Tag: ಖಾಸಗಿ ಬಸ್

  • ಖಾಸಗಿ ಬಸ್, ಬೈಕ್ ನಡುವೆ ಅಪಘಾತ- ತಂದೆಯ ಎದುರಲ್ಲೇ ಪ್ರಾಣಬಿಟ್ಟ ಮಗಳು!

    ಖಾಸಗಿ ಬಸ್, ಬೈಕ್ ನಡುವೆ ಅಪಘಾತ- ತಂದೆಯ ಎದುರಲ್ಲೇ ಪ್ರಾಣಬಿಟ್ಟ ಮಗಳು!

    ಬೆಂಗಳೂರು: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತವಾಗಿ ತಂದೆಯ ಎದುರಲ್ಲೇ ಮಗಳು ಪ್ರಾಣಬಿಟ್ಟ ಘಟನೆ ಮಂಗಳವಾರ ರಾತ್ರಿ ವೆಸ್ಟ್ ಆಫ್ ಕಾರ್ಡ್ ರಸ್ತೆಯ ವಿನಾಯಕ ದೇವಸ್ಥಾನ ಬಳಿ ನಡೆದಿದೆ.

    ಚೈತ್ರಾ ಬೈಕ್‍ನ ಹಿಂಬದಿಯಲ್ಲಿ ಕುಳಿತಿದ್ದ ಯುವತಿ. ಚೈತ್ರಾ ತನ್ನ ತಂದೆ ಜೊತೆ ಬೈಕಿನಲ್ಲಿ ಹೋಗುತ್ತಿದ್ದರು. ಈ ವೇಳೆ ಖಾಸಗಿ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ತೀವ್ರ ರಕ್ತಸ್ರಾವದಿಂದ ಚೈತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ತೀವ್ರವಾಗಿ ಗಾಯಗೊಂಡಿರುವ ಚೈತ್ರಾ ತಂದೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಈ ಕುರಿತು ಮಲ್ಲೇಶ್ವರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮರಕ್ಕೆ ಖಾಸಗಿ ಬಸ್ ಡಿಕ್ಕಿ- ಓರ್ವ ಸ್ಥಳದಲ್ಲೇ ದುರ್ಮರಣ

    ಮರಕ್ಕೆ ಖಾಸಗಿ ಬಸ್ ಡಿಕ್ಕಿ- ಓರ್ವ ಸ್ಥಳದಲ್ಲೇ ದುರ್ಮರಣ

    ಹಾವೇರಿ: ಮರಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

    ಈ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕೂರು ಕ್ರಾಸ್ ಬಳಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಯತ್ತ ತೆರಳುತ್ತಿದ್ದ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತನ ಬಗ್ಗೆ  ಇನ್ನಷ್ಟೇ ತಿಳಿದುಬರಬೇಕಿದೆ.

    ಗಾಯಾಳುಗಳನ್ನು ಕೂಡಲೇ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತದೆ. ಸ್ಥಳಕ್ಕೆ ಹಾನಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಚಾಲಕನ ನಿದ್ದೆ ಮಂಪರು ಅಥವಾ ಅತೀ ವೇಗದ ಚಾಲನೆಯಿಂದಾಗಿ ಈ ಘಟನೆ ಸಂಭವಿಸಿದೆಯೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಲಾರಿ, ಖಾಸಗಿ ಬಸ್ ಡಿಕ್ಕಿ – ತಿರುಪತಿಯಿಂದ ವಾಪಸ್ಸಾಗುತ್ತಿದ್ದ 8ರ ಬಾಲಕ ದುರ್ಮರಣ

    ಲಾರಿ, ಖಾಸಗಿ ಬಸ್ ಡಿಕ್ಕಿ – ತಿರುಪತಿಯಿಂದ ವಾಪಸ್ಸಾಗುತ್ತಿದ್ದ 8ರ ಬಾಲಕ ದುರ್ಮರಣ

    ಚಿತ್ರದುರ್ಗ: ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಬಸ್ ನಲ್ಲಿದ್ದ ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಮೃತ ದುರ್ದೈವಿ ಬಾಲಕನನ್ನು 8 ವರ್ಷದ ವಿಶ್ವನಾಥ ಎಂದು ಗುರುತಿಸಲಾಗಿದೆ. ಘಟನೆಯಿಂದಾಗಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಬಾಲಕ ವಿಶ್ವನಾಥ್ ತಿರುಪತಿಯಲ್ಲಿ ವೆಂಕಟೇಶ್ವರ ದರ್ಶನ ಮುಗಿಸಿಕೊಂಡು ವಾಪಸ್ ಚಳ್ಳಕೆರೆ ಗಂಗನಕಟ್ಟೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಬಳ್ಳಾರಿಯಿಂದ ಕಡೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಳ್ಳಕೆರೆ ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕರ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ.


    ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

  • ಬೈಕಿಗೆ ಖಾಸಗಿ ಬಸ್ ಡಿಕ್ಕಿ- ಇಬ್ಬರು ಯುವಕರ ಸಾವು

    ಬೈಕಿಗೆ ಖಾಸಗಿ ಬಸ್ ಡಿಕ್ಕಿ- ಇಬ್ಬರು ಯುವಕರ ಸಾವು

    ಶಿವಮೊಗ್ಗ: ಇಲ್ಲಿನ ಆಯನೂರು ರಸ್ತೆ ಯಮಸ್ವರೂಪಿಯಾಗಿದ್ದು, ಮತ್ತೆರೆಡು ಜೀವಗಳನ್ನು ಬಲಿ ತೆಗೆದುಕೊಂಡಿದೆ.

    ಈ ರಸ್ತೆಯ ವೀರಣ್ಣನ ಬೆನವಳ್ಳಿ ಬಳಿ ಖಾಸಗಿ ಬಸ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಅಮಿತ್ ಹಾಗೂ ಜಾನ್ಸನ್ ಬೈಕಿನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಜಾನ್ಸನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

    ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಅಮೀತ್‍ರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮಾರ್ಗದಲ್ಲಿ ಅಪಘಾತ, ಸಾವು- ನೋವುಗಳು ಹೆಚ್ಚಾಗಿದ್ದು, ಅಪಘಾತ ವಲಯ ಎಂದು ಘೋಷಿಸಲು ಈ ಭಾಗದ ಜನತೆ ಆಗ್ರಹಿಸಿದ್ದಾರೆ.

    ಕುಂಸಿ ಠಾಣೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿ- ಮಹಿಳೆ ಗಂಭೀರ

    ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿ- ಮಹಿಳೆ ಗಂಭೀರ

    – 20 ಪ್ರಯಾಣಿಕರು ಅಪಾಯದಿಂದ ಪಾರು

    ಹಾವೇರಿ: ಬೈಕ್ ಸವಾರನನ್ನ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಹಾವೇರಿಯಲ್ಲಿ ನಡೆದಿದೆ.

    ಜಿಲ್ಲೆಯ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದ್ದು, ಖಾಸಗಿ ಬಸ್ ಬೆಂಗಳೂರಿನಿಂದ ಹುಬ್ಬಳ್ಳಿಯತ್ತ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

    ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಇನ್ನು ಬಸ್ ನಲ್ಲಿದ್ದ 20 ಕ್ಕೂ ಅಧಿಕ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಸ್ಥಳಕ್ಕೆ ರಾಣೇಬೆನ್ನೂರು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ರಾಣೇಬೆನ್ನೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಹಾಲಿನ ಡೈರಿಗೆ ನುಗ್ಗಿದ ಖಾಸಗಿ ಬಸ್- ಇಬ್ಬರಿಗೆ ಗಾಯ

    ಹಾಲಿನ ಡೈರಿಗೆ ನುಗ್ಗಿದ ಖಾಸಗಿ ಬಸ್- ಇಬ್ಬರಿಗೆ ಗಾಯ

    ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಹಾಲಿನ ಡೈರಿಗೆ ನುಗ್ಗಿದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ.

    ಗೊರಗುಂಟೆಪಾಳ್ಯದ ಶಾಹಿ ಗಾರ್ಮೆಂಟ್ಸ್ ಗೆ ಪ್ರತಿದಿನ ನೌಕರರನ್ನು ಕರೆದೊಯ್ಯುತ್ತಿದ್ದ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ಹಾಲಿನ ಡೈರಿಗೆ ನುಗ್ಗಿದೆ. ಘಟನೆಯಿಂದ ಕೂದಲೆಳೆ ಅಂತರದಲ್ಲಿ ಸ್ಥಳೀಯರು ಪಾರಾಗಿದ್ದು, ಇಬ್ಬರಿಗೆ ಗಾಯವಾಗಿದೆ.

    ಗಾಯಾಳುಗಳನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಡಾಬಸ್‍ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಬೊಲೆರೋ ಪಿಕಪ್ ವಾಹನ, ಖಾಸಗಿ ಬಸ್ ಡಿಕ್ಕಿ- ಇಬ್ಬರ ಸಾವು, ಬೊಲೆರೋ ಚಾಲಕನ ಎರಡೂ ಕಾಲು ಕಟ್

    ಬೊಲೆರೋ ಪಿಕಪ್ ವಾಹನ, ಖಾಸಗಿ ಬಸ್ ಡಿಕ್ಕಿ- ಇಬ್ಬರ ಸಾವು, ಬೊಲೆರೋ ಚಾಲಕನ ಎರಡೂ ಕಾಲು ಕಟ್

    ದಾವಣಗೆರೆ: ಬೆಳಗಿನ ನಸುಕಿನಲ್ಲಿ ಬೊಲೆರೋ ಪಿಕಪ್ ವಾಹನ ಮತ್ತು ಖಾಸಗಿ ಬಸ್ ನಡುವೆ ಅಪಘಾತವಾಗಿ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ನಡೆದಿದೆ.

