Tag: ಖಾಸಗಿ ಬಸ್

  • ಮಂಗಳಮುಖಿಗೆ ಫೋನ್ ಮಾಡಿ ಕಿರುಕುಳ – ಖಾಸಗಿ ಬಸ್ ಚಾಲಕನಿಗೆ ಬಿತ್ತು ಧರ್ಮದೇಟು

    ಮಂಗಳಮುಖಿಗೆ ಫೋನ್ ಮಾಡಿ ಕಿರುಕುಳ – ಖಾಸಗಿ ಬಸ್ ಚಾಲಕನಿಗೆ ಬಿತ್ತು ಧರ್ಮದೇಟು

    – ಮಂಗಳಮುಖಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಚಾಲಕ

    ಯಾದಗಿರಿ: ಮಂಗಳಮುಖಿಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ ಖಾಸಗಿ ಬಸ್ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.

    ಯಾದಗಿರಿ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಓರ್ವ ಖಾಸಗಿ ಬಸ್ ಚಾಲಕ ಮಂಗಳಮುಖಿಯ ನಂಬರ್ ಪಡೆದುಕೊಂಡು ನಿತ್ಯ ಕರೆ ಮಾಡಿ ಅಸಭ್ಯವಾಗಿ ಮಾತನಾಡಿ, ಲೈಂಗಿಕ ಕಿರುಕುಳ ನೀಡುತ್ತಿದ್ದ. ಚಾಲಕನಿಗೆ ಮಂಗಳಮುಖಿ ಎಷ್ಟು ತಿಳಿಸಿ ಹೇಳಿದರು, ಚಾಲಕ ಮಾತ್ರ ತನ್ನ ಚಾಳಿ ಮುಂದುವರಿಸಿದ್ದ. ಇದನ್ನೂ ಓದಿ: ಅಪ್ಪನಂತೆ ನಾನೂ ವಾಯುಪಡೆ ಸೇರ್ತೀನಿ: ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ವಿಂಗ್ ಕಮಾಂಡರ್ ಪುತ್ರಿ ಆಸೆ

    ಕಳೆದ ಎರಡು ತಿಂಗಳುಗಳಿಂದ ಇದೇ ಕಿರುಕುಳವನ್ನು ಚಾಲಕ ನೀಡ್ತಾಯಿದ್ದ. ಇದರಿಂದಾಗಿ ಕೋಪಗೊಂಡ ಮಂಗಳಮುಖಿ ಚಾಲಕನಿಗೆ ಫೋನ್ ಮಾಡಿ ಬಸ್ ನಿಲ್ದಾಣಕ್ಕೆ ಕರೆದು ತನ್ನ ಸ್ನೇಹಿತರಿಂದ ಬಿಸಿಬಿಸಿ ಕಜ್ಜಾಯ ನೀಡಿಸಿದ್ದಾಳೆ. ಧರ್ಮದೇಟು ತಿಂದ ಬಳಿಕ ಚಾಲಕ ಮಂಗಮುಖಿ ಕಾಲಿಗೆ ಬಿದ್ದ ಕ್ಷಮೆ ಕೇಳಿದ್ದಾನೆ. ಇದನ್ನೂ ಓದಿ: ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ನಾಳೆ ಕಾಂಗ್ರೆಸ್‍ಗೆ ಸೇರ್ಪಡೆ

  • ಖಾಸಗಿ ಬಸ್‍ಗಳಲ್ಲಿ ಪ್ರಯಾಣಿಕರ ಸುಲಿಗೆ – ಹಬ್ಬದ ಸೀಸನ್‍ನಲ್ಲಿ ಸಾರಿಗೆ ದಂಧೆ ಬಯಲು

    ಖಾಸಗಿ ಬಸ್‍ಗಳಲ್ಲಿ ಪ್ರಯಾಣಿಕರ ಸುಲಿಗೆ – ಹಬ್ಬದ ಸೀಸನ್‍ನಲ್ಲಿ ಸಾರಿಗೆ ದಂಧೆ ಬಯಲು

    ಬೆಂಗಳೂರು: ಗಣೇಶ ಹಬ್ಬಕ್ಕೆಂದು ಊರಿಗೆ ಹೊರಟವರಿಗೆ ಶಾಕ್. ಖಾಸಗಿ ಬಸ್ ಟಿಕೆಟ್ ದರ ಬಲು ದುಬಾರಿಯಾಗಿವೆ. ಹಬ್ಬದ ಹೆಸರಲ್ಲಿ ‘ಖಾಸಗಿ’ ಲೂಟಿ ನಡೆಯುತ್ತಿದ್ದು, ಸಾರಿಗೆ ಸಚಿವರೇ, ಸಚಿವ ಶ್ರೀರಾಮುಲು ಅವರೇ ಈ ಲೂಟಿಗೆ ಬ್ರೇಕ್ ಯಾವಾಗ ಎಂಬ ಪ್ರಶ್ನೆ ಜನಸಾಮಾನ್ಯರಲ್ಲಿ ಮೂಡಿದೆ.

