ಸದಾ ಹೊಸತನ ಮೂಲಕ ದಾಖಲೆ ಬರೆಯುವ ಜೀ ಕನ್ನಡ ಮೊದಲ ಬಾರಿಗೆ zee5 ಒಟಿಟಿಯಲ್ಲಿ ಬಿಡುಗಡೆ ಮಾಡಿರುವ ‘ಅಯ್ಯನ ಮನೆ’ (Ayyana Mane) ವೆಬ್ ಸರಣಿಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ಕಳೆದ ತಿಂಗಳ 25ರಂದು zee5ನಲ್ಲಿ ಸ್ಟ್ರೀಮಿಂಗ್ ಕಂಡ ‘ಅಯ್ಯನ ಮನೆ’ ಮಿನಿ ವೆಬ್ ಸಿರೀಸ್ ಈಗ ದಾಖಲೆ ಬರೆದಿದೆ. ಜಾಜಿಯ ರೋಚಕ ಕಥೆಯ ಈ ವೆಬ್ ಸರಣಿ ಬರೋಬ್ಬರಿ 100 ಮಿಲಿಯನ್ ಮಿನಿಟ್ ವೀಕ್ಷಣೆ ಕಂಡಿದೆ. ಇದನ್ನೂ ಓದಿ:ಸೂರ್ಯ ನಟನೆಯ ಸಿನಿಮಾದಲ್ಲಿ ವಿಜಯ್ ದೇವರಕೊಂಡ?
7 ಸಂಚಿಕೆಗಳನ್ನು ಒಳಗೊಂಡಿರುವ ‘ಅಯ್ಯನ ಮನೆ’ ವೆಬ್ ಸರಣಿಯಲ್ಲಿ ‘ದಿಯಾ’ ಸಿನಿಮಾ ನಟಿ ಖುಷಿ ರವಿ (Kushi Ravi) ಜಾಜಿ ಪಾತ್ರದಲ್ಲಿ ನಟಿಸಿದ್ದಾರೆ. ‘ಒಲವಿನ ನಿಲ್ದಾಣ’ ಸೀರಿಯಲ್‌ನ ನಾಯಕ ನಟ ಅಕ್ಷಯ್ ನಾಯಕ್, ಹಾಗೂ ಕಾಂತಾರ ನಟಿ ಮಾನಸಿ ಸುಧೀರ್ ಕೂಡ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಜಾಜಿಯನ್ನು ಅವರ ಪತಿ ಜಾಜಿಯನ್ನು ಅತೀಯಾಗಿ ಪ್ರೀತಿಸುತ್ತಾನೆ. ಜಾಜಿ ಕೂಡ ಸಂಪ್ರದಾಯಿಕ ಹುಡುಗಿಯಾಗಿದ್ದು, ಇವಳ ಭಾವನಾತ್ಮಕ ಪಯಣ ಹಾಗೂ ಮನೆಯಲ್ಲಿನ ರಹಸ್ಯಗಳನ್ನು ಬಯಲು ಮಾಡುತ್ತಾ? ಇಲ್ಲವೇ ಇವಳೇ ರಹಸ್ಯವಾಗಿರುತ್ತಾಳಾ ಎಂಬ ಕುತೂಹಲಗಳಿವೆ. ಇದನ್ನೂ ಓದಿ:ಸಲ್ಮಾನ್ ಖಾನ್ ಮನೆ ಬಳಿ ಭದ್ರತಾ ಲೋಪ – ಮನೆಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ
‘ಅಯ್ಯನ ಮನೆ’ ವೆಬ್ ಸೀರೀಸ್ ಅನ್ನು ನಿರ್ದೇಶಕ ರಮೇಶ್ ಇಂದಿರಾ (Ramesh Indira) ಅವರು ನಿರ್ದೇಶಿಸಿದ್ದಾರೆ. ಈ ವೆಬ್ ಸಿರೀಸ್‌ನಲ್ಲಿ ರಮೇಶ್ ಇಂದಿರಾ, ಶೋಭರಾಜ್ ಪಾವೂರ್, ಅನಘಾ ನಾಗೇಶ್, ರಮ್ಯಾ ಶಂಕರ್, ಗೌರಿ ಕೃಷ್ಣ, ವಿಜಯ್ ಶೋಭರಾಜ್ ಸೇರಿದಂತೆ ಹಲವರು ನಟಿಸಿದ್ದಾರೆ. ಶೃತಿ ನಾಯ್ಡು ಅವರು ವೆಬ್ ಸರಣಿಗೆ ಬಂಡವಾಳ ಹೂಡಿದ್ದಾರೆ.
ಸದಾ ಹೊಸ ಬಗೆಯ ಪಾತ್ರಗಳ ಮೂಲಕ ಗಮನ ಸೆಳೆಯುವ ‘ದಿಯಾ’ (Dia) ಖ್ಯಾತಿಯ ಖುಷಿ ರವಿ (Kushee Ravi) ಕನ್ನಡ ಹಾಗೂ ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮಿನಿ ವೆಬ್ ಸಿರೀಸ್ ಕಥೆ ಹೇಳಲು ರೆಡಿಯಾಗಿದ್ದಾರೆ. ನಟಿ ಖುಷಿಗೆ ‘ಸಪ್ತಸಾಗರದಾಚೆ ಎಲ್ಲೋ’ ಖ್ಯಾತಿಯ ರಮೇಶ್ ಇಂದಿರಾ (Ramesh Indira) ಆ್ಯಕ್ಷನ್ ಕಟ್ ಹೇಳಿದ್ದಾರೆ. ʻಲವ್ ಯೂ ಮನುʼ ಎನ್ನುತ್ತ ಭಯ ಹುಟ್ಟಿಸಿದ್ದ ರಮೇಶ್ ಮತ್ತೆ ನಿರ್ದೇಶನದ ಕ್ಯಾಪ್ ಧರಿಸಿದ್ದಾರೆ.
