Tag: ಗಂಡು ಶಿಶು

  • ನವಜಾತ ಗಂಡು ಶಿಶುವನ್ನು ಚರಂಡಿಗೆ ಎಸೆದು ಪಾಪಿ ತಾಯಿ ಎಸ್ಕೇಪ್!‌

    ನವಜಾತ ಗಂಡು ಶಿಶುವನ್ನು ಚರಂಡಿಗೆ ಎಸೆದು ಪಾಪಿ ತಾಯಿ ಎಸ್ಕೇಪ್!‌

    ವಿಜಯಪುರ: ಮಕ್ಕಳಿಲ್ಲವೆಂದು ಎಷ್ಟೋ ಮಂದಿ ಕೊರಗುತ್ತಾರೆ. ಈ ನಡುವೆ ಮಹಿಳೆಯೊಬ್ಬಳು ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

    ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳ ದಾರುಣ ಸಾವು

    ಮಹಿಳೆ ಮೃತಪಟ್ಟ ನವಜಾತ ಶಿಶುವನ್ನು ಪ್ಲಾಸ್ಟಿಲ್ ಹಾಳೆಯಲ್ಲಿ ಸುತ್ತಿ ಚರಂಡಿಗೆ ಎಸೆದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾಳೆ. ಇತ್ತ ಶಿಶುವನ್ನು ಗಮನಿಸಿದ ಗ್ರಾಮಸ್ಥರು ಚರಂಡಿಯಿಂದ ಗಂಡು ಮಗುವನ್ನು ಮೇಲಕ್ಕೆತ್ತಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.

    ಸ್ಥಳಕ್ಕೆ ದೌಡಾಯಿಸಿದ ಮುದ್ದೇಬಿಹಾಳ ಪೊಲೀಸರು ತಾಯಿಗಾಗಿ ಶೋಧ ನಡೆಸಿದ್ದಾರೆ.

  • ಖಾಸಗಿ ಬಸ್ ನಿಲ್ದಾಣದಲ್ಲಿ ನವಜಾತ ಗಂಡು ಶಿಶು ಪತ್ತೆ

    ಖಾಸಗಿ ಬಸ್ ನಿಲ್ದಾಣದಲ್ಲಿ ನವಜಾತ ಗಂಡು ಶಿಶು ಪತ್ತೆ

    ಚಾಮರಾಜನಗರ: ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬ್ಯಾಗ್ ಒಂದರಲ್ಲಿ ಒಂದು ವಾರದ ಗಂಡು ಮಗು ಪತ್ತೆಯಾಗಿದೆ.

    ಭಾನುವಾರ ಸಂಜೆ ವೇಳೆ ಬಸ್ ನಿಲ್ದಾಣದ ಕುರ್ಚಿಗಳ ಮೇಲೆ ಬ್ಯಾಗ್ ಇರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಂದಿದ್ದಾರೆ. ನಂತರ ಪೊಲೀಸರು ಬ್ಯಾಗ್‍ನ್ನು ತೆರೆದು ಪರಿಶೀಲಿಸಿದಾಗ ಗಂಡು ಮಗು ಪತ್ತೆಯಾಗಿದೆ. ಇದನ್ನೂ ಓದಿ:  ಕಾಂಗ್ರೆಸ್ ಇರುವುದೇ ಸಂವಿಧಾನ ರಕ್ಷಣೆಗೆ: ಜಾರಕಿಹೊಳಿ

    ಗಂಡು ಮಗು ಪತ್ತೆಯಾಗಿರುವ ಸುದ್ದಿ ಪಟ್ಟಣದಾದ್ಯಂತ ತಿಳಿಯುತ್ತಿದ್ದಂತೆ ಸಾರ್ವಜನಿಕರು ತಂಡೋಪತಂಡವಾಗಿ ಠಾಣೆಗೆ ಆಗಮಿಸಿ ಮಗುವನ್ನು ಪಡೆಯಲು ಮುಗಿಬಿದ್ದರು. ಇತ್ತ ಪೊಲೀಸರು ಮಗುವಿನ ವಾರಸುದಾರರನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಬಸ್ ನಿಲ್ದಾಣದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.