    ರಿಯಾಲಿಟಿ ಚೆಕ್:
    ಖಾಸಗಿ ಬಸ್ ಗಳ ಲೂಟಿ ಸಂಬಂಧ ಪಬ್ಲಿಕ್ ಟಿವಿ ಮೊದಲಿಗೆ ರಿಯಾಲಿಟಿ ಚೆಕ್‍ಗೆ ಇಳಿದಿದ್ದು ಗಾಂಧಿನಗರದಲ್ಲಿ. ಟ್ರಾವೆಲ್ ಏಜೆನ್ಸಿ ಒಂದರಲ್ಲಿ ಧಾರವಾಡ, ಕಲಬುರಗಿಗೆ ಬಸ್ ಟಿಕೆಟ್ ಕೇಳಿದ ನಮ್ಮ ತಂಡ ಖಾಸಗಿ ಬಸ್ ಟಿಕೆಟ್ ರೇಟ್ ಕೇಳಿ ದಂಗಾಗಿ ಹೋಯ್ತು.

    ಮೌರ್ಯ ಸರ್ಕಲ್‍ನಲ್ಲಿ ಪಬ್ಲಿಕ್ ಟಿವಿ ಮತ್ತೊಂದು ರಿಯಾಲಿಟಿ ಚೆಕ್ ನಡೆಸ್ತು. ಬೆಂಗಳೂರಿನಿಂದ ಉಡುಪಿ, ಮಂಗಳೂರಿಗೆ ಟಿಕೆಟ್ ಕೇಳಿದ್ರೆ 1 ಸಾವಿರಕ್ಕಿಂತ ಕಡಿಮೆ ಹೇಳೇ ಇಲ್ಲ. ಇನ್ನು ನವರಂಗ್‍ನ ಟ್ರಾವೆಲ್ಸ್ ಏಜೆನ್ಸಿ ಒಂದರಲ್ಲಿ ನಮ್ಮ ತಂಡ ಬೆಳಗಾವಿಗೆ ಖಾಸಗಿ ಬಸ್ ಟಿಕೆಟ್ ಕೇಳಿದಾಗ ಬೆಂಗಳೂರಿನಿಂದ ಬೆಳಗಾವಿಗೆ ಹೊರಟವರ ಬಳಿ ಖಾಸಗಿ ಬಸ್‍ಗಳ ಸುಲಿಗೆ ಹೇಗಿದೆ ಅನ್ನೋದು ಬಯಲಾಯ್ತು. ಇದನ್ನೂ ಓದಿ: ಒಗ್ಗಟ್ಟು ಇಲ್ಲದೆ 3 ಪಾಲಿಕೆಯಲ್ಲಿ ಸೋಲು – ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್‍ಗೆ ಡಿಕೆಶಿ ಚಾರ್ಜ್‍ಶೀಟ್

    ನವರಂಗ್‍ನಲ್ಲೇ ಮತ್ತೊಂದು ಟ್ರಾವೆಲ್ ಏಜೆನ್ಸಿಗೆ ಭೇಟಿ ನೀಡಿದಾಗ ಹುಬ್ಬಳ್ಳಿಗೆ ಬಸ್ ಟಿಕೆಟ್ ಕೇಳಿದ್ರೆ ಅಲ್ಲೂ ಅದೇ ಸುಲಿಗೆ ಮುಂದುವರಿದಿತ್ತು. ಹೀಗೆ ಹಬ್ಬಕ್ಕೆ ಖಾಸಗಿ ಸಾರಿಗೆ ಶಾಕ್ ನೀಡಿದ್ದು, ಬೆಂಗಳೂರಿನಿಂದ ಹೊರ ಜಿಲ್ಲೆಗಳಿಗೆ ಪ್ರಯಾಣ ದರ ಹೆಚ್ಚಳ ಮಾಡಿದೆ. ಇದನ್ನೂ ಓದಿ: ಒಗ್ಗಟ್ಟು ಇಲ್ಲದೆ 3 ಪಾಲಿಕೆಯಲ್ಲಿ ಸೋಲು – ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್‍ಗೆ ಡಿಕೆಶಿ ಚಾರ್ಜ್‍ಶೀಟ್

  • ಬೇಂದ್ರೆ ಖಾಸಗಿ ಬಸ್ ಸಂಚಾರಕ್ಕಿಲ್ಲ ಬ್ರೇಕ್-ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

    ಬೇಂದ್ರೆ ಖಾಸಗಿ ಬಸ್ ಸಂಚಾರಕ್ಕಿಲ್ಲ ಬ್ರೇಕ್-ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

    ಧಾರವಾಡ/ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸಂಚರಿಸುತ್ತಿದ್ದ ಬೇಂದ್ರೆ ಬಸ್‍ಗೆ ಪರ್ಯಾಯ ಮಾರ್ಗ ಸೂಚಿಸಿದ್ದನ್ನು ಆಕ್ಷೇಪಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ತಾತ್ಕಾಲಿಕ ಆದೇಶ ನೀಡಿದ್ದು. ಇದರಿಂದಾಗಿ ಮಹಾನಗರ ಮಧ್ಯೆ ಬೇಂದ್ರೆ ಬಸ್‍ಗೆ ಸದ್ಯಕ್ಕೆ ಬ್ರೇಕ್ ಇಲ್ಲದಂತಾಗಿದ್ದು, ಯಥಾಪ್ರಕಾರ ಸಂಚರಿಸಬಹುದಾಗಿದೆ.

