌ಗಳು

    ಕಾರಿನಲ್ಲಿ ಒಟ್ಟು ಮೂವರು ಪ್ರಯಾಣಿಕರಿದ್ದರು. ತಂದೆ ಹಾಗೂ ಮಗಳಿಗೆ ಗಂಭೀರ ಗಾಯಗಳಾಗಿದ್ದು, ಪವಾಡ ಸದೃಶ್ಯವಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಮಂಗಳೂರಿನ (Mangaluru) ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆ

  • ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ – ಐವರು ಸಜೀವ ದಹನ

    ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ – ಐವರು ಸಜೀವ ದಹನ

    – ಹತ್ತೇ ನಿಮಿಷದಲ್ಲಿ ಬಸ್‌ ಸುಟ್ಟು ಕರಕಲು

    ಲಕ್ನೋ: ಉತ್ತರ ಪ್ರದೇಶದ (Uttarpradesh) ರಾಜಧಾನಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಖಾಸಗಿ ಸ್ಪೀಪರ್‌ ಬಸ್‌ನಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ.

    ಲಕ್ನೋದ (lucknow) ಮೋಹನ್ ಲಾಲ್ ಗಂಜ್ ಪ್ರದೇಶದ ಕಿಸಾನ್ ಪಥದಲ್ಲಿ ಘಟನೆ ನಡೆದಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 60 ಪ್ರಯಾಣಿಕರ ಪೈಕಿ ಐವರು ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಉಗ್ರರ ವಿರುದ್ಧ ಸಿಡಿದೆದ್ದ ಭಾರತ – ‘ಆಪರೇಷನ್‌ ಸಿಂಧೂರ’ಗೆ ಜೈ ಎಂದ ಬ್ರಿಟಿಷ್‌ ಸಂಸದ

    ಹತ್ತೇ ನಿಮಿಷದಲ್ಲಿ ಬಸ್‌ ಸುಟ್ಟು ಕರಕಲು:
    ಖಾಸಗಿ ಸ್ಲೀಪರ್‌ ಬಸ್‌ (Sleeper Bus) ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿತ್ತು. ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ, ಇದು ತಕ್ಷಣಕ್ಕೆ ಪ್ರಯಾಣಿಕರಿಗೆ ಗಮನಕ್ಕೆ ಬಂದಿಲ್ಲ. ಆದ್ರೆ ಇದ್ದಕ್ಕಿದ್ದಂತೆ ಹೊಗೆ ತುಂಬಿಕೊಂಡು ಉಸಿರುಗಟ್ಟಿದ ಅನುಭವವಾಗಿದೆ. ಬಳಿಕ ಒಂದಿಬ್ಬರು ಪ್ರಯಾಣಿಕರು ನೋಡಿದಾಗ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ. ಆತಂಕಗೊಂಡ ಪ್ರಯಾಣಿಕರು ಕಿಟಕಿ ಗಾಜು ಹೊಡೆದು ಎಸ್ಕೇಪ್‌ ಆಗಲು ಪ್ರಯತ್ನಿಸಿದ್ದಾರೆ.  ಇದನ್ನೂ ಓದಿ: ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

    ಬೆಂಕಿ ಹೊತ್ತಿಕೊಂಡಿರುವುದು ನೋಡ್ತಿದ್ದಂತೆ ಸುತ್ತಮುತ್ತಲಿನ ಜನ ನೆರವಿಗೆ ಧಾವಿಸಿದ್ದಾರೆ, ಜೊತೆಗೆ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಬಂದ ರಕ್ಷಣಾ ತಂಡ ಅಗ್ನಿ ನಂದಿಸಲು ಹರಸಾಹಸಪಟ್ಟಿತು. ಅಷ್ಟೊತ್ತಿಗೆ ಇಡೀ ಬಸ್ ಸುಟ್ಟು ಹೋಗಿತ್ತು. ಈ ಅಪಘಾತದಲ್ಲಿ 5 ಪ್ರಯಾಣಿಕರು ಸಜೀವ ದಹನವಾಗಿದ್ದು, ಅವರನ್ನು ಇನ್ನೂ ಗುರುತಿಸಲಾಗಿಲ್ಲ. ಇತರ ಪ್ರಯಾಣಿಕರನ್ನು ಸಕಾಲದಲ್ಲಿ ಬಸ್ಸಿನಿಂದ ಇಳಿಸಲಾಯಿತು ಎಂದು ತಿಳಿದುಬಂದಿದೆ.

