Tag: ಖುಷ್ಬು ಸುಂದರ್

  • ಸಿನಿಮಾದ ಸುವರ್ಣ ಯುಗವೊಂದು ಅಂತ್ಯವಾಗಿದೆ – ಸರೋಜಾದೇವಿ ನಿಧನಕ್ಕೆ ಕಂಬನಿ ಮಿಡಿದ ರಜನಿಕಾಂತ್‌, ಖುಷ್ಬು

    ಸಿನಿಮಾದ ಸುವರ್ಣ ಯುಗವೊಂದು ಅಂತ್ಯವಾಗಿದೆ – ಸರೋಜಾದೇವಿ ನಿಧನಕ್ಕೆ ಕಂಬನಿ ಮಿಡಿದ ರಜನಿಕಾಂತ್‌, ಖುಷ್ಬು

    ಚೆನ್ನೈ: ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಬಿ.ಸರೋಜಾ ದೇವಿ (B Saroja Devi) ಅವರು ಇಂದು ವಿಧಿವಶವಾಗಿದ್ದಾರೆ. ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಭಾಗ್ಯವಂತರು, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಕನ್ನಡ ಚಿತ್ರರಂಗದ ಕಿತ್ತೂರು ರಾಣಿ ಚೆನ್ನಮ್ಮ ಅಂತಲೇ ಎಲ್ಲರ ಮನದಲ್ಲಿ ಮನೆ ಮಾಡಿದ್ದ ಸರೋಜಾದೇವಿ ಅವರು ತಮ್ಮ ನಿವಾಸದಲ್ಲಿ ಉಸಿರು ಚೆಲ್ಲಿದ್ದಾರೆ. ಹಿರಿಯ ನಟಿಯ ನಿಧನಕ್ಕೆ ಸಿನಿ ಗಣ್ಯರು, ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

    ಕಂಬನಿ ಮಿಡಿದ ತಲೈವಾ
    ಅದರಂತೆ ತಮಿಳಿನ ಖ್ಯಾತ ನಟ ತಲೈವಾ ರಜನಿಕಾಂತ್‌ (Rajinikanth) ಸಹ ಸಂತಾಪ ಸೂಚಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ʻಲಕ್ಷಾಂತರ ಅಭಿಮಾನಿಗಳ ಹೃದಯ ಗೆದ್ದ ಮಹಾನ್ ನಟಿ ಸರೋಜಾ ದೇವಿ ಈಗ ನಮ್ಮೊಂದಿಗಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಒಂದು ಸುವರ್ಣ ಸಿನಿಮಾ ಯುಗ ಅಂತ್ಯಗೊಂಡಿದೆʼ ಅಂತ ಭಾವುಕ ಸಂದೇಶವೊಂದನ್ನ ಫೋಟೋ ಜೊತೆಗೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಾಳೆ ಚನ್ನಪಟ್ಟಣದ ದಶಾವರದಲ್ಲಿ ಬಿ.ಸರೋಜಾದೇವಿ ಅಂತ್ಯಕ್ರಿಯೆ

    ಸರೋಜಾದೇವಿ ಅಮ್ಮ ಎಲ್ಲಾ ಕಾಲಕ್ಕೂ ಶ್ರೇಷ್ಠ
    ಬಹುಭಾಷಾ ನಟಿ ಖುಷ್ಬು ಸುಂದರ್‌ (Khushbu Sundar) ಕೂಡ ಸರೋಜಾ ದೇವಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ʻಸರೋಜಾದೇವಿ ಅಮ್ಮ ಎಲ್ಲಾ ಕಾಲದಲ್ಲೂ ಶ್ರೇಷ್ಠರು. ಇದನ್ನೂ ಓದಿ: ಬಿ.ಸರೋಜಾದೇವಿಯವರ ಸಾವಿನಿಂದ ಕಲಾಜಗತ್ತು ಬಡವಾಗಿದೆ – ಸಿಎಂ ಸಂತಾಪ

    ದಕ್ಷಿಣದಲ್ಲಿ ಅವರಷ್ಟು ಹೆಸರು, ಖ್ಯಾತಿ ಪಡೆದ ಮಹಿಳಾ ನಟಿ ಇನ್ನೊಬ್ಬರಿಲ್ಲ. ಅವರು ನನ್ನ ಪ್ರೀತಿಯ ಮತ್ತು ಆರಾಧ್ಯ ದೈವವೂ ಕೂಡ ಹೌದು. ಅವರನ್ನು ಭೇಟಿಯಾಗದೇ ನನ್ನ ಬೆಂಗಳೂರಿಗೆ ಪ್ರವಾಸ ಅಪೂರ್ಣವಾಗಿತ್ತು. ಚೆನ್ನೈಗೆ ಬಂದಾಗೆಲ್ಲ ಅವರು ನನಗೆ ಕರೆ ಮಾಡಿ ಮಾತನಾಡುತ್ತಿದ್ದರು. ಈಗ ಅವರನ್ನ ತುಂಬಾ ಮಿಸ್‌ ಮಾಡಿಕೊಳ್ತೀನಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಾವುಕ ಸಂದೇಶ ಹಂಚಿಕೊಂಡಿದ್ದಾರೆ.