    2003ರಿಂದ ಹುಬ್ಬಳ್ಳಿ-ಧಾರವಾಡ ಮಧ್ಯೆ ಬೇಂದ್ರೆ ಬಸ್ ಸಂಚರಿಸುತ್ತಿದ್ದವು. ಇತ್ತೀಚಿಗೆ ಇಲ್ಲಿ ಆರಂಭವಾದ ಬಹು ನಿರೀಕ್ಷಿತ ಬಿಆರ್​ಟಿಎಸ್ ಗೆ ನಿರೀಕ್ಷಿತ ಆದಾಯ ಬರುತ್ತಿರಲಿಲ್ಲ. ಇದಕ್ಕೆ ಬೇಂದ್ರೆ ಬಸ್ ಸಂಚಾರವೇ ಕಾರಣವೆಂದು ಅದರ ಸೇವೆ ಸ್ಥಗಿತಗೊಳಿಸಬೇಕೆಂಬ ಬೇಡಿಕೆ ಬಿಆರ್​ಟಿಎಸ್ ಸಂಸ್ಥೆಯದಾಗಿತ್ತು. ಆದರೆ ಬೇಂದ್ರೆ ಸಾರಿಗೆ ಸಂಸ್ಥೆ ಪರ್ಯಾಯ ಮಾರ್ಗವಾದರೂ ಸೂಚಿಸಿ ಅಥವಾ ಇಲ್ಲೇ ಮುಂದುವರಿಯಲು ಅವಕಾಶ ಕಲ್ಪಿಸಿ ಎಂಬ ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕಳೆದ ತಿಂಗಳು ಇಲ್ಲಿ ಸಂಚರಿಸುತ್ತಿದ್ದ 41 ಬೇಂದ್ರೆ ಬಸ್‍ಗಳಿಗೆ ಪರ್ಯಾಯ ಮಾರ್ಗ ಸೂಚಿಸಿ ಆದೇಶಿಸಿತ್ತು.

    ಎಲ್ಲೆಲ್ಲಿ ಪರ್ಯಾಯ ಮಾರ್ಗ:
    ಬೆಳಗಾವಿ-ಅಥಣಿ-ವಿಜಯಪುರ-15, ಹುಬ್ಬಳ್ಳಿ-ಬಾಗಲಕೋಟ-ವಿಜಯಪುರ-15, ಹಾಗೂ ಹುಬ್ಬಳ್ಳಿ-ಗದಗ ನಡುವೆ 11 ಒಟ್ಟು 41 ವಾಹನಗಳಿಗೆ ಸಂಚರಿಸಲು ಅನುಮತಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನು ವಿರೋಧಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿತ್ತು. ಈಗ ಸೂಚಿಸಿರುವ ಪರ್ಯಾಯ ಮಾರ್ಗಗಳು ಆದಾಯ ಗಳಿಸುವ ಮಾರ್ಗಗಳಾಗಿವೆ. ಮೊದಲೇ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯೂ ಹಾನಿಯಲ್ಲಿದೆ. ಖಾಸಗಿ ವಾಹನಗಳಿಗೆ ಅನುಮತಿಸಿದರೆ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ ಎಂದು ತನ್ನ ವಾದ ಮಂಡಿಸಿತ್ತು.

    ಎರಡೂ ಕಡೆಯ ವಾದ- ಪ್ರತಿವಾದ ಆಲಿಸಿದ ಹೈಕೋರ್ಟ್ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮನವಿಯನ್ನು ಪುರಸ್ಕರಿಸಿದೆ. ಅಲ್ಲದೇ ಸದ್ಯಕ್ಕೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ಮಿಕನಂತೆ ಲಾರಿಯಿಂದ ಅಕ್ಕಿ ಚೀಲ ಇಳಿಸಿದ ಮಾಜಿ ಸಚಿವ ಸಂತೋಷ್ ಲಾಡ್

    ಇದರಿಂದಾಗಿ ಪರ್ಯಾಯ ಮಾರ್ಗಗಳಲ್ಲಿ ಬೇಂದ್ರೆ ಬಸ್‍ಗಳು ಸಂಚರಿಸುವುದಿಲ್ಲ. ಜೊತೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿರುವುದರಿಂದ ಹುಬ್ಬಳ್ಳಿ-ಧಾರವಾಡ ಮಧ್ಯೆ ಇನ್ನಷ್ಟು ದಿನ ಬೇಂದ್ರೆ ಬಸ್ ಸಂಚಾರ ಅಬಾಧಿತ ಎಂಬಂತಾಗಿದೆ.

