Tag: ಖೈದಿ

  • ದೇವದುರ್ಗ ಉಪಕಾರಾಗೃಹದಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಬಂಧನ

    ದೇವದುರ್ಗ ಉಪಕಾರಾಗೃಹದಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಬಂಧನ

    ರಾಯಚೂರು: ಜಿಲ್ಲೆಯ ದೇವದುರ್ಗ (Devadurga) ಉಪಕಾರಾಗೃಹ ಗೋಡೆ ಹಾರಿ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು (Under Trial Prisoner) ಪೊಲೀಸರು ಬಂಧಿಸಿದ್ದಾರೆ.

    ಕೊಲೆಪ್ರಕರಣದ ಮೇಲೆ ಜೈಲು ಸೇರಿದ್ದ ಆರೋಪಿ ಅನ್ವರ್ ಬಾಷಾ ಸೆಪ್ಟೆಂಬರ್ 3 ರಂದು ಉಪ ಕಾರಾಗೃಹದಿಂದ ಪರಾರಿಯಾಗಿದ್ದ. ನ್ಯಾಯಾಲಯಕ್ಕೆ ಪ್ರಕರಣ ವಿಚಾರಣೆ ವೇಳೆ ಹಾಜರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನ್ಯಾಯಾಲಯಕ್ಕೆ ಬರುವ ಸಾಧ್ಯತೆ ಹಿನ್ನೆಲೆ ಕಣ್ಣಿಟ್ಟಿದ್ದ ಪೊಲೀಸರು ನ್ಯಾಯಾಧೀಶರ ಅನುಮತಿ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಕೊಲೆಗೈದು ಅಪಘಾತವೆಂದು ಬಿಂಬಿಸಲು ಯತ್ನಿಸಿದ ಮೂವರ ಬಂಧನ

    ಅನ್ವರ್ ಬಾಷಾ ದೇವದುರ್ಗದ ಮಸಿಹಾಳ ಗ್ರಾಮದ ಲಾಲಾ ಸಾಬ್ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದಾನೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿ ಈಗ ಪುನಃ ಜೈಲು ಸೇರಿದ್ದಾನೆ. ಇದನ್ನೂ ಓದಿ: ಬೈಕ್‍ಗೆ ಅಂಬುಲೆನ್ಸ್ ಡಿಕ್ಕಿ ಸವಾರ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈಲಿನಲ್ಲೇ ಉಕ್ರೇನ್ ಖೈದಿಗಳ ಸಾವು – ತನಿಖೆಗೆ UN, ರೆಡ್‍ಕ್ರಾಸ್ ಆಹ್ವಾನಿಸಿದ ರಷ್ಯಾ

    ಜೈಲಿನಲ್ಲೇ ಉಕ್ರೇನ್ ಖೈದಿಗಳ ಸಾವು – ತನಿಖೆಗೆ UN, ರೆಡ್‍ಕ್ರಾಸ್ ಆಹ್ವಾನಿಸಿದ ರಷ್ಯಾ

    ಮಾಸ್ಕೋ: ಜೈಲಿನಲ್ಲಿ ಉಕ್ರೇನ್ ಖೈದಿಗಳ ಸಾವಿನ ಬಗ್ಗೆ ತನಿಖೆ ನಡೆಸಲು ವಿಶ್ವಸಂಸ್ಥೆ ಮತ್ತು ರೆಡ್‍ಕ್ರಾಸ್‍ನ ತಜ್ಞರನ್ನು ರಷ್ಯಾ ಆಹ್ವಾನಿಸಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.