  • ಉಡುಪಿ ಕಾಲೇಜು ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್‌ – ಗುಜರಾತ್ FSLಗೆ ಮೊಬೈಲ್ ರವಾನೆ

    ಉಡುಪಿ ಕಾಲೇಜು ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್‌ – ಗುಜರಾತ್ FSLಗೆ ಮೊಬೈಲ್ ರವಾನೆ

    ಬೆಂಗಳೂರು/ಉಡುಪಿ: ಇಲ್ಲಿನ ಖಾಸಗಿ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದಲ್ಲಿ (Udupi Video Case) ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಆರೋಪಿ ಸ್ಥಾನದಲ್ಲಿರುವ ವಿದ್ಯಾರ್ಥಿನಿಯರ ಮೊಬೈಲ್‌ ಅನ್ನು ಗುಜರಾತ್‌ನ ವಿಧಿವಿಜ್ಞಾನ ಪ್ರಯೋಗಾಲಯ (FSL)ಗೆ ರವಾನೆ ಮಾಡಲಾಗಿದೆ.

    ರಾಜ್ಯ ಎಫ್‌ಎಸ್‌ಎಲ್‌ ನಿಂದ ಮೊಬೈಲ್‌ನಲ್ಲಿ ಯಾವುದೇ ಫೋಟೋ ರಿಟ್ರೀವ್ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಗುಜರಾತ್‌ನ ಪ್ರಯೋಗಾಲಯಕ್ಕೆ ಮೊಬೈಲ್‌ಗಳನ್ನ ತಲುಪಿಸಲಾಗಿದ್ದು, CID ತಂಡ ವರದಿಗಾಗಿ ಕಾದು ಕುಳಿತಿದೆ. ಇದನ್ನೂ ಓದಿ: ಲೇಡಿಸ್ ಟಾಯ್ಲೆಟ್‌ನಲ್ಲಿ ಸ್ಪೈ ಕ್ಯಾಮೆರಾ ಇಟ್ಟಿಲ್ಲ, ಮೊಬೈಲ್‌ನಲ್ಲಿ ಫೋಟೋ-ವೀಡಿಯೋ ಸಿಕ್ಕಿಲ್ಲ: ಖುಷ್ಬು ಸುಂದರ್

    ಉಡುಪಿ ಖಾಸಗಿ ಕಾಲೇಜೊಂದರ ಲೇಡಿಸ್‌ ಟಾಯ್ಲೆಟ್‌ನಲ್ಲಿ ವಿದ್ಯಾರ್ಥಿನಿಯರು ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣ ಕೆಲ ದಿನಗಳ ಹಿಂದೆ ಬೆಳಕಿಗೆ ಬಂದಿದ್ದು, ಮೊಬೈಲ್‌ನಲ್ಲಿ ಯಾವುದೇ ವಿಡಿಯೋ, ಫೋಟೋಗಳು ಲಭ್ಯವಾಗಿಲ್ಲ. ಪೊಲೀಸರು ವಶಕ್ಕೆ ಪಡೆದಿದ್ದ ಮೊಬೈಲ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನೆ ಮಾಡಲಾಗಿತ್ತು. ಆದ್ರೆ ಈವರೆಗೆ ಯಾವುದೇ ಫಲಿತಾಂಶ ಬಂದಿಲ್ಲ. ಹಾಗಾಗಿ ಗುಜರಾತ್‌ನ ಪ್ರಯೋಗಾಲಯಕ್ಕೆ ಮೊಬೈಲ್‌ಗಳನ್ನ ರವಾನಿಸಲಾಗಿದೆ. ಇದನ್ನೂ ಓದಿ: ಉಡುಪಿ ಕೇಸಲ್ಲಿ ಸಂತ್ರಸ್ತೆ, ಆರೋಪಿಗಳ ವಿಚಾರಣೆ- ಪ್ರಕರಣಕ್ಕೆ ಕೇರಳ ಲಿಂಕ್ ಕೊಟ್ಟು ಬಿಜೆಪಿ ಪ್ರತಿಭಟನೆ

    ಈ ನಡುವೆ ವಿದ್ಯಾರ್ಥಿನಿಯರು ಐ-ಫೋನ್ (iPhone) ಅಲ್ಲಿ ದೃಶ್ಯಾವಳಿ ಸೆರೆ ಹಿಡಿದಿದ್ರು ಎಂದೂ ಹೇಳಲಾಗುತ್ತಿದೆ. ಮೊಬೈಲ್‌ನಲ್ಲಿ ಡಿಲೀಟ್ ಮಾಡಿದ್ದರೂ ಐ-ಕ್ಲೌಡ್‌ನಲ್ಲಿ ದೃಶ್ಯಾವಳಿ ಇರುತ್ತೆ. ಕೋರ್ಟ್ ನ ಅನುಮತಿ ಪಡೆದು, ಸಂಬಂಧಪಟ್ಟ ಮೊಬೈಲ್ ಕಂಪನಿಯಿಂದ ಮಾಹಿತಿ ಹೊರ ತೆಗೆಯಬಹುದು ಎಂದು ತಜ್ಞರು ಹೇಳಿದ್ದಾರೆ. ಸದ್ಯ ಮೊಬೈಲ್‌ನ ಎಫ್‌ಎಸ್‌ಎಲ್‌ ರಿಟ್ರೀವ್ ಮಾಡ್ತಾರಾ? ಮೊಬೈಲ್‌ನಲ್ಲಿ ದೃಶ್ಯಾವಳಿ ಇದ್ಯಾ? ಅನ್ನೋದು ತನಿಖೆಯ ಕುತೂಹಲ ಆಗಿದೆ. ಈಗಾಗಲೇ ಆರೋಪಿತ ಯುವತಿಯರಿಂದ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಖುಷ್ಬು ಉಡುಪಿ ಭೇಟಿ ವೇಳೆ ಆಸ್ಕರ್ ಫರ್ನಾಂಡಿಸ್ ಸಂಬಂಧಿಗೆ ಏನು ಕೆಲಸ? – ಬಿಜೆಪಿ ಪ್ರಶ್ನೆ