  • ಶಿವಮೊಗ್ಗದಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.25 ರಷ್ಟು ಹೆಚ್ಚಳಕ್ಕೆ ನಿರ್ಧಾರ

    ಶಿವಮೊಗ್ಗದಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.25 ರಷ್ಟು ಹೆಚ್ಚಳಕ್ಕೆ ನಿರ್ಧಾರ

    – ರಸ್ತೆ ಸಾರಿಗೆ ಪ್ರಾಧಿಕಾರದ ಸಭೆ
    – ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿಕೆ

    ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ.25 ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವಂತೆ ಜಿಲ್ಲೆಯಲ್ಲಿಯೂ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಖಾಸಗಿ ಮತ್ತು ಕೆಎಸ್‌ಆರ್‌ಟಿಸಿ ಬಸ್‍ಗಳ ನಡುವೆ ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಎರಡು ಕಡೆಯವರು ಸಹಕರಿಸಬೇಕು. ಸರ್ಕಾರಿ ಬಸ್ ನಿಲ್ದಾಣದ ಒಳಗೆ ಖಾಸಗಿಯವರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವ ಬಸ್‍ಗಳನ್ನು ತಡೆದು ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಸೂಚಿಸಿದ್ದಾರೆ.

    ಆಟೋ ರಿಕ್ಷಾ ಪ್ರಯಾಣದ ಕನಿಷ್ಟ ದರವನ್ನು ರೂ.40ಕ್ಕೆ ಪರಿಷ್ಕರಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಟ ದರ ಸೇರಿದಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20 ಕಿ.ಮೀ ವ್ಯಾಪ್ತಿಯಲ್ಲಿ ಆಟೋ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

    ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹೊಸ ಆಟೋ ಪರವಾನಿಗೆ ಅವಕಾಶ ನೀಡಲಾಗುತ್ತಿಲ್ಲ. ಇಲೆಕ್ಟ್ರಿಕಲ್ ಆಟೋಗಳಿಗೆ ಪರವಾನಿಗೆ ಅಗತ್ಯವಿಲ್ಲ. ಆದರೆ ಅದರ ಚಾಲಕರು ಸಹ ಸಮವಸ್ತ್ರವನ್ನು ಧರಿಸಬೇಕು. ಆಟೋ ಮೀಟರ್ ಹಾಕದಿರುವ ಬಗ್ಗೆ ಹೆಚ್ಚಿನ ದರ ವಸೂಲು ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಅದಕ್ಕೆ ಅವಕಾಶ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಮೀಟರ್ ಹಾಕಿ ಆಟೋ ಚಲಾಯಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಕೆಲವು ವಾಹನಗಳಲ್ಲಿ ಕಣ್ಣು ಕುಕ್ಕುವ ಎಲ್‍ಇಡಿ ಹೆಡ್‍ಲೈಟ್ ಅಳವಡಿಕೆಯಿಂದ ಅಪಘಾತಗಳು ಸಂಭವಿಸಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ವಾಹನಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಆರ್‌ಟಿಒ ಶ್ರೀಧರ್, ವಿವಿಧ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬೊಮ್ಮಾಯಿ ಜನತಾದಳದ ಸಿಎಂ – ಎಚ್‍ಡಿ ಕುಮಾರಸ್ವಾಮಿ

  • ಟ್ಯಾಕ್ಸ್ ಮನ್ನಾಕ್ಕೆ ಕಾಯುತ್ತಿವೆ ಕರಾವಳಿಯ 3,000 ಖಾಸಗಿ ಬಸ್‍ಗಳು

    ಟ್ಯಾಕ್ಸ್ ಮನ್ನಾಕ್ಕೆ ಕಾಯುತ್ತಿವೆ ಕರಾವಳಿಯ 3,000 ಖಾಸಗಿ ಬಸ್‍ಗಳು

    – ಉಡುಪಿಯಲ್ಲಿ 2 ವರ್ಷದಿಂದ ತುಕ್ಕು ಹಿಡಿಯುತ್ತಿವೆ

    ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.3ರ ಆಸುಪಾಸಿನಲ್ಲಿದೆ. ಅನ್ ಲಾಕ್ 2.ಓ ಚಾಲ್ತಿಯಲ್ಲಿದೆ. ಸಾರ್ವಜನಿಕ ಸಂಚಾರ ವ್ಯವಸ್ಥೆ ಎರಡು ವರ್ಷದಿಂದ ನೆಲಕ್ಕಚ್ಚಿದ್ದು, ಬಸ್ ಮಾಲಕರು ಬರ್ಬಾದ್ ಆಗಿ ಹೋಗಿದ್ದೇವೆ ಎಂದು ಸಂಕಟ ವ್ಯಕ್ತಪಡಿಸಿದ್ದಾರೆ.

    ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಸುಮಾರು 3000 ಖಾಸಗಿ ಬಸ್ಸುಗಳು ಇವೆ. ಲಾಕ್ ಡೌನ್ ಸಂದರ್ಭ ಎಲ್ಲರಂತೆ ಬಸ್ ವ್ಯವಹಾರಕ್ಕೂ ರೋಗ ಆವರಿಸಿತ್ತು. ಸಾವಿರಾರು ಕಾರ್ಮಿಕರ ಕುಟುಂಬ ಎರಡು ವರ್ಷದಿಂದ ಸಂಕಷ್ಟಕ್ಕೆ ಸಿಲುಕಿವೆ.

