Tag: ಗಜಪಡೆ

  • ಅಶ್ವಿನಿ ಪರ ನಿಂತ ದರ್ಶನ್ ಅಭಿಮಾನಿಗಳು: ದೂರು ದಾಖಲು

    ಅಶ್ವಿನಿ ಪರ ನಿಂತ ದರ್ಶನ್ ಅಭಿಮಾನಿಗಳು: ದೂರು ದಾಖಲು

    ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ದರ್ಶನ್ (Darshan) ಅಭಿಮಾನಿಗಳು ಕೂಡ ದೂರು ನೀಡಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಬಂದಿದ್ದ ಅಭಿಮಾನಿಗಳು ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಿಂದ ಅವಮಾನಿಸುವಂತಹ ಕೆಲಸವಾಗಿದೆ. ಕೂಡಲೇ ಕ್ರಮ ತೆಗೆದುಕೊಳ್ಳಿ ಎಂದು ದೂರಿನಲ್ಲಿ (Complainant) ಉಲ್ಲೇಖಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅಭಿಮಾನಿ ನಾಗರಾಜ್, ‘ಅಶ್ವಿನಿ ಅವರಿಗೆ ನ್ಯಾಯ ಸಿಗ್ಬೇಕು ಅಂತ ನಮ್ಮ ಸಂಘದ ವತಿಯಿಂದ ದೂರು ದಾಖಲಿಸಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ದರ್ಶನ್, ಅಪ್ಪು ಹೆಸರಿನಲ್ಲಿ ಅವರು ಮೈಲೇಜ್ ತಗೋತಿದ್ದಾರೆ. ಯಾರು ಅಂತ ಗೊತ್ತಾಗಬೇಕು. ಲೈಕ್, ಕಾಮೆಂಟ್ ಗೆ ರಾಜ್ಯ ಹೊತ್ತಿ ಉರಿಯೋ ಕೆಲಸ ಮಾಡ್ತಿದ್ದಾರೆ. ಕಾನೂನು ರೀತಿ ಹೋರಾಟ ಮಾಡಿ ರೌಡಿಸಂ ಬೇಡ ಎಂದಿದ್ದಾರೆ.

    ಮುಂದುವರೆದು ಮಾತನಾಡಿದ ಅವರು, ದರ್ಶನ್ ಪತ್ನಿ ವಿಜಯಲಕ್ಷ್ಮಿ, ನಟಿ-ಸಂಸದೆ ಸುಮಲತಾ, ನಿರ್ಮಾಪಕಿ ಅಶ್ವಿನಿ ಪುನೀತ್, ದರ್ಶನ್ ತಾಯಿ ಮೀನಾ ತೂಗುದೀಪ್ ಹೀಗೆ ಈ ಎಲ್ಲರ ಬಗ್ಗೆನೂ ಕೆಟ್ಟದ್ದಾಗಿ ಪೋಸ್ಟ್ ಮಾಡಲಾಗಿದೆ. ಇದು ತಪ್ಪು. ಈ ಹೆಣ್ಣುಮಕ್ಕಳಿಗೆ ನ್ಯಾಯ ಸಿಗಬೇಕು ಅಂತ ಕಂಪ್ಲೇಂಟ್ ಫೈಲ್ ಮಾಡಿದೀವಿ ಎನ್ನುತ್ತಾರೆ.

     

    ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ವಿಚಾರದಲ್ಲಿ ದರ್ಶನ್ ಅವರೂ ನೊಂದುಕೊಂಡಿದ್ದಾರೆ. ಅವರಿಗೂ ಈ ವಿಚಾರ ಗಮನಕ್ಕಿದೆ. ದರ್ಶನ್ ಅವರು ಸಿನಿಮಾ ಬಗ್ಗೆ ಪ್ರಚಾರ ಮಾಡಿ ಅಂತಾರೆ. ಯಾವುದೇ ಚಿತ್ರನಟ ಸ್ಟಾರ್ ವಾರ್ ಮಾಡಿ ಅನ್ನೋದಿಲ್ಲ ಎನ್ನುವುದು ಅಭಿಮಾನಿಗಳ ಮಾತು.

  • ಅಶ್ವಿನಿ ನಿಂದನೆ ಪೋಸ್ಟ್ ವಿಚಾರ: ಮೂರು ಠಾಣೆಗಳಲ್ಲಿ ದೂರು ದಾಖಲು

    ಅಶ್ವಿನಿ ನಿಂದನೆ ಪೋಸ್ಟ್ ವಿಚಾರ: ಮೂರು ಠಾಣೆಗಳಲ್ಲಿ ದೂರು ದಾಖಲು

    ಜಪಡೆ (Gajapade) ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ನಿರ್ಮಾಪಕಿ, ಪುನೀತ್ ರಾಜ್ ಕುಮಾರ್ ಬಗ್ಗೆ ನಿಂದನೆ ಪೋಸ್ಟ್ ಮಾಡಿರುವ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಸಿಎಂ ಸಿದ್ಧರಾಮಯ್ಯ ಸೇರಿದಂತೆ ಹಲವರು ಈ ನಡೆಯನ್ನು ಖಂಡಿಸಿದ್ದಾರೆ. ಜೊತೆಗೆ ಅಪ್ಪು ಫ್ಯಾನ್ಸ್ ಕಾನೂನಾತ್ಮಕ ಹೋರಾಟಕ್ಕೂ ಮುಂದಾಗಿದ್ದಾರೆ. ಸದ್ಯ ಬಿಟಿಎಂ‌ ಲೇ ಔಟ್, ಜೆ ಪಿ ನಗರ ಹಾಗೂ ತಲಘಟ್ಟಪುರದ ಪೊಲೀಸ್ ಠಾಣೆಯಲ್ಲಿ ಗಜಪಡೆ ಖಾತೆಯ ವಿರುದ್ಧ ದೂರು (Complaint) ನೀಡಲಾಗಿದೆ.