    ಖುಷ್ಬು ಉಡುಪಿ ಭೇಟಿ ವೇಳೆ ಆಸ್ಕರ್ ಫರ್ನಾಂಡಿಸ್ ಸಂಬಂಧಿಗೆ ಏನು ಕೆಲಸ? – ಬಿಜೆಪಿ ಪ್ರಶ್ನೆ

    ಉಡುಪಿ: ವಿಡಿಯೋ ಪ್ರಕರಣಕ್ಕೆ (Udupi College Video Row) ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ (Khushbu Sundar) ಉಡುಪಿ ಭೇಟಿ ವೇಳೆ ಅವರ ಜೊತೆಗಿದ್ದ ಕಾಂಗ್ರೆಸ್ ಪಕ್ಷದ ದಿವಂಗತ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಸಂಬಂಧಿ, ಉಡುಪಿಯ ಹಿರಿಯ ವಕೀಲೆ ಮೇರಿ ಶ್ರೇಷ್ಠ (Meri Shreshtha) ಉಪಸ್ಥಿತಿ ಬಗ್ಗೆ ಬಿಜೆಪಿ ನಾಯಕರು (BJP Leaders) ತಗಾದೆ ಎತ್ತಿದ್ದಾರೆ.

    ಖುಷ್ಬು ಜೊತೆ ಮೇರಿ ಶ್ರೇಷ್ಠ ಯಾಕೆ ಇದ್ದರು? ಅವರ ಪಾತ್ರ ಏನು? ಇದರ ಹಿಂದೆ ಏನಾದರೂ ಸಂಚು ಇದೆಯಾ? ಅವರು ಆರೋಪಿ ವಿದ್ಯಾರ್ಥಿನಿಯರ ಪರವಾಗಿದ್ದಾರೆಯೋ? ಅವರು ಪ್ರಕರಣ ಮುಚ್ಚಿ ಹಾಕಲು ಯತ್ನಿಸ್ತಿದ್ದಾರಾ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಕುಯ್ಲಾಡಿ (Kuilady Suresh Nayak) ಪ್ರಶ್ನಿಸಿದ್ದಾರೆ. ಈ ಮೂಲಕ ಖುಷ್ಬು ಹೇಳಿಕೆಯಲ್ಲಿ ಮೇರಿಶ್ರೇಷ್ಠ ಪ್ರಭಾವ ಇದ್ದಂತೆ ಕಾಣಿಸುತ್ತಿದೆ ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: Udupi College Video Row – ತನಿಖೆ ಶುರು ಮಾಡಿದ ಕುಂದಾಪುರ ಡಿವೈಎಸ್ಪಿ

     

    ಇದಕ್ಕೆ ಸ್ಥಳೀಯ ಕಾಂಗ್ರೆಸ್ ನಾಯಕಿ ಸುನಿತಾ ಶೆಟ್ಟಿ ತಿರುಗೇಟು ನೀಡಿದ್ದಾರೆ. ಮೇರಿ ಶ್ರೇಷ್ಠ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯೆ, ಅವರು ಪಕ್ಷಕ್ಕೆ ಸೀಮಿತವಾದ ಮಹಿಳೆ ಅಲ್ಲ. ತನಿಖೆ ವೇಳೆ ಹಾಜರು ಇರಬೇಕೆಂಬ ನೋಟಿಸ್‌ ಬಂದ ಹಿನ್ನೆಲೆಯಲ್ಲಿ ಅವರು ಹೋಗಿದ್ದಾರೆ ಅಷ್ಟೇ ಎಂದಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಜೊತೆಗೆ ಸುಳ್ಯದ ಶಾಸಕಿ ಭಾಗೀರಥಿ ಮರುಳ್ಯ (Bhagirathi Murulya) ಕೂಡ ಇದ್ದರೇಕೆ ಎಂದು ಮರು ಪ್ರಶ್ನೆ ಹಾಕಿದ್ದಾರೆ.

    ಖುಷ್ಬು ಹೇಳಿಕೆಯಿಂದ ಬಿಜೆಪಿಗರು ಚಿಂತೆಗೀಡಾಗಿದ್ದಾರೆ.ಅದಕ್ಕೆ ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದು ಸುನಿತಾ ಶೆಟ್ಟಿ ಟಾಂಗ್ ಕೊಟ್ಟಿದ್ದಾರೆ. ಈ ಮಧ್ಯೆ ಉಡುಪಿ ಪ್ರಕರಣವನ್ನು ಉನ್ನತಮಟ್ಟದ ತನಿಖೆಗೆ ವಹಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹಸಚಿವ ಪರಮೇಶ್ವರ್‌ ಸಭೆ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಡುಪಿ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್‌ – ಬೆಂಗ್ಳೂರು FSLಗೆ ಮೊಬೈಲ್ ರವಾನೆ

    ಉಡುಪಿ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್‌ – ಬೆಂಗ್ಳೂರು FSLಗೆ ಮೊಬೈಲ್ ರವಾನೆ

    ಬೆಂಗಳೂರು/ಉಡುಪಿ: ರಾಜ್ಯದಲ್ಲಿ ಸಂಚಲನ ಸೃಷ್ಟಿ ಮಾಡಿರುವ ಉಡುಪಿ ಕಾಲೇಜಿನ (Udupi College) ವೀಡಿಯೋ ಚಿತ್ರೀಕರಣ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಾ ಇದೆ.

