Tag: ಖುಷಿ ರವಿ

  • ನಟ ಲಿಖಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್

    ನಟ ಲಿಖಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್

    ನಾಯಕ ಲಿಖಿತ್ ಶೆಟ್ಟಿ (Likhit Shetty) ಹುಟ್ಟು ಹಬ್ಬದ (Birthday) ಪ್ರಯುಕ್ತ ‘ಫುಲ್ ಮೀಲ್ಸ್’ (Full Meals) ಚಿತ್ರತಂಡ ಎರಡನೇ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಹಿಂದೆ ಕೂಡ ಬಿಡುಗಡೆಯಾಗಿದ್ದ ಪೋಸ್ಟರ್ ಕೂಡ ಎಲ್ಲರ ಗಮನ ಸೆಳೆದಿತ್ತು.

    ಈಗಾಗಲೇ ಚಿತ್ರದ 60 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಿಂದೆ ಸಂಕಷ್ಟಕರ ಗಣಪತಿ ಹಾಗೂ ಪಿ.ಆರ್.ಕೆ ಪ್ರೊಡಕ್ಷನ್ಸ್ ನಿರ್ಮಾಣದ ಫ್ಯಾಮಿಲಿ ಪ್ಯಾಕ್ ಚಿತ್ರಗಳ ಮೂಲಕ ಜನರಿಗೆ ಹತ್ತಿರವಾಗಿದ್ದ ನಾಯಕನಟ ಲಿಖಿತ್ ಶೆಟ್ಟಿ ‘ಫುಲ್ ಮೀಲ್ಸ್’ ಮೂಲಕ ನಟನೆಯೊಂದಿಗೆ ಪರಿಪೂರ್ಣ ನಿರ್ಮಾಪಕರೂ ಆಗಿದ್ದಾರೆ. ಇದನ್ನೂ ಓದಿ:ಚಿರಂಜೀವಿಯನ್ನು ಹಾಡಿ ಹೊಗಳಿದ ‘ಕಾವಾಲಾ’ ಬ್ಯೂಟಿ ತಮನ್ನಾ

    ಖುಷಿ ರವಿ (Khushi Ravi), ತೇಜಸ್ವಿನಿ ಶರ್ಮ (Tejaswini Sharma) ನಾಯಯಕಿರರಾಗಿದ್ದು, ಪ್ರಮುಖ ತಾರಾಗಣದಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್,. ಚಂದ್ರ ಕಲಾ ಮೋಹನ್, ರಾಜೇಶ್ ನಟರಂಗ, ರವಿ ಶಂಕರ ಗೌಡ, ಸುಜಯ್ ಶಾಸ್ತ್ರಿ, ರಮೇಶ್ ಪಂಡಿತ್, ಹೊನ್ನವಳ್ಳಿ ಕೃಷ್ಣ ಇದ್ದಾರೆ.

     

    ಎನ್.ವಿನಾಯಕ (N. Vinayak) ನಿರ್ದೇಶನದ ಈ ಚಿತ್ರಕ್ಕೆ, ಮನೋಹರ್ ಜೋಷಿ ಛಾಯಾಗ್ರಹಣವಿದೆ. ಹರೀಶ ರಾಜಣ್ಣ ಸಂಭಾಷಣೆ ಬರೆದಿದ್ದಾರೆ. ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲೆ,  ಗುರು ಕಿರಣ್ ಸಂಗೀತ ಫುಲ್ ಮೀಲ್ಸ್ ಚಿತ್ರಕ್ಕಿದೆ.
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೆಲುಗಿನಲ್ಲಿ ಖುಷಿ ರವಿ ಮೇನಿಯಾ ಶುರು