ವೆಬ್ ಸೀರೀಸ್‌ಗೆ ‘ಅಯ್ಯನ ಮನೆ’ ಎಂದು ಕ್ಯಾಚಿ ಟೈಟಲ್ ಇಡಲಾಗಿದೆ. ಪ್ರತಿ ಮನೆಯೂ ಸ್ವರ್ಗವಾಗಿರುವುದಿಲ್ಲ. ಅಲ್ಲಿ ಎಷ್ಟೋ ಮುಚ್ಚಿಟ್ಟ ವಿಷಯಗಳು ಇರುತ್ತವೆ ಅನ್ನೋದನ್ನು ಈ ಮಿನಿ ಸೀರೀಸ್ ಮೂಲಕ ರಮೇಶ್ ಇಂದಿರಾ ಹೇಳಲು ಹೊರಟಿದ್ದಾರೆ. ಇದನ್ನೂ ಓದಿ:ಸಿನಿಮಾ ಸೋತ್ರೂ ಶ್ರೀವಲ್ಲಿಗೆ ಬೇಡಿಕೆ- ಶಾಹಿದ್ ಕಪೂರ್‌ಗೆ ರಶ್ಮಿಕಾ ಜೋಡಿ
ರಮೇಶ್ ಇಂದಿರಾ ನಿರ್ದೇಶನದಲ್ಲಿ ಮೂಡಿ ಬರ್ತಿರುವ ‘ಅಯ್ಯನ ಮನೆ’ ವೆಬ್ ಸೀರೀಸ್‌ಗೆ ಶೃತಿ ನಾಯ್ಡು ಪ್ರೊಡಕ್ಷನ್ ನಿರ್ಮಾಣ ಮಾಡಿದೆ. ಏಳು ಎಪಿಸೋಡ್ ಹೊಂದಿರುವ ವೆಬ್ ಸೀರೀಸ್‌ನಲ್ಲಿ ಖುಷಿ ರವಿ, ಅಕ್ಷಯ್ ನಾಯಕ್, ಮಾನಸಿ ಸುಧೀರ್ ಅಭಿನಯಿಸಿದ್ದಾರೆ. ಇದು ಭಯ, ನಂಬಿಕೆ ಮತ್ತು ವಿಧಿ ಘರ್ಷಿಸುವ ಕಥೆಯನ್ನೊಳಗೊಂಡಿದ್ದು, ಇದೇ ತಿಂಗಳ 25ರಿಂದ ಜೀ5 ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಚಿಕ್ಕಮಗಳೂರಿನ ಅಯ್ಯನ ಮನೆ ಕುಟುಂಬದಲ್ಲಿ ಅಡಗಿರುವ ಸತ್ಯಗಳ ಸುತ್ತಕಥೆ ಸಾಗುತ್ತದೆ. ಇದೊಂದು ಮಿಸ್ಟ್ರಿ ಕಥೆಯೊಳಗೊಂಡಿದ್ದು, ಪ್ರೇಕ್ಷಕರನ್ನು ಪ್ರತಿ ಕ್ಷಣ ಎಕ್ಸೈಟ್ ಆಗುವಂತೆ ಮಾಡುತ್ತದೆ. ಈಗಾಗಲೇ ಹಲವು ಹಿಟ್ ಚಿತ್ರ ಕೊಟ್ಟುರುವ ರಮೇಶ್ ಇಂದಿರಾ ಹೊಸ ಬಗೆಯ ಕಥೆಯ ಮೂಲಕ ಒಟಿಟಿ ಪ್ರೇಕ್ಷಕರನ್ನು ತಲುಪಲಿದ್ದಾರೆ. ಇದನ್ನೂ ಓದಿ:ತಮಿಳಿನತ್ತ ಕನ್ನಡದ ನಟ- ಚಿಯಾನ್ ವಿಕ್ರಮ್ ಸಿನಿಮಾದಲ್ಲಿ ರಮೇಶ್ ಇಂದಿರಾ
‘ಅಯ್ಯನ ಮನೆ’ ವೆಬ್ ಸೀರೀಸ್ ಬಗ್ಗೆ ನಿರ್ದೇಶಕರಾದ ರಮೇಶ್ ಇಂದಿರಾ ಮಾತನಾಡಿ, ಅಯ್ಯನ ಮನೆ ರೋಚಕತೆ ಜೊತೆಗೆ ಭಯ, ನಂಬಿಕೆ ಮತ್ತು ಫ್ಯಾಮಿಲಿ ಕಥೆಯೊನ್ನೊಳಗೊಂಡಿದೆ. ಈ ವೆಬ್ ಸರಣಿ ಕರ್ನಾಟಕ ಸಂಸ್ಕೃತಿ, ಸಂಪ್ರದಾಯದವನ್ನು ಅನಾವರಣ ಮಾಡುತ್ತದೆ. ಅಯ್ಯನ ಮನೆ ವೆಬ್ ಸರಣಿ ಪ್ರೇಕ್ಷಕರನ್ನು ಸೀಟಿನ ತುದಿಗೆ ಕುರುವಂತೆ ಮಾಡುತ್ತದೆ ಎಂದರು.
