Tag: ಗಂಡ

  • 21 ಮದುವೆಯಾಗಿಲ್ಲ, ನನ್ನಿಂದ್ಲೇ 17 ಲಕ್ಷ ಹಣ ವಸೂಲಿ ಮಾಡಿದ್ದಾರೆ: ಪತ್ನಿ ಆರೋಪ ಸುಳ್ಳೆಂದ ಪತಿ

    21 ಮದುವೆಯಾಗಿಲ್ಲ, ನನ್ನಿಂದ್ಲೇ 17 ಲಕ್ಷ ಹಣ ವಸೂಲಿ ಮಾಡಿದ್ದಾರೆ: ಪತ್ನಿ ಆರೋಪ ಸುಳ್ಳೆಂದ ಪತಿ

    – ಬೆಡ್‌ರೂಂನಲ್ಲಿ ಪ್ರೈವೆಟ್ ವೀಡಿಯೋ ಶೂಟ್ ಮಾಡಿದ್ದ ಎಂದು ಆರೋಪಿಸಿದ್ದ ಪತ್ನಿ

    ಬೆಂಗಳೂರು: ಬೆಡ್‌ರೂಂನಲ್ಲಿ (Bedroom) ಖಾಸಗಿ ವೀಡಿಯೋ ಶೂಟ್ ಮಾಡಿದ್ದ ಎಂದು ಆರೋಪಿಸಿದ್ದ ಪತ್ನಿಯ (Wife) ಆರೋಪವನ್ನು ಪತಿ (Husband) ಹೀನಾಮುಲ ಹಕ್ ತಳ್ಳಿಹಾಕಿದ್ದಾರೆ.

    ನನ್ನ ಗಂಡ 21 ಮದುವೆಯಾಗಿದ್ದಾನೆ, ನನ್ನ ಪ್ರೈವೆಟ್ ವೀಡಿಯೋ ಶೂಟ್ ಮಾಡಿದ್ದಾನೆ ಎಂದೆಲ್ಲಾ ಆರೋಪಿಸಿ ಪತ್ನಿ ಪತಿ ಹೀನಾಮುಲ ಹಕ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಈ ಬೆನ್ನಲ್ಲೇ ವೀಡಿಯೋ ಮೂಲಕ ಪತಿ ಹೀನಾಮುಲ ಹಕ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಪತಿಯಿಂದ್ಲೇ ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳ ವಿಡಿಯೋ ಸೆರೆ – ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯಿಸಿ ಪತ್ನಿಗೆ ಬ್ಲ್ಯಾಕ್‌ಮೇಲ್

    ಮದುವೆಗೆ ಮುಂಚೆ ಆಕೆಯ ಜೊತೆ ಸಂಬಂಧ ಹೊಂದಿದ್ದು ನಿಜ. ಆದರೆ ಆಕೆಯೇ ನನ್ನನ್ನು ಒತ್ತಾಯ ಮಾಡಿ ಲೈಂಗಿಕ ಕ್ರಿಯೆ ನಡೆಸಿದ್ದು, ಸೈಕೋ ರೀತಿಯಲ್ಲಿ ವರ್ತನೆ ಮಾಡುತ್ತಿದ್ದಳು ಎಂದು ಆರೋಪಿಸಿದ್ದಾರೆ. ನನಗೆ ಸಾಕಷ್ಟು ಟಾರ್ಚರ್ ಕೊಡುತ್ತಿದ್ದಳು. ನಾನು 21 ಮದುವೆಯಾಗಿಲ್ಲ, ನನಗೆ ಆಗಿರುವುದು ಒಂದೇ ಮದುವೆ. ನನ್ನ ಬಳಿಯೇ ಅವರು 17 ಲಕ್ಷ ಹಣ ವಸೂಲಿ ಮಾಡಿದ್ದಾರೆ. ನನ್ನ ಪತ್ನಿಗೆ 13 ಲಕ್ಷದ ಒಡವೆ ನಾನೇ ಕೊಡಿಸಿದ್ದೇನೆ. ನಾನು 21 ಮದುವೆ ಆಗಿದ್ದೆ ಆದರೆ ಆಕೆ ಯಾಕೆ ನನ್ನನ್ನು ಮದುವೆಯಾದಳು? ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಪತಿ ಆರೋಪಿಸಿದ್ದಾರೆ.‌ ಇದನ್ನೂ ಓದಿ: ಕೇಂದ್ರ ಸಚಿವ ಸೋಮಣ್ಣ ಮನೆಯಲ್ಲಿ ಜಾತಿಗಣತಿಗೆ 9 ಸಿಬ್ಬಂದಿ – ಸರ್ವೇಗೆ ಇಷ್ಟು ಜನ ಯಾಕೆ ಬಂದ್ರಿ ಅಂತ ಕ್ಲಾಸ್

  • ಕುಡಿತಕ್ಕೆ ದಾಸನಾಗಿದ್ದ ಪತಿಯೊಂದಿಗೆ ಗಲಾಟೆ – ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

    ಕುಡಿತಕ್ಕೆ ದಾಸನಾಗಿದ್ದ ಪತಿಯೊಂದಿಗೆ ಗಲಾಟೆ – ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