    ಬಸ್ ಗಳ ಟ್ಯಾಕ್ಸ್ ಕಟ್ಟಲಾಗದೆ ಟಯರ್ ಕಿತ್ತು ಆರ್ ಟಿಒಗೆ ಸರೆಂಡರ್ ಮಾಡಿದವರು ಈ ತಿಂಗಳೂ ಓಡಾಟ ಆರಂಭ ಮಾಡಿಲ್ಲ. ಇತ್ತೀಚಿನ ಕಠಿಣ ಪರಿಸ್ಥಿತಿಯಲ್ಲಿ ಬಸ್ ವ್ಯವಹಾರ ನಡೆಸುವುದು ಕಷ್ಟ ಎಂಬ ಅಭಿಪ್ರಾಯಕ್ಕೆ ಬಸ್ ಮಾಲಕರು ಹಾಗೂ ನಿರ್ವಾಹಕರು ಬಂದಿದ್ದಾರೆ. ಇದನ್ನೂ ಓದಿ: ಬೆಳ್ಳಂದೂರು ಡಿನೋಟಿಫಿಕೇಷನ್ ಕೇಸ್: ಸಿಎಂ ಯಡಿಯೂರಪ್ಪಗೆ ಸಂಕಷ್ಟ

    ಕಳೆದ ಹದಿನೈದು ತಿಂಗಳಿನಿಂದ ನಿರಂತರ ಲಾಕ್ ಡೌನ್ ಡೀಸೆಲ್ ಬೆಲೆ ಏರಿಕೆ, ದಿನದಿಂದ ದಿನಕ್ಕೆ ಏರುತ್ತಿರುವ ಬ್ಯಾಂಕ್ ಸಾಲದ ಬಡ್ಡಿಯಿಂದಾಗಿ ಈ ಪರಿಸ್ಥಿತಿಯಲ್ಲಿ ಖಾಸಗಿ ಬಸ್ ಓಡಿಸುವುದು ಸಾಧ್ಯವಿಲ್ಲ. ನಮ್ಮಲ್ಲಿ 6 ಬಸ್ ಗಳಿವೆ. ಇದನ್ನೇ ನಂಬಿ ಸರಿಸುಮಾರು ಹದಿನೈದು ಕುಟುಂಬಗಳು ಜೀವಿಸುತ್ತಿವೆ. ಕಳೆದ 15 ತಿಂಗಳಿನಲ್ಲಿ ಕೇವಲ ಮೂರು ತಿಂಗಳು ಮಾತ್ರ ನಾವು ವ್ಯವಹಾರ ಮಾಡಿದ್ದೇವೆ. ವ್ಯಾಪಾರ ಮಾಡಲಿ, ಮಾಡದಿರಲಿ ಬ್ಯಾಂಕಿನಿಂದ ಪಡೆದ ಸಾಲದ ಬಡ್ಡಿ ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದೆ ಎಂದು ಬಸ್ ಉದ್ಯಮಿ ಉಚ್ಚಿಲದ ಬಸ್ ಮಾಲಕರಾದ ಸಲೀಮ್ ನೋವು ತೋಡಿಕೊಂಡಿದ್ದಾರೆ.

    ನಮ್ಮಲ್ಲಿರುವ ಎಲ್ಲಾ ಆರು ಬಸ್ಸುಗಳಿಗೆ ಬ್ಯಾಂಕಿನಿಂದ ಸಾಲ ಪಡೆಯಲಾಗಿದೆ. ಒಂದು ತಿಂಗಳ ಬಡ್ಡಿ ಮನ್ನಾ ಮಾಡಲಿಲ್ಲ. ಡೀಸೆಲ್ ದರ ದಿನದಿಂದ ದಿನಕ್ಕೆ ಏರುತ್ತಿದೆ. ಈ ಪರಿಸ್ಥಿತಿಯಲ್ಲಿ ಯಾವೊಬ್ಬ ಖಾಸಗಿ ಬಸ್ ಮಾಲೀಕನು ಬಸ್ಸ್ ಬಿಡಲು ಪ್ರಯತ್ನಿಸಲಾರ. ಈಗ ಸರ್ಕಾರದಿಂದ ನಮಗೆ ಸಹಾಯ ಸಿಕ್ಕರೆ ಬಸ್ ಓಡಿಸಲು ಪ್ರಯತ್ನ ಮಾಡಬಹುದು. ಪ್ರೋತ್ಸಾಹಧನ ಸಿಗದಿದ್ದರೆ, ಟ್ಯಾಕ್ಸ್ ಮನ್ನಾ ಆಗದಿದ್ದರೆ ಬೇರೆ ದಾರಿಯನ್ನು ಕಂಡುಕೊಳ್ಳಬೇಕಾದ ಪರಿಸ್ಥಿತಿ ಇದೆ ಎಂದು ಸಲೀಮ್ ಹೇಳಿದ್ದಾರೆ.