    ಬೊಲೆರೋ ಪಿಕಪ್ ವಾಹನದಲ್ಲಿದ್ದ ದರ್ಶನ್(24) ಹಾಗೂ ಹರೀಶ್(25) ಮೃತ ದುರ್ದೈವಿಗಳು. ಘಟನೆಯಲ್ಲಿ ಪಿಕಪ್ ವಾಹನದ ಚಾಲಕ ಸೇರಿದಂತೆ 6 ಮಂದಿಗೆ ಗಂಭೀರ ಗಾಯವಾಗಿದ್ದು, ಚಾಲಕನ ಎರಡೂ ಕಾಲು ಕಟ್ ಆಗಿದೆ. ಪ್ರವೀಣ್, ಪ್ರಹ್ಲಾದ ಹಾಗೂ ಮಹಾಂತರಾಜ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

    ಹೊನ್ನಾಳಿ ತಾಲೂಕಿನ ಚಟ್ನಹಳ್ಳಿ ಗ್ರಾಮದಿಂದ ಹರಿಹರ ತಾಲೂಕಿನ ಕಡೆ ಅಡಕೆ ಕೊಯ್ಯುವ ಕೂಲಿ ಕೆಲಸಕ್ಕೆ 6 ಕಾರ್ಮಿಕರು ಹೋಗುತ್ತಿದ್ದರು. ಈ ವೇಳೆ ಬೊಲೆರೋ ಪಿಕಪ್ ವಾಹನದ ಚಾಲಕ ಎತ್ತಿನ ಗಾಡಿ ತಪ್ಪಿಸಲು ಹೋಗಿ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಪಘಾತದಿಂದಾಗಿ ಬೊಲೆರೋ ವಾಹನ ಸಂಪೂರ್ಣ ಜಖಂಗೊಂಡಿದ್ದು, ಖಾಸಗಿ ಬಸ್ ಜಮೀನಿಗೆ ನುಗ್ಗಿದೆ. ಘಟನಾ ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಮಧ್ಯರಾತ್ರಿ ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್

    ಮಧ್ಯರಾತ್ರಿ ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್

    ಮಂಡ್ಯ: ಖಾಸಗಿ ಕಂಪೆನಿಗೆ ಸೇರಿದ ಬಸ್ ಚಲಿಸುತ್ತಿರುವಾಗಲೇ ರಾತ್ರೋರಾತ್ರಿ ಧಗಧಗನೆ ಹೊತ್ತಿ ಉರಿದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಜಿಲ್ಲೆಯ ಮದ್ದೂರು ಸಮೀಪ ಕೊಲ್ಲಿ ವೃತ್ತದ ಬಳಿ ಬಸ್ ಹೊತ್ತಿ ಉರಿದಿದೆ. ಖಾಸಗಿ ಕಂಪೆನಿಗೆ ಸೇರಿದ ಬಸ್ ಸುಮಾರು 35 ಮಂದಿ ಸಿಬ್ಬಂದಿಯನ್ನು ಕರೆದುಕೊಂಡು ಬಿಡದಿಯಿಂದ ಮಂಡ್ಯದ ಕಡೆಗೆ ಬರುತ್ತಿತ್ತು ಎನ್ನಲಾಗಿದೆ.

    ಅಂತೆಯೇ ಮಧ್ಯರಾತ್ರಿ 1 ಗಂಟೆ 30 ನಿಮಿಷದ ಸುಮಾರಿಗೆ ಕೊಲ್ಲಿ ವೃತ್ತದ ಬಳಿ ಬಸ್ ತಲುಪಿದಾಗ ಬಸ್ ನ ಪ್ರಯಾಣಿಕರಿಗೆ ಮತ್ತು ಡ್ರೈವರ್ ಗೆ ಬಸ್ ನಲ್ಲಿ ಏನೋ ಬದಲಾವಣೆ ಆಗುತ್ತಿರುವ ಅನುಮಾನ ಮೂಡಿದೆ. ತಕ್ಷಣ ಬಸ್ ನಿಲ್ಲಿಸಿ ಪರೀಕ್ಷಿಸಿದಾಗ ಬಸ್ ನ ಎಂಜಿನಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಬಸ್ ಪೂರ್ತಿ ಹರಡುತ್ತಿರುವುದು ಕಂಡು ಬಂದಿದೆ. ಇದ್ರಿಂದ ಭಯಭೀತರಾಗಿ ತಕ್ಷಣ ಬಸ್ ನೊಳಗಿದ್ದ ಪ್ರಯಾಣಿಕರು ಕೆಳಗೆ ಇಳಿದಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಬೆಂಕಿಯ ತೀವ್ರತೆ ಹೆಚ್ಚಾಗಿ ಬಸ್ ಧಗಧಗನೆ ಹೆದ್ದಾರಿಯಲ್ಲೇ ಹೊತ್ತಿ ಉರಿದಿದೆ.