    ಪ್ರತ್ಯಕ್ಷದರ್ಶಿಗಳ ಪ್ರಕಾರ, ಬಸ್ ಚಾಲಕ ಮೊದಲು ಗಾಜು ಒಡೆದು ಬಸ್ಸಿನಿಂದ ಜಿಗಿದು ಪರಾರಿಯಾಗಿದ್ದಾನೆ. ಅಪಘಾತದ ಬಳಿಕ ಕಾಣೆಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಈ ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಹೇಳಲಾಗುತ್ತಿದೆ.  ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

  • ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!

    ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!

    – ಲಾರಿ ಮುಷ್ಕರಕ್ಕೆ ಖಾಸಗಿ ಬಸ್ ಮಾಲೀಕರ ಸಾಥ್

    ಬೆಂಗಳೂರು: ಈ ವರ್ಷ ಆರಂಭದಿಂದಲೂ ನಿತ್ಯ ಜೇಬಿಗೆ ಹೊರೆಯಾಗುವ ಶಾಕಿಂಗ್ ಸುದ್ದಿಗಳೇ ಕೇಳಿಬರುತ್ತಿವೆ. ನಿತ್ಯ ಒಂದಲ್ಲ ಒಂದು ದರ ಏರಿಕೆಯಿಂದ ಕಂಗೆಟ್ಟಿದ್ದ ಜನಕ್ಕೆ ಈಗ ಮತ್ತೊಂದು ಸರದಿ. ಡೀಸೆಲ್ ದರ ಏರಿಕೆಯಾದ (Diesel Price Hike) ಬೆನ್ನಲ್ಲೇ ಖಾಸಗಿ ಬಸ್ ಪ್ರಯಾಣ ದರ ಕೂಡ ಏರಿಕೆಯಾಗಲಿದೆ.

    ಡೀಸೆಲ್ ದರ ಏರಿಕೆ ಮಾಡಿ ಸರ್ಕಾರದ ವಿರುದ್ಧ ವಾಣಿಜ್ಯ ವಾಹನಗಳು ಸಮರ ಸಾರಿವೆ. ಏ.15ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೂ ಮುಂದಾಗಿವೆ. ಈ ಮಧ್ಯೆ ಈ ಮುಷ್ಕರಕ್ಕೆ ಖಾಸಗಿ ಬಸ್ (Private Bus) ಮಾಲೀಕರು ಕೂಡ ಬೆಂಬಲ ಸೂಚಿಸಿದ್ದಾರೆ. ಮುಷ್ಕರಕ್ಕೆ ಬೆಂಬಲ ಸೂಚಿಸುವುದರ ಜೊತೆಗೆ ಪ್ರಯಾಣ ದರ ಏರಿಕೆಗೂ ಕೂಡ ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: ಚೀನಾ ಮೇಲಿನ ಟ್ಯಾರಿಫ್‌ ಅನ್ನು 104% ಹೆಚ್ಚಿಸಿದ ಅಮೆರಿಕ

    ಪ್ರತಿ ಸ್ಟೇಜ್‌ಗೂ 2 ರೂ.ನಂತೆ 15%ರಷ್ಟು ದರ ಏರಿಕೆಗೆ ನಿರ್ಧಾರ ಮಾಡಿವೆ. ಅದರಂತೆ ಮುಷ್ಕರ ಆರಂಭವಾದ ದಿನದಿಂದಲೇ ದರ ಏರಿಕೆ ಮಾಡುವ ಸಾಧ್ಯತೆ ಇದೆ. ಎಸಿ, ನಾನ್‌ಎಸಿ, ಸ್ಲೀಪರ್ ಬಸ್‌ಗಳಲ್ಲಿ ದರ ಏರಿಕೆಯಾಗಲಿದೆ. ಈಗಾಗಲೇ ಡೀಸೆಲ್ ದರ, ಬಿಡಿ ಭಾಗಗಳ ದರ, ಟೈರ್ ದರಗಳ ಹೆಚ್ಚಳ ಸೇರಿದಂತೆ ಎಲ್ಲಾ ದರ ಏರಿಕೆ ಕಾರಣ ದರೇರಿಕೆ ಮಾಡದೇ ಬೇರೆ ಆಯ್ಕೆಯೇ ಇಲ್ಲ ಎಂಬ ನಿರ್ಧಾರಕ್ಕೆ ಖಾಸಗಿ ಬಸ್ ಮಾಲೀಕರು ಬಂದಿದ್ದಾರೆ. ಇದನ್ನೂ ಓದಿ: ಅಕ್ರಮ ಸಂಬಂಧ ಆರೋಪ – ಪತ್ನಿ ಆತ್ಮಹತ್ಯೆ, ಪತಿ ಅರೆಸ್ಟ್‌, 7 ಮಂದಿ ವಿರುದ್ಧ FIR