  • ಶಿವಮೊಗ್ಗದಲ್ಲಿ ಖಾಸಗಿ ಬಸ್‍ಗಳ ಸಂಚಾರ ಆರಂಭ

    ಶಿವಮೊಗ್ಗದಲ್ಲಿ ಖಾಸಗಿ ಬಸ್‍ಗಳ ಸಂಚಾರ ಆರಂಭ

    ಶಿವಮೊಗ್ಗ: ಕೊರೊನಾ ಎರಡನೇ ಅಲೆಯ ಲಾಕ್‍ಡೌನ್ ಗೆ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಗಳ ಸಂಚಾರ ಇಂದಿನಿಂದ ಆರಂಭಗೊಂಡಿದೆ. ಆದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಮಾತ್ರ ವಿರಳವಾಗಿದೆ.

    ಬಸ್ ಸಂಚಾರ ಆರಂಭವಾದ ಮೊದಲ ದಿನ ಸುಮಾರು 100ಕ್ಕೂ ಹೆಚ್ಚು ಬಸ್ ಗಳು ಇಂದು ರಸ್ತೆಗೆ ಇಳಿದಿವೆ. ಮಂಗಳೂರು, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಿಂದ ಶಿವಮೊಗ್ಗಕ್ಕೆ ಖಾಸಗಿ ಬಸ್ ಗಳು ಸಂಚಾರ ನಡೆಸುತ್ತವೆ. ಅಲ್ಲದೆ ಶಿವಮೊಗ್ಗ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹಾಗೂ ಗ್ರಾಮೀಣ ಭಾಗಗಳಿಗೆ ಖಾಸಗಿ ಬಸ್ ಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತವೆ.

    ನಗರ ಸಾರಿಗೆ ಬಸ್ ಗಳು ಸಹ ರಸ್ತೆಗೆ ಇಳಿದಿದ್ದು, ಖಾಸಗಿ ಬಸ್ ಗಳು ರಸ್ತೆಗಿಳಿದ ಬೆನ್ನಲ್ಲೇ ನಗರ ಖಾಸಗಿ ಸಾರಿಗೆ ಬಸ್ ಗಳು ಸಹ ರಸ್ತೆಗಿಳಿದಿವೆ. ನಗರ ಸಾರಿಗೆಯಲ್ಲಿ 65 ಬಸ್ ಗಳಿದ್ದು, ಅವುಗಳಲ್ಲಿ ಇಂದು ಕೇವಲ 10 ರಿಂದ 15 ನಗರ ಸಾರಿಗೆ ಬಸ್ ಗಳು ರಸ್ತೆಗಿಳಿದಿವೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕಫ್ರ್ಯೂ ಇರುವುದರಿಂದ ಇಂದು ಕಡಿಮೆ ಬಸ್ ಗಳು ಓಡಾಡುತ್ತಿವೆ. ಈ ತಿಂಗಳ ಕೊನೆಯೊಳಗೆ ಎಲ್ಲ ಬಸ್ ಗಳು ನಿಧಾನವಾಗಿ ರಸ್ತೆಗಿಳಿಯಲಿವೆ ಎನ್ನುತ್ತಾರೆ ಖಾಸಗಿ ಬಸ್ ಮಾಲೀಕರು.

  • ಸಾರಿಗೆ ಅಧಿಕಾರಿಗಳ ವಿರುದ್ಧ ಖಾಸಗಿ ಬಸ್ ಚಾಲಕರ ಆಕ್ರೋಶ

    ಸಾರಿಗೆ ಅಧಿಕಾರಿಗಳ ವಿರುದ್ಧ ಖಾಸಗಿ ಬಸ್ ಚಾಲಕರ ಆಕ್ರೋಶ

    ಮೈಸೂರು: ಸಾರಿಗೆ ಅಧಿಕಾರಿಗಳು ಮತ್ತು ಖಾಸಗಿ ಬಸ್‍ಗಳ ಚಾಲಕರು, ನಿರ್ವಾಹಕರ ನಡುವೆ ವಾಗ್ವಾದ ನಡೆದಿರುವ ಘಟನೆ ಮೈಸೂರಿನ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ನಡೆದಿದೆ.

    ಸಾರಿಗೆ ನೌಕರರು ಮುಷ್ಕರ ಮುಂದುವರಿದ ಹಿನ್ನೆಲೆ ಕೆಎಸ್‌ಆರ್‌ಟಿಸಿ ಬಸ್‍ಗಳು ಇಲ್ಲದೇ ಖಾಸಗಿ ಬಸ್‍ಗಳು ಸೇವೆ ಸಲ್ಲಿಸುತ್ತಿವೆ. ಇದೀಗ ಒಂದೊಂದಾಗಿ ಕೆಎಸ್‌ಆರ್‌ಟಿಸಿ ಬಸ್‍ಗಳು ರಸ್ತೆಗಿಳಿಯುತ್ತಿದೆ.