    ನೆಲಮಂಗಲ: ಗಂಡ- ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತಿನಂತೆ ಹೆತ್ತ ತಾಯಿ (Mother) ಮನನೊಂದು ಐದು ವರ್ಷದ ತನ್ನ ಮಗುವನ್ನ ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ನೆಲಮಂಗಲ (Nelamangala) ಪೊಲೀಸ್ ಉಪವಿಭಾಗದ ಬೆಂಗಳೂರು ಉತ್ತರ ತಾಲೂಕಿನ ಕೆ.ಜಿ.ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    5 ವರ್ಷ ಸಿರಿ ಕೊಲೆಯಾದ ಮಗು. ಜಯರಾಂ ಹಾಗೂ ಮಹಾಲಕ್ಷ್ಮಿ 8 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ವರ್ಷದಿಂದ ಕೆಲಸವಿಲ್ಲದೆ ಕುಡಿತಕ್ಕೆ ದಾಸನಾಗಿದ್ದ ಜಯರಾಂ, ಕೆಲಸಕ್ಕೆ ಹೋಗದೆ ಮನೆಯಲ್ಲಿ ಇದ್ದ. ಮನೆಯಲ್ಲಿ ಆಗಾಗ ಗಂಡ-ಹೆಂಡತಿ ನಡುವೆ ಜಗಳ ನಡೆದು ಬುಧವಾರ ಇಬ್ಬರ ನಡುವೆ ಜಗಳ ತಾರಕಕ್ಕೇರಿದೆ. ಬಳಿಕ ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ ಮಹಾಲಕ್ಷ್ಮಿ ಮಗುವಿನ ಕತ್ತು ಹಿಸುಕಿ ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.  ಇದನ್ನೂ ಓದಿ: ಕಾಲ್ತುಳಿತಕ್ಕೆ ಬಲಿಯಾಗಿದ್ದ ಮಗಳ ಕಿವಿಯೋಲೆ ಕಳವು – ಬೌರಿಂಗ್ ಆಸ್ಪತ್ರೆಯ ವಿರುದ್ಧ ದೂರು

    ಕೂಡಲೇ ಮನೆಯವರು ಡೋರ್ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ತಾಯಿ ಮಹಾಲಕ್ಷ್ಮಿಯನ್ನ ರಕ್ಷಣೆ ಮಾಡಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಎಸ್‌ಪಿ ಡಾ.ವೆಂಕಟೇಶ್ ಪ್ರಸನ್ನ, ಸಿಪಿಐ ಮುರಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಸಂಬಂಧ ಪತಿ ಜಯರಾಮ್‌ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ | RCB ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ ಒಪ್ಪಿಗೆ

  • ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್

    ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್

    – ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಿಂದ ಕೊಲೆ ರಹಸ್ಯ ಬಯಲು

    ಬೆಳಗಾವಿ: ಪತ್ನಿ ಹಾಗೂ ಅತ್ತೆ ಸೇರಿಕೊಂಡು ಸಾಲಗಾರ ಪತಿಯನ್ನು (Husband) ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೆಳಗಾವಿಯ ಪೀರವನಾಡಿ ನಿವಾಸಿ ವಿನಾಯಕ್ ಜಾಧವ್ (48) ಕೊಲೆಯಾದ ಪತಿ. ಜುಲೈ 29ರಂದು ರಾತ್ರಿ ಅಮ್ಮ-ಮಗಳು ಸೇರಿಕೊಂಡು ಸಾಲಗಾರ ಪತಿಯನ್ನು ಹತ್ಯೆ ಮಾಡಿದ್ದಾರೆ. ವಿನಾಯಕ್ ಜಾಧವ್ ಉದ್ಯಮಬಾಗದಲ್ಲಿ ಸ್ವಂತ ಉದ್ಯಮ ಹೊಂದಿದ್ದ. ಉದ್ಯಮದಲ್ಲಿ ನಷ್ಟವಾದ ಹಿನ್ನೆಲೆ ವಿಪರೀತ ಸಾಲ ಮಾಡಿಕೊಂಡಿದ್ದ. ಬಳಿಕ ಸಾಲಗಾರರ ಕಾಟಕ್ಕೆ ಬೇಸತ್ತು ಮನೆಯನ್ನು ಸಾಲಕ್ಕೆ ಅಡಮಾನವಾಗಿ ಇಟ್ಟು ಜನರ ಕಿರುಕುಳಕ್ಕೆ ನೊಂದು ಬೆಳಗಾವಿ ಬಿಟ್ಟು ಮೂರು ವರ್ಷಗಳಿಂದ ಪರಾರಿಯಾಗಿದ್ದ. ಇದನ್ನೂ ಓದಿ: ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾಗೆ ಜಾರಿದೆ, ಅಭಿವೃದ್ಧಿ ನಡೆಯುತ್ತಿಲ್ಲ: ಅಶೋಕ್

