Tag: ಗಂಗಾವತಿ ಪ್ರಾಣೇಶ್

  • ಗಂಗಾವತಿ ಪ್ರಾಣೇಶ್‍ಗೆ ಒಲಿದು ಬಂದ ರಾಜ್ಯೋತ್ಸವ ಪ್ರಶಸ್ತಿ

    ಗಂಗಾವತಿ ಪ್ರಾಣೇಶ್‍ಗೆ ಒಲಿದು ಬಂದ ರಾಜ್ಯೋತ್ಸವ ಪ್ರಶಸ್ತಿ

    ಕೊಪ್ಪಳ: ಜಿಲ್ಲೆಯ ಗಂಗಾವತಿ ಜಯನಗರ ನಿವಾಸಿಯಾದ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

    ರಾಜ್ಯೋತ್ಸವ ಪ್ರಶಸ್ತಿಯ ಸಂಕೀರ್ಣ ವಿಭಾಗದಲ್ಲಿ ಪ್ರಾಣೇಶ್‍ಗೆ ಪ್ರಶಸ್ತಿ ಬಂದಿದೆ. ಸತತ 30 ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಪ್ರಾಣೇಶ್ ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಅವುಗಳಲ್ಲಿ ನಗಿಸುವವನ ನೋವುಗಳು, ಅನಿಸಿದ್ದು ಅನುಭವಿಸಿದ್ದು, ಪ್ರಾಣೇಶ್ ಪಯಣ, ಪ್ರಾಣೇಶ್ ಪಂಚ್ ಇನ್ನಿತರ ಕೃತಿಗಳು ಜನರ ಮೆಚ್ಚುಗೆಯನ್ನು ಪಡೆದುಕೊಂಡಿವೆ. ಇದನ್ನೂ ಓದಿ: ದೇವರಾಜ್‌, ಬೋಪಣ್ಣ ಸೇರಿದಂತೆ 66 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸ್ಯ ಕಲಾವಿದರಾಗಿ ಪ್ರಾಣೇಶ್ ರಾಜ್ಯ ಸೇರಿದಂತೆ ದೇಶ, ವಿದೇಶಗಳಲ್ಲಿ ಕೂಡ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. 30 ವರ್ಷಗಳ ಸಾಹಿತ್ಯ ಸೇವೆಯನ್ನು ಗುರುತಿಸಿ, ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಸಂತಸದ ವಿಷಯವಾಗಿದೆ. ಈ ಪ್ರಶಸ್ತಿಯನ್ನು ನನ್ನ ಕಾರ್ಯಕ್ರಮಗಳಿಗೆ ಆಗಮಿಸಿ ನಕ್ಕು ಆರ್ಶೀವಾದ ಮಾಡಿದವರಿಗೆ ಅರ್ಪಿಸುತ್ತೇನೆ ಎಂದು ಪ್ರಾಣೇಶ್ ಪಬ್ಲಿಕ್ ಟಿವಿ ಜೊತೆ ಸಂತಸ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕಾಡಿನಲ್ಲೇ ತನ್ನ ಆಯಸ್ಸು ಕಳೆದ 90ರ ವೃದ್ಧನಿಗೆ ಒಲಿದು ಬಂತು ರಾಜ್ಯೋತ್ಸವ ಪ್ರಶಸ್ತಿ

  • ಮತದಾನದ ಜಾಗೃತಿಗಾಗಿ ಪ್ರಾಣೇಶ್ ಆಯ್ಕೆ- ಕಾಂಗ್ರೆಸ್ ವಿರೋಧ

    ಮತದಾನದ ಜಾಗೃತಿಗಾಗಿ ಪ್ರಾಣೇಶ್ ಆಯ್ಕೆ- ಕಾಂಗ್ರೆಸ್ ವಿರೋಧ

    ಕೊಪ್ಪಳ: ಲೋಕಸಭಾ ಚುನಾವಣೆಯ ಕೊಪ್ಪಳ ಜಿಲ್ಲಾ ರಾಯಭಾರಿಯಾಗಿ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರನ್ನು ಆಯ್ಕೆ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.

