Tag: ಖಾಸಗಿ ಬಸ್

  • ಖಾಸಗಿ ವಾಹನ ಮಾಲೀಕರ ಷರತ್ತಿಗೆ ಒಪ್ಪಿಗೆ – ಸರ್ಕಾರದ ಪರ್ಯಾಯ ವ್ಯವಸ್ಥೆ ಏನು?

    ಖಾಸಗಿ ವಾಹನ ಮಾಲೀಕರ ಷರತ್ತಿಗೆ ಒಪ್ಪಿಗೆ – ಸರ್ಕಾರದ ಪರ್ಯಾಯ ವ್ಯವಸ್ಥೆ ಏನು?

    ಬೆಂಗಳೂರು: ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎನ್ನುವ ದೃಷ್ಟಿಯಿಂದ ರಾಜ್ಯ ಸರ್ಕಾರ ಖಾಸಗಿ ವಾಹನಗಳಿಗೆ ಮಣೆ ಹಾಕಲು ನಿರ್ಧರಿಸಿದೆ.

    ಸಾವಿರ ಖಾಸಗಿ ಬಸ್, ಮ್ಯಾಕ್ಸಿಕ್ಯಾಬ್, ಮಿನಿ ಬಸ್, ಶಾಲಾ ಬಸ್, ಟಿಟಿ ಸೇರಿ ಒಟ್ಟು 32 ಸಾವಿರ ವಾಹನಗಳನ್ನು ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಸರ್ಕಾರ ನಿಗದಿ ಪಡಿಸಿದ ದರವನ್ನು ಪ್ರಯಾಣಿಕರಿಂದ ಖಾಸಗಿ ವಾಹನಗಳು ಪಡೆಯಬೇಕು ಎಂಬ ನಿರ್ದೇಶನ ನೀಡಿದೆ.

    ಈ ಬೆನ್ನಲ್ಲೇ, ಖಾಸಗಿ ವಾಹನಗಳಿಗೆ ಏಪ್ರಿಲ್ ತಿಂಗಳ ತೆರಿಗೆ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಖಾಸಗಿ ವಾಹನಗಳ ಓಡಾಟಕ್ಕೆ ಪೊಲೀಸ್ ಇಲಾಖೆ ಫ್ರೀ ಪರ್ಮಿಟ್ ನೀಡಿದೆ. ಖಾಸಗಿ ವಾಹನಗಳಿಗೆ ಸೂಕ್ತ ಭದ್ರತೆ ನೀಡಲು ಸಹ ಪೊಲೀಸ್ ಇಲಾಖೆ ನಿರ್ಧರಿಸಿದೆ.

    ಬೆಂಗಳೂರಿನಲ್ಲಿ ಮೆಟ್ರೋ ಸೇವೆಯ ಅವಧಿಯನ್ನು ಮಧ್ಯರಾತ್ರಿವರೆಗೂ ವಿಸ್ತರಿಸಲಾಗಿದೆ. ಐದು ನಿಮಿಷಕ್ಕೊಂದು ಮೆಟ್ರೋ ಓಡಾಡಲಿದೆ. ರಜೆಗಳು ಬರುತ್ತಿರುವ ಕಾರಣ ಹೆಚ್ಚು ರೈಲು ಓಡಿಸುವಂತೆ ರೈಲ್ವೇ ಇಲಾಖೆಗೂ ಮನವಿ ಸಲ್ಲಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

    ಇದಕ್ಕೂ ಮುನ್ನ ಖಾಸಗಿ ಬಸ್‍ಗಳನ್ನು ರಸ್ತೆಗೆ ಇಳಿಸಲು ಒಕ್ಕೂಟ ಷರತ್ತು ವಿಧಿಸಿತ್ತು. ಒಂದು ತಿಂಗಳು ರಸ್ತೆ ತೆರಿಗೆ ವಿಧಿಸಬಾರದು, 3 ತಿಂಗಳ ಮುಂಗಡ ತೆರಿಗೆಯನ್ನು ಒಂದು ತಿಂಗಳಿಗೆ ಇಳಿಸಬೇಕು. ಪ್ರತಿ ಬಸ್‍ಗೂ ಸೂಕ್ತ ಭದ್ರತೆ ನೀಡಿದಲ್ಲಿ ಬಸ್ ಓಡಿಸಲು ರೆಡಿ ಎಂದು ಖಾಸಗಿ ಬಸ್‍ಗಳ ಮಾಲೀಕರ ಸಂಘ ಹೇಳಿತ್ತು.