    ಜುಲೈ 29ರಂದು ವಿನಾಯಕ್ ಜಾಧವ್ ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದಿದ್ದ. ಮನೆಯಲ್ಲಿ ಪತ್ನಿ ರೇಣುಕಾ ಜೊತೆಗೆ ವಿಪರೀತ ಜಗಳ ಮಾಡಿದ್ದ. ಬಳಿಕ ಪತಿಯನ್ನು ಹಗ್ಗದಿಂದ ಕುತ್ತಿಗೆ ಕಟ್ಟಿ, ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಹತ್ಯೆಗೆ ಪತ್ನಿ ರೇಣುಕಾಗೆ ಆಕೆಯ ತಾಯಿ ಶೋಭಾ ಸಾಥ್ ನೀಡಿದ್ದರು. ಹತ್ಯೆ ಬಳಿಕ ಶವವನ್ನು ಮನೆಯ ಮುಂಭಾಗದಲ್ಲಿ ಬಿಸಾಡಿದ್ದರು. ಬೆಳಗ್ಗೆ ಅಕ್ಕಪಕ್ಕದ ಮನೆಯವರನ್ನು ಕರೆದು ಪತಿ ಮದ್ಯಪಾನ ಮಾಡಿ ಬಿದ್ದಿದ್ದಾನೆ. ಇದು ಕೊಲೆಯಲ್ಲ, ಸಹಜ ಸಾವು ಎಂದು ತಾಯಿ, ಮಗಳು ಬಿಂಬಿಸಿದ್ದರು. ಆದರೆ ವಿನಾಯಕ್ ಜಾಧವ್ ಸಹೋದರ ಅರುಣ್ ಸಾವಿನಲ್ಲಿ ಶಂಕೆ ಇದೆ ಎಂದು ದೂರು ನೀಡಿದ್ದರು. ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಿಂದ ಕೊಲೆ ರಹಸ್ಯ ಬಯಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸರು ಕೊಲೆಯ ರಹಸ್ಯ ಬಯಲು ಮಾಡಿದ್ದಾರೆ. ಪ್ರಕರಣ ಸಂಬಂಧ ಪತ್ನಿ ರೇಣುಕಾ ಹಾಗೂ ಆಕೆಯ ತಾಯಿ ಶೋಭಾಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: Shivamogga Airport| 20 ದಿನಕ್ಕಷ್ಟೇ ಲೈಸೆನ್ಸ್‌- ಷರತ್ತು ಪೂರೈಸದಿದ್ದರೆ ವಿಮಾನ ಹಾರಾಟಕ್ಕೆ ತೊಡಕು

  • ವರದಕ್ಷಿಣೆ ಗಲಾಟೆ; ಮೈಸೂರಲ್ಲಿ ತಂಗಿಯ ಎದುರೇ ಅಣ್ಣನನ್ನು ಚುಚ್ಚಿ ಕೊಂದ ಪಾಪಿ ಗಂಡ

    ವರದಕ್ಷಿಣೆ ಗಲಾಟೆ; ಮೈಸೂರಲ್ಲಿ ತಂಗಿಯ ಎದುರೇ ಅಣ್ಣನನ್ನು ಚುಚ್ಚಿ ಕೊಂದ ಪಾಪಿ ಗಂಡ

    ಮೈಸೂರು: ವರದಕ್ಷಿಣೆ (Dowry) ಕಿರುಕುಳ ವಿಚಾರಕ್ಕೆ ಹೆಂಡತಿಯ ಅಣ್ಣನನ್ನೇ (Brother) ಗಂಡ (Husband) ಚುಚ್ಚಿ ಕೊಲೆ ಮಾಡಿದ ಘಟನೆ ಮೈಸೂರಿನ (Mysuru) ಕುವೆಂಪು ನಗರದಲ್ಲಿ (Kuvempu Nagar) ನಡೆದಿದೆ.

    ಅಭಿಷೇಕ್ (27) ಕೊಲೆಯಾದ ಅಣ್ಣ. ರವಿಚಂದ್ರ ಕೊಲೆ ಮಾಡಿದ ಆರೋಪಿ. ಬಾವ ಮತ್ತು ಬಾಮೈದ ನಡುವೆ ವರದಕ್ಷಿಣೆ ವಿಚಾರಕ್ಕೆ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯ ಕಂಡಿದೆ. ರವಿಚಂದ್ರ ಜಿಮ್ ತೆರೆಯಲು 5 ಲಕ್ಷ ಹಣ ಕೇಳಿದ್ದ. ಪ್ರತಿನಿತ್ಯ ಪತ್ನಿ ವಿದ್ಯಾಗೆ ವರದಕ್ಷಿಣೆ ತರುವಂತೆ ರವಿಚಂದ್ರ ಕಿರುಕುಳ ನೀಡುತ್ತಿದ್ದ. ಗಲಾಟೆ ಮಾಡುತ್ತಿದ್ದ ವೇಳೆ ವಿದ್ಯಾ ಅಣ್ಣನಿಗೆ ಕರೆ ಮಾಡಿದ್ದಾಳೆ. ವಿದ್ಯಾ ಅಣ್ಣ ಅಭಿಷೇಕ್ ಮನೆಗೆ ಬರುತ್ತಿದ್ದಂತೆ ಬಾಗಿಲು ಹಾಕಿ ರವಿಚಂದ್ರ ಏಕಾಏಕಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಅಭಿಷೇಕ್ ತಾಯಿ ಭಾಗ್ಯಮ್ಮ, ತಂಗಿಗೂ ಹಲ್ಲೆ ನಡೆಸಿದ್ದಾನೆ. ಇದನ್ನೂ ಓದಿ: ಬಿಜೆಪಿಯ ಸಂವಿಧಾನ ವಿರೋಧಿ ನೀತಿಗಳಿಗೆ ಜನ ಎಚ್ಚರಿಕೆ ನೀಡಿದ್ದಾರೆ: ಹೆಚ್.ಸಿ.ಮಹದೇವಪ್ಪ

