ಬೆಳಗಾವಿ: ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರ್ಕಾರ (Maharastra Govt) ಗಂಭೀರವಾಗಿ ಪರಿಗಣಿಸಿದ್ದು, ಗಡಿವಿವಾದ ಸಂಬಂಧ ಇಂದು ಮುಂಬೈನಲ್ಲಿ ಮಹಾರಾಷ್ಟ್ರ ಸರ್ಕಾರ ಸಭೆ ಕರೆದಿದೆ.
ಮುಂಬೈನಲ್ಲಿರುವ ಮಹಾರಾಷ್ಟ್ರ ಮಂತ್ರಾಲಯ (ವಿಧಾನಸೌಧ)ದ ಕಚೇರಿಯಲ್ಲಿ ಮಧ್ಯಾಹ್ನ 12.15ಕ್ಕೆ ಸಭೆ ನಿಗದಿಯಾಗಿದೆ. ಸಭೆಗೆ ಬೆಳಗಾವಿಯ ನಾಡದ್ರೋಹಿ ಎಂಇಎಸ್ ಪುಂಡರಿಗೆ ಆಹ್ವಾನ ನೀಡಲಾಗಿದ್ದು ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಶಂಭುರಾಜ್ ದೇಸಾಯಿ ನೇತೃತ್ವದಲ್ಲಿ ಸಭೆ ಆಯೋಜನೆ ಮಾಡಲಾಗಿದೆ. ಸಭೆಯಲ್ಲಿ ಗಡಿವಿವಾದ ಸಂಬಂಧ ಸಂಗ್ರಹಿಸಬೇಕಾದ ಸಾಕ್ಷ್ಯಾಧಾರ ದಾಖಲೆ ಸಂಬಂಧ ಚರ್ಚೆ ನಡೆಯಲಿದ್ದು, ಸುಪ್ರೀಂಕೋರ್ಟ್ ನಲ್ಲಿ ಗಡಿವಿವಾದ ಸಂಬಂಧ ನೇಮಿಸಿರುವ ವಕೀಲರ ತಂಡದ ಜೊತೆಯೂ ಚರ್ಚೆಗೆ ಮಹಾರಾಷ್ಟ್ರ ಮುಂದಾಗಿದೆ.
ಯಾವುದೇ ಸಮಯದಲ್ಲಿ ಸುಪ್ರೀಂಕೋರ್ಟ್ ನಲ್ಲಿ (Supreme Court) ಗಡಿವಿವಾದ ವಿಚಾರಣೆಗೆ ಬರುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಗಡಿವಿವಾದ ಗಂಭೀರವಾಗಿ ಪರಿಗಣಿಸಿ ಮಹಾರಾಷ್ಟ್ರ ಸರ್ಕಾರ ಸಭೆ ಮೇಲೆ ಸಭೆ ನಡೆಸುತ್ತಿದೆ. ಏನೂ ಗೊತ್ತಿಲ್ಲದಂತೆ ಇರುವ ಕರ್ನಾಟಕ ಸರ್ಕಾರದ ಮೌನ ನಡೆಗೆ ಗಡಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ, ಜೆಡಿಎಸ್‍ಗೆ ಅಲ್ಪಸಂಖ್ಯಾತರನ್ನು ಕಂಡರೆ ಆಗಲ್ಲ: ಡಿ.ಕೆ ಶಿವಕುಮಾರ್
ಮುಂಬೈ/ ಬೆಳಗಾವಿ: ಗಡಿ ವಿವಾದದಲ್ಲಿ ಸಿದ್ದರಾಮಯ್ಯ (Siddaramaiah) ವಿರುದ್ಧ ಮಹಾರಾಷ್ಟ್ರ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್(Prithviraj Chauhan) ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರ(Maharashtra) ವಿರುದ್ಧದ ಖಂಡನಾ ನಿರ್ಣಯಕ್ಕೆ ಸಿದ್ದರಾಮಯ್ಯ ಹೇಗೆ ಬೆಂಬಲ ನೀಡಿದರು. ನಾವೆಲ್ಲಾ ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೇವೆ. ಸುಪ್ರೀಂಕೋರ್ಟ್ ತೀರ್ಪಿಗೆ ಎಲ್ಲರೂ ಬದ್ಧರಾಗಿರಬೇಕು. ಹೀಗಿರುವಾಗ ನಿರ್ಣಯ ಕೈಗೊಳ್ಳುವ ಪ್ರಶ್ನೆ ಯಾಕೆ ಬರುತ್ತದೆ. ಮೊದಲಿಗೆ ಕರ್ನಾಟಕ ಸರ್ಕಾರವೇ ಪ್ರಚೋದನೆ ಮಾಡಿದ್ದು ಎಂದು ಪೃಥ್ವಿರಾಜ್ ಚವಾಣ್ ಟೀಕಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಸೇರಿ 865 ಹಳ್ಳಿಗಳು ನಮಗೆ ಸೇರಬೇಕು – ಮಹಾರಾಷ್ಟ್ರ ಅಸೆಂಬ್ಲಿ ಸರ್ವಾನುಮತದ ನಿರ್ಣಯ
ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮಹಾಜನ್ ವರದಿಯೇ ಅಂತಿಮ. ನಮಗೆ ಸೇರಬೇಕು ಎಂದು ನಿರ್ಣಯ ಮಾಡಿದರೂ ಕಾನೂನು ಬಲ ಇಲ್ಲ. ನಾವು ನಮ್ಮ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ. ಮಹಾರಾಷ್ಟ್ರ ವಿಧಾನಸಭೆ ನಿರ್ಣಯಕ್ಕೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ಅವರು ಪ್ರಚೋದನೆ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಪ್ರತಿಕ್ರಿಯಿಸಿ, ಮಹಾರಾಷ್ಟ್ರದ ನಿರ್ಣಯವನ್ನು ಕರ್ನಾಟಕ, ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ನಮ್ಮ ಒಂದು ಹಳ್ಳಿಯನ್ನು ನಾವು ಬಿಟ್ಟು ಕೊಡುವುದಿಲ್ಲ. ಅವರ ಹಳ್ಳಿಯೂ ನಮಗೆ ಬೇಡ. ಕೇಂದ್ರ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಇದೆ. ಚುನಾವಣೆ ಹತ್ತಿರ ಬಂದಿದ್ದು, ಆ ಭಾಗದಲ್ಲಿ ರಾಜಕೀಯವಾಗಿ ಸ್ವಲ್ಪ ವ್ಯತ್ಯಾಸ ಆಗಿದೆ. ಹಾಗಾಗಿ ಬಿಜೆಪಿಗರೇ ಕುಮ್ಮಕ್ಕು ಕೊಟ್ಟು ಹೀಗೆ ಮಾಡುತ್ತಿದ್ದಾರೆ ಎಂದು ಡಿಕೆಶಿ ಆರೋಪಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಮಹಾಮೇಳಾವ್‌ಗೆ ಅನುಮತಿ ನೀಡದ್ದಕ್ಕೆ ನಾಡದ್ರೋಹಿ MES ಸದಸ್ಯರು ಗಡಿ ವಿಚಾರದಲ್ಲಿ ಮತ್ತೆ ಕ್ಯಾತೆ ಮುಂದುವರಿಸಿದ್ದು, ಮಹಾರಾಷ್ಟ್ರಕ್ಕೆ ತೆರಳಿ ನಾಡದ್ರೋಹಿ ಘೋಷಣೆ ಕೂಗಿದ್ದಾರೆ.
ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದವನ್ನೇ ರಾಜಕೀಯವಾಗಿ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ಮಹಾರಾಷ್ಟ್ರದ ಮಹಾವಿಕಾಸ್ ಆಘಾಡಿ ಪಕ್ಷವೂ ಕೊಲ್ಲಾಪುರದಲ್ಲಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ಸೇರಿ ಮತ್ತೆ ಕ್ಯಾತೆ ಮುಂದುವರಿಸಿದ್ದಾರೆ. ಇತ್ತ ಮಹಾವಿಕಾಸ್ ಆಘಾಡಿ ಸಭೆಯಲ್ಲಿ ಬೆಳಗಾವಿಯ ಎಂಇಎಸ್ ನಾಯಕರು ಭಾಗಿಯಾಗಿದ್ದು ಬೈಕ್ ರ‍್ಯಾಲಿ ಮೂಲಕ ಬೆಳಗಾವಿಯಿಂದ (Belagavi) ಕೊಲ್ಲಾಪುರಕ್ಕೆ ತೆರಳಲು ಎಂಇಎಸ್ ಸದಸ್ಯರು ತೀರ್ಮಾನ ಮಾಡಿದ್ದಾರೆ.