    ಪರಿಣಾಮ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಸ್ ಸಂಪೂರ್ಣ ಭಸ್ಮವಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಖಾಸಗಿ ಬಸ್, ಓಮ್ನಿ ಕಾರ್ ಮಧ್ಯೆ ಡಿಕ್ಕಿ- ಕಾರ್ ನಲ್ಲಿದ್ದ ವ್ಯಕ್ತಿ ದುರ್ಮರಣ

    ಖಾಸಗಿ ಬಸ್, ಓಮ್ನಿ ಕಾರ್ ಮಧ್ಯೆ ಡಿಕ್ಕಿ- ಕಾರ್ ನಲ್ಲಿದ್ದ ವ್ಯಕ್ತಿ ದುರ್ಮರಣ

    ಮಂಗಳೂರು: ಖಾಸಗಿ ಬಸ್ ಹಾಗೂ ಓಮ್ನಿ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚ್ಲಂಪಾಡಿಯಲ್ಲಿ ನಡೆದಿದೆ.

    ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೇಶ್ರೀ ಹೆಸರಿನ ಖಾಸಗಿ ಬಸ್ ಹಾಗೂ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಉಡುಪಿ ಮೂಲದ ಓಮ್ನಿ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಕಾರ್ಕಳ ಮೂಲದ 28 ವರ್ಷದ ಸಂದೇಶ್ ಎಂಬವರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಮೃತದೇಹವನ್ನು ನೆಲ್ಯಾಡಿಯ ಆಸ್ಪತ್ರೆಯಲ್ಲಿರಿಸಲಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಕಮರಿಗೆ ಉರುಳಿದ್ದು ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

    ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

     

  • ವಿಡಿಯೋ: ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲೇ ಹೊತ್ತಿ ಉರಿಯಿತು 25 ಪ್ರಯಾಣಿಕರಿದ್ದ ಬಸ್!

    ವಿಡಿಯೋ: ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲೇ ಹೊತ್ತಿ ಉರಿಯಿತು 25 ಪ್ರಯಾಣಿಕರಿದ್ದ ಬಸ್!

    ವಿಜಯನಗರಂ: 25 ಮಂದಿ ಪ್ರಯಾಣಿಕರನ್ನು ತುಂಬಿದ್ದ ಖಾಸಗಿ ಬಸ್ಸೊಂದು ಬೆಳ್ಳಂಬೆಳಗ್ಗೆಯೇ ನಡುರಸ್ತೆಯಲ್ಲಿಯೇ ಧಗಧಗನೇ ಹೊತ್ತಿ ಉರಿದ ಘಟನೆ ಇಂದು ನಡೆದಿದೆ.

    ಈ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

    ವಿಜಯಲಕ್ಷ್ಮೀ ಎಂಬ ಹೆಸರಿನ ಖಾಸಗಿ ಬಸ್ ಈ ಅವಘಡಕ್ಕೆ ತುತ್ತಾಗಿದೆ. ಅರಕು ಎಂಬಲ್ಲಿಂದ ವಿಜಯನಗರಂಗೆ ತೆರಳುತ್ತಿದ್ದ ಬಸ್ಸಿನಲ್ಲಿ 25 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಕೆಲ ಪ್ರಯಾಣಿಕರಿಗೆ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಗಮನಕ್ಕೆ ಬಂದಿದೆ.

    ಕೂಡಲೇ ಪ್ರಯಾಣಿಕರೆಲ್ಲರೂ ಬಸ್ ನಿಂದ ಇಳಿದಿದ್ದಾರೆ. ಎಲ್ಲರೂ ಬಸ್ ನಿಂದ ಇಳಿಯುತ್ತಿದ್ದಂತೆಯೇ ಬೆಂಕಿಯ ಜ್ವಾಲೇ ಇಡೀ ಬಸ್ ಗೆ ಪಸರಿಸಿದ್ದು, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಈ ದೃಶ್ಯವನ್ನು ಕೆಲ ಪ್ರಯಾಣಿಕರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಶಾರ್ಟ್ ಸರ್ಕ್ಯೂಟ್  ನಿಂದ ಈ ಅವಘಡ ಸಂಭವಿಸಿರಬಹುದೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

    https://www.youtube.com/watch?v=i9UXP2p3FGc

    https://www.youtube.com/watch?v=WnGbiFmwmm4