    ವರದಕ್ಷಿಣೆ ಕೊಟ್ಟು ಪೋಷಕರು 4 ವರ್ಷಗಳ ಹಿಂದೆ ಅದ್ದೂರಿಯಾಗಿ ವಿದ್ಯಾ-ರವಿಚಂದ್ರ ಮದುವೆ ಮಾಡಿದ್ದರು. 6 ತಿಂಗಳ ಬಳಿಕ ಮತ್ತೆ ವರದಕ್ಷಿಣೆ ತರುವಂತೆ ರವಿಚಂದ್ರ ಕಿರುಕುಳ ನೀಡಿದ್ದಾನೆ. ಈ ಹಿನ್ನೆಲೆ ಸಾಕಷ್ಟು ಬಾರಿ ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರೂ ಸ್ಪಂದಿಸಲಿಲ್ಲ ಎಂದು ಆರೋಪಿಸಲಾಗಿದೆ. ಕುವೆಂಪು ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಚಿವರ ಮೌಲ್ಯಮಾಪನದ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಎಂ.ಬಿ ಪಾಟೀಲ್

  • ಆನೇಕಲ್‌ನಲ್ಲಿ ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

    ಆನೇಕಲ್‌ನಲ್ಲಿ ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

    ಬೆಂಗಳೂರು: ವಿಷ ಸೇವಿಸಿ ಗಂಡ-ಹೆಂಡತಿ (Husband-Wife) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಬನ್ನೇರುಘಟ್ಟ ಜನತಾ ಕಾಲೋನಿಯಲ್ಲಿ ನಡೆದಿದೆ.

    ಪ್ರಭು (38), ಲಕ್ಕಮ್ಮ (30) ಮೃತ ದುರ್ದೈವಿಗಳು. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಘಟನೆ ನಡೆದಿದೆ. ಗಂಡ ಪ್ರಭು ಡ್ರೈವರ್ ಕೆಲಸ ಮಾಡುತ್ತಿದ್ದು, ಲಕ್ಕಮ್ಮ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು. ಗಂಡ-ಹೆಂಡತಿ ವಾಸವಿದ್ದ ಮನೆಯಲ್ಲಿ ಕೆಟ್ಟ ವಾಸನೆ ಬರುತ್ತಿದ್ದರಿಂದ ಸ್ಥಳೀಯರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಜೂನ್‌ 8 ರಂದು ಸಂಜೆ ನರೇಂದ್ರ ಮೋದಿ ಪ್ರಮಾಣವಚನ

    ದಂಪತಿ ಮೃತಪಟ್ಟು ಮೂರರಿಂದ ನಾಲ್ಕು ದಿನ ಕಳೆದಿರಬಹುದು ಎಂದು ಊಹಿಸಲಾಗಿದೆ. ವಿಶ್ವನಾಥ್ ಎಂಬವರ ಮನೆಯಲ್ಲಿ ದಂಪತಿ ಬಾಡಿಗೆಗಿದ್ದರು. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 24 ವರ್ಷಗಳ ನಂತ್ರ ಅಧಿಕಾರ ಕಳೆದುಕೊಂಡ ಬಿಜೆಡಿ- ನವೀನ್ ಪಟ್ನಾಯಕ್ ರಾಜೀನಾಮೆ

  • ರೀಲ್ಸ್ ಮಾಡುವುದನ್ನು ವಿರೋಧಿಸಿದ ಗಂಡನನ್ನೇ ಮುಗಿಸಿದ ಹೆಂಡತಿ

    ರೀಲ್ಸ್ ಮಾಡುವುದನ್ನು ವಿರೋಧಿಸಿದ ಗಂಡನನ್ನೇ ಮುಗಿಸಿದ ಹೆಂಡತಿ

    ಪಾಟ್ನಾ: ಇನ್ಸ್ಟಾಗ್ರಾಂನಲ್ಲಿ (Instagram) ರೀಲ್ಸ್ (Reels) ಮಾಡುವುದನ್ನು ವಿರೋಧಿಸಿದ ಗಂಡನನ್ನು (Husband) ಪತ್ನಿ (Wife) ತನ್ನ ಅಪ್ಪ-ಅಮ್ಮನೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ಬಿಹಾರದ (Bihar) ಬೇಗುಸರಾಯ್‌ನಲ್ಲಿ (Begusarai) ನಡೆದಿದೆ.

    ಭಾನುವಾರ ರಾತ್ರಿ 9 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮೃತರನ್ನು ಮಹೇಶ್ವರ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಕೋಲ್ಕತ್ತಾದಲ್ಲಿ (Kolkata) ಕೂಲಿ ಕೆಲಸ ಮಾಡುತ್ತಿದ್ದು, ಸಮಸ್ತಿಪುರ ಜಿಲ್ಲೆಯ ನರ್ಹಾನ್ ಗ್ರಾಮದ ನಿವಾಸಿಯಾಗಿದ್ದರು. ಪತ್ನಿ ರಾಣಿ ಕುಮಾರಿಗೆ ಇನ್ಸ್ಟಾದಲ್ಲಿ ರೀಲ್ಸ್ ಮಾಡುವ ಗೀಳಿತ್ತು. ಆದರೆ ಪತಿಗೆ ಅದು ಇಷ್ಟವಿಲ್ಲದಿದ್ದರಿಂದ ಅದನ್ನು ವಿರೋಧಿಸಿದ್ದರು. ಇದರಿಂದ ಗಂಡನ ಮೇಲೆ ಕೋಪಗೊಂಡ ಹೆಂಡತಿ ತನ್ನ ಅಪ್ಪ-ಅಮ್ಮನ ಜೊತೆಗೂಡಿ ಆತನನ್ನು ಹತ್ಯೆ ಮಾಡಿದ್ದಾಳೆ. ಇದನ್ನೂ ಓದಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು

    ಮಹೇಶ್ವರ್ ಕೆಲ ದಿನಗಳ ಹಿಂದೆ ಕೋಲ್ಕತ್ತಾದಿಂದ ತನ್ನ ಗ್ರಾಮಕ್ಕೆ ತೆರಳಿದ್ದರು. ಫಫೌತ್ ಗ್ರಾಮದವರಾದ ರಾಣಿ ಕುಮಾರಿ ಸುಮಾರು 7 ವರ್ಷಗಳ ಹಿಂದೆ ಮಹೇಶ್ವರ್ ಅವರನ್ನು ವಿವಾಹವಾಗಿದ್ದರು. ಮಹೇಶ್ವರ್ ಕೆಲಸಕ್ಕೆ ತೆರಳುವ ಮೊದಲು ಫಫೌತ್ ಗ್ರಾಮದಲ್ಲಿರುವ ತನ್ನ ಅತ್ತೆಯ ಮನೆಗೆ ಹೋಗಿದ್ದರು ಎಂದು ತಿಳಿದುಬಂದಿದೆ. ಇನ್ಸ್ಟಾಗ್ರಾಂ ರೀಲ್ಸ್ ವಿಚಾರವಾಗಿ ಮಹೇಶ್ವರ್ ಮತ್ತು ರಾಣಿ ಕುಮಾರಿ ನಡುವೆ ವಾಗ್ವಾದ ನಡೆದಿದ್ದು, ಇವರಿಬ್ಬರ ಜಗಳ ವಿಕೋಪಕ್ಕೆ ತಿರುಗಿ ಪತ್ನಿ ತನ್ನ ಅಪ್ಪ-ಅಮ್ಮನ ಸಹಾಯದಿಂದ ಗಂಡನ ಕತ್ತು ಹಿಸುಕಿ ಸಾಯಿಸಿದ್ದಾಳೆ. ರಾತ್ರಿಯ ವೇಳೆ ಮೃತನ ಸಹೋದರ ಕೋಲ್ಕತ್ತಾದಿಂದ ಕರೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಕರೆ ಮಾಡಿದ ವೇಳೆ ಬೇರೊಬ್ಬರು ಫೋನ್ ಸ್ವೀಕರಿಸಿದ್ದರಿಂದ ಅನುಮಾನಗೊಂಡ ಸಹೋದರ ತನ್ನ ತಂದೆಗೆ ಕರೆ ಮಾಡಿ ಅಲ್ಲಿ ಹೋಗಿ ನೋಡುವಂತೆ ಕೇಳಿಕೊಂಡಿದ್ದಾನೆ. ಇದನ್ನೂ ಓದಿ:ಐವರ ಅಸ್ಥಿಪಂಜರ ಪತ್ತೆ ಕೇಸ್‌ – ಮರಣೋತ್ತರ ಪರೀಕ್ಷಾ ವರದಿಯಲ್ಲೂ ಪತ್ತೆಯಾಗದ ಸತ್ಯಾಂಶ

    ತಂದೆ ಹೋಗಿ ನೋಡಿದಾಗ ಮಗ ಸತ್ತು ಬಿದ್ದಿರುವುದು ಕಂಡುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತದೇಹವನ್ನು ತಮ್ಮ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಹೇಶ್ವರ್ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಪೊಲೀಸರು ಮೃತರ ಪತ್ನಿಯನ್ನು ಬಂಧಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಯಶ್ ಬರ್ತ್‍ಡೇಗೆ ಬೃಹತ್ ಕಟೌಟ್ ನಿಲ್ಲಿಸುವಾಗ ವಿದ್ಯುತ್ ಸ್ಪರ್ಶ – ಮೂವರ ದುರ್ಮರಣ


  • ಡಿವೋರ್ಸ್ ಕೊಡು ಇಲ್ಲದಿದ್ರೆ  ಅಶ್ಲೀಲ ವೀಡಿಯೋ ವೈರಲ್ ಮಾಡ್ತೀನಿ- ಪತ್ನಿಗೆ ಬ್ಲ್ಯಾಕ್‍ಮೇಲ್

    ಡಿವೋರ್ಸ್ ಕೊಡು ಇಲ್ಲದಿದ್ರೆ ಅಶ್ಲೀಲ ವೀಡಿಯೋ ವೈರಲ್ ಮಾಡ್ತೀನಿ- ಪತ್ನಿಗೆ ಬ್ಲ್ಯಾಕ್‍ಮೇಲ್

    ಬೆಳಗಾವಿ: ಜಿಲ್ಲೆಯಲ್ಲಿ ದಿನಕ್ಕೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪತ್ನಿಯ ಜೊತೆಗಿನ ಖಾಸಗಿ ಕ್ಷಣಗಳನ್ನ ವೀಡಿಯೋ ರೆಕಾರ್ಡ್ ಮಾಡಿ. ಮತ್ತೆ ಹೆಂಡತಿಗೆ ಗಂಡನೇ ಬ್ಲ್ಯಾಕ್ ಮೇಲ್ (Blackmail) ಮಾಡಿರುವ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.