    ಅಶ್ವಿನಿ (Ashwini Puneeth Rajkumar)  ಬಗ್ಗೆ ಅವಹೇಳನಕಾರಿ ಪೋಸ್ಟ್ (Post) ಮಾಡಿದವರ ವಿರುದ್ಧ ಕ್ರಮಕ್ಕೆ ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ವಿರೋಧಿ ಪೋಸ್ಟ್ ಗಳು ಹರಿದಾಡುತ್ತಿವೆ. ಜೊತೆಗೆ ಸಿನಿಮಾ ರಂಗದ ಅನೇಕರು ಪೋಸ್ಟ್ ವಿರುದ್ಧ ಧ್ವನಿ ಎತ್ತಿದ್ದಾರೆ. ಈಗ ಅಪ್ಪು ಫ್ಯಾನ್ಸ್ ಗೃಹ ಸಚಿವರನ್ನು ಭೇಟಿ ಮಾಡಿ, ಕ್ರಮಕ್ಕಾಗಿ ಒತ್ತಾಯ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಕೂಡ ಕಠಿಣ ಕ್ರಮದ ಮಾತುಗಳನ್ನು ಆಡಿದ್ದಾರೆ.

    ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದವರಿಗೆ ನವರಸನಾಯಕ ಜಗ್ಗೇಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಣ್ಣುಕುಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ ಎಂದು ಜಗ್ಗೇಶ್ (Jaggesh) ಹಿಡಿಶಾಪ ಹಾಕಿದ್ದಾರೆ.

    ಪುನೀತನ ಮಡದಿ ಅಣಕಿಸಿದ ನತದೃಷ್ಟರೆ ನಿಮಗೂ ತಾಯಿ ಇರಬೇಕು. ತಾಯಿ ಬೆಲೆ ಗೊತ್ತಿರಬೇಕು. ಒಂದು ವೇಳೆ, ತಾಯಿ ಮತ್ತು ಹೆಣ್ಣಿಗೆ ಗೌರವ ಕೊಡಲ್ಲ ಎಂದರೆ ಖಂಡಿತಾ ಅಂಥವರು ಮನುಕುಲಕ್ಕೆ ಅನರ್ಹ. ಪುನೀತನ ಮಡದಿ ಅನಾಥಳಲ್ಲ ತನ್ನ ಪ್ರೀತಿಸುತ್ತಿದ್ದ ಕೋಟ್ಯಾಂತರ ಅಭಿಮಾನಿಗಳ ಬಳುವಳಿ ಕೊಟ್ಟು ಹೋಗಿದ್ದಾನೆ ಎಂದು ಜಗ್ಗೇಶ್ ಅಪ್ಪು ಅಭಿಮಾನಿಗಳ ಕಡೆ ತೋರಿಸಿದ್ದಾರೆ. ಹೆಣ್ಣು ಕುಲಕ್ಕೆ ನೋವು ಕೊಟ್ಟವ ಉದ್ಧಾರ ಆದ ಇತಿಹಾಸವಿಲ್ಲ ಎಂದು ಜಗ್ಗೇಶ್ ಅಶ್ವಿನಿ ಪರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಜಗ್ಗೇಶ್ ಪ್ರತಿಕ್ರಿಯೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

     

    ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ‘ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.

  • ನೆಗೆಟಿವ್, ಪಾಸಿಟಿವ್ ಸಮನಾಗಿ ಸ್ವೀಕರಿಸುವೆ: ಅಶ್ವಿನಿ ಪುನೀತ್ ರಾಜ್ ಕುಮಾರ್

    ನೆಗೆಟಿವ್, ಪಾಸಿಟಿವ್ ಸಮನಾಗಿ ಸ್ವೀಕರಿಸುವೆ: ಅಶ್ವಿನಿ ಪುನೀತ್ ರಾಜ್ ಕುಮಾರ್

    ಳೆದ ಮೂರ್ನಾಲ್ಕು ದಿನದಿಂದ ಸೋಷಿಯಲ್ ಮೀಡಿಯಾದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಗಜಪಡೆ ಹೆಸರಿನ ಖಾತೆಯಲ್ಲಿ ಅಶ್ವಿನಿ ಅವರ ಬಗ್ಗೆ ಕೆಟ್ಟದ್ದಾಗಿ ನಿಂದಿಸಲಾಗಿದೆ. ಅನೇಕರು ಈ ಕುರಿತಂತೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೇ ಹಿನ್ನೆಲೆಯಾಗಿಟ್ಟುಕೊಂಡು ಅಶ್ವಿನಿ ಅವರು ಮಾತನಾಡಿದ್ದಾರೆ. ನೆಗೆಟಿವ್ ಅಥವಾ ಪಾಟಿಸಿವ್ ಏನೇ ಬಂದರೂ, ಸಮಾನಾಗಿ ಸ್ವೀಕರಿಸಿ ಮುಂದೆ ಸಾಗಬೇಕು ಎಂದು ಪರೋಕ್ಷವಾಗಿ ಅವರು ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಅಶ್ವಿನಿ ಅವರಿಗೆ ಅವಹೇಳನ ಮಾಡಿರುವ ವಿಷಯಕ್ಕೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲೂ ಮಹಿಳಾ ಬರಹಗಾರರು ಮತ್ತು ಕಲಾವಿದರು ಧ್ವನಿ ಎತ್ತಿದ್ದಾರೆ. ಈ ಕುರಿತಂತೆ ತಮ್ಮದೇ ಆದ ನಿಲುವನ್ನು ವ್ಯಕ್ತ ಪಡಿಸಿದ್ದಾರೆ.