ಜಾಜಿ ಪಾತ್ರ ಮಾಡಿರುವ ಖುಷಿ ರವಿ ಮಾತನಾಡಿ, ಮುಗ್ದತೆ, ಗಂಡನ ಪ್ರೀತಿಯ ಹೆಂಡತಿ, ಸಂಪ್ರದಾಯಕ್ಕೆ ನಡೆದುಕೊಳ್ಳುವ ಹೆಣ್ಣು ಮಗಳಾಗಿ ನಟಿಸಿದ್ದೇನೆ. ಇದೊಂದು ಎಮೋಷನ್ ಪಯಣ. ಜೊತೆಗೆ ಅನೇಕ ರಹಸ್ಯಗಳ ಕಥಾಹಂದರ. ನಾನು ವೆಬ್ ಸರಣಿ ನೋಡಲು ಕಾತರಳಾಗಿದ್ದೇನೆ ಎಂದು ತಿಳಿಸಿದ್ದಾರೆ.
ಸೂರ್ಯನ ಕಿರಣಕ್ಕೆ ಮೈಯೊಡ್ಡಿ ನಮ್ರತಾ(Namratha Gowda), ಖುಷಿ (Kushee Ravi), ದಿವ್ಯಾ ನಿಂತಿರುವ ಫೋಟೋಗಳನ್ನು ನಮ್ರತಾ ಶೇರ್ ಮಾಡಿದ್ದಾರೆ. ದುಬೈನ ಮರುಳುಗಾಡಿನಲ್ಲಿ ಸೇರಿದಂತೆ ಹಲವು ಜಾಗಗಳಿಗೆ ಅವರು ಭೇಟಿ ಕೊಟ್ಟಿದ್ದಾರೆ. ಅದಷ್ಟೇ ಅಲ್ಲ, ವಿಭಿನ್ನ ಎನಿಸುವಂತಹ ತಿನಿಸುಗಳನ್ನು ಟೆಸ್ಟ್ ಮಾಡಿದ್ದಾರೆ.
ಅಂದಹಾಗೆ, ಕೆಲಸಕ್ಕೆ ಬ್ರೇಕ್ ನೀಡಿ ದುಬೈಗೆ ಹೋಗಿದ್ದಕ್ಕೆ ಕಾರಣವಿದೆ. ಅದವೇ ರಾಜ್ ಕಪ್ ಕ್ರಿಕೆಟ್ ಟೂರ್ನ್ಮೆಂಟ್ಗಾಗಿ ನಟಿಯರು ತೆರಳಿದ್ದಾರೆ. ಸದ್ಯ ದಿವ್ಯಾ ಉರುಡುಗ (Divya Uruduga) ‘ನಿನಗಾಗಿ’ ಸೀರಿಯಲ್ ನಾಯಕಿಯಾಗಿ ಬ್ಯುಸಿಯಾಗಿದ್ದಾರೆ.
ನಮ್ರತಾ ಗೌಡ ಅವರು ‘ಬಿಗ್ ಬಾಸ್ ಕನ್ನಡ 10’ ಆದ್ಮೇಲೆ ಹಲವು ಶೋ ಮತ್ತು ಜಾಹೀರಾತುಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಿನಿಮಾ ಮಾಡಲು ಉತ್ತಮ ಕಥೆಗಾಗಿ ಎದುರು ನೋಡ್ತಿದ್ದಾರೆ.ಖುಷಿ ರವಿ ಅವರು ಕನ್ನಡ ಮತ್ತು ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಚಿತ್ರಗಳ ಜೊತೆ ತೆಲುಗಿನಲ್ಲೂ ಖುಷಿಗೆ ಬೇಡಿಕೆಯಿದೆ.
ಅದಷ್ಟೇ ಅಲ್ಲ, ಸಾಕಿರುವ ರಣಹದ್ದನ್ನು ಕೈಯಲ್ಲಿ ಹಿಡಿದು ನಟಿಯರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ದಿವ್ಯಾ, ನಮ್ರತಾ, ಖುಷಿ ರಣಹದ್ದನ್ನು ಹಿಡಿದು ಖುಷಿಪಟ್ಟಿದ್ದಾರೆ.
ಅಂದಹಾಗೆ, ಕೆಲಸಕ್ಕೆ ಬ್ರೇಕ್ ನೀಡಿ ದುಬೈಗೆ ಹೋಗಿದ್ದಕ್ಕೆ ಕಾರಣವಿದೆ. ಅದವೇ ರಾಜ್ ಕಪ್ ಕ್ರಿಕೆಟ್ ಟೂರ್ನ್ಮೆಂಟ್ಗಾಗಿ ನಟಿಯರು ತೆರಳಿದ್ದಾರೆ. ಸದ್ಯ ದಿವ್ಯಾ ಉರುಡುಗ ‘ನಿನಗಾಗಿ’ (Ninagai) ಸೀರಿಯಲ್ ನಾಯಕಿಯಾಗಿ ಬ್ಯುಸಿಯಾಗಿದ್ದಾರೆ.
ನಮ್ರತಾ ಗೌಡ ಅವರು ‘ಬಿಗ್ ಬಾಸ್ ಕನ್ನಡ 10’ ಆದ್ಮೇಲೆ ಹಲವು ಶೋ ಮತ್ತು ಜಾಹೀರಾತುಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಿನಿಮಾ ಮಾಡಲು ಉತ್ತಮ ಕಥೆಗಾಗಿ ಎದುರು ನೋಡ್ತಿದ್ದಾರೆ.