    ವಿದ್ಯಾರ್ಥಿನಿಯರು ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ (Mobile Video Recording) ಮಾಡಿದ್ದಾರೆ ಎನ್ನಲಾಗುತ್ತಿದೆಯಾದರೂ ಮೊಬೈಲ್‌ನಲ್ಲಿ ಯಾವುದೇ ವಿಡಿಯೋ, ಫೋಟೋಗಳು ಲಭ್ಯವಾಗಿಲ್ಲ.

    ಹೌದು. ಈಗಾಗಲೇ ಕಾಲೇಜು ಆಡಳಿತ ಮಂಡಳಿಯ ಮೂಲಗಳ ಪ್ರಕಾರ, ಮೊಬೈಲ್‌ನಲ್ಲಿ ವಿಡಿಯೋ ಡಿಲೀಟ್ ಮಾಡಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು ಎನ್ನಲಾಗ್ತಿದೆ. ಪೊಲೀಸರು ವಶಕ್ಕೆ ಪಡೆದಿರೋ ಮೊಬೈಲ್ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನೆ ಮಾಡಲಾಗಿದೆ. FSL ಮೊಬೈಲ್ ಅನ್ನು ರಿಟ್ರೀವ್ ಮಾಡೋ ಪ್ರಯತ್ನ ಮಾಡುತ್ತಿದ್ದಾರೆ. ಜೊತೆಗೆ ರಿಟ್ರೀವ್‌ ಆಗದೇ ಇದ್ದರೆ ಕ್ಲೌಡ್‌ನಿಂದ ಮಾಹಿತಿ ಕಲೆಹಾಕಬಹುದು. ಇದನ್ನೂ ಓದಿ: ಟಾಯ್ಲೆಟ್‌ನಲ್ಲಿ ವೀಡಿಯೋ ಶೂಟಿಂಗ್ ಯಾವ ರೀತಿ ಪ್ರ್ಯಾಂಕ್: ಸಾಮಾಜಿಕ ಕಾರ್ಯಕರ್ತೆ ರಶ್ಮಿ ಸಾಮಂತ್ ಪ್ರಶ್ನೆ

    ವಿದ್ಯಾರ್ಥಿನಿಯರು ಐ-ಫೋನ್ (iPhone) ಅಲ್ಲಿ ದೃಶ್ಯಾವಳಿ ಸೆರೆ ಹಿಡಿದಿದ್ರು ಎನ್ನಲಾಗಿದೆ. ಮೊಬೈಲ್‌ನಲ್ಲಿ ಡಿಲೀಟ್ ಮಾಡಿದ್ರೂ ಕೂಡ ಐ-ಕ್ಲೌಡ್‌ನಲ್ಲಿ ದೃಶ್ಯಾವಳಿ ಇರುತ್ತೆ. ಕೋರ್ಟ್ ನ ಅನುಮತಿ ಪಡೆದು, ಸಂಬಂಧ ಪಟ್ಟ ಮೊಬೈಲ್ ಕಂಪನಿಯಿಂದ ಮಾಹಿತಿ ಹೊರ ತೆಗೆಯಬಹುದು. ಸದ್ಯ ಮೊಬೈಲ್‌ನ ಎಫ್‌ಎಸ್‌ಎಲ್‌ ರಿಟ್ರೀವ್ ಮಾಡ್ತಾರಾ? ಮೊಬೈಲ್‌ನಲ್ಲಿ ದೃಶ್ಯಾವಳಿ ಇದ್ಯಾ? ಅನ್ನೋದು ತನಿಖೆಯ ಕುತೂಹಲ ಆಗಿದೆ. ಇದನ್ನೂ ಓದಿ: ಲೇಡಿಸ್ ಟಾಯ್ಲೆಟ್‌ನಲ್ಲಿ ಸ್ಪೈ ಕ್ಯಾಮೆರಾ ಇಟ್ಟಿಲ್ಲ, ಮೊಬೈಲ್‌ನಲ್ಲಿ ಫೋಟೋ-ವೀಡಿಯೋ ಸಿಕ್ಕಿಲ್ಲ: ಖುಷ್ಬು ಸುಂದರ್

    ನಿನ್ನೆಯಷ್ಟೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್‌ (Khusboo Sundar), ಲೇಡಿಸ್ ಟಾಯ್ಲೆಟ್‌ನಲ್ಲಿ ಯಾವುದೇ ಸ್ಪೈ ಕ್ಯಾಮೆರಾ ಇಟ್ಟಿಲ್ಲ. ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿ ಯಾವುದೇ ಫೋಟೋ, ವೀಡಿಯೋಗಳು ಸಿಕ್ಕಿಲ್ಲ. ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಫೇಕ್‌ ವೀಡಿಯೋ. ಇಂತಹ ಫೇಕ್ ವೀಡಿಯೋಗಳನ್ನ ಜನರು ಹಂಚಿಕೊಳ್ಳಬೇಡಿ ಎಂದು ಮನವಿ ಮಾಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೇಡಿಸ್ ಟಾಯ್ಲೆಟ್‌ನಲ್ಲಿ ಸ್ಪೈ ಕ್ಯಾಮೆರಾ ಇಟ್ಟಿಲ್ಲ, ಮೊಬೈಲ್‌ನಲ್ಲಿ ಫೋಟೋ-ವೀಡಿಯೋ ಸಿಕ್ಕಿಲ್ಲ: ಖುಷ್ಬು ಸುಂದರ್

    ಲೇಡಿಸ್ ಟಾಯ್ಲೆಟ್‌ನಲ್ಲಿ ಸ್ಪೈ ಕ್ಯಾಮೆರಾ ಇಟ್ಟಿಲ್ಲ, ಮೊಬೈಲ್‌ನಲ್ಲಿ ಫೋಟೋ-ವೀಡಿಯೋ ಸಿಕ್ಕಿಲ್ಲ: ಖುಷ್ಬು ಸುಂದರ್