    ತೆಲುಗಿನಲ್ಲಿ ಖುಷಿ ರವಿ ಮೇನಿಯಾ ಶುರು

    ಸ್ಯಾಂಡಲ್‌ವುಡ್‌ನಲ್ಲಿ ದಿಯಾ (Dia), ಸ್ಪೂಕಿ ಕಾಲೇಜ್ ಮೂಲಕ ಗಮನ ಸೆಳೆದ ಪ್ರತಿಭಾನ್ವಿತ ನಾಯಕಿ ಖುಷಿ ರವಿ (Kushee Ravi) ಅವರು ಇದೀಗ ತೆಲುಗಿನತ್ತ (Tollywood) ಮುಖ ಮಾಡಿದ್ದಾರೆ. ಕನ್ನಡ ಸಿನಿಮಾಗಳ ಜೊತೆಗೆ ತೆಲುಗಿನಲ್ಲೂ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಹೊಸ ಸಿನಿಮಾಗಳನ್ನ ಒಪ್ಪಿಕೊಳ್ಳುವ ಮೂಲಕ ಟಾಲಿವುಡ್‌ನಲ್ಲಿ ಖುಷಿ ಮೇನಿಯಾ ಶುರುವಾಗಿದೆ.

    ಕನ್ನಡದ ದಿಯಾ ಬ್ಯೂಟಿ ಖುಷಿ ಅವರು ಈಗಾಗಲೇ ರುದ್ರ (Rudra) ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಬ್ಯುಸಿಯಿದೆ. ಮೊದಲ ಸಿನಿಮಾ ತೆರೆಗೆ ಬರುವ ಮುಂಚೆಯೇ ಖುಷಿ, ಮತ್ತೊಂದು ಬಂಪರ್ ಚಾನ್ಸ್ ತಮ್ಮದಾಗಿಸಿಕೊಂಡಿದ್ದಾರೆ. ಇನ್ನೂ ಹೆಸರಿಡದ ತೆಲುಗಿನ ಹಾರಾರ್ ಚಿತ್ರದಲ್ಲಿ ಖುಷಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ:Captain Miller Trailer: ಮಾಸ್‌ ಆಗಿ ಎಂಟ್ರಿ ಕೊಟ್ರು ಧನುಷ್‌-ಶಿವಣ್ಣ

    ನವ ನಿರ್ದೇಶಕ ಸಾಯಿಕಿರಣ್ ಅವರು ಖುಷಿ ಅವರ ಹೊಸ ಪ್ರಾಜೆಕ್ಟ್‌ಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು 90ರ ದಶಕದ ಕಥೆಯನ್ನು ಒಳಗೊಂಡಿದ್ದು, ನಟಿ ಖುಷಿ ಗರ್ಭಿಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಸವಾಲಿನ ಪಾತ್ರವಾಗಿದೆ. ವಿಭಿನ್ನ ರೀತಿಯಲ್ಲಿ ಟೈಟಲ್ ಅನ್ನು ಬಿಡುಗಡೆ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ತೆಲುಗು, ತಮಿಳಿನ ಜನಪ್ರಿಯ ನಟ ಶ್ರೀಕಾಂತ್ (Srikanth)  ಅವರು ಈ ಸಿನಿಮಾದ ಹೀರೋ ಆಗಿದ್ದಾರೆ.

    ನಟಿ ಖುಷಿಯ ಅವರ ಕೈಯಲ್ಲಿ ತೆಲುಗಿನ ಎರಡು ಸಿನಿಮಾ, ಕನ್ನಡದ ‘ಕೇಸ್ ಆಫ್ ಕೊಂಡಾಣ’, ‘ಫುಲ್ ಮೀಲ್ಸ್’ ಚಿತ್ರಗಳಿವೆ. ಒಟ್ನಲ್ಲಿ ಬಗೆ ಬಗೆಯ ಪಾತ್ರದ ಮೂಲಕ ಮೋಡಿ ಮಾಡಲು ಖುಷಿ ರವಿ ರೆಡಿಯಾಗಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಮೋಡಿ ಮಾಡಿದ ಹಾಗೆಯೇ ತೆಲುಗಿನಲ್ಲಿ ಪ್ರತಿಭಾನ್ವಿತ ನಟಿ ಖುಷಿ ಅದೃಷ್ಟ ಖುಲಾಯಿಸುತ್ತಾ ಎಂದು ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಿಖಿತ್ ಶೆಟ್ಟಿ ಜೊತೆ ‘ಫುಲ್ ಮೀಲ್ಸ್’ ಗೆ ಜೊತೆಯಾದ ಇಬ್ಬರು ನಾಯಕಿಯರು