    ಹೌದು. ಮತ್ತೊಂದು ಮದುವೆಗಾಗಿ ಹೆಂಡತಿಯಿಂದ ವಿಚ್ಛೇದನ ಪಡೆಯಲು ಬೆಳಗಾವಿ (Belagavi) ನಗರದ ನಿವಾಸಿ ಕಿರಣ್ ಪಾಟೀಲ್ ಎಂಬಾತ ಈ ರೀತಿ ಕೃತ್ಯ ಎಸಗಿದ್ದಾನೆ. ವಿಚ್ಛೇದನ (Divorce) ನೀಡು ಇಲ್ಲವಾದರೆ ಅಶ್ಲೀಲ ವೀಡಿಯೋ, ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಗಂಡನ ಮಾತನ್ನು ಕೇಳಿ ಹೆಂಡತಿ ಶಾಕ್‍ಗೆ ಒಳಗಾಗಿದ್ದಾರೆ. ಅಲ್ಲದೇ ಸಾಕಷ್ಟು ಬಾರಿ ಮನವೊಲಿಸಲು ಯತ್ನಿದ್ರೂ ಯಾವುದೇ ಪ್ರಯೋಜನವಾಗಿಲ್ಲ.

    ಇತ್ತ ವಿಚ್ಛೇದನ ಕೋರಿ ಗಂಡ ಕಿರಣ್ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಇನ್ನು ಕೋರ್ಟಿಗೆ ಹೋದ ಬಳಿಕವೂ ಹೆಂಡತಿಗೆ ನಿರಂತರವಾಗಿ ಕಿರಣ್ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಇದರಿಂದ ದಿಕ್ಕೆ ತೋಚದಾದ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ. ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿ ನ್ಯಾಯ ಕೊಡಿಸುವಂತೆ ನೊಂದ ಮಹಿಳೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಮಮಂದಿರಕ್ಕೆ ಬಾಂಬ್ ಬೆದರಿಕೆ – ಇಬ್ಬರ ಬಂಧನ

    ಪ್ರಕರಣ ದಾಖಲಾದ ಬಳಿಕ ಠಾಣೆಗೆ ಕಿರಣ್ ಪಾಟೀಲ್ ನನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ಮೊಬೈಲ್ ನಲ್ಲಿ ಹೆಂಡತಿ ಅಶ್ಲೀಲ ವೀಡಿಯೋ, ಫೋಟೋ ಇರುವುದು ಬೆಳಕಿಗೆ ಬಂದಿದೆ. ತಕ್ಷಣ ಅರೆಸ್ಟ್ ಮಾಡಲು ಮುಂದಾದಾಗ ತಪ್ಪಿಸಿಕೊಂಡು ಓಡಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ರಕ್ಷಣೆ ಮಾಡಿದ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಗುಣಮುಖನಾಗಿ ನಿನ್ನೆಯಷ್ಟೇ ಹಿಂಡಲಗಾ ಜೈಲಿಗೆ ಆರೋಪಿ ಕಿರಣ್ ನನ್ನು ರವಾನಿಸಲಾಗಿದೆ.

  • ವರ್ಷದ ತಿಥಿ ಮುನ್ನವೇ ಹೆಂಡತಿ ಸಮಾಧಿ ಎದುರು ಗಂಡ ನೇಣಿಗೆ ಶರಣು

    ವರ್ಷದ ತಿಥಿ ಮುನ್ನವೇ ಹೆಂಡತಿ ಸಮಾಧಿ ಎದುರು ಗಂಡ ನೇಣಿಗೆ ಶರಣು

    ಚಿಕ್ಕಬಳ್ಳಾಪುರ: ಹೆಂಡತಿ ಸಮಾಧಿಗೆ (Grave) ಪೂಜೆ ಮಾಡಿ ಆಕೆಯ ಸಮಾಧಿ ಎದುರೇ ಗಂಡ ನೇಣುಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ (Bagepalli) ಪಟ್ಟಣದ ಹೊರವಲಯದ ತೀಮಾಕಲಪಲ್ಲಿ ಸ್ಮಶಾನದಲ್ಲಿ ನಡೆದಿದೆ.

    ನಗರದ 16ನೇ ವಾರ್ಡ್ ನಿವಾಸಿ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಗುರುಮೂರ್ತಿ ಅಲಿಯಾಸ್ ಲೆಗ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕಳೆದ ವರ್ಷ ಡಿಸೆಂಬರ್ 20 ರಂದು ಪತ್ನಿ ಮೌನಿಕಾ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಗುರುಮೂರ್ತಿ ಕೂಡಾ ಹೆಂಡತಿ ಸಾವಿನ ನೋವಲ್ಲೇ ಮಾನಸಿಕ ಕಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಬೆಂಕಿ ತಗುಲಿ ಬೀದಿ ಬದಿ ಅಂಗಡಿಗಳು ಭಸ್ಮ

    ಇಂದು ಬೆಳಗ್ಗೆ ವಾಕಿಂಗ್ ಹೋಗಿ ಬರುವುದಾಗಿ ಹೇಳಿ ಹೋಗಿರುವ ಗುರುಮೂರ್ತಿ ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ತದನಂತರ ಅಲ್ಲೇ ಇದ್ದ ಮರಕ್ಕೆ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಸಹೋದರಿಯನ್ನು ಉಸಿರುಗಟ್ಟಿಸಿ ಕೊಂದು ದೇಹವನ್ನು ಕಾಲುವೆಗೆ ಎಸೆದ್ರು!