    ಡ್ಯೂಟಿಗೆ ಬರೋದು ಬಿಡೋದು ಅವರ ಇಲಾಖೆಗೆ ಸಂಬಂಧಿಸಿದ್ದು. ಆದರೆ ಯಾರಾದ್ರೂ ರಸ್ತೆಗಿಳಿದು ಪ್ರತಿಭಟನೆ ನಡೆಸಿ ಕಲ್ಲು ತೂರಾಟ ಮಾಡಿದರೆ ತಕ್ಕ ಶಾಸ್ತಿ ಮಾಡುತ್ತೇವೆ. ಮುಲಾಜಿಲ್ಲದೇ ಅರೆಸ್ಟ್ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಎಚ್ಚರಿಕೆ ನೀಡಿದ್ದಾರೆ.

  • ಹೈವೆಯಲ್ಲಿ ನಡೀತು ಖಾಸಗಿ ಬಸ್ ಸಿಬ್ಬಂದಿಯ ಫೈಟ್

    ಹೈವೆಯಲ್ಲಿ ನಡೀತು ಖಾಸಗಿ ಬಸ್ ಸಿಬ್ಬಂದಿಯ ಫೈಟ್

    -ರಾಡ್ ಹಿಡಿದು ಜಗಳವಾಡಿದ ಡ್ರೈವರ್, ಕಂಡಕ್ಟರ್

    ಉಡುಪಿ: ಖಾಸಗಿ ಬಸ್ ಸಿಬ್ಬಂದಿ ರಾಡ್ ಹಿಡಿದು ಹೆದ್ದಾರಿಯಲ್ಲಿ ಜಗಳವಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ನಡೆದಿದೆ.

    ಪ್ರಯಾಣಿಕರನ್ನು ಬಸ್ ಗೆ ಹತ್ತಿಸುವ ವಿಚಾರದಲ್ಲಿ ಎರಡು ಖಾಸಗಿ ಬಸ್ಸಿನ ಸಿಬ್ಬಂದಿ ನಡುವೆ ಜಟಾಪಟಿ ನಡೆದಿದೆ. ಕೋಹಿನೂರ್ ಬಸ್ ಚಾಲಕ ಸಫಿಯುಲ್ಲಾ, ಎಕೆಎಂಎಸ್ ಬಸ್ ಚಾಲಕ ಇರ್ಷಾದ್ ನಿರ್ವಾಹಕ ಪವನ್ ಶೆಟ್ಟಿ ನಡುವೆ ಗಲಾಟೆ ನಡೆದಿದೆ. ಈ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿ ರಾಷ್ಟ್ರೀಯ ಹೆದ್ದಾರಿ 66ಯಲ್ಲಿ ನಡೆದಿದೆ.

    ಖಾಸಗಿ ಬಸ್ ಸಿಬ್ಬಂದಿ ಜಗಳವನ್ನ ಪ್ರಯಾಣಿಕರ ಮೊಬೈಲಿನಲ್ಲಿ ಸೆರೆಯಾಗಿದೆ. ಪ್ರಯಾಣಿಕರು ಬಸ್ಸಲ್ಲಿ ಇರುವಾಗಲೇ ಈ ಘಟನೆ ನಡೆದಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಅಜಾಗರೂಕತೆಯಿಂದ ಅತಿ ವೇಗದಲ್ಲಿ ಎರಡೂ ಬಸ್ ಗಳನ್ನು ಚಲಾಯಿಸಲಾಗಿದೆ. ಬಸ್ ಓವರ್ ಟೇಕ್ ಮಾಡಿ ಅಡ್ಡಗಟ್ಟಿ ಬಸ್ ನ ಸಿಬ್ಬಂದಿ ರಾಡ್ ಹಿಡಿದು ಗೂಂಡಾಗಿರಿ ಮಾಡಿದ್ದಾರೆ.

    ನಾಲ್ವರು ಬಸ್ ಸಿಬ್ಬಂದಿ ಗೂಂಡಾ ವರ್ತನೆಯಿಂದ ಬಸ್‍ನಲ್ಲಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ. ಘಟನೆ ನಂತರ ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯ ಕುರಿತು ಆಕ್ರೋಶ ವ್ಯಕ್ತವಾಗಿದೆ. ಸಾರಿಗೆ ಹಾಗೂ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿದ್ದಾರೆ. ಕಾಪು ಠಾಣೆಯಲ್ಲಿ ದೂರು ದೂರು ದಾಖಲಾಗಿದೆ.

