Tag: ಗಜ

  • ತಮಿಳುನಾಡಿನಲ್ಲಿ `ಗಜ’ ಚಂಡಮಾರುತದ ಅಬ್ಬರ – ಇತ್ತ ಕರ್ನಾಟಕಕ್ಕೂ ತಟ್ಟಿತು ಸೈಕ್ಲೋನ್

    ತಮಿಳುನಾಡಿನಲ್ಲಿ `ಗಜ’ ಚಂಡಮಾರುತದ ಅಬ್ಬರ – ಇತ್ತ ಕರ್ನಾಟಕಕ್ಕೂ ತಟ್ಟಿತು ಸೈಕ್ಲೋನ್

    ಚೆನ್ನೈ: ತಮಿಳುನಾಡಿನಲ್ಲಿ ಗಜ ಚಂಡಮಾರುತದ ಅಬ್ಬರ ಜೋರಾಗಿದೆ. ಪರಿಣಾಮ ನಾಗಪಟ್ಟಣಂ, ತಿರುವರೂರ್, ಕಡಲೂರು, ಪುದುಕೋಟೈ, ತಂಜಾವೂರು, ರಾಮನಾಥಪುರಂ ಸೇರಿ ಹಲವೆಡೆ ಭಾರೀ ಮಳೆಯಾಗ್ತಿದೆ. ಅಲ್ಲಲ್ಲಿ ಭೂಕುಸಿತ ಸಂಭವಿಸಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

    ತಮಿಳುನಾಡಿನ ಹಲವೆಡೆ 70 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪುದುಚೇರಿಯಲ್ಲಿ ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸ್ತಿದ್ದು, ಅಲೆಗಳ ಅಬ್ಬರ ಜೋರಾಗಿದೆ. ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

    ತಿರುಚನಪಲ್ಲಿ-ರಾಮೇಶ್ವರಂ ಮಾರ್ಗದ ರೈಲುಗಳ ಸಂಚಾರ ರದ್ದಾಗಿದೆ. ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರ್ನಾಟಕಕ್ಕೂ ಗಜ ಚಂಡಮಾರುತದ ತಂಗಾಳಿ ಬೀಸಿದ್ದು, ಬೆಂಗಳೂರು, ಕೋಲಾರದಲ್ಲಿ ತುಂತುರು ಮಳೆಯಾಗಿದೆ. ಇನ್ನೂ ಎರಡ್ಮೂರು ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಮದು ಹಾವಾಮಾನ ಇಲಾಖೆ ಮೂಲಗಳಿಂದ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗಜ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆ

    ಗಜ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆ

    ಬೆಂಗಳೂರು: ಗಜ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರದ ಕುಸಿತದಿಂದಾಗಿ ‘ಗಜ’ ಚಂಡಮಾರುತ ಸೃಷ್ಟಿಯಾಗಿದೆ. ಇದರ ಪರಿಣಾಮವಾಗಿ ಗುರುವಾರ ಮತ್ತು ಶುಕ್ರವಾರ ಚೆನ್ನೈ ಮತ್ತು ಕೇರಳದಲ್ಲಿ ಮಹಾಮಳೆಯಾಗಲಿದೆ. ಹವಾಮಾನ ಇಲಾಖೆಯ ಮಾಹಿತಿಗಳ ಪ್ರಕಾರ 110 ಮಿ.ಮೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    ಇದೇ ಚಂಡಮಾರುತವು ರಾಜ್ಯಕ್ಕೂ ಅಪ್ಪಳಿಸುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದೇ ನವೆಂಬರ್ 17ರಿಂದ ರಾಜ್ಯದ ಕರಾವಳಿ ಭಾಗಗಳಿಗೆ ಗಜ ಚಂಡಮಾರುತ ಅಪ್ಪಳಿಸಲಿದೆ. ಮಾಹಿತಿಗಳ ಪ್ರಕಾರ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ನವೆಂಬರ್ 18 ರಿಂದ 21 ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುತ್ತದೆ. ಇದರಿಂದಾಗಿ ಮೂರು ದಿನಗಳ ಕಾಲ ರಾಜ್ಯದಲ್ಲಿ ಎಡೆಬಿಡದೇ ಮಳೆಯಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗಜ ಚಂಡಮಾರುತ ಎಫೆಕ್ಟ್ – ಬೆಂಗ್ಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ

    ಗಜ ಚಂಡಮಾರುತ ಎಫೆಕ್ಟ್ – ಬೆಂಗ್ಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ

    ಬೆಂಗಳೂರು: ಗಜ ಚಂಡಮಾರುತದ ಪರಿಣಾಮ ಗುರುವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ. ಭಾರೀ ಪ್ರಮಾಣದಲ್ಲಿ ಮಳೆಯಾಗುವುದಿಲ್ಲ. ಚಂಡಮಾರುತ ಯಾವ ಪ್ರದೇಶದ ಕಡೆ ಹೋಗುತ್ತದೆ ಎನ್ನುವ ಆಧಾರದ ಮೇಲೆ ಈ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಶ್ರೀನಿವಾಸ ರೆಡ್ಡಿ ತಿಳಿಸಿದರು.

    ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ  ನವೆಂಬರ್  15, 16 ರಂದು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.