ಡಿ. 26ರಂದು ಬೆಳಗಾವಿಯಿಂದ ಕೊಲ್ಲಾಪುರಕ್ಕೆ ತೆರಳಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದು, ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಟೋಲ್‌ಗೇಟ್‌ನಿಂದ ಬೈಕ್ ರ‍್ಯಾಲಿಗೆ ಎಂಇಎಸ್ ಸದಸ್ಯರು ತೀರ್ಮಾನ ಮಾಡಿದ್ದು, ಕೊಗನೊಳ್ಳಿ ಟೋಲ್‌ಗೇಟ್ ಬಳಿ ಎಂಇಎಸ್ ಕಾರ್ಯಕರ್ತರನ್ನು ಮಹಾವಿಕಾಸ್ ಆಘಾಡಿ ಮೈತ್ರಿಕೂಟ ಪಕ್ಷಗಳಾದ ಎಂಇಎಸ್‌ಗೆ ಶಿವಸೇನೆ ಉದ್ಧವ್ ಠಾಕ್ರೆ ಬಣ, ಎನ್‌ಸಿಪಿ, ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ:2022ರಲ್ಲಿ ದಾಖಲೆಯ ಡ್ರಿಂಕ್ ಅಂಡ್ ಡ್ರೈವ್ ಕೇಸ್ ದಾಖಲು
ಬಳಿಕ ಅಲ್ಲಿಂದ ಕೊಲ್ಲಾಪುರ ಡಿಸಿ ಕಚೇರಿಯವರೆಗೆ ಬೈಕ್ ರ‍್ಯಾಲಿ ನಡೆಸಲಿದ್ದಾರೆ. ಈ ವೇಳೆ ಕರ್ನಾಟಕ (Karnataka), ಮಹಾರಾಷ್ಟ್ರ (Maharashtra) ಗಡಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಬೇಕದು ಆಗ್ರಹಿಸಿ ಕೊಲ್ಲಾಪುರ ಡಿಸಿ ಮುಖೇನ ಪ್ರಧಾನಿ ಮೋದಿಗೆ ಮನವಿ ಮಾಡಲಿದ್ದಾರೆ. ಇದನ್ನೂ ಓದಿ:ಸುರತ್ಕಲ್ ಬಳಿ ಚಾಕು ಇರಿದು ವ್ಯಕ್ತಿ ಕೊಲೆ – 4 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ರಾಜ್ಯದ ಗಡಿ ವಿಚಾರದಲ್ಲಿ ನಾಡಿನ ಹಿತಕಾಪಾಡುವ ನಿಲುವು ಅಚಲವಾಗಿದೆ. ಈ ನಿಲುವಿನಿಂದ ಒಂದಿಂಚೂ ಕೂಡ ಹಿಂದೆ ಸರಿಯುವುದಿಲ್ಲ. ಈ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ವಿಧಾನಸಭೆಯಲ್ಲಿಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ (Siddaramaiah) ಅವರು ಮಂಡಿಸಿದ ನಿಲುವಳಿ ಸೂಚನೆಗೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಾತನಾಡಿದರು. ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವ್ಯಾಜ್ಯ (Karnataka Maharashtra Border Row) ಪ್ರಕರಣ ಸರ್ವೋಚ್ಛ ನ್ಯಾಯಾಲಯದಲ್ಲಿದೆ (Supreme Court). ಗಡಿ ವ್ಯಾಜ್ಯಗಳು ಸಂವಿಧಾನಬದ್ಧವಾಗಿ ಸಂಸತ್ತಿನಲ್ಲಿಯೇ ಪರಿಹಾರವಾಗಬೇಕಾಗಿರುವದರಿಂದ, ನ್ಯಾಯಾಲಯದಲ್ಲಿ ಮಹಾರಾಷ್ಟ್ರ ಸರ್ಕಾರ ದಾಖಲಿಸಿರುವ ಪ್ರಕರಣ ನಿರ್ವಹಣೆಯಾಗಬೇಕೆ (Maintainability) ಎಂಬುದರ ಬಗ್ಗೆಯೇ ಈಗ ವಿಚಾರಣೆ ನಡೆಯುತ್ತಿದೆ. ಪ್ರಕರಣದ ನಿರ್ವಹಣೆ ಸಮರ್ಥನೀಯವಲ್ಲ. ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗೆ ಬಂದ ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿಗಳು ನೀಡಿದ ಪ್ರತಿಕ್ರಿಯೆಗೆ ತಾವು ಕೂಡ ತೀಕ್ಷ್ಣ ಉತ್ತರ ನೀಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ
ರಾಜ್ಯಕ್ಕೆ ಮಹಾರಾಷ್ಟ್ರದ ಮಂತ್ರಿಗಳು, ಸಂಸದರು ಪ್ರವೇಶಿಸದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮಹಾರಾಷ್ಟ್ರಕ್ಕೆ ಬರೆದಿರುವ ಪತ್ರ ಮಹತ್ವದ ದಾಖಲೆಯಾಗಲಿದೆ. ಮಹಾರಾಷ್ಟ್ರದ ರಾಜಕಾರಣಿಗಳು, ಸಂಘಟನೆಗಳು ಪ್ರಚೋದನಕಾರಿ ಹೇಳಿಕೆ ನೀಡಿ ಉದ್ವಿಗ್ನ ವಾತಾವರಣ ಉಂಟು ಮಾಡಲು ಪ್ರಯತ್ನಿಸಿದರೂ, ನಮ್ಮ ರಾಜ್ಯದ ಆಡಳಿತ ಪಕ್ಷವಾಗಲಿ, ಪ್ರತಿಪಕ್ಷಗಳಾಗಲಿ, ಸಂಘಟನೆಗಳಾಗಲಿ ಇಂತಹ ಯಾವುದೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡದೇ ಸಂಯಮ, ಜವಾಬ್ದಾರಿ ತೋರಿಸಿವೆ ಎಂದು ಮೆಚ್ಚುಗೆ ಮಾತನಾಡಿದರು.
ಗಡಿ ಭಾಗದ ಜನಸಾಮಾನ್ಯರಿಗೆ, ವ್ಯಾಪಾರಿಗಳಿಗೆ ತೊಂದರೆಯಾಗಬಾರದು. ಎರಡೂ ಕಡೆ ಸಾಮರಸ್ಯ ಕಾಪಾಡಿಕೊಳ್ಳಬೇಕು ಎಂಬ ಸದುದ್ದೇಶದಿಂದ ಕೇಂದ್ರ ಗೃಹ ಸಚಿವರು ಕರೆದ ಸಭೆಗೆ ಹಾಜರಾಗಿ, ರಾಜ್ಯದ ಹಿತ ಕಾಯುವ ನಿಲುವನ್ನು ಸ್ಪಷ್ಟಪಡಿಸಿ ಬಂದಿದ್ದೇನೆ. ಅನಧಿಕೃತ ಟ್ವಿಟ್ಟರ್ ಖಾತೆಯಿಂದ ವ್ಯಕ್ತವಾಗಿದ್ದ ಪ್ರಚೋದನಕಾರಿ ಅಭಿಪ್ರಾಯ ತಮ್ಮದಲ್ಲ ಎಂದು ಆ ಸಭೆಯಲ್ಲಿ ಸ್ಪಷ್ಟಪಡಿಸಿದ್ದೇನೆ. ಸಭೆಯ ನಂತರ ಮಾಧ್ಯಮಗಳಿಗೂ ಈ ವಿವರ ನೀಡಿದ್ದೇನೆ. ಸಮಯದ ಅಭಾವದ ಕಾರಣ ಸರ್ವಪಕ್ಷಗಳ ಸಭೆ ಕರೆದು ಅಭಿಪ್ರಾಯಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಮುಂದೆಯೂ ಈ ಕುರಿತು ಸರ್ವಪಕ್ಷ ಸಭೆ ನಡೆಸಲಾಗುವುದು. ಶಿಕ್ಷಣ, ಆರೋಗ್ಯ, ವ್ಯಾಪಾರ ಸೇರಿದಂತೆ ಅನೇಕ ಕಾರಣಗಳಿಗಾಗಿ ಪ್ರತಿನಿತ್ಯದ ಒಡನಾಟ ಗಡಿ ಭಾಗದ ಪ್ರದೇಶಗಳಲ್ಲಿರುತ್ತವೆ. ಅವುಗಳಿಗೆ ಸಮಸ್ಯೆಯಾಗದಂತೆ ರಾಜ್ಯಗಳ ಹಂತದಲ್ಲಿಯೇ ಕ್ರಮವಹಿಸಲು ಕೇಂದ್ರ ಸಚಿವರು ಸೂಚನೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ, ಈಶ್ವರಪ್ಪ ನನ್ನ ಸಂಪರ್ಕದಲ್ಲಿದ್ದಾರೆ: ಬೊಮ್ಮಾಯಿ