  • ಖಾಸಗಿ ಬಸ್‌ ಸಂಚಾರ ಬಂದ್‌ ಇಲ್ಲ – ಉಡುಪಿಯಲ್ಲಿ ಒಕ್ಕೂಟದ ಖಜಾಂಚಿ ಹೇಳಿಕೆ

    ಖಾಸಗಿ ಬಸ್‌ ಸಂಚಾರ ಬಂದ್‌ ಇಲ್ಲ – ಉಡುಪಿಯಲ್ಲಿ ಒಕ್ಕೂಟದ ಖಜಾಂಚಿ ಹೇಳಿಕೆ

    ಉಡುಪಿ : ಸೋಮವಾರದ ಖಾಸಗಿ ಬಸ್‌ ಸಂಚಾರ ಬಂದ್‌ ವಿಚಾರದಲ್ಲಿ ಸಂಘಟನೆಯ ಮುಖಂಡರಲ್ಲೇ ಭಿನ್ನ ರಾಗ ಎದ್ದಿದೆ. ಬೆಂಗಳೂರಿನ ಮುಖಂಡರು ಖಾಸಗಿ ಬಸ್‌ ಸಂಚಾರ ಸ್ಥಗಿತ ಮಾಡುತ್ತೇವೆ ಎಂದು ಹೇಳಿದ್ದರೆ, ಕರಾವಳಿ ಭಾಗದ ಮುಖಂಡರು ನಾವು ಬಸ್‌ ಸಂಚಾರ ಸ್ಥಗಿತ ಮಾಡುವುದಿಲ್ಲ ಎಂದು ವಿರುದ್ಧ ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್‌ ಟಿವಿಗೆ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಒಕ್ಕೂಟ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ಪ್ರತಿಕ್ರಿಯಿಸಿ, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿಕೆಗೂ ನಮಗೂ ಸಂಬಂಧ ಇಲ್ಲ. ರಾಜ್ಯದಲ್ಲಿ ನಾಳೆ ಖಾಸಗಿ ಬಸ್ ಬಂದ್ ಇಲ್ಲ. ರಾಜ್ಯಾದ್ಯಂತ ಎಂದಿನಂತೆ 8,500 ಬಸ್ ಓಡಾಡುತ್ತದೆ ಎಂದು ತಿಳಿಸಿದ್ದಾರೆ.

    ಈ ಹಿಂದೆಯೂ ನಮ್ಮ ಸಂಘಟನೆಯನ್ನು ಬೆದರಿಸುವ ಪ್ರಯತ್ನ ನಡೆದಿತ್ತು. ಇದೂವರೆಗೂ ನಾವು ಜನರಿಗೆ ಸಮಸ್ಯೆ ಮಾಡಿ ಬಂದ್‌ ಮಾಡಿಲ್ಲ.  ನಮ್ಮ ಸಮಸ್ಯೆಗಳು ಏನೇ ಇದ್ದರೂ ನ್ಯಾಯಯುತವಾಗಿ ಪರಿಹರಿಸುವ ಪ್ರಯತ್ನ ಮಾಡುತ್ತೇವೆ. ಎಂದಿನಂತೆ ಬಸ್‌ ಸಂಚಾರ ಇರಲಿದೆ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಾತನಾಡಿದ ನಟರಾಜ್‌ ಶರ್ಮಾ ಈ ಹಿಂದೆ ನಾವು ಹಲವು ಬೇಡಿಕೆಗಳನ್ನು ಇಟ್ಟಿದ್ದೇವೆ. ಆದರೆ ಈ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ. ಹೀಗಾಗಿ ನಾವು ಸರ್ಕಾರಿ ನೌಕರರ ಜೊತೆ ಬೆಂಬಲಕ್ಕೆ ನಿಂತಿದ್ದು ಖಾಸಗಿ ಬಸ್ಸುಗಳನ್ನು ರಸ್ತೆಗೆ ಇಳಿಸಲ್ಲ ಎಂದು ಎಂದು ತಿಳಿಸಿದ್ದರು.