  • ಗಂಡ-ಹೆಂಡ್ತಿ ಜಗಳದಲ್ಲಿ ಸಂಧಾನಕ್ಕೆ ಬಂದು 2 ಲಕ್ಷ ನೀಡುವಂತೆ ಪೊಲೀಸ್ರು ತಾಕೀತು; ನಿಖಿಲ್ ಆತ್ಮಹತ್ಯೆ

    ಗಂಡ-ಹೆಂಡ್ತಿ ಜಗಳದಲ್ಲಿ ಸಂಧಾನಕ್ಕೆ ಬಂದು 2 ಲಕ್ಷ ನೀಡುವಂತೆ ಪೊಲೀಸ್ರು ತಾಕೀತು; ನಿಖಿಲ್ ಆತ್ಮಹತ್ಯೆ

    ಹುಬ್ಬಳ್ಳಿ: ಗಂಡ-ಹೆಂಡತಿ ಜಗಳದ ನಡುವೆ ಪೊಲೀಸರ ಸಂಧಾನಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ಕೋಟಿಲಿಂಗೇಶ್ವರ (Kotlingeshwara) ನಗರದಲ್ಲಿ ನಡೆದಿದೆ.

    ನಿಖಿಲ್ (28) ಆತ್ಮಹತ್ಯೆ ಮಾಡಿಕೊಂಡ ಪತಿ. 11 ತಿಂಗಳ ಹಿಂದೆ ನಿಖಿಲ್, ಪ್ರೀತಿ ಎಂಬ ಯುವತಿಯನ್ನು ಮದುವೆಯಾಗಿದ್ದರು. ಆದರೆ ಗಂಡ-ಹೆಂಡತಿ ನಡುವೆ ಆರಂಭದಿಂದಲೂ ಸಾಮರಸ್ಯ ಮೂಡದೇ ವೈಮನಸ್ಸು ಬೆಳೆದು ನಿತ್ಯ ಜಗಳವಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಪ್ರೀತಿ ತವರು ಮನೆಗೆ ಹೋಗಿದ್ದಳು.

     

    ನಿಖಿಲ್ ಪತ್ನಿ ಪ್ರೀತಿ ಮತ್ತು ಕುಟುಂಬಸ್ಥರು ಗುರುವಾರ ಕೇಶ್ವಾಪುರ ಠಾಣೆಗೆ ನಿಖಿಲ್ ಕರೆಸಿ ಬೆದರಿಕೆ ಹಾಕಿರುವ ಆರೋಪ ಕೂಡ ಕೇಳಿಬಂದಿದೆ. ನೋಟಿಸ್ ನೀಡಿ ನಿಖಿಲ್‍ನನ್ನು ಠಾಣೆ ಕರೆಸಿ ಪೊಲೀಸರು ಮಾನಸಿಕ ಕಿರುಕುಳ ನೀಡಿದ್ದಾರೆ. ಒಂದೇ ದಿನದಲ್ಲಿ 2 ಲಕ್ಷ ರೂಪಾಯಿ ನೀಡುವಂತೆ ತಾಕೀತು ಮಾಡಿ ಪೊಲೀಸರು ನಿಖಿಲ್‍ನನ್ನು ಬಿಟ್ಟು ಕಳುಹಿಸಿದ್ದರು. ಇದನ್ನೂ ಓದಿ: ನಾನು ಯಾವತ್ತೂ ಮಂಡ್ಯ ಬಿಡಲ್ಲ, ರಕ್ತದಲ್ಲಿ ಬರೆದು ಕೊಡಬೇಕಾ: ಸುಮಲತಾ ಪ್ರಶ್ನೆ

    ಇದರಿಂದ ಮನನೊಂದು ಮನೆಗೆ ಬಂದ ನಿಖಿಲ್ ಇಂದು ಬೆಳಗ್ಗಿನ ಜಾವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಸಹೋದರ ರಘುವೀರ್‌ ಗಂಭೀರ ಆರೋಪ ಮಾಡುತ್ತಿದ್ದಾರೆ.  ನಿಖಿಲ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿರುಕುಳಕ್ಕೊಳಗಾದ ಮಗಳನ್ನು ಮೆರವಣಿಗೆಯಲ್ಲಿ ಪತಿ ಮನೆಯಿಂದ ಕರೆತಂದ ತಂದೆ!

    ಕಿರುಕುಳಕ್ಕೊಳಗಾದ ಮಗಳನ್ನು ಮೆರವಣಿಗೆಯಲ್ಲಿ ಪತಿ ಮನೆಯಿಂದ ಕರೆತಂದ ತಂದೆ!

    ರಾಂಚಿ: ತಂದೆಯೊಬ್ಬ ತನ್ನ ಮಗಳನ್ನು ಆಕೆಯ ಪತಿ ಮನೆಯಿಂದ ಪಟಾಕಿ ಸಿಡಿಸಿ, ವಾದ್ಯ ಹಾಗೂ ಮೆರವಣಿಗೆಯಲ್ಲಿ ಕರೆತಂದ ವೀಡಿಯೋವೊಂದು ವೈರಲ್ ಆಗಿದೆ.