    – ಫೇಕ್ ವೀಡಿಯೋಗಳನ್ನ ಉಡುಪಿ ವಿದ್ಯಾರ್ಥಿನಿಯರ ವೀಡಿಯೋ ಅಂತಾ ಶೇರ್ ಮಾಡ್ಬೇಡಿ

    ಉಡುಪಿ: ಖಾಸಗಿ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಯಾವುದೇ ಸ್ಪೈ ಕ್ಯಾಮೆರಾ (Spy Camera) ಇಟ್ಟಿಲ್ಲ. ವಿದ್ಯಾರ್ಥಿನಿಯರ (Students) ಮೊಬೈಲ್‌ನಲ್ಲಿ ಯಾವುದೇ ಫೋಟೋ, ವೀಡಿಯೋಗಳು ಸಿಕ್ಕಿಲ್ಲ. ಫೇಕ್ ವೀಡಿಯೋಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಇಂತಹ ಫೇಕ್ ವೀಡಿಯೋಗಳನ್ನ ಜನರು ಹಂಚಿಕೊಳ್ಳಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ (Khusboo Sundar) ಮನವಿ ಮಾಡಿದ್ದಾರೆ.

    ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ (Video Recording) ವಿವಾದ ಸಂಬಂಧ `ಪಬ್ಲಿಕ್ ಟಿವಿ’ ಜೊತೆಗೆ ಮಾತನಾಡಿದ ಅವರು, ನಾವು ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳನ್ನ ಭೇಟಿಯಾಗುತ್ತೇವೆ. ಫೇಕ್ ವೀಡಿಯೋಗಳು ಹರಿದಾಡುತ್ತಿವೆ. ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿ ಯಾವುದೇ ಫೋಟೋ, ವೀಡಿಯೋಗಳು ಸಿಕ್ಕಿಲ್ಲ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಮೊಬೈಲ್ ನೀಡುವಂತೆ ಪೊಲೀಸರಿಗೆ ತಿಳಿಸಿದ್ದೇವೆ. ಫೇಕ್ ವೀಡಿಯೋಗಳನ್ನ ಉಡುಪಿ ವಿದ್ಯಾರ್ಥಿನಿಯರ ವೀಡಿಯೋ ಅಂತಾ ಶೇರ್ ಮಾಡಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಡುಪಿ ಹೆಸರಿನಲ್ಲಿ ಹರಿದಾಡುತ್ತಿರುವ ಎಲ್ಲಾ ವಿಡಿಯೋಗಳು ಸುಳ್ಳು: ಖುಷ್ಬು ಸುಂದರ್

    ರಾಜಕೀಯ ಆರೋಪಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ. ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ನಾನಿಲ್ಲಿಗೆ ಬಂದಿದ್ದೇನೆ. ಘಟನೆ ಯಾಕೆ ನಡೀತು? ಅನ್ನೋದು ಮುಖ್ಯ. ಉಡುಪಿಯ ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣದ ಬಗ್ಗೆ ಪೊಲೀಸರ ತನಿಖೆಯ ಮಾಹಿತಿ ಪಡೆದುಕೊಂಡಿದ್ದೇನೆ. ಆಡಳಿತ ಮಂಡಳಿಯಿಂದಲೂ ಮಾಹಿತಿ ಪಡೆದುಕೊಳ್ಳುತ್ತೇವೆ. ಏನು ತಪ್ಪಾಗಿದೆ..? ಎಲ್ಲಿ ತಪ್ಪಾಗಿದೆ..? ಅನ್ನೋದನ್ನ ಪತ್ತೆ ಮಾಡುತ್ತೇವೆ. ಅದಕ್ಕೂ ಮುನ್ನ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

    ಪೊಲೀಸರಿಂದ 40 ಗಂಟೆ ತಪಾಸಣೆ:
    ಈಗ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವುದು ಫೇಕ್ ವೀಡಿಯೋಗಳು. ಯಾವುದೇ ಸ್ಪೈ ಕ್ಯಾಮೆರಾ ಟಾಯ್ಲೆಟ್‌ನಲ್ಲಿ ಇಟ್ಟಿಲ್ಲ. ಪೊಲೀಸರು ಸತತ 40 ಗಂಟೆಗಳ ಕಾಲ ಮೊಬೈಲ್ ತಪಾಸಣೆ ಮಾಡಿದ್ದಾರೆ. ಎಫ್‌ಎಸ್‌ಎಲ್ ವಿಭಾಗ ತಪಾಸಣೆ ಮಾಡಿ ರಿಪೋರ್ಟ್ ಕೊಡಲಿದೆ. ಅಲ್ಲಿವರೆಗೆ ಫೇಕ್ ವೀಡಿಯೋ ಶೇರ್ ಮಾಡೋದನ್ನ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ವಿವಾದ – ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

    ನಾನು ಪಕ್ಷದ ಪರವಾಗಿ ಬಂದಿಲ್ಲ:
    ರಾಜಕೀಯ ಪಕ್ಷಗಳಿಗೆ ಏನು ಬೇಕಾದ್ರೂ ಹೇಳುವ ಸ್ವಾತಂತ್ರ‍್ಯ ಇದೆ, ಪ್ರತಿಭಟನೆ ಮಾಡಲು ಹಕ್ಕಿದೆ. ಆದ್ರೆ ನಾನು ರಾಜಕೀಯ ಪಕ್ಷದ ಸದಸ್ಯಯಾಗಿ ಬಂದಿಲ್ಲ. ಬಿಜೆಪಿ ಅಥವಾ ಕಾಂಗ್ರೆಸ್ (Congress-BJP) ಪರ-ವಿರುದ್ಧವಾಗಿ ಬಂದಿಲ್ಲ. ಈ ಪ್ರಕರಣದಲ್ಲಿ ಎಲ್ಲರೂ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ದಾಖಲೆಗಳು, ಹೇಳಿಕೆಗಳು ಸಿಕ್ಕಾಗ ಮಾತ್ರ ತನಿಖೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಡುಪಿ ಹೆಸರಿನಲ್ಲಿ ಹರಿದಾಡುತ್ತಿರುವ ಎಲ್ಲಾ ವಿಡಿಯೋಗಳು ಸುಳ್ಳು: ಖುಷ್ಬು ಸುಂದರ್