ಈ ವರ್ಷದ ಆರಂಭದಿಂದಲೇ ಒಂದಷ್ಟು ಭಿನ್ನ ವಿಭಿನ್ನ ಬಗೆಯ ಸಿನಿಮಾಗಳು ತೆರೆಗಾಣುತ್ತಿವೆ. ಸೋಲು ಗೆಲುವುಗಳಾಚೆಗೆ ಇಂಥಾ ಪ್ರಯತ್ನಗಳು ನಡೆಯುತ್ತಲೇ ಇವೆ. ಇಂತಹ ಆಶಾದಾಯಕ ವಾತಾವರಣದ ಮುಂದುವರೆದ ಭಾಗವೆಂಬಂತೆ ರೂಪಗೊಂಡಿರುವ ಸಿನಿಮಾ ‘S/O ಮುತ್ತಣ್ಣ’. ಸೆಟ್ಟೇರಿದ ದಿನದಿಂದಲೂ ಟೈಟಲ್ ಹಾಗೂ ಕಥಾಹಂದರದ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘S/O ಮುತ್ತಣ್ಣ’ನಿಗೆ (S/o Muttanna) ಸಾಥ್ ಕೊಟ್ಟಿದ್ದಾರೆ.
ಪ್ರಣಂ ನಟನೆಯ ಸಿನಿಮಾದ ಟೀಸರ್ ಬಿಡುಗಡೆ ಬಳಿಕ ಮಾತನಾಡಿ ಡಾ.ಶಿವರಾಜ್ ಕುಮಾರ್, ದೇವರಾಜ್ ಅವರ ಫ್ಯಾಮಿಲಿ ಎಂದರೆ ನಮಗೆ ಅಭಿಮಾನ, ಪ್ರೀತಿ, ವಿಶ್ವಾಸ. ಟೀಸರ್ ನೋಡಿ ಖುಷಿಯಾಯ್ತು. ತಂದೆ- ಮಗನ ಬಾಂಧವ್ಯ ತುಂಬಾ ಚೆನ್ನಾಗಿ ತೆಗೆದುಕೊಂಡು ಹೋಗಿದ್ದಾರೆ. ಅಪ್ಪಾಜಿ ಜೊತೆ ನನ್ನ ಹಳೆ ನೆನಪುಗಳನ್ನು ನೋಡಿ ಖುಷಿಯಾಯ್ತು, ತಂದೆ ಮಗನ ಬಾಂಧವ್ಯದ ಸಿನಿಮಾ ಚೆನ್ನಾಗಿ ಹೋಗುತ್ತದೆ ಎಂಬ ಭರವಸೆ ಇದೆ. ಈ ಟೀಸರ್ ಸಮಾರಂಭದಲ್ಲಿ ಭಾಗಿಯಾಗಿರುವುದು ಖುಷಿ ಕೊಟ್ಟಿದೆ. ದೇವರಾಜ್ ಅವರ ಕುಟುಂಬದ ಜೊತೆ ನಿಲ್ಲುತ್ತೇವೆ. ಕನ್ನಡ ಇಂಡಸ್ಟ್ರಿಗೆ ಯಾರೇ ಆಗಲಿ ಸಪೋರ್ಟ್ ಮಾಡುತ್ತೇವೆ. ಯಾರೇ ಆಗಲಿ ನಮ್ಮ ಭಾಷೆ ಉಳಿಬೇಕು ಅಂದರೆ ಯಾವ ಹೀರೋ ನಟಿಸಿದರೂ ಆ ಸಿನಿಮಾಗಳು ಗೆಲ್ಲಬೇಕು ಎಂದರು.
ಹಿರಿಯ ನಟ ರಂಗಾಯಣ ರಘು ಮಾತನಾಡಿ, ಮುತ್ತಣ್ಣ ಟೈಟಲ್ ಯಾಕೆ ಇಟ್ಟಿದ್ದಾರೆ ಅನ್ನೋದು ನಿಮಗೆ ಗೊತ್ತಾಗಿರಬೇಕು. ಒರಿಜನಲ್ ಮುತ್ತಣ್ಣನೇ ಬಂದಿದ್ದಾರೆ. ಪುರಾತನ ಫಿಲ್ಮಂಸ್ ಹರಿಯಣ್ಣ ಶಿವಣ್ಣನಿಗೆ (Shivarajkumar) ದೊಡ್ಡ ಅಭಿಮಾನಿ. ಶಿವಣ್ಣನೇ ಕಾರ್ಯಕ್ರಮಕ್ಕೆ ಬರಬೇಕು ಎನ್ನುವುದು ಎಲ್ಲರ ಕನಸಾಗಿತ್ತು. ಯಂಗ್ ಡೈನಾಮಿಕ್ ಪ್ರಣಂಗೆ ಒಳ್ಳೆದಾಗಲಿ. ಇವರು ಬೆಳೆಯಬೇಕು, ಉಳಿಯಬೇಕು, ತಂದೆ- ತಾಯಿಯಂತೆಯೇ ಹೆಸರನ್ನು ಗಳಿಸಬೇಕು ಎನ್ನುವುದು ಯಾವುದೇ ಕಲಾವಿದರ ಮಕ್ಕಳಿಗಿರುವ ಆಸೆ. ಅದನ್ನು ಪ್ರಜ್ವಲ್ ಹಾಗೂ ಪ್ರಣಂ ಇಬ್ಬರಲ್ಲಿಯೂ ಇದೆ. ಪ್ರಣಂ ತುಂಬಾ ಚೆನ್ನಾಗಿ ನಟಿಸಿದ್ದಾರೆ ಎಂದರು.