    ರಾಜ್ಯಾದ್ಯಂತ ಒಟ್ಟು 14,000 ಖಾಸಗಿ ಬಸ್‌ಗಳು ನಿತ್ಯ ಓಡಾಟ ಮಾಡುತ್ತಿವೆ. ಬೆಂಗಳೂರಿನಲ್ಲೇ ಎರಡೂವರೆ ಸಾವಿರ ವಾಹನ ಓಡಾಟ ಮಾಡುತ್ತವೆ. ಅಲ್ಲದೇ ವಿಕೇಂಡ್‌ಗಳಲ್ಲಿ ಸಾವಿರಾರು ಸಂಖ್ಯೆಯ ಜನ ಬೆಂಗಳೂರಿನಿಂದ ಹೊರ ಹೋಗಲು ಖಾಸಗಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಅಲ್ಲದೇ ಗ್ರಾಮೀಣ ಪ್ರದೇಶದ ಹಲವು ಕಡೆ ಈಗಲೂ ಕೂಡ ಖಾಸಗಿ ಬಸ್‌ಗಳೇ ಪ್ರಮುಖ ಸಾರಿಗೆ. ಸದ್ಯದ ದರ ಏರಿಕೆ ಆಯಾ ಗ್ರಾಮೀಣ ಪ್ರದೇಶಗಳ ಜನರ ಮೇಲೆ ಮತ್ತಷ್ಟು ಹೊರೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಭಾರತದ ಉದ್ಯಮಿಗೆ ಅಮೆರಿಕದಲ್ಲಿ ಕಹಿ ಅನುಭವ – ಏರ್‌ಪೋರ್ಟ್‌ನಲ್ಲಿ 8 ಗಂಟೆ ಕೂರಿಸಿದ ಆರೋಪ

    ಬೆಂಗಳೂರಿನಿಂದ ಯಾವ ಭಾಗಕ್ಕೆ ಎಷ್ಟು ದರ?
    ಬೆಂಗಳೂರು ಟು ಹುಬ್ಬಳ್ಳಿ:
    ಈಗಿನ ದರ – 1,000 ರೂ.
    ಸಾಮಾನ್ಯ ದಿನ ದರ – 1,200 ರೂ.
    ವಾರಾಂತ್ಯ ದರ – 1,500 ರೂ.

    ಬೆಂಗಳೂರು ಟು ಬೆಳಗಾವಿ:
    ಈಗಿನ ದರ – 1,200ರೂ.
    ಸಾಮಾನ್ಯ ದಿನ ದರ – 1,400 ರೂ.
    ವಾರಾಂತ್ಯ ದರ – 1,600 ರೂ.

    ಬೆಂಗಳೂರು ಟು ಕಲಬುರಗಿ:
    ಈಗಿನ ದರ – 1,200 ರೂ.
    ಸಾಮಾನ್ಯ ದಿನ ದರ – 1,400 ರೂ.
    ವಾರಾಂತ್ಯ ದರ- 1,600 ರೂ.

    ಬೆಂಗಳೂರು ಟು ಮಂಗಳೂರು:
    ಈಗಿನ ದರ – 1,000 ರೂ.
    ಸಾಮಾನ್ಯ ದಿನ ದರ – 1,400 ರೂ.
    ವಾರಾಂತ್ಯ ದರ – 1,600 ರೂ.

    ಬೆಂಗಳೂರು ಟು ಬಳ್ಳಾರಿ:
    ಈಗಿನ ದರ – 700 ರೂ.
    ಸಾಮಾನ್ಯ ದಿನ ದರ- 1,000 ರೂ.
    ವಾರಾಂತ್ಯ ದರ – 1,200 ರೂ.

    ಬೆಂಗಳೂರು ಟು ಶಿವಮೊಗ್ಗ:
    ಈಗಿನ ದರ – 750 ರೂ.
    ಸಾಮಾನ್ಯ ದಿನ ದರ – 1,000 ರೂ.
    ವಾರಾಂತ್ಯ ದರ – 1,200 ರೂ.