    ಮಾಸ್ಕೋ ಬೆಂಬಲಿತ ಪ್ರತ್ಯೇಕತಾವಾದಿಗಳ ಜೈಲಿನ ಮೇಲೆ ದಾಳಿಯಾಗಿರುವ ಕುರಿತು ವಸ್ತುನಿಷ್ಠ ತನಿಖೆ ನಡೆಸುವ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಾವು ಕೇಳಿಕೊಂಡಿದ್ದೇವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಾಕ್ ಪ್ರಧಾನಿಗೆ ಸಮನ್ಸ್ ಜಾರಿ 

    ಜೈಲಿನಲ್ಲಿ ನಡೆದ ದಾಳಿಯಿಂದ ಮೃತರ ಸಂಖ್ಯೆ 53ಕ್ಕೆ ಏರಿದೆ. ಕೀವ್ ಜೈಲಿಗೆ ರಾಕೆಟ್‍ಗಳಿಂದ ಹೊಡೆಯಲಾಗಿದೆ. ಈ ವೇಳೆ ಉಕ್ರೇನ್‍ನ ಸಶಸ್ತ್ರ ಪಡೆ ಕಾರ್ಯ ನಿರ್ವಹಿಸಲು ವಿಫಲವಾಗಿದೆ. ರಷ್ಯಾದ ಫಿರಂಗಿದಳವು ಜೈಲನ್ನು ಗುರಿಯಾಗಿಟ್ಟುಕೊಂಡು ದಾಳಿ ಮಾಡಿದೆ ಎಂದು ಉಕ್ರೇನ್ ಆರೋಪಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ಕೈದಿ

    ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ಕೈದಿ

    ಮುಂಬೈ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಯರವಾಡ ತೆರೆದ ಜೈಲಿನಲ್ಲಿರುವ ಬ್ಯಾರಕ್‍ನಲ್ಲಿ ನಡೆದಿದೆ.

    ಗಣೇಶ್ ತಾಂಬೆ (53) ಆತ್ಮಹತ್ಯೆಗೆ ಶರಣಾದ ಕೈದಿ. 2010ರಲ್ಲಿ ವಿರಾರ್‌ನಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರಲ್ಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನೂ ಓದಿ: Galwan Clash ಚೀನಾದ ಸುಳ್ಳು ಬಯಲು – 38 ಪಿಎಲ್‌ಎ ಯೋಧರು ಸಾವು – ಭಾರತದ ಸೇನೆಗೆ ಹೆದರಿ ಪರಾರಿಯಾದ ಚೀನಿ ಸೈನಿಕರು

    ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಡುಗೆ ಮನೆಯಲ್ಲಿ ಕೆಲಸ ಮುಗಿಸಿದ್ದ ತಾಂಬೆ ಬ್ಯಾರಕ್‍ನೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇತರೆ ಜೈಲು ಕೈದಿಗಳು ಆತನ ಶವವನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಾಲಕಿಯ ತಲೆ ಕಡಿದು ರುಂಡದೊಂದಿಗೆ ಊರಿಡೀ ಸುತ್ತಿದ

    ಉಪ ಪೊಲೀಸ್ ಆಯುಕ್ತ ರೋಹಿದಾಸ್ ಪವಾರ್ ಮಾತನಾಡಿ, ಕೈದಿ ಗುರುವಾರ ಮಧ್ಯಾಹ್ನ ಯರವಾಡ ಜೈಲಿನ ಬ್ಯಾರಕ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪ್ರಾಥಮಿಕ ತನಿಖೆಯು ಆತ್ಮಹತ್ಯೆಯನ್ನು ಸೂಚಿಸುತ್ತದೆ. ಆತ್ಮಹತ್ಯೆಗೆ ಕಾರಣ ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡ ಶಿವಮೊಗ್ಗದ ಖೈದಿ

    ಶಿವಮೊಗ್ಗ: ಖೈದಿಯೊಬ್ಬನು ಗ್ರಂಥಾಲಯದ ಕಬ್ಬಿಣದ ರ್ಯಾಕ್‍ಗೆ ಅಳವಡಿಸಿದ ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