    ಇವರ  ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಆರ್‌ಸಿಬಿ (RCB) ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದ ಅನಾಮಿಕ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

    ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ‘ಗಜಪಡೆ’ ಹೆಸರಿನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ `ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.

     

    ಅಶ್ವಿನಿ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಭೇಟಿ ಮಾಡಿ ಎಫ್‌ಐಆರ್ ದಾಖಲಿಸಿದ್ದಾರೆ.

  • RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್: ಪೊಲೀಸ್ ಆಯುಕ್ತರಿಗೆ ದೂರು

    RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್: ಪೊಲೀಸ್ ಆಯುಕ್ತರಿಗೆ ದೂರು

    ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಫ್ಯಾನ್ಸ್ ವಾರ್ ಶುರುವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಅತ್ಯಂತ ಕೀಳುಮಟ್ಟಕ್ಕೆ ಹೋಗಿ ಅಭಿಮಾನದ ಪರಕಾಷ್ಟೇ ಮೆರೆಯುವಂತೆ ಕೆಲಸ ಆಗಿದೆ. ಆರ್.ಸಿ.ಬಿ ಸೋಲಿಗೆ ದೊಡ್ಮನೆ ಸೊಸೆಯನ್ನು ಟಾರ್ಗೆಟ್ ಮಾಡಿರುವ ಕೆಲವರು, ಪುನೀತ್ ಪತ್ನಿ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneet Rajkumar) ಅವರನ್ನ ನಿಂದಿಸಿದ್ದಾರೆ ಕೆಲ ಕಿಡಿಗೇಡಿಗಳು.

    ಗಜಪಡೆ (Gajapade) ಹೆಸರಿನ ಪೇಜ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಕೆಟ್ಟದಾಗಿ ನಿಂದನೆ ಮಾಡಲಾಗಿದ್ದು, ನಟ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿದೆ ಈ ‘ಗಜಪಡೆ’ ಖಾತೆ. ಅಭಿಮಾನದ ನೆಪದಲ್ಲಿ ಹೆಣ್ಣಿನ ಬಗ್ಗೆ ಕೀಳಾಗಿ ಕಾಮೆಂಟ್ ಮಾಡಿದ್ದರಂತೆ ಅನೇಕರು ಈ ಗಜಪಡೆ ಖಾತೆಯನ್ನು ನಿರ್ವಹಿಸುತ್ತಿರುವವರ ಬಗ್ಗೆ ಗರಂ ಆಗಿದ್ದಾರೆ.

    ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್ ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಪೊಲೀಸ್ ಕಮಿಷ್ನರ್ (Commissioner) ಭೇಟಿ ಮಾಡಿ ಈಗಾಗಲೇ ದೂರು (Complaints) ಕೂಡ ನೀಡಲಾಗಿದೆ.

    ಸಾಕಷ್ಟು ಬಾರಿ ಈ ಫ್ಯಾನ್ಸ್ ವಾರ್ ಕನ್ನಡದಲ್ಲಿ ನಡೆದಿದೆ. ಅದಕ್ಕೆ ಫುಲ್ ಸ್ಟಾಪ್ ಹಾಕುವಂತೆ ಸ್ವತಃ ದರ್ಶನ್ ಅವರೇ ಈ ಹಿಂದೆ ವಿಡಿಯೋ ಮೂಲಕ ಮನವಿ ಮಾಡಿದ್ದರು. ತಮ್ಮ ಅಭಿಮಾನಿಗಳು ಯಾವುದೇ ಕಾರಣಕ್ಕೂ ಬೇರೆಯ ನಟರ ಅಥವಾ ಅಭಿಮಾನಿಗಳನ್ನು ನಿಂದಿಸಬಾರದು ಎಂದು ಮನವಿ ಮಾಡಿದ್ದರು. ಆದರೂ, ಪದೇ ಪದೇ ಇಂತಹ ಘಟನೆಗಳು ನಡೆಯುತ್ತಲೇ ಇವೆ.

  • ಶ್ರೀರಂಗಪಟ್ಟಣದ ಜಮೀನಿನಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡು – ಗ್ರಾಮಸ್ಥರಲ್ಲಿ ಆತಂಕ

    ಶ್ರೀರಂಗಪಟ್ಟಣದ ಜಮೀನಿನಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡು – ಗ್ರಾಮಸ್ಥರಲ್ಲಿ ಆತಂಕ

    ಮಂಡ್ಯ: ಕಳೆದ 15 ದಿನಗಳಿಂದ ಕಾಡಿನಿಂದ ಹೊರಬಂದಿರುವ 10 ಆನೆಗಳ ಹಿಂಡು (Herd of Elephants) ಕನಕಪುರ, ಸಾತನೂರಿನ ಮೂಲಕ ಶ್ರೀರಂಗಪಟ್ಟಣಕ್ಕೆ (Srirangapatna) ಬಂದಿದ್ದು, ಸದ್ಯ ಶ್ರೀರಂಗಪಟ್ಟಣ ಹಂಪಾಪುರ ಗ್ರಾಮದ ಜಮೀನಿನಲ್ಲಿ ಬೀಡುಬಿಟ್ಟಿದೆ.