ಗಡಿ ಆಚೆಗಿರುವ ಕನ್ನಡಿಗರ ಹಿತರಕ್ಷಣೆಗೂ ಸರ್ಕಾರ ಬದ್ಧವಾಗಿದೆ. ರಾಜ್ಯಗಳ ಪುನರ್ ವಿಂಗಡಣಾ ಕಾಯ್ದೆ ಹಾಗೂ ಭಾಷಾವಾರು ಪ್ರಾಂತಗಳ ರಚನೆಯಡಿ ನಿರ್ಧಾರವಾಗಿರುವ ಗಡಿಗಳೇ ಅಂತಿಮ. ಈ ವಿಷಯದಲ್ಲಿ ಅನಗತ್ಯ ತಂಟೆ, ತಗಾದೆಗಳಿಗೆ ರಾಜ್ಯ ಕಿವಿಗೊಡುವುದಿಲ್ಲ ಮುಖ್ಯಮಂತ್ರಿಗಳು ವಿವರಿಸಿದರು. ಶಾಸಕರಾದ ಬಂಡೆಪ್ಪ ಕಾಶೆಂಪೂರ, ಹೆಚ್.ಕೆ.ಪಾಟೀಲ, ಶಿವಾನಂದ ಪಾಟೀಲ ಮತ್ತಿತರರು ಮಾತನಾಡಿದರು.
Live Tv
[brid partner=56869869 player=32851 video=960834 autoplay=true]
ಮುಂಬೈ: ಮರಾಠಿ (Marathi) ಭಾಷಿಕರ ಮೇಲೆ ಅನ್ಯಾಯ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ಮಹಾಮೇಳಾವ್‌ಗೆ (Mahamelav) ಅವಕಾಶ ಕೊಡದಿರುವ ಕರ್ನಾಟಕ ಸರ್ಕಾರದ (Government of Karnataka) ನಡೆ ಸರಿಯಲ್ಲ. ಗಡಿ ವಿವಾದ ವಿಚಾರದಲ್ಲಿ (Border Dispute) ಮಹಾರಾಷ್ಟ್ರ (Maharashtra) ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿ ಭಾಗದ ಮರಾಠಿಗರ ಜೊತೆಗೆ ಮಹಾರಾಷ್ಟ್ರ ಸರ್ಕಾರವಿದೆ. ಮರಾಠಿ ಭಾಷಿಕರ ಮೇಲೆ ಅನ್ಯಾಯ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ಮಹಾಮೇಳಾವ್‌ಗೆ ಅವಕಾಶ ಕೊಡದಿರುವ ಕರ್ನಾಟಕ ಸರ್ಕಾರದ ನಡೆ ಸರಿಯಲ್ಲ. ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು. ಇದನ್ನೂ ಓದಿ: ಜಾಮಿಯಾದಲ್ಲಿನ ಅಕ್ರಮ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಗಡುವು
ಮಹಾರಾಷ್ಟ್ರ ಮುಖ್ಯಮಂತ್ರಿ ಈಗಾಗಲೇ ಜತ್ ಸೇರಿದಂತೆ ಗಡಿ ಭಾಗದ ನೀರಾವರಿ ಯೋಜನೆಗೆ 2 ಸಾವಿರ ಕೋಟಿ ರೂ. ಘೋಷಿಸಿದ್ದಾರೆ. ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಗೃಹ ಸಚಿವ ಅಮಿತ್ ಶಾ ಮುಂದೆ ಹೇಳಿದ್ದಾರೆ. ಗಡಿ ವಿವಾದ ವಿಚಾರವಾಗಿ ಮಾಡಿದ್ದ ಟ್ವೀಟ್ ನನ್ನದಲ್ಲ ಎಂದು ಹೇಳಿದ್ದಾರೆ. ಸಿಎಂ ಹೆಸರಿನ ಟ್ವೀಟ್ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಬೊಮ್ಮಾಯಿ ಅವರನ್ನೇ ಕೇಳುತ್ತೇವೆ ಎಂದು ಫಡ್ನವಿಸ್ ಹೇಳಿದರು. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿದ ಬಿಜೆಪಿ – ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ
Live Tv
[brid partner=56869869 player=32851 video=960834 autoplay=true]
ಕಾರವಾರ: ಗಡಿಜಿಲ್ಲೆ ಉತ್ತರ ಕನ್ನಡಕ್ಕೂ (Uttara Kannada) ಭಾಷಾ ವಿವಾದದ (Language Controversy) ಕಿಡಿ ಹೊತ್ತಿಕೊಂಡಿದ್ದು, ಕನ್ನಡ ಸಿನಿಮಾ ಪ್ರದರ್ಶನದ ಬದಲು ಮಾರಾಠಿ ಸಿನಿಮಾ (Marathi Cinema) ಪ್ರದರ್ಶನ ಮಾಡುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಮರಾಠಿ ಪೋಸ್ಟರ್‌ಗಳಿಗೆ ಮಸಿ (Ink) ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರವಾರ (Karwar) ನಗರದ ಕಾಜುಬಾಗ್‌ನ ಅರ್ಜುನ ಸಿನಿಮಾ ಮಂದಿರದಲ್ಲಿ ಕನ್ನಡ ಸಿನಿಮಾ ಬದಲು ಮರಾಠಿ ಸಿನಿಮಾ ಪ್ರದರ್ಶನ ಮಾಡಲಾಗುತ್ತಿತ್ತು. ಮಾತ್ರವಲ್ಲದೇ ಕನ್ನಡ ಸಿನಿಮಾ ಪೋಸ್ಟರ್‌ಗಳನ್ನು ಕೆಳಭಾಗದಲ್ಲಿ ಹಾಕಿ, ಮೇಲ್ಭಾಗದಲ್ಲಿ ಮರಾಠಿ ಸಿನಿಮಾ ಪೋಸ್ಟರ್ ಅಳವಡಿಸಲಾಗಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ ತಂದೆಯ ಆತ್ಮ ವಿಲವಿಲ ಅಂತ ಒದ್ದಾಡುತ್ತಿರಬಹುದು : ಸಿ.ಟಿ.ರವಿ
ಬೆಂಗಳೂರು: ನಮಗೆ ನಮ್ಮ ನೆಲ, ಜಲ, ಗಡಿ ವಿಚಾರ ಮುಖ್ಯ. ಗಡಿ ವಿಚಾರದಲ್ಲಿ ನಮ್ಮ ನಿಲುವನ್ನು ಅಮಿತ್ ಶಾ (Amit Shah) ಅವರಿಗೆ ಸ್ಪಷ್ಟಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ನಗರದಲ್ಲಿ ಮಾತನಾಡಿದ ಅವರು, ದೆಹಲಿಗೆ ಹೋಗುತ್ತಿದ್ದೇನೆ. ಗಡಿ ವಿಚಾರದ ಬಗ್ಗೆ ಅಮಿತ್ ಶಾ ಅವರು ಸಭೆ ಕರೆದಿದ್ದಾರೆ. ಗಡಿ ವಿಚಾರದ ಸಭೆ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಮಾಡ್ತೇನೆ. ನಾನು ಎಲ್ಲ ಸಿದ್ಧತೆಗಳ ಜೊತೆ ಹೋಗುತ್ತಿದ್ದೇನೆ. ಅವಕಾಶ ಸಿಕ್ಕಿದರೆ ಸಂಪುಟ ಬಗ್ಗೆ ಅಮಿತ್ ಶಾ ಅವರ ಜೊತೆ ಚರ್ಚೆ ಮಾಡ್ತೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕೋಮುವಾದಿ ಪಕ್ಷ ಮಣಿಸಲು ಕಾಂಗ್ರೆಸ್ ಸೇರಲು ನಿರ್ಧಾರ – ವೈಎಸ್‌ವಿ ದತ್ತ
ಗಡಿ ವಿವಾದ ಕುರಿತು ಪ್ರತಿಕ್ರಿಯಿಸಿ, ಮಹಾರಾಷ್ಟ್ರ ಆರು ದಶಕಗಳಿಂದ ಗಡಿ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ನಾವು ಹಾಗಲ್ಲ, ನಮಗೆ ನಮ್ಮ ನೆಲ-ಜಲ-ಗಡಿ ವಿಚಾರ ಮುಖ್ಯ ಎಂದು ಹೇಳಿದರು.