    ತೀರ್ಥಹಳ್ಳಿ ಮೂಲದ ಮಹಮ್ಮದ್ ನೌಷದ್ (34) ಕುತ್ತಿಗೆ ಕೊಯ್ದುಕೊಂಡ ಖೈದಿ. ಗಾಂಜಾ ಪ್ರಕರಣದಲ್ಲಿ ಜ.7ರಂದು ಬಂಧನಕ್ಕೆ ಒಳಗಾಗಿದ್ದ. ಇದನ್ನೂ ಓದಿ: ಕಾಶ್ಮೀರದಲ್ಲಿ ನಿರ್ಮಾಣವಾಗ್ತಿದೆ ಐಫೆಲ್ ಟವರ್‍ಗಿಂತ ಎತ್ತರದ ಬ್ರಿಡ್ಜ್

    ಗಾಂಜಾ ಹಾಗೂ ಮದ್ಯ ವ್ಯಸನಿಯಾಗಿದ್ದ ನೌಷದ್‍ನನ್ನು ನೋಡಲು ಕಾರಾಗೃಹಕ್ಕೆ ಯಾರೂ ಬರುತ್ತಿರಲಿಲ್ಲ. ಜಾಮೀನು ಕೊಡಿಸುತ್ತಿಲ್ಲ ಅಂತ ಮನನೊಂದಿದ್ದ. ಗಾಯಗೊಂಡ ಖೈದಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

  • 5-6 ದಿನ ಪುನೀತ್ ಸಮಾಧಿ ಬಳಿ ಯಾರನ್ನೂ ಬಿಡಲ್ಲ: ಅರಗ ಜ್ಞಾನೇಂದ್ರ

    5-6 ದಿನ ಪುನೀತ್ ಸಮಾಧಿ ಬಳಿ ಯಾರನ್ನೂ ಬಿಡಲ್ಲ: ಅರಗ ಜ್ಞಾನೇಂದ್ರ

    – 6 ಸಾವಿರ ಅನಕ್ಷರಸ್ಥ ಖೈದಿಗಳಿಗೆ ಜೈಲಲ್ಲೇ ಶಿಕ್ಷಣ, ಇಂದಿನಿಂದಲೇ ಜಾರಿ

    ಚಿಕ್ಕಮಗಳೂರು: ನಟ ಪುನೀತ್ ರಾಜ್‍ಕುಮಾರ್ ಸಮಾಧಿ ಬಳಿ ಈಗಲೇ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಿದರೆ ಜನ ಮುಗಿಬೀಳುತ್ತಾರೆ. ಹಾಗಾಗಿ, ಕುಟುಂಬದ ಎಲ್ಲ ವಿಧಿ-ವಿಧಾನ ಮುಗಿದ ಬಳಿಕ ಸುತ್ತಲೂ ಬೇಲಿ ಹಾಕಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐದಾರು ದಿನದಲ್ಲಿ ಎಲ್ಲ ಕೆಲಸ ಮುಗಿಸಿ ಪುನೀತ್ ಸಮಾಧಿಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿಸಿದರು.

    ಬೆಳಗಾವಿಯಲ್ಲಿ ಎಂಇಎಸ್ ಅವಹೇಳನಕಾರಿ ಪೋಸ್ಟ್ ಬಗ್ಗೆ ಮಾತನಾಡಿದ ಅವರು, ಅದೇ ಅವರಿಗೆ ಜೀವಾಳ. ಎಂಇಎಸ್ ಪದೇ-ಪದೇ ಈ ರೀತಿಯ ಕೆಲಸ ಮಾಡುತ್ತಿದ್ದಾರೆ. ಇದೇ ರೀತಿ ಮಾಡಿ ಅದು ಮೂಲೆಗುಂಪಾಗಿದೆ. ಅದು ಮಹಾರಾಷ್ಟ್ರದಲ್ಲೂ ಇಲ್ಲ. ಭಾಷೆ ಬಗ್ಗೆ ಭಾವೋದ್ವೇಗ ಉಂಟುಮಾಡಿ ಚುನಾವಣೆ ಗೆಲ್ಲಬಹುದು. ಇದರಿಂದ ರಾಜಕಾರಣ ಮಾಡಬಹುದು ಎಂದು ಭಾವಿಸಿದ್ದಾರೆ. ಎಂಇಎಸ್ ಗೆ ಈಗಾಗಲೇ ಇತಿಶ್ರೀ ಹಾಡಲಾಗಿದೆ. ಬೆಳಗಾವಿ ಕಾರ್ಪೋರೇಷನ್ ಬಿಜೆಪಿಗೆ ಹಿಡಿತಕ್ಕೆ ಬಂದಿದ್ದು, ಎಂಇಎಸ್ ನ ಮೂಲೆ ಗುಂಪು ಮಾಡಲಾಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಇನ್‍ಸ್ಟಾದಿಂದ ಮದುವೆ ಫೋಟೋ ಡಿಲೀಟ್ ಮಾಡಿದ ಸಮಂತಾ