    ಖಾಸಗಿ ವಾಹನಗಳ ಮುಖಂಡರು ಒಂದೊಂದು ಹೇಳಿಕೆ ನೀಡುತ್ತಿರುವ ಕಾರಣ ಖಾಸಗಿ ಬಸ್‌ ಸಂಚಾರ ಇರುತ್ತಾ? ಇಲ್ಲವೋ? ಎನ್ನುವುದು ಸೋಮವಾರ ಬೆಳಗ್ಗೆ ಸ್ಪಷ್ಟವಾಗಲಿದೆ.

  • ಒಂದೇ ನಂಬರ್, ಒಂದೇ ಕಲರ್ – ವರ್ಷಕ್ಕೆ 41 ಲಕ್ಷ ತೆರಿಗೆ ವಂಚಿಸಿದ್ದ ಬಸ್ ಮಾಲೀಕರು

    ಒಂದೇ ನಂಬರ್, ಒಂದೇ ಕಲರ್ – ವರ್ಷಕ್ಕೆ 41 ಲಕ್ಷ ತೆರಿಗೆ ವಂಚಿಸಿದ್ದ ಬಸ್ ಮಾಲೀಕರು

    – 3 ರಾಜ್ಯದಲ್ಲಿ ಅನಧಿಕೃತವಾಗಿ ಚಲಿಸುತ್ತಿದ್ದ 7 ಬಸ್‍ಗಳು ವಶ

    ಬೆಂಗಳೂರು: ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಅನಧಿಕೃತವಾಗಿ ಸಂಚರಿಸುತಿದ್ದ ಬಸ್ಸುಗಳನ್ನು ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಎರಡು ಬಸ್ಸುಗಳು ಒಂದೇ ನಂಬರ್, ಒಂದೇ ಕಲ್ಲರ್, ಒಂದೇ ಬಸ್ ವಿನ್ಯಾಸ ಹೊಂದಿದ್ದು, ಸರ್ಕಾರಕ್ಕೆ ಲಕ್ಷ ಲಕ್ಷ ವಂಚನೆ ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಬಸ್‍ಗಳನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.

    ನೆಲಮಂಗಲ ಹಾಗೂ ಯಶವಂತಪುರ ಆರ್.ಟಿ.ಓ ಅಧಿಕಾರಿಗಳ ಜಂಟಿ ಕಾರ್ಯಚರಣೆ ಮಾಡಿ ರಾಜ್ಯದಲ್ಲಿ ಅನಧಿಕೃತವಾಗಿ ಓಡಾಡುತ್ತಿದ್ದ ಏಳು ಬಸ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ ಈ ಬಸ್ ಮಾಲೀಕರು ಒಂದು ವರ್ಷಕ್ಕೆ ಸರ್ಕಾರಕ್ಕೆ 41 ಲಕ್ಷ ತೆರಿಗೆ ವಂಚಿಸುತ್ತಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ಸಾರಿಗೆ ಆಯುಕ್ತ ಶಿವಕುಮಾರ್ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.

  • 40 ಪ್ರಯಾಣಿಕರಿದ್ದ ಎರಡು ಬಸ್‍ಗಳು ಮುಖಾಮುಖಿ ಡಿಕ್ಕಿ

    40 ಪ್ರಯಾಣಿಕರಿದ್ದ ಎರಡು ಬಸ್‍ಗಳು ಮುಖಾಮುಖಿ ಡಿಕ್ಕಿ

    ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಹಾಳು ಗ್ರಾಮದ ಬಳಿಯ ರಾಜ್ಯ ಹೆದ್ದಾರಿ 65ರಲ್ಲಿ ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ.

    ಒಂದು ಬಸ್ ಚನ್ನಗಿರಿಯಿಂದ ಭದ್ರಾವತಿಯತ್ತ ಹೊರಟಿತ್ತು. ಮತ್ತೊಂದು ಬಸ್ ಭದ್ರಾವತಿಯಿಂದ ಚನ್ನಗಿರಿ ಕಡೆಗೆ ಹೋಗುತ್ತಿತ್ತು. ಜೋಳದಹಾಳು ಗ್ರಾಮದ ಬಳಿಯ ತಿರುವಿನಲ್ಲಿಎರಡೂ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಬಸ್ ಹಿಂದೆ ಬರುತ್ತಿದ್ದ ವ್ಯಾನ್ ದಿಢೀರ್ ಬ್ರೇಕ್ ಹಾಕಿದ್ದರಿಂದ, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದಿದೆ. ಇದನ್ನೂ ಓದಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸೇರಿ 11 ಜನರ ಸಾವು