ನಾಯಕ ಪ್ರಣಂ ದೇವರಾಜ್ (Pranam Devaraj) ಮಾತನಾಡಿ, ರಿಯಲ್ ಸನ್ ಆಫ್ ಮುತ್ತಣ್ಣ, ರೀಲ್ ಸನ್ ಆಫ್ ಮುತ್ತಣ್ಣನಿಗೆ ಬಂದು ಟೀಸರ್ ಮಾಡಿ ಕೊಟ್ಟಿರೋದು ಖುಷಿ ಕೊಟ್ಟಿದೆ. ನಾವೆಲ್ಲರೂ ಶಿವಣ್ಣನ ಅಭಿಮಾನಿ. ನಿಮ್ಮನ್ನು ನೋಡಿಕೊಂಡು ಬೆಳೆದಿರುವುದು. ನಿಮ್ಮ ಡ್ಯಾನ್ಸ್, ನಟನೆ, ಆಕ್ಷನ್ ಎಲ್ಲದಕ್ಕೂ ಅಭಿಮಾನಿ. ನಾನು ಸಾಕಷ್ಟು ಚಿಕ್ಕವನು ಅವರ ಬಗ್ಗೆ ಮಾತಾನಾಡಲು. ಮುಂದೆ ಬರುವ ಜನರೇಷನ್ ಗೆ ನೀವೇ ಸ್ಫೂರ್ತಿ. ಸಾಮಾನ್ಯ ಮನುಷ್ಯ ತಂದೆಯಾದ ಬಳಿಕ ರೋಲ್ ಮಾಡೆಲ್, ಟೀಚರ್, ಸ್ಟೋರಿ ಟೆಲ್ಲರ್ ಆಗ್ತಾರೆ. ಅಪ್ಪ ಆದ ಬಳಿಕ ಎಷ್ಟೋ ಕಥೆ ಹುಟ್ಟುತ್ತವೆ. ಅಪ್ಪ- ಮಗನ ಬಾಂಧವ್ಯವನ್ನು ಹೇಗೆ ಇರುತ್ತೇ ಅನ್ನೋದನ್ನು ಸನ್ ಆಫ್ ಮುತ್ತಣ್ಣದಲ್ಲಿ ಮಾಡಿದ್ದೇವೆ. ನಾನು ಸ್ವಲ್ಪ ಬೆಟ್ಟರ್ ಆಕ್ಟರ್ ಆಗಿದ್ದೇನೆ ಎಂದರೆ ಅದಕ್ಕೆ ನಿರ್ದೇಶಕರು ಕಾರಣ. ಇಡೀ ತಂಡ ಸಿನಿಮಾಗಾಗಿ ಸಾಕಷ್ಟು ಶ್ರಮಿಸಿದೆ ಎಂದು ತಿಳಿಸಿದರು.
ನಟಿ ಖುಷಿ ರವಿ (Kushee Ravi) ಮಾತನಾಡಿ, ಶಿವಣ್ಣ ನಮ್ಮ ಸಿನಿಮಾದ ಟೀಸರ್ ಲಾಂಚ್ ಮಾಡೋದಿಕ್ಕೆ ಬಂದಿರುವುದು ಖುಷಿ ಕೊಟ್ಟಿದೆ. ದೇವರಾಜ್ ಸರ್, ಅಮ್ಮ, ಪ್ರಜ್ವಲ್ ಸರ್, ರಾಗಿಣಿ ಅವರು ತುಂಬಾ ಸಪೋರ್ಟ್ ಮಾಡುತ್ತಾರೆ. ಸನ್ ಆಫ್ ಮುತ್ತಣ್ಣ, ಅಪ್ಪ- ಮಗನ ಎಮೋಷನ್ ಇರುವ ಸಿನಿಮಾ. ಇಡೀ ಕುಟುಂಬ ನೋಡುವಂತಹ ಸಿನಿಮಾ. ನಿಮ್ಮ ಬೆಂಬಲ ನಮ್ಮ ಮೇಲೆ ಇರಲಿದೆ ಎಂದು ತಿಳಿಸಿದರು.
ಎಮೋಷನ್ ನಿಂದಲೇ ಶುರುವಾಗುವ ಟೀಸರ್‌ನಲ್ಲಿ ಅಪ್ಪ- ಮಗನ ಬಾಂಧವ್ಯವನ್ನು ಬಹಳ ಸೊಗಸಾಗಿ ಕಟ್ಟಿಕೊಡಲಾಗಿದೆ. 1 ನಿಮಿಷ 46 ಸೆಕೆಂಡ್ ಇರುವ ಟೀಸರ್ ನಲ್ಲಿ ಡೈಲಾಗ್ ಗಳು ಕಾಡುತ್ತವೆ. ಪ್ರಣಂ ದೇವರಾಜ್ ಮಗನಾಗಿ, ರಂಗಾಯಣ ರಘು ಅಪ್ಪನಾಗಿ ಅಮೋಘವಾಗಿ ಅಭಿನಯಿಸಿದ್ದಾರೆ. ಅಕ್ಷರ ಕಲಿಸುವ ಅಪ್ಪ ಪ್ರತಿ ಹೆಜ್ಜೆಯಲ್ಲಿಯೂ ಜೊತೆಯಾಗುವ ಕ್ಯಾಪ್ಟನ್ ಆಗಿ ರಂಗಾಯಣ ರಘು ಇಷ್ಟವಾಗ್ತಾರೆ. ಅಪ್ಪನನ್ನು ತನ್ನ ಪ್ರಾಣಕ್ಕೂ ಮಿಗಿಲಾಗಿ ಪ್ರೀತಿಸುವ ಮಗನಾಗಿ ಪ್ರಣಂ ಗಮನಸೆಳೆಯುತ್ತಾರೆ.
ಶ್ರೀಕಾಂತ್ ಹುಣಸೂರು ‘S/O ಮುತ್ತಣ್ಣ’ನಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಣಂಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಸುಚೇಂದ್ರ ಪ್ರಸಾದ್, ಗಿರೀಶ್ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಪುರಾತನ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ SRK ಫಿಲ್ಮ್ಸ್ ಜೊತೆಗೂಡಿ ಈ ಸಿನಿಮಾ ನಿರ್ಮಾಣವಾಗಿದೆ. ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳಿಗೆ ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ.
ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಟ ಲಿಖಿತ್ ಶೆಟ್ಟಿ (Likith Shetty) ಪ್ರಸ್ತುತ ‘ಫುಲ್ ಮೀಲ್ಸ್’ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಾಯಕ ನಟನಾಗೂ ನಟಿಸುತ್ತಿದ್ದಾರೆ. ಈಗ ‘ಫುಲ್ ಮೀಲ್ಸ್’ (Full Meals) ಚಿತ್ರದ ನಾಯಕ ಲಿಖಿತ್ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ‘ಫುಲ್ ಮೀಲ್ಸ್’ ಚಿತ್ರತಂಡ ಲಿಖಿತ್ ಶೆಟ್ಟಿ ಬರ್ತ್‌ಡೇಗೆ (Birthday) ಶುಭಾಶಯ ಕೋರಿದೆ.
ಲಿಖಿತ್ ಶೆಟ್ಟಿ ಇಬ್ಬರು ನಾಯಕಿಯರ ಸಾಂಗತ್ಯದಲ್ಲಿರುವ ರೊಮ್ಯಾಂಟಿಕ್ ಥೀಮ್ ಹೊಂದಿರುವ ಈ ಸುಂದರವಾದ ಮೋಷನ್ ಪೋಸ್ಟರ್ ನೋಡುಗರ ಗಮನ ಸೆಳೆದಿದ್ದು, ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಹುತೇಕ ಸಂಪೂರ್ಣವಾಗಿದ್ದು, ಸದ್ಯ ರೀ ರೆಕಾರ್ಡಿಂಗ್ ನಡೆಯುತ್ತಿದೆ. ವರ್ಷಾಂತ್ಯದೊಳಗೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿರುವುದಾಗಿ ಲಿಖಿತ್ ಶೆಟ್ಟಿ ತಿಳಿಸಿದ್ದಾರೆ.
ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನಿಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಲಿಖಿತ್ ಶೆಟ್ಟಿ ಅವರಿಗಿದೆ. ಇದನ್ನೂ ಓದಿ:ಸಂಜಯ್ ದತ್ ಜೊತೆಗಿನ ಫೋಟೋ ಹಂಚಿಕೊಂಡ ಉಪ್ಪಿಯ ಟ್ರೋಲ್ ಹುಡುಗಿ ರೀಷ್ಮಾ
ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಿನೆಮಾಗೆ ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಚಿತ್ರಕ್ಕಿದೆ.
ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ಖುಷಿ ರವಿ (Kushee Ravi) ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದು, ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.
ಸಂಕಷ್ಟಕರ ಗಣಪತಿ, ಫುಲ್ ಮಿಲ್ಸ್ , ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ, ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ ಚಿತ್ರತಂಡ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಚಿತ್ರದ ಇಬ್ಬರು ನಾಯಕಿಯರಾದ ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಒಂದೇ ಬಾಳೆ ಎಲೆಯಲ್ಲಿ ಊಟ ಮಾಡುತ್ತಿರುವ ಪೋಸ್ಟರ್ ಇದಾಗಿದ್ದು, ಎಲ್ಲರೂ ಒಟ್ಟಿಗೆ ಸೇರಿ ಮಾಡುವ ಸಂಭ್ರಮವೇ ಹಬ್ಬ ಎಂಬ ಥೀಮ್ ಮೇಲೆ ತಯಾರಾಗಿರುವ ಈ ಪೋಸ್ಟರ್ ಸುಂದರವಾಗಿ ಕಾಣುತ್ತಿದೆ. ನೋಡುಗರ ಗಮನವನ್ನು ಸೆಳೆದಿದೆ. ಸಿನೆಮಾಗೆ ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲವು ಕೆಲಸಗಳು ಬಾಕಿಯಿದ್ದು, ಆದಷ್ಟು ಶೀಘ್ರದಲ್ಲಿ ಸಿನೆಮಾವನ್ನು ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡವಿದೆ.
ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಈ ಸಿನೆಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.
ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಈ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನವಿದೆ. ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಸೂರಜ್ ಲೋಕ್ರೆ, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ನಾಗೇಂದ್ರ ಅರಸ್, ಮೂಗು ಸುರೇಶ್ ಮುಂತಾದವರಿದ್ದಾರೆ.
ಯಂಗ್ ಡೈನಾಮಿಕ್ ಪ್ರಣಮ್ ದೇವರಾಜ್ (Pranam Devaraj) ನಟನೆಯ ’S/o ಮುತ್ತಣ್ಣ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಪ್ರಣಮ್ ಜನ್ಮದಿನದ ವಿಶೇಷವಾಗಿ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡ ಶುಭ ಕೋರಿದೆ. ಬೆಂಗಳೂರಿನ ಜಿಟಿ ಮಾಲ್‌ನಲ್ಲಿ ಯಂಗ್ ಡೈನಾಮಿಕ್ ಪ್ರಣಮ್ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿ, S/o ಮುತ್ತಣ್ಣ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಈ ವೇಳೆ, ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ:ದರ್ಶನ್ ಜೊತೆಗಿನ ಸಮಸ್ಯೆ ಬೇಗ ಹುಡುಕಿಕೊಳ್ಳಿ ಅಂತಿದ್ದಾರೆ ಸುದೀಪ್ ಫ್ಯಾನ್ಸ್
ನಾಯಕ ಪ್ರಣಮ್ ದೇವರಾಜ್ ಮಾತನಾಡಿ, S/o ಮುತ್ತಣ್ಣ ಶ್ರೀಕಾಂತ್ ಸರ್ ಫಸ್ಟ್ ಟೈಮ್ ಮನೆಗೆ ಬಂದಾಗ ಅವರು ಮಾತನಾಡಿದ ರೀತಿ ಕಥೆ ಹೇಳಿದ ರೀತಿಯಲ್ಲಿ ನಂಬಿಕೆ ಬಂತು. ಪ್ರಾಮಿಸ್ ಮಾಡಿದಕ್ಕಿಂತ ಸಖತ್ ಆಗಿ ಸಿನಿಮಾ ತೆಗೆದಿದ್ದಾರೆ. ಖುಷಿ ರವಿ (Kushee Ravi) ಅವರು ಎಂಥ ನಟಿ ಅನ್ನೋದು ‘ದಿಯಾ’ದಿಂದ (Dia) ಗೊತ್ತಾಗಿದೆ. ಅವರ ಜೊತೆ ಕೆಲಸ ಮಾಡಿದ್ದು, ಖುಷಿ ಕೊಟ್ಟಿದೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದರು.