    ಲಿಖಿತ್ ಶೆಟ್ಟಿ ಜೊತೆ ‘ಫುಲ್ ಮೀಲ್ಸ್’ ಗೆ ಜೊತೆಯಾದ ಇಬ್ಬರು ನಾಯಕಿಯರು

    ವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ “ಫ್ಯಾಮಿಲಿ ಪ್ಯಾಕ್” ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ ನಿರ್ದೇಶನದ ಚಿತ್ರ ಕೂಡ. ಲಿಖಿತ್ ಶೆಟ್ಟಿ ನಾಯಕರಾಗಿ, ಖುಷಿ ರವಿ, ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ ಸೇರಿದಂತೆ ಅನೇಕ ಅನುಭವಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಷಿ ಛಾಯಾಗ್ರಹಣ ಹಾಗೂ ಗುರುಕಿರಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಬೆಂಗಳೂರು, ರಾಮನಗರ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಎನ್.ವಿನಾಯಕ ಚಿತ್ರದ ಕುರಿತು ಮಾಹಿತಿ ನೀಡಿದರು.

    ನಾನು ಈ ಚಿತ್ರದಲ್ಲಿ ಫೋಟೋಗ್ರಾಫರ್. ಮದುವೆ ಮನೆಗೆ ಫೋಟೋ ತೆಗೆಯಲು ಹೋದಾಗ ಮದುಮಗಳ ಮೇಲೆ ಪ್ರೀತಿಯಾಗುತ್ತದೆ. ಆನಂತರ ಏನಾಗುತ್ತದೆ? ಎಂಬುದನ್ನು ಚಿತ್ತದಲ್ಲೇ ನೋಡಬೇಕು. ಒಟ್ಟಿನಲ್ಲಿ ನಾವು ಇಡೀ ತಂಡ ಸೇರಿ ಪ್ರೇಕ್ಷಕರಿಗೆ ಮನೋರಂಜನೆಯ “ಫುಲ್ ಮೀಲ್ಸ್” ನೀಡಲಿದ್ದೇವೆ ಎಂದರು ನಾಯಕ ಲಿಖಿತ್ ಶೆಟ್ಟಿ. ಇದನ್ನೂ ಓದಿ: ಬೆಡ್‌ರೂಮ್ ಫೋಟೋ ಹಂಚಿಕೊಂಡ ನಟಿ ರಾಗಿಣಿ ದ್ವಿವೇದಿ

    ನಾಯಕಿಯರಾದ ಖುಷಿ ರವಿ, ತೇಜಸ್ವಿನಿ ಶರ್ಮ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಕಲಾವಿದರಾದ ರಂಗಾಯಣ ರಘು, ಚಂದ್ರಕಲಾ ಮೋಹನ್, ರಮೇಶ್ ಪಂಡಿತ್, ಗಣೇಶ್ ರಾವ್, ವಿಜಯ್ ಚೆಂಡೂರ್,  ಛಾಯಾಗ್ರಾಹಕ ಮನೋಹರ್ ಜೋಶಿ ಹಾಗೂ ಸಂಭಾಷಣೆ ಬರೆಯುತ್ತಿರುವ ಹರೀಶ್ ರಾಜಣ್ಣ “ಫುಲ್ ಮೀಲ್ಸ್” ಬಗ್ಗೆ ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸೆಟ್ಟೇರಿತು ಭಾವನಾ ಮೆನನ್- ವಿಜಯ್ ರಾಘವೇಂದ್ರ ನಟನೆಯ `ಕೇಸ್ ಆಫ್ ಕೊಂಡಾಣ’ ಚಿತ್ರ