    ಬಸ್ ಗಳಲ್ಲಿದ್ದ 40 ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚನ್ನಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ನಟಿ ಖುಷ್ಬೂ ಚಲಿಸುತ್ತಿದ್ದ ಕಾರು ಅಪಘಾತ

  • ನಿಯಂತ್ರಣ ತಪ್ಪಿ ಬಸ್ ನಿಲ್ದಾಣದೊಳಗೆ ನುಗ್ಗಿದ ಖಾಸಗಿ ಬಸ್ – ಓರ್ವ ಸಾವು

    ನಿಯಂತ್ರಣ ತಪ್ಪಿ ಬಸ್ ನಿಲ್ದಾಣದೊಳಗೆ ನುಗ್ಗಿದ ಖಾಸಗಿ ಬಸ್ – ಓರ್ವ ಸಾವು

    – ಪಾನಮತ್ತ ಚಾಲಕ ಅರೆಸ್ಟ್

    ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿಯಲ್ಲಿ ನಡೆದಿದೆ.

    ಇಂದು ಸಂಜೆ 8 ಗಂಟೆಗೆ ಈ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸು, ಎಂಟನೇ ಮೈಲಿಯಲ್ಲಿರುವ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಬಸ್ ನಿಲ್ದಾಣದ ಕಂಬಿಯೊಳಗೆ ಸಿಲುಕಿಕೊಂಡಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ.

    ಬಸ್ ಚಾಲಕ ಮದ್ಯಪಾನ ಮಾಡಿ ಬಸ್ ಓಡಿಸುತ್ತಿದ್ದ ಕಾರಣ ಈ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದೆ. ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸದ್ಯ ಗಾಯಾಳುಗಳನ್ನು ಪ್ರಕ್ರಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದು, ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಬಸ್ಸುನ್ನು ತೆರವುಗೊಳಿಸುವ ಕೆಲಸವನ್ನು ಮಾಡಿದ್ದಾರೆ.

  • ಖಾಸಗಿ ಬಸ್ ಬೆಂಕಿಗಾಹುತಿ- ಮಹಿಳೆ, ಇಬ್ಬರು ಮಕ್ಕಳು ಸೇರಿ ಐವರು ಸಜೀವ ದಹನ

    ಖಾಸಗಿ ಬಸ್ ಬೆಂಕಿಗಾಹುತಿ- ಮಹಿಳೆ, ಇಬ್ಬರು ಮಕ್ಕಳು ಸೇರಿ ಐವರು ಸಜೀವ ದಹನ

    ಚಿತ್ರದುರ್ಗ: ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ.

    ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಈ ಅವಘಡದಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು 5 ಮಂದಿ ಸಜೀವ ದಹನವಾಗಿದ್ದಾರೆ. ಖಾಸಗಿ ಬಸ್ ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ.

    ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದ್ದು, ಎಸ್‍ಪಿ ರಾಧಿಕಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಬಸ್ಸಿನಲ್ಲಿ ಎಲ್ಲರೂ ಮಲಗಿದ್ದ ಸಮಯದಲ್ಲೇ ಚಾಲಕನಿಂದ ಮಹಿಳೆಯ ಮೇಲೆ ರೇಪ್

    ಬಸ್ಸಿನಲ್ಲಿ ಎಲ್ಲರೂ ಮಲಗಿದ್ದ ಸಮಯದಲ್ಲೇ ಚಾಲಕನಿಂದ ಮಹಿಳೆಯ ಮೇಲೆ ರೇಪ್

    ನೊಯ್ಡಾ: ಚಲಿಸುತ್ತಿದ್ದ ಬಸ್ಸಿನಲ್ಲಿಯೇ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಅತ್ಯಾಚಾರ ನಡೆದ ಘಟನೆಯೊಂದು ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

    ಗೌತಮ್ ಬುದ್ದ ನಗರದಲ್ಲಿ ಮಹಿಳೆ ಬಸ್ಸಿನಿಂದ ಇಳಿದ ನಂತರ ತನ್ನ ಪತಿಯ ಬಳಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಕೂಡಲೇ ಮಹಿಳೆಯ ಪತಿ ಸ್ಥಳೀಯರ ಸಹಕಾರದಿಂದ ಆರೋಪಿ ಬಸ್ ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಲ್ಲದೆ ಚಾಲಕನ ವಿರುದ್ಧ ಎಫ್‍ಐಆರ್ ಕೂಡ ದಾಖಲಿಸಲಾಗಿದೆ.