    ದಿನದಿಂದ ದಿನಕ್ಕೆ ಆನೆಗಳ ಹಾವಳಿ ಹೆಚ್ಚಾಗುತ್ತಿದ್ದು, ಜಮೀನಿನಲ್ಲಿ ಬೀಡುಬಿಟ್ಟ ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ರಾತ್ರಿ ವೇಳೆ ಆನೆಗಳ ಹಿಂಡು ಊರೂರು ಬದಲಿಸುತ್ತಿರುವ ಕಾರಣ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಹುಣಸೂರು ವಿಭಾಗದ ಎಲಿಫ್ಯಾಂಟ್ ಟಾಸ್ಕ್ ಫೋರ್ಸ್‌ನಿಂದ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಿದ ʻಮದ್ರಾಸ್ ಐʼ ಪ್ರಕರಣ – ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

    ಅದೇ ರೀತಿ ಭಾನುವಾರ ಬೆಳ್ಳಂಬೆಳಗ್ಗೆ ಮತ್ತೊಂದು ಗಜಪಡೆ ಮದ್ದೂರು (Maddur) ಪಟ್ಟಣಕ್ಕೆ ಕಾಲಿಟ್ಟಿವೆ. ರಾಮನಗರ (Ramanagara) ಜಿಲ್ಲೆಯ ತೆಂಗನಕಲ್ಲು ಅರಣ್ಯ ಪ್ರದೇಶದಿಂದ ಬಂದಿರುವ ನಾಲ್ಕು ಆನೆಗಳು ಮದ್ದೂರು ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿರುವ ಶಿಂಷಾ ನದಿಯಲ್ಲಿ ಬೀಡುಬಿಟ್ಟಿವೆ. ದೇವಸ್ಥಾನದ ಅರ್ಚಕರು ಹಾಗೂ ಭಕ್ತರ ಮೊಬೈಲ್‌ಗಳಲ್ಲಿ ಗಜಪಡೆಯ ದೃಶ್ಯ ಸೆರೆಯಾಗಿದ್ದು, ದೇವಸ್ಥಾನಕ್ಕೆ ಬಂದಿದ್ದ ಭಕ್ತರು ಆನೆಗಳ ಹಿಂಡನ್ನು ಕಂಡು ಗಾಬರಿಗೊಂಡಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ – 125 ರೋಗಿಗಳ ಸ್ಥಳಾಂತರ

    ಆನೆಗಳನ್ನು ಕಂಡ ತಕ್ಷಣವೇ ದೇವಸ್ಥಾನದ ಆಡಳಿತ ಮಂಡಳಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ದೌಡಾಯಿಸಿದ ವಲಯ ಅರಣ್ಯಾಧಿಕಾರಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಇನ್ನು ಈ ಗಜಪಡೆ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮತ್ತು ಮದ್ದೂರು ಪಟ್ಟಣದ ಕಡೆ ತೆರಳದಂತೆ ಸಿಬ್ಬಂದಿ ಕಾವಲಿರಿಸಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ನೋಂದಣಿಗೆ ಹಣ ವಸೂಲಿ – ಗ್ರಾಮ ಒನ್ ಕೇಂದ್ರದ ಲಾಗಿನ್ ಐಡಿ ರದ್ದು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವವಿಖ್ಯಾತ ದಸರಾ ಮಹೋತ್ಸವ – ಇಂದು ಗಜ ಪಯಣ ಆರಂಭ

    ವಿಶ್ವವಿಖ್ಯಾತ ದಸರಾ ಮಹೋತ್ಸವ – ಇಂದು ಗಜ ಪಯಣ ಆರಂಭ

    ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಇಂದು ಗಜ ಪಯಣ ಆರಂಭವಾಗಿದೆ.

    ಕಾಡಿನಿಂದ ನಾಡಿಗೆ ಆನೆಗಳು ಹೊರಡಲಿವೆ. ನಾಡಹಬ್ಬದ ಮೊದಲ ಅಧಿಕೃತ ಕಾರ್ಯಕ್ರಮ ಇಂದು ಪ್ರಾರಂಭವಾಗಲಿದ್ದು, ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಕಾಲಿಡಲಿದೆ. 57 ವರ್ಷದ ಅಭಿಮನ್ಯು, 22 ವರ್ಷದ ಭೀಮ, 38 ವರ್ಷದ ಮಹೇಂದ್ರ ಹಾಗೂ 39 ವರ್ಷದ ಗೋಪಲಸ್ವಾಮಿ, 63 ವರ್ಷದ ಅರ್ಜುನ, 59 ವರ್ಷದ ವಿಕ್ರಮ, 44 ವರ್ಷದ ಧನಂಜಯ, 45 ವರ್ಷದ ಕಾವೇರಿ, 41 ವರ್ಷದ ಗೋಪಿ. ಇದನ್ನೂ ಓದಿ: ಫ್ಲ್ಯಾಶ್‌ಲೈಟ್‌ನಲ್ಲಿ ಇಸಿಜಿ ಟೆಸ್ಟ್ ಮಾಡಿದ ಸರ್ಕಾರಿ ಆಸ್ಪತ್ರೆ ವೈದ್ಯರು 

    40 ವರ್ಷದ ಶ್ರೀರಾಮ ಹಾಗೂ 63 ವರ್ಷದ ವಿಜಯಾ, 49 ವರ್ಷದ ಚೈತ್ರಾ, 21 ವರ್ಷದ ಲಕ್ಷ್ಮಿ ಹಾಗೂ 18 ವರ್ಷದ ಪಾರ್ಥಸಾರಥಿ ಆನೆಗಳು ಆಗಮನವಾಗಲಿದೆ.

    ಇಂದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರಹೊಸಹಳ್ಳಿಯಿಂದ ಗಜಪಯಣ ಆರಂಭವಾಗಲಿದೆ. ಜನಪ್ರತಿನಿಧಿಗಳು ಗಜಪಯಣಕ್ಕೆ ಸ್ವಾಗತ ಕೋರಲಿದ್ದಾರೆ. 9 ಆನೆಗಳು ಮೊದಲ ತಂಡದಲ್ಲಿ ಬರಲಿದ್ದು, 2ನೇ ತಂಡದಲ್ಲಿ 5 ಆನೆಗಳು ಬರಲಿವೆ. ಜಂಬೂ ಸವಾರಿಯಲ್ಲಿ ಒಟ್ಟು 14 ಆನೆಗಳು ಭಾಗಿಯಾಗಲಿದ್ದು, ಸ್ಟ್ಯಾಂಡ್ ಬೈ ರೂಪದಲ್ಲಿ ಇರಿಸಿ ಕೊಳ್ಳಲು 3 ಆನೆಗಳನ್ನು ಹೆಚ್ಚುವರಿಯಾಗಿ ನಾಡಿಗೆ ಕರೆಸಿ ಕೊಳ್ಳಲಾಗುತ್ತಿದೆ. ಇದನ್ನೂ ಓದಿ:  ಮನಬಂದಂತೆ ಗುಂಡಿನ ದಾಳಿ- ಕಿರಾತಕನ ಗುಂಡೇಟಿಗೆ ನಾಲ್ವರು ಬಲಿ, ಆರೋಪಿ ಪರಾರಿ

    Live Tv
    [brid partner=56869869 player=32851 video=960834 autoplay=true]

  • ದಸರಾ ತಾಲೀಮು ವೇಳೆ ಅರಮನೆ ಬಳಿ ಆನೆ ರಂಪಾಟ

    ದಸರಾ ತಾಲೀಮು ವೇಳೆ ಅರಮನೆ ಬಳಿ ಆನೆ ರಂಪಾಟ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ನಡೆಯುತ್ತಿರುವ ಆನೆಯ ತಾಲೀಮಿನಲ್ಲಿ ಆನೆ ರಂಪಾಟ ಮಾಡಿರುವ ಘಟನೆ ಅರಮನೆ ಮೈದಾನಲ್ಲಿ ನಡೆದಿದೆ.

    ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ದಸರಾ ಅಂಗವಾಗಿ ಇಂದಿನಿಂದ ಗಜಪಡೆಗೆ ಭಾರ ಹೊರಿಸುವ ತಾಲೀಮು ಆರಂಭ ಆಗಿದೆ. ಆದರೆ ತಾಲೀಮು ವೇಳೆ ಆನೆ ರಂಪಾಟ ಮಾಡಿದೆ. ಸರಪಳಿ ಕಿತ್ತುಕೊಂಡು ರೋಷದಿಂದ ಆನೆ ಜೆಮಿನಿ ಓಡಿ ಹೋಗಿದೆ. ಈ ವೇಳೆ ಆನೆಗಳನ್ನು ನಿಯಂತ್ರಿಸಲು ಮಾವುತರು- ಕಾವಾಡಿಗರು ಹರಸಾಹಸ ಪಟ್ಟಿದ್ದಾರೆ. ಆದರೆ ಕೊನೆಗೆ ದಸರಾ ಆನೆಗಳಾದ ಅಭಿಮನ್ಯು, ಧನಂಜಯನಿಂದ ಜೆಮಿನಿಯನ್ನು ನಿಯಂತ್ರಂಣವನ್ನು ಮಾಡಲಾಗಿದೆ. ಕೆಲವು ಸಮಯ ಆನೆ ರಂಪಾಟದಿಂದ ಅರಮನೆ ಆವರಣದಲ್ಲಿ ಆತಂಕ ಉಂಟಾಗಿತ್ತು. ಇದನ್ನೂ ಓದಿ:  2 ತಿಂಗಳ ಬಳಿಕ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಜಾಮೀನು

    ಮೈಸೂರಿನ ಅರಮನೆಯಂಗಳದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ನಡೆಸಲಾಯಿತು. ಅಭಿಮನ್ಯು, ಧನಂಜಯ, ಗೋಪಾಲಸ್ವಾಮಿ, ಅಶ್ವತ್ಥಾಮ ವಿಕ್ರಮ ಆನೆಗಳಿಗೆ ಮರಳಿನ ಮೂಟೆ ಹೊರಿಸಿ ತಾಲೀಮು ಶುರುವಾಗಿದೆ. ಡಿಸಿಎಫ್ ಕರಿಕಾಳನ್ ವೈದ್ಯ ರಮೇಶ್ ಅರಮನೆ ಎಸಿಪಿ ಚಂದ್ರಶೇಖರ್ ಸೇರಿ ಹಲವು ಅಧಿಕಾರಿಗಳು ಪೂಜೆಯಲ್ಲಿ ಭಾಗಿಯಾಗಿದ್ದರು.

  • ತೂಕ ಹೆಚ್ಚಿಸಿಕೊಂಡು ಕಾಡಿನತ್ತ ಪಯಣ ಬೆಳೆಸಿದ ದಸರಾ ಗಜಪಡೆ

    ತೂಕ ಹೆಚ್ಚಿಸಿಕೊಂಡು ಕಾಡಿನತ್ತ ಪಯಣ ಬೆಳೆಸಿದ ದಸರಾ ಗಜಪಡೆ

    ಮೈಸೂರು: ದಸರಾ ಜಂಬೂ ಸವಾರಿಗೆ ಆಗಮಿಸಿದ್ದ ಗಜಪಡೆ ತೂಕವನ್ನು ಹೆಚ್ಚಿಸಿಕೊಂಡು ಇದೀಗ ಮತ್ತೆ ಕಾಡಿಗೆ ಮರಳಿವೆ.