ನಾಯಕಿ ಖುಷಿ ರವಿ ಮಾತನಾಡಿ, S/o ಮುತ್ತಣ್ಣ ಅಂತಾ ಹೇಳಿದ ತಕ್ಷಣ ಪಾಸಿಟಿವ್ ವೈಬ್ಸ್ ಬರುತ್ತದೆ. ಟೈಟಲ್ ತುಂಬಾ ಪವರ್ ಫುಲ್ ಆಗಿದೆ. ಟೈಟಲ್ ಕೇಳಿಯೇ ಸಿನಿಮಾ ಒಪ್ಪಿಕೊಂಡೆ. ನಾನು ಈ ಸಿನಿಮಾದ ಭಾಗವಾಗಿರುವುದಕ್ಕೆ ಖುಷಿ ಕೊಟ್ಟಿದೆ. ರಂಗಾಯಣ ರಘು ಸರ್ ಕ್ಯಾಮೆರಾ ಹೇಗೆ ಫೇಸ್ ಮಾಡಬೇಕು ಅನ್ನೋದನ್ನು ಹೇಳಿ ಕೊಟ್ಟರು. ಪ್ರಣಮ್ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ ಎಂದರು.
ನಿರ್ದೇಶಕ ಶ್ರೀಕಾಂತ್ ಮಾತನಾಡಿ, ದೇವರಾಜ್ ಸರ್ ಕಥೆ ಹೇಳಲು ಹೋದಾಗ ಎಲ್ಲಿ ಕೆಲಸ ಮಾಡಿದ್ದೀಯಾ. ನಿನ್ನ ಪ್ರೊಫೈಲ್ ಕೊಡು ಹೀಗೆ ಒಂದು ಮಾತು ಹೇಳದೆ ನಾನು ಹೇಳಿದ ಕಥೆಗೆ ಏನ್ ಮಾಡುತ್ತೀರಾ ಮಾಡಿ ಎಂದು ಬೆಂಬಲ ಕೊಟ್ಟರು. ಟೈಟಲ್ ಹೇಳುವಂತೆ ಇದು ಅಪ್ಪ-ಮಗನ ಬಾಂಧವ್ಯದ ಕಥೆ. ಸದ್ಯ ವಾರಣಾಸಿ ಭಾಗದ ಶೂಟಿಂಗ್ ಮುಗಿಸಿಕೊಂಡು ಬಂದಿದ್ದೇವೆ. ಸಾಂಗ್ ಬಾಕಿ ಇದೆ. ಪಾಂಡಿಚೆರಿಯಲ್ಲಿ ಶೂಟ್ ಮಾಡಲು ಯೋಜನೆ ಹಾಕಿಕೊಂಡಿದ್ದೇವೆ. ಫೆಬ್ರವರಿಯಲ್ಲಿ ಕುಂಬಳಕಾಯಿ ಹೊಡೆಯಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ. ಆ ನಂತರ ಉಳಿದ ತಾರಾಬಳಗ- ತಾಂತ್ರಿಕವರ್ಗದ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.
ನಿರ್ಮಾಪಕರು ಮಾತನಾಡಿ, ಕಥೆ ಬಗ್ಗೆ ತುಂಬಾ ಚರ್ಚೆ ಮಾಡಿ ಈ ಸಿನಿಮಾ ಮಾಡಿದ್ದೇವೆ. ಪ್ರಣಂ ಸರ್‌ಗೆ ಇದೇ ಕಥೆ ಮಾಡಬೇಕೆಂದು ಮಾಡಿದ್ದೇವೆ. ಕಥೆ ತುಂಬಾ ಚೆನ್ನಾಗಿ ಬಂದಿದೆ. ಮೇಕಿಂಗ್ ನಾವು ಅಂದುಕೊಂಡಂತೆ ಬಂದಿದೆ ಎಂದರು.
ಶ್ರೀಕಾಂತ್ ಹುಣಸೂರು ನಿರ್ದೇಶಿಸುತ್ತಿರುವ ‘S/o ಮುತ್ತಣ್ಣ’ ಸಿನಿಮಾದಲ್ಲಿ ಪ್ರಣಮ್ ದೇವರಾಜ್ ನಾಯಕನಾಗಿ ನಟಿಸುತ್ತಿದ್ದು, ಖುಷಿ ರವಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಮುಂತಾದವರ ತಾರಾಬಳಗವಿದೆ. ಟೈಟಲ್ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, ಪುರಾತನ ಫಿಲಂಸ್ ಬ್ಯಾನರ್ ನಡಿ ಎಸ್ ಆರ್ ಕೆ ಫಿಲ್ಮಂಸ್ ಸಹಕಾರದೊಂದಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘S/o ಮುತ್ತಣ್ಣ’ ಸಿನಿಮಾಗೆ ಸ್ಕೇಟ್ಟಿಂಗ್ ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಚಿತ್ರತಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ.