    ಕಾಂಗ್ರೆಸ್‍ನ ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಶಾಂತ್ ನಾಯಕ್, ಫೇಸ್‍ಬುಕ್‍ನಲ್ಲಿ ಪ್ರಾಣೇಶ್ ಅವರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು, ಎಡ ಪಕ್ಷಗಳ ಮುಖಂಡರಿಂದ ಪ್ರಾಣೇಶ್ ಆಯ್ಕೆಯನ್ನು ಕೈಬಿಡುವಂತೆ ಆಗ್ರಹ ಕೇಳಿಬರುತ್ತಿದೆ.

    ಮತದಾನ ಜಾಗೃತಿ ಜಿಲ್ಲೆಯ ಐಕಾನ್ ಆಗಿ ಗಂಗಾವತಿ ಪ್ರಾಣೇಶ್ ಅವರ ಆಯ್ಕೆ ಮಾಡಲಾಗಿದೆ. ಆದರೆ ಇದಕ್ಕೆ ಜಿಲ್ಲೆಯಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಪ್ರಾಣೇಶ್ ಅವರು ಹಾಸ್ಯ ಕಾರ್ಯಕ್ರಮಗಳಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಹಿಂಪಡೆದು, ಕೊಪ್ಪಳ ಗವಿ ಮಠದ ಸ್ವಾಮೀಜಿ ಅವರನ್ನು ನೇಮಕ ಮಾಡಬೇಕು ಎಂದು ಪ್ರಶಾಂತ್ ನಾಯಕ್ ಒತ್ತಾಯಿಸಿದ್ದಾರೆ.

    ಗಂಗಾವತಿ ಪ್ರಾಣೇಶ್ ಅವರು ಆರ್‍ಎಸ್‍ಎಸ್ ಸಿದ್ಧಾಂತ ಹಾಗೂ ಮನುವಾದವನ್ನು ಒಪ್ಪಿಕೊಂಡಿರುವ ಕಲಾವಿದ. ಕಲಾವಿದರಿಗೆ ಜಾತಿ, ಧರ್ಮ ಇರುವುದಿಲ್ಲ. ಆದರೆ ಪ್ರಾಣೇಶ್ ಮೂಲಭೂತವಾದಿ. ಅವರನ್ನು ಮತದಾರರ ಜಾಗೃತಿ ಐಕಾನ್ ಆಗಿ ಆಯ್ಕೆ ಮಾಡಿರುವುದು ಜಿಲ್ಲೆಯ ಮತದಾರರಿಗೆ ಮಾಡಿದ ದ್ರೋಹ ಎಂದು ಭಾರದ್ವಾಜ್ ಗಂಗಾವತಿ ಕಿಡಿಕಾರಿದ್ದಾರೆ.

    ಪ್ರಾಣೇಶ್ ಹೇಳಿದ್ದೇನು?
    ಯಾರ ನಗುವುದಿಲ್ಲವೋ ಅವರು ಮುಂದಿನ ದಿನದಲ್ಲಿ ರಾಹುಲ್ ಗಾಂಧಿ ಬಾಡಿಗಾರ್ಡ್ ಆಗುತ್ತಾರೆ. ರಾಹುಲ್ ಗಾಂಧಿ ಏನೇ ಮಾತನಾಡಿದರೂ ನಗುವ ಹಾಗಿಲ್ಲ ಎಂದು ಪ್ರಾಣೇಶ್, ಹಾಸ್ಯ ಕಾರ್ಯಕ್ರಮದಲ್ಲಿ ಹೇಳಿದ್ದರು. ಈ ವಿಡಿಯೋವನ್ನು ಪ್ರಶಾಂತ್ ನಾಯಕ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ಸಮಗ್ರ ಕರ್ನಾಟಕವನ್ನು ಕೇಕ್ ನಂತೆ ಕತ್ತರಿಸುವುದು ಸರಿಯಲ್ಲ: ಗಂಗಾವತಿ ಪ್ರಾಣೇಶ್

    ಸಮಗ್ರ ಕರ್ನಾಟಕವನ್ನು ಕೇಕ್ ನಂತೆ ಕತ್ತರಿಸುವುದು ಸರಿಯಲ್ಲ: ಗಂಗಾವತಿ ಪ್ರಾಣೇಶ್

    ಕೊಪ್ಪಳ: ಸಮಗ್ರ ಕರ್ನಾಟಕವನ್ನು ಕೇಕ್ ನಂತೆ ಕತ್ತರಿಸಿ, ಪ್ರತ್ಯೇಕಗೊಳಿಸುವುದು ಸರಿಯಲ್ಲ ಎಂದು ಖ್ಯಾತ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅಭಿಪ್ರಾಯಪಟ್ಟಿದ್ದಾರೆ.