    ಸೆಟ್ಟೇರಿತು ಭಾವನಾ ಮೆನನ್- ವಿಜಯ್ ರಾಘವೇಂದ್ರ ನಟನೆಯ `ಕೇಸ್ ಆಫ್ ಕೊಂಡಾಣ’ ಚಿತ್ರ

    `ಸೀತಾರಾಮ್ ಬಿನೋಯ್’ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೇವಿ ಪ್ರಸಾದ್ ಶೆಟ್ಟಿ (Devi Prasad Shetty) ತಮ್ಮ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ವಿಜಯ್ ರಾಘವೇಂದ್ರ (Vijay Raghavendra) ನಟಿಸಿದ್ದ 50ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ದೇವಿ ಪ್ರಸಾದ್ ಶೆಟ್ಟಿ ಈಗ ಮತ್ತೊಮ್ಮೆ ಚಿನ್ನಾರಿ ಮುತ್ತನ ಜೊತೆ ಕೈ ಜೋಡಿಸಿದ್ದಾರೆ. ಬೆಂಗಳೂರಿನ ಧರ್ಮಗಿರಿ ಮಂಜುನಾಥ್ ಸ್ವಾಮಿ ದೇಗುಲದಲ್ಲಿ ಸಿನಿಮಾ `ಕೇಸ್ ಆಫ್ ಕೊಂಡಾಣ’ (Case Of Kondana) ಸರಳವಾಗಿ ಮುಹೂರ್ತ ನೆರವೇರಿಸಿದೆ.

     

    View this post on Instagram

     

    A post shared by Kushee Ravi (@iamkusheeraviofficial)

    ನಟ ವಿಜಯ್ ಮಾತನಾಡಿ, `ಸೀತಾರಾಮ್ ಬಿನೋಯ್’ ಕೇಸ್ ನಂಬರ್ 18ರ ನಂತರ ಇವರು ನನಗೆ ಮತ್ತೊಮ್ಮೆ ನಟಿಸಲು ಅವಕಾಶ ಕೊಟ್ಟಿದ್ದಾರೆ. ಸಾಧಾರಣವಾಗಿ ಒಂದೊಳ್ಳೆ ತಂಡ ಸಿಗುವುದು ಅಪರೂಪ. ದೇವಿ ಡೆಡಿಕೇಷನ್, ಕೆಲಸದ ಬಗ್ಗೆ ಇರುವ ಸೀರಿಯಸ್‌ನೆಸ್ ನೋಡಿದ್ದೇನೆ. ಪ್ರತಿಯೊಬ್ಬರೂ ಈ ಸಿನಿಮಾಗೆ ಪ್ರೋತ್ಸಾಹಿಸಿ ಎಂದರು. ಇದನ್ನೂ ಓದಿ:‘ಯಶೋದಾ’ ಟೀಸರ್ನಲ್ಲಿ ಸಮಂತಾ ಮತ್ತೊಂದು ಮುಖ ಅನಾವರಣ

    ಕ್ರೈಮ್ ಸಿನಿಮಾಗಳ ಬಗ್ಗೆ ಹೆಚ್ಚು ಒಲವಿರುವ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಈ ಬಾರಿ ತನಿಖಾ ಥ್ರಿಲ್ಲರ್ ಕಥೆಯನ್ನು ಪ್ರೇಕ್ಷಕರಿಗೆ ಉಣಬಡಿಸಲು ಸಜ್ಜಾಗಿದ್ದಾರೆ. 19/2018 ಎಂಬ ಅಡಿಬರಹವಿರುವ ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ (Vijay Raghavendra) ಹಾಗೂ ಭಾವನಾ ಮೆನನ್ (Bhavana Menon) ಇಬ್ಬರು ಪೊಲೀಸ್ ಅಧಿಕಾರಿಗಳಾಗಿ ನಟಿಸಲಿದ್ದಾರೆ. `ದಿಯಾ’ ಸಿನಿಮಾ ಖ್ಯಾತಿಯ ಖುಷಿ ರವಿ (Kushee Ravi) ವೈದ್ಯೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಮಾಹಿತಿಯನ್ನು ಚಿತ್ರತಂಡ ಶೀಘ್ರವಾಗಿ ನೀಡಲಿದೆ.