ಸಂಕಷ್ಟಕರ ಗಣಪತಿ, ಪಿ ಆರ್ ಕೆ ಪ್ರೊಡಕ್ಷನ್ಸ್ ನ ಫ್ಯಾಮಿಲಿ ಪ್ಯಾಕ್ ಚಿತ್ರಗಳ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ ಫುಲ್ ಮೀಲ್ಸ್ (Full Meals) ಚಿತ್ರದ ನಾಯಕಿ ಖುಷಿ ರವಿ (Khushi Ravi) ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ ಬರ್ತ್ ಡೇ (Likhit Shetty) ಫೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ಇತ್ತೀಚೆಗಷ್ಟೇ ಚಿತ್ರೀಕರಣ ಮುಗಿಸಿ, ಕುಂಬಳಕಾಯಿ ಶಾಸ್ತ್ರ ಮುಗಿಸಿದ ಚಿತ್ರತಂಡ, ಚಿತ್ರೀಕರಣ ಕೊನೆಯ ದಿನ, ಖುಷಿ ರವಿ ಅವರನ್ನು ನೆನಪಿಸಿಕೊಂಡ ತಕ್ಷಣ ಯಾವ ತಿನ್ನುವ ಪದಾರ್ಥ ನೆನಪಾಗುತ್ತದೆ ಎಂಬ ವಿಭಿನ್ನ ಪ್ರಶ್ನೆಗೆ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿ, ಆ ವೀಡಿಯೋವನ್ನು ಖುಷಿ ರವಿ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ.
ಚಿತ್ರದ ಮತ್ತೋರ್ವ ನಾಯಕಿ ತೇಜಸ್ವಿನಿ ಶರ್ಮ ಈ ವೀಡಿಯೋದ ರೂವಾರಿಯಾಗಿದ್ದು, ತನ್ನ ಸಹನಟಿ ಮತ್ತು ಸ್ನೇಹಿತೆಗೆ ಹುಟ್ಟು ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ. ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ‘ಫುಲ್ ಮೀಲ್ಸ್’ ನಲ್ಲಿ ಖುಷಿ ರವಿ ‘ಪೂಜಾ’ ಹೆಸರಿನ ಪಾತ್ರ ನಿರ್ವಹಿಸುತ್ತಿದ್ದು, ಇದುವರೆಗಿನ ಅವರ ಎಲ್ಲಾ ಪಾತ್ರಗಳಿಗಿಂತ ವಿಭಿನ್ನ ರೀತಿಯ ಪಾತ್ರ ಇದಾಗಿದ್ದು, ಜನರು ಪಾತ್ರವನ್ನು ಖಂಡಿತ ಇಷ್ಟಪಡುತ್ತಾರೆಂಬ ವಿಶ್ವಾಸವನ್ನು ಹೊಂದಿದ್ದಾರೆ.
ಯುವ ಪ್ರತಿಭೆ ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ ಚಿತ್ರಕ್ಕಿದೆ.
ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಸೂರಜ್ ಲೋಕ್ರೆ, ಹೊನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ದೊಡ್ಡ ತಾರಾ ಬಳಗವೇ ಇದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಆದಷ್ಟು ಬೇಗ ಮುಗಿಸಿ, ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಉತ್ಸಾಹದಲ್ಲಿ ಚಿತ್ರತಂಡವಿದೆ.
ದಿಯಾ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ನಾಯಕಿಯಾಗಿ ಗುರುತಿಸಿಕೊಂಡವರು ಖುಷಿ ರವಿ (Khushi Ravi). ದಿಯಾ ಬಳಿಕ ಕನ್ನಡದ ಜೊತೆಗೆ ಪರಭಾಷಾ ಚಿತ್ರಗಳಲ್ಲಿಯೂ ನಟಿಸುತ್ತಿರುವ ಅವರೀಗ ಮತ್ತೊಂದು ಕನ್ನಡದ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅದೇ ‘S/O ಮುತ್ತಣ್ಣ’.
ಯಂಗ್ ಡೈನಾಮಿಕ್ ಎಂದೇ ಕರೆಸಿಕೊಳ್ಳುತ್ತಿರುವ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿತ್ತಿರುವ ಈ ಸಿನಿಮಾದಲ್ಲಿ ಖುಷಿ ರವಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಅವರ ಹುಟ್ಟುಹಬ್ಬದ (Birthday)ಅಂಗವಾಗಿ ಈ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದ್ದು, ಸ್ಪೆಷಲ್ ಮೇಕಿಂಗ್ ವಿಡಿಯೋ ಕೂಡ ಬಿಡುಗಡೆ ಮಾಡಿ ಶುಭ ಕೋರಿದೆ.
ಪುರಾತನ ಫಿಲ್ಮಂಸ್ ಬ್ಯಾನರ್ ಅಡಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ ‘S/O ಮುತ್ತಣ್ಣ’ (S/O Muttanna) ಸಿನಿಮಾಗೆ ಶ್ರೀಕಾಂತ್ ಹುಣಸೂರು ಆಕ್ಷನ್ ಕಟ್ ಹೇಳುತ್ತಿದ್ದರೆ. ದೇವರಾಜ್ ಪುತ್ರ ಮತ್ತೊಮ್ಮೆ ಈ ಸಿನಿಮಾದ ಮೂಲಕ ಗೆಲುವಿನ ಪರೀಕ್ಷೆಗೆ ಮುಂದಾಗಿದ್ದಾರೆ.