    ಉಡುಪಿ ಹೆಸರಿನಲ್ಲಿ ಹರಿದಾಡುತ್ತಿರುವ ಎಲ್ಲಾ ವಿಡಿಯೋಗಳು ಸುಳ್ಳು: ಖುಷ್ಬು ಸುಂದರ್

    ಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ (Washroom) ವಿಡಿಯೋ (Video) ಚಿತ್ರೀಕರಿಸಿದ ಪ್ರಕರಣ ತನಿಖೆಗೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಎಂಟ್ರಿ ಕೊಟ್ಟಿದೆ. ದಕ್ಷಿಣ ಭಾರತದ ಮಹಿಳಾ ಸದಸ್ಯೆ ಖುಷ್ಬು ಸುಂದರ್ (Khushboo Sundar) ಉಡುಪಿಗೆ (Udupi) ಆಗಮಿಸಿದ್ದು, ಮೊದಲ ದಿನ ಇಡೀ ಪ್ರಕರಣದ ಸಮಗ್ರ ಮಾಹಿತಿಯನ್ನು ಉಡುಪಿಯ ಎಸ್‌ಪಿ ಹಾಗೂ ಡಿಸಿಯಿಂದ ಪಡೆದುಕೊಂಡಿದ್ದಾರೆ.

    ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸಿದ ವಿಚಾರ ರಾಜ್ಯ, ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಎಫ್‌ಐಆರ್ (FIR) ದಾಖಲಿಸಿ ತನಿಖೆಯನ್ನು ಶುರು ಮಾಡಿದ್ದಾರೆ. ಈ ನಡುವೆ ರಾಷ್ಟ್ರೀಯ ಮಹಿಳಾ ಆಯೋಗದ ದಕ್ಷಿಣ ಭಾರತದ ಸದಸ್ಯೆ ಖುಷ್ಬು ಸುಂದರ್ ಉಡುಪಿಗೆ ಆಗಮಿಸಿದ್ದು, ಪ್ರಕರಣದ ಬಗ್ಗೆ ಸಮಗ್ರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಈಗ ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಹೆಸರಿನಲ್ಲಿ ಹರಿದಾಡುತ್ತಿರುವ ಎಲ್ಲಾ ವಿಡಿಯೋಗಳು ಸುಳ್ಳು ಎಂದಿದ್ದಾರೆ. ಇದನ್ನೂ ಓದಿ: ಸೌಜನ್ಯ ಕೇಸ್‌ ಮರು ತನಿಖೆ ನಡೆಸಿ: ಸಿಎಂಗೆ ಕುಟುಂಬ ಸದಸ್ಯರ ಮನವಿ

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಘಟನೆ ಹಿಂದೆ ಯಾವುದೋ ಒಂದು ಬಿಗ್ ಸ್ಟೋರಿ ಇದೆ ಎಂದು ಯಾರೂ ಕಲ್ಪಿಸುವ ಅಗತ್ಯ ಇಲ್ಲ. ಪ್ರಕರಣದಲ್ಲಿ ಎಳೆಯ ಮನಸ್ಸುಗಳು ಇರುವುದರಿಂದ ಸರಿಯಾದ ಹಾದಿಯಲ್ಲಿ ತನಿಖೆ ನಡೆಯುತ್ತದೆ. ರಾಜಕೀಯ ಒತ್ತಡ, ಕೋಮು ಪ್ರಭಾವ ಇಲ್ಲದೆ ರಾಷ್ಟ್ರೀಯ ಮಹಿಳಾ ಆಯೋಗ ತನಿಖೆ ಮಾಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಇಲ್ಲಿದ್ದುಕೊಂಡೇ ಹೆಚ್‌ಡಿಕೆ ಏನೂ ಮಾಡಲ್ಲ, ಸಿಂಗಾಪುರಕ್ಕೆ ಹೋಗಿ ಏನು ಮಾಡುತ್ತಾರೆ: ಬಿ.ನಾಗೇಂದ್ರ ಲೇವಡಿ

    ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿ ಯಾವುದೇ ವಿಡಿಯೋ ಕಂಡು ಬಂದಿಲ್ಲ. ಸಂಬಂಧಪಟ್ಟ ಮೊಬೈಲ್‌ಗಳನ್ನು ಪೊಲೀಸರು ರೆಟ್ರೀವ್ ಮಾಡಿದ್ದಾರೆ. 40 ಗಂಟೆಗಳ ಕಾಲ ರೆಟ್ರೀವ್ ಮಾಡಿದರೂ ಏನು ಪತ್ತೆಯಾಗಿಲ್ಲ. ಮೂರು ಮೊಬೈಲ್‌ಗಳ ಡೇಟಾ ಸಂಗ್ರಹ ಮಾಡಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮೊಬೈಲ್ ಕಳುಹಿಸಬೇಕಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಸಾಕ್ಷ್ಯ ಲಭ್ಯವಾದರೆ ವಿಡಿಯೋ ಬಗ್ಗೆ ಸ್ಪಷ್ಟತೆ ಸಿಗಬಹುದು ಎಂದರು. ಇದನ್ನೂ ಓದಿ: ಮುಸ್ಲಿಂ ಯುವಕ, ಯುವತಿಯರನ್ನು ಬಚಾವ್ ಮಾಡಲು ಪ್ರಕರಣ ಮುಚ್ಚಿಡಲಾಗ್ತಿದ್ಯಾ – ಮುತಾಲಿಕ್ ಪ್ರಶ್ನೆ