    ಇದೇ ವೇಳೆ, ಜೈಲಿನ ಖೈದಿಗಳಿಗೆ ಶಿಕ್ಷಣದ ಬಗ್ಗೆ ಮಾತನಾಡಿದ ಅವರು, ರಾಜ್ಯದ 50 ಜೈಲುಗಳಲ್ಲಿ ಹೆಬ್ಬೆಟ್ಟು ಒತ್ತುವವರು ಇದ್ದಾರೆ. ಜೈಲಿನಲ್ಲಿ ಸುಮಾರು ಆರು ಸಾವಿರ ಅನಕ್ಷರಸ್ಥರಿದ್ದಾರೆ. ಅವರಿಗೆ ಅಕ್ಷರ ಕಲಿಸುವ ಕೆಲಸವನ್ನು ಆಂದೋಲನದ ರೀತಿ ಮಾಡುತ್ತಿದ್ದೇವೆ ಎಂದರು.

    ಇಂದು ಗೃಹ ಇಲಾಖೆಯಿಂದ ಕನ್ನಡದಲ್ಲಿ ಸಂಜ್ಞೆಯನ್ನು ಕೊಡುವಂತಹ ಪದ್ಧತಿ ಜಾರಿಗೆ ತಂದಿದ್ದೇವೆ. ಇಷ್ಟು ದಿನ ಹಿಂದಿ ಮತ್ತು ಇಂಗ್ಲೀಷ್‍ನಲ್ಲಿ ಮಾತ್ರ ಸಂಜ್ಞೆಯನ್ನು ಕೊಡುವ ಪದ್ಧತಿ ಇತ್ತು. ಇವತ್ತಿನಿಂದ ಕನ್ನಡದಲ್ಲಿ ಕೊಡುತ್ತಿದ್ದೇವೆ. ಕಳೆದ ಒಂದು ವರ್ಷದ ಹಿಂದಿನಿಂದಲೂ ಕನ್ನಡದಲ್ಲಿ ತರ್ಜುಮೆ ಮಾಡಿ ತಯಾರು ಮಾಡಿ ಇಟ್ಟಿದ್ದರು. ಅದನ್ನು ಜಾರಿಗೆ ತರಲೇಬೇಕೆಂದು ಯೋಚನೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಿ ಇಂದಿನಿಂದ ಜಾರಿಗೆ ತರುತ್ತಿದ್ದೇವೆ ಎಂದು ತಿಳಿಸಿದರು.