    ಆದರೆ ಪ್ರತಿ ಬಾರಿ ದಸರಾ ಸಂದರ್ಭದಲ್ಲಿ ಆನೆಗಳ ತೂಕ ಹೆಚ್ಚಾಗುತ್ತದೆ. ಅದೇ ರೀತಿ ಈ ಬಾರಿಯೂ ಸಹ ಆನೆಗಳು ತೂಕ ಹೆಚ್ಚಿಸಿಕೊಂಡು ಕಾಡಿಕೆ ತೆರಳಿವೆ. ದಸರಾಗೆ ಆಗಮಿಸುವ ಸಂದರ್ಭದಲ್ಲಿ 6 ಆನೆಗಳ ತೂಕವನ್ನು ಪರೀಕ್ಷಿಸಲಾಗಿತ್ತು. ಗರ್ಭಿಣಿಯಾಗಿದ್ದರಿಂದ ವರಲಕ್ಷ್ಮಿ ಆನೆ ಮೊದಲೇ ಕಾಡಿಗೆ ತೆರಳಿತ್ತು. ಈಗ ಉಳಿದ 5 ಆನೆಗಳ ತೂಕವನ್ನು ಪರೀಕ್ಷಿಸಲಾಗಿದ್ದು, ಅಭಿಮನ್ಯು ಮತ್ತು ಈಶ್ವರ ಮೊದಲಿಗಿಂತ 275 ಕೆ.ಜಿ.ತೂಕವನ್ನು ಹೆಚ್ಚಿಸಿಕೊಂಡಿವೆ.

    ಧನಂಜಯ 250, ಅರ್ಜುನ 240, ವಿಜಯ 145 ಕೆ.ಜಿ.ತೂಕವನ್ನು ಹೆಚ್ಚಿಸಿಕೊಂಡಿವೆ. ಅಭಿಮನ್ಯು ಮೈಸೂರಿಗೆ ಬರುವಾಗ 5,145 ಕೆ.ಜಿ. ಇದ್ದ. ಇದೀಗ 5,420 ಕೆ.ಜಿ.ಗೆ ತೂಕವನ್ನು ಹೆಚ್ಚಿಸಿಕೊಂಡಿದ್ದಾನೆ. ಈಶ್ವರ 3,995 ಕೆಜಿಯಿಂದ 4,270 ಕೆ.ಜಿ., ಧನಂಜಯ 4,460 ಕೆಜಿಯಿಂದ 4,710 ಕೆ.ಜಿ.ಗೆ ತೂಕವನ್ನು ಹೆಚ್ಚಿಸಿಕೊಂಡಿದ್ದಾನೆ. ಅಂಬಾರಿ ಹೊತ್ತ ಅರ್ಜುನ 5,800 ಕೆ.ಜಿ.ಯಿಂದ 6,040 ಕೆ.ಜಿ. ಹಾಗೂ ವಿಜಯ 2,825 ಕೆ.ಜಿ.ಯಿಂದ 2,970 ಕೆ.ಜಿ.ಗೆ ತೂಕವನ್ನು ಹೆಚ್ಚಿಸಿಕೊಂಡಿವೆ.

    ಜಂಬು ಸವಾರಿ ಮುಗಿದ ಮಾರನೆ ದಿನ ಅಂದರೆ ಬುಧವಾರವೇ ಮೂರು ಆನೆಗಳು ಕಾಡಿಗೆ ಮರಳಿದ್ದವು. ಬಂಡೀಪುರ ಅರಣ್ಯ ಪ್ರದೇಶದಲ್ಲಿ ಹುಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಲು ಅಭಿಮನ್ಯು, ಗೋಪಾಲಸ್ವಾಮಿ ಹಾಗೂ ಜಯಪ್ರಕಾಶ್ ಆನೆಗಳು ಬುಧವಾರ ಕಾಡಿಗೆ ತೆರಳಿದ್ದವು.

     

    ಗಜಪಡೆಯನ್ನು ಬೀಳ್ಕೊಡಲು ಯಾವೊಬ್ಬ ಜನಪ್ರತಿನಿಧಿಯೂ ಬಂದಿರಲಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅರಮನೆ ಆಡಳಿತ ಮಂಡಳಿಯ ಅಧಿಕಾರಿಗಳು ಮಾತ್ರ ಗಜಪಡೆಯ ಬೀಳ್ಕೊಡಗೆಯಲ್ಲಿ ಭಾಗವಹಿಸಿದ್ದರು. ಈ ಮೂಲಕ ದಸರಾ ಮುಗಿದ ಮೇಲೆ ಗಜಪಡೆ, ಅದರ ಮಾವುತ – ಕಾವಾಡಿಗಳು ಯಾರಿಗೆ ಬೇಕು ಎಂಬ ಮಾತನ್ನು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಅಕ್ಷರಶಃ ಸತ್ಯ ಮಾಡಿದ್ದಾರೆ.

    ಎಲ್ಲ ಆನೆಗಳನ್ನು ಲಾರಿಗಳಿಗೆ ಹತ್ತಿಸುವಾಗ ಆ ಭಾವನಾತ್ಮಕ ಕ್ಷಣವನ್ನು ಕಂಡು ಅಲ್ಲಿನ ಜನರ ಕಣ್ತುಂಬಿ ಬಂತು. ಇದಕ್ಕೆ ಕಾರಣ ನಾನು ಅರಮನೆಯಿಂದ ಹೋಗುವುದಿಲ್ಲ ಎಂಬಂತೆ ಲಕ್ಷ್ಮಿ ಆನೆ ಲಾರಿ ಏರದೇಸತಾಯಿಸುತ್ತಿತ್ತು. ಸತತ ಎರಡು ಗಂಟೆಗಳ ಕಾಲ ಅರ್ಜುನ, ಗೋಪಿ, ವಿಕ್ರಮ ಆನೆಗಳು ಲಕ್ಷ್ಮಿ ಆನೆಯನ್ನ ಲಾರಿ ಹತ್ತಿಸಲು ಎಷ್ಟೇ ಪ್ರಯತ್ನಪಟ್ಟರೂ ಲಾರಿ ಏರದೇ ನಾನು ಹೋಗುವುದಿಲ್ಲ ಎಂದು ಹಠ ಹಿಡಿದಿತ್ತು. ಈ ವೇಳೆ ಕಡೆಯ ಪ್ರಯತ್ನವೆಂಬಂತೆ ಮಾವುತರು ಸೇರಿದಂತೆ ಆನೆಗಳ ಸಹಾಯದೊಂದಿಗೆ ಲಕ್ಷ್ಮಿ ಆನೆಯನ್ನು ಲಾರಿ ಹತ್ತಿಸಲಾಯಿತು.