    ನಡೆದಿದ್ದೇನು?
    ಮಂಗಳವಾರ- ಬುಧವಾರ ಮಧ್ಯರಾತ್ರಿಯ ವೇಳೆ ಲಕ್ನೋ-ಮಥುರಾ ಹೆದ್ದಾರಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಈ ಬಸ್ ಪ್ರತಾಪ್‍ಗರ್ ನಿಂದ ನೊಯ್ಡಾ ಕಡೆ ಚಲಿಸುತ್ತಿತ್ತು. ಬಸ್ಸಿನಲ್ಲಿ 12 ಮಂದಿ ಪ್ರಯಾಣಿಕರಿದ್ದು, ಎಲ್ಲರೂ ಗಾಢ ನಿದ್ದೆಗೆ ಜಾರಿದ್ದರು. ಎಲ್ಲರೂ ನಿದ್ದೆ ಮಾಡುತ್ತಿರುವ ಸಂದರ್ಭವನ್ನೇ ಉಪಯೋಗಿಸಿಕೊಂಡ ಬಸ್ಸಿನ ಸಿಬ್ಬಂದಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಈತನಿಗೆ ಮತ್ತಿಬ್ಬರು ಸಹಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪರಕರಣ ಸಂಬಂಧ ಪೊಲೀಸರು ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆಹಚ್ಚಲು ತಂಡ ರಚಿಸಿದ್ದಾರೆ. ಖಾಸಗಿ ಕಂಪನಿಗೆ ಸೇರಿದ್ದ ಬಸ್ ಇದಾಗಿದ್ದು, ಚಾಲಕನನ್ನು ಬಂಧಿಸಲಾಗಿದೆ. ಬಸ್ಸನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯ ಬಳಿಕ ಬಸ್ ಮಾಲೀಕ, ಇನ್ನೊಬ್ಬ ಚಾಲಕ ಹಾಗೂ ಕ್ಲೀನರ್ ಸೇರಿ ಮತ್ತಿಬ್ಬರು ಪರಾರಿಯಾಗಿದ್ದಾರೆ.

    ಸಂತ್ರಸ್ತೆಯಿಂದದೂರು ದಾಖಲಿಸಕೊಂಡ ಕೂಡಲೇ ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದೇವೆ. ಗಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿ ಹಾಗೂ ಬಸ್ಸನ್ನು ಸೀಜ್ ಮಾಡಲಾಗಿದೆ. ಬಸ್ಸಿನ ಮಾಲೀಕ ಹಾಗೂ ಮತ್ತಿಬ್ಬರು ತಲೆಮರೆಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಅಲ್ಲದೆ ಉಳಿದ ಪ್ರಯಾಣಿಕರಿಂದಲೂ ಹೇಳಿಕೆಗಳನ್ನು ಪಡೆದುಕೊಳ್ಳಲಾಗಿದೆ ಎಂದು ಶುಕ್ಲಾ ತಿಳಿಸಿದರು.

  • ಕೊಡಗಿನಲ್ಲಿ ಸೆಪ್ಟೆಂಬರ್ ಕೊನೆಯವರೆಗೂ ಖಾಸಗಿ ಬಸ್ ಸಂಚಾರ ಇಲ್ಲ

    ಕೊಡಗಿನಲ್ಲಿ ಸೆಪ್ಟೆಂಬರ್ ಕೊನೆಯವರೆಗೂ ಖಾಸಗಿ ಬಸ್ ಸಂಚಾರ ಇಲ್ಲ

    ಮಡಿಕೇರಿ: ಕೊರೊನಾ ಮಹಾಮಾರಿಯಿಂದ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಿದ್ದ ಸರ್ಕಾರ ಬಳಿಕ ಹಂತ ಹಂತವಾಗಿ ಸಡಿಲ ಮಾಡಿತು. ಲಾಕ್‍ಡೌನ್ ಸಡಿಲಿಕೆ ಮಾಡಿ ಸಾರಿಗೆ ಸಂಚಾರ ಆರಂಭವಾಗಿದ್ದರೂ ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರು ಮಾತ್ರ ಲಾಕ್‍ಡೌನ್ ನಲ್ಲೇ ಇದ್ದಾರೆ.