    ಹಾಗಾಗಿ ಖಾಸಗಿ ಬಸ್‍ಗಳ ಚಾಲಕರು ಮತ್ತು ನಿರ್ವಾಹಕರು ನಾವು ಬೆಳಿಗ್ಗೆಯಿಂದಲೇ ನಮ್ಮ ಬಸ್‍ಗಳನ್ನು ತಂದು ನಿಲ್ಲಿಸಿ ಕಾದು ಕುಳಿತಿದ್ದೇವೆ. ನೀವು ಈಗ ಏಕಾಏಕಿ ಬಂದು ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಮಾಡಲಿ ಬಿಟ್ಟರೆ ನಮ್ಮ ಗತಿಯೇನು? ನಮ್ಮನ್ನ ಉಪಯೋಗಿಸಿಕೊಂಡು ಬಿಸಾಡುತ್ತೀರಾ? ಎಂದು ಆಕ್ರೋಶ ಹೊರಹಾಕಿದ್ದಾರೆ.

    ನಾಲ್ಕು ದಿನಗಳಿಂದ ನಾವು ಸೇವೆ ನೀಡುತ್ತಿದ್ದೇವೆ. ಆದರೆ ಈಗ ಬಂದಿರುವ ಕೆಎಸ್‌ಆರ್‌ಟಿಸಿ ಬಸ್ ಭರ್ತಿಯಾದರೆ ನಾವು ಏನು ಮಾಡುವುದು. ನಮ್ಮ ಬಸ್‍ಗಳನ್ನು ಮೊದಲು ಬಿಡಿ ಆಮೇಲೆ ನಿಮ್ಮ ಬಸ್‍ಗಳು ಹೊರಡಲಿ ಎಂದು ಖಾಸಗಿ ಬಸ್ ಚಾಲಕರು, ನಿರ್ವಾಹಕರ ಒತ್ತಾಯಿಸಿದ್ದಾರೆ.

    ಸದ್ಯ ಖಾಸಗಿ ಬಸ್‍ಗಳ ಸಂಚಾರಕ್ಕೆ ಮೊದಲ ಆದ್ಯತೆ ನೀಡಿ. ನಿಲ್ದಾಣ ತುಂಬಾ ಬಸ್ ಇದೆ. ಆದರೆ ಪ್ರಯಾಣಿಕರೇ ಇಲ್ಲದ ಸ್ಥಿತಿಯಾಗಿದೆ ಎಂದು ಕಿಡಿಕಾರಿದ್ದಾರೆ.

  • ವ್ಯಾಪಾರಕ್ಕೆಂದು ಬಂದ ವೃದ್ಧರು ಬಸ್ ಇಲ್ಲದೆ ಪರದಾಟ

    ವ್ಯಾಪಾರಕ್ಕೆಂದು ಬಂದ ವೃದ್ಧರು ಬಸ್ ಇಲ್ಲದೆ ಪರದಾಟ

    ಗದಗ: ಸಾರಿಗೆ ನೌಕರರ ಮುಷ್ಕರದ ಬಿಸಿ ವೃದ್ಧ ವ್ಯಾಪಾರಸ್ಥ ದಂಪತಿಗೂ ತಟ್ಟಿದೆ. ನಗರದ ಪಂಡಿತ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣದಲ್ಲಿ ವ್ಯಾಪಾರಕ್ಕೆಂದು ಬಂದ ವೃದ್ಧ ದಂಪತಿ ವಾಹನ ಸಿಗದೆ ಪರದಾಡುತ್ತಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದ ವೃದ್ಧರು ಮರಳಿ ತಮ್ಮೂರಿಗೆ ಹೋಗಲಾಗದೇ 2 ದಿನಗಳಿಂದ ಪರದಾಡುತ್ತಿರುವ ಸ್ಥಿತಿ ಬಗ್ಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸೋಮವಾರದಂದು ಕಸಬಾರಿಗೆ, ಸಣ್ಣಪುಟ್ಟ ಪ್ಲಾಸ್ಟಿಕ್ ವಸ್ತುಗಳ ವ್ಯಾಪಾರಕ್ಕೆಂದು ಜಿಲ್ಲೆಯ ಗ್ರಾಮೀಣ ಭಾಗಕ್ಕೆ ಬಂದಿದ್ದರು. ನಿನ್ನೆಯೇ ಇಳಕಲ್ ಗೆ ಹೋಗಬೇಕಿತ್ತು. ಆದರೆ 2 ದಿನಗಳಿಂದ ಬಸ್ ಇಲ್ಲದಕ್ಕೆ ಇಳಕಲ್ ಹೋಗಲಾಗದೇ ಬಸ್ ನಿಲ್ದಾಣದಲ್ಲಿ ಪರದಾಡುತ್ತಿದ್ದಾರೆ.