    ಸೂಕ್ತ ಸಾಕ್ಷಿ ಸಿಗದೇ ಹೋದರೆ ಚಾರ್ಜ್‌ಶೀಟ್‌ ಮಾಡಲು ಸಾಧ್ಯವಿಲ್ಲ. ಸಾಕ್ಷ್ಯವಿಲ್ಲದಿದ್ದರೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸದ್ಯ ಆ ವಿದ್ಯಾರ್ಥಿನಿಯರನ್ನು ನಾವು ಆರೋಪಿತರು ಎಂದು ಕರೆಯಬಹುದು ಅಷ್ಟೇ. ಈ ಪ್ರಕರಣದಲ್ಲಿ ಭಾಗಿಯಾದ ಮೂರು ವಿದ್ಯಾರ್ಥಿನಿಯರ ಅಮಾನತು ಮಾಡಲಾಗಿದೆ. ಈ ಪ್ರಕರಣಕ್ಕೆ ಟೆರರ್ ಲಿಂಕ್ ಇದೆ ಎಂದು ವಾಟ್ಸಪ್ ಸಂದೇಶಗಳು ಹರಿದಾಡುತ್ತಿವೆ. ಪ್ರಕರಣದ ಹಿಂದೆ ಅನೇಕ ಸಂಶಯಾಸ್ಪದ ಸಂಗತಿಗಳನ್ನು ಹರಿಯ ಬಿಡಲಾಗಿದೆ. ಘಟನೆಯ ಹಿಂದೆ ಬಿಗರ್ ಥಿಯರಿ ಅಥವಾ ಬಿಗ್ಗರ್ ಸ್ಟೋರಿ ಇದೆ ಎಂದು ಸದ್ಯ ಭಾವಿಸುವುದು ಬೇಡ ಎಂದು ತಿಳಿಸಿದರು. ಇದನ್ನೂ ಓದಿ: ಟಾಯ್ಲೆಟ್‌ನಲ್ಲಿ ವೀಡಿಯೋ ಶೂಟಿಂಗ್ ಯಾವ ರೀತಿ ಪ್ರ್ಯಾಂಕ್: ಸಾಮಾಜಿಕ ಕಾರ್ಯಕರ್ತೆ ರಶ್ಮಿ ಸಾಮಂತ್ ಪ್ರಶ್ನೆ

    ನಾವೇ ನ್ಯಾಯಾಧೀಶರಾಗಿ ತೀರ್ಪು ಕೊಡುವುದು ಅಗತ್ಯವಿಲ್ಲ. ಮಹಿಳಾ ಆಯೋಗ ಮತ್ತು ಪೊಲೀಸರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಎಳೆಯ ಮನಸ್ಸುಗಳು ಒಳಗೊಂಡಿವೆ. ಸರಿಯಾದ ಹಾದಿಯಲ್ಲಿ ಪ್ರಕರಣದ ತನಿಖೆ ಆಗಬೇಕು. ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ. ಮಹಿಳಾ ಆಯೋಗ ಪ್ರತಿಭಟನೆ ಮಾಡಲು ಇರುವ ಸಂಸ್ಥೆಯಲ್ಲ. ಮಹಿಳಾ ಆಯೋಗ ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ. ರಾಷ್ಟ್ರೀಯ ಮಹಿಳಾ ಆಯೋಗ ಮಹಿಳೆಯರ ರಕ್ಷಣೆಗೆ ಇರುವ ಸಂಸ್ಥೆ ಎಂದರು. ಇದನ್ನೂ ಓದಿ: ವಿಡಿಯೋ ಚಿತ್ರೀಕರಣ ಏಳೆಂಟು ತಿಂಗಳಿಂದ ನಡೆಯುತ್ತಿದೆ, ಯುವಕರು ಭಾಗಿ: ಸುರೇಶ್ ನಾಯಕ್

    ಉಡುಪಿ ಎಸ್‌ಪಿ ಅಕ್ಷಯ್ ಮಚ್ಚೀಂದ್ರ ಹಾಕೆ, ಡಿಸಿ ಡಾ.ವಿದ್ಯಾಕುಮಾರಿ, ಎಡಿಸಿ ವೀಣಾ ಅವರನ್ನು ಪ್ರವಾಸಿ ಮಂದಿರದಲ್ಲಿ ಭೇಟಿಯಾಗಿ ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿಯನ್ನು ಖುಷ್ಬು ಪಡೆದುಕೊಂಡಿದ್ದಾರೆ. ಸಂತ್ರಸ್ತೆ ವಿದ್ಯಾರ್ಥಿನಿಯರು ಕಾಲೇಜಿನ ಆಡಳಿತ ಮಂಡಳಿ ಜೊತೆ ಖುಷ್ಬು ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಇದನ್ನೂ ಓದಿ: ಉಡುಪಿ ವಿಡಿಯೋ ಚಿತ್ರೀಕರಣ ಕೇಸ್ – ವಿದ್ಯಾರ್ಥಿನಿಯರು, ಕಾಲೇಜ್ ವಿರುದ್ಧ ಎಫ್‌ಐಆರ್ ದಾಖಲು

    ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲ ಕುಂದರ್, ಖುಷ್ಬು ಅವರನ್ನು ಭೇಟಿಯಾಗಿ ಮಾತುಕತೆ ಮಾಡಿದ್ದು, ಕೆಲ ದಾಖಲೆಗಳನ್ನು ನೀಡಿದ್ದಾರೆ. ಮುಂದಿನ ಎರಡು ದಿನ ಖುಷ್ಬು ಉಡುಪಿಯಲ್ಲಿ ಇರಲಿದ್ದು, ಸಮಗ್ರ ಮಾಹಿತಿ ಮತ್ತು ದಾಖಲೆಗಳ ಸಂಗ್ರಹ ಮಾಡಲಿದ್ದಾರೆ. ಇದನ್ನೂ ಓದಿ: ಯಾವ ಕೋಮಿನ ಬಗ್ಗೆಯೂ ಹೇಳಿಲ್ಲ, ಅಮಾಯಕರ ಬಿಡುಗಡೆಗೆ ಪ್ರಸ್ತಾಪ: ತನ್ವೀರ್ ಸೇಠ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಡ್ಡಾ, ಸಿ.ಟಿ.ರವಿ ಸಮ್ಮುಖದಲ್ಲಿ ಬಿಜೆಪಿ ಸೇರಿದ ಖುಷ್ಬೂ

    ನಡ್ಡಾ, ಸಿ.ಟಿ.ರವಿ ಸಮ್ಮುಖದಲ್ಲಿ ಬಿಜೆಪಿ ಸೇರಿದ ಖುಷ್ಬೂ

    ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಬೆಳವಣಿಗೆಗಳು ಆರಂಭವಾಗಿದ್ದು, ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ್ದ ನಟಿ ಖುಷ್ಬೂ ಸುಂದರ್ ಇದೀಗ ಬಿಜೆಪಿ ಸೇರಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ,ನಡ್ಡಾ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್.ಮುರುಗನ್ ಹಾಗೂ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬಿಜೆಪಿ ಶಾಲು ಹೊದಿಸಿ, ಹೂ ಗುಚ್ಛ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

    ಇತ್ತೀಚೆಗೆ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಇಂದು ಎಐಸಿಸಿ ವಕ್ತಾರೆ ಸ್ಥಾನದಿಂದ ಕಾಂಗ್ರೆಸ್ ಅವರನ್ನು ವಜಾಗೊಳಿಸಿತ್ತು. ಇದೀಗ ಅವರು ದೆಹಲಿಯ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷದ ಪ್ರಮುಖರು ಬಿಜೆಪಿ ಶಾಲು ಹೊದಿಸಿ ಬರಮಾಡಿಕೊಂಡಿದ್ದಾರೆ.

    ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದ ಖುಷ್ಬೂ ಸುಂದರ್, ಪಕ್ಷದ ಕೆಲವು ವಿಷಯಗಳು ಉನ್ನತ ಮಟ್ಟದಲ್ಲಿಯೇ ಉಳಿದುಕೊಂಡಿವೆ. ಆ ವಿಷಯ ಅಥವಾ ವಿಚಾರ ತಳಮಟ್ಟದಲ್ಲಿರುವ ಕಾರ್ಯಕರ್ತರಿಗೆ ತಲುಪುತ್ತಿಲ್ಲ. ಉನ್ನತ ಸ್ಥಾನದಲ್ಲಿದ್ದವರಿಂದ ಕೇವಲ ಆದೇಶಗಳು ಬರುತ್ತವೆ ಎಂದು ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆಗೆ ಕಾರಣ ತಿಳಿಸಿದ್ದರು.

    ಖುಷ್ಬೂ ಸುಂದರ್ 2014ರಲ್ಲಿ ಡಿಎಂಕೆ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ತದನಂತರ ತಮಿಳುನಾಡಿನ ರಾಜಕೀಯದಲ್ಲಿ ಸಕ್ರಿಯವಾಗಿದ್ದರು. ಪಕ್ಷದ ವಕ್ತಾರೆಯಾಗಿ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜಕೀಯ ಅಂಗಳದಲ್ಲಿ ಚಿರಪರಿಚಿತರಾಗಿದ್ದರು. ಕನ್ನಡ, ಹಿಂದಿ, ತಮಿಳು ಸೇರಿದಂತೆ 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಖುಷ್ಬೂ ದಕ್ಷಿಣ ಭಾರತದಲ್ಲಿ ಚಿರಪರಿಚಿತರು.

    ಕೇಂದ್ರದ ನೂತನ ಶಿಕ್ಷಣ ನೀತಿಯನ್ನು ಕಾಂಗ್ರೆಸ್‌ ವಿರೋಧಿಸಿದ್ದರೆ ಖುಷ್ಬು ಸುಂದರ್‌ ಬಹಿರಂಗವಾಗಿಯೇ ಸಮರ್ಥಿಸಿಕೊಂಡಿದ್ದರು. ನೂತನ ಶಿಕ್ಷಣ ಕುರಿತಾಗಿ ಪ್ರಧಾನಿ ಮೋದಿಯನ್ನು ಪ್ರಶಂಸಿಸಿ ಎನ್‌ಇಪಿ ಕುರಿತಾಗಿ ಪಕ್ಷದ ವಿರೋಧಿ ನಿಲುವು ಅನುಸರಿಸಿದ್ದಕ್ಕಾಗಿ ರಾಹುಲ್‌ ಗಾಂಧಿ ಅವರಲ್ಲಿ ಕ್ಷಮೆ ಕೋರಿದ್ದರು.