    ಖಾಸಗಿ ಬಸ್ಸುಗಳ ಸಂಚಾರವನ್ನೇ ನಂಬಿಕೊಂಡಿರುವ ಕೊಡಗಿಗೆ ಅವುಗಳ ಓಡಾಟವಿಲ್ಲದೆ ಜನರು ಪರಿಪಾಟಲು ಪಡುವಂತಾಗಿದೆ. 150ಕ್ಕೂ ಹೆಚ್ಚು ಖಾಸಗಿ ಬಸ್ಸುಗಳಿರುವ ಕೊಡಗಿನಲ್ಲಿ ಗ್ರಾಮೀಣ ಭಾಗಕ್ಕೆ ಅವುಗಳೇ ಸಂಪರ್ಕ ಸೇತುವೆ. ಲಾಕ್‍ಡೌನ್ ಸಡಿಲಿಕೆ ಮಾಡಿದ್ದರೂ ಬಸ್ಸುಗಳಲ್ಲಿ ಸಾರಿಗೆ ಸಂಚಾರ ಮಾಡುವುದಾದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲೇ ಬೇಕು ಅಂತಾ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದೆ. ಹೀಗಾಗಿ ಬಸ್ಸುಗಳಲ್ಲಿ ಅರ್ಧದಷ್ಟು ಸೀಟುಗಳಿಗಿಂತ ಹೆಚ್ಚು ಜನರನ್ನು ಕರೆದೊಯ್ಯುವಂತಿಲ್ಲ.

    ಈ ನಿಯಮದಂತೆ ಬಸ್ ಓಡಿಸುವುದಾದರೆ ತಮಗೆ ನಷ್ಟ ಆಗುತ್ತೆ. ಹೀಗಾಗಿ ಸೆಪ್ಟೆಂಬರ್ ತಿಂಗಳ ಕೊನೆಯವರೆಗೂ ಬಸ್ಸುಗಳನ್ನು ಓಡಿಸುವುದಿಲ್ಲ ಅಂತಾ ಖಾಸಗಿ ಬಸ್ ಮಾಲಿಕರ ಸಂಘ ನಿರ್ಧರಿಸಿದೆ.

    ಖಾಸಗಿ ಬಸ್ಸಿನಲ್ಲಿ ಇರೋದೆ 45 ಸೀಟುಗಳು ಅದರಲ್ಲಿ ಅರ್ಧ ಪ್ರಮಾಣ ಮಾತ್ರ ಸೀಟು ಹಾಕಿದರೆ ನಮಗೆ ಭಾರಿ ನಷ್ಟವಾಗುತ್ತದೆ. ಆದ್ದರಿಂದ ನಾವು ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಬಸ್ಸು ಓಡಿಸುವುದಾದರೆ ಸರ್ಕಾರ 6 ತಿಂಗಳ ಟ್ಯಾಕ್ಸ್ ರಿಯಾಯ್ತಿ ನೀಡಲಿ. ಇಲ್ಲದಿದ್ದರೆ ಸೆಪ್ಟೆಂಬರ್ ತಿಂಗಳ ಬಳಿಕವಷ್ಟೇ ಬಸ್ಸುಗಳ ಓಡಿಸಲು ನಿರ್ಧರಿಸಲಾಗುವುದು ಅನ್ನೋದು ಖಾಸಗೀ ಬಸ್ ಮಾಲೀಕರ ಸಂಘದ ನಿರ್ಧಾರ.

    ಕೊಡಗಿನ ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ಬಸ್ಸುಗಳೆ ಓಡಾಡುತ್ತಿದ್ದವು. ಆದರೆ ಇದೀಗ ಅವುಗಳು ಇಲ್ಲದಿದ್ದರೆ ಜಿಲ್ಲಾಡಳಿತ ಸರ್ಕಾರಿ ಸಾರಿಗೆಯನ್ನಾದರೂ ಓಡಿಸಲಿ. ಇಲ್ಲವೆ ಖಾಸಗಿ ಬಸ್ಸುಗಳ ಮಾಲೀಕರ ಸಂಘದವರನ್ನು ಕರೆದು ಅವರ ಸಮಸ್ಯೆಗಳನ್ನು ಆಲಿಸಿ ಬಸ್ ಓಡಿಸಲು ಸೂಚಿಸಲಿ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