    ಈ ಘಟನೆ ಜಾರ್ಖಂಡ್‍ನಲ್ಲಿ (Jharkhand) ನಡೆದಿದೆ. ತಂದೆ ಪ್ರೇಮ್ ಗುಪ್ತಾ ತನ್ನ ಮಗಳನ್ನು ಸಾಕ್ಷಿ ಗುಪ್ತಾಳನ್ನು ಮೆರವಣಿಗೆ ಮೂಲಕ ತವರು ಮನೆಗೆ ಕರೆತಂದಿದ್ದಾರೆ. ಸದ್ಯ ಇದರ ವಿಡಿಯೋವನ್ನು ಪ್ರೇಮ್ ಗುಪ್ತಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಪೋಷಕರು ತಮ್ಮ ಮಗಳನ್ನು ಬಹಳ ಆಡಂಬರದಿಂದ ಮದುವೆ ಮಾಡಿಕೊಡುತ್ತಾರೆ. ಒಮದು ವೇಳೆ ಮದುವೆ ಬಳಿಕ ಸಂಗಾತಿ ಮತ್ತು ಅವರ ಕುಟುಂಬದವರು ಆಕೆಗೆ ಕಷ್ಟ ನೀಡಲು ಪ್ರಾರಂಭಿಸಿದರೆ, ನಿಮ್ಮ ಮಗಳನ್ನು ಅತ್ಯಂತ ಗೌರವದಿಂದ ಮನೆಗೆ ಕರೆದುಕೊಂಡು ಬರಬೇಕು. ಯಾಕೆಂದರೆ ಎಲ್ಲಾ ಹೆಣ್ಣು ಮಕ್ಕಳು ಅಮೂಲ್ಯ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

    2020ರ ಏಪ್ರಿಲ್ ತಿಂಗಳಲ್ಲಿ ಸಾಕ್ಷಿಯನ್ನು ಜಾರ್ಖಂಡ್ ವಿದ್ಯುತ್ ವಿತರಣಾ ನಿಗಮದಲ್ಲಿ ಸಹಾಯಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಚಿನ್ ಕುಮಾರ್‍ಗೆ ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಆದರೆ ಮದುವೆ ಬಳಿಕ ಸಚಿನ್ ಹಾಗೂ ಆತನ ಮನೆಯವರು ಸಾಕ್ಷಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ, ನನ್ನ ನಡುವೆ ಏನೂ ಇಲ್ಲ: ಡಿಕೆಶಿ

    ಸಚಿನ್ ಕೂಡ ಸಾಕ್ಷಿ ಜೊತೆ ಜಗಳವಾಡಿ ಮನೆಯಿಂದ ಹೊರಹಾಕಿದ್ದನು. ಆದರೂ ಜಗ್ಗದೆ ಸಾಕ್ಷಿ ಪತಿ ಜೊತೆಯೇ ವಾಸವಾಗಿದ್ದಳು. ಮದುವೆಯಾಗಿ ವರ್ಷದ ಬಳಿಕ ಸಚಿನ್‍ಗೆ ಈ ಮೊದಲೇ ಎರಡು ಮದುವೆಯಾಗಿರುವ ವಿಚಾರ ಸಾಕ್ಷಿ ಗಮನಕ್ಕೆ ಬಂದಿದೆ. ಇದೆಲ್ಲಾ ತಿಳಿದರೂ ಏನೂ ತಿಳಿಯದಂತೆ ಸಾಕ್ಷಿ ಸುಮ್ಮನಿದ್ದಳು.

    ಇತ್ತ ಪತಿ ಹಾಗೂ ಆತನ ಪೋಷಕರ ಕಿರುಕುಳ ಹೆಚ್ಚಾದ ಬಳಿಕ ತವರು ಮನೆಗೆ ವಿಷಯ ತಿಳಿಸಿದಳು. ತನಗೆ ಸಂಬಂಧ ಕಡಿದುಕೊಳ್ಳುವ ನಿಧಾರ ಮಾಡಿ ಮನೆಯವರಿಗೆ ಹೇಳಿದಳು. ಅಂತೆಯೇ ಮಗಳ ನಿರ್ದಾರಕ್ಕೆ ಸೈ ಎಂದ ತಂದೆ ಪ್ರೇಮ್. ಗಂಡನ ಮನೆಯಿಂದ ಆಕೆ ಬರುವಾಗ ಮೆರವಣಿಗೆ ಮೂಲಕ ಸಂಗೀತ ವಾದ್ಯ ಮೇಳಗಳೊಂದಿಗೆ ಕರೆತಂದಿದ್ದಾರೆ. ಜೊತೆಗೆ ದಾರಿಯುದ್ದಕ್ಕೂ ಪಟಾಕಿ ಸಿಡಿಸಿದ್ದಾರೆ.

    ಮಗಳಿಗೆ ಆಕೆಯ ಗಂಡನ ಮನೆಯಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಇದರಿಂದ ಬೇಸರಗೊಂಡ ತಂದೆ ತನ್ನ ಮಗಳನ್ನು ಆಕೆಯ ಅತ್ತೆ ಮನೆಯಿಂದ ಅದ್ಧೂರಿ ಮೆರವಣಿಗೆಯ ಮೂಲಕ ತಾಯಿ ಮನೆಗೆ ಕರೆದುಕೊಂಡು ಬಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]