    ಸಾತ್ವಿಕ್ ಹೆಬ್ಬಾರ್ ಮತ್ತು ದೇವಿ ಪ್ರಸಾದ್ ಶೆಟ್ಟಿ ಜೊತೆಗೆ ಅರವಿಂದ್ ಶೆಟ್ಟಿ ಸಹಯೋಗದಲ್ಲಿ ಸಿನಿಮಾ ನಿರ್ಮಾಣವಾಗಲಿದೆ. ʻಕೇಸ್ ಆಫ್ ಕೊಂಡಾಣ’ಕ್ಕೆ ವಿಶ್ವಜಿತ್ ರಾವ್ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಭವಾನಿ ಶಂಕರ್ ಆನೆಕಲ್ಲು ಕಲಾ ನಿರ್ದೇಶನವಿದೆ. ಜಯಂತ್ ಕಾಯ್ಕಿಣಿ ಸಾಹಿತ್ಯವಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ. ಸೆಪ್ಟೆಂಬರ್ 28ರಿಂದ ಶೂಟಿಂಗ್ ಆರಂಭವಾಗಲಿದೆ. ಸಂಪೂರ್ಣ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ಮೆಲ್ಲುಸಿರೆ ಸವಿಗಾನವನ್ನು ಮತ್ತೆ ನೆನಪಿಸಿದ ಸ್ಪೂಕಿ ಕಾಲೇಜಿನ ರೀಷ್ಮಾ ನಾಣಯ್ಯ

    ಮೆಲ್ಲುಸಿರೆ ಸವಿಗಾನವನ್ನು ಮತ್ತೆ ನೆನಪಿಸಿದ ಸ್ಪೂಕಿ ಕಾಲೇಜಿನ ರೀಷ್ಮಾ ನಾಣಯ್ಯ

    ನಿರ್ದೇಶಕ ಭರತ್ ಜಿ ನಿರ್ದೇಶಿಸುತ್ತಿರುವ “ಸ್ಪೂಕಿ ಕಾಲೇಜ್” ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಪೋಸ್ಟರ್, ಫಸ್ಟ್ ಲುಕ್ ಮೂಲಕ ಈಗಾಗಲೇ ಜನಮನ ಗೆದ್ದಿರುವ “ಸ್ಪೂಕಿ ಕಾಲೇಜ್” ಚಿತ್ರದ ಹಾಡೊಂದಕ್ಕೆ “ಏಕ್ ಲವ್ ಯಾ” ಬೆಡಗಿ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ. ಡಾ||ರಾಜಕುಮಾರ್ ಅಭಿನಯದ “ವೀರಕೇಸರಿ” ಚಿತ್ರದ “ಮೆಲ್ಲುಸಿರೆ ಸವಿಗಾನ” ಹಾಡನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ನೂತನ ಶೈಲಿಯಲ್ಲಿ ಈ ಹಾಡು ಮೂಡಿಬಂದಿದೆ. ಭೂಷಣ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿಗೆ ರೀಷ್ಮಾ ನಾಣಯ್ಯ ಅದ್ಭುತವಾಗಿ ನೃತ್ಯ ಮಾಡಿದ್ದಾರೆ.