  • ಮಂಗ್ಳೂರಲ್ಲಿ ರಸ್ತೆಗಿಳಿದ ಖಾಸಗಿ ಬಸ್ಸುಗಳು-ಕ್ಯಾಶ್‍ಲೆಸ್ ಪ್ರಯಾಣ, ಸೀಟಿಗೊಬ್ಬ ಪ್ರಯಾಣಿಕ

    ಮಂಗ್ಳೂರಲ್ಲಿ ರಸ್ತೆಗಿಳಿದ ಖಾಸಗಿ ಬಸ್ಸುಗಳು-ಕ್ಯಾಶ್‍ಲೆಸ್ ಪ್ರಯಾಣ, ಸೀಟಿಗೊಬ್ಬ ಪ್ರಯಾಣಿಕ

    – ಸ್ಯಾನಿಟೈಜರ್, ಮಾಸ್ಕ್ ಕಡ್ಡಾಯ

    ಮಂಗಳೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಾರ್ಚ್ 22ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರವು ಇಂದಿನಿಂದ ಆರಂಭಗೊಂಡಿದೆ. ಆ ಮೂಲಕ 71 ದಿನಗಳ ಕಾಲ ಚಲಿಸದೆ ಇದ್ದ ಬಸ್ಸುಗಳು ಕಾರ್ಯಾರಂಭ ಮಾಡಿದ್ದು, ಪ್ರಾರಂಭಕ್ಕೂ ಮುಂಚೆ ಸ್ಯಾನಿಟೈಜರ್ ಸಿಂಪಡಣೆ ಮಾಡಲಾಯಿತು.

    ಪ್ರಾರಂಭಿಕ ಹಂತದಲ್ಲಿ ಕೆಲವೇ ಬಸ್ಸುಗಳ ಓಡಾಟವನ್ನು ಪ್ರಾರಂಭಿಸಿ, ಪ್ರಯಾಣಿಕರ ಬೇಡಿಕೆಯ ಮೇರೆಗೆ ಮತ್ತು ಜನಸಂದಣಿ, ಸುರಕ್ಷಿತ ಅಂತರ ಕಾಪಾಡುವ ನಿಟ್ಟಿನಲ್ಲಿ ಬಸ್ಸುಗಳ ಸಂಖ್ಯೆ ಕ್ರಮೇಣ ಹೆಚ್ಚಿಸಲು ನಿರ್ಧರಿಸಲಾಗಿದೆ. ಮಂಗಳೂರಿನಿಂದ ಪುತ್ತೂರು, ಉಪ್ಪಿನಂಗಡಿ, ಮೂಡಬಿದ್ರೆ, ಉಡುಪಿ, ಕಾರ್ಕಳ, ಕಿನ್ನಿಗೋಳಿ ಸೇರಿ ಇತರ ಕಡೆಗೆ ಖಾಸಗಿ ಬಸ್ಸುಗಳ ಸಂಚಾರ ಆರಂಭಗೊಂಡಿದೆ.

    ಬಿಸಿರೋಡ್, ಉಪ್ಪಿನಂಗಡಿ, ಮೂಡಬಿದ್ರೆ ಮೂಲಕ ಗ್ರಾಮೀಣ ಪ್ರದೇಶಗಳಿಗೆ ಕೂಡ ಬಸ್ ಸಂಚಾರ ಆರಂಭಗೊಂಡಿದೆ. ಬಸ್ ಪ್ರಯಾಣ ವೇಳೆ ಪ್ರಯಾಣಿಕರು ಸುರಕ್ಷಿತ ಅಂತರ, ಮಾಸ್ಕ್ ಹಾಗೂ ಕೈಗಳಿಗೆ ಸ್ಯಾನಿಟೈಜರ್ ಬಳಸುವುದು ಹಾಗೂ ತಮ್ಮದೇ ಆದ ಆಹಾರ, ನೀರು ಉಪಯೋಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

    ಪ್ರಯಾಣಿಕರು ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ತಮ್ಮಲ್ಲಿಟ್ಟುಕೊಂಡು ಪ್ರಯಾಣಿಸಲು ಸೂಚಿಸಲಾಗಿದೆ. ವಾಹನಗಳ ಮಾರ್ಗಸೂಚಿ ಪ್ರಕಾರ ಬಸ್ ಸ್ಯಾನಿಟೈಜೇಶನ್, ಡ್ರೈವರ್ ಹಾಗೂ ಕಂಡೆಕ್ಟರ್ ಹ್ಯಾಂಡ್ ಗ್ಲೌಸ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು ಹಾಗೂ ವೈದ್ಯಕೀಯ ಪರೀಕ್ಷೆ ಮಾಡಿಕೊಳ್ಳಲು ಸೂಚಿಸಲಾಗಿದೆ.