    ಜೈಲಿನಲ್ಲಿರುವ ಅನಕ್ಷರಸ್ಥರಿಗೆ ಅಕ್ಷರ ಕಲಿಸೋದಕ್ಕೂ ಸರ್ಕಾರ ಮುಂದಾಗಿದೆ. ಅದಕ್ಕೆ ವಯಸ್ಕರ ಶಿಕ್ಷಣ ಸಮಿತಿ ಅವರು ಹಾಗೂ ಜೈಲಿನಲ್ಲಿರುವ ವಿದ್ಯಾವಂತ ಖೈದಿಗಳಿಗೆ ಸಂಬಳ ನೀಡಿ ನೇಮಕ ಮಾಡಿಕೊಂಡಿದ್ದು, ಇರುವಷ್ಟು ದಿನವೂ ತರಗತಿ ನಡೆಸಿ ಓದು ಬರಹ ಕಲಿತು ಖೈದಿಗಳು ಹೊರ ಹೋಗಬೇಕಾಗುತ್ತೆ. ಈ ರೀತಿಯ ಕೆಲಸವನ್ನ ಇಂದಿನಿಂದ ಬಂದಿಖಾನೆ ಇಲಾಖೆ ಜಾರಿಗೆ ತಂದಿದೆ ಎಂದರು. ಇದನ್ನೂ ಓದಿ: ನಮ್ಮನ್ನ ಎಂದೂ ಅವ್ರು ಕೆಲ್ಸದವರಂತೆ ನೋಡಿಲ್ಲ: ಕೇಶ ವಿನ್ಯಾಸಕಾರ ಕಾರ್ತಿಕ್ ಭಾವುಕ

  • ವಿಚಾರಣಾಧೀನ ಖೈದಿ ಜೈಲಿನಲ್ಲಿ ಸಾವು

    ವಿಚಾರಣಾಧೀನ ಖೈದಿ ಜೈಲಿನಲ್ಲಿ ಸಾವು

    ರಾಯಚೂರು: ಮಗನ ಕೊಲೆ ಆರೋಪದಲ್ಲಿ ಜೈಲುಪಾಲಾಗಿದ್ದ ಖೈದಿ ಏಕಾಏಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕು ಕಾರಾಗೃಹದಲ್ಲಿ ನಡೆದಿದೆ.

    ಹನುಮಂತ(70) ಮೃತಪಟ್ಟಿರುವ ವಿಚಾರಣಾಧೀನ ಖೈದಿ. ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿ ಜುಲೈ 28 ರಂದು ಕೊಲೆ ಪ್ರಕರಣ ನಡೆದಿತ್ತು. ಆರೋಪಿ ಹನುಮಂತನನ್ನು ಜುಲೈ 29ರಂದು ವಶಕ್ಕೆ ಪಡೆದಿದ್ದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ 18 ವರ್ಷದ ಮಗ ಭೀಮಣ್ಣನನ್ನು ಕಾಲುವೆಗೆ ನೂಕಿ ಕೊಲೆ ಮಾಡಿರುವ ಆರೋಪವನ್ನು ಹನುಮಂತ ಎದುರಿಸುತ್ತಿದ್ದ. ಇದನ್ನೂ ಓದಿ: ಕೇಂದ್ರ ಸಚಿವ ಭಗವಂತ್ ಖೂಬಾ ನೇತೃತ್ವದಲ್ಲಿ ರಾಯಚೂರಿನಲ್ಲಿ ಜನಾಶೀರ್ವಾದ ಯಾತ್ರೆ

    ಆಗಸ್ಟ್ 18 ರಂದು ಹನುಮಂತ ಹಠಾತ್ತನೆ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ರಾಯಚೂರಿನ ರಿಮ್ಸ್ ಆಸ್ಪತ್ರೆ ಶವಾಗಾರದಲ್ಲಿ ಆರೋಪಿ ಮೃತ ದೇಹ ಇರಿಸಲಾಗಿದೆ. ಮ್ಯಾಜಿಸ್ಟ್ರೇಟ್ ಮುಂದೆಯೇ ಮರಣೋತ್ತರ ಪರೀಕ್ಷೆ ನಡೆಯಲಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತನ ಸಂಬಂಧಿಕರು ಕಾಯುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಳಿಕ ವಿಚಾರಣಾಧೀನ ಖೈದಿ ಸಾವಿನ ಕಾರಣ ತಿಳಿದು ಬರಲಿದೆ.