  • ಯಶಸ್ವಿ ಜಂಬೂ ಸವಾರಿ ಮುಗಿಸಿ ರಿಲ್ಯಾಕ್ಸ್ ಮೂಡಿನಲ್ಲಿ ಗಜಪಡೆ

    ಯಶಸ್ವಿ ಜಂಬೂ ಸವಾರಿ ಮುಗಿಸಿ ರಿಲ್ಯಾಕ್ಸ್ ಮೂಡಿನಲ್ಲಿ ಗಜಪಡೆ

    ಮೈಸೂರು: ದಸರಾ ವೇಳೆ ಯಶಸ್ವಿಯಾಗಿ ಜಂಬೂ ಸವಾರಿ ಮುಗಿಸಿದ ಗಜ ಪಡೆಗಳು ಫುಲ್ ರೆಸ್ಟ್ ನಲ್ಲಿ ಇವೆ. ಮಾವುತರು, ಕಾವಾಡಿಗಳು ವಿಶ್ರಾಂತಿಯ ಮೊರೆ ಹೋಗಿದ್ದಾರೆ.

    ಗಜಪಡೆ ನಾಯಕ ಅರ್ಜುನ, ಬಲರಾಮ ಸಹಿತ ಎಲ್ಲಾ ಆನೆಗಳು ವಿಶ್ರಾಂತಿ ಪಡೆಯುತ್ತಿದ್ದು, ಆನೆಗಳಿಗೆ ಮಾವುತರು ಸ್ನಾನ ಮಾಡಿಸಿ, ಗಜಪಡೆಗಳ ಜೊತೆ ಮಾವುತರು, ಕಾವಾಡಿಗಳು ವಿಶ್ರಾಂತಿ ಪಡೆಯುತ್ತಿದ್ದಾರೆ. ಸದ್ಯ ವಿಶ್ರಾಂತಿಯಲ್ಲಿರುವ ಆನೆಗಳು ಗುರುವಾರ ಅಥವಾ ಶುಕ್ರವಾರ ಮತ್ತೆ ಅರಮನೆಯಿಂದ ಕಾಡಿಗೆ ತೆರಳಲಿದೆ. ಇದನ್ನೂ ಓದಿ:ಜಂಬೂಸವಾರಿ ವೇಳೆ ವಾಲಿದ ಅಂಬಾರಿ- ಕೈಸನ್ನೆ ಮಾಡಿದ ಪ್ರಮೋದಾದೇವಿ

    ಮಂಗಳವಾರ ನಡೆದ ಅದ್ಧೂರಿ ಜಂಬೂ ಸವಾರಿಯಲ್ಲಿ 750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು ಹೊತ್ತುಕೊಂಡು ನಾಯಕ ಅರ್ಜುನ ಗಜಪಡೆ ಜೊತೆ ಹೆಜ್ಜೆ ಹಾಕಿ ದಸರಾವನ್ನು ಯಶಸ್ವಿಯಾಗಿದ್ದಾನೆ. ಅರಮನೆ ಉತ್ತರ ದ್ವಾರವಾದ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.09ಕ್ಕೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಸಂಜೆ 4.17ರ ಶುಭ ಕುಂಬ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದರು. ಇದನ್ನೂ ಓದಿ:ಅರ್ಜುನನಿಗೆ ಇನ್ನೂ 10 ವರ್ಷ ಅಂಬಾರಿ ಹೊರುವ ತಾಕತ್ತಿದೆ- ಮಾವುತ ವಿನು

    ಜಂಬೂ ಸವಾರಿಯಲ್ಲಿ 8ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಸಾಗಿದ್ದನು. ಈ ಜಂಬೂಸವಾರಿಯಲ್ಲಿ 39 ಸ್ತಬ್ಧ ಚಿತ್ರಗಳು, ವಿವಿಧ ಜಾನಪದ ಕಲಾತಂಡಗಳು, 100ಕ್ಕೂ ಹೆಚ್ಚು ಕಲಾ ತಂಡಗಳು, ಉತ್ತರ ಭಾರತದ ವಿವಿಧ ರಾಜ್ಯಗಳ 5 ಕಲಾ ತಂಡ, 1,675 ಕಲಾವಿದರು ಸೇರಿದಂತೆ ಒಟ್ಟು 2 ಸಾವಿರ ಮಂದಿ ಭಾಗಿಯಾಗಿದ್ದವು.

    ಸಂಜೆ 4.30ಕ್ಕೆ ಹೊರಟ ಅಂಬಾರಿ ಸಂಜೆ 7 ಗಂಟೆಗೆ ಬನ್ನಿ ಮಂಟಪ ತಲುಪಿ, ಇತ್ತ ರಾತ್ರಿ 7.30ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತಿನ ಕಾರ್ಯಕ್ರಮದಲ್ಲಿ ನೂರಾರು ಮಂದಿ ಪಂಜನ್ನು ಹಿಡಿದು ಸಾಹಸ ಪ್ರದರ್ಶಿಸಿದರು. ಈ ಪಂಜಿನ ಕವಾಯತಿನ ಬಳಿಕ ರಾತ್ರಿ 10 ಗಂಟೆಗೆ ಪಟಾಕಿ ಸಿಡಿಸೋ ಮೂಲಕ ದಸರಾ ಯಶಸ್ವಿ ತೆರೆಕಂಡಿದೆ.

    https://www.youtube.com/watch?v=xz6CgKrcUOs

  • ಜಂಬೂಸವಾರಿ ವೇಳೆ ವಾಲಿದ ಅಂಬಾರಿ- ಕೈಸನ್ನೆ ಮಾಡಿದ ಪ್ರಮೋದಾದೇವಿ

    ಜಂಬೂಸವಾರಿ ವೇಳೆ ವಾಲಿದ ಅಂಬಾರಿ- ಕೈಸನ್ನೆ ಮಾಡಿದ ಪ್ರಮೋದಾದೇವಿ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜಂಬೂಸವಾರಿ ನಡೆಯುತ್ತಿದ್ದ ವೇಳೆ ಅಂಬಾರಿ ವಾಲಿದ್ದು, ಅದನ್ನು ಸರಿ ಮಾಡಲು ರಾಜಮಾತೆ ಪ್ರಮೋದಾದೇವಿ ಕೈಸನ್ನೆ ಮಾಡಿದ್ದರು.

    ಮಂಗಳವಾರ ಗಜಪಡೆ ನಾಯಕ ಅರ್ಜುನ ಅಂಬಾರಿ ಹೊತ್ತು ಜಂಬೂಸವಾರಿ ಆರಂಭಿಸಿದ ವೇಳೆ ಅಂಬಾರಿ ಕೊಂಚ ವಾಲಿತ್ತು. ಈ ವೇಳೆ ಅರಮನೆಯಿಂದ ಜಂಬೂಸವಾರಿ ವೀಕ್ಷಿಸಲು ನಿಂತಿದ್ದ ರಾಜಮಾತೆ ಪ್ರಮೋದಾದೇವಿ ಗಜಪಡೆ ಬಳಿ ಇದ್ದ ಸಿಬ್ಬಂದಿಗೆ ಅದನ್ನು ಸರಿ ಮಾಡುವಂತೆ ಕೈಸನ್ನೆ ಮಾಡಿದ್ದರು. ಈ ದೃಶ್ಯಾವಳಿಗಳು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

    ನಂತರ ಹಗ್ಗದ ಸಹಾಯದಿಂದ ಆರಂಭದಿಂದ ಕೊನೆಯವರೆಗೂ ಜಂಬೂಸವಾರಿ ನಡೆದು ಯಶಸ್ವಿಯಾಗಿ ಪೂರ್ಣಗೊಂಡಿತು. ಸಿಎಂ ಯಡಿಯೂರಪ್ಪ ಅವರು ಪುಷ್ಪಾರ್ಚನೆ ಮಾಡುತ್ತಿದ್ದ ವೇಳೆಯೂ ಅಂಬಾರಿಗೆ ಹಗ್ಗದ ಸಪೋರ್ಟ್ ನೀಡಲಾಗಿತ್ತು. ನಾಡಹಬ್ಬ ದಸರಾದಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಸಾಗುವ ಅಂಬಾರಿ ವಾಲಿದರೆ ನಾಡಿಗೆ ಕೆಡಕಾಗುತ್ತಾ ಎಂಬ ಆತಂಕ ಇದೀಗ ಶುರುವಾಗಿದೆ.

    750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು ಹೊತ್ತುಕೊಂಡು ನಾಯಕ ಅರ್ಜುನ ಗಜಪಡೆ ಜೊತೆ ಹೆಜ್ಜೆ ಹಾಕಿ ದಸರಾವನ್ನು ಯಶಸ್ವಿಯಾಗಿದ್ದಾನೆ. ಅರಮನೆ ಉತ್ತರ ದ್ವಾರವಾದ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.09ಕ್ಕೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಸಂಜೆ 4.17ರ ಶುಭ ಕುಂಬ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದರು.

    ಜಂಬೂ ಸವಾರಿಯಲ್ಲಿ 8ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಸಾಗಿದ್ದನು. ಈ ಜಂಬೂಸವಾರಿಯಲ್ಲಿ 39 ಸ್ತಬ್ಧ ಚಿತ್ರಗಳು, ವಿವಿಧ ಜಾನಪದ ಕಲಾತಂಡಗಳು, 100ಕ್ಕೂ ಹೆಚ್ಚು ಕಲಾ ತಂಡಗಳು, ಉತ್ತರ ಭಾರತದ ವಿವಿಧ ರಾಜ್ಯಗಳ 5 ಕಲಾ ತಂಡ, 1,675 ಕಲಾವಿದರು ಸೇರಿದಂತೆ ಒಟ್ಟು 2 ಸಾವಿರ ಮಂದಿ ಭಾಗಿಯಾಗಿದ್ದವು.

    ಸಂಜೆ 4.30ಕ್ಕೆ ಹೊರಟ ಅಂಬಾರಿ ಸಂಜೆ 7 ಗಂಟೆಗೆ ಬನ್ನಿ ಮಂಟಪ ತಲುಪಿ, ಇತ್ತ ರಾತ್ರಿ 7.30ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತಿನ ಕಾರ್ಯಕ್ರಮದಲ್ಲಿ ನೂರಾರು ಮಂದಿ ಪಂಜನ್ನು ಹಿಡಿದು ಸಾಹಸ ಪ್ರದರ್ಶಿಸಿದರು. ಈ ಪಂಜಿನ ಕವಾಯತಿನ ಬಳಿಕ ರಾತ್ರಿ 10 ಗಂಟೆಗೆ ಪಟಾಕಿ ಸಿಡಿಸೋ ಮೂಲಕ ದಸರಾ ಯಶಸ್ವಿ ತೆರೆಕಂಡಿದೆ.