ಒಳಮೀಸಲಾತಿಗೆ ಸಂಪುಟ ಉಪಸಮಿತಿ ರಚನೆ ಕಣ್ಣೊರೆಸುವ ತಂತ್ರ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಒಳಮೀಸಲಾತಿ ಕುರಿತು ನ್ಯಾ.ಸದಾಶಿವ ವರದಿ ಕಡೆ ಐದು ವರ್ಷ ಸಿದ್ದರಾಮಯ್ಯ ತಿರುಗಿ ನೋಡಿರಲಿಲ್ಲ. ಆ ರಿಪೊರ್ಟ್ ಅನ್ನು ತೆಗೆದು ನೋಡುವ ಧೈರ್ಯವಿರಲಿಲ್ಲ. ಇದೇ ಸಮುದಾಯ ಹುಬ್ಬಳಿಯಲ್ಲಿ ಸಮಾವೇಶ ಮಾಡಿತ್ತು. ಆಗ ದೀಪ ಹಚ್ಚಿ ಮಾತ್ರ ಬಂದ್ರು ಸಿದ್ದರಾಮಯ್ಯ. ಅಂಥವರ ಬಗ್ಗೆ ನಾವು ಮಾತನಾಡುವುದಿಲ್ಲ ಎಂದು ಕಾಲೆಳೆದಿದ್ದಾರೆ. ಇದನ್ನೂ ಓದಿ: ಮಹಾ-ಕರ್ನಾಟಕ ಗಡಿ ವಿವಾದ; ಇಂದು ಮುಖಾಮುಖಿಯಾಗ್ತಾರೆ ಎರಡೂ ರಾಜ್ಯಗಳ ಸಿಎಂ
ನಮ್ಮ ಬದ್ದತೆ ಏನು ಅಂತ ಗೊತ್ತಿದೆ. ಅಂತಹ ಪ್ರಮುಖ ವಿಚಾರಗಳಲ್ಲಿ ದಿಟ್ಟತನ ತೆಗೆದುಕೊಂಡಿದ್ದೇವೆ. ನೀವು ಇನ್ನೊಬ್ಬರ ಬಗ್ಗೆ ಮಾತಾಡುವ ಮುಂಚೆ, ತಾವು ಯಾವ ರೀತಿ ನಡೆದುಕೊಂಡಿದ್ರಿ ಅಂತಾ ಹಿಂತಿರುಗಿ ನೋಡಿದ್ರೆ ಒಳ್ಳೆಯದು ಎಂದು ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಮಹಾರಾಷ್ಟ್ರ-ಕರ್ನಾಟಕ ಗಡಿ (Karnataka-Maharashtra Border Row) ವಿವಾದ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಎರಡು ರಾಜ್ಯಗಳ ನಡುವಿನ ಗಡಿ ವಿವಾದ ತೀವ್ರಗೊಂಡಿರುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಧ್ಯಪ್ರವೇಶ ಮಾಡಲು ನಿರ್ಧರಿಸಿದ್ದಾರೆ. ಇಂದು ಅಮಿತ್ ಶಾ ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲಿದ್ದಾರೆ.
ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರುವ ಹಿನ್ನೆಲೆ ಪ್ರದೇಶ ಅಥಾವ ಊರುಗಳ ಮರು ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅದಾಗ್ಯೂ ಗಡಿ ಸಮಸ್ಯೆಯಿಂದ ಎರಡು ರಾಜ್ಯಗಳಲ್ಲಿ ಶಾಂತಿ ಮತ್ತು ಭದ್ರತೆಗೆ ಧಕ್ಕೆಯಾಗುತ್ತಿದ್ದು, ಮುಖ್ಯವಾಗಿ ಈ ಬಗ್ಗೆ ಚರ್ಚೆಯಾಗಲಿದೆ.
ಬೀದರ್: ಬೆಳಗಾವಿ (Belagavi) ಗಡಿ ವಿವಾದ (Border Dispute) ಭುಗಿಲೆದ್ದ ಬೆನ್ನಲ್ಲೇ ಬೀದರ್ (Bidar) ಗಡಿ ಭಾಗದ ಮರಾಠಿಗರು (Marathas) ನಮ್ಮ ಗ್ರಾಮ ಅಭಿವೃದ್ಧಿ ಮಾಡದೇ ಇದ್ದರೆ ಕರ್ನಾಟಕ (Karnataka) ಸೇರಲು ಸಿದ್ಧ ಎಂದು ಮಹಾರಾಷ್ಟ್ರ (Maharashtra) ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಮನಸೋತಿರುವ ಬೀದರ್ ಗಡಿಯ ಮಹಾರಾಷ್ಟ್ರದ ಲಾತೂರು ಜಿಲ್ಲೆಯ ದೇವಣಿ ತಾಲೂಕಿನ ಬೊಂಬಳಿ (Bombali) ಗ್ರಾಮಸ್ಥರು ಮಹಾರಾಷ್ಟ್ರದ ಸರ್ಕಾರಕ್ಕೆ ಕರ್ನಾಟಕ ಸೇರುವುದಾಗಿ ಹೇಳಿ ಶಾಕ್ ನೀಡಿದ್ದಾರೆ.