  • ಗಾಂಜಾ ಕೇಸಲ್ಲಿ ಅಂದರ್, ಕೊರೊನಾ ಕೇಸಲ್ಲಿ ಬಾಹರ್

    ಗಾಂಜಾ ಕೇಸಲ್ಲಿ ಅಂದರ್, ಕೊರೊನಾ ಕೇಸಲ್ಲಿ ಬಾಹರ್

    ಚಿಕ್ಕಮಗಳೂರು: ವಾರದ ಹಿಂದೆ ಗಾಂಜಾ ಕೇಸಲ್ಲಿ ಅಂದರ್ ಆಗಿದ್ದ ಖೈದಿಗೂ ಕೊರೊನಾ ಪಾಸಿಟಿವ್ ಬಂದು ಜೈಲಿನಿಂದ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಮಾರುತಿ 800 ಕಾರಿನಲ್ಲಿ 50 ಕೆ.ಜಿ. ಗಾಂಜಾವನ್ನ ಸಾಗಿಸುತ್ತಿದ್ದ ನಾಲ್ವರನ್ನ ಪೊಲೀಸರು ಬಂಧಿಸಿದ್ದರು. ಬಂಧಿತ ನಾಲ್ವರನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿತ್ತು. ಆ ನಾಲ್ವರಲ್ಲಿ ಓರ್ವನಿಗೆ ಕೊರೊನಾ ಸೋಂಕು ದೃಢವಾಗಿದ್ದು, ಸೋಂಕಿತ ಖೈದಿಯನ್ನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತ ನಾಲ್ವರು ಆಂಧ್ರಪ್ರದೇಶದದಿಂದ 80 ಕೆ.ಜಿ. ಗಾಂಜಾ ತರಿಸಿ 30 ಕೆಜಿಯನ್ನ ಹಾಸನ ಹಾಗೂ ಸಖಲೇಶಪುರದಲ್ಲಿ ಮಾರಾಟ ಮಾಡಿದ್ದರು. ಉಳಿದ 50 ಕೆ.ಜಿ. ಗಾಂಜಾವನ್ನ ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಮಾರುತಿ 800 ಕಾರಿನಲ್ಲಿ ಮಂಗಳೂರಿಗೆ ಸಾಗಿಸುವಾಗ ಪೊಲೀಸರ ಅಥಿತಿಯಾಗಿದ್ದರು.

    Hyderabad: Medics outside an isolation ward of the novel coronavirus (COVID-19) at a hospital in Hyderabad, Friday, March 13, 2020. India has more than 70 positive coronavirus cases so far and recorded its first COVID-19 death in Karnataka. (PTI Photo)(PTI13-03-2020_000060B)

    ಇದೀಗ ಆ ನಾಲ್ವರಲ್ಲಿ ಓರ್ವನಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಇದು ದೊಡ್ಡ ಗಾಂಜಾ ರೇಡ್ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಸಿಬ್ಬಂದಿಯನ್ನ ಶ್ಲಾಘಿಸಿದ್ದರು. ಈಗ ಕೋವಿಡ್ ಆಸ್ಪತ್ರೆಗೆ ದಾಖಲಿಸುವ ಗಾಂಜಾ ಕಳ್ಳನಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಇಟ್ಟು ಇಬ್ಬರು ಪೊಲೀಸ್ ಸಿಬ್ಬಂದಿಯನ್ನ ಬಂದೋಬಸ್ತ್ ಗೆ ಹಾಕಬೇಕಾಗಿದೆ. ಸಾಲದಕ್ಕೆ ಆ ನಾಲ್ವರನ್ನ ಬಂಧಿಸಿದ ಸುಮಾರು ಎಂಟಕ್ಕೂ ಅಧಿಕ ಪೊಲೀಸರು ಕೂಡ ಕ್ವಾರಂಟೈನ್ ಗೆ ಒಳಗಾಗಬೇಕಿದೆ.