    ಖಾಸಗಿ ವಾಹನಗಳ ದುಪ್ಪಟ್ಟು ಹಣಕ್ಕೆ ಬೇಸತ್ತಿದ್ದಾರೆ. ಗದಗದಿಂದ ಗಜೇಂದ್ರಗಡಕ್ಕೆ 300 ರೂಪಾಯಿ ಹಣ ಕೇಳುತ್ತಿದ್ದಾರೆ. ಗಜೇಂದ್ರಗಡದಿಂದ ಮುಂದೆ ಇಳಕಲ್ ಗೆ ಹೋಗಬೇಕು. ಅಲ್ಲಿ ಎಷ್ಟು ಹಣ ಕೇಳುತ್ತಾರೋ ಗೊತ್ತಿಲ್ಲ. ಹೀಗಾದರೆ ಏನು ಮಾಡೋದು ಎಂದು ಸರ್ಕಾರ ಹಾಗೂ ಸಾರಿಗೆ ವಿರುದ್ಧ ಹಿಡಿಶಾಪ ಹಾಕಿದ್ದಾರೆ. ಲಾಕ್‍ಡೌನ್, ಬೆಲೆ ಏರಿಕೆ ಮಧ್ಯೆ ದುಡಿದ ಹಣ ಖಾಸಗಿ ವಾಹನಕ್ಕೆ ಕೊಡುವ ಸ್ಥಿತಿ ಬಂತಲ್ಲಾ ಅಂತ ಗೋಳಾಡಿದರು.

  • ಖಾಸಗಿ ಬಸ್, ಜೀಪ್ ನಡುವೆ ಅಪಘಾತ – ವೃದ್ಧೆ ಸಾವು

    ಖಾಸಗಿ ಬಸ್, ಜೀಪ್ ನಡುವೆ ಅಪಘಾತ – ವೃದ್ಧೆ ಸಾವು

    ಮಡಿಕೇರಿ: ಮಡಿಕೇರಿ-ವಿರಾಜಪೇಟೆ ರಸ್ತೆಯ ಬೇತ್ರಿ ಬಳಿ ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ ನಡೆದಿದ್ದು, ವೃದ್ಧೆಯೊಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.

    ದಿವಂಗತ ಮುಕ್ಕಾಟಿ ಪೂವಯ್ಯ ಅವರ ಪತ್ನಿ ಲಕ್ಷ್ಮಿ (70) ಮೃತಪಟ್ಟವರು. ಅವರ ಪುತ್ರ, ನಿವೃತ್ತ ಯೋಧ ಮೋಹನ್ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿರಾಜಪೇಟೆ ಕಡೆಯಿಂದ ಖಾಸಗಿ ಬಸ್ ಮಡಿಕೇರಿಯತ್ತ ಬರುತ್ತಿತ್ತು. ಮಡಿಕೇರಿ ಕಡೆಯಿಂದ, ಜೀಪು ವಿರಾಜಪೇಟೆ ಕಡೆ ತೆರಳುತ್ತಿತ್ತು. ಎರಡೂ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ರಸ್ತೆ ಬದಿಯ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ.

    ಘಟನೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಾರಿಗೆ ನೌಕರರ ಮುಷ್ಕರ, ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆ: ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್

    ಸಾರಿಗೆ ನೌಕರರ ಮುಷ್ಕರ, ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆ: ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್

    ಚಿಕ್ಕಮಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರೋ ಹಿನ್ನೆಲೆ ಜಿಲ್ಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಹೇಳಿದರು.

    ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕೆ.ಎಸ್.ಆರ್.ಟಿ.ಸಿ ನೌಕರರ ಮುಷ್ಕರ ಕುರಿತ ತುರ್ತು ಸಭೆ ನಡೆಸಿ ಸಾರ್ವಜನಿಕರಿಗಾಗಿ ಪರ್ಯಾಯ ವ್ಯವಸ್ಥೆ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಮಾಡುವ ಮಾರ್ಗಗಳಲ್ಲಿ ಸಾರ್ವಜನಿಕರಿಗೆ ಅನಾನೂಕೂಲ ಆಗಬಾರದೆಂಬ ದೃಷ್ಠಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗಳಿಂದ ಖಾಸಗಿ ಬಸ್ ಹಾಗೂ ಮ್ಯಾಕ್ಸಿ ಕ್ಯಾಬ್‍ಗಳು ಓಡಾಡಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

    ಜಿಲ್ಲೆಯ ಎಲ್ಲಾ ಸರ್ಕಾರಿ ಬಸ್ ನಿಲ್ದಾಣದಿಂದ ಖಾಸಗಿ ಬಸ್ಸುಗಳು ಸಂಚಾರ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಖಾಸಗಿ ಬಸ್‍ಗಳು ಹಾಗೂ ಮ್ಯಾಕ್ಸಿ ಕ್ಯಾಬ್‍ಗಳು ಕೆ.ಎಸ್.ಆರ್.ಟಿ.ಸಿ. ಸಾರಿಗೆ ನಿಗಮ ನಿಗದಿಪಡಿಸಿರುವ ದರದಲ್ಲಿಯೇ ಪ್ರಯಾಣಿಕರನ್ನು ಕರೆದೊಯ್ಯಲು ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದರು.

    ಪ್ರಯಾಣಿಕರಿಂದ ಯಾವುದೇ ದೂರುಗಳು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಖಾಸಗಿ ಬಸ್ ಮಾಲೀಕರಿಗೂ ಸೂಚಿಸಿದರು. ಪ್ರಯಾಣಿಕರ ಭದ್ರತಾ ದೃಷ್ಠಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾದ್ಯಂತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನೂ ಕಲ್ಪಿಸಿರೋದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹೇಳಿದ್ದಾರೆ.