    ಈ ಹಾಡನ್ನು ನಾವು ಬಲವಂತವಾಗಿ ತುರುಕಿಲ್ಲ. ಚಿತ್ರದ ಕಥೆಯನ್ನು ಹೇಳುವ ಹಾಡೊಂದು ಬೇಕಿತ್ತು. “ಮೆಲ್ಲುಸಿರೆ ಸವಿಗಾನ” ಹಾಡನ್ನು ಕೇಳಿದಾಗ, ಈ ಅದ್ಭುತ ಹಾಡು ಸೂಕ್ತ ಎನಿಸಿತು. ಹಾಗಾಗಿ ಈ ಹಾಡನ್ನು ಆಯ್ಕೆ ಮಾಡಿಕೊಂಡೆವು. ದಾಂಡೇಲಿಯ ಅರಣ್ಯ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅದ್ಭುತ ಸೆಟ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. 250 ಕ್ಕೂ ಅಧಿಕ ತಂತ್ರಜ್ಞರ ಪಾಲ್ಗೊಳ್ಳುವಿಕೆಯಲ್ಲಿ ಈ ಹಾಡು ಅದ್ದೂರಿಯಾಗಿ ಬಂದಿದೆ ಎಂದು ಮಾಹಿತಿ ನೀಡಿರುವ ನಿರ್ದೇಶಕ ಭರತ್, ಹಾಡು ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕ ಹೆಚ್.ಕೆ. ಪ್ರಕಾಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿ: ಆರ್ಯವರ್ಧನ್ ಅಲ್ಲ, ಅವನ ಸಹೋದರನ ಪಾತ್ರದಲ್ಲಿ ಹರೀಶ್ ರಾಜ್

    ಈ ಹಾಡಿನಲ್ಲಿ ಅಭಿನಯಿಸುವುದಕ್ಕೆ ರೀಷ್ಮಾ ನಾಣಯ್ಯ ಸಾಕಷ್ಟು ತಯಾರಿ ಮಾಡಿಕೊಂಡಿದರಂತೆ‌. ಅಣ್ಣವ್ರು ಅಭಿನಯಿಸಿದ್ದ ಜನಪ್ರಿಯ ಹಾಡಿಗೆ ನಾನು ನೃತ್ಯ ಮಾಡಿರುವುದು ಖುಷಿಯಾಗಿದೆ ಎನ್ನುತ್ತಾರೆ ರೀಷ್ಮಾ ನಾಣಯ್ಯ. “ಸ್ಪೂಕಿ ಕಾಲೇಜ್” ನ ಬಹುತೇಕ ಚಿತ್ರೀಕರಣ ಧಾರವಾಡದ ನೂರಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ಕಾಲೇಜೊಂದರಲ್ಲಿ ನಡೆದಿದೆ. ಅರಣ್ಯ ಭಾಗದ ಚಿತ್ರೀಕರಣವನ್ನು ದಾಂಡೇಲಿಯಲ್ಲಿ ಚಿತ್ರಿಸಲಾಗಿದೆ. ಆನಂತರ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. “ರಂಗಿತರಂಗ” , “ಅವನೇ ಶ್ರೀಮನ್ನಾರಾಯಣ” ಚಿತ್ರಗಳ ನಿರ್ಮಾಪಕ ಹೆಚ್.ಕೆ.ಪ್ರಕಾಶ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.  ಕಥೆ, ಚಿತ್ರಕಥೆ ಹಾಗು ಸಂಭಾಷಣೆಯನ್ನು ನಿರ್ದೇಶಕ ಭರತ್ ಅವರೆ ಬರೆದಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಹಾಗೂ ಶ್ರೀಕಾಂತ್ (ಕೆ ಜಿ ಎಫ್) ಅವರ ಸಂಕಲನ ಈ ಚಿತ್ರಕ್ಕಿದೆ.

     “ಪ್ರೀಮಿಯರ್ ಪದ್ಮಿನಿ” ಖ್ಯಾತಿಯ ವಿವೇಕ್ ಸಿಂಹ “ಸ್ಪೂಕಿ ಕಾಲೇಜ್” ನ ನಾಯಕ. “ದಿಯಾ” ಮೂಲಕ ಹೆಸರಾಗಿರುವ ಖುಷಿ ರವಿ ನಾಯಕಿ.  ಅಜಯ್ ಪೃಥ್ವಿ, ಹನುಮಂತೇ ಗೌಡ, ಕೆ.ಎಸ್.ಶ್ರೀಧರ್, ವಿಜಯ್ ಚೆಂಡೂರ್, ಶರಣ್ಯ ಶೆಟ್ಟಿ, ರಘು ರಮಣಕೊಪ್ಪ ಹಾಗೂ “ಕಾಮಿಡಿ ಕಿಲಾಡಿಗಳು” ಶೋನ‌ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರೀಷ್ಮಾ ನಾಣಯ್ಯ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಧರೆಗಿಳಿದ ದೇವತೆಯಾದ ದಿಯಾ ಖ್ಯಾತಿಯ ನಟಿ ಖುಷಿ