  • ನ್ಯಾಯಾಲಯಕ್ಕೆ ಖಾರದ ಪುಡಿ ತಂದ ಖೈದಿ

    ನ್ಯಾಯಾಲಯಕ್ಕೆ ಖಾರದ ಪುಡಿ ತಂದ ಖೈದಿ

    ಧಾರವಾಡ/ಹುಬ್ಬಳ್ಳಿ: ವಿಚಾರಣಾಧೀನ ಖೈದಿಯೊಬ್ಬ ನ್ಯಾಯಾಲಯಕ್ಕೆ ಖಾರದ ಪುಡಿ ಹಾಗೂ ಬೆಂಕಿ ಪೊಟ್ಟಣ ತಗೆದುಕೊಂಡು ಬಂದು ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ನಗರದ ಹೊಸ ಕೋರ್ಟ್ ನಲ್ಲಿ ನಡೆದಿದೆ.

    ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಹಾನಗಲ್ ಮೂಲದ ನಾಗರಾಜ್ ಎಂಬಾತನೇ ಖಾರದ ಪುಡಿ ಹಾಗೂ ಬೆಂಕಿ ಪೊಟ್ಟಣವನ್ನು ಕಿಸೆಯಲ್ಲಿ ಇಟ್ಟುಕೊಂಡು ನ್ಯಾಯಾಲಯಕ್ಕೆ ಆಗಮಿಸಿದ ಆರೋಪಿ. ಹಾವೇರಿ ಟೌನ್ ಠಾಣೆ ಪೊಲೀಸರು ಮನೆಗಳ್ಳತನ ಪ್ರಕರಣದಲ್ಲಿ ಈತನನ್ನು ಬಂಧಿಸಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಕಳುಹಿಸಿದ್ದರು. ಇಂದು ಬಳ್ಳಾರಿ ಜೈಲಿನಿಂದ ಹುಬ್ಬಳ್ಳಿ ಕೋರ್ಟ್ ಗೆ ವಿಚಾರಣೆಗಾಗಿ ಕರೆ ತರಲಾಗಿತ್ತು. ಆದ್ರೆ ಕೋರ್ಟ್ ಆವರಣ ಪ್ರವೇಶಕ್ಕೂ ಮುನ್ನ ಭದ್ರತಾ ಸಿಬ್ಬಂದಿ ಈತನನ್ನು ತಪಾಸಣೆ ಮಾಡಿದಾಗ ಈತನ ಬಳಿ ಖಾರದ ಪುಡಿ ಹಾಗೂ ಬೆಂಕಿ ಪೊಟ್ಟಣ ಪತ್ತೆಯಾಗಿದೆ. ಇದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು.

    ಜೈಲಿನಲ್ಲಿ ಈತನಿಗೆ ಖಾರದ ಪುಡಿ ಹಾಗೂ ಬೆಂಕಿ ಪೊಟ್ಟಣ ಕೊಟ್ಟವರು ಯಾರು ಎಂಬ ಅನುಮಾನ ಕಾಡುತ್ತಿದೆ. ಅದರ ಜೊತೆಗೆ ಈ ವಸ್ತುಗಳನ್ನು ನ್ಯಾಯಾಲಯಕ್ಕೆ ಏಕೆ ತಗೆದುಕೊಂಡ ಬಂದ. ಈತನ ಉದ್ದೇಶ ಏನಾಗಿತ್ತು ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ. ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಈತನ ಬಳಿ ಇಂತಹ ವಸ್ತುಗಳು ಪತ್ತೆಯಾಗಿದ್ದು ಬಳ್ಳಾರಿ ಜೈಲಿನ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ. ಆದ್ರೆ ಕೋರ್ಟ್ ನ ಭದ್ರತಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಆಗಬಹುದಾದ ಅನಾಹುತ ತಪ್ಪಿದಂತಾಗಿದೆ.

  • ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಅನುಮಾನಾಸ್ಪದ ಸಾವು!

    ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಅನುಮಾನಾಸ್ಪದ ಸಾವು!

    ಕಲಬುರಗಿ: ಜಿಲ್ಲೆಯ ಹೊರವಲಯದ ಕೇಂದ್ರಿಯ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಜೈಲಿನಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

    ಜಿ. ಮಹೇಶ್(35) ಮೃತಪಟ್ಟ ಕೈದಿ. ಗುರುವಾರ ತಡರಾತ್ರಿ ಜೈಲಿನಲ್ಲಿ ಊಟ ಮುಗಿಸಿ ಐಪಿಎಲ್ ಮ್ಯಾಚ್ ನೋಡಿ ಮಹೇಶ್ ಮಲಗಿದ್ದನು. ಆದ್ರೆ ಬೆಳಗಾಗುವ ಹೊತ್ತಿಗೆ ಮಲಗಿದ್ದಲ್ಲೇ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸದ್ಯ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

    ಮೊದಲು ಬೆಂಗಳೂರು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದ ಮಹೇಶ್, ಇತ್ತೀಚೆಗೆ ಕಲಬುರಗಿ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದನು. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅಪರಾಧಿ 1999ರಿಂದ 2019ರ ವರೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದನು. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಕಲಬುರಗಿ ಕಾರಾಗೃಹಕ್ಕೆ ಆತನನ್ನು ವರ್ಗಾವಣೆ ಮಾಡಲಾಗಿತ್ತು.

    ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಆರೋಪಿಗೆ ಅದ್ಧೂರಿ ಮೆರವಣಿಗೆ

    ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಆರೋಪಿಗೆ ಅದ್ಧೂರಿ ಮೆರವಣಿಗೆ

    ಬಾಗಲಕೋಟೆ: ಜಾಮೀನು ಮೇಲೆ ಜೈಲಿನಿಂದ ಹೊರಬಂದ ಎಂಐಎಂ ಮುಖಂಡರಿಗೆ ಬಾಗಲಕೋಟೆಯಲ್ಲಿ ಅದ್ಧೂರಿ ಮೆರವಣಿಗೆ ಮೂಲಕ ಸ್ವಾಗತ ಮಾಡಿಕೊಂಡಿದ್ದಾರೆ.

    ಟಿಪ್ಪು ಜಯಂತಿ ಅಂಗವಾಗಿ ನಿಷೇಧಾಜ್ಞೆ ನಡುವೆಯೂ ನವಂಬರ್ 3 ರಂದು ಇಳಕಲ್ ಪಟ್ಟಣದಲ್ಲಿ ಕೆಲ ಮುಖಂಡರು ಮೆರವಣಿಗೆ ಅನುಮತಿ ನೀಡುವಂತೆ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ನಗರದಲ್ಲಿ ಪೊಲೀಸರ ಮೇಲೆ ಕೆಲವರು ಕಲ್ಲೂತೂರಾಟ ನಡೆಸಿದ್ದರು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದರಿಂದ ಪಟ್ಟಣದಲ್ಲಿ ಬಿಗುವಿನ ವಾತಾವರಣಕ್ಕೆ ಕಾರಣವಾಗಿತ್ತು.

    ಆ ಘಟನೆಗೆ ಸಂಬಂಧಿಸಿ ಎಂಐಎಂ ಮುಖಂಡ ಉಸ್ಮಾನಗಣಿ ಉಮನಾಬಾದ್, ಜೆಡಿಎಸ್ ಮುಖಂಡ ಜಬ್ಬರ ಕಲಬುರ್ಗಿ ಸೇರಿದಂತೆ 13 ಜನರ ಮೇಲೆ ದೂರು ದಾಖಲಾಗಿ ಜೈಲಿಗೆ ಕಳುಹಿಸಲಾಗಿತ್ತು. ಆದರೆ ಸೋಮವಾರ ಜಾಮೀನಿನ ಮೇಲೆ ಹೊರಬಂದವರಿಗೆ ಮೆರವಣಿಗೆ ಮೂಲಕ ಸ್ವಾಗತ ಮಾಡಿಕೊಳ್ಳಲಾಗಿದೆ.

    ಇದನ್ನೂ ಓದಿ: ಬೇಲ್ ಮೇಲೆ ಬಿಡುಗಡೆಯಾದ ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ- 500 ಬೈಕ್, ಕಾರ್‍ಗಳ ಜೊತೆ ಮೆರವಣಿಗೆ