    ಕೊಪ್ಪಳದ ಗಂಗಾವತಿಯಲ್ಲಿ ನಡೆಯುತ್ತಿರುವ 6ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಹಾಸ್ಯ ರೂಪದಲ್ಲಿ ತಮ್ಮ ಭಾಷಣದಲ್ಲಿ ಪ್ರಾಣೇಶ ಪ್ರತಿಕ್ರಿಯೆ ನೀಡಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಕೇಕ್ ಉದಾಹರಣೆಯನ್ನು ತೆಗೆದುಕೊಂಡು, ರಾಜ್ಯವನ್ನು ಕೇಕ್ ನಂತೆ ಕತ್ತರಿಸಿ, ಪ್ರತ್ಯೇಕಗೊಳಿಸುವುದು ಸರಿಯಲ್ಲವೆಂದು ವಿರೋಧ ವ್ಯಕ್ತಪಡಿಸಿದ್ದಾರೆ.

    ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗು ಸರಿಯಲ್ಲ, ಅಖಂಡ ಕರ್ನಾಟಕವಿದ್ದರೆ ರಾಜ್ಯಕ್ಕೆ ಗೌರವ. ಪ್ರತ್ಯೇಕ ರಾಜ್ಯಕ್ಕಿಂತ ಇಲ್ಲಿನ ಸಮಸ್ಯೆಗಳ ಬಗ್ಗೆ ಅವರಿಗೆ ಮನಮುಟ್ಟುವಂತೆ ತಿಳಿಸೋಣ ಜೊತೆಗೆ ಉತ್ತರ ಕರ್ನಾಟಕದ ಸಮಸ್ಯೆಗಳ ಗಮನ ಸೆಳೆಯುವ ಕೆಲಸ ಆಗಬೇಕಾಗಿದೆ ಎಂದು ತಿಳಿಸಿದರು.

    ಪ್ರತ್ಯೇಕ ರಾಜ್ಯಕ್ಕಿಂತ ಇಲ್ಲಿನ ಸಮಸ್ಯೆಗಳ ಪರಿಹಾರದ ಹಾದಿ ಹುಡುಕೋಣ. ಈ ಹಿಂದೆ ಮಹದಾಯಿ ಯೋಜನೆ ಹೋರಾಟ ನಡೆಯುವಾಗ ರೈತರನ್ನು ನಗಿಸುವ ಕೆಲಸ ಮಾಡಿದ್ದೇವೆ. ತುಂಗಭದ್ರಾ ಹೂಳು ತೆಗೆಯುವಾಗ ನಮ್ಮ ಹಾಸ್ಯ ತಂಡ ಭೇಟಿ ನೀಡಿ ಧನ ಸಹಾಯ ಕೂಡ ಮಾಡಿತ್ತು ಎಂದು ನೆನಪಿಸಿಕೊಂಡರು.

    ನಾವು ಉತ್ತರ ಕರ್ನಾಟಕದ ಭಾಷೆ ಬಳಸಿ ಬೆಂಗಳೂರಿನಲ್ಲಿ ದುಡಿಯುತ್ತಿದ್ದೇವೆ. ಹೀಗಾಗಿ ಪ್ರತ್ಯೇಕ ರಾಜ್ಯ ಮಾಡಿದರೆ ಅವರು ನಮ್ಮನ್ನು ಆಹ್ವಾನಿಸುವುದಿಲ್ಲ ಎಂದು ಈ ವೇಳೆ ಹಾಸ್ಯ ಚಟಾಕಿ ಹಾರಿಸಿದರು.