    ಧರೆಗಿಳಿದ ದೇವತೆಯಾದ ದಿಯಾ ಖ್ಯಾತಿಯ ನಟಿ ಖುಷಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ದಿಯಾ ಸಿನಿಮಾ ಖ್ಯಾತಿಯ ಖುಷಿ ರವಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಅದ್ಭುತವಾದ ಫೊಟೋಶೂಟ್ ಮಾಡಿಸುವ ಮೂಲಕವಾಗಿ ಸಖತ್ ಸುದ್ದಿಯಲ್ಲಿದ್ದಾರೆ.

    ವರಮಹಾಲಕ್ಷ್ಮಿ ಹಬ್ಬಕ್ಕೆಂದು ಲಕ್ಷ್ಮಿಯಂತೆ ವೇಷಭೂಷಣ ತೊಟ್ಟು ಈ ಫೋಟೋ ಶೂಟ್‍ನಲ್ಲಿ ಖುಷಿ ಸಾಕ್ಷಾತ್ ಧರೆಗಿಳಿದ ಮಹಾಲಕ್ಷ್ಮಿಯಂತೆ ಕಾಣಿಸುತ್ತಿದ್ದಾರೆ. ಬಿಳಿ ಮತ್ತು ಗೋಲ್ಡನ್ ಬಣ್ಣದ ಸೀರೆ ಧರಿಸಿ ಚೆಂದದ ಆಭರಣಗಳನ್ನು ತೊಟ್ಟುಕೊಂಡು ಖುಷಿ ದೇವತೆಯಂತೆ ಕಂಗೊಳಿಸುತ್ತಿದ್ದಾರೆ.

     

    View this post on Instagram

     

    A post shared by Kushee Ravi (@iamkusheeraviofficial)

    ಈ ಫೋಟೋಗಳನ್ನು ಖುಷಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, ಹಬ್ಬದ ಶುಭಾಶಯವನ್ನು ಕೋರಿದ್ದಾರೆ. ಸದ್ಯ ಖುಷಿಯ ಈ ಮಹಾಲಕ್ಷ್ಮಿ ಅವತಾರವನ್ನು ಕಂಡ ಅಭಿಮಾನಿಗಳು ಕಮೆಂಟ್‍ಗಳ ಸುರಿಮಳೆಗೈದಿದ್ದಾರೆ. ನೀವು ಸಾಕ್ಷಾತ್ ಲಕ್ಷ್ಮಿಯಂತೆ ಕಾಣಿಸುತ್ತಿದ್ದೀರಾ, ಪದಗಳೆ ಸಿಗುತ್ತಿಲ್ಲ. ದಿಯಾ ಎಂದು ಕಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಕೋಟಿಗಟ್ಟಲೆ ಹಣ ಸಂಭಾವನೆ ಪಡೆಯುತ್ತಾರೆ ಪರಮ ಸುಂದರಿ

     

    View this post on Instagram

     

    A post shared by Kushee Ravi (@iamkusheeraviofficial)

    ಪ್ರತಿಯೊಬ್ಬ ಮಹಿಳೆಗೂ ಮಹಾಲಕ್ಷ್ಮಿ ಹಬ್ಬಾ ತುಂಬಾ ವಿಶೇಷವಾಗಿದೆ. ಈ ವಿಶೇಷ ದಿನ ಇಂತಹ ಅದ್ಭುತವಾದ ಫೋಟೋ ಅಭಿಮಾನಿಗಳಿಗೆ ಸಖತ್ ಇಷ್ಟವಾಗಿದೆ.