ಅಭಿವೃದ್ಧಿ ವಂಚಿತ ಗಡಿ ಗ್ರಾಮ ಬೊಂಬಳಿ ಗ್ರಾಮಸ್ಥರು ಪಂಚಾಯಿತಿ ಚುನಾವಣೆಯನ್ನೂ ಕೂಡಾ ಬಹಿಷ್ಕಾರ ಮಾಡಿದ್ದು, ಲಾತೂರು ಜಿಲ್ಲಾಧಿಕಾರಿಗೆ ಹಾಗೂ ದೇವಣಿ ತಾಲೂಕಿನ ತಹಶೀಲ್ದಾರರಿಗೆ ಪತ್ರ ಬರೆದಿದ್ದಾರೆ. ನಮ್ಮ ಗ್ರಾಮ ಮೂಲಸೌಕರ್ಯಗಳಿಂದ ಅಭಿವೃದ್ಧಿ ಹೊಂದದೇ ಇದ್ದರೆ ಕರ್ನಾಟಕ ರಾಜ್ಯಕ್ಕೆ ಸೇರಲು ನಿರ್ಧರಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಹಾಗೂ ತಹಶಿಲ್ದಾರರಿಗೆ ಗ್ರಾಮಸ್ಥರು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಆಪ್‌ಗೆ ಬಿಜೆಪಿಯಿಂದಲೇ ಫಂಡಿಂಗ್: ಸಿದ್ದರಾಮಯ್ಯ
ಮುಂಬೈ: ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ(Maharashtra-Karnataka Border Row) ಉಲ್ಬಣಗೊಂಡಿರುವ ನಡುವೆಯೇ ಮುಂದಿನ 24 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕೇಂದ್ರ ಮತ್ತು ಕರ್ನಾಟಕದ ಬಿಜೆಪಿ ಸರ್ಕಾರವೇ(Karnataka BJP Government) ನೇರ ಹೊಣೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್(Sharad Pawar) ಹೇಳಿದ್ದಾರೆ.
ಗಡಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರದ ಜನರ ತಾಳ್ಮೆಯನ್ನು ಪರೀಕ್ಷಿಸಬೇಡಿ ಮತ್ತು ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ಪವಾರ್ ಕರ್ನಾಟಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಈಗ ದೃಢ ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ. ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಎಲ್ಲಾ ಪಕ್ಷಗಳನ್ನು ವಿಶ್ವಾಸದಲ್ಲಿಟ್ಟುಕೊಳ್ಳಬೇಕು. ಸಂಸತ್ತಿನ ಅಧಿವೇಶನ ಪ್ರಾರಂಭವಾಗಲಿದ್ದು ಎಲ್ಲಾ ಸಂಸದರು ಒಗ್ಗೂಡಿ ಮತ್ತು ಅದೇ ನಿಲುವನ್ನು ತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮೇಯುತ್ತಿದ್ದ ಹಸುಗಳನ್ನು ಗುಂಡಿಟ್ಟು ಕೊಂದ ಎಸ್ಟೇಟ್ ಮಾಲೀಕ
ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಉದ್ದೇಶಪೂರ್ವಕವಾಗಿ ಪರಿಸ್ಥಿತಿಯನ್ನು ಉಲ್ಬಣಗೊಳಿಸುತ್ತಿದೆ ಎಂದು ಆರೋಪಿಸಿದ ಪವಾರ್, ಕಳೆದ ಕೆಲವು ವಾರಗಳಿಂದ ಪರಿಸ್ಥಿತಿಯನ್ನು ಬೇರೆ ದಿಕ್ಕಿನಲ್ಲಿ ಕೊಂಡೊಯ್ಯಲು ಕರ್ನಾಟಕದ ಸಿಎಂ ಪ್ರಜ್ಞಾಪೂರ್ವಕ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಗಡಿ ಪ್ರದೇಶಗಳಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿದ ನಂತರ ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ. ಅಲ್ಲಿನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದರು.
Live Tv
[brid partner=56869869 player=32851